Tag: gas cylinders

  • ಹಳಿ ಮಧ್ಯೆ ಅಗ್ನಿಶಾಮಕ ಸಿಲಿಂಡರ್‌ ಪತ್ತೆ – ರೈಲು ದುಷ್ಕೃತ್ಯಕ್ಕೆ ಸಂಚು; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

    ಹಳಿ ಮಧ್ಯೆ ಅಗ್ನಿಶಾಮಕ ಸಿಲಿಂಡರ್‌ ಪತ್ತೆ – ರೈಲು ದುಷ್ಕೃತ್ಯಕ್ಕೆ ಸಂಚು; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಕಾನ್ಪುರದಲ್ಲಿ ಹಳಿ ಮೇಲೆ ವಸ್ತುಗಳನ್ನು ಇರಿಸಿ ರೈಲು ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

    ಉತ್ತರ ಪ್ರದೇಶದ ಕಾನ್ಪುರದಲ್ಲಿ (Kanpur) ರೈಲ್ವೆ ಹಳಿಯಲ್ಲಿ (Train Driver Brakes) ಅನುಮಾನಾಸ್ಪದ ವಸ್ತು ಪತ್ತೆಯಾಗಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಪುಷ್ಪಕ್ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್ ಟ್ರ್ಯಾಕ್‌ನಲ್ಲಿ ಕೆಂಪು ಸಿಲಿಂಡರ್ ಬಿದ್ದಿರುವುದನ್ನು ಗಮನಿಸಿ ಸಮಯಕ್ಕೆ ಸರಿಯಾಗಿ ಬ್ರೇಕ್ ಹಾಕಿ ಸಾವಿರಾರು ಜನರ ಪ್ರಾಣ ಉಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಾಷಣ ಮಾಡುತ್ತಲೇ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ – ಮೋದಿಯನ್ನ ಅಧಿಕಾರದಿಂದ ಕೆಳಗಿಳಿಸುವವರೆಗೆ ಸಾಯಲ್ಲ ಎಂದ ʻಕೈʼನಾಯಕ

    ಇದೇ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ರೈಲ್ವೇ ಹಳಿಗಳ ಮೇಲೆ ಗ್ಯಾಸ್ ಸಿಲಿಂಡರ್‌ ಮತ್ತು ಸಿಮೆಂಟ್ ಬ್ರಿಕ್ಸ್‌ಗಳನ್ನಿರಿಸಿ ರೈಲು ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಘಟನೆ ಬೆಳಿಕಿಗೆ ಬಂದಿತ್ತು. ಇದಾದ 20 ದಿನಗಳ ಬಳಿಕ ಅಂತಹದ್ದೇ ಮತ್ತೊಂಧು ಘಟನೆ ನಡೆದಿದೆ. ಇದನ್ನೂ ಓದಿ: ತೆಲಂಗಾಣ| 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಸಂತ್ರಸ್ತೆ ಕುಟುಂಬಸ್ಥರಿಂದ ಆರೋಪಿ ಮನೆ, ಕಾರಿಗೆ ಬೆಂಕಿ

    ಮುಂಬೈನಿಂದ ಲಕ್ನೋಗೆ ಹೋಗುತ್ತಿದ್ದ ರೈಲು ಗೋವಿಂದಪುರಿ ನಿಲ್ದಾಣದ ಬಳಿ ಹೋಲ್ಡಿಂಗ್ ಲೈನ್‌ಗೆ ತಲುಪಿತ್ತು. ಈ ವೇಳೆ ಸಂಜೆ 4.15ರ ಸುಮಾರಿಗೆ ಹಳಿಗಳ ಮೇಲೆ ಅಗ್ನಿ ಸುರಕ್ಷತಾ ಸಿಲಿಂಡರ್ ಬಿದ್ದಿರುವುದನ್ನು ಕಂಡ ಚಾಲಕ ಆಘಾತಕ್ಕೊಳಗಾಗಿದ್ದಾನೆ. ರೈಲಿನ ವೇಗವು ನಿಧಾನವಾಗಿದ್ದ ಕಾರಣ ತಕ್ಷಣವೇ ಬ್ರೇಕ್‌ ಹಾಕಿ, ಚಾಲಕ ಸಮಯಪ್ರಜ್ಞೆ ಮೆರೆದಿದ್ದಾರೆ. ಬಳಿಕ ನಿಯಂತ್ರಣ ಕೊಠಡಿಗೆ ತಿಳಿಸಿದ ನಂತರ ಚಾಲಕ ಸಿಲಿಂಡರ್ ಅನ್ನು ಕಾನ್ಪುರ ಸೆಂಟ್ರಲ್‌ಗೆ ತಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೊಡಬೇಕು: ಜೈರಾಮ್ ರಮೇಶ್ ಆಗ್ರಹ

  • 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 69.50 ರೂ. ಇಳಿಕೆ

    19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 69.50 ರೂ. ಇಳಿಕೆ

    ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಜೂನ್ 1 ರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ (Commercial LPG Gas Cylinders) ಬೆಲೆಯನ್ನು 69.50 ರೂ. ಕಡಿತಗೊಳಿಸಿವೆ.

    ಇದರೊಂದಿಗೆ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ 1,676 ರಷ್ಟಿದೆ. ದೇಶಾದ್ಯಂತ ಮೆಟ್ರೋ ನಗರಗಳಿಗೂ ಇದು ಅನ್ವಯವಾಗಿದೆ. ಇದನ್ನೂ ಓದಿ: 2023-24 ಹಣಕಾಸು ವರ್ಷದಲ್ಲಿ 8.2% ಆರ್ಥಿಕ ಪ್ರಗತಿ – ಇದಿನ್ನೂ ಟ್ರೇಲರ್‌ ಎಂದ ಮೋದಿ

    ಮುಂಬೈನಲ್ಲಿ ಕೂಡ 69.50 ರೂ. ಇಳಿಕೆಯಾಗಿದ್ದು, ಪರಿಷ್ಕೃತ ಬೆಲೆಯನ್ನು 1,629 ಕ್ಕೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ ಬೆಲೆ 1,841.50 ರಷ್ಟಿದ್ದರೆ, ಕೋಲ್ಕತ್ತಾದಲ್ಲಿ ಬೆಲೆ ಕಡಿತದ ನಂತರ 1,789.50 ರೂ. ಆಗಿದೆ.

    ಮಾರ್ಚ್ 1 ರಂದು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು 19 ರೂ. ಇಳಿಕೆಯಾಗಿತ್ತು. ಏಪ್ರಿಲ್‌ನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್ (ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ 30.50 ರೂ. ಮತ್ತು 7.50 ರೂ. ರಷ್ಟು ಕಡಿತಗೊಳಿಸಲಾಗಿತ್ತು. ಇದನ್ನೂ ಓದಿ: ಶನಿವಾರ 57 ಸ್ಥಾನಗಳಿಗೆ ಕೊನೇ ಹಂತದ ಚುನಾವಣೆ – ಕಣದಲ್ಲಿರುವ ಘಟಾನುಘಟಿಗಳು ಯಾರು?

    ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1 ರಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ.

    ಬೆಲೆ ಇಳಿಕೆಯ ಹಿಂದಿನ ನಿಖರವಾದ ಕಾರಣಗಳನ್ನು ಬಹಿರಂಗಪಡಿಸಲಾಗಿಲ್ಲವಾದರೂ, ಅಂತರರಾಷ್ಟ್ರೀಯ ತೈಲ ಬೆಲೆಗಳಲ್ಲಿನ ಬದಲಾವಣೆಗಳು, ತೆರಿಗೆ ನೀತಿಗಳಲ್ಲಿನ ಬದಲಾವಣೆಗಳು ಮತ್ತು ಪೂರೈಕೆ-ಬೇಡಿಕೆ ಯಂತಹ ವಿವಿಧ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಬೆಲೆ ಪರಿಷ್ಕರಿಸಲಾಗುತ್ತದೆ.

  • ದಾವಣಗೆರೆ: ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ; ಓರ್ವ ಸಾವು

    -ಶಾಲೆಗೆ ಹೋಗುತ್ತಿದ್ದ ಬಾಲಕಿಯರ ಮೇಲೂ ಬಿದ್ದ ಸಿಲಿಂಡರ್‍ಗಳು

    ದಾವಣಗೆರೆ: ಗ್ಯಾಸ್ ಸಿಲಿಂಡರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗಾಣದಕಟ್ಟೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

    ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಬಸವರಾಜ್ (42) ಮೇಲೆ ಗ್ಯಾಸ್ ಸಿಲಿಂಡರ್‍ಗಳು ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇದೇ ವೇಳೆ ಶಾಲೆಗೆ ತೆರಳುತ್ತಿದ್ದ ಶಾಲಾ ಬಾಲಕಿಯರ ಮೇಲೆಯೂ ಗ್ಯಾಸ್ ಸಿಲಿಂಡರ್‍ಗಳು ಬಿದ್ದದರಿಂದ ಅಕ್ಷತಾ ಮತ್ತು ತನುಶ್ರೀ ಎಂಬ ಇಬ್ಬರು ಶಾಲಾ ಬಾಲಕಿಯರಿಗೆ ಗಂಭೀರ ಗಾಯಗಳಾಗಿವೆ. ಅಕ್ಷತಾಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮತ್ತು ತನುಶ್ರೀಯನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.

    ಬೆಳಗ್ಗೆ ಮಂಜು ಕವಿದಿದ್ದರಿಂದ ಲಾರಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಲಾರಿ ಭದ್ರಾವತಿಯಿಂದ ಚನ್ನಗಿರಿ ಪಟ್ಟಣಕ್ಕೆ ಹೋಗುವ ಮಾರ್ಗದಲ್ಲಿ ಅಪಘಾತ ಸಂಭವಿಸಿದೆ. ಘಟನೆಯ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಚನ್ನಗಿರಿ ಠಾಣಾ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಲಾರಿಯಿಂದ ಬಿದ್ದ ಗ್ಯಾಸ್ ಸಿಲಿಂಡರ್‍ಗಳು ಲೀಕ್ ಆಗುತ್ತಿರುವುದರಿಂದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ.