Tag: Gas Tanker

  • ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಟ್ಯಾಂಕರ್‌ನಿಂದ ಸೋರಿಕೆಯಾಗುತ್ತಿದೆ ಗ್ಯಾಸ್‌

    ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಟ್ಯಾಂಕರ್‌ನಿಂದ ಸೋರಿಕೆಯಾಗುತ್ತಿದೆ ಗ್ಯಾಸ್‌

    ಕಾರವಾರ: ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆ ಆಗುತ್ತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

    ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಎರಡು ಗ್ಯಾಸ್ ಟ್ಯಾಂಕರ್ ಹಾಗೂ ಒಂದು ಲಾರಿಯನ್ನು ನಿಲ್ಲಿಸಲಾಗಿತ್ತು. ಏಕಾಏಕಿ ಗುಡ್ಡ ಕುಸಿದ ಪರಿಣಾಮ ಒಂದು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಹೋಗಿ ಬಿದ್ದಿದೆ. ಇದನ್ನೂ ಓದಿ: ದಕ್ಷಿಣ ಭಾರತದ ಮೊದಲ ರೋಡ್-ಕಮ್-ರೈಲು ಮೇಲ್ಸೇತುವೆ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ

     

    ಗಂಗಾವಳಿ ನದಿ ವೇಗಕ್ಕೆ 7 ಕಿ.ಮೀ ದೂರಕ್ಕೆ ಕೊಚ್ಚಿ ಹೋಗಿರುವ ಟ್ಯಾಂಕರ್ ಈಗ ಸಗಡಗೇರಿ ಎಂಬಲ್ಲಿ ವಾಲಿ ನಿಂತಿದೆ. ಗ್ಯಾಸ್ ಟ್ಯಾಂಕರ್ ಸ್ಥಿತಿಯನ್ನು ಪರಿಶೀಲಿಸಲು ಬೋಟ್ ಮೂಲಕ ಭಾರತ್ ಗ್ಯಾಸ್‌ ತಜ್ಞರು ತೆರಳಿದಾಗ ಸೋರಿಕೆ ಆಗುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಒಮಾನ್‌ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್‌ – 13 ಭಾರತೀಯ ಸಿಬ್ಬಂದಿ ನಾಪತ್ತೆ

    ನೀರಿನಲ್ಲಿ ಕೊಚ್ಚಿ ಹೋಗಿರುವ ಟ್ಯಾಂಕರ್‌ನಲ್ಲಿರುವ ಅನಿಲವನ್ನು ಬೇರೆ ಟ್ಯಾಂಕರ್‌ಗೆ ವರ್ಗಾಯಿಸುವುದೇ ಹೇಗೆ ಎನ್ನುವುದೇ ತಜ್ಞರ ಮುಂದೆ ಇರುವ ದೊಡ್ಡ ಸವಾಲು.

     

    ಮಂಗಳೂರಿನಿಂದ ಧಾರವಾಡಕ್ಕೆ ಟ್ಯಾಂಕರ್‌ ತೆರಳುತ್ತಿತ್ತು. ಈ ಟ್ಯಾಂಕರ್‌ನಲ್ಲಿ ಸುಮಾರು 30 ಟನ್‌ ಅನಿಲವಿದೆ. ಸೋರಿಕೆ ಭೀತಿಯಿಂದ ಪರಿಸರದ ನಿವಾಸಿಗಳಿಗೆ ಬೆಂಕಿ ಒಲೆ ಮತ್ತು ವಿದ್ಯುತ್‌ ದೀಪ ಹಚ್ಚದಂತೆ ಜಿಲ್ಲಾಡಳಿತ ಸೂಚಿಸಿದೆ.

  • ಈರುಳ್ಳಿ ಸಾಗಿಸ್ತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ – ನಾಲ್ವರ ದುರ್ಮರಣ

    ಈರುಳ್ಳಿ ಸಾಗಿಸ್ತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ – ನಾಲ್ವರ ದುರ್ಮರಣ

    ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ 40ರಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ ಈರುಳ್ಳಿ ಲಾರಿಗೆ ಪಂಕ್ಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಎಂದು ಗುರುತಿಸಲಾಗಿದೆ.

    ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಾಟ ಮಾಡುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಯ ಬೆಂಗಾವಲು ವಾಹನ ಅಪಘಾತ – ಸಿಬ್ಬಂದಿಗೆ ಗಾಯ

  • ಶಿರಾಡಿ ಘಾಟ್‍ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ – 2 ಗಂಟೆ ಕಾರ್ಯಾಚರಣೆ ನಂತ್ರ ಚಾಲಕನ ರಕ್ಷಣೆ

    ಶಿರಾಡಿ ಘಾಟ್‍ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ – 2 ಗಂಟೆ ಕಾರ್ಯಾಚರಣೆ ನಂತ್ರ ಚಾಲಕನ ರಕ್ಷಣೆ

    ಹಾಸನ: ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.

    ಟ್ಯಾಂಕರ್ ಉರುಳಿಬಿದ್ದ ಪರಿಣಾಮ, ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಲಾರಂಭಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಾರನಹಳ್ಳಿ ಸಮೀಪ ಹಾಸನ ಮಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳಿಗೆ ನಿರ್ಬಂಧ ವಿಧಿಸಿ ಬದಲಿ ಮಾರ್ಗ ಕಲ್ಪಿಸಲಾಗಿದೆ. ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಇಂಜಿನ್ ಒಳಗೆ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಚಾಲಕ ಸಿಕ್ಕಿಹಾಕಿಕೊಂಡು ಆತಂಕ ಸೃಷ್ಟಿಯಾಗಿತ್ತು. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

    ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯರು, ಕ್ರೇನ್ ಸಹಾಯದಿಂದ ಚಾಲಕನ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಸುರಕ್ಷತಾ ದೃಷ್ಟಿಯಿಂದ ಗ್ಯಾಸ್ ಟ್ಯಾಂಕರ್ ಬಿದ್ದ ಸ್ಥಳದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ವಾಹನ ಸಂಚರಿಸಲು ಬದಲಿ ಮಾರ್ಗ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: 2023ರಲ್ಲೂ ಬೊಮ್ಮಾಯಿ ಸಿಎಂ ಆಗಿ ದಸರಾ ಉದ್ಘಾಟಿಸಲಿದ್ದಾರೆ: ಪ್ರತಾಪ್ ಸಿಂಹ

  • ಗ್ಯಾಸ್ ಟ್ಯಾಂಕರ್, ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ

    ಗ್ಯಾಸ್ ಟ್ಯಾಂಕರ್, ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ

    ಮಂಗಳೂರು: ಕಡಬ ತಾಲೂಕಿನ ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡು ಟ್ಯಾಂಕರ್ ಗಳ ಮುಂಭಾಗ ನಜ್ಜುಗುಜ್ಜಾಗಿದೆ.

    ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಡೀಸೆಲ್ ಟ್ಯಾಂಕರ್ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಹೊಸಮಜಲುವಿನಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಗ್ಯಾಸ್ ಸೋರಿಕೆ ಆಗಿಲ್ಲ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.

    ಎರಡೂ ಟ್ಯಾಂಕರ್ ಗಳು ಚಾಲಕರಿಗೂ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

  • ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್

    ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೂರಿಕುಮೇರು ಎಂಬಲ್ಲಿ ನಡೆದಿದೆ.

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮಧ್ಯೆಯೇ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದೆ. ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಈ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ.

    ಅದೃಷ್ಟವಶಾತ್ ಗ್ಯಾಸ್ ಅನಿಲ ಸೋರಿಕೆಯಾಗಿಲ್ಲ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆಯೇ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮನೆಗಳಲ್ಲಿ ಬೆಂಕಿ ಬಳಸದಂತೆ ಮೈಕ್ ನಲ್ಲಿ ಸೂಚನೆ ನೀಡಲಾಯಿತು. ಬಳಿಕ ಎಂಆರ್ ಪಿಎಲ್ ನಿಂದ ಪರಿಣಿತರ ತಂಡ ಆಗಮಿಸಿ ಟ್ಯಾಂಕರ್ ಸ್ಥಳಾಂತರ ಮಾಡಲಾಗಿದೆ.

  • ಗ್ಯಾಸ್ ಟ್ಯಾಂಕರ್ ಪಲ್ಟಿ – 40ಕ್ಕೂ ಹೆಚ್ಚು ಮನೆಗಳನ್ನು ಖಾಲಿ ಮಾಡಿಸಿದ ಪೊಲೀಸ್ರು

    ಗ್ಯಾಸ್ ಟ್ಯಾಂಕರ್ ಪಲ್ಟಿ – 40ಕ್ಕೂ ಹೆಚ್ಚು ಮನೆಗಳನ್ನು ಖಾಲಿ ಮಾಡಿಸಿದ ಪೊಲೀಸ್ರು

    – ಒಂದು ದಿನ ಹೆದ್ದಾರಿ ಸಂಚಾರ ಬಂದ್

    ಕಾರವಾರ: ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿಯ 66ರ ಹಂದಿಗೋಣದಲ್ಲಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿತ್ತು. ಹೀಗಾಗಿ ಸುತ್ತಮುತ್ತಲಿನ 40ಕ್ಕೂ ಹೆಚ್ಚು ಮನೆಗಳನ್ನು ಪೊಲೀಸರು ಖಾಲಿ ಮಾಡಿಸಿದ್ದಾರೆ.

    ಹುಬ್ಬಳ್ಳಿಯಿಂದ ಮಂಗಳೂರಿಗೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿತ್ತು, ಈ ವೇಳೆ ಟ್ಯಾಂಕರ್ ಹಿಂಭಾಗದಲ್ಲಿ ಗ್ಯಾಸ್ ಸೋರಿಕೆಯಾಗುತಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಫೋಟಗೊಳ್ಳದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದರು. ಈ ವೇಳೆ ಕಾರವಾರ-ಮಂಗಳೂರು ಚತುಷ್ಪತ ಹೆದ್ದಾರಿಯನ್ನು ಬಂದ್ ಮಾಡಿದ್ದು, ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಿದ್ದರು.

    ಆದರೇ ಸಂಜೆ ವೇಳೆಗೆ ಟ್ಯಾಂಕರ್ ನಲ್ಲಿ ಸೋರಿಕೆ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ಕುಮಟಾ ತಾಲೂಕಿನ ಹಂದಿಗೊಣದ ಹೆದ್ದಾರಿ ಸುತ್ತಮುತ್ತಲ ಪ್ರದೇಶದ 40 ಮನೆಗಳಲ್ಲಿನ ನಿವಾಸಿಗಳನ್ನು ಮನೆಯಿಂದ ಖಾಲಿ ಮಾಡಿಸಲಾಗಿದೆ. ಇದಲ್ಲದೇ ಹೆದ್ದಾರಿ ಸಂಚಾರವನ್ನು ಸಹ ಒಂದು ದಿನದವರೆಗೆ ಬಂದ್ ಮಾಡಲಾಗಿದೆ.

    ಕುಮಟಾದ ಬರ್ಗಿಯಲ್ಲಿ ನಡೆದಿತ್ತು ದುರಂತ
    ಕಳೆದ ಐದು ವರ್ಷದ ಹಿಂದೆ ಕುಮಟಾದ ಬರ್ಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡಿತ್ತು. ಈ ವೇಳೆ ಬರ್ಗಿಯ ಹೆದ್ದಾರಿ ಬಳಿ ಇದ್ದ ಮನೆಗಳು ಸಂಪೂರ್ಣ ಹೊತ್ತಿ ಉರಿದಿದ್ದು 13 ಜನ ಸಾವನ್ನಪ್ಪಿದ್ದರು. ಹೀಗಾಗಿ ಮತ್ತೆ ಇದೇ ಮಾದರಿಯಲ್ಲಿ ದುರಂತ ನಡೆಯಬಾರದು ಎಂಬ ಮುನ್ನೆಚ್ಚರಿಕೆಯಿಂದ ಕುಮಟಾ ಪೊಲೀಸರು ಹಂದಿಗೋಣ ಗ್ರಾಮದ ಹೆದ್ದಾರಿ ಬಳಿಯ ಸುತ್ತಮುತ್ತಲ ನಿವಾಸಿಗಳಿಗೆ ಬೇರೆಡೆ ತೆರಳಲು ಸೂಚಿಸಿದರು. ಸುತ್ತಮುತ್ತಲ ಜನರು ಮನೆ ಖಾಲಿ ಮಾಡಿ ಸಂಬಂಧಿಕರ ಮನೆಗೆ ತೆರಳಿದ್ದಾರೆ.

  • ಗ್ಯಾಸ್ ಟ್ಯಾಂಕರ್‌ನಲ್ಲಿ ಅವಿತು ಬಂದು ಇಳಿಯುವಾಗ ಸಿಕ್ಕಿಬಿದ್ದ 12 ಮಂದಿ

    ಗ್ಯಾಸ್ ಟ್ಯಾಂಕರ್‌ನಲ್ಲಿ ಅವಿತು ಬಂದು ಇಳಿಯುವಾಗ ಸಿಕ್ಕಿಬಿದ್ದ 12 ಮಂದಿ

    ಗದಗ: ಲಾಕ್‍ಡೌನ್ ಹಿನ್ನೆಲೆ ಗುಳೆಹೋಗಿದ್ದ 12 ಜನರನ್ನು ಮೆಡಿಕಲ್ ಎಮರ್ಜೆನ್ಸಿ ಪ್ರೈಮ್ ಗ್ಯಾಸ್ ವಾಹನದಲ್ಲಿ ಕರೆತಂದು ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಹೊರವಲಯದಲ್ಲಿ ಕಂಡುಬಂದಿದೆ.

    ಮಂಗಳೂರನಲ್ಲಿ ಗ್ಯಾಸ್ ಖಾಲಿ ಮಾಡಿ, ಗದಗಕ್ಕೆ ಮರಳಿ ಬರುವ ವೇಳೆ ಮಾರ್ಗ ಮಧ್ಯೆ 12 ಜನರನ್ನು ಚಾಲಕ, ಕ್ಲೀನರ್ ಕರೆತಂದಿದ್ದಾರೆ. ಈ ಗ್ಯಾಸ್ ಟ್ಯಾಂಕರ್‌ನಲ್ಲಿ 12 ಜನರನ್ನು ಕರೆತಂದಿರೋದಾದ್ರೂ ಹೇಗೆ? ಮುಂದಿನ ಕ್ಯಾಬಿನ್‍ನ ಎಂಜಿನ್ ಬಳಿ 12 ಜನರ ಜೊತೆ ಚಾಲಕ, ಕ್ಲೀನರ್ ಕೂತು ಬರಲು ಸಾಧ್ಯವೇ ಇಲ್ಲ. ಇದರಲ್ಲಿ ಮಕ್ಕಳು ಸಹ ಇದ್ದಾರೆ. ಹಾಗಾದ್ರೆ ಹಣದ ಆಸೆಗೆ ಟ್ಯಾಂಕರ್‌ನಲ್ಲಿ ಏನಾದ್ರೂ ಕರೆತಂದರಾ? ಚಾಲಕ, ಕ್ಲೀನರ್‌ನ ಎಡವಟ್ಟಿನಿಂದ ಅಕಸ್ಮಾತ್ ಏನಾದರೂ ಜೀವಕ್ಕೆ ಹಾನಿಯಾಗಿದ್ರೆ ಹೊಣೆಯಾರು ಎಂಬ ಹತ್ತು ಹಲವು ಪ್ರಶ್ನೆ ಕಾಡತೊಡಗಿದೆ.

    ಹೀಗೆ ಗ್ಯಾಸ್ ಟ್ಯಾಂಕರ್‌ನಲ್ಲಿ ಬಂದ ಜನರು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಾಲವಾಡಗಿ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರ ಮೂಲದ ಕೂಲಿ ಕಾರ್ಮಿಕರು. ಕಳೆದ ಎರಡು ತಿಂಗಳ ಹಿಂದಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‍ಗೆ ಇವರು ಗುಳೆ ಹೋಗಿದ್ದರು. ಲಾಕ್‍ಡೌನ್ ಹಿನ್ನೆಲೆ ಕೆಲಸವಿಲ್ಲದೆ, ಆಹಾರವೂ ಇಲ್ಲದ ಪರದಾಡುತ್ತಾ ಗ್ರಾಮಕ್ಕೆ ವಾಪಾಸ್ ಆಗುತ್ತಿದ್ದರು. ಸುರತ್ಕಲ್‍ನಿಂದ ನಡೆದುಕೊಂಡು ಬರುವ ವೇಳೆ ಮಾರ್ಗ ಮಧ್ಯೆ ಕೂಲಿ ಕಾರ್ಮಿಕರನ್ನು ಹತ್ತಿಸಿಕೊಂಡಿರುವುದಾಗಿ ಚಾಲಕ ಬಾಯಿಬಿಟ್ಟಿದ್ದಾನೆ. ಆದರೆ ಒಬ್ಬರಿಗೆ 1 ಸಾವಿರ ರೂ. ನೀಡುವಂತೆ ಬೇಡಿಕೆಯಿಟ್ಟು ವಾಹನದಲ್ಲಿ ಕರೆತಂದಿರುವ ಆರೋಪ ಕೂಡ ಕೇಳಿಬರುತ್ತಿದೆ.

    ಲಕ್ಷ್ಮೇಶ್ವರ ಹೊರವಲಯದಲ್ಲಿ ಟ್ಯಾಂಕರ್‌ನಿಂದ ಕೆಳಗೆ ಇಳಿಸುವ ವೇಳೆ ಕೂಲಿ ಕಾರ್ಮಿಕರು ಹಾಗೂ ಚಾಲಕ, ಕ್ಲೀನರ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸದ್ಯ ಈ 12 ಜನರನ್ನು ವೈದ್ಯಕೀಯ ತಪಾಸಣೆಗೆ ಲಕ್ಷ್ಮೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಂತರ ಮೊರಾರ್ಜಿ ವಸತಿ ಶಾಲೆಯ 12 ಜನರನ್ನೂ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತೆ. ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ.

  • ಕಂಟೇನರ್ ಲಾರಿ, ಗ್ಯಾಸ್ ಟ್ಯಾಂಕರ್ ಡಿಕ್ಕಿ- ನಾಲ್ವರು ಸಜೀವ ದಹನ

    ಕಂಟೇನರ್ ಲಾರಿ, ಗ್ಯಾಸ್ ಟ್ಯಾಂಕರ್ ಡಿಕ್ಕಿ- ನಾಲ್ವರು ಸಜೀವ ದಹನ

    ದಾವಣಗೆರೆ: ಕಂಟೇನರ್ ಲಾರಿ ಹಾಗೂ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದು ಇಬ್ಬರು ಚಾಲಕ ಹಾಗೂ ಕ್ಲೀನರ್ ಸೇರಿದಂತೆ ನಾಲ್ವರು ಸಜೀವ ದಹನವಾಗಿದ್ದಾರೆ.

    ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ಘಟನೆ ನಡೆದಿದ್ದು, ಹರಿಯಾಣ ರಾಜ್ಯಕ್ಕೆ ಸೇರಿದ ಗ್ಯಾಸ್ ಟ್ಯಾಂಕರ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ಟಯರ್ ಗಳನ್ನು ತುಂಬಿದ್ದ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡಿದೆ. ಗ್ಯಾಸ್ ಟ್ಯಾಂಕರ್ ನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದು, ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಅಪಘಾತದ ಹಿನ್ನಲೆ ದಟ್ಟವಾದ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ವಾಹನಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಿದ್ದವು.

    ಕಂಟೇನರ್ ಲಾರಿಯಲ್ಲಿದ್ದ ಇನ್ನಿಬ್ಬರು ಕೂಡ ಸಜೀವ ದಹನವಾಗಿರಬಹುದು ಎಂದು ಅಗ್ನಿಶಾಮಕ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಂಟೇನರ್ ಲಾರಿ ಹಾಗೂ ಟ್ಯಾಂಕರ್ ನಲ್ಲಿ ಒಟ್ಟು 4 ಮಂದಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದ್ದು, ಟ್ಯಾಂಕರ್ ನಿಂದ ದಟ್ಟ ಹೊಗೆ ಬರುತ್ತಿದ್ದ ಹಿನ್ನೆಲೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

    ಸ್ಥಳಕ್ಕೆ ಜಗಳೂರು ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ.

  • ಗ್ಯಾಸ್ ಟ್ಯಾಂಕರ್ ಪಲ್ಟಿ – ಸ್ವಲ್ಪದರಲ್ಲೇ ತಪ್ಪಿದ ಭಾರೀ ಅನಾಹುತ

    ಗ್ಯಾಸ್ ಟ್ಯಾಂಕರ್ ಪಲ್ಟಿ – ಸ್ವಲ್ಪದರಲ್ಲೇ ತಪ್ಪಿದ ಭಾರೀ ಅನಾಹುತ

    ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಆದ ಘಟನೆ ಉಡುಪಿಯ ಬಲಾಯಿಪಾದೆಯಲ್ಲಿ ನಡೆದಿದೆ.

    ಇಂದು ಬೆಳಗ್ಗಿನ ಜಾವ ಚಾಲಕ ಯೂ ಟರ್ನ್ ಮಾಡುವ ಸಂದರ್ಭದಲ್ಲಿ ಟ್ಯಾಂಕರ್ ಮಗುಚಿ ಬಿದ್ದಿದೆ. ಈ ಅವಘಡದಿಂದ ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ವಿಷಯ ತಿಳಿದು ಅಗ್ನಿಶಾಮಕ ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

    ಮುನ್ನೆಚ್ಚರಿಕಾ ಕ್ರಮವಾಗಿ ಒಂದು ಭಾಗದ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಸದ್ಯ ಗ್ಯಾಸ್ ಸೋರಿಕೆ ಇಲ್ಲ ಎಂದು ದೃಢಪಡಿಸಿದ ಅಗ್ನಿಶಾಮಕ ದಳ ಟ್ಯಾಂಕರ್ ಮೇಲೆ ಎತ್ತುವ ತನಕ ಸಾರ್ವಜನಿಕರು ಟ್ಯಾಂಕರ್‍ನಿಂದ ದೂರ ಇರಲು ಸೂಚಿಸಿದ್ದಾರೆ.

    ಈ ಘಟನೆ ನಡೆದ ಸ್ಥಳದ ಅಂಗಡಿಗಳನ್ನು ಮುಚ್ಚಿಸಿದ ಪೊಲೀಸರು ಮೊಬೈಲ್ ಬಳಸದಂತೆ, ಸುತ್ತಮುತ್ತ ಬೆಂಕಿ ಹಚ್ಚದಂತೆ ತಿಳಿಸಿದ್ದಾರೆ.

  • ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸೋರಿಕೆ- ಆಸುಪಾಸಿನಲ್ಲಿ ಬೆಂಕಿ ಉರಿಸದಂತೆ ಸೂಚನೆ

    ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸೋರಿಕೆ- ಆಸುಪಾಸಿನಲ್ಲಿ ಬೆಂಕಿ ಉರಿಸದಂತೆ ಸೂಚನೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಗ್ಯಾಸ್ ಸೋರಿಕೆಯಾದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.

    ಭಾರತ್ ಗ್ಯಾಸ್ ಸಂಸ್ಥೆಗೆ ಸೇರಿದ್ದ ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಇಂದು ಮುಂಜಾನೆ ಉಪ್ಪಿನಂಗಡಿ ಬಳಿಯ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ. ಬಿದ್ದ ರಭಸಕ್ಕೆ ಟ್ಯಾಂಕರಿನಲ್ಲಿದ್ದ ಅಪಾರ ಪ್ರಮಾಣದ ಗ್ಯಾಸ್ ಸೋರಿಕೆಯಾಗುತ್ತಿದೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆಸುಪಾಸಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಬೆಂಕಿ ಉರಿಸದಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಕಾರ್ಯಾಚರಣೆ ಮುಗಿಯುವವರೆಗೂ ಮಂಗಳೂರು ಹಾಗೂ ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ.

    ಪೆರ್ನೆ ದುರಂತ:
    2013ರ ಏಪ್ರಿಲ್ 9ರಂದು ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಮಗುಚಿಬಿದ್ದು, ಬೆಂಕಿ ಹತ್ತಿಕೊಂಡ ಪರಿಣಾಮ ಪರಿಸರದ ಮನೆಗಳಿಗೆ ಅಗ್ನಿ ವ್ಯಾಪಿಸಿ ಸ್ಥಳೀಯರು ಮತ್ತು ಇತರ ವಾಹನಗಳಲ್ಲಿ ಬಂದ ಒಟ್ಟು 13 ಮಂದಿ ಬಲಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv