ಮೈಸೂರು: ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಐವರಿಗೆ ಗಾಯಗಳಾದ ಘಟನೆ ಮೈಸೂರಿನ (Mysuru) ಹುಣಸೂರು (Hunsuru) ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ನಡೆದಿದೆ.
ನಿಂಗರಾಜುರವರ ಮನೆಯಲ್ಲಿ ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ದಂಪತಿಗೆ ಬೆಂಕಿ ಹತ್ತಿಕೊಂಡಿದೆ. ಜೋರಾದ ಶಬ್ದ ಕೇಳಿದ ಪಕ್ಕದ ಮನೆಯವರಾದ ರಾಣಿಯಮ್ಮ, ಶೀಲ, ನಾಗಮ್ಮರವರು ನೋಡಲು ಹೋಗುತ್ತಿದ್ದಂತೆ ಅವರ ಬಟ್ಟೆಗಳಿಗೆ ಬೆಂಕಿ ಹತ್ತಿಕೊಂಡಿದೆ. ಘಟನೆ ಸಂಬಂಧ ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮತ್ಸ್ಯ 6000 – ಆಳ ಸಮುದ್ರದ ರಹಸ್ಯಗಳನ್ನು ಭೇದಿಸಲು ಭಾರತ ಸಜ್ಜು
ಮುಂಬೈ: ಮಹಾರಾಷ್ಟ್ರ (Maharashtra) ರಾಜ್ಯದ ಸಾಂಗ್ಲಿ (Sangli) ಜಿಲ್ಲೆಯ ರಸಗೊಬ್ಬರ ಘಟಕವೊಂದರಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.
ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ (MIDC) ತಾರಾಪುರ ಬಳಿಯ ಕಾರ್ಖಾನೆಯಲ್ಲಿ ಗುರುವಾರ (ನ.21) ರಾತ್ರಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಘಟಕದ ಕಾವಲುಗಾರ ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಘಟಕದ ಮಾಲೀಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದಕ್ಕೂ ಓದಿ: ಬೆಂಗಳೂರು| ಹೆತ್ತ ಮಕ್ಕಳನ್ನೇ ಕೊಲೆ ಮಾಡಿದ ತಾಯಿ – ತಾನೂ ಆತ್ಮಹತ್ಯೆಗೆ ಯತ್ನ
ಸದ್ಯ ಗಾಯಗೊಂಡ ಒಂಬತ್ತು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳವನ್ನು ಪರಿಶೀಲಿಸಿದ ಪೊಲೀಸರು ತಾಂತ್ರಿಕ ದೋಷದಿಂದ ರಿಯಾಕ್ಟರ್ ಸ್ಫೋಟಗೊಂಡಿದೆ ಎಂದು ಶಂಕಿಸಿದ್ದು, ಸದ್ಯ ತನಿಖೆ ನಡೆಸುತ್ತಿದ್ದಾರೆ.
ಇದೇ ವರ್ಷ ಸೆಪ್ಟೆಂಬರ್‌ನಲ್ಲಿ ಥಾಣೆ ಜಿಲ್ಲೆಯ ಅಂಬರ್‌ನಾಥ್‌ನಲ್ಲಿರುವ ರಾಸಾಯನಿಕ ಕಂಪನಿಯಲ್ಲಿ ಅನಿಲ ಸೋರಿಕೆಯಾಗಿತ್ತು. ಅದಕ್ಕೂ ಮುನ್ನ ಮೇ ತಿಂಗಳಲ್ಲಿ ಥಾಣೆ ಜಿಲ್ಲೆಯ ಡೊಂಬಿವಿಲಿಯ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ (ಎಂಐಡಿಸಿ) ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ 13 ಜನರು ಸಾವನ್ನಪ್ಪಿದರು. ಬಳಿಕ ಜೂನ್‌ನಲ್ಲಿ ಅದರ ಆವರಣದಲ್ಲಿರುವ ಮತ್ತೊಂದು ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು.ಇದಕ್ಕೂ ಓದಿ: ಪ್ರವೀರ್ ಶೆಟ್ಟಿ ಸಿನಿಮಾಗೆ ಶ್ರೀಮುರಳಿ ಸಾಥ್-‘ನಿದ್ರಾದೇವಿ Next door’ ಟೀಸರ್ ಔಟ್
ಮೈಸೂರು: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.
ಮೈಸೂರಿನ ಯರಗನಹಳ್ಳಿಯ (Yaraganahalli) ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ (Gas Leak) ಮನೆಯೊಳಗೆ ಮಲಗಿದ್ದ ನಾಲ್ವರು ಮೃತಪಟ್ಟಿದ್ದಾರೆ. ಕುಮಾರಸ್ವಾಮಿ (45), ಅವರ ಪತ್ನಿ ಮಂಜುಳಾ (39) ಹಾಗೂ ಇವರ ಮಕ್ಕಳಾದ ಅರ್ಚನಾ (19) ಮತ್ತು ಸ್ವಾತಿ (17) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ಕುಮಾರಸ್ವಾಮಿ ದಂಪತಿ ಮನೆಯಲ್ಲಿ ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು. ಈ ಕಾರಣಕ್ಕಾಗಿ ಮೂರು ಸಿಲಿಂಡರ್ ಇಟ್ಟುಕೊಂಡಿದ್ದರು. ಅದರಲ್ಲಿ ಒಂದು ಸಿಲಿಂಡರ್ ಸೋರಿಕೆಯಾಗಿ ಈ ಸಾವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಅಪಘಾತ – ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಬಲಿ
ಮೃತ ಕುಮಾರಸ್ವಾಮಿ ಮೂಲತಃ ಕಡೂರು ತಾಲೂಕಿನ ಸಖರಾಯಪಟ್ಟಣದವರು. ಅಲ್ಲಿಯೆ ಸೋಮವಾರ ಇದ್ದ ಸಂಬಂಧಿಗಳ ಮದುವೆಗೆ ಕುಟುಂಬ ಸಮೇತರಾಗಿ ಹೋಗಿ ಸೋಮವಾರ ರಾತ್ರಿ ವಾಪಸ್ ಆಗಿದ್ದರು. ಸೋಮವಾರ ರಾತ್ರಿ ಮನೆಯೊಳಗೆ ಮಲಗಿದ ಈ ಕುಟುಂಬ ಮತ್ತೆ ಮೇಲೆ ಎದ್ದಿಲ್ಲ. ನಿನ್ನೆ ಇವರ ಸಂಬಂಧಿಕರು ಹಲವು ಬಾರಿ ಇವರಿಗೆ ಕರೆ ಮಾಡಿದ್ದಾರೆ. ಆಗ ಕರೆ ಸ್ವೀಕಾರ ಆಗಿಲ್ಲ. ಇವತ್ತು ಬೆಳಗ್ಗೆಯೂ ಕರೆ ಮಾಡಿದ್ದಾಗ ಕರೆ ಸ್ವೀಕಾರ ಮಾಡದ ಕಾರಣ ಅನುಮಾನಗೊಂಡು ಅಕ್ಕಪಕ್ಕದ ಮನೆಯವರಿಗೆ ದೂರವಾಣಿ ಕರೆ ಮಾಡಿ ಮನೆಗೆ ಹೋಗಿ ನೋಡಿ ಎದ್ದಿದ್ದಾರೆ. ಆಗ ಪಕ್ಕದ ಮನೆಯವರು ಮನೆಗೆ ಬಂದು ಕಿಟಿಕಿ ಮೂಲಕ ನೋಡಿದ್ದಾಗ ಮೃತಪಟ್ಟಿರುವ ವಿಚಾರ ಗೊತ್ತಾಗಿದೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ, ಸಾಮರ್ಥ್ಯ ಇರುವವರಿಗೆ ಕೊಡಲಿ: ಸತೀಶ್ ಜಾರಕಿಹೊಳಿ
10*20 ಸೈಜಿನ ಈ ಮನೆಯಲ್ಲಿ ಗಾಳಿಗೆ ಯಾವುದೇ ರೀತಿಯಾದಂತ ವ್ಯವಸ್ಥೆ ಇಲ್ಲ. ಇಂತಹ ಸ್ಥಿತಿಯಲ್ಲಿ ಗ್ಯಾಸ್ ಲಿಕ್ ಆಗಿದೆ. ಲಿಕ್ ಆದ ಗ್ಯಾಸ್ ಅನ್ನೆ ಸೇವಿಸಿದ ಪರಿಣಾಮ ಈ ಸಾವುಗಳು ಉಂಟಾಗಿವೆ ಎಂಬ ಅಂಶ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಇದನ್ನೂ ಓದಿ: ಅಂಜಲಿ ಹತ್ಯೆಯ ರಹಸ್ಯ ಬಿಚ್ಚಿಟ್ಟ ಹಂತಕ ವಿಶ್ವ
ಗ್ಯಾಸ್ ಸೋರಿಕೆಯಿಂದ ಸ್ಪೋಟ ಉಂಟಾಗಿ ಸಾವು ಸಂಭವಿಸಿದ್ದು ನೋಡಿದ್ದೇವು. ಆದರೆ, ಗ್ಯಾಸ್ ಲೀಕ್‌ನಿಂದ ನಾಲ್ವರು ಮೃತಪಟ್ಟಿರೋದು ಇತ್ತೀಚಿನ ದಿನಗಳಲ್ಲಿ ಇದೇ ಮೊದಲು. ಹೀಗಾಗಿಯೆ ಬಳಕೆ ಮಾಡದೇ ಇರೋ ಸಮಯದಲ್ಲಿ ಗ್ಯಾಸ್ ಅನ್ನು ಆಫ್ ಮಾಡಿ ಅಂತಾ ಗ್ಯಾಸ್ ಸಂಸ್ಥೆಗಳು ಸದಾ ಜನರಿಗೆ ಜಾಗೃತಿ ಮೂಡಿಸುತ್ತಿರುತ್ತವೆ. ಇದನ್ನೂ ಓದಿ: ಮೇ 13ರಿಂದ ನಾಪತ್ತೆಯಾಗಿದ್ದ ಸಂಸದ ಶವವಾಗಿ ಪತ್ತೆ- ಮೂವರ ಬಂಧನ
ಬೆಂಗಳೂರು: ಗ್ಯಾಸ್ ಸೋರಿಕೆಯಾಗಿ (Gas Leak) ಸಿಲಿಂಡರ್ ಬ್ಲಾಸ್ಟ್ (Cylinder Blast) ಆದ ಪರಿಣಾಮ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ (Bengaluru) ಬೇಗೂರು (Begur) ಬಳಿಯ ಲಕ್ಷ್ಮಿಪುರದಲ್ಲಿ ನಡೆದಿದೆ.
ಬೊಮ್ಮನಹಳ್ಳಿ ಸಮೀಪದ ಗಾರ್ವೇಬಾವಿಪಾಳ್ಯದಲ್ಲಿ ಘಟನೆ ನಡೆದಿದ್ದು, ಬಿಹಾರ (Bihar) ಮೂಲದ ಅಂಕಿತ್ ರಾಜ್ (25) ಎಂಬ ಯುವಕ ಘಟನೆಯಲ್ಲಿ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಪದ್ಮಾವತಿ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಯುವಕರು ಬಾಡಿಗೆಗೆ ವಾಸವಿದ್ದರು. ಮನೆಯಲ್ಲಿದ್ದ ಗ್ಯಾಸ್ ಲೀಕ್ ಆಗಿತ್ತು. ಇಂದು ಬೆಳಗ್ಗೆ ಅಂಕಿತ್ ಗ್ಯಾಸ್ ಹಚ್ಚಲು ಹೋಗಿದ್ದ ಸಂದರ್ಭ ಏಕಾಏಕಿ ಸ್ಫೋಟಗೊಂಡಿದೆ. ಅಡುಗೆ ಮಾಡಲು ಹೋದ ವೇಳೆ ಘಟನೆ ನಡೆದಿದ್ದು, ಸಿಲಿಂಡರ್ ಬ್ಲಾಸ್ಟ್‌ನಿಂದ ಮನೆಯ ಕಿಟಕಿ, ಗಾಜುಗಳು ಜಖಂಗೊಂಡಿವೆ. ಇದನ್ನೂ ಓದಿ: ಹಾಸನದಿಂದ ಜೀರೋ ಟ್ರಾಫಿಕ್‌ನಲ್ಲಿ ಬಂದ್ರೂ ಅರ್ಧ ಗಂಟೆ ಚಿಕಿತ್ಸೆಗೆ ವಿಳಂಬ – ನಿಮಾನ್ಸ್‌ನಲ್ಲಿ ಕಂದಮ್ಮ ಸಾವು
ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಛಿದ್ರಗೊಂಡಿದ್ದು, ಅಕ್ಕ ಪಕ್ಕದ ಹತ್ತಾರು ಮನೆಗಳಿಗೆ ಹಾನಿಯಾಗಿದೆ. ಅಂಕಿತ್ ರಾಜ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, 65% ರಷ್ಟು ಸುಟ್ಟ ಗಾಯಗಳಾಗಿವೆ. ಈತನಿಗೆ ಬೊಮ್ಮನಹಳ್ಳಿ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಬೇಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಣಕಾಸಿನ ವಿಚಾರಕ್ಕೆ ಟಿಪ್ಪರ್ ಹರಿಸಿ ವ್ಯಕ್ತಿಯ ಹತ್ಯೆ – ಇಬ್ಬರು ಗಂಭೀರ
ದಾವಣಗೆರೆ: ಮನೆಯಲ್ಲಿ ಗ್ಯಾಸ್ ಸೋರಿಕೆಯಾಗಿ (Gas Leak) ಬ್ಲಾಸ್ಟ್ (Blast) ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಾಯಗೊಂಡಿದ್ದ ಮಹಿಳೆ (Woman) ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಸ್ಮಿತಾ (55) ಸಾವನ್ನಪ್ಪಿದ ಮಹಿಳೆ. ದಾವಣಗೆರೆ (Davanagere) ವಿನೋಬ ನಗರದ ಮಾಚಿದೇವ ಚೌಟ್ರಿ ಪಕ್ಕದಲ್ಲಿ ಘಟನೆ ನಡೆದಿತ್ತು. ಇದೇ ನವೆಂಬರ್ 23ರಂದು ಘಟನೆ ನಡೆದಿದ್ದು, ಅನಿಲ ಸೋರಿಕೆ ಹಿನ್ನೆಲೆ ಬ್ಲಾಸ್ಟ್ನಲ್ಲಿ ಸ್ಮಿತಾ ಗಂಭೀರ ಗಾಯಗೊಂಡಿದ್ದರು. ಘಟನೆಯ ಬಳಿಕ ಮಹಿಳೆಯನ್ನು ತಕ್ಷಣವೇ ಚಿಗಟೇರಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ಮಿತಾ ಇಂದು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಮಕ್ಕಳ ಮಾರಾಟ ಪ್ರಕರಣ; ಯಾರ್ಯಾರಿಗೆ ಯಾವ್ಯಾವ ಪಾತ್ರ? – ಇಲ್ಲಿದೆ ವಿವರ
ಮೃತ ಸ್ಮಿತಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮಂಡಿನೋವಿನ ಕಾರಣದಿಂದ ಸ್ಮಿತಾ ಸ್ಟ್ಯಾಂಡ್ ಸಹಾಯದಿಂದ ನಡೆಯುತ್ತಿದ್ದರು. ಬ್ಲಾಸ್ಟ್ ರಭಸಕ್ಕೆ ಮನೆಯ ಕಿಟಕಿ, ಬಾಗಿಲು ಛಿದ್ರಗೊಂಡಿದ್ದು, ಮನೆಯ ಗೋಡೆ ಬಿರುಕು ಬಿಟ್ಟಿದೆ. ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಇದನ್ನೂ ಓದಿ: ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ: ಪೊಲೀಸ್ ಆಯುಕ್ತ
ಕೋಲಾರ: ಗ್ಯಾಸ್ ಸೋರಿಕೆಯಾಗಿ (Gas Leak) ಸಿಲಿಂಡರ್ ಸಿಡಿದು (Cylinder Blast) ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ (Couple) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ಸೆಪ್ಟೆಂಬರ್ 16ರಂದು ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುಪ್ಪಡಹಳ್ಳಿ ಗ್ರಾಮದ ದಂಪತಿ ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ವಾಸವಿದ್ದರು. ಇದನ್ನೂ ಓದಿ: ಪೊಲೀಸ್ ಕಸ್ಟಡಿಯಿಂದ ಎಸ್ಕೇಪ್‌ಗೆ ಯತ್ನ – 2ನೇ ಮಹಡಿಯಿಂದ ಜಿಗಿದು ಕೈಕಾಲು ಮುರಿದುಕೊಂಡ ಬಿಜೆಪಿ ಕಾರ್ಯಕರ್ತ
ಕಾಫಿ ಮಾಡುವ ವೇಳೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯ ಪರಿಣಾಮ ತೀವ್ರ ಗಾಯಗೊಂಡ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಸಿಲಿಂಡರ್ ಬ್ಲಾಸ್ಟ್‌ನಿಂದ ದಂಪತಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ (Bengaluru) ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್‍ಮೆಂಟ್‍ನಿಂದ ಜಿಗಿದು ಸಾವು
ಧಾರವಾಡ: ಬುಧವಾರ ಸಂಜೆ ಧಾರವಾಡ (Dharwad) ಬೇಲೂರು ಕೈಗಾರಿಕಾ ಪ್ರದೇಶದ ಹೈಕೋರ್ಟ್ ಪೀಠದ ಬಳಿ ಗ್ಯಾಸ್ ಟ್ಯಾಂಕರ್ (Tanker) ಲೀಕೇಜ್ ಆಗಿತ್ತು. ಇದರಿಂದ ಇಡಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಗುರುವಾರ ಆ ಗ್ಯಾಸ್ ಟ್ಯಾಂಕರ್ ಲೀಕೇಜ್ ತಡೆದು, ಟ್ಯಾಂಕರ್ ಸ್ಥಳಾಂತರ ಮಾಡಲಾಗಿದ್ದು, ರಾತ್ರಿಯಿಡೀ ವಿದ್ಯುತ್ ಇಲ್ಲದೆ ಕಳೆದಿದ್ದ ಅಲ್ಲಿನ ಜನ ಈಗ ನಿಟ್ಟುಸಿರು ಬಿಡುವಂತೆ ಆಗಿದೆ.
ಧಾರವಾಡದಲ್ಲಿ ನಿರಂತರ 18 ಗಂಟೆಗಳ ಕಾಲ ಜೀವ ಕೈಯಲ್ಲಿ ಹಿಡಿದು ಕ್ಷಣ ಕ್ಷಣ ಕಳೆದಿದ್ದ ನೂರಾರು ಹಳ್ಳಿಯ ಜನ ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಂ.4ರ ಧಾರವಾಡದ ಬೇಲೂರು ಹೈಕೋರ್ಟ್ ಬಳಿಯ ಅಂಡರ್‌ಪಾಸ್‌ನಲ್ಲಿ ನಿನ್ನೆ ಹೆಚ್‌ಪಿ ಕಂಪನಿಯ ಟ್ಯಾಂಕರ್ ಸಿಲುಕಿ ಬಿಟ್ಟಿತ್ತು. ಅಂಡರ್‌ಪಾಸ್‌ನ ಮೇಲ್ಭಾಗದ ರಸ್ತೆಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗೋದಕ್ಕೆ ಆರಂಭವಾಗಿತ್ತು.
ಇದನ್ನು ಸಮರೋಪಾದಿಯಲ್ಲಿ ತಹಬದಿಗೆ ತರಲು ಸುಮಾರು 18 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಬೇಕಾಯ್ತು. ಸಣ್ಣದೊಂದು ಕಿಡಿ ಹಾರಿದ್ದರು ಕೂಡಾ ದೊಡ್ಡ ಅನಾಹುತ ಸಂಭವಿಸೋ ಸಾಧ್ಯತೆ ಇತ್ತು. ಹೀಗಾಗಿ ವಿದ್ಯುತ್ ಕಡಿತಗೊಳಿಸಿ, ಜನರಿಗೆ ಯಾವುದೇ ರೀತಿಯ ಬೆಂಕಿ ಹೊತ್ತಿಸದಂತೆ ಸೂಚಿಸಲಾಗಿತ್ತು. ಇದರಿಂದಾಗಿ ಅಮಾವಾಸ್ಯೆ ರಾತ್ರಿ ನಮಗೆ ಕರಾಳವಾಗಿ ಹೋಯ್ತಾ? ಅನ್ನೋ ಆತಂಕದಲ್ಲಿಯೇ ಜನ ರಾತ್ರಿ ಕಳೆದರು.
ನಿನ್ನೆ ಸಂಜೆ 6:20ರ ಹೊತ್ತಿಗೆ ಈ ಟ್ಯಾಂಕರ್ ಅಂಡರ್‌ಪಾಸ್ ಅಡಿ ಸಿಲುಕಿತ್ತು. ಸಾಮಾನ್ಯವಾಗಿ ಯಾವುದೇ ದೊಡ್ಡ ವಾಹನಗಳು ಈ ಮಾರ್ಗದಲ್ಲಿ ಬರೋದೇ ಇಲ್ಲ. ಆದರೆ ಚಾಲಕನ ಸಣ್ಣದೊಂದು ಮೈಮರೆವು ಈ ಅವಘಡಕ್ಕೆ ಕಾರಣವಾಗಿದೆ. ಬೇಲೂರು ಕೈಗಾರಿಕಾ ಪ್ರದೇಶದಲ್ಲಿರೋ ಹೆಚ್‌ಪಿಸಿಎಲ್ ಘಟಕಕ್ಕೆ ಮುಂಬೈನಿಂದ ಬಂದಿರೋ ಈ ಟ್ಯಾಂಕರ್ ತಲುಪಬೇಕಿತ್ತು. ಆದರೆ ಚಾಲಕ ಮೈಮರೆತು ತೀರಾ ಮುಂದೆ ಬಂದು ಬಿಟ್ಟಿದ್ದ. ಹೀಗಾಗಿ ಹೈಕೋರ್ಟ್ ಮುಂದೆ ಎಡಕ್ಕೆ ಟರ್ನ್ ತೆಗೆದುಕೊಂಡು ಸರ್ವಿಸ್ ರಸ್ತೆಗೆ ಇಳಿದ ಚಾಲಕ ಬಳಿಕ ಈ ಅಂಡರ್‌ಪಾಸ್ ಮೂಲಕ ಆಚೆ ರಸ್ತೆ ಸೇರಲು ಪ್ರಯತ್ನಿಸಿದ್ದಾನೆ. ಇದನ್ನೂ ಓದಿ: ಉಡುಪಿ ಕಾಲೇಜಿನ ವೀಡಿಯೋ ಪ್ರಕರಣ- ಗುಜರಾತ್ FSLಗೆ ರವಾನೆ ಸಾಧ್ಯತೆ
ಈ ವೇಳೆ ರಸ್ತೆಯ ಮೇಲ್ಭಾಗ ಟ್ಯಾಂಕರ್‌ಗೆ ತಾಗಿದೆ. ಆ ಕ್ಷಣವೇ ಟ್ಯಾಂಕರ್ ಮೇಲ್ಭಾಗದಲ್ಲಿನ ವಾಲ್ವ್‌ಗೆ ಹಾನಿ ಆಗಿದೆ. ವಾಲ್ವ್ ಬಳಿಯಿಂದಲೇ ಗ್ಯಾಸ್ ಸೋರಿಕೆ (Gas Leak) ಶುರುವಾಗಿ ಬಿಟ್ಟಿದೆ. ಆ ಕ್ಷಣವೇ ಸ್ಥಳೀಯರು ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದಾರೆ. ಬೇಲೂರು ಘಟಕದ ಅಗ್ನಿಶಾಮಕ ದಳದ ಸಿಬ್ಬಂದಿ ಕೇವಲ 10 ನಿಮಿಷದಲ್ಲಿ ಸ್ಥಳಕ್ಕೆ ಬಂದಿದ್ದಾರೆ.
ಸುಮಾರು 18 ಟನ್ ಸಾಮರ್ಥ್ಯದ ಗ್ಯಾಸ್ ಇದ್ದ ಕಾರಣಕ್ಕೆ ಬೇಗ ಖಾಲಿ ಮಾಡುವುದೇ ಸವಾಲಾಗಿತ್ತು. ಹೀಗಾಗಿ ನಿಧಾನವಾಗಿ ಅದೆಲ್ಲ ಗ್ಯಾಸ್ ಖಾಲಿ ಆಗೋವರೆಗೂ ಕಾದ ಎಲ್ಲರೂ, ಬೆಳಗ್ಗೆ 11ರ ಹೊತ್ತಿಗೆ ಸ್ವಲ್ಪ ಗ್ಯಾಸ್ ಖಾಲಿಯಾದಾಗ ಟ್ಯಾಂಕರ್ ಮೇಲ್ಭಾಗಕ್ಕೆ ತೆರಳಿ ವಾಲ್ವ್ ಸರಿಪಡಿಸಿದ್ದಾರೆ. ಉಳಿದ ಗ್ಯಾಸ್ ಅನ್ನು ಮತ್ತೊಂದು ಖಾಲಿ ಟ್ಯಾಂಕರ್‌ಗೆ ತುಂಬಿಸಿ, ಅಲ್ಲಿಂದ ತೆರವು ಮಾಡಿದ್ದಾರೆ.
ಇದೆಲ್ಲವೂ ಆಗೋ ಹೊತ್ತಿಗೆ ಸುಮಾರು 20 ಗಂಟೆಗಳು ಕಳೆದು ಹೋಗಿದ್ದವು. ಇಷ್ಟು ಸುದೀರ್ಘ ಅವಧಿ ಬಳಿಕ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಸದ್ಯ ರಸ್ತೆ ಸಂಚಾರವೂ ಸುಗಮವಾಗಿದೆ. ಸದ್ಯ ಚಾಲಕನ ಸಣ್ಣ ತಪ್ಪು ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದರಿಂದ ಪ್ರಯಾಣಿಕರು ಹಾಗೂ ಸಾವಿರಾರು ಲಾರಿ ಚಾಲಕರು ಪರದಾಟ ನಡೆಸಿದ್ದಾರೆ. ಅಲ್ಲದೇ ಕೈಗಾರಿಕೆ ಬಂದ್ ಮಾಡುವ ಸ್ಥಿತಿಯೂ ಬಂದಿತ್ತು. ಸದ್ಯ ಎಲ್ಲ ಪ್ರಯತ್ನ ಸಫಲವಾಗಿದ್ದರಿಂದ ಯಾವುದೇ ಅವಘಡ ಸಂಭವಿಸಿಲ್ಲ ಎನ್ನುವುದೇ ನೆಮ್ಮದಿಯ ವಿಷಯ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಭರವಸೆ
ಧಾರವಾಡ: ಗ್ಯಾಸ್ ತುಂಬಿದ ಟ್ಯಾಂಕರ್ (Gas Tanker) ಒಂದು ಅಂಡರ್ ಪಾಸ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ (Gas Leak) ಆಗಿರುವ ಘಟನೆ ಧಾರವಾಡದ (Dharwad) ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ. ಸದ್ಯ ಆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ಗ್ಯಾಸ್ ಲೀಕೇಜ್ ದೊಡ್ಡ ಮಟ್ಟದಲ್ಲಿ ಆಗಿದ್ದು, ಜನ ಸಂಚಾರ ಹಾಗೂ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದು, ಯಾವುದೇ ಅನಾಹುತ ಆಗದಂತೆ ಕಣ್ಣಿಟ್ಟಿದ್ದಾರೆ. ಹೈಕೋರ್ಟ್ ಅಕ್ಕಪಕ್ಕದ ಬೇಲೂರು, ಕೋಟೂರು, ಮುಮ್ಮಿಗಟ್ಟಿ ಸೇರಿದಂತೆ ಇಡಿ ಕೈಗಾರಿಕಾ ಪ್ರದೇಶದ ವಿದ್ಯುತ್ ಸ್ಥಗಿತಗೊಳಿಸಲಾಗಿದೆ.
ಗ್ಯಾಸ್ ಲೀಕೇಜ್‌ನಿಂದಾಗಿ ಬುಧವಾರ ಸಂಜೆಯಿಂದಲೇ ರಸ್ತೆಯನ್ನು ಬಂದ್ ಮಾಡಲಾಗಿದೆ. ಲೀಕೇಜ್ ತಡೆಯಲು ಸಾಧ್ಯವಾಗದ ಹಿನ್ನೆಲೆ ಟ್ಯಾಂಕರ್‌ನಲ್ಲಿರುವ ಇಡೀ ಗ್ಯಾಸ್ ಅನ್ನು ಹೊರ ಹಾಕಿ ಅದನ್ನು ಹೊರತೆಗೆಯಲು ಪ್ರಯತ್ನಿಸಲಾಗುತ್ತಿದೆ. ಕಳೆದ 12 ಗಂಟೆಯಿಂದ ಗ್ಯಾಸ್ ನಿರಂತರವಾಗಿ ಸೋರಿಕೆಯಾಗುತ್ತಿದೆ. ರಾತ್ರಿಯಿಡೀ ಕಳೆದರೂ ಟ್ಯಾಂಕರ್ ಇನ್ನೂ ಖಾಲಿಯಾಗಿಲ್ಲ. ಇದನ್ನೂ ಓದಿ: ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಕಂಪನಿಗೆ ಭಾರೀ ವಿರೋಧ!
ಕೇಪ್ ಟೌನ್: ವಿಷಾನಿಲ ಸೋರಿಕೆಯಿಂದಾಗಿ (Gas Leak) ಕನಿಷ್ಠ 16 ಜನರು ದುರ್ಮರಣ ಹೊಂದಿರುವ ಘಟನೆ ದಕ್ಷಿಣ ಆಫ್ರಿಕಾದ (South Africa) ಜೋಹನ್ಸ್‌ಬರ್ಗ್‌ನ ಬೋಕ್ಸ್‌ಬರ್ಗ್ ಬಳಿ ನಡೆದಿದೆ.
ಅನಿಲ ಸೋರಿಕೆ ಶಂಕಿತ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿರಬಹುದು ಎಂದು ದಕ್ಷಿಣ ಆಫ್ರಿಕಾದ ಮಾಧ್ಯಮಗಳು ವರದಿ ಮಾಡಿವೆ. ಘಟನೆಯಲ್ಲಿ 1 ವರ್ಷದ ಮಗು ಸೇರಿದಂತೆ 16 ಜನರು ಸಾವನ್ನಪ್ಪಿದ್ದಾರೆ. ಅನಿಲ ಸೋರಿಕೆಯಿಂದಾಗಿ ಮೃತದೇಹಗಳು ಪ್ರದೇಶದಾದ್ಯಂತ ಅಲ್ಲಲ್ಲಿ ಚದುರಿದ ಸ್ಥಿತಿಯಲ್ಲಿ ಕಾಣಸಿಕ್ಕಿವೆ ಎನ್ನಲಾಗಿದೆ. ಇದನ್ನೂ ಓದಿ: 80 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್ – 27 ಮಂದಿ ದಾರುಣ ಸಾವು, 17 ಮಂದಿಗೆ ಗಾಯ
ಬೆಂಗಳೂರು: ಕೆಲವೇ ದಿನಗಳಲ್ಲಿ ಹಸೆಮಣೆ (Marriage) ಏರಬೇಕಿದ್ದ ಪ್ರೇಮಿಗಳು (Lovers) ದಾರುಣವಾಗಿ ಮನೆಯಲ್ಲೇ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್ ಮತ್ತು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ಮೂಲದ ಸುಧಾರಾಣಿ ಮೃತ ದುರ್ದೈವಿಗಳು. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ?
ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲಿನಲ್ಲಿ ಜೊತೆಯಾಗಿ ಕೆಲಸ ಮಾಡಿಕೊಂಡಿದ್ದ ಇಬ್ಬರು ಮದುವೆಯಾಗಲು ತಯಾರಿ ನಡೆಸಿದ್ದರು. ತರಬನಹಳ್ಳಿಯಲ್ಲಿ ಮನೆ ಮಾಡಿಕೊಂಡಿದ್ದ ಚಂದ್ರಶೇಖರ್ ನಿವಾಸಕ್ಕೆ ಜೂನ್ 10 ರಂದು ಯುವತಿ ಸುಧಾರಾಣಿ ಬಂದಿದ್ದಾಳೆ. ಇದನ್ನೂ ಓದಿ: ರ‍್ಯಾಂಪ್‌ವಾಕ್ ಮಾಡ್ತಿದ್ದಾಗ ಕಬ್ಬಿಣದ ಪಿಲ್ಲರ್ ಬಿದ್ದು 24ರ ಮಾಡೆಲ್ ದುರ್ಮರಣ
ರಾತ್ರಿ ಇಬ್ಬರು ಒಟ್ಟಿಗೆ ಸ್ನಾನ ಮಾಡಲು ಬಾತ್ ರೂಮಿಗೆ (Bath Room) ತೆರಳಿದ್ದರು. ಬಾತ್ ರೂಮಿನ ಕಿಟಕಿ ಹಾಗೂ ಬಾಗಿಲು ಸಂಪೂರ್ಣವಾಗಿ ಲಾಕ್ ಮಾಡಿ ಗ್ಯಾಸ್ ಗೀಸರ್ (Gas Geyser) ಆನ್ ಮಾಡಿದ್ದಾರೆ. ಈ ವೇಳೆ ವಿಷ ಅನಿಲ ಸೋರಿಕೆಯಾಗಿ ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಂದ್ರಶೇಖರ್ ಮನೆಯಲ್ಲಿ ಇದ್ದರೂ ಭಾನುವಾರ ಬೆಳಗ್ಗೆ ಬಾಗಿಲು ತೆರೆಯದೇ ಇದ್ದಾಗ ಮಾಲೀಕರಿಗೆ ಅನುಮಾನ ಬಂದಿದೆ. ಕೊನೆಗೆ ಮಾಲೀಕರು ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿದ್ದಾಗ ಬಾತ್‌ರೂಮಿನಲ್ಲಿ ಇಬ್ಬರು ಮೃತಪಟ್ಟ ವಿಚಾರ ಬೆಳಕಿಗೆ ಬಂದಿದೆ.
ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹಗಳನ್ನು ಪೊಲೀಸರು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.