Tag: Gangavathi Taluk Hospital

  • ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು – ಗಂಗಾವತಿ ಆಸ್ಪತ್ರೆಗೆ ಮುಗಿಬಿದ್ದ ಮಹಿಳೆಯರು

    ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು – ಗಂಗಾವತಿ ಆಸ್ಪತ್ರೆಗೆ ಮುಗಿಬಿದ್ದ ಮಹಿಳೆಯರು

    -1 ವರ್ಷದಲ್ಲಿ 4,790 ನಾರ್ಮಲ್, 1,000 ಸಿಸೇರಿಯನ್ ಹೆರಿಗೆ ಯಶಸ್ವಿ

    ಕೊಪ್ಪಳ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು (Maternal Death) ಕರಣ ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಕೊಪ್ಪಳ (Koppal) ತಾಲೂಕೂ ಆಸ್ಪತ್ರೆಗೆ ಮಹಿಳೆಯರು ಮುಗಿಬಿದ್ದಿದ್ದಾರೆ.

    ಹೌದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಗಳು ಬೆಳಕಿಗೆ ಬಂದಿದ್ದೇ ತಡ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಮಹಿಳೆಯರು ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿದೆ.ಇದನ್ನೂ ಓದಿ: ನಾಯಿಗಳ ಕಾದಾಟದ ಮೇಲೆ ಬೆಟ್ಟಿಂಗ್‌ – 81 ಮಂದಿ ಅರೆಸ್ಟ್‌, 19 ವಿದೇಶಿ ತಳಿ ಶ್ವಾನಗಳು ವಶಕ್ಕೆ

    ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಬಳ್ಳಾರಿಯ ಬಾಣಂತಿಯರ ಸರಣಿ ಸಾವು ಪ್ರಕರಣ ಇಡಿ ರಾಜ್ಯದಲ್ಲಿ ಸದ್ದು ಮಾಡುವುದರ ಜೊತೆಗೆ ಭಯದ ವಾತಾವರಣ ನಿರ್ಮಿಸಿತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಹೋದರೆ ತಾಯಿ ಮಗು ವಾಪಸ್ ಬರುವುದು ಗ್ಯಾರಂಟಿ ಇಲ್ಲದ ಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳುವುದು ಎಂದರೆ ಜನರು ಹಿಡಿಶಾಪ ಹಾಕುವಂತಾಗಿದೆ. ಈ ಬೆನ್ನಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಾಸ್ಪತ್ರೆಗೆ ಹೆರಿಗೆ ಬರುವವರ ಸಂಖ್ಯೆ ಹೆಚ್ಚಾಗಿದ್ದು, ಆ ಜಿಲ್ಲೆಯವರು ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಯ ಜನರು ಅದೇ ಆಸ್ಪತ್ರೆಗೆ ಹೋಗುತ್ತಿದ್ದಾರೆ.

    ತಾಲೂಕು ಕೇಂದ್ರದಲ್ಲಿರುವ 60 ಬೆಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಮಹಿಳೆಯರು ಮುಗಿಬೀಳುತ್ತಿದ್ದಾರೆ. ಇದಕ್ಕೆ ಕಾರಣ ಈ ಆಸ್ಪತ್ರೆಯಲ್ಲಿ ನಡೆಯುವ ಸುರಕ್ಷಿತ ಹೆರಿಗೆ. ಈ ಆಸ್ಪತ್ರೆಯಲ್ಲಿ ಹೆರಿಗೆಗೆ ಬರುವ ಎಲ್ಲ ಮಹಿಳೆಯರಿಗೆ ಸುರಕ್ಷಿತ ಹಾಗೂ ನಾರ್ಮಲ್ ಹೆರಿಗೆ ಆಗುತ್ತದೆ ಎನ್ನುವುದು ಜನರ ಭಾವನೆಯಾಗಿದೆ. ಇದು ಕೇವಲ ಜನರ ನಂಬಿಕೆ ಅಷ್ಟೆ ಅಲ್ಲ, ಅಂಕಿ ಅಂಶಗಳನ್ನು ಪರಿಶೀಲನೆ ಅದು ಸತ್ಯ ಎನ್ನುವುದು ತಿಳಿದು ಬಂದಿದೆ.

    ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಈಶ್ವರ ಸವಡಿ ಮಾತನಾಡಿ, ಕಳೆದ ಒಂದು ವರ್ಷದ ಅಂಕಿ ಅಂಶಗಳನ್ನು ಲೆಕ್ಕ ಹಾಕಿದಾಗ 4,790 ನಾರ್ಮಲ್ ಹೆರಿಗೆ ಹಾಗೂ 1 ಸಾವಿರ ಸಿಜೇರಿಯನ್ ಹೆರಿಗೆಗಳಾಗಿವೆ. ಈ ಆಸ್ಪತ್ರೆಯಲ್ಲಿ ಇದುವರೆಗೂ ಒಂದೇ ಒಂದು ಬಾಣಂತಿಯ ಸಾವು ಕೂಡ ದಾಖಲಾಗಿಲ್ಲ. ಬದಲಾಗಿ ಬೇರೆ ಕಾರಣದಿಂದ ಒಬ್ಬ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

    ಆಸ್ಪತ್ರೆಗೆ ಪ್ರತಿ ದಿನ ನೂರಾರು ಮಹಿಳೆಯರು ಹೆರಿಗೆಗೆ ಬರುತ್ತಾರೆ. ಸಕಲ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಗೆ ಕೇವಲ ಗಂಗಾವತಿ, ಕೊಪ್ಪಳ ಅಷ್ಟೆ ಅಲ್ಲದೇ, ರಾಯಚೂರು, ಬಳ್ಳಾರಿ, ವಿಜಯನಗರ, ಬಾಗಲಕೋಟೆ ಜಿಲ್ಲೆಗಳಿಂದಲೂ ಜನ ಬರುತ್ತಾರೆ. ಯಾವುದೇ ಭಯ ಇಲ್ಲದೆ ಜನರು ಉಚಿತವಾಗಿ ಹೆರಿಗೆ ಮಾಡಿಸಿಕೊಳ್ಳುತ್ತಿದ್ದಾರೆ. ಈ ಆಸ್ಪತ್ರೆ 2018 ರಿಂದ 2023ರ ವರೆಗೆ ಮೂರು ಬಾರಿ ಕಾಯಕಲ್ಪ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದರಿಂದ ಜನರು ಉಚಿತ ಹಾಗೂ ಸುರಕ್ಷಿತ ಹೆರಿಗೆಗೆ ಗಂಗಾವತಿ ಆಸ್ಪತ್ರೆ ಬೆಸ್ಟ್ ಎಂದಿದ್ದಾರೆ. ಈ ಕಾರಣಕ್ಕೆ ಇಲ್ಲಿ ಹೆರಿಗೆಗೆ ಬರುವವರ ಸಂಖ್ಯೆ ಕೂಡಾ ಹೆಚ್ಚಾಗ್ತಿದೆ.

    ಇದರಿಂದ ಜನರು ಯಾವುದೇ ಕಾರಣಕ್ಕೂ ಭಯಪಡುವುದು ಬೇಡ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಿಕೊಳ್ಳಿ. ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಹಣ ಕಳೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ.ಇದನ್ನೂ ಓದಿ:ಯಶವಂತಪುರ ಫ್ಲೈಓವರ್ ಮೇಲೆ ಟಯರ್ ಬ್ಲಾಸ್ಟ್‌ಗೊಂಡು ಗೆಣಸು ತುಂಬಿದ್ದ ಬೊಲೆರೋ ಪಲ್ಟಿ

     

  • ರಾಜ್ಯದಲ್ಲಿ ಮೊದಲ ಪ್ರಕರಣ – ಮೊಣಕಾಲು ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿದ ಕೊಪ್ಪಳದ ಸರ್ಕಾರಿ ವೈದರು

    ರಾಜ್ಯದಲ್ಲಿ ಮೊದಲ ಪ್ರಕರಣ – ಮೊಣಕಾಲು ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿದ ಕೊಪ್ಪಳದ ಸರ್ಕಾರಿ ವೈದರು

    ಕೊಪ್ಪಳ: ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಮೊಣಕಾಲು ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿದೆ. ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಈ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

    ವಯೋಸಹಜ ಹಾಗೂ ಅತಿಯಾದ ಮೊಣಕಾಲಿನ ಮೇಲಿನ ಒತ್ತಡದಿಂದಾಗಿ ಸವೆಯುವ ಮೊಣಕಾಲು ಚಿಪ್ಪಿನ ಬದಲಾವಣೆ(ಟೋಟಲ್ ನೀ ರಿಪ್ಲೇಸ್‍ಮೆಂಟ್) ಶಸ್ತ್ರಚಿಕಿತ್ಸೆಯನ್ನು ಇಬ್ಬರು ರೋಗಿಗಳಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಾಡಿದ್ದಾರೆ. ಆಯುಷ್ಮಾನ್ ಭಾರತ ಯೋಜನೆಯಡಿ ಹೊಸಪೇಟೆ ತಾಲೂಕಿನ ಗ್ರಾಮೀಣ ಭಾಗದ ಹಿರಿಯರಾದ ಶಾರದಮ್ಮ ಹಾಗೂ ಗಂಗಾವತಿಯ ಸಿದ್ದಪ್ಪ ಪೂಜಾರಿ ಅವರಿಗೆ ಈ ಚಿಕಿತ್ಸೆ ನೆರವೇರಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಈಶ್ವರ ಸವಡಿ ತಿಳಿಸಿದ್ದಾರೆ.

    ಸುಮಾರು ಐದು ಗಂಟೆಗಳ ಕಾಲ ನಡೆದ ಶಸ್ತ್ರ ಚಿಕಿತ್ಸೆಯಲ್ಲಿ ವೈದ್ಯರಾದ ಸಲಾವುದ್ದೀನ್, ರೇಣುಕಾರಾಧ್ಯ, ಸುಜಾತ, ಶಿವರಾಜ ಪಾಟೀಲ್ ಅವರು ಭಾಗಿಯಾಗಿದ್ದರು. ಈಗಾಗಲೇ ಹತ್ತಾರು ಅಧುನಿಕ ವೈದ್ಯ ಸೌಲಭ್ಯ, ಸತತ ಎರಡು ಬಾರಿ ಕೇಂದ್ರ ಸರ್ಕಾರದ ಕಾಯಕಲ್ಪ ಪ್ರಶಸ್ತಿ ಪಡೆದ ರಾಜ್ಯದ ಏಕೈಕ ತಾಲೂಕು ಆಸ್ಪತ್ರೆ ಎಂಬ ಖ್ಯಾತಿ ಗಳಿಸಿರುವ ಆಸ್ಪತ್ರೆ ಈಗ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

    ಈ ಸರ್ಕಾರಿ ಆಸ್ಪತ್ರೆ ಖಾಸಗಿ ಆಸ್ಪತ್ರೆಗೆ ಸೆಡ್ಡು ಹೊಡೆದಿದ್ದು, ಈ ಹಿಂದೆ ಪಬ್ಲಿಕ್ ಹೀರೋಗಳಾಗಿದ್ದ ಇಲ್ಲಿನ ಮುಖ್ಯ ವೈದ್ಯಧಿಕಾರಿ ಈಶ್ವರ ಸವಡಿ ಮತ್ತು ಅವರ ಸಿಬ್ಬಂದಿಯ ಕೆಲಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.