Tag: Gangwar

  • ಉಡುಪಿ ಹೈವೇಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ – ಗರುಡ ಗ್ಯಾಂಗ್‍ನ 6 ಪುಡಿ ರೌಡಿಗಳು ಅರೆಸ್ಟ್

    ಉಡುಪಿ ಹೈವೇಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ – ಗರುಡ ಗ್ಯಾಂಗ್‍ನ 6 ಪುಡಿ ರೌಡಿಗಳು ಅರೆಸ್ಟ್

    ಉಡುಪಿ: ಇಲ್ಲಿನ (Udupi) ರಾಷ್ಟ್ರೀಯ ಹೆದ್ದಾರಿ 169ಎನಲ್ಲಿ ಶಾರದಾ ಮಂಟಪ ಜಂಕ್ಷನ್ ಬಳಿ ಲಾಂಗ್ ಹಿಡಿದು ಅಟ್ಟಹಾಸ ಮೆರೆದಿದ್ದ ಗರುಡ ಗ್ಯಾಂಗ್‍ನ (Garuda Gang) 6 ಪುಡಿ ರೌಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೇ 25 ರಂದು ಮೂವರು ಆರೋಪಿಗಳನ್ನು ಪೊಲೀಸರು (Udupi Police) ಬಂಧಿಸಿದ್ದರು.

    ಬಂಧಿತರನ್ನು ಮಜೀದ್, ಅಲ್ಫಾಝ್, ಶರೀಫ್ ಎಂದು ಉಡುಪಿ ಎಸ್‍ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಮುಖ ಆರೋಪಿ ಕಾಪುವಿನ ಕೊಂಬಗುಡ್ಡೆಯ ಆಶಿಕ್ ತೋನ್ಸೆಯ ರಾಕೀಬ್, ಸಕ್ಲೈನ್ ಈಗಾಗಲೇ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಇಲ್ಲಿಯವರೆಗೂ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಗರುಡ ಗ್ಯಾಂಗ್ ನಡುವೆ ವಾರ್- ಕಾರು ಗುದ್ದಿಸಿ ಯುವಕನ ಬೀಳಿಸಿದ ಕಿರಾತಕ

    ರಾಜ್ಯಾದ್ಯಂತ ಪ್ರಕರಣ ಭಾರೀ ಸದ್ದು ಮಾಡಿತ್ತು. ಈ ಹಿನ್ನೆಲೆ ಆರೋಪಿಗಳ ಬಂಧನಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದರು. ಪ್ರಕರಣದಲ್ಲಿ ಭಾಗಿಯಾದ ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದು ಪೊಲಿಸರು ತಿಳಿಸಿದ್ದಾರೆ.

    ಏನಿದು ಪ್ರಕರಣ: ಉಡುಪಿ ನಗರದ ಶಾರದಾ ಮಂಟಪ ಜಂಕ್ಷನ್‍ನಲ್ಲಿ ಯುವಕರ ಗುಂಪಿನ ನಡುವೆ ಗ್ಯಾಂಗ್ ವಾರ್ ನಡೆದಿತ್ತು. ವ್ಯವಹಾರಕ್ಕೆ ಸಂಬಂಧಿಸಿದ ತಗಾದೆ ಮಾರಾಮಾರಿಯ ವರೆಗೆ ಬಂದಿತ್ತು. ರಾಷ್ಟ್ರೀಯ ಹೆದ್ದಾರಿ 169ಎ ಯಲ್ಲಿ ಸಾರ್ವಜನಿಕರು ಓಡಾಟ ಮಾಡುತ್ತಿದ್ದ ಸಂದರ್ಭದಲ್ಲೇ ತಲ್ವಾರ್ ಹಿಡಿದು ಯುವಕರು ಹೊಡೆದಾಟಕ್ಕೆ ಯತ್ನಿಸಿದ್ದರು. ಈ ವೇಳೆ ಓರ್ವನಿಗೆ ಕಾರು ಗುದ್ದಿಸಿದ್ದರು. ಅಪಾರ್ಟ್‍ಮೆಂಟ್‍ನಲ್ಲಿ ವ್ಯಕ್ತಿಯೊಬ್ಬ ಘಟನೆಯ ಸಂಪೂರ್ಣ ದೃಶ್ಯವನ್ನು ಸೆರೆಹಿಡಿದಿದ್ದ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ತೀವ್ರ ಚರ್ಚೆಯಾಗಿತ್ತು.

    ಈ ಸಂಬಂಧ ಎಸ್.ಪಿ ಡಾ. ಅರುಣ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು. ಈ ವೇಳೆ ಸಾರ್ವಜನಿಕ ಸ್ಥಳದಲ್ಲಿದ್ದ ದನಗಳ್ಳತನ, ಕಳ್ಳತನ, ರಾಬರಿ, ವಸೂಲಿ, ಹೊಡೆದಾಟ, ಅಮಲು ಪದಾರ್ಥ ಸಾಗಣೆ ಹೀಗೆ ಹಲವಾರು ಕಾನೂನುಬಾಹಿರ ಕೃತ್ಯಗಳಿಗೆ ಗರುಡ ಗ್ಯಾಂಗ್ ಕುಖ್ಯಾತಿ ಪಡೆದಿದೆ. ಈಗಾಗಲೇ ವಿವಿಧ ಠಾಣೆಗಳಲ್ಲಿ ಈ ಗ್ಯಾಂಗ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಇದನ್ನೂ ಓದಿ: ಉಡುಪಿಯಲ್ಲಿ ಗ್ಯಾಂಗ್‌ ವಾರ್‌ – ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಕಿಡಿ

  • ಉಡುಪಿಯಲ್ಲಿ ಗರುಡ ಗ್ಯಾಂಗ್ ನಡುವೆ ವಾರ್- ಕಾರು ಗುದ್ದಿಸಿ ಯುವಕನ ಬೀಳಿಸಿದ ಕಿರಾತಕ

    ಉಡುಪಿಯಲ್ಲಿ ಗರುಡ ಗ್ಯಾಂಗ್ ನಡುವೆ ವಾರ್- ಕಾರು ಗುದ್ದಿಸಿ ಯುವಕನ ಬೀಳಿಸಿದ ಕಿರಾತಕ

    – ಕಾನೂನು ಸುವ್ಯವಸ್ಥೆ ಬಗ್ಗೆ ಸಾರ್ವಜನಿಕರಿಂದ ಪ್ರಶ್ನೆ

    ಉಡುಪಿ: ಯುವಕನ ಮೇಲೆ ಕಾರು ಹತ್ತಿಸಿದ ಕಿರಾತಕ. ತಲ್ವಾರ್ ತೆಗೆದುಕೊಂಡು ಕಾರಿನ ಮೇಲೆ ಮನಬಂದಂತೆ ದಾಳಿ ಮಾಡಿದ ರೌಡಿ. ಯರ್ರಾಬಿರಿ ರಿವರ್ಸ್, ಕಾರು ನಜ್ಜುಗುಜ್ಜು. ಇದು ಉಡುಪಿಯ ಶಾರದಾ ಮಂಟಪ ಜಂಕ್ಷನ್‍ನಲ್ಲಿ ನಡೆದ ಮಾರಾಮಾರಿಯ ಹೈಲೈಟ್ಸ್.

    ಹೌದು. ಉಡುಪಿ (Udupi) ನಗರದ ಶಾರದಾ ಮಂಟಪ ಜಂಕ್ಷನ್ ನಲ್ಲಿ ಯುವಕರ ಗುಂಪಿನ ನಡುವೆ ಗ್ಯಾಂಗ್ ವಾರ್ ನಡೆದಿದೆ. ವ್ಯವಹಾರಕ್ಕೆ ಸಂಬಂಧಿಸಿದ ತಗಾದೆ ಮಾರಾಮಾರಿಯವರೆಗೆ ಬಂದಿದೆ. ರಾಷ್ಟ್ರೀಯ ಹೆದ್ದಾರಿ 169ಎ ಯಲ್ಲಿ ಸಾರ್ವಜನಿಕರು ಓಡಾಟ ಮಾಡುತ್ತಿದ್ದ ಸಂದರ್ಭದಲ್ಲೇ ತಲ್ವಾರ್ ತೆಗೆದು ಹೊಡೆದಾಟ ಮಾಡಲು ಯುವಕರು ಯತ್ನಿಸಿದ್ದಾರೆ. ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿಯೊಬ್ಬ ಘಟನೆಯ ಸಂಪೂರ್ಣ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ಕಾಪು ತಾಲೂಕು ಮೂಲದ ಗರುಡ ಗ್ಯಾಂಗ್‍ನ (Garuda Gang) ಯುವಕರು ಕಾರು ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದಾರೆ. ಕಾರನ್ನು ಕಾನೂನು ಬಾಹಿರ ಕೃತ್ಯಕ್ಕೆ ಬಳಸಿದ್ದರು ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ತಗಾದೆ ವಿಕೋಪಕ್ಕೆ ಹೋಗಿದೆ. ಘಟನೆ ನಡೆದ ಸಂದರ್ಭ ಸುತ್ತಮುತ್ತಲ ಕಟ್ಟಡಗಳಲ್ಲಿದ್ದ ಸಿಸಿ ಟಿವಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಇದನ್ನೂ ಓದಿ: ಪ್ರಬುದ್ಧಾ ಹತ್ಯೆಯನ್ನು ಆತ್ಮಹತ್ಯೆ ಅಂತಾ ಬಿಂಬಿಸಲು ಪ್ಲಾನ್- ಕುತ್ತಿಗೆ, ಕೈಯಲ್ಲಿದ್ದ ಕಲೆಗಳನ್ನೇ ಬಂಡವಾಳ ಮಾಡಿಕೊಂಡಿದ್ದ ಅಪ್ರಾಪ್ತ

    ಈ ಸಂಬಂಧ ಎಸ್.ಪಿ ಡಾ. ಅರುಣ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸಾರ್ವಜನಿಕ ಸ್ಥಳದಲ್ಲಿದ್ದ ದನಗಳ್ಳತನ, ಕಳ್ಳತನ, ರಾಬರಿ, ವಸೂಲಿ, ಹೊಡೆದಾಟ, ಅಮಲು ಪದಾರ್ಥ ಸಾಗಣೆ ಹೀಗೆ ಹಲವಾರು ಕಾನೂನುಬಾಹಿರ ಕೃತ್ಯಗಳಿಗೆ ಗರುಡ ಗ್ಯಾಂಗ್ ಕುಖ್ಯಾತಿ ಪಡೆದಿದೆ. ಈಗಾಗಲೇ ವಿವಿಧ ಪ್ರಾಣಿಗಳಲ್ಲಿ ಪ್ರಕರಣಗಳು ದಾಖಲಾಗಿದೆ. ಈ ಘಟನೆಯಲ್ಲಿ ಕಾಪು ಮೂಲದ ಆಶಿಕ್ ಮತ್ತು ಗುಜ್ಜರಬೆಟ್ಟು ಮೂಲದ ರಾಕೀಬ್ ಹಾಗೂ ಇನ್ನೋರ್ವನ ಬಂಧನವಾಗಿದೆ. ಏಳಕ್ಕೂ ಹೆಚ್ಚು ಜನರಿಗಾಗಿ ಪೊಲೀಸರು ಹುಡುಕಾಟ ಮಾಡುತ್ತಿದ್ದಾರೆ. ಘಟನೆಯ ಪ್ರಮುಖ ಆರೋಪಿ ಸಹಿತ ಎಲ್ಲರನ್ನು ಬಂಧಿಸುವುದಾಗಿ ಹೇಳಿದ್ದಾರೆ.

    ಎರಡು ಕಾರು, ಬೈಕ್, ತಲವಾರು ಮತ್ತು ಡ್ರ್ಯಾಗರ್ ವಶಕ್ಕೆ ಪಡೆಯಲಾಗಿದೆ. ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಮಾಡುವ ವ್ಯವಹಾರ ಏನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಕಾನೂನು ಸವ್ಯವಸ್ಥೆಯನ್ನ ಪೊಲೀಸರು ಕಟ್ಟುನಿಟ್ಟು ಮಾಡಬೇಕು ಸಾರ್ವಜನಿಕರ ನಿಶ್ಚಿತತೆಯಿಂದ ವಾತಾವರಣ ಸೃಷ್ಟಿ ಮಾಡಬೇಕು ಎಂಬುದಾಗಿ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

  • Gangwar: ಗುಂಡಿನ ದಾಳಿಗೆ ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ ಬಲಿ

    Gangwar: ಗುಂಡಿನ ದಾಳಿಗೆ ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ ಬಲಿ

    ಒಟ್ಟಾವ: ಮದುವೆ ಸಮಾರಂಭದಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಗೆ ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ (Punjab Origin Gangster) ಬಲಿಯಾಗಿರುವ ಘಟನೆ ಕೆನಡಾದ (Canada) ವ್ಯಾಂಕೋವರ್‌ ನಗರದಲ್ಲಿ ನಡೆದಿದೆ.

    ತಡರಾತ್ರಿ ಸುಮಾರು 1:30ರ ವೇಳೆಗೆ ಗುಂಡಿನ ದಾಳಿ (Shotout) ನಡೆದಿದ್ದು, 28 ವರ್ಷದ ಅಮರ್‌ ಪ್ರೀತ್‌ (ಚುಕ್ಕಿ) ಬಲಿಯಾಗಿದ್ದಾನೆ. ಗ್ಯಾಂಗ್‌ಸ್ಟರ್‌ಗಳಾಗಿದ್ದ ಅಮರ್‌ ಪ್ರೀತ್‌ ಸಹೋದರರಾದ ಸಮ್ರಾ ಮತ್ತು ರವೀಂದರ್‌ ಇಬ್ಬರೂ ಮದುವೆ ಅತಿಥಿಗಳಾಗಿ ಬಂದಿದ್ದರು. ಇದೇ ಸಮಾರಂಭಕ್ಕೆ ಕೆಲವು ಅಪರಿಚಿತ ವ್ಯಕ್ತಿಗಳೂ ಸೇರಿದಂತೆ 60 ಮಂದಿ ಹಾಜರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 5, 6 ವರ್ಷದ ಬಾಲಕಿಯರ ಮೇಲೆ ಸಂಬಂಧಿಕನಿಂದಲೇ ರೇಪ್‌ – ಆರೋಪಿ ಎಸ್ಕೇಪ್‌

    CRIME 2

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಉದ್ದೇಶಿತ ಗ್ಯಾಂಗ್‌ ವಾರ್‌ ಆಗಿದೆ. ಆರೋಪಿಗಳ ಬಗ್ಗೆ ಸುಳಿವು ಸಿಕ್ಕಲ್ಲಿ ಸಹಾಯವಾಣಿ ಮೊ.ಸಂ. 6047172500ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ- ಗಂಟಲಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ನರಳಾಡಿದ! 

    2022ರ ಆಗಸ್ಟ್‌ನಲ್ಲಿ ಕೆನಡಾ ಪೊಲೀಸರು ಗ್ಯಾಂಗ್‌ಸ್ಟರ್‌ಗಳೊಂದಿಗೆ ಸಂಪರ್ಕದಲ್ಲಿದ್ದ 11 ವ್ಯಕ್ತಿಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದರು. ಅವರಲ್ಲಿ ಅಮರ್‌ ಪ್ರೀತ್‌ ಮತ್ತು ಸಹೋದರ ರವೀಂದರ್‌ ಸೇರಿ 9 ಮಂದಿ ಪಂಜಾಬ್‌ ಮೂಲದವರು ಎಂದು ತಿಳಿಸಿದ್ದರು.

  • ಮೈಸೂರಿನಲ್ಲಿ ಮತ್ತೆ ಗ್ಯಾಂಗ್ ವಾರ್ – ಅವ್ವ ಮಾದೇಶ್ ಆಪ್ತನ ಬರ್ಬರ ಹತ್ಯೆ

    ಮೈಸೂರಿನಲ್ಲಿ ಮತ್ತೆ ಗ್ಯಾಂಗ್ ವಾರ್ – ಅವ್ವ ಮಾದೇಶ್ ಆಪ್ತನ ಬರ್ಬರ ಹತ್ಯೆ

    ಮೈಸೂರು: ನಗರದಲ್ಲಿ ಮತ್ತೆ ಗ್ಯಾಂಗ್‌ವಾರ್ (Gangwar) ಶುರುವಾಗಿದ್ದು, ರೌಡಿ ಶೀಟರ್ ಒಬ್ಬನ ಬರ್ಬರ ಹತ್ಯೆ ನಡೆದಿದೆ.

    ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು ಬರ್ಬರವಾಗಿ ಕೊಲೆಯಾಗಿದ್ದಾನೆ. ಈತ ಮಾಜಿ ನಗರ ಪಾಲಿಕೆ ಸದಸ್ಯ ಅವ್ವ ಮಾದೇಶ್ (Avva Madesh) ಆಪ್ತ ಎಂದು ತಿಳಿಬಂದಿದೆ. ಇದನ್ನೂ ಓದಿ: ಗರ್ಲ್‍ಫ್ರೆಂಡ್ ರೇಪ್ ಮಾಡಿ ಖಾಸಗಿ ಅಂಗಕ್ಕೆ ಚಿಲ್ಲಿ ಪೌಡರ್ ಹಾಕಿದ ವಿವಾಹಿತ!

    ಮಚ್ಚು ಲಾಂಗ್ ಹಿಡಿದುಕೊಂಡು ದ್ವಿಚಕ್ರ ವಾಹನದಲ್ಲಿ ಬಂದ 6 ಜನ ದುಷ್ಕರ್ಮಿಗಳು ಚಂದುನನ್ನ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಆ ನಿರ್ದೇಶಕ ಸಾಮರ್ಥ್ಯ ಪರೀಕ್ಷಿಸಿಕೊಳ್ಳಲು ತನ್ನೊಂದಿಗೆ ಮಲಗುವಂತೆ ಕೇಳಿದ್ದ – ಕರಾಳ ನೆನಪು ಬಿಚ್ಚಿಟ್ಟ ಫ್ರೆಂಚ್‌ ನಟಿ

    ಹುಣಸೂರಿನಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಂದು, ಕೆಲ ದಿನಗಳ ಹಿಂದೆಯಷ್ಟೇ ಕೇಸ್ ಖುಲಾಸೆಯಾಗಿ ಜೈಲಿನಿಂದ ಬಿಡುಗಡೆಯಾಗಿದ್ದ.

    ಇದೀಗ ಚಂದು ಕೊಲೆಯಾಗಿದ್ದು, ಪಡುವಾರಳ್ಳಿಯ ದೇವು ಕೊಲೆಗೆ ಪ್ರತೀಕಾರ ತೀರಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಒಂಟಿಕೊಪ್ಪಲಿನಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

  • ದಾವಣಗೆರೆಯಲ್ಲಿ ಮತ್ತೆ ಗ್ಯಾಂಗ್‍ವಾರ್- ರೌಡಿ ಬುಳ್ಳನಾಗನ ಮೇಲೆ ಸುಪಾರಿ ಅಟ್ಯಾಕ್

    ದಾವಣಗೆರೆಯಲ್ಲಿ ಮತ್ತೆ ಗ್ಯಾಂಗ್‍ವಾರ್- ರೌಡಿ ಬುಳ್ಳನಾಗನ ಮೇಲೆ ಸುಪಾರಿ ಅಟ್ಯಾಕ್

    ದಾವಣಗೆರೆ: ಜಿಲ್ಲೆಯಲ್ಲಿ ಮತ್ತೆ ಗ್ಯಾಂಗ್ ವಾರ್ ಶುರುವಾಗಿದೆ. ನಾಗರಾಜ್ ಅಲಿಯಾಸ್ ಬುಳ್ಳನಾಗ ಮತ್ತು ಸಹಚರರ ಮೇಲೆ ರಾತ್ರೋರಾತ್ರಿ ದಾಳಿ ನಡೆದಿದ್ದು, ಮತ್ತೊಮ್ಮೆ ಬೆಣ್ಣೆನಗರಿ ಜನ ಬೆಚ್ಚಿ ಬೀಳುವಂತಾಗಿದೆ.

    ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಮಾರಪಟ್ಟಣಂ ಸಮೀಪದ ಸೇತುವೆ ಬಳಿ 15ಕ್ಕೂ ಹೆಚ್ಚು ಸುಪಾರಿ ಕಿಲ್ಲರ್ಸ್ ರೌಡಿ ಶೀಟರ್ ಬುಳ್ಳನಾಗನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬುಳ್ಳನಾಗ ಮತ್ತು ಸಹಚರರು ಕುಮಾರಪಟ್ಟಣಂ ಮಾರ್ಗವಾಗಿ ದಾವಣಗೆರೆಗೆ ಬರುವಾಗ ಇನ್ನೋವಾ ಕಾರು ಅಡ್ಡಗಟ್ಟಿ ಒಮ್ಮೆಲೆ ಅಟ್ಯಾಕ್ ಮಾಡಿದ್ದಾರೆ.

    ಈ ವೇಳೆ ಬುಳ್ಳನಾಗ ಮತ್ತು ಇಬ್ಬರು ಸಹಚರರಿಗೆ ಗಂಭೀರ ಗಾಯಗಳಾಗಿವೆ. ಇನ್ನೋವಾ ಕಾರಿನ ಗಾಜುಗಳು ಜಖಂ ಆಗಿವೆ. ಅಟ್ಯಾಕ್ ಆಗುತ್ತಿದ್ದಂತೆ ಬುಳ್ಳನಾಗನ ಕಾರು ಚಾಲಕ ಕಾರು ಜೋರಾಗಿ ಚಲಾಯಿಸಿಕೊಂಡು ಬಂದು ಪರಾರಿಯಾಗಿದ್ದಾರೆ. ಈ ಹಿಂದೆ ಬುಳ್ಳನಾಗನನ್ನ ಕೊಲೆ ಮಾಡೋದಕ್ಕೆ ಸಂತೋಷ್ ಅಲಿಯಾಸ್ ಕಣುಮ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ರೌಡಿಗಳಿಗೆ ಸುಪಾರಿ ಕೊಟ್ಟಿದ್ದ.

    ಎರಡು ತಿಂಗಳ ಹಿಂದೆ ದಾವಣಗೆರೆ ಪೊಲೀಸರು 7 ಮಂದಿ ಸುಪಾರಿ ಕಿಲ್ಲರ್ಸ್ ಗಳನ್ನ ಬಂಧಿಸಿದ್ದರು. ಈಗಲೂ ಕೂಡ ಸಂತೋಷ್ ಅಲಿಯಾಸ್ ಕಣುಮ, ಶ್ರೀನಿವಾಸ್ ಅಲಿಯಾಸ್ ಮೋಟ್ ಬಳ್ ಸೀನ, ಗೋವಿಂದ ಎಂಬವರು ಅಟ್ಯಾಕ್ ಮಾಡಿಸಿದ್ದಾರೆ ಎಂದು ಹಲ್ಲೆಗೆ ಒಳಗಾದ ಬುಳ್ಳನಾಗ ಆರೋಪಿಸಿದ್ದಾನೆ.

  • ಮಸೀದಿ ವಿಚಾರದಲ್ಲಿ 2 ತಂಡಗಳ ನಡುವೆ ಗ್ಯಾಂಗ್ ವಾರ್- ಮೂವರಿಗೆ ಗಂಭೀರ ಗಾಯ

    ಮಸೀದಿ ವಿಚಾರದಲ್ಲಿ 2 ತಂಡಗಳ ನಡುವೆ ಗ್ಯಾಂಗ್ ವಾರ್- ಮೂವರಿಗೆ ಗಂಭೀರ ಗಾಯ

    ಮಂಗಳೂರು: ಮಸೀದಿ ವಿಚಾರದಲ್ಲಿ ಎರಡು ತಂಡಗಳ ನಡುವಿನ ಮನಸ್ತಾಪ ತಾರಕಕ್ಕೇರಿ ಗ್ಯಾಂಗ್ ವಾರ್ ನಡೆದ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ.

    8 ಮಂದಿಯ ತಂಡ ಲಾಂಗು ಮಚ್ಚುಗಳನ್ನು ಹಿಡಿದು 3 ಜನರ ಮೇಲೆ ದಾಳಿ ನಡೆಸಿ ಮನಸೋ ಇಚ್ಛೆ ಹಲ್ಲೆ ನಡೆಸಿದೆ. ಘಟನೆಯಲ್ಲಿ ಎದುರಾಳಿ ತಂಡದ ಮೂವರಿಗೂ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನ ತಸ್ಲೀಂ, ಹ್ಯಾರಿಸ್, ಶಿಹಾಬ್ ಎಂದು ಗುರುತಿಸಲಾಗಿದೆ ಹಾಗೂ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಗೇರುಕಟ್ಟೆ ಬಸ್ ಸ್ಟಾಂಡ್ ಬಳಿ ಸಾರ್ವಜನಿಕರ ಎದುರೇ ಗ್ಯಾಂಗ್ ವಾರ್ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗಳಾದ ಯಾಕೂಬ್, ಉಮರಬ್ಬ, ರವೂಫ್, ಇರ್ಫಾನ್, ರಿಝ್ವಾನ್, ಅಬೂಬಕರ್, ಆದಂ ಶಾಫಿ, ಹೈದರ್ ಮನಬಂದಂತೆ ತಲ್ವಾರ್ ದಾಳಿ ನಡೆಸಿ ಪರಾರಿಯಾಗಿದ್ದಾರೆ.

    ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.