Tag: Gangavathi

  • ಬೈಕ್‌ಗೆ ಲಾರಿ ಡಿಕ್ಕಿ – ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿ ಸಾವು

    ಬೈಕ್‌ಗೆ ಲಾರಿ ಡಿಕ್ಕಿ – ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿ ಸಾವು

    ಕೊಪ್ಪಳ: ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿಯ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavathi) ತಾಲೂಕಿನ ಕೆಸರಟ್ಟಿ ಗ್ರಾಮದ ಬಳಿ ನಡೆದಿದೆ.ಇದನ್ನೂ ಓದಿ: ಮುಂದಿನ 5 ವರ್ಷದಲ್ಲಿ ಅಟೋಮೊಬೈಲ್ ಉದ್ಯಮದಲ್ಲಿ ವಿಶ್ವದಲ್ಲೇ ಭಾರತ ನಂಬರ್‌ 1: ಗಡ್ಕರಿ ಭವಿಷ್ಯ

    ಮೃತ ದಂಪತಿಯನ್ನು ಮರಕುಂಬಿ (Marakumbi) ಗ್ರಾಮದ ನಿವಾಸಿಗಳಾದ ಪತಿ ಮಂಜುನಾಥ ನಾಯಕ್(38) ಹಾಗೂ ಪತ್ನಿ ನೇತ್ರಾವತಿ ನಾಯಕ್(33) ಎಂದು ಗುರುತಿಸಲಾಗಿದೆ.

    ಕೂಲಿ ಕೆಲಸಕ್ಕಾಗಿ ದಂಪತಿ ಗಂಗಾವತಿಗೆ ಹೊರಟಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಮನೀಶ್ ಸಿಸೋಡಿಯಾ ಜಾಮೀನು ನಿಯಮ ಸಡಿಲಿಸಿದ ಸುಪ್ರೀಂ

  • ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಬೈಕ್ – ಅಂಜನಾದ್ರಿ ಬೆಟ್ಟಕ್ಕೆ ಹೊರಟಿದ್ದ ಸವಾರ ಸಾವು

    ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಬೈಕ್ – ಅಂಜನಾದ್ರಿ ಬೆಟ್ಟಕ್ಕೆ ಹೊರಟಿದ್ದ ಸವಾರ ಸಾವು

    ಕೊಪ್ಪಳ: ನಿಯಂತ್ರಣ ತಪ್ಪಿ ಬೈಕ್ ಕಾಲುವೆಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavathi) ತಾಲೂಕಿನ ಸಾಣಾಪುರ ಬಳಿ ನಡೆದಿದೆ.

    ಮೃತ ಬೈಕ್ ಸವಾರನನ್ನು ಒಡಿಶಾ (Odisha) ಮೂಲದ ಲುಲ್ಲು ಲಾಲ್ (30) ಎಂದು ಗುರುತಿಸಲಾಗಿದ್ದು, ಕೊಪ್ಪಳ ತಾಲೂಕಿನ ಮೆತಗಲ್ ಬಳಿ ವಿಂಡ್ ಪವರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.ಇದನ್ನೂ ಓದಿ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು – ಭಾನುವಾರ ಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಮಾವೇಶ

    ಇಂದು (ಡಿ.7) ಬೆಳಿಗ್ಗೆ ಅಂಜನಾದ್ರಿಯ ಆಂಜನೇಯ ದರ್ಶನಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೃತ ಲುಲ್ಲು ಸೇರಿದಂತೆ ಇಬ್ಬರು ಬೆಟ್ಟಕ್ಕೆ ಹೊರಟಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿದೆ. ಬಿದ್ದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಹಾಗೂ ಹಿಂಬದಿ ಸವಾರನಿಗೆ ಗಾಯಗಳಾಗಿದ್ದು, ಆತನನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಗುರಿ: ಶೈಲೇಂದ್ರ ಬೆಲ್ದಾಳೆ 

  • ಕೊಪ್ಪಳ | ಗ್ಯಾಸ್ ಗೀಸರ್ ಸ್ಫೋಟ – ಐವರಿಗೆ ಗಂಭೀರ ಗಾಯ

    ಕೊಪ್ಪಳ | ಗ್ಯಾಸ್ ಗೀಸರ್ ಸ್ಫೋಟ – ಐವರಿಗೆ ಗಂಭೀರ ಗಾಯ

    ಕೊಪ್ಪಳ: ಗ್ಯಾಸ್ ಗೀಸರ್ ಸ್ಪೋಟಗೊಂಡಿರುವ ಪರಿಣಾಮ ಐವರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ನಗರದ ಸಾರಿಗೆ ಬಸ್ ಡಿಪೋ ಬಳಿಯಿರುವ ಕಾಲೋನಿಯಲ್ಲಿ ನಡೆದಿದೆ.ಇದನ್ನೂ ಓದಿ: ಗೋಧ್ರಾ ದುರಂತ ಆಧರಿತ ಸಿನಿಮಾ ‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಲಿದ್ದಾರೆ ಮೋದಿ

    ಗಾಯಾಳುಗಳನ್ನು ಕವಿತಾ, ಪ್ರೀತಿ, ಶೋಭಾ, ಶೃತಿ, ಭಾಗ್ಯಮ್ಮ ಎಂದು ಗುರುತಿಸಲಾಗಿದೆ. ಸದ್ಯ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕವಿತಾ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದವರನ್ನು ಗಂಗಾವತಿಯ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಡೆಸಿ, ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

    ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಹಾಗೂ ಗಂಗಾವತಿ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್ ಒಕ್ಕಲಿಗರ ದ್ರೋಹಿ, ಡಿಕೆಶಿ ಸುಳ್ಳಿನ ಶೂರ – ಜೆಡಿಎಸ್ ಲೇವಡಿ

  • ಬೈಕ್ ವ್ಹೀಲಿಂಗ್ ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗಳ ಅರೆಸ್ಟ್

    ಬೈಕ್ ವ್ಹೀಲಿಂಗ್ ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗಳ ಅರೆಸ್ಟ್

    ಕೊಪ್ಪಳ: ಬೈಕ್ ವ್ಹೀಲಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂವರು ಬೈಕ್ ಸವಾರರು ಪೊಲೀಸರ ಮೇಲೆ ನಡು ರಸ್ತೆಯಲ್ಲೇ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಗಂಗಾವತಿ (Gangavathi) ತಾಲೂಕಿನ ದಾಸನಾಳ ಗ್ರಾಮದ ತುಂಗಭದ್ರಾ ಕಾಲುವೆ ಸೇತುವೆಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.

    ಬಂಧಿತ ಆರೋಪಿಗಳನ್ನು ಗಂಗಾವತಿ ನಗರದ ನಿವಾಸಿಗಳಾದ ಅರ್ಭಾಜ್, ಪಂಪನಗೌಡ, ವೆಂಕಟೇಶ ಎಂದು ಗುರುತಿಸಲಾಗಿದ್ದು, ಗಂಗಾವತಿ ಗ್ರಾಮೀಣ ಪೊಲೀಸ್ ಮುಖ್ಯಪೇದೆ ಬಸವರಾಜ, ಚಾಲಕ ಕನಕಪ್ಪ ಅವರ ಮೇಲೆ ಹಲ್ಲೆ ನಡೆದಿದೆ.ಇದನ್ನೂ ಓದಿ:ಮುಖ್ಯಮಂತ್ರಿ ಬದಲಾವಣೆ ಇಲ್ಲ, ಸಿಎಂ ಬದಲಾವಣೆ ಕೇವಲ ಊಹಾಪೋಹ: ಸತೀಶ್ ಜಾರಕಿಹೊಳಿ

    ಗಂಗಾವತಿ ತಾಲೂಕಿನ ಹೇಮಗುಡ್ಡದ ದುರ್ಗಾದೇವಿ ದಸರಾ ಮಹೋತ್ಸದ ಪಾರ್ಕಿಂಗ್ ವ್ಯವಸ್ಥೆ ನೋಡಿಕೊಂಡು, ಪೊಲೀಸರು ಗಂಗಾವತಿ ಕಡೆಗೆ ಬರುತ್ತಿದ್ದರು. ಇದನ್ನು ನೋಡಿದ ಆರೋಪಿಗಳು ಆರ್‌ಎಕ್ಸ್ ಬೈಕ್‌ನ್ನು ವ್ಹೀಲಿಂಗ್ ಮಾಡಿಕೊಂಡು ಪೊಲೀಸರ ವಾಹನದ ಬಲ ಭಾಗದಿಂದ ಓವರ್ ಟೇಕ್ ಮಾಡಿದ್ದಾರೆ. ಇದನ್ನು ಕಂಡ ಪೊಲೀಸರು ನಿಲ್ಲುವಂತೆ ಹೇಳಿದ್ದು, ಅಷ್ಟರಲ್ಲೇ ಆಯತಪ್ಪಿ ಬೈಕ್ ಕೆಳಗೆ ಬಿದ್ದಿದೆ. ಕೂಡಲೇ ತಮ್ಮ ವಾಹನದಿಂದ ಕೆಳಗಿಳಿದು ಬಂದಿರುವ ಪೊಲೀಸರು ಆರೋಪಿಗಳಿಗೆ ಬೈಕ್ ಸೈಡ್‌ಗೆ ಹಾಕುವಂತೆ ಸೂಚಿಸಿದ್ದು, ತಾವೇ ಬೈಕ್ ಎತ್ತಿಕೊಳ್ಳಲು ಮುಂದಾಗಿದ್ದಾರೆ.

    ಇದರಿಂದ ಆಕ್ರೋಶಗೊಂಡ ಅರ್ಭಾಜ್, ಪಂಪನಗೌಡ ಮತ್ತು ವೆಂಕಟೇಶ ಏಕಾಏಕಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಘಟನೆಯನ್ನು ವಿಡಿಯೋ ಮಾಡಲು ಮುಂದಾದ ಮುಖ್ಯಪೇದೆ ಬಸವರಾಜನ ಮೊಬೈಲ್ ಕಿತ್ತುಕೊಂಡು ಕಾಲುವೆಗೆ ಎಸೆದಿದ್ದಾರೆ. ಬಳಿಕ ದುಷ್ಕರ್ಮಿಗಳು ಅವರ ಮೇಲೆಯೂ ಹಲ್ಲೆ ಮಾಡಿದ್ದಾರೆ.

    ಮೂವರು ದುಷ್ಕರ್ಮಿಗಳು ಸೇರಿಕೊಂಡು ಇಬ್ಬರು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಕೂಡಲೇ ಮತ್ತಷ್ಟು ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿಕೊಂಡು, ಆರೋಪಿಗಳನ್ನು ಬೈಕ್ ಸಮೇತ ಪೊಲೀಸ್ ಠಾಣೆಗೆ ಕರೆತರಲಾಗಿದೆ. ಹಲ್ಲೆಗೆ ಒಳಗಾದ ಇಬ್ಬರು ಪೊಲೀಸರು ಗಂಗಾವತಿ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ನಾರಿಮಣಿಯರ ಗಮನ ಸೆಳೆದ ಕಟೌಟ್ ಪ್ಯಾಂಟ್‌ಸೂಟ್

  • ಪಬ್ಲಿಕ್‌ ಟಿವಿ ಇಂಪ್ಯಾಕ್ಟ್ | ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್‌ ಕಂಬ ತೆರವು – ಆದೇಶ ಹಿಂಪಡೆದ ತಹಶೀಲ್ದಾರ್‌

    ಪಬ್ಲಿಕ್‌ ಟಿವಿ ಇಂಪ್ಯಾಕ್ಟ್ | ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್‌ ಕಂಬ ತೆರವು – ಆದೇಶ ಹಿಂಪಡೆದ ತಹಶೀಲ್ದಾರ್‌

    – KRIDL ವಿರುದ್ಧ ಕೇಸ್‌ ದಾಖಲಿಸದಂತೆ ಸೂಚನೆ
    – ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿದ್ದ ನೆಟ್ಟಿಗರು

    ಕೊಪ್ಪಳ: ಪಬ್ಲಿಕ್‌ ಟಿವಿ ವರದಿ ಬೆನ್ನಲ್ಲೇ ಗಂಗಾವತಿ (Gangavathi) ನಗರದ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಭಿವೃದ್ಧಿಪಡಿಸಿದ ರಸ್ತೆ ಮಧ್ಯೆ ಹಾಕಿರುವ ವಿದ್ಯುತ್ ಕಂಬಗಳ (Electric Pole) ತೆರವುಗೊಳಿಸಲು ಹೊರಡಿಸಿದ್ದ ಆದೇಶವನ್ನು ಗಂಗಾವತಿ ತಹಶೀಲ್ದಾರ್‌ ಹಿಂದಕ್ಕೆ ಪಡೆದಿದ್ದಾರೆ. ಇದರ ಜೊತೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDL) ವಿರುದ್ಧವೇ ಪ್ರಕರಣ ದಾಖಲಿಸದಂತೆ ಸೂಚಿಸಿದ್ದಾರೆ.

    ಅಗಸ್ಟ್ 28ರ ಸಂಜೆ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿರುವ ತಹಸೀಲ್ದಾರ್ ನಾಗರಾಜ್‌ ಅವರು ಈ ಬಗ್ಗೆ ಸಂಬಂಧಿತ ಸಂಕ್ಷಮ ಪ್ರಾಧಿಕಾರದಲ್ಲಿ ಜನಾಭಿಪ್ರಾಯ ಪಡೆದು ಮುಂದುವರೆಯಲಾಗುವುದು. ಧಾರ್ಮಿಕ, ಮತೀಯ ಭಾವನೆಯಂತ ಸೂಕ್ಷ್ಮ ವಿಚಾರ ಉಂಟಾದಲ್ಲಿ ಕಾನೂನನಾತ್ಮಕ ಕ್ರಮ ಕೈಗೊಳ್ಳಲಾಗುವುದು  ಎಂದು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಗರಾಜ್, ಈ ವಿಷಯ ನಗರಸಭೆಯ ವ್ಯಾಪ್ತಿಗೆ ಬರುವ ಕಾರಣ ಸಾಮಾನ್ಯಸಭೆಯಲ್ಲಿ ಇದೇ ವಿಚಾರದ ಅಂಗವಾಗಿ ಪ್ರಸ್ತಾಪ ಮಾಡಿ ವಿಷಯ ಮಂಡನೆ ಮಾಡಿ ಅನುಮೋದನೆ ಪಡೆದುಕೊಂಡಿರುವುದು ನನ್ನ ಗಮನಕ್ಕೆ ಬಾರದ ಹಿನ್ನೆಲೆ ಆದೇಶ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

    ಪಬ್ಲಿಕ್‌ ಟಿವಿ ಡಿಜಿಟಲ್‌ ಇಂದು ಬೆಳಗ್ಗೆ ವರದಿ ಪ್ರಕಟಿಸುತ್ತಿದ್ದಂತೆ ಸರ್ಕಾರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಭಾರೀ ಟೀಕೆ ವ್ಯಕ್ತಪಡಿಸಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.

    ಏನಿದು ವಿವಾದ?
    ಅಯೋಧ್ಯೆ, ತಿರುಪತಿಯ ಮಾದರಿಯಲ್ಲಿ ಗಂಗಾವತಿ ಅಂಜನಾದ್ರಿ (Anjanadri Betta) ಅಭಿವೃದ್ಧಿಯಾಗಬೇಕೆಂಬ ನಿಟ್ಟಿನಲ್ಲಿ ಮಹಾರಾಣಾ ಪ್ರತಾಪ್ ಸರ್ಕಲ್‌ನಿಂದ ಜುಲೈ ನಗರದವರೆಗೂ ತಿರುಪತಿ, ಅಯೋಧ್ಯೆಯಲ್ಲಿರುವಂತೆ (Ayodhya) ವಿದ್ಯುತ್ ಕಂಬಗಳನ್ನು ಹಾಕಿದ್ದಕ್ಕೆ ಎಸ್‌ಡಿಪಿಐ (SDPI) ಆಕ್ಷೇಪ ವ್ಯಕ್ತಪಡಿಸಿತ್ತು.

    ಇದು ಕೇವಲ ಒಂದು ಧರ್ಮದ (Religion) ಸಂಕೇತವಾಗಿದೆ. ಇದರಿಂದ ಗಂಗಾವತಿ ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಆಗುತ್ತದೆ ಎಂದು ಆರೋಪಿಸಿ ಇದನ್ನು ತೆರವುಗೊಳಿಸುವಂತೆ ಗಂಗಾವತಿ ನಗರಸಭೆ ಕಮಿಷನರ್‌ಗೆ SDPI ಮನವಿ ಮಾಡಿತ್ತು.  ಇದನ್ನೂ ಓದಿ: ಮೈಕ್ ಹಾಕಿ ಊರಿಗೆಲ್ಲ ಕೇಳುವ ಹಾಗೆ ಕೂಗಿದ್ರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ವಾ? – ತ್ರಿಶೂಲ, ತಿಲಕದ ವಿದ್ಯುತ್ ಕಂಬ ತೆರವು ಆದೇಶಕ್ಕೆ ಸಿ.ಟಿ ರವಿ ಕೆಂಡ

    ಎಸ್‌ಡಿಪಿಐ ನೀಡಿದ ಮನವಿ ಪತ್ರ
    ಎಸ್‌ಡಿಪಿಐ ನೀಡಿದ್ದ ಮನವಿ ಪತ್ರ

    ಈ ಮನವಿಯ ಬೆನ್ನಲ್ಲೇ ಗಂಗಾವತಿ ನಗರದ ಜುಲೈನಗರದಿಂದ ರಾಣಾ ಪ್ರತಾಪ್ ವೃತ್ತದವರೆಗೆ ಅಭಿವೃದ್ಧಿಪಡಿಸಿದ ರಸ್ತೆ ಮಧ್ಯೆ ಹಾಕಿರುವ ವಿದ್ಯುತ್ ಕಂಬಗಳ ತೆರವಿಗೆ ತಹಶೀಲ್ದಾರ್‌ ಆದೇಶಿಸಿದ್ದರು. ಅಷ್ಟೇ ಅಲ್ಲದೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDL) ವಿರುದ್ಧವೇ ಪ್ರಕರಣ ದಾಖಲಿಸಲು ಸೂಚಿಸಿದ್ದರು.  ಇದನ್ನೂ ಓದಿ: ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ? 

    ಆಗಸ್ಟ್‌ 28 ರಂದು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ತಹಶೀಲ್ದಾರ್‌ ಅವರು ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷರಿಗೆ ನೀಡಿರುವ ಆದೇಶದ ಪ್ರತಿ ಪಬ್ಲಿಕ್‌ ಟಿವಿಗೆ ಲಭ್ಯವಾಗಿತ್ತು.

    ತಹಶೀಲ್ದಾರ್‌ ಹೊರಡಿಸಿದ್ದ ಆದೇಶ ಪ್ರತಿ

    ಹನುಮನ ಜನ್ಮಸ್ಥಳವಾಗಿರುವ ಅಂಜನಾದ್ರಿ ಭಾಗವನ್ನು ಅಯೋಧ್ಯೆ, ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು ಎಂಬ ಒತ್ತಾಯ ಹಲವು ಬಾರಿ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಚುನಾವಣಾ ಪ್ರಚಾರದಲ್ಲೂ ಭರವಸೆ ನೀಡಿದ್ದರು. ಅದರಂತೆ ಈಗ ವಿದ್ಯುತ್ ಕಂಬಗಳಲ್ಲಿ ಬಿಲ್ಲು, ಬಾಣಗಳು ಇರುವ ಚಿತ್ರಗಳನ್ನು ಅಳವಡಿಸಲಾಗಿತ್ತು.

    ವಿದ್ಯುತ್ ಕಂಬಗಳಲ್ಲಿ ಅಳವಡಿಸಿರುವ ಚಿತ್ರಗಳು ಐತಿಹಾಸಿಕ ಅಂಜನಾದ್ರಿ ಪರ್ವತದ ಮಾರ್ಗಸೂಚಿಗೆ ಅನುಕೂಲವಾಗಿವೆ. ಅಂಜನಾದ್ರಿಗೆ ಬರುವ ಭಕ್ತರಲ್ಲಿ ಧಾರ್ಮಿಕ ಭಕ್ತಿ ಉಂಟಾಗುವುದರಿಂದ ಇವುಗಳನ್ನು ಅಳವಡಿಸಲಾಗಿದೆ. ಇದರಿಂದ ಯಾರ ಭಾವನೆಗೂ ಧಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಅಷ್ಟೇ ಅಲ್ಲದೇ ನಗರಸಭೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲೂ ಜನಾರ್ದನ ರೆಡ್ಡಿ ಅವರು ವಿಷಯ ಪ್ರಸ್ತಾಪಿಸಿ ಈ ವಿಷಯದಲ್ಲಿ ಅನಾವಶ್ಯಕ ಗೊಂದಲ ಸೃಷ್ಟಿಸದೇ ಎಲ್ಲರೂ ಸಹಕಾರ ನೀಡುವಂತೆ ಸದಸ್ಯರಲ್ಲಿ ಮನವಿ ಮಾಡಿದ್ದರು.

     

  • ಅಂಜನಾದ್ರಿ ಭಾಗದಲ್ಲಿ ಕೋಮು ಸೌಹಾರ್ದತೆ ಕದಡುತ್ತೆ –  ಬಿಲ್ಲು, ಬಾಣ ಗುರುತಿರುವ ವಿದ್ಯುತ್ ಕಂಬಗಳಿಗೆ SDPI ವಿರೋಧ

    ಅಂಜನಾದ್ರಿ ಭಾಗದಲ್ಲಿ ಕೋಮು ಸೌಹಾರ್ದತೆ ಕದಡುತ್ತೆ – ಬಿಲ್ಲು, ಬಾಣ ಗುರುತಿರುವ ವಿದ್ಯುತ್ ಕಂಬಗಳಿಗೆ SDPI ವಿರೋಧ

    ಕೊಪ್ಪಳ: ಗಂಗಾವತಿ (Gangavathi) ನಗರದ ಮಹಾರಾಣಾ ಪ್ರತಾಪ್ ಸರ್ಕಲ್‌ನಿಂದ ಜುಲೈ ನಗರದವರೆಗೂ ತಿರುಪತಿ, ಅಯೋಧ್ಯೆಯಲ್ಲಿರುವಂತೆ (Ayodhya) ವಿದ್ಯುತ್ ಕಂಬಗಳನ್ನು ಹಾಕಿದ್ದಕ್ಕೆ ಎಸ್‌ಡಿಪಿಐ (SDPI) ಆಕ್ಷೇಪ ವ್ಯಕ್ತಪಡಿಸಿದೆ.

    ಅಯೋಧ್ಯೆ, ತಿರುಪತಿಯ ಮಾದರಿಯಲ್ಲಿ ಗಂಗಾವತಿ ಅಂಜನಾದ್ರಿ (Anjanadri Betta) ಅಭಿವೃದ್ಧಿ ಆಗಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ. ಆದರೆ ಅದೇ ಮಾದರಿಯಲ್ಲಿ ನಗರದ ಬೀದಿ ದೀಪದ ಕಂಬ ಅಳವಡಿಕೆಗೆ ಎಸ್‌ಡಿಪಿಐ ವಿರೋಧ ವ್ಯಕ್ತಪಡಿಸಿದೆ. ಇದು ಕೇವಲ ಒಂದು ಧರ್ಮದ (Religion) ಸಂಕೇತವಾಗಿದೆ. ಇದರಿಂದ ಗಂಗಾವತಿ ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಆಗುತ್ತದೆ ಎಂದು ಆರೋಪಿಸಿದೆ. ಇದನ್ನೂ ಓದಿ: MUDA Scam | ಪ್ರಾಸಿಕ್ಯೂಷನ್ ಸಮರದಲ್ಲಿ ಸೈಲೆಂಟ್ ಅಸ್ತ್ರ ಪ್ರಯೋಗಿಸಿದ ರಾಹುಲ್‌ ಗಾಂಧಿ!

    ಹನುಮನ ಜನ್ಮಸ್ಥಳವಾಗಿರುವ ಅಂಜನಾದ್ರಿ ಭಾಗವನ್ನು ಅಯೋಧ್ಯೆ, ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕು ಎಂಬ ಒತ್ತಾಯ ಹಲವು ಬಾರಿ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಚುನಾವಣಾ ಪ್ರಚಾರದಲ್ಲೂ ಭರವಸೆ ನೀಡಿದ್ದರು. ಅದರಂತೆ ಈಗ ವಿದ್ಯುತ್ ಕಂಬಗಳನ್ನು ಈಗ ಅಳವಡಿಸಲಾಗುತ್ತಿದೆ. ನಗರದ ಸೌಂದರ್ಯ ಹೆಚ್ಚಿಸಲು ಹಾಕಿರುವ ಈ ದೀಪದ ಕಂಬಗಳ ವಿಚಾರದಲ್ಲಿ ಸದ್ಯ ಎಸ್‌ಡಿಪಿಐ ಖ್ಯಾತೆ ತೆಗೆದಿದ್ದು, ಜನಾರ್ದನ ರೆಡ್ಡಿ ತೀರ್ಮಾನದ ವಿರುದ್ಧ ಗಂಗಾವತಿ ನಗರಸಭೆ ಕಮಿಷನರ್‌ಗೆ ಮನವಿ ಮಾಡಿದೆ. ಇದನ್ನೂ ಓದಿ : Karkala | ಮದ್ಯದಲ್ಲಿ ಮಾದಕ ವಸ್ತು ನೀಡಿ ಅತ್ಯಾಚಾರ – ಗ್ಯಾಂಗ್‌ರೇಪ್‌ ಶಂಕೆ?

     

    ಗಂಗಾವತಿಯಿಂದ 12 ಕಿಲೋ ಮೀಟರ್ ದೂರದಲ್ಲಿ ಹನುಮ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದವರೆಗೂ ಇದೆ ಮಾದರಿಯಲ್ಲಿ ಬೀದಿ ದೀಪಗಳು ಅಳವಡಿಕೆ ಮಾಡಲಾಗುತ್ತಿದೆ. ಇಲ್ಲಿಗೆ ಲಕ್ಷಾಂತರ ಹನುಮ ಭಕ್ತರು ಹಾಗೂ ಪ್ರವಾಸಿಗರು ಬರುತ್ತಾರೆ. ಇಂತಹ ಪ್ರವಾಸಿ ಸ್ಥಳದಲ್ಲಿ, ಬೀದಿ ದೀಪಗಳು ಸುಂದರವಾಗಿ ಕಾಣಲಿ ಎಂಬ ಉದ್ದೇಶಕ್ಕೆ ಹಾಕಲಾಗಿದೆ. ಇದರಲ್ಲಿ  ಕೋಮು ಸೌಹಾರ್ದತೆ ಕದಡುವ ಅಂಶ ಏನಿದೆ ಎಂದು ಹಿಂದೂ ಮುಖಂಡರು ಪ್ರಶ್ನಿಸಿದ್ದಾರೆ.

     

  • ರಾಮಮಂದಿರ ನಿರ್ಮಾಣದಲ್ಲಿ ಹನುಮನ ನಾಡಿನ ಶಿಲ್ಪಿ

    ರಾಮಮಂದಿರ ನಿರ್ಮಾಣದಲ್ಲಿ ಹನುಮನ ನಾಡಿನ ಶಿಲ್ಪಿ

    ಕೊಪ್ಪಳ: ಶ್ರೀರಾಮಚಂದ್ರನ ಜನ್ಮ ಭೂಮಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮಚಂದ್ರನ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ರಾಮನ ಭಕ್ತನಾಗಿರುವ ಹನುಮನ ನಾಡಿನಿಂದ ಶಿಲ್ಪಿ ಓರ್ವ ಹೋಗುವ ಮೂಲಕ ದೇವಸ್ಥಾನ ನಿರ್ಮಾಣದ ಕೆತ್ತನೆಯ ಕೆಲಸದಲ್ಲಿ ನಿರತರಾಗಿ ವಾಪಸ್ಸು ಬಂದಿದ್ದಾರೆ.

    ಕೊಪ್ಪಳದ (Koppal) ಗಂಗಾವತಿ (Gangavati) ನಗರದ 24ನೇ ವಾರ್ಡಿನ ಲಕ್ಷ್ಮಿಕ್ಯಾಂಪ್ ನಿವಾಸಿಯಾಗಿರುವ ಶಿಲ್ಪಿ ಪ್ರಶಾಂತ್ ಸೋನಾರ್ ಎನ್ನುವವರು ಸರಿಸುಮಾರು 45 ದಿನಗಳ ಕಾಲ ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರ ನಿರ್ಮಾಣ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದಾರೆ. ಚಿಕ್ಕಂದಿನಿಂದಲೂ ಚಿತ್ರಗಳನ್ನು ಬಿಡಿಸುವ, ಶಿಲ್ಪಗಳನ್ನು ಕೆತ್ತುವ ಆಸಕ್ತಿಯನ್ನು ಹೊಂದಿದ್ದ ಪ್ರಶಾಂತ್ ಅವರು ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ನಡೆಯುವ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಆಸಕ್ತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ನಂತರ ಚೆನ್ನಪಟ್ಟಣ ತಾಲೂಕಿನ ಕೆಂಗಲ್ ಗ್ರಾಮದ ಶ್ರೀಗಂಗರಸ ಶಿಲ್ಪಕಲಾ ಶಿಕ್ಷಣ ಕೇಂದ್ರದಲ್ಲಿ ಸುಮಾರು 5 ವರ್ಷಗಳ ಕಾಲ ಶಿಲ್ಪಕಲೆಯ ಕುರಿತು ಶಿಕ್ಷಣ ಪಡೆದುಕೊಂಡು, ಸುಮಾರು ಕಡೆಗಳಲ್ಲಿ ಶಿಲ್ಪ ಕಲೆಗಳ, ದೇವರ ಮೂರ್ತಿಗಳ ಕೆತ್ತನೆಯ ಕೆಲಸ ಮಾಡಿ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಇವರಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ, ಧಾರವಾಡದ ಮುಖ್ಯಶಿಲ್ಪಿಯಾಗಿರುವ ರವೀಂದ್ರ ಆಚಾರ್ ಅವರ ಸಂದೇಶದ ಮೇರೆಗೆ ಕರ್ನಾಟಕದಿಂದ 4 ಜನ ಶಿಲ್ಪಿಗಳು ಅಯೋಧ್ಯೆಯನ್ನು ತಲುಪಿದ್ದರು. ಅದರಲ್ಲಿ ಪ್ರಶಾಂತ್ ಸೋನಾರ್ ಕೂಡ ಒಬ್ಬರಾಗಿದ್ದಾರೆ. ಇವರನ್ನು ಅಯೋಧ್ಯೆ ರಾಮಮಂದಿರ ನಿರ್ಮಾಣ ಕೆಲಸಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಸಂವಿಧಾನದ ಮೂಲಭೂತ ಹಕ್ಕುಗಳ ಭಾಗದಲ್ಲಿ ಶ್ರೀರಾಮ-ಲಕ್ಷ್ಮಣ, ಸೀತಾದೇವಿಯ ಚಿತ್ರಗಳಿವೆ: ಜಗದೀಪ್‌ ಧನಕರ್‌

     

    ಮಂದಿರ ಗರ್ಭ ಗುಡಿಯಲ್ಲಿ ಕೆಲಸ: ರಾಜ್ಯದಲ್ಲಿ ಅಯೋಧ್ಯೆಗೆ ಹೋಗಿರುವ 4 ಜನ ಶಿಲ್ಪಿಗಳಲ್ಲಿ ಪ್ರಶಾಂತ್ ಸೋನಾರ್ ಅವರಿಗೆ ರಾಮಮಂದಿರದ ಗರ್ಭ ಗುಡಿಯಲ್ಲಿ ಕೆತ್ತನೆ ಮಾಡುವ ಕೆಲಸ ನೀಡಲಾಗಿತ್ತು. ಸುಮಾರು 45 ದಿನಗಳ ಕಾಲ ರಾಮಮಂದಿರ ನಿರ್ಮಾಣ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ದೇವಸ್ಥಾನದ ಗರ್ಭಗುಡಿ ಬಳಿಯ ಕಂಬಗಳಲ್ಲಿ ಬಳ್ಳಿ ಕೆತ್ತನೆ, ಕಂಬಗಳಲ್ಲಿ ವಿಗ್ರಹಗಳ ಕೆತ್ತನೆ ಕೆಲಸವನ್ನು ಮಾಡಲಾಗಿದೆ. ಇವರಿಗೆ ನೀಡಿದ ಕೆಲಸ ಪೂರ್ಣಗೊಳಿಸಿ, ವಾಪಸ್ಸು ಬಂದಿದ್ದು, ದೇವಸ್ಥಾನ ಉದ್ಘಾಟನೆಯ ನಂತರವೂ ಸಹ ಇನ್ನೂ ದೇವಸ್ಥಾನ ಕೆಲಸ ನಡೆಯಲಿದೆ. ಮತ್ತೆ ಆಹ್ವಾನ ಬಂದರೆ ಮತ್ತೆ ಹೋಗಿ ಶ್ರೀರಾಮಚಂದ್ರನ ಸೇವೆಯನ್ನು ಮಾಡುವೆ ಎನ್ನುವ ಆಶಯವನ್ನು ಪ್ರಶಾಂತ್ ಸೋನಾರ್ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ಗೆ ಆಹ್ವಾನ

    ಫುಲ್ ಟೈಟ್ ಸೆಕ್ಯೂರಿಟಿ:
    ಅಯೋಧ್ಯೆಯ ರಾಮಮಂದಿರದಲ್ಲಿನ ಹೊರಾಂಗಣದ ಸ್ತಂಭ, ಶಿಲಾ ಕೃತಿಗಳ ಕೆತ್ತನೆ ಕಾರ್ಯದಲ್ಲಿ ಸುಮಾರು 45 ದಿನಗಳನ್ನು ಕಳೆದಿರುವ ಗಂಗಾವತಿಯ ಶಿಲ್ಪ ಕಲಾವಿದ ಪ್ರಶಾಂತ್ ಸೋನಾರ್ ಅದೊಂದು ಅದ್ಭುತ ಅನುಭವ ಎಂದು ಹೇಳಿಕೊಳ್ಳುತ್ತಾರೆ. ಬೆಳಗ್ಗೆ ಎಂಟು ಗಂಟೆಗೆ ಶುರುವಾಗುತ್ತಿದ್ದ ಕೆಲಸ, ಸಂಜೆ ಆರು ಗಂಟೆಗೆ ಮುಗಿಯುತ್ತಿತ್ತು. ಅತ್ಯಂತ ಟೈಟ್ ಸೆಕ್ಯೂರಿಟಿಯಲ್ಲಿ ನಾವು ಕೆಲಸ ಮಾಡಬೇಕಿತ್ತು. ಮುಖ್ಯವಾಗಿ ನಮಗೆ ಕೊಟ್ಟ ಕೆಲಸವಷ್ಟೆ ಮಾಡಬೇಕಿತ್ತು. ನಮ್ಮ ತಂಡದ ಸದಸ್ಯರನ್ನು ಹೊರತು ಪಡಿಸಿದರೆ ಬೇರೆ ಗುಂಪಿನೊಂದಿಗೆ ಪರಸ್ಪರ ಮಾತುಕತೆಗೆ ಆಸ್ಪದ ಇರುತ್ತಿರಲಿಲ್ಲ. ಮುಖ್ಯವಾಗಿ ನಾವು ಮಾಡುವ ಕೆಲಸದ ತಾಣಕ್ಕೆ ಮೊಬೈಲ್‌ಗಳನ್ನು ತೆಗೆದುಕೊಂಡು ಹೋಗುವಂತಿರಲಿಲ್ಲ. ಅನಗತ್ಯ ಯಾರೊಂದಿಗೂ ಮಾತನಾಡುವಂತಿರಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯಸಭೆಗೆ ಅವಕಾಶ ನೀಡಿ, ಲೋಕಸಭೆಯಲ್ಲಿ 3 ಕ್ಷೇತ್ರ ಗೆಲ್ಲಿಸುವೆ: ಅಮಿತ್ ಶಾ ಮುಂದೆ ಸೋಮಣ್ಣ ಮನವಿ

  • ಗಣೇಶ ಮೆರವಣಿಗೆ ಡಿಜೆ ಶಬ್ದಕ್ಕೆ ಯುವಕ ಸಾವು – ಎಫ್‍ಐಆರ್ ದಾಖಲು

    ಗಣೇಶ ಮೆರವಣಿಗೆ ಡಿಜೆ ಶಬ್ದಕ್ಕೆ ಯುವಕ ಸಾವು – ಎಫ್‍ಐಆರ್ ದಾಖಲು

    ಕೊಪ್ಪಳ: ಗಂಗಾವತಿ (Gangavathi) ನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ (Ganesha Procession) ವೇಳೆ ಡಿಜೆ ಶಬ್ದದಿಂದ ಹೃದಯಾಘಾತಕ್ಕೆ ಒಳಗಾಗಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಘಟನೆಯ ವಿಚಾರವಾಗಿ ಪ್ರಶಾಂತ ನಗರದ ಪರಶುರಾಮ ಮಡ್ಡೇರ, ಬಸವರಾಜ್ ತಾವರಗೇರಾ, ರವಿ ಪವಾರಶೆಟ್ಟಿ, ಡಿಜೆ ಮಾಲೀಕ ಸಂತೋಷ್ ಮುಧೋಳ, ಡಿಜೆ ಆಪರೇಟರ್ ಬೆಳಗಾವಿಯ ರಾಮದುರ್ಗದ ಶಿವಸಾಗರ್ ಮತ್ತು ಡಿಜೆ ಟ್ರಾಕ್ಟರ್ ಮಾಲೀಕ ಅಶೋಕ್ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ. ಡಿಜೆ ಸಂಗೀತಕ್ಕೆ ಬಳಸುತ್ತಿದ್ದ ಉಪಕರಣ, ವಾಹನ ಸೇರಿ ಒಟ್ಟು 24 ಲಕ್ಷ ರೂ. ಮೌಲ್ಯದ ವಾಹನ ಮತ್ತು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಡಿಜೆ ಸದ್ದಿಗೆ ಯುವಕನಿಗೆ ಹೃದಯಾಘಾತ

    ಮೂರು ಲಕ್ಷ ರೂ. ಮೌಲ್ಯದ ಟ್ರ್ಯಾಕ್ಟರ್, 10 ಲಕ್ಷ ರೂ. ಮೌಲ್ಯದ ಲಾರಿ, 3 ಲಕ್ಷ ರೂ. ಮೌಲ್ಯದ ಜನರೇಟರ್ ಹಾಗೂ 9 ಲಕ್ಷ ರೂ. ಮೌಲ್ಯದ ಡಿಜೆ ಸಂಗೀತದ ನಾನಾ ಮಾದರಿಯ ಉಪಕರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

    ಗಣೇಶನ ಹಬ್ಬದ ಅಂಗವಾಗಿ ಪ್ರಶಾಂತ ನಗರದ ಗಜಾನನ ಸಮಿತಿಯ ಸದಸ್ಯರು ಗಣೇಶನನ್ನು ಪ್ರತಿಷ್ಠಾಪಿಸಿದ್ದರು. ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಅನುಮತಿ ಪಡೆಯದೇ ಡಿಜೆ ಬಳಕೆ ಮಾಡಿದ್ದಾರೆ ಎಂದು ಎಎಸ್‍ಐ ಸಿದ್ದರಾಮಯ್ಯ ಎಂಬವರು ದೂರು ನೀಡಿದ್ದಾರೆ.

    ಹೆಚ್ಚು ಶಬ್ದ ಮಾಡುವ ಸಾಧನಗಳನ್ನು ಬಳಸದಂತೆ ಸಾಕಷ್ಟು ಮುಂಚಿತವಾಗಿ ಪೊಲೀಸ್ ಠಾಣೆಯಲ್ಲಿ ಸಭೆ ಆಯೋಜಿಸಿ ಸೂಚನೆ ನೀಡಿದ್ದರು. ಬಳಿಕವೂ ಅನುಮತಿ ಇಲ್ಲದೇ ಡಿಜೆ ಬಳಕೆ ಮಾಡಿ ಜನರ ನೆಮ್ಮದಿಗೆ ಭಂಗ ತರುವ ಮತ್ತು ಶಬ್ದ ಮಾಲಿನ್ಯ ಉಂಟು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಪ್ರೀತಿಸಿ ಯುವತಿಗೆ ವಂಚನೆ, ಮೂರು ಬಾರಿ ಗರ್ಭಿಣಿ – ವೈದ್ಯ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಜೆ ಸದ್ದಿಗೆ ಯುವಕನಿಗೆ ಹೃದಯಾಘಾತ

    ಡಿಜೆ ಸದ್ದಿಗೆ ಯುವಕನಿಗೆ ಹೃದಯಾಘಾತ

    ಕೊಪ್ಪಳ: ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್‍ಗೆ ಯುವಕ ಬಲಿಯಾದ ಘಟನೆ ಕೊಪ್ಪಳ (Koppala) ಜಿಲ್ಲೆಯಲ್ಲಿ ನಡೆದಿದೆ. ಸುದೀಪ್ ಸಜ್ಜನ್ (30) ಮೃತ ಯುವಕ. ಈತನಿಗೆ ಡಿಜೆ ಸೌಂಡ್ ಗೆ (DJ Sound) ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿದೆ.

    ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ 21 ದಿನದ ಗಣೇಶ ವಿಸರ್ಜನೆ ನಡೆದಿದೆ. ಗಂಗಾವತಿಯ ಪ್ರಶಾಂತ ನಗರದ ಯುವಕರಿಂದ ಡಿಜೆ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಅಂತೆಯೇ ಬೆಳ್ಳಂಬೆಳಗ್ಗೆ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಸೌಂಡ್ ಹಾಕಿ ಡ್ಯಾನ್ಸ್ ಮಾಡಲಾಗುತ್ತಿತ್ತು. ಇದನ್ನೂ ಓದಿ: ಹಮಾಸ್ ಉಗ್ರರ ನಡೆಗೆ ಮೋದಿ ಖಂಡನೆ- ಇಸ್ರೇಲ್ ಪರ ನಿಂತ ಭಾರತ

    ಮೆರವಣಿಗೆ ಸಾಗುತ್ತಿದ್ದ ವೇಳೆ ಸುದೀಪ್ ಡ್ಯಾನ್ಸ್ ಮಾಡುತ್ತಿದ್ದು, ಕೆಲ ಹೊತ್ತಿನ ಬಳಿಕ ಕುಸಿದು ಬಿದ್ದಿದ್ದಾನೆ. ಘಟನೆಯಿಂದ ಸ್ವಯಂ ಪ್ರೇರಿತವಾಗಿ ಯುವಕರು ಅರ್ಧಕ್ಕೆ ಡಿಜೆ ಬಂದ್ ಮಾಡಿದರು. ಯುವಕನ ಮೃತ ದೇಹ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಗಂಗಾವತಿ ನಗರ ಠಾಣೆ ಪೆÇಲೀಸರು ಡಿಜೆ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾಳಿಗೆ ಉರುಳಿ ಬಿದ್ದ ಶಾಮಿಯಾನದ ಕಂಬಗಳು- ಮಹಿಳೆ ಸಾವು

    ಗಾಳಿಗೆ ಉರುಳಿ ಬಿದ್ದ ಶಾಮಿಯಾನದ ಕಂಬಗಳು- ಮಹಿಳೆ ಸಾವು

    ಕೊಪ್ಪಳ: ಶಾಮಿಯಾನದ ಕಂಬಗಳು ಭಾರೀ ಗಾಳಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಪ್ಪಳ (Koppala) ಜಿಲ್ಲೆಯಲ್ಲಿ ನಡೆದಿದೆ.

    ಅಂಜಿನಮ್ಮ(45) ಮೃತ ದುರ್ದೈವಿ ಮಹಿಳೆಯಾಗಿದ್ದು, ಇವರು ಗಂಗಾವತಿ ತಾಲೂಕಿನ ಪ್ರಗತಿ ನಗರ ನಿವಾಸಿ. ಇನ್ನು ಶಾಮಿಯಾನದ ಕೆಳಗೆ ಸಿಲುಕಿ 4 ಜನರಿಗೆ ಗಂಭೀರ ಗಾಯಗಳಾಗಿವೆ.

    ಕಾರಟಗಿ ತಾಲೂಕು ಮುಷ್ಟೂರು ಕ್ಯಾಂಪ್ ನಲ್ಲಿ ಇಂದು ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅಡುಗೆ ಮಾಡುವ ಸ್ಥಳದಲ್ಲಿ ಶಾಮಿಯಾನ ಹಾಕಲಾಗಿತ್ತು. ಈ ವೇಳೆ ಜೋರಾದ ಗಾಳಿ ಬೀಸಿದ್ದರಿಂದ ಕಂಬ ಉರುಳಿ ಬಿದ್ದು, ಶಾಮಿಯಾನ ಹಾರಿ ಬಿದ್ದಿದೆ. ಇದನ್ನೂ ಓದಿ; ವರದಕ್ಷಿಣೆ ಕೇಳಿದ್ದಕ್ಕೆ ವರನನ್ನೇ ಮರಕ್ಕೆ ಕಟ್ಟಿ ಹಾಕಿದ ವಧುವಿನ ಕಡೆಯವ್ರು

    ಘಟನೆಯಲ್ಲಿ ಗಾಯಗೊಂಡವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಈ ಸಂಬಂಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ; ಮಾರಣಾಂತಿಕ ಹಲ್ಲೆಗೈದು ಲಾರಿಯಲ್ಲಿದ್ದ 13 ಟನ್ ಸ್ಟೀಲ್ ದೋಚಿ ಚಾಲಕನನ್ನು ರಸ್ತೆಗೆಸೆದ್ರು!