Tag: Ganpati festival

  • ಮುಂಬೈನ ಗಣಪತಿಗೆ 316.40 ಕೋಟಿ ರೂ. ವಿಮೆ

    ಮುಂಬೈನ ಗಣಪತಿಗೆ 316.40 ಕೋಟಿ ರೂ. ವಿಮೆ

    ಮುಂಬೈ: ದೇಶಾದ್ಯಂತ ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಹಬ್ಬದ ಸಿದ್ಧತೆ ಆರಂಭವಾಗಿದೆ. ಮುಂಬೈನ ಅತಿ ಶ್ರೀಮಂತ ಗಣಪತಿ ಮಂಡಲ ಎಂಬ ಹಿರಿಮೆ ಹೊಂದಿರುವ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‍ಬಿ) ಸೇವಾ ಮಂಡಲದ ಗಣೇಶನಿಗೆ ಈ ವರ್ಷ ದಾಖಲೆಯ 316.40 ಕೋಟಿ ರೂ. ವಿಮೆ ಮಾಡಿರುವುದು ವಿಶೇಷವಾಗಿದೆ.

    ಜೆಎಸ್‍ಬಿ ಮಂಡಲ್ ಗಣೇಶನಿಗೆ ತೊಡಿಸುವ 66 ಕೆಜಿ ಚಿನ್ನಾಭರಣ, 295 ಕೆಜಿ ಬೆಳ್ಳಿ, ಹಾಗೂ ಇನ್ನಿತರ ಬೆಲೆಬಾಳುವ ಆಭರಣಗಳಿಗೆ ನ್ಯೂ ಇಂಡಿಯಾ ಅಶ್ಯುರೆನ್‍ನಿಂದ 31.97 ಕೋಟಿ ರೂ. ಮೊತ್ತದ ಇನ್ಶೂರೆನ್ಸ್ ಮಾಡಿಸಲಾಗಿದೆ. ಭದ್ರತಾ ಸಿಬ್ಬಂದಿ, ಅರ್ಚಕರು, ಅಡುಗೆ ಮಾಡುವವರು, ಸ್ವಯಂ ಸೇವಕರಿಗಾಗಿ ಒಟ್ಟು 263 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್‌ ಕ್ರಾಂತಿ ನಡೆಗೆ ಜೆಡಿಎಸ್‌ನಿಂದ ಶಾಂತಿ ಆಸ್ತ್ರ!

    ಗಣೇಶೋತ್ಸವ ವೇಳೆ ಅನಾಹುತಗಳಾದಲ್ಲಿ ಪರಿಹಾರವಾಗಿ 1 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಜೊತೆಗೆ ಸಾರ್ವಜನಿಕ ಹೊಣೆಗಾರಿಕೆ ಅಡಿಯಲ್ಲಿ ಭಕ್ತರು, ಗಣಪತಿ ಕೂರಿಸುವ ಪೆಂಡಾಲ್, ಕ್ರೀಡಾಂಗಣ ಸೇರಿ ಇನ್ನಿತರ ಎಂದು 20 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಇದನ್ನೂ ಓದಿ: ಬಂಧನವಾದ ಕೆಲವೇ ಗಂಟೆಗಳಲ್ಲಿ ತೆಲಂಗಾಣ ಬಿಜೆಪಿ ಶಾಸಕನಿಗೆ ಜಾಮೀನು ಮಂಜೂರು

    ಕಳೆದ ಎರಡು ವರ್ಷಗಳ ಹಿಂದೆ ಈ ವಿಮೆ ಮೊತ್ತ 289 ಕೋಟಿ ರೂ. ಆಗಿತ್ತು. ಇದೀಗ 27 ಕೋಟಿ ರೂ. ಏರಿಕೆ ಕಂಡು 316.40 ಕೋಟಿ ರೂ.ಗೆ ತಲುಪಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಮುಂಬೈನಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ಮಾಡಿರಲಿಲ್ಲ. ಈ ವರ್ಷ ಮತ್ತೆ ಅದ್ಧೂರಿ ಗಣೇಶೋತ್ಸವಕ್ಕೆ ಜಿಎಸ್‍ಬಿ ಸಮಿತಿ ಮುಂದಾಗಿದ್ದು, ಈ ವರ್ಷ ಪೂಜೆ, ಪ್ರಸಾದ ಸೇರಿದಂತೆ ಇತರ ವ್ಯವಸ್ಥೆಗಳಿಗೆ ಕ್ಯೂ ಆರ್ ಕೋಡ್ ಸ್ಕ್ಯಾನ್‌ ಮೂಲಕ ಡಿಜಿಟಲ್ ವ್ಯವಸ್ಥೆಗೆ ಒತ್ತು ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ಶಿವಮೊಗ್ಗದಲ್ಲಿ ಬೆಳಗ್ಗೆ ಗಣಪತಿ ಪ್ರತಿಷ್ಠಾಪನೆ, ಸಂಜೆ ವಿಸರ್ಜನೆ – ಜಿಲ್ಲಾಡಳಿತ ಆದೇಶ

    ಶಿವಮೊಗ್ಗದಲ್ಲಿ ಬೆಳಗ್ಗೆ ಗಣಪತಿ ಪ್ರತಿಷ್ಠಾಪನೆ, ಸಂಜೆ ವಿಸರ್ಜನೆ – ಜಿಲ್ಲಾಡಳಿತ ಆದೇಶ

    ಶಿವಮೊಗ್ಗ: ಕೊರೊನಾ ಹಿನ್ನೆಲೆ ಜಿಲ್ಲೆಯಲ್ಲಿ ಈ ಬಾರಿಯ ಗಣಪತಿ ಉತ್ಸವವನ್ನು ರಾಜ್ಯ ಸರ್ಕಾರದ ಆದೇಶದ ಅನ್ವಯ ಆಚರಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಗಣೇಶೋತ್ಸವವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಈಗಾಗಿ ನಾಗರಿಕರು ಮುಂಜಾನೆ ಗಣಪತಿ ಪ್ರತಿಷ್ಠಾಪಿಸಿ ಸಂಜೆ ವಿಸರ್ಜನೆ ಮಾಡುವ ಮೂಲಕ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಮನವಿ ಮಾಡಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊರೊನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗಣೇಶೋತ್ಸವವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಗಣಪತಿ ಹಬ್ಬ ಕೇವಲ ಈ ವರ್ಷಕ್ಕೆ ಅಷ್ಟೇ ಸೀಮಿತವಾಗಿಲ್ಲ. ಮುಂದಿನ ಬಾರಿಯೂ ಗಣೇಶ ಹಬ್ಬ ಬರುತ್ತದೆ. ಈಗಾಗಿ ಜೀವ ಉಳಿದರೆ ಮುಂದಿನ ಬಾರಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಬಹುದು ಎಂದರು.

    ಜಿಲ್ಲೆಯಲ್ಲಿ ಎಲ್ಲಿ ಬೇಕಾದರೂ ಗಣಪತಿ ಪ್ರತಿಷ್ಠಾಪನೆ ಮಾಡಿ. ಆದರೆ ಗಣಪತಿ ತರುವ ವೇಳೆಯಲ್ಲಿ ಆಗಲಿ, ವಿಸರ್ಜನೆ ಮಾಡುವ ಸಂದರ್ಭದಲ್ಲಿ ಆಗಲಿ ಮೆರವಣಿಗೆ ಮಾಡುವಂತಿಲ್ಲ. ಮನೆಯಲ್ಲಿ ಕೂರಿಸುವ ಗಣಪತಿ ಮೂರ್ತಿ 2 ಅಡಿ ಮೀರಬಾರದು. ಜೊತೆಗೆ 4 ಜನಕ್ಕಿಂತ ಹೆಚ್ಚಿನ ಮಂದಿ ಭಾಗವಹಿಸಬಾರದು. ಅದೇ ರೀತಿ ಸಾರ್ವಜನಿಕವಾಗಿ ಕೂರಿಸುವ ಗಣಪತಿ 4 ಅಡಿಗಿಂತ ಮೀರಿರಬಾರದು ಹಾಗೂ ಗಣಪತಿ ತರಲು 20ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ. ಅಲ್ಲದೇ ಮುಂಜಾನೆ ಗಣಪತಿ ಪ್ರತಿಷ್ಠಾಪಿಸಿದರೆ ಸಂಜೆ ಕತ್ತಲು ಕಳೆಯುವುದರೊಳಗೆ ಗಣಪತಿ ವಿಜರ್ಜನೆ ಮಾಡಬೇಕು ಎಂದು ಸಚಿವರು ತಿಳಿಸಿದ್ದಾರೆ.

    ರಾಜ್ಯ ಸರ್ಕಾರದ ತೀರ್ಮಾನದಂತೆ ಜಿಲ್ಲಾಡಳಿತ ತೆಗೆದುಕೊಂಡಿರುವ ತೀರ್ಮಾನಕ್ಕೆ ಎಲ್ಲಾ ಗಣಪತಿ ಸಂಘಟನೆಗಳು ಬದ್ಧರಾಗಿರಬೇಕು. ಗಣಪತಿ ಪ್ರತಿಷ್ಠಾಪಿಸಬೇಡಿ ಎಂದು ಜಿಲ್ಲಾಡಳಿತ ಹೇಳುತ್ತಿಲ್ಲ. ಯಾವುದೇ ಸಂಘಟನೆಯವರಾಗಲಿ ಕೂಡ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಪ್ರತಿಷ್ಠೆಯಾಗಿ ತೆಗೆದುಕೊಂಡರೆ ನಮ್ಮ ಜೀವಕ್ಕೆ ಆಪತ್ತು ಉಂಟಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

  • ಗಣಪತಿ ವಿಸರ್ಜನೆ ವೇಳೆ ಪೊಲೀಸರ 27 ಮೊಬೈಲ್ ಕದ್ದ ಕಳ್ಳರು

    ಗಣಪತಿ ವಿಸರ್ಜನೆ ವೇಳೆ ಪೊಲೀಸರ 27 ಮೊಬೈಲ್ ಕದ್ದ ಕಳ್ಳರು

    ಶಿವಮೊಗ್ಗ: ಹಿಂದೂ ಮಹಾಸಭಾದ ಗಣಪತಿ ವಿಸರ್ಜನೆಯ ಬಂದೋಬಸ್ತ್ ಗೆ ಹೊರ ಜಿಲ್ಲೆಯಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಪೊಲೀಸ್ ಸಿಬ್ಬಂದಿಯವರಿಗೆ ನಗರದ ಆರ್ ಎಂ ಎಲ್ ಕಲ್ಯಾಣ ಮಂದಿರದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವೇಳೆ ಕಳ್ಳರು ಅವರ ಮೊಬೈಲ್ ಕದ್ದಿದ್ದಾರೆ.

    ಪೊಲೀಸರು ಮಲಗಿದ್ದ ವೇಳೆ ಬೆಳಗಿನ ಜಾವ 3 ರಿಂದ 4 ಗಂಟೆ ಸಮಯದಲ್ಲಿ 27 ಮೊಬೈಲ್ ಹಾಗೂ 25 ಸಾವಿರ ನಗದನ್ನು ಕಳ್ಳರು ಅಪಹರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ತಮ್ಮ ಮೊಬೈಲ್‍ಗಳನ್ನು ಕಳೆದುಕೊಂಡ ಪೊಲೀಸರೇ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೊಬೈಲ್ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

    ಮೊಬೈಲ್ ಕಳ್ಳರ ಜಾಲವೇ ಈ ಕಳ್ಳತನದ ಹಿಂದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಚಾಣಾಕ್ಷ ಕಳ್ಳರು ಬೆಲೆಬಾಳುವ ಸ್ಮಾರ್ಟ್ ಫೋನ್‍ಗಳನ್ನು ಮಾತ್ರ ಕಳವು ಮಾಡಿದ್ದು ಬೇಸಿಕ್ ಸೆಟ್‍ಗಳನ್ನು ಮುಟ್ಟುವ ಗೋಜಿಗೆ ಹೋಗಿಲ್ಲ. ಅಲ್ಲದೇ ಪೊಲೀಸರ ಮೊಬೈಲ್‍ಗಳೇ ಕಳುವಾಗಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

  • ಪರಿಸರ ಜಾಗೃತಿ ಮೂಡಿಸಲು ಉದ್ಭವಿಸಿದ ಪ್ಲಾಸ್ಟಿಕ್ ಬಾಟಲ್ ವಿಘ್ನೇಶ್ವರ

    ಪರಿಸರ ಜಾಗೃತಿ ಮೂಡಿಸಲು ಉದ್ಭವಿಸಿದ ಪ್ಲಾಸ್ಟಿಕ್ ಬಾಟಲ್ ವಿಘ್ನೇಶ್ವರ

    ಭುವನೇಶ್ವರ: ಪರಿಸರ ಜಾಗೃತಿ ಮೂಡಿಸಲು ಹಲವಾರು ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತದೆ. ಆದರೂ ಕೂಡ ಪರಿಸರ ಉಳಿಸಬೇಕಾದ ನಾವು ಪ್ಲಾಸ್ಟಿಕ್, ಕೆಮಿಕಲ್ ಇನ್ನಿತರ ವಸ್ತುಗಳ ಬಳಕೆ, ವಾಯು ಮಾಲಿನ್ಯ, ಜಲ ಮಾಲಿನ್ಯ ಮಾಡಿ ನಿಸರ್ಗದ ಉಸಿರು ಗಟ್ಟಿಸುತ್ತಿದ್ದೇವೆ. ಆದ್ದರಿಂದ ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಪ್ಲಾಸ್ಟಿಕ್‍ನಿಂದ ಹಾಗೂ ಮರಳಿನಲ್ಲಿ ಗಣಪತಿಯನ್ನು ತಯಾರಿಸಿ ಕಲಾವಿದರೊಬ್ಬರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.

    ಒಡಿಶಾ ಮೂಲದ ಅಂತರಾಷ್ಟ್ರೀಯ ಮಟ್ಟದಲ್ಲಿ ಮರಳು ಕಲಾಕೃತಿ ಮಾಡುವಲ್ಲಿ ಹೆಸರು ಗಳಿಸಿರುವ ಸುದರ್ಶನ್ ಪಟ್ನಾಯಕ್ ಅವರು ಈ ವಿಶೇಷ ಗಣಪನ ಕಲಾಕೃತಿ ಮಾಡಿದ್ದಾರೆ. ಪುರಿ ಬೀಚ್‍ನಲ್ಲಿ ಈ ಅದ್ಭುತ ಗಣಪನ ಕಲಾಕೃತಿಯನ್ನು ಮಾಡಲಾಗಿದೆ. ಬೀಚ್ ಮರಳಿನಲ್ಲಿ ಸಿಕ್ಕ ಸುಮಾರು 1 ಸಾವಿರ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಿ ಗಣಪನ ಕಲಾಕೃತಿಯನ್ನು ವಿಶೇಷವಾಗಿ ತಯಾರಿಸಿದ್ದಾರೆ. ಅಲ್ಲದೆ ಅದರ ಮುಂದೆ ಒಮ್ಮೆ ಮಾತ್ರ ಬಳಕೆಗೆ ಬರುವ ಪ್ಲಾಸ್ಟಿಕ್ ಉಪಯೋಗಿಸಬೇಡಿ, ಪರಿಸರವನ್ನು ಉಳಿಸಿ ಎಂದು ಬರೆದು ಒಂದೊಳ್ಳೆ ಸಂದೇಶವನ್ನು ಸಾರಿದ್ದಾರೆ.

    ಪ್ರಧಾನಿ ಮೋದಿ ಅವರ ಏಕ-ಬಳಕೆ ಪ್ಲಾಸ್ಟಿಕ್ ತ್ಯಜಿಸಿ ಅಭಿಯಾನದಿಂದ ಪ್ರೇರಿತರಾಗಿ ಈ ಕಲಾಕೃತಿ ತಯಾರಿಸಿದ್ದೇನೆ ಎಂದು ಪಟ್ನಾಯಕ್ ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೋದಿ ಅವರು ರೆಡಿಯೋದಲ್ಲಿ ಪ್ರಸಾರವಾಗುವ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಈ ಅಭಿಯಾದ ಬಗ್ಗೆ ಹೇಳಿದ್ದರು. ಇದನ್ನು ಆಲಿಸಿದ್ದ ಪಟ್ನಾಯಕ್ ಅವರು ಒಂದು ವಿಶೇಷ ಪ್ರಯತ್ನದ ಮೂಲಕ ಸಾರ್ವಜನಿಕರಲ್ಲಿ ಪರಿಸರ ಉಳಿಸಿ ಎಂದು ವಿನಂತಿ ಮಾಡಿದ್ದಾರೆ.

    ಬರೋಬ್ಬರಿ 5 ಟನ್ ಮರಳನ್ನು ಬಳಸಿ ಪಟ್ನಾಯಕ್ ಅವರು 10 ಅಡಿ ಎತ್ತರದ ಗಣೇಶನ ಕಲಾಕೃತಿಯನ್ನು ಮಾಡಿದ್ದಾರೆ. ಅದರ ಸುತ್ತ ಸುಮಾರು 1 ಸಾವಿರ ಪ್ಲಾಸ್ಟಿಕ್ ಬಾಟೆಲ್‍ಗಳನ್ನು ಇರಿಸಿ ಏಕ-ಬಳಕೆ ಪ್ಲಾಸ್ಟಿಕ್ ಬಳಸಬೇಡಿ, ಪರಿಸರ ಉಳಿಸಿ ಎಂದು ಸಂದೇಶವನ್ನು ಕೂಡ ಕಲಾಕೃತಿಯ ಎದುರು ಬರೆದಿದ್ದಾರೆ. ಅದ್ಭುತ ಕಲಾಕೃತಿ ಜೊತೆಗೆ ಪರಿಸರ ಜಾಗೃತಿ ಮೂಡಿಸಿ ಪಟ್ನಾಯಕ್ ಅವರು ಜನರ ಮನ ಗೆದ್ದಿದ್ದಾರೆ.