Tag: gangstar

  • ಮಹಾಕಾಲನೇ ಸಾವಿನಿಂದ ಆತನನ್ನು ರಕ್ಷಿಸಿದ್ದಾನೆ: ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ತಾಯಿ

    ಮಹಾಕಾಲನೇ ಸಾವಿನಿಂದ ಆತನನ್ನು ರಕ್ಷಿಸಿದ್ದಾನೆ: ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ತಾಯಿ

    ಲಕ್ನೋ: ಆ ಮಹಾಕಾಲನೇ ಆತನನ್ನು ಸಾವಿನಿಂದ ರಕ್ಷಿಸಿದ್ದಾನೆ ಎಂದು ಇಂದು ಬೆಳಗ್ಗೆ ಮಧ್ಯ ಪ್ರದೇಶದಲ್ಲಿ ಅರೆಸ್ಟ್ ಆದ ರೌಡಿ ಶೀಟರ್ ವಿಕಾಸ್ ದುಬೆ ತಾಯಿ ಸರ್ಲಾ ದೇವಿ ಅವರು ಹೇಳಿದ್ದಾರೆ.

    ಜುಲೈ 2ರ ಮಧ್ಯರಾತ್ರಿ ತನ್ನನ್ನು ಅರೆಸ್ಟ್ ಮಾಡಲು ಬಂದ ಪೊಲೀಸರನ್ನು ವಿಕಾಸ್ ದುಬೆ ಮತ್ತು ಅವನ ಸಹಚರರು ಗುಂಡಿದಾಳಿ ಮಾಡಿ ಅಮಾನುಷವಾಗಿ ಕೊಂದು ಹಾಕಿದ್ದರು. ಈ ಘಟನೆಯಲ್ಲಿ ಎಂಟು ಮಂದಿ ಅಮಾಯಾಕ ಪೊಲೀಸರು ಸಾವನ್ನಪ್ಪಿದ್ದರು. ಇದಾದ ಬಳಿಕ ಎಸ್ಕೇಪ್ ಆಗಿದ್ದ ವಿಕಾಸ್ ದುಬೆ ಇಂದು ಮಧ್ಯ ಪ್ರದೇಶದ ಉಜ್ಜೈನಿಯ ಮಹಾಕಾಲ ದೇವಸ್ಥಾನದಲ್ಲಿ ಸೆರೆಸಿಕ್ಕಿದ್ದಾನೆ.

    ಈಗ ಈ ವಿಚಾರದ ಬಗ್ಗೆ ಮಾತನಾಡಿರುವ ವಿಕಾಸ್ ದುಬೆ ತಾಯಿ ಸರ್ಲಾ ದೇವಿ, ನಾನು ಆತ ಅರೆಸ್ಟ್ ಆದ ಎಂದು ಟಿವಿಯಲ್ಲಿ ನೋಡಿ ತಿಳಿದುಕೊಂಡೆ. ಆ ಮಹಾಕಾಲನೇ ಸಾವಿನಿಂದ ಆತನನ್ನು ರಕ್ಷಿಸಿದ್ದಾನೆ. ಆತ ಪ್ರತಿ ವರ್ಷ ಮಹಾಕಾಲನ ದರ್ಶನಕ್ಕೆ ಹೋಗುತ್ತಿದ್ದ. ಜೊತೆಗೆ ಆತ ಬಿಜೆಪಿ ಪಕ್ಷದಲ್ಲಿ ಇರಲಿಲ್ಲ ಎಸ್‍ಪಿ ಪಕ್ಷದಲ್ಲಿದ್ದ. ಈಗ ಸೆರೆ ಸಿಕ್ಕಿರುವ ವಿಕಾಸ್ ದುಬೆ ಮೇಲೆ ಸರ್ಕಾರ ಕಾನೂನಿನ ಅಡಿಯಲ್ಲಿ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದು ಹೇಳಿದ್ದಾರೆ.

    ಈ ಹಿಂದೆ ಮಗನ ಕ್ರೂರ ಕೃತ್ಯದ ಬಗ್ಗೆ ಮಾತನಾಡಿದ್ದ ಸರ್ಲಾ ದೇವಿ, ಆತ ಅಮಾಯಾಕ ಪೊಲೀಸರನ್ನು ಕೊಲೆ ಮಾಡಿದ್ದು ತಪ್ಪು. ಆತನೇ ಬಂದು ಪೊಲೀಸರಿಗೆ ಶರಣಾಗಬೇಕು. ಇಲ್ಲವಾದಲ್ಲಿ ಪೊಲೀಸರು ಅವನನ್ನು ಎನ್‍ಕೌಂಟರ್ ಮಾಡಲಿ. ನಾನು ಆತನ ಜೊತೆ ಮಾತನಾಡಿ ನಾಲ್ಕು ತಿಂಗಳಾಯ್ತು. ನಮ್ಮ ಕುಟುಂಬವೇ ತಲೆ ತಗ್ಗಿಸುವಂತ ಕೆಲಸ ಮಾಡಿದ್ದಾನೆ. ಆತ ರಾಜಕೀಯಕ್ಕೆ ಬಂದ ನಂತರ ಈ ರೀತಿಯ ಕೆಟ್ಟ ಬುದ್ಧಿ ಕಲಿತುಕೊಂಡ ಎಂದು ಹೇಳಿದ್ದರು.

    ಪೊಲೀಸರನ್ನು ಕೊಂದು ತಲೆ ಮರೆಸಿಕೊಂಡಿದ್ದ ವಿಕಾಸ್ ದುಬೆಯನ್ನು ಒಂದು ವಾರದ ನಂತರ ಇಂದು ಬೆಳಗ್ಗೆ ಮಧ್ಯ ಪ್ರದೇಶದ ಉಜ್ಜೈನ್ ನಲ್ಲಿರುವ ಮಹಾಕಾಲ ದೇವಸ್ಥಾನದಲ್ಲಿ ಬಂಧಿಸಲಾಗಿದೆ. ದೇವಸ್ಥಾನದ ಭದ್ರತಾ ಸಿಬ್ಬಂದಿ ದುಬೆಯನ್ನು ಗುರುತಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದುಬೆ ದೇವಸ್ಥಾನದಿಂದ ಹೊರ ಬರೋಷ್ಟರಲ್ಲಿ ಬಂದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

  • ಪೊಲೀಸರನ್ನು ಕೊಂದ ನನ್ನ ಮಗನನ್ನು ಗುಂಡಿಕ್ಕಿ ಕೊಲ್ಲಿ- ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ತಾಯಿ

    ಪೊಲೀಸರನ್ನು ಕೊಂದ ನನ್ನ ಮಗನನ್ನು ಗುಂಡಿಕ್ಕಿ ಕೊಲ್ಲಿ- ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ತಾಯಿ

    – ಆತ ಪಾಪಿ, ಎಂಎಲ್‍ಎ ಆಗಲು ಸಚಿವರನ್ನೇ ಕೊಂದ
    – ರಾಜಕೀಯಕ್ಕೆ ಬಂದು ನನ್ನ ಮಗ ಕ್ರಿಮಿನಲ್ ಆದ

    ಲಕ್ನೋ: ಪೊಲೀಸರನ್ನು ಕೊಂದ ನನ್ನ ಮಗನನ್ನು ಗುಂಡಿಕ್ಕಿ ಕೊಲ್ಲಿ ಎಂದು ಉತ್ತರ ಪ್ರದೇಶದ ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ತಾಯಿ ಸರ್ಲಾ ದೇವಿ ಅವರು ಹೇಳಿದ್ದಾರೆ.

    ಕೊಲೆ ಪ್ರಕರಣದ ಆರೋಪಿಯಾಗಿದ್ದ ಹಳೇ ರೌಡಿ ಶೀಟರ್ ವಿಕಾಸ್ ದುಬೆಯನ್ನು ಅರೆಸ್ಟ್ ಮಾಡಲು ಹೋದ ಪೊಲೀಸರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಓರ್ವ ಡಿವೈಎಸ್ಪಿ, ಮೂವರು ಸಬ್ ಇನ್ಸ್ ಪೆಕ್ಟರ್ ಗಳು ಹಾಗೂ ನಾಲ್ಕು ಮಂದಿ ಕಾನ್ಸ್ ಸ್ಟೇಬಲ್‍ಗಳು ಸೇರಿದಂತೆ ಒಟ್ಟು ಎಂಟು ಜನ ಪೊಲೀಸರನ್ನು ಕಾನ್ಪುರದ ಡಿಕ್ರು ಗ್ರಾಮದಲ್ಲಿ ಗುರುವಾರ ರಾತ್ರಿ ಕ್ರಿಮಿನಲ್ ಗ್ಯಾಂಗ್ ಹತ್ಯೆ ಮಾಡಿತ್ತು.

    ಈ ಹತ್ಯೆಯ ನಂತರ ರೌಡಿ ಶಿಟ್ಟರ್ ವಿಕಾಸ್ ದುಬೆ ಹೆಸರು ಮುನ್ನೆಲೆಗೆ ಬಂದಿತ್ತು. ಈಗ ಮಗನ ಪೈಶಾಚಿಕ ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತಿ ಪಡಿಸಿರುವ ಆತನ ತಾಯಿ, ಆತ ಪೊಲೀಸರಿಗೆ ಶರಣಾಗಬೇಕು. ಅದನ್ನು ಬಿಟ್ಟು ಅವನು ಹೀಗೆ ಮೊಂಡುತನ ತೋರಿಸಿದರೆ. ಅವನನ್ನು ಪೊಲೀಸರು ಎನ್‍ಕೌಂಟರ್ ಮಾಡಬೇಕು. ಅವನು ಮಾಡಿದ್ದು ತಪ್ಪು, ಆತನನ್ನು ಹಿಡಿಯಲು ಆಗಲಿಲ್ಲ ಎಂದರೆ ಆತನನ್ನು ಗುಂಡಿಕ್ಕಿ ಕೊಂದುಬಿಡಿ ಎಂದು ಹೇಳಿದ್ದಾರೆ.

    ಕಾನ್ಪುರದಲ್ಲಿ ನಡೆದ ಕೃತ್ಯದಲ್ಲಿ ಡಿವೈಎಸ್ಪಿಯನ್ನು ಕೂಡ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ವಿಕಾಸ್ ದುಬೆಯೇ ಪ್ರಮುಖ ಆರೋಪಿಯಾಗಿದ್ದ. ಅಮಾಯಕ ಪೊಲೀಸರನ್ನು ಕೊಂದು ನನ್ನ ಮಗ ಬಹಳ ತಪ್ಪು ಮಾಡಿದ್ದಾನೆ. ಅವನು ಹೊರಗೆ ಬಂದು ಪೊಲೀಸರಿಗೆ ಶರಣಾಗಬೇಕು. ರಾಜಕೀಯದ ಸಂಪರ್ಕಕ್ಕೆ ಬಂದ ನಂತರ ನನ್ನ ಮಗ ಈ ರೀತಿ ಕ್ರಿಮಿನಲ್ ಆದ. ನನ್ನ ಕುಟುಂಬದ ಮರ್ಯಾದೆ ತೆಗೆದ. ಆತನಿಗೆ ಶಿಕ್ಷೆ ಆಗಲೇ ಬೇಕು ಎಂದು ಸರ್ಲಾ ದೇವಿ ಕಣ್ಣೀರು ಹಾಕಿದ್ದಾರೆ.

    ವಿಕಾಸ್ ಎಂಎಲ್‍ಎ ಚುನಾವಣೆಗೆ ನಿಂತು ಗೆಲ್ಲಬೇಕು ಎಂದುಕೊಂಡಿದ್ದ. ಅದಕ್ಕಾಗಿ ಆತ ಬಿಜೆಪಿ ಸಚಿವ ಸಂತೋಷ್ ಶುಕ್ಲಾ ಅವರನ್ನು ಕೊಲೆ ಕೂಡ ಮಾಡಿದ್ದ. ನಾನು ನನ್ನ ಹಿರಿಯ ಮಗನ ಜೊತೆ ಲಕ್ನೋದಲ್ಲಿ ವಾಸವಿದ್ದೇನೆ. ಕಳೆದ ನಾಲ್ಕು ತಿಂಗಳಿಂದ ವಿಕಾಸ್ ದುಬೆಯನ್ನು ಮಾತನಾಡಿಸಿಲ್ಲ. ಅವನಿಂದ ನಮಗೆ ಬಹಳ ಸಮಸ್ಯೆಯಾಗಿದೆ. ಆತನಿಂದ ಹುಟ್ಟಿದ ಊರು ಬಿಟ್ಟು ಬಂದು ಲಕ್ನೋದಲ್ಲಿ ಇದ್ದೇವೆ ಎಂದು ಸರ್ಲಾ ದೇವಿ ನೋವವನ್ನು ತೋಡಿಕೊಂಡಿದ್ದಾರೆ.

    2001ರಲ್ಲಿ ವಿಕಾಸ್ ದುಬೆ ಅಂದಿನ ಬಿಜೆಪಿ ಸರ್ಕಾರದ ಕ್ಯಾಬಿನೆಟ್ ಮಿನಿಸ್ಟರ್ ಆಗಿದ್ದ ಸಂತೋಷ್ ಶುಕ್ಲಾ ಅವರನ್ನು ಪೊಲೀಸ್ ಠಾಣೆಯಲ್ಲೇ ಗುಂಡಿಕ್ಕಿ ಕೊಲೆ ಮಾಡಿದ್ದ. ನಂತರ ಗ್ಯಾಂಗ್‍ಸ್ಟಾರ್ ಆಗಿ ಬೆಳೆದ ವಿಕಾಸ್ ದುಬೆ, ಹಲವಾರು ಕೊಲೆ ಮಾಡಿ ಜೈಲುವಾಸ ಅನುಭವಿಸಿದ್ದ. ನಂತರ ಜೈಲಿನಲ್ಲಿ ಇದ್ದುಕೊಂಡೇ ನಗರ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದಿದ್ದ. ಈತನ ಮೇಲೆ ಸುಮಾರು 60 ಕ್ರಿಮಿನಲ್ ಮೊಕದ್ದಮೆಗಳು ಇವೆ. ಇದನ್ನು ಓದಿ:ಪೊಲೀಸರನ್ನು ನರಹತ್ಯೆಗೈದ ಡೆಡ್ಲಿ ರೌಡಿ ಶೀಟರ್ ವಿಕಾಸ್ ದುಬೆ ಯಾರು?

    ಸದ್ಯ ವಿಕಾಸ್ ದುಬೆಗಾಗಿ ಇಡೀ ಉತ್ತರ ಪ್ರದೇಶದ ಪೊಲೀಸರು ಹುಡುಕುತ್ತಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಅವರು ಕೂಡ ಪೊಲೀಸರನ್ನು ಕೊಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇತ್ತ ವಿಕಾಸ್ ದುಬೆ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ ನೀಡುವುದಾಗಿ ಕಾನ್ಪುರದ ಪೊಲೀಸರು ಘೋಷಣೆ ಮಾಡಿದ್ದಾರೆ.

  • ವಸಿಷ್ಠ ಸಿಂಹ ಅಭಿನಯದ `ಗ್ಯಾಂಗ್‍ಸ್ಟರ್’ ಚಿತ್ರದ ಚಿತ್ರೀಕರಣ ಪೂರ್ಣ

    ವಸಿಷ್ಠ ಸಿಂಹ ಅಭಿನಯದ `ಗ್ಯಾಂಗ್‍ಸ್ಟರ್’ ಚಿತ್ರದ ಚಿತ್ರೀಕರಣ ಪೂರ್ಣ

    ಬೆಂಗಳೂರು: ಶ್ರೀಲಕ್ಷ್ಮೀನರಸಿಂಹ ಎಂಟರ್ ಪ್ರೈಸಸ್ ಲಾಂಛನದಲ್ಲಿ ಸಿ.ಎ ವರದರಾಜ್ ಅವರು ನಿರ್ಮಿಸುತ್ತಿರುವ, ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ `ಗ್ಯಾಂಗ್‍ಸ್ಟರ್` ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಯಲ್ಲಾಪುರ, ತೆಲಂಗಾಣದಲ್ಲಿ ಸುಮಾರು 70 ದಿನಗಳ ಚಿತ್ರೀಕರಣ ನಡೆದಿದೆ.

    ನಕ್ಸಲೈಟ್ ಬಗ್ಗೆಗಿನ ನೈಜ ಕಥಾ ಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಬಾಲಾಜಿ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

    ವರುಣ್ ಕುಮಾರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸುರೇಶ್ ಭಾರ್ಗವ್ ಛಾಯಾಗ್ರಹಣ, ಕಿಶೋರ್ ಸಂಕಲನ ಹಾಗೂ ನಂದು, ರಾಮು, ಬಾಲಾಜಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ವಸಿಷ್ಠಸಿಂಹ, ಯಜ್ಞಶೆಟ್ಟಿ, ಸಂಯುಕ್ತ ಹೊರನಾಡು, ಅರವಿಂದರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.