Tag: gas leakage

  • ನೆಲಮಂಗಲ| ಗ್ಯಾಸ್‌ ಲೀಕೇಜ್‌ನಿಂದ ಹೊತ್ತಿ ಉರಿದ ಬೆಂಕಿ – ಇಬ್ಬರು ಸಾವು

    ನೆಲಮಂಗಲ| ಗ್ಯಾಸ್‌ ಲೀಕೇಜ್‌ನಿಂದ ಹೊತ್ತಿ ಉರಿದ ಬೆಂಕಿ – ಇಬ್ಬರು ಸಾವು

    ನೆಲಮಂಗಲ: ಗ್ಯಾಸ್‌ ಲೀಕೇಜ್‌ನಿಂದ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಾವಿಗೀಡಾಗಿರುವ ಘಟನೆ ನೆಲಮಂಗಲದಲ್ಲಿ (Nelamangala) ನಡೆದಿದೆ.

    ನಾಗರಾಜ್ (50), ಶ್ರೀನಿವಾಸ್ (50) ಮೃತ ದುರ್ದೈವಿಗಳು. ಅವಘಡದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಓವರ್ ಟ್ಯಾಂಕ್ ಬಳಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಬಿಯರ್ ಪ್ರಿಯರಿಗೆ ಮತ್ತೆ ಶಾಕ್ – 20ರೂ. ಹೆಚ್ಚಳಕ್ಕೆ ನಿರ್ಧಾರ!

    ಗಂಗಯ್ಯ ಎಂಬವರಿಗೆ ಸೇರಿದ ಎರಡು ಬಾಡಿಗೆ ಮನೆ ಇವೆ. ಎರಡರಲ್ಲಿ ಒಂದು ಮನೆಯನ್ನ ನಾಗರಾಜ್ ಬಾಡಿಗೆಗೆ ಪಡೆದಿದ್ದರು. ಮೂಲತಃ ಬಳ್ಳಾರಿಯವರಾಗಿದ್ದ ನಾಗರಾಜ್ ಕುಟುಂಬ ಎರಡು ವರ್ಷದ ಹಿಂದೆ ಬಾಡಿಗೆಗೆ ಬಂದಿತ್ತು.

    ನಾಗರಾಜ್ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19), ಅಭಿಷೇಕ್ ಗೌಡ (18) ವಾಸವಾಗಿದ್ದರು. ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ನಾಗರಾಜ್ ದೇವರಿಗೆ ದೀಪ ಹಚ್ಚಿದ್ದರು. ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಎರಡನೇ ಮಗ ಅಭಿಷೇಕ್ ಮುಂದಾಗಿದ್ದರು. ಈ ವೇಳೆ ಸಿಲಿಂಡರ್‌ನಿಂದ ಗ್ಯಾಸ್ ಲೀಕ್ ಆಗಿದ್ದು, ದೀಪದ ಬೆಂಕಿ ತಗುಲಿದೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯಲ್ಲಿ ತಂದೆ ಕಳೆದುಕೊಂಡ ಹುಡುಗಿಗೆ ಐಎಸ್‌ಸಿ ಬೋರ್ಡ್‌ ಪರೀಕ್ಷೆಯಲ್ಲಿ ಶೇ.87 ಅಂಕ

    ಮನೆ ಹೊತ್ತಿ ಉರಿದಿದ್ದು ನಾಗರಾಜ್, ಲಕ್ಷ್ಮಿದೇವಿ, ಬಸವನಗೌಡ, ಅಭಿಷೇಕ್‌ಗೂ ಬೆಂಕಿ ಅವಘಡಕ್ಕೆ ಸಿಲುಕಿದ್ದರು. ಕೂಡಲೇ ಎಲ್ಲರನ್ನೂ ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಹಾಗೂ ಬಸವ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Davanagere| ಗ್ಯಾಸ್ ಸೋರಿಕೆಯಾಗಿ ಕಾಣಿಸಿಕೊಂಡ ಬೆಂಕಿ – ಕಿರಾಣಿ ಅಂಗಡಿ ಸುಟ್ಟು ಕರಕಲು

    Davanagere| ಗ್ಯಾಸ್ ಸೋರಿಕೆಯಾಗಿ ಕಾಣಿಸಿಕೊಂಡ ಬೆಂಕಿ – ಕಿರಾಣಿ ಅಂಗಡಿ ಸುಟ್ಟು ಕರಕಲು

    – ಲಕ್ಷಾಂತರ ರೂ. ನಷ್ಟ

    ದಾವಣಗೆರೆ: ಸಿಲಿಂಡರ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ (Gas Leakage) ಬೆಂಕಿ ಕಾಣಿಸಿಕೊಂಡ ಪರಿಣಾಮ ಕಿರಾಣಿ ಅಂಗಡಿ (Grocery Shop) ಸುಟ್ಟು ಕರಕಲಾದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಜಗಳೂರು ತಾಲೂಕಿನ ಹನುಮಂತಾಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

    ಗ್ರಾಮದ ಕುಮಾರ್ ಎನ್ನುವರಿಗೆ ಸೇರಿದ ಕಿರಾಣಿ ಅಂಗಡಿ ಇದಾಗಿದ್ದು, ಅಂಗಡಿಯಲ್ಲಿ ಇರಿಸಿದ್ದ ಸಿಲಿಂಡರ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹೊರ ಓಡಿಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇದನ್ನೂ ಓದಿ: ಕೋಲಾರ| ಒಂಟಿ ಸಲಗ ದಾಳಿಗೆ ರೈತ ಮಹಿಳೆ ಬಲಿ

    ಘಟನೆಯಿಂದ ಅಂಗಡಿಯಲ್ಲಿದ್ದ ಎಲ್ಲಾ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಅಂಗಡಿ ಮಾಲೀಕ ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅಭಿವೃದ್ಧಿಯಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸದಿದ್ದರೆ ನನ್ನ ಹೆಸರು ಶೆಹಬಾಜ್‌ ಷರೀಫ್‌ ಅಲ್ಲ: ಪಾಕ್‌ ಪ್ರಧಾನಿ ಸವಾಲು

  • Bengaluru| ಸಿಲಿಂಡರ್ ಸ್ಫೋಟಗೊಂಡು 3 ಮನೆಗಳಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರಿಗೆ ಗಾಯ

    Bengaluru| ಸಿಲಿಂಡರ್ ಸ್ಫೋಟಗೊಂಡು 3 ಮನೆಗಳಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರಿಗೆ ಗಾಯ

    ಬೆಂಗಳೂರು: ಗ್ಯಾಸ್ ಸೋರಿಕೆಯಾಗಿ (Gas Leakage) ಸಿಲಿಂಡರ್ ಸ್ಫೋಟಗೊಂಡ (Cylinder Blast) ಪರಿಣಾಮ 3 ಮನೆಗಳಿಗೆ ಬೆಂಕಿ ತಗುಲಿದ್ದು, ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಡಿಜೆ ಹಳ್ಳಿಯ (DJ Halli) ಆನಂದ್ ಥಿಯೇಟರ್ ಬಳಿ ನಡೆದಿದೆ.

    ಶನಿವಾರ ಬೆಳಗ್ಗೆ 11:30ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಪತಿ ನಾಜೀರ್, ಪತ್ನಿ ಕುಲ್ಸುಮ್ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಜೀರ್ ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದರು. ಸ್ಫೋಟದ ತೀವ್ರತೆಗೆ ಮೂರೂ ಮನೆಗಳು ಪುಡಿಪುಡಿಯಾಗಿವೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿಗೆ ಬೆದರಿಕೆ ಕೇಸ್‌ – 9 ಕೈದಿಗಳ ವಿರುದ್ಧ ಎಫ್‌ಐಆರ್‌

    ರೆಗ್ಯುಲೇಟರ್ ಆನ್ ಆಗಿದ್ದರಿಂದ ಗ್ಯಾಸ್ ಲೀಕೇಜ್ ಆಗಿದೆ. ರೆಗ್ಯುಲೇಟರ್ 2016ರಲ್ಲೇ ಡೇಟ್ ಬಾರ್ ಆಗಿದೆ. ಅದರಿಂದಲೇ ಗ್ಯಾಸ್ ಲೀಕೇಜ್ ಆಗಿ ಮನೆ ತುಂಬ ಆವರಿಸಿದೆ. ಶನಿವಾರ ಬೆಳಗ್ಗೆ 11:30ಕ್ಕೆ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಡಿಜೆ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

  • ಅನಿಲ ಸೋರಿಕೆಯಾಗಿ ಭೀಕರ ಸ್ಫೋಟ – 4 ಸಾವು, ಒಬ್ಬರಿಗೆ ಗಾಯ

    ಅನಿಲ ಸೋರಿಕೆಯಾಗಿ ಭೀಕರ ಸ್ಫೋಟ – 4 ಸಾವು, ಒಬ್ಬರಿಗೆ ಗಾಯ

    ಅಮರಾವತಿ: ಔಷಧಿ ಅಂಗಡಿಯೊಂದರಲ್ಲಿ (Pharmacy) ಅನಿಲ ಸೋರಿಕೆಯಾಗಿ (Gas Leakage) ಭೀಕರ ಸ್ಫೋಟ (Explosion) ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣಂನಲ್ಲಿ (Visakhapatnam) ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿವೆ.

    ವಿಶಾಖಪಟ್ಟಣಂ ಸಮೀಪದ ಅನಕಪಲ್ಲಿ ಜಿಲ್ಲೆಯ ಜವಾಹರಲಾಲ್ ನೆಹರು ಫಾರ್ಮಸಿಯಲ್ಲಿ ಸೋಮವಾರ ಈ ಭೀಕರ ಘಟನೆ ನಡೆದಿದೆ. ಸಂಜೆ 3 ಗಂಟೆ ವೇಳೆಗೆ ಫಾರ್ಮಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಔಷಧ ಅಂಗಡಿಯಲ್ಲಿದ್ದ ಕೆಲಸಗಾರರು ಬೆಂಕಿಯನ್ನು ತಡೆಯಲು ಪ್ರಯತ್ನಿಸಿದ್ದರು. ಆದರೆ ಅನಿಲ ಸೋರಿಕೆ ಹಿನ್ನೆಲೆ ಭೀಕರ ಸ್ಫೋಟ ಸಂಭವಿಸಿದೆ. ಇದನ್ನೂ ಓದಿ: ಮಗಳ ಅಶ್ಲೀಲ ವೀಡಿಯೋ ಪೋಸ್ಟ್ ಮಾಡಿದ್ದನ್ನು ಖಂಡಿಸಿದ್ದಕ್ಕೆ ಯೋಧನ ಹತ್ಯೆ

    ಔಷಧಾಲಯದ ಆಡಳಿತದ ಪ್ರಕಾರ, ವಿಶಾಖಪಟ್ಟಣಂನ ಫಾರ್ಮಾ ಸಿಟಿಯಲ್ಲಿರುವ ಲಾರಸ್ ಕಂಪನಿಯ ಯುನಿಟ್-3ರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿದೆ. ಸ್ಫೋಟ ಉಂಟಾದ ಬಳಿಕ ಅಗ್ನಿಶಾಮಕ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಎಂದು ತಿಳಿಸಿದೆ.

    ಮೃತರನ್ನು ಖಮ್ಮಂ ಮೂಲದ ಬಿ ರಾಂಬಾಬು, ಗುಂಟೂರಿನ ರಾಜೇಪ್ ಬಾಬು, ಕೋಟಪಾಡುವಿನ ಆರ್ ರಾಮಕೃಷ್ಣ ಮತ್ತು ಚೋಡಾವರಂನ ಮಜ್ಜಿ ವೆಂಕಟರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸತೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಭೀಕರ ಸುನಾಮಿಗೆ 60 ಮಂದಿ ಬಲಿ – 15 ಸಾವಿರ ವಿಮಾನಗಳ ಸಂಚಾರ ರದ್ದು

    Live Tv
    [brid partner=56869869 player=32851 video=960834 autoplay=true]

  • ಗ್ಯಾಸ್ ಸೋರಿಕೆ- ಸರ್ಕಾರಿ ಶಾಲೆಯ 100ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

    ಗ್ಯಾಸ್ ಸೋರಿಕೆ- ಸರ್ಕಾರಿ ಶಾಲೆಯ 100ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

    ನವದೆಹಲಿ: ದಕ್ಷಿಣ ದೆಹಲಿಯ ಸರ್ಕಾರಿ ಶಾಲೆಯ ಬಳಿಯ ಡಿಪೋವೊಂದರಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

    ದಕ್ಷಿಣ ದೆಹಲಿಯ ತುಘಲಕ್‍ಬಾದ್ ಪ್ರದೇಶದಲ್ಲಿರೋ ರಾಣಿ ಝಾನ್ಸಿ ಸರ್ವೋದಯ ಕನ್ಯಾ ವಿದ್ಯಾಲಯದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಶಾಲೆಯು ರೈಲ್ವೇ ಕಾಲೋನಿಯ ಬಳಿ ಇದೆ. ಶಾಲೆಯ ಬಳಿಯೇ ಇರುವ ಡಿಪೋನಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳು ಕಣ್ಣಿನಲ್ಲಿ ಉರಿ ಹಾಗೂ ಗಂಟಲಿನಲ್ಲಿ ಕಿರಿಕಿರಿಯಾಗುತ್ತಿದೆ ಅಂತ ಹೇಳಿದ್ದಾಗಿ ಶಾಲೆಯ ಉಪ ಪ್ರಾಂಶುಪಾಲರು ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದಾರೆ. ಗ್ಯಾಸ್ ಸೋರಿಕೆ ವಿಚಾರ ತಿಳಿಯುತ್ತಿದ್ದಂತೆಯೇ ಉಳಿದ ಮಕ್ಕಳನ್ನು ಶಾಲೆಯಿಂದ ಸ್ಥಳಾಂತರಗೊಳಿಸಲಾಗಿದೆ.

    ಗ್ಯಾಸ್ ಸೋರಿಕೆಯಾಗಿರುವ ಬಗ್ಗೆ ಇಂದು ಬೆಳಗ್ಗೆ 7.35ರ ವೇಳೆಗೆ ದೆಹಲಿಯ ಅಗ್ನಿಶಾಮಕ ಅಧಿಕಾರಿಗಳಿಗೆ ವಿಷಯ ಮುಟ್ಟಿಸಲಾಗಿದೆ. ಗ್ಯಾಸ್ ಸೋರಿಕೆಗೆ ಕಾರಣವೇನೆಂಬುದು ಸ್ಪಷ್ಟವಾಗಿಲ್ಲ. ಆದ್ರೆ ಗ್ಯಾಸ್ ಸೋರಿಕೆಯನ್ನ ನಿಯಂತ್ರಿಸಲು 7 ತಂಡಗಳನ್ನ ಸ್ಥಳಕ್ಕೆ ಕಳಿಸಲಾಗಿದೆ.

    ಆಸ್ಪತ್ರೆಗೆ ದಾಖಲಾಗಿರುವ ಕೆಲ ವಿದ್ಯಾರ್ಥಿಗಳೊಂದಿಗೆ ದೆಹಲಿ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಫೋನಿನಲ್ಲಿ ಮಾತನಾಡಿದ್ದಾಗಿ ತಿಳಿಸಿದ್ದಾರೆ. ಮಕ್ಕಳಿಗೆ ಯಾವುದೇ ಅಪಾಯವಿಲ್ಲ ಅಂತಾ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡುತ್ತೇನೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‍ಗೆ ಹೇಳಿದ್ದೇನೆ ಎಂದು ಸಿಸೋಡಿಯಾ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.