ಒಳಚರಂಡಿ ಮೇಲೆ ಬ್ಯಾಂಕೊಂದರ ಕಟ್ಟಡ ನಿರ್ಮಿಸಲಾಗಿದೆ. ಒಳಚರಂಡಿಯಲ್ಲಿ ಶೇಖರಣೆಯಾಗಿದ್ದ ಅನಿಲಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಟ್ಟಡ ಕುಸಿದಿದೆ. ತನಿಖೆ ಬಳಿಕದ ಸ್ಫೋಟಕ್ಕೆ ಏನು ಕಾರಣ ಎಂಬುದು ತಿಳಿಯಲಿದೆ ಎಂದು ಕರಾಚಿ ಆಡಳಿ ತಾಧಿಕಾರಿ ಮುರ್ತಜಾ ವಹಾಬ್ ಹೇಳಿದ್ದಾರೆ. ಇದನ್ನೂ ಓದಿ: 7 ವರ್ಷದಲ್ಲಿ ಅವರೇನು ಮಾಡಿದ್ದಾರೆ? – ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಮುಂಬೈ: ಕೋವಿಡ್-19 ಲಸಿಕೆ ಪಡೆಯದೇ ಇರುವವರಿಗೆ ಪಡಿತರ, ಅಡುಗೆ ಅನಿಲ, ಪೆಟ್ರೋಲ್ ನೀಡುವುದಿಲ್ಲ ಎಂದು ಮಹರಾಷ್ಟ್ರದ ಔರಂಗಾಬಾದ್ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕನಿಷ್ಠ ಪಕ್ಷ ಒಂದು ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಪಡಿತರ, ಅಡುಗೆ ಅನಿಲ, ಪೆಟ್ರೋಲ್ ಅನ್ನು ನೀಡುವಂತೆ ಸಂಬಂಧಪಟ್ಟ ಅಂಗಡಿಗಳ ಮಾಲೀಕರಿಗೆ ಸೂಚನೆ ನೀಡಿದೆ. ಕೋವಿಡ್ ಲಸಿಕೆ ನೀಡಿಕೆಯಲ್ಲಿ ಪ್ರಗತಿ ಸಾಧಿಸಿದ 36 ಜಿಲ್ಲೆಗಳ ಪೈಕಿ ಔರಂಗಾಬಾದ್ 26ನೇ ಸ್ಥಾನ ಪಡೆದಿದೆ. ಇದನ್ನೂ ಓದಿ: ಜೈಲಿನಿಂದ ರಿಲೀಸ್ ಬಳಿಕ ಫಸ್ಟ್ ಟೈಂ ಪತ್ನಿ ಜೊತೆ ಕಾಣಿಸಿಕೊಂಡ ರಾಜ್ ಕುಂದ್ರಾ
ಈ ಆದೇಶವು ಮಂಗಳವಾರ ರಾತ್ರಿಯಿಂದಲೇ ಜಾರಿಗೆ ಬಂದಿದೆ. ನ್ಯಾಯ ಬೆಲೆ ಅಂಗಡಿ, ಗ್ಯಾಸ್ ಸಂಸ್ಥೆಗಳು ಹಾಗೂ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರು ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರ ಪರಿಶೀಲಿಸಿ ನಂತರ ನೀಡಬೇಕು ಎಂದು ಮಾಲೀಕರಿಗೆ ಜಿಲ್ಲಾಧಿಕಾರಿ ಸುನಿಲ್ ಛವಾನ್ ನಿರ್ದೇಶನ ನೀಡಿದ್ದಾರೆ. ಆದೇಶ ಪಾಲನೆಯಾಗದಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಎಷ್ಟೋ ಮಂದಿ ಬೆಳಿಗ್ಗೆಯಿಂದ ಸಂಜೆವರೆಗೂ ಜಮೀನುಗಳಲ್ಲಿ ಕೆಲಸ ಮಾಡುವವರಿದ್ದಾರೆ. ಅಂತಹವರಿಗೆ ಸಂಜೆ 5ರಿಂದ ರಾತ್ರಿ 8 ಗಂಟೆವರೆಗೆ ಲಸಿಕೆ ನೀಡಲಾಗುವುದು ಎಂದು ಜಿಲ್ಲಾ ಪರಿಷತ್ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಈವರೆಗೆ ಶೇ. 74ರಷ್ಟು ಲಸಿಕೆ ನೀಡಲಾಗಿದ್ದು, ಔರಂಗಾಬಾದ್ ಜಿಲ್ಲೆಯಲ್ಲಿ ಶೇ. 55 ಆಗಿದೆ.
ಹುಬ್ಬಳ್ಳಿ: ಪೆಟ್ರೋಲ್, ಡೀಸೆಲ್ ಮಾತ್ರವಲ್ಲ. ಗ್ಯಾಸ್, ಅಡುಗೆ ಎಣ್ಣೆ ದರವೂ ಕಡಿಮೆ ಆಗಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾನಗಲ್ ಮತದಾರರ ಬಗ್ಗೆ ನನಗೆ ಮೊದಲೇ ನಂಬಿಕೆ ಇತ್ತು. ರೈತರು, ಕಾರ್ಮಿಕರು, ಬೀದಿ ವ್ಯಾಪಾರಿಗಳ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿರಲಿಲ್ಲ. ಸರ್ಕಾರದಿಂದಲೇ ನಿತ್ಯ ಜನರ ಪಿಕ್ ಪಾಕೆಟ್ ಆಗುತ್ತಿತ್ತು. ಇದರಿಂದ ಬೇಸತ್ತು ಹಾನಗಲ್ ಜನರು ಉತ್ತರ ಕೊಟ್ಟಿದ್ದಾರೆ. ಜನರು ಕೊಟ್ಟ ಉತ್ತರ ನೋಡಿ ಬೊಮ್ಮಾಯಿ, ಮೋದಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದ್ದಾರೆ. ಈಗ ಬಿಜೆಪಿ ನಾಯಕರಿಗೆ ತಿಳುವಳಿಕೆ ಬಂದಿದೆ ಎಂದು ಟಾಂಗ್ ನೀಡಿದರು.
ಇನ್ನೂ ಗ್ಯಾಸ್, ಅಡುಗೆ ಎಣ್ಣೆ, ಮೋದಿ ಪಕೋಡ ಕರಿಯಲು ಎಣ್ಣೆ ದರ ಕಡಿಮೆ ಆಗಬೇಕಿದೆ. ದರ ಕಡಿಮೆ ಆಗದಿದ್ದರೆ ಮುಂದಿನ ಚುನಾವಣೆಯಲ್ಲೂ ಇದೇ ಉತ್ತರ ಸಿಗಲಿದೆ. ನನ್ನ ದೃಷ್ಟಿ 2023ರ ಚುನಾವಣೆ ಮೇಲಿದೆ. ಹಾನಗಲ್ ಗ್ರಾಮ ದೇವತೆಗೆ ಬೇಡಿಕೊಂಡಿದ್ದೆ. ಈಗ ದೇವಿ ವರಕೊಟ್ಟಿದ್ದಾಳೆ. ಅದಕ್ಕೆ ದೇವರ ಆಶೀರ್ವಾದ ಪಡೆಯಲು ಹೊರಟಿದ್ದೇನೆ. ಎಲ್ಲ ಜಾತಿ, ಧರ್ಮ, ಜನಾಂಗ ನಮಗೆ ಬೆಂಬಲ ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ
ಹಾನಗಲ್ ಸಿಎಂ ಅವರ ತವರು ಜಿಲ್ಲೆಯ ಕ್ಷೇತ್ರ. ಅವರು ಸಿಂದಗಿಯಲ್ಲಿ ಗೆದ್ದಿದ್ದು ಜೆಡಿಎಸ್ ಸ್ಥಾನ, ಇಲ್ಲಿ ನಾವು ಬಿಜೆಪಿ ಸೀಟ್ ಗೆದ್ದಿದ್ದೇವೆ. ಹಾನಗಲ್ ನನ್ನ ಮನೆ ಅಂತ ನಾನು ಹೇಳಿರಲಿಲ್ಲ, ನಾನು ಹಾನಗಲ್ ಅಳಿಯ, ಹಾನಗಲ್ ಮೊಮ್ಮಗ ಅಂತ ಹೇಳಿರಲಿಲ್ಲ. ಅವರು ಹೇಳಿದ್ದು, ಅಷ್ಟು ಮಾತ್ರ ಅವರಿಗೆ ನೆನಪಿಸಲು ಬಯಸುತ್ತೇನೆ. ಅವರ ಮಂತ್ರಿಗಳೆಲ್ಲ ಇಲ್ಲಿಯೇ ಬೀಡುಬಿಟ್ಟಿದ್ದರು. ಹಾನಗಲ್ ಜನರು ನನ್ನ ಗೌರವ ಉಳಿಸಿ ಅಂತ ಯಾರು ಕೇಳಿದ್ದರು. ಅಲ್ಲದೇ ಬಸವರಾಜ ಬೊಮ್ಮಾಯಿ ಅವರು ಫಲಿತಾಂಶ ಬರುವ ಮುನ್ನವೇ ಹಾನಗಲ್‌ನಲ್ಲಿ ಸೋಲೊಪ್ಪಿಕೊಂಡಿದ್ದರು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಪುನೀತ್ ಮಾಡುತ್ತಿದ್ದ ಕೆಲಸಕ್ಕೆ ನಾನೂ ಕೈ ಜೋಡಿಸುತ್ತೇನೆ: ರೇಣುಕಾಚಾರ್ಯ
ಬಿಟ್ ಕಾಯಿನ್ ಪ್ರಕರಣ ಇಡಿ ಹಾಗೂ ಸಿಬಿಐಗೆ ಕೊಟ್ಟಿದೀವಿ ಅಂತ ಹೇಳುತ್ತಾರೆ. ಅವರೇ ಅದರ ಬಗ್ಗೆ ವಿವರಣೆ ಕೊಡಬೇಕು. ನಾನು ಯಾವುದೇ ರಾಜಕಾರಣಿ ಬಗ್ಗೆ ಮಾತಾಡಿಲ್ಲ. ಪ್ರಕರಣ ತನಿಖೆ ಬಗ್ಗೆ ಸಾರ್ವಜನಿಕವಾಗಿ ಜನರಿಗೆ ಇಡಿ ಸ್ಪಷ್ಟಪಡಿಸಲಿ ಹಾಗೂ ಸಿಬಿಐಗೆ ಬರೆದಿರುವ ಪತ್ರ ಬಹಿರಂಗಪಡಿಸಲಿ. ನಾವು ಸಹ RTI ಮೂಲಕ ಅರ್ಜಿ ಸಲ್ಲಿಸಲಿದ್ದೇವೆ ಎಂದು ಹೇಳಿದರು.
ನವದೆಹಲಿ: ಅಕ್ಟೋಬರ್ ತಿಂಗಳ ಆರಂಭದಲ್ಲಿ ಅನಿಲ ದರ ಹೆಚ್ಚಳದ ಶಾಕ್ ನೀಡಿದ ತೈಲ ಕಂಪನಿಗಳು ಇದೀಗ, ಎಲ್‍ಪಿಜಿ ಸಿಲಿಂಡರ್ ದರ 15 ರೂಪಾಯಿ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಇನ್ನಷ್ಟು ಹೊರೆಯಾಗಿಸಿದೆ.
ಈಗಾಗಲೇ ಸಿಲಿಂಡರ್ ದರ 15 ರೂ ಏರಿಕೆ ಬಳಿಕ ಕರ್ನಾಟಕದಲ್ಲಿ ಸಿಲಿಂಡರ್ ದರ 902.2ರೂ ಆಗಲಿದ್ದು, ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ದರ 899.50 ರೂ ಆಗಿದೆ. 5 ಕೆಜಿ ಸಿಲಿಂಡರ್ ದರ 502ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಪೆಟ್ರೋಲ್ ಲೀಟರ್‌ಗೆ 30 ಪೈಸೆ ಏರಿಕೆ ಕಂಡು 102ರೂ ಗಡಿದಾಟಿದೆ. ಡಿಸೇಲ್ ಪ್ರತಿ ಲೀಟರ್‌ಗೆ 34-37 ಪೈಸೆ ಏರಿಕೆ ಕಂಡು 91.42ರೂಪಾಯಿ ತಲುಪಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಲಖೀಂಪುರ್ ಭೇಟಿಗೆ ಅವಕಾಶವಿಲ್ಲವೆಂದ ಯೋಗಿ ಸರ್ಕಾರ
ಧಾರವಾಡ: ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ ಕಾರ್ಯಕರ್ತೆಯರು, ತಕ್ಷಣ ಅಡುಗೆ ಅನಿಲ ಹಾಗೂ ಪೆಟ್ರೋಲ್ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.
ಪೆಟ್ರೋಲ್ ದರ ನೂರರ ಗಡಿ ದಾಟಿದೆ, ಅದೇ ರೀತಿ ಅಡುಗೆ ಅನಿಲ ದರ ಸಹ 800 ಗಡಿ ದಾಟಿದೆ. ಸರ್ಕಾರ ರಚನೆಯಾಗುವ ಮೊದಲು ಇದೇ ಬಿಜೆಪಿ ಸರ್ಕಾರಗಳು ಜನರಿಗೆ ಸುಳ್ಳು ಬರವಸೆ ನೀಡಿ, ಈಗ ಬೆಲೆ ಹೆಚ್ಚಳ ಮಾಡಿವೆ ಎಂದು ಕಾಂಗ್ರೆಸ್ ಮಹಿಳಾ ಮುಖಂಡೆ ಶಾಂತಮ್ಮ ಗುಜ್ಜಳ ಆರೋಪಿಸಿದರು.
ಹೈದರಾಬಾದ್: ದೇಶಾದ್ಯಂತ ಇಂಧನ ಬೆಲೆ ಗಗನಕ್ಕೆ ಏರಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ತೆಲಂಗಾಣದಲ್ಲಿ ಬೈಕ್ ಒಂದನ್ನು ಕೆರೆಗೆ ಎಸೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ದೇಶದಲ್ಲಿ ಪ್ರತಿದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ತೆಲಂಗಾಣದಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿ ನಗರದ ಪಕ್ಕದಲ್ಲಿದ್ದ ಹುಸೇನ್ ಸಾಗರ್ ಕೆರೆಗೆ ಬೈಕ್ ಒಂದನ್ನು ಎಸೆದು ಆಕ್ರೋಶ ಹೊರಹಾಕಿದೆ. ಇದೀಗ ಈ ಬೈಕ್ ಎಸೆಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ರಾತ್ರೋರಾತ್ರಿ ಕೊರೊನಾ ದೇವಿ ದೇವಸ್ಥಾನ ನಿರ್ಮಾಣ, ಬೆಳಗ್ಗೆ ನೆಲಸಮ
ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ಎನ್, ಉತ್ತಮ್ ಕುಮಾರ್ ರೆಡ್ಡಿ, ಎ ರೇವಂತ್ ರೆಡ್ಡಿ, ಪೊನ್ನಮ್ ಪ್ರಭಾಕರ್, ಜಯಪ್ರಕಾಶ್ ರೆಡ್ಡಿ, ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದು, ಸ್ಥಳೀಯ ಪೆಟ್ರೋಲ್ ಬಂಕ್‍ನಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ. ದೇಶದಲ್ಲಿ ಹೆಚ್ಚಳವಾಗಿರುವ ಪೆಟ್ರೋಲ್, ಡೀಸೆಲ್ ಸೇರಿ ತೈಲ ಬೆಲೆ ಇಳಿಕೆಯಾಗಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪೆಟ್ರೋಲ್ ಬೆಲೆ ವಿರೋಧಿಸಿ ಪ್ರತಿಭಟನೆಯಲ್ಲಿ ಬೈಕ್‍ನ್ನು ಎಸೆದ ವೀಡಿಯೋ ನೋಡಿದ ಸಾವಿರಾರು ಮಂದಿ ನೆಟ್ಟಿಗರು, ಈ ಪ್ರತಿಭಟನೆಯನ್ನು ಕಂಡು ಅಚ್ಚರಿ ವ್ಯಕ್ತಪಡಿಸಿ, ವಿವಿಧ ಬಗೆಯ ಕಾಮೆಂಟ್ ಮಾಡುತ್ತಿದ್ದಾರೆ.
ಕಲಬುರಗಿ: ಪಕ್ಕದ ಮನೆಯವರ ಗ್ಯಾಸ್ ಬಳಸಲು ಹೋಗಿ ಮನೆಗೇ ಬೆಂಕಿ ಹೊತ್ತಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ.
ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಮನೆ ಸುಟ್ಟು ಕರಕಲಾಗಿದೆ. ಫಾತಿಮಾ ಎನ್ನುವ ಚಿಕನ್ ವ್ಯಾಪಾರಿಯ ಮನೆ, ನಗದು, ಧವಸ ಧಾನ್ಯ ಅಗ್ನಿಗಾಹುತಿಯಾಗಿದೆ. ಬೆಂಕಿ ಹತ್ತಿಕೊಂಡ ತಕ್ಷಣ ಮನೆ ಬಿಟ್ಟು ಹೊರಹೋಗಿದ್ದರಿಂದ ಮಹಿಳೆ ಭಾರೀ ಅನಾಹುತದಿಂದ ಪಾರಾಗಿದ್ದಾರೆ.
ಪಕ್ಕದ ಮನೆಯವರು ಊರಿಗೆ ಹೋಗುವಾಗ ಫಾತಿಮಾಗೆ ತಮ್ಮ ಗ್ಯಾಸ್ ಬಳಸಲು ಕೊಟ್ಟಿದ್ದರು. ಆದರೆ ಗ್ಯಾಸ್ ಲೀಕೇಜ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಮನೆ ಕಟ್ಟಲು ಅಂತ ಫಾತಿಮಾ ಕೂಡಿಟ್ಟಿದ್ದ ಎರಡು ಲಕ್ಷ ರೂ. ನಗದು ಬೆಂಕಿಗಾಹುತಿಯಾಗಿದೆ.
ಅರ್ಧಭಾಗ ಸುಟ್ಟು ಕರಕಲಾದ ನೂರಾರು ನೋಟುಗಳು ಬೆಂಕಿಗಾಹುತಿಯಾದ ಮನೆಯಲ್ಲಿ ಪತ್ತೆಯಾಗಿವೆ. 9 ಕೋಳಿಗಳು, ಫ್ರಿಡ್ಜ್, ಧವಸಧಾನ್ಯ, ಬಟ್ಟೆ ಬರೆ ಸೇರಿ ಒಂದು ಲಕ್ಷ ಎಂಬತ್ತು ಸಾವಿರ ರೂ. ವಸ್ತುಗಳು ಭಸ್ಮವಾಗಿವೆ.
ಈ ಕುರಿತು ಚಿತ್ತಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಗ: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಗದಗನಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಬೀದಿಯಲ್ಲಿ ಅಡುಗೆ ತಯಾರಿಸುವ ಮೂಕಲವಾಗಿ ವಿಭಿನ್ನವಾಗಿ ಹೋರಾಟ ಮಾಡಿದ್ದಾರೆ.
ಸಿಲಿಂಡರ್ ಗೆ ಹೂವಿನ ಹಾರ ಹಾಕಿ ಅದನ್ನು ಬದಿಗಿಟ್ಟು, ಕಟ್ಟಿಗೆ ಉರಿಸಿ ಅಡುಗೆ ಮಾಡಿದರು. ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪ್ರತಿಭಟಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕವಾಗಿ ಆಕ್ರೋಶ ಹೊರಹಾಕಿದರು.
ಸಿಲಿಂಡರ್, ಪಾತ್ರೆಗಳನ್ನು ತಲೆ ಮೇಲೆ ಹೊತ್ತು ಪ್ರತಿಭಟಿಸಿದರು. ದುಬಾರಿಯಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ಬೀದಿಗೆ ಬಂದಿದೆ. ಬೀದಿಯಲ್ಲಿ ತರತರನಾದ ಅಡುಗೆ ಮಾಡಿದರು. ಜಗತ್ತಿನಲ್ಲಿ ಪೆಟ್ರೋಲ್, ಡೀಸೆಲ್ ಉತ್ಪನ್ನಗಳಿಗೆ ಅತಿ ಹೆಚ್ಚು ತೆರಿಗೆಯನ್ನು ವಿಧಿಸುತ್ತಿರುವ ದೇಶ ನಮ್ಮ ಭಾರತ ದೇಶವಾಗಿದೆ.
ಸಾಮಾನ್ಯರ ಜೀವಮಾನದ ಹಣವನ್ನು ಕಾರ್ಪೋರೇಟ್ ಕುಳಗಳಿಗೆ ಧಾರೆಯೆರೆದು, ಬಡವರನ್ನು ಕೂಪಕ್ಕೆ ತಳ್ಳುವ ಸರ್ಕಾರವಾಗಿದೆ. ಶ್ರೀಮಂತರಿಗೆ ಸರ್ಕಾರ ಸೈ ಎನಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಈ ಪ್ರತಿಭಟನೆಯಲ್ಲಿ ಅನೇಕ ಮಹಿಳೆಯರು ಪಾಲ್ಗೊಂಡಿದ್ದರು.
ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯಿಂದ ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿರುವುದನ್ನು ವಿರೋಧಿಸಿ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸಿದ್ದಲಿಂಗಯ್ಯ ವೃತ್ತದಿಂದ ಬೈಕ್‍ಗಳನ್ನು ತಳ್ಳಿಕೊಂಡು ಖಾಲಿ ಸಿಲಿಂಡರ್ ತಲೆ ಮೇಲೆ ಹೊತ್ತು ಮೆರವಣಿಗೆ ಮಾಡಿ ಪ್ರತಿಭಟನೆ ನಡೆಸಿದರು.
ಕಳೆದ ವರ್ಷದಿಂದ ಇಡೀ ಜಗತ್ತನ್ನೆ ಕಾಡಿದ ಮಹಾಮಾರಿ ಕರೊನಾ ವೈರಸ್ ಭಾರತದ ಮಧ್ಯಮ ವರ್ಗದವರ ಪಾಲಿಗೆ ಸಹಿಸಲಾರದ ಪೆಟ್ಟು ನೀಡಿತ್ತು ಹಲವಾರು ಕಂಪನಿಗಳು ಬಾಗಿಲು ಮುಚ್ಚಿದ ಪರಿಣಾಮ ಕಾರ್ಮಿಕರು ನಿರುದ್ಯೋಗಿಗಳಾದರು. ವ್ಯಾಪಾರ, ವ್ಯವಹಾರ ನೆಲ ಕಚ್ಚಿದವು, ದಿನಗೂಲಿ ನೌಕರರು ಊಟಕ್ಕೂ ಪರದಾಡುವಂತಾಗಿದೆ. ಇಂತಹ ಸಮಯದಲ್ಲಿ ಜನರ ಸಹಾಯಕ್ಕೆ ಬರಬೇಕಿದ್ದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಗಾಯದ ಮೇಲೆ ಬರೆ ಎಳೆಯುತ್ತಿದೆ. ಡಿಸೇಲ್, ಪೆಟ್ರೋಲ್ ಬೆಲೆ ಏರುತ್ತಿದ್ದು ಗ್ಯಾಸ್ ಮೇಲಿನ ಸಬ್ಸಿಡಿ ರದ್ದುಗೊಳಿಸಿದ್ದಲ್ಲದೆ, 50 ರೂ ಹೆಚ್ಚು ಮಾಡಿರುವ ಪರಿಣಾಮ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ.ಕೂಡಲೇ ಸರ್ಕಾರಗಳು ಬೆಲೆ ಏರಿಕೆಗೆ ಕಡಿವಾಣ ಹಾಕಿ ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದರು.
ಕೇಂದ್ರ ಸರ್ಕಾರದ ಮೇಲಿನ ಭರವಸೆಯಿಂದ ಎರಡನೇ ಬಾರಿಗೆ ಅತಿ ಹೆಚ್ಚು ಮತಗಳನ್ನು ನೀಡಿ ಅಧಿಕಾರ ನೀಡಲಾಯಿತು. ಆದರೆ ಇತ್ತೀಚಿನ ನಡುವಳಿಕೆ ಜನರನ್ನು ಭ್ರಮನಿರಸನಗೊಳಿಸಿದೆ. ನಾವು ಕೂಡ ಮೋದಿ ಅಭಿಮಾನಿಗಳೇ. ಆದರೆ ಮಾಡಿದ್ದನ್ನೆಲ್ಲ ಸರಿ ಎನ್ನುವ ಅಂದಾಭಿಮಾನ ನಮ್ಮಲ್ಲಿ ಇಲ್ಲ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಹಾಸನ: ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ಬಂದ್ ಆಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕೆಂಪುಹೊಳೆ ಸಮೀಪ ಗ್ಯಾಸ್ ಸೋರಿಕೆಯಾಗುತ್ತಿದ್ದು, ಗ್ಯಾಸ್ ಟ್ಯಾಂಕರ್ ನ್ನು ಹೆದ್ದಾರಿ ಪಕ್ಕದಲ್ಲೇ ನಿಲ್ಲಿಸಲಾಗಿದೆ. ಇದರಿಂದಾಗಿ ಮಂಗಳೂರು ಬೆಂಗಳೂರು ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.
ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಬರುವ ವಾಹನವನ್ನು ಗುಂಡ್ಯ ಗೇಟ್ ಬಳಿ ತಡೆದು ನಿಲ್ಲಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿರುವ ವಾಹನವನ್ನು ಮಾರನಹಳ್ಳಿ ಗೇಟ್ ಸಮೀಪ ತಡೆದು ನಿಲ್ಲಿಸಲಾಗಿದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಬಂದು ಮಾರ್ಗಮಧ್ಯದಲ್ಲಿರುವ ಹಲವಾರು ಜನ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿ ಪರದಾಡುತ್ತಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಮಾಣಿ ಮೈಸೂರು ರಸ್ತೆಯಲ್ಲಿ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ. ಗ್ಯಾಸ್ ಸೋರಿಕೆಯಾಗುತ್ತಿರುವ ಟ್ಯಾಂಕರ್ ನ್ನು ಮಂಗಳೂರಿನಿಂದ ಆಗಮಿಸಿರುವ ತಜ್ಞರ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.