Tag: Gauhati High Court

  • ಕುಸ್ತಿ ಫೆಡರೇಷನ್‌ ಚುನಾವಣೆ – ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

    ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (WFI) ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹಟಿ ಹೈಕೋರ್ಟ್‌ನ (Gauhati High Court) ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ತಡೆ ನೀಡಿದೆ.

    ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಎಸ್‌.ವಿ ಭಟ್ಟಿ ಅವರಿದ್ದ ಪೀಠವು, ಜೂನ್ 25 ರಂದು ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿತು. ಈ ವೇಳೆ ಕೇಂದ್ರ ಕ್ರೀಡಾ ಸಚಿವಾಲಯ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ, ಅಸ್ಸಾಂ ಕುಸ್ತಿ ಅಸೋಸಿಯೇಷನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ – ಶುಕ್ರವಾರ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

    ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಭಾರತ ಕುಸ್ತಿ ಫೆಡರೇಷನ್‌ನ ಚುನಾವಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಕೋರಿ ಅಸ್ಸಾಂ ಕುಸ್ತಿ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುವಾಹಟಿ ಹೈಕೋರ್ಟ್‌ ಜು.28 ಕ್ಕೆ ಮುಂದೂಡಿತ್ತು.

    ಜು.11 ರಂದು ಡಬ್ಲ್ಯೂಎಫ್‌ಐ ಚುನಾವಣೆ ನಡೆಸಬೇಕಿತ್ತು. ಆದರೆ ಅಸ್ಸಾಂ ಸಂಸ್ಥೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು. ಇದನ್ನೂ ಓದಿ: ಮೋದಿ, ಯೋಗಿಯೇ ಟಾರ್ಗೆಟ್- 26/11ರಂತೆ ಮತ್ತೊಂದು ದಾಳಿಯ ಬೆದರಿಕೆ ಕರೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆಗೆ ಕಿರುಕುಳ – ಬಿವಿ ಶ್ರೀನಿವಾಸ್‍ಗೆ ಸುಪ್ರೀಂ ಜಾಮೀನು

    ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆಗೆ ಕಿರುಕುಳ – ಬಿವಿ ಶ್ರೀನಿವಾಸ್‍ಗೆ ಸುಪ್ರೀಂ ಜಾಮೀನು

    ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ (Congress) ಅಧ್ಯಕ್ಷ ಬಿವಿ ಶ್ರೀನಿವಾಸ್ (BV Srinivas) ಅವರ ವಿರುದ್ಧದ ಕಿರುಕುಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ (Supreme Court) ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ಅವರಿದ್ದ ಪೀಠವು ಜಾಮೀನು ನೀಡಿದೆ.

    ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಕರಣದ ಎಫ್‍ಐಆರ್ ದಾಖಲಿಸಲು ವಿಳಂಬ ಮಾಡಿರುವುದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ನಿರೀಕ್ಷಣಾ ಜಾಮೀನು ಪಡೆಯಲು ಶ್ರೀನಿವಾಸ್ ಅವರು ಅರ್ಹರು ಎಂದು ಕೋರ್ಟ್ ಹೇಳಿದೆ. 50,000 ರೂ. ಬಾಂಡ್ ಪಡೆದು ಜಾಮೀನು ನೀಡಿದ ನ್ಯಾಯಾಲಯ ತನಿಖೆಗೆ ಸಹಕರಿಸುವಂತೆ ಸೂಚಿಸಿತು. ಈ ವೇಳೆ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಹಿಂಡನ್‍ಬರ್ಗ್ ಪ್ರಕರಣ – ಮೂರು ತಿಂಗಳಲ್ಲಿ ತನಿಖೆಯ ಪ್ರಗತಿ ತೋರಿಸಲು ಸೆಬಿಗೆ ಸುಪ್ರೀಂ ಸೂಚನೆ

    ಶ್ರೀನಿವಾಸ್ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಗುವಾಹಟಿ ಹೈಕೋರ್ಟ್ (Gauhati High Court) ಮೆಟ್ಟಿಲೇರಿದ್ದರು. ಎಫ್‍ಐಆರ್ ದಾಖಲಿಸಲು ಅಸ್ಸಾಂ (Assam) ಪೊಲೀಸರಿಗೆ ಯಾವುದೇ ಅಧಿಕಾರವಿಲ್ಲ ಎಂದು ಆರೋಪಿಸಿದ್ದರು. ಆದರೆ ಹೈಕೋರ್ಟ್ ಮನವಿಯನ್ನು ತಿರಸ್ಕರಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಮೊರೆ ಹೋಗಿದ್ದರು.

    ಮಾ. 25 ರಂದು ರಾಯ್‍ಪುರದ ಮೇಫೇರ್ ಹೋಟೆಲ್‍ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸರ್ವಸದಸ್ಯರ ಅಧಿವೇಶನದ ವೇಳೆ ಶ್ರೀನಿವಾಸ್ ಹೋಟೆಲ್‍ನಲ್ಲಿ ಥಳಿಸಿದ್ದರು. ತನ್ನ ತೋಳುಗಳನ್ನು ಹಿಡಿದುಕೊಂಡು ದೌರ್ಜನ್ಯ ಎಸಗಿದ್ದರು. ಅಶ್ಲೀಲ ಮಾತುಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಅಸ್ಸಾಂ ಯುವ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಅವರು ದೂರು ನೀಡಿದ್ದರು. ಅಲ್ಲದೆ ಅವರ ವರ್ತನೆ ಬಗ್ಗೆ ಕಾಂಗ್ರೆಸ್‍ನ ಉನ್ನತ ನಾಯಕರಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದತ್ತಾ ಆರೋಪಿಸಿದ್ದರು.

    ಶ್ರೀನಿವಾಸ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ವಕೀಲ ರಾಜೇಶ್ ಇನಾಮದಾರ್ ವಾದ ಮಂಡಿಸಿದರು. ಅಸ್ಸಾಂ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು ವಾದ ಮಂಡಿಸಿದರು. ಇದನ್ನೂ ಓದಿ: ಗೋ ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ – ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು

  • ಬಂಧನ ಭೀತಿ – ಸುಪ್ರೀಂ ಮೊರೆ ಹೋದ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್

    ಬಂಧನ ಭೀತಿ – ಸುಪ್ರೀಂ ಮೊರೆ ಹೋದ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್

    ನವದೆಹಲಿ: ಲೈಂಗಿಕ ಕಿರುಕುಳ ಆರೋಪದ ಮೇಲೆ ದಾಖಲಾದ ಎಫ್‍ಐಆರ್ ರದ್ದುಗೊಳಿಸುವಂತೆ ಯುವ ಕಾಂಗ್ರೆಸ್ (Youth Congress) ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ (Srinivas BV) ಸೋಮವಾರ ಸುಪ್ರೀಂ (Supreme Court) ಮೊರೆ ಹೋಗಿದ್ದಾರೆ. ಕಳೆದ ವಾರ ಗುವಾಹಾಟಿ ಹೈಕೋರ್ಟ್ (Gauhati High Court) ನಿರೀಕ್ಷಣಾ ಜಾಮೀನು ಹಾಗೂ ಎಫ್‍ಐಆರ್‌ (FIR) ರದ್ದುಗೊಳಿಸಲು ನಿರಾಕರಿಸಿದ ನಂತರ ಅವರು ಬಂಧನದ ಭೀತಿ ಎದುರಿಸುತ್ತಿದ್ದಾರೆ.

    ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ತ ಕಾಮತ್ ಅವರು ತುರ್ತು ವಿಚಾರಣೆ ಕೋರಿ ಸಿಜೆಐ (CJI) ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್ ನರಸಿಂಹ ಮತ್ತು ಜೆ.ಬಿ ಪರ್ದಿವಾಲಾ ಅವರ ಪೀಠದ ಮುಂದೆ ಈ ಮನವಿಯನ್ನು ಪ್ರಸ್ತಾಪಿಸಿದ್ದಾರೆ. ಪೀಠವು ಮುಂದಿನ ವಾರ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ಶ್ರೀನಿವಾಸ್ ಬಿವಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಕಾಂಗ್ರೆಸ್ ಯುವ ನಾಯಕಿಗೆ ಗೇಟ್ ಪಾಸ್

    ಛತ್ತೀಸ್‍ಗಢದಲ್ಲಿ ನಡೆದಿದೆ ಎನ್ನಲಾದ ಅಪರಾಧವನ್ನು ತನಿಖೆ ಮಾಡಲು ಅಥವಾ ಎಫ್‍ಐಆರ್ ದಾಖಲಿಸಲು ಅಸ್ಸಾಂ (Assam) ಪೊಲೀಸರಿಗೆ ಯಾವುದೇ ಅಧಿಕಾರವಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

    ಶ್ರೀನಿವಾಸ್ ನಿರಂತರವಾಗಿ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಶ್ಲೀಲ ಮಾತುಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಅಸ್ಸಾಂ ಯುವ ಕಾಂಗ್ರೆಸ್‍ನ (Youth Congress) ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಅವರು ದೂರು ನೀಡಿದ್ದರು. ಅಲ್ಲದೆ ಅವರ ವರ್ತನೆ ಬಗ್ಗೆ ಕಾಂಗ್ರೆಸ್‍ನ ಉನ್ನತ ನಾಯಕರಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದತ್ತಾ ಆರೋಪಿಸಿದ್ದರು.

    ದೂರಿನ ಮೇರೆಗೆ ಶ್ರೀನಿವಾಸ್ ವಿರುದ್ಧ ಐಪಿಸಿ ಸೆಕ್ಷನ್ 352 (ಆಕ್ರಮಣ ಅಥವಾ ಕ್ರಿಮಿನಲ್ ಬಲ ಪ್ರಯೋಗ), 354 (ಹಲ್ಲೆ), ಮತ್ತು 354ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಶ್ರೀನಿವಾಸ್ ಅವರಿಗೆ ಅಧಿಕಾರಿಗಳ ಮುಂದೆ ಖುದ್ದಾಗಿ ಹಾಜರಾಗುವಂತೆ ದಿಸ್ಪುರ್ ಪೊಲೀಸರು ನೋಟಿಸ್ ನೀಡಿದ್ದರು. ಈ ವೇಳೆ ರಾಜಕೀಯ ವಿವಾದಗಳಿಂದ ತಮ್ಮ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದ್ದರು. ಅಲ್ಲದೆ ನಿರೀಕ್ಷಣಾ ಜಾಮೀನು ಪಡೆಯಲು ಹಾಗೂ ವಿಚಾರಣೆಗೆ ತಡೆ ನೀಡುವಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಎಫ್‍ಐಆರ್ ರಾಜಕೀಯ ಪ್ರೇರಿತವಾಗಿ ಕಂಡು ಬರುತ್ತಿಲ್ಲ ಎಂದು ಅವರ ಮನವಿಯನ್ನು ತಿರಸ್ಕರಿಸಿತ್ತು.

    ದಿಸ್ಪುರ ಪೊಲೀಸರ ಮುಂದೆ ಹಾಜರಾಗಲು ಮೇ 12 ರವರೆಗೆ ಸಮಯವನ್ನು ವಿಸ್ತರಿಸಲಾಗಿದೆ. ಗುವಾಹಾಟಿಗೆ ತೆರಳಿದರೆ ಪೊಲೀಸರು ಬಂಧಿಸುವ ಆತಂಕವಿದೆ ಎಂದು ಶ್ರೀನಿವಾಸ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಯುವ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ – ರಾಹುಲ್ ವಿರುದ್ಧವು ಕಿಡಿಕಾರಿದ ಯುವ ನಾಯಕಿ