ಕಾರವಾರ: ಶಿರಸಿಯ ಗಣೇಶ ನಗರದ ಅಂಗನವಾಡಿ ಮಕ್ಕಳಿಗಾಗಿ ಏಕಾಂಗಿಯಾಗಿ ಬಾವಿ ತೋಡುತ್ತಿದ್ದ ಗೌರಿಯವರು ಕೊನೆಗೂ ಈ ಬಿರು ಬೇಸಿಗೆಯಲ್ಲೂ ಬಾವಿಯಲ್ಲಿ ಗಂಗೆ ತರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿರಸಿಯ ಗಣೇಶ ನಗರದ ಗೌರಿಯವರು (Gauri) ಜ.30 ರಂದು ಅಂಗನಾಡಿ ಮಕ್ಕಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಏಕಾಂಗಿಯಾಗಿ ಬಾವಿ ತೋಡುತ್ತಿದ್ದು, ಅವರು ಬಾವಿ ತೋಡದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿ ಬಾವಿಗೆ ಹಲಗೆ ಮುಚ್ಚಿತ್ತು. ನಂತರ ಶಿರಸಿ ತಹಶೀಲ್ದಾರರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ್ದ ಗೌರಿಗೆ ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ಸಂಸದ ಅನಂತಕುಮಾರ್ ಹೆಗಡೆ ಸ್ಥಳಕ್ಕೆ ಆಗಮಿಸಿ ಬಾವಿ ತೋಡಲು ನೆರವಾಗಿದ್ದಲ್ಲದೇ ಇದರ ಖರ್ಚನ್ನು ಸಹ ವಹಿಸಿಕೊಂಡು ಗೌರಿಗೆ ಸಹಾಯ ಆಗಲು ಇಬ್ಬರು ಕೆಲಸಗಾರರನ್ನು ನಿಯೋಜನೆ ಮಾಡಿದ್ದರು.
ಇದರ ಬೆನ್ನಲ್ಲೇ ಬುಧವಾರ ಬಾವಿಯಲ್ಲಿ ನೀರು ಬಂದಿದ್ದು, ಗಂಗೆಗೆ ಪೂಜೆ ಸಲ್ಲಿಸಿ ಗೌರಿ ಹಾಗೂ ಸ್ಥಳೀಯ ಜನರು ಖುಷಿಪಟ್ಟರು. ಪಬ್ಲಿಕ್ ಟಿವಿ ಸಹಕಾರವನ್ನು ಸ್ಮರಿಸದ ಗೌರಿ ಧನ್ಯವಾದ ಸಲ್ಲಿಸಿದ್ದಲ್ಲದೇ, ಶಿರಸಿಯ ಮಾರಿ ಜಾತ್ರೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಈ ಬಾವಿಯ ಮೂಲಕ ಮಾಡುತ್ತೇನೆ. 45 ಅಡಿ ಆಳಕ್ಕೆ ನೀರು ಬಂದಿದ್ದು ಖುಷಿ ತಂದಿದೆ. ನಾನು ಬಾವಿ ತೋಡಿ ನೀರು ಬರಿಸಿಯಾಯ್ತು, ಉಳಿದದ್ದು ಆಡಳಿತಕ್ಕೆ ಬಿಟ್ಟಿದ್ದು ಎಂದರು.ಜೊತೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ – ಉದಯನಿಧಿ ಸ್ಟಾಲಿನ್‌ಗೆ ಹೈಕೋರ್ಟ್ ರಿಲೀಫ್
ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರ ಪುತ್ರ ಸಮರ್ಜಿತ್ ಲಂಕೇಶ್ ‘ಗೌರಿ’ (Gauri) ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಂದ್ರಜಿತ್ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಾರ್ಚ್ 17, ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ ‘ಗೌರಿ’ ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ (Dance) ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಈ ಹಾಡಿನ ಬಗ್ಗೆ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಾನು ಅಪ್ಪು ಅವರ ಅಭಿಮಾನಿ ಎಂದು ಮಾತನಾಡಿದ ಸಮರ್ಜಿತ್ (Samarjit Lankesh), ಪುನೀತ್ ಅವರ ಡ್ಯಾನ್ಸ್ ನನಗೆ ಸ್ಪೂರ್ತಿ. ಹಾಗಾಗಿ ಅವರ ಹುಟ್ಟುಹಬ್ಬದಂದು ಗೌರಿ ಚಿತ್ರತಂಡದಿಂದ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ನಮನ ಸಲ್ಲಿಸುತ್ತಿದ್ದೇವೆ ಎಂದರು.
ಇಂದ್ರಜಿತ್ ಅವರ ಮಗ ಸಮರ್ಜಿತ್ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರವಿದು. ಸಮರ್ಜಿತ್ ಬಹಳ ಲವಲವಿಕೆಯ ಹುಡುಗ. ಈ ಹಾಡಿನಲ್ಲಿ ಸಮರ್ಜಿತ್ ಅವರ ಜೊತೆ ಅಭಿನಯಿಸುತ್ತಿರುವುದು ಖುಷಿಯಾಗಿದೆ. ನಾನು ಸಹ ಪುನೀತ್ ಅವರ ಅಭಿಮಾನಿ ಎಂದು ತಾನ್ಯ ಹೋಪ್ ತಿಳಿಸಿದರು.
ಈಗಾಗಲೇ ಗೌರಿ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಆದರೆ ಇಂದು ಸಿನಿಮಾಗಿಂತ ಈ ಹಾಡಿನ ಬಗ್ಗೆ ಹೇಳಲು ಬಯಸುತ್ತೇನೆ. ಮುಂಬರುವ ಪುನೀತ್ ಅವರ ಹುಟ್ಟುಹಬ್ಬಕ್ಕೆ ಗೌರಿ ಚಿತ್ರತಂಡದಿಂದ ವಿಶೇಷ ಹಾಡೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಪುನೀತ್ ರಾಜಕುಮಾರ್ ಅವರ ಚಿತ್ರಗಳ ಪ್ರಸಿದ್ದ ಹಾಡುಗಳಿಗೆ ಸಮರ್ಜಿತ್ ಹಾಗೂ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ.
ಈ ವಿಶೇಷ ಗೀತೆಯ ತಾಲೀಮು ನಡೆಯುತ್ತಿದೆ. ಸದ್ಯದಲ್ಲೇ ಚಿತ್ರೀಕರಣವಾಗಲಿದೆ ಎನ್ನುತ್ತಾರೆ ನಿರ್ದೇಶಕ ಇಂದ್ರಜಿತ್ ಲಂಕೇಶ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಮರ್ಜಿತ್ ಲಂಕೇಶ್ ಅವರಿಗೆ ನಾಯಕಿಯಾಗಿ ಸಾನ್ಯ ಅಯ್ಯರ್ ನಟಿಸುತ್ತಿದ್ದಾರೆ.
ಸಾನ್ಯ ಅಯ್ಯರ್ ತಮ್ಮ ಚೊಚ್ಚಲು ಸಿನಿಮಾ ‘ಗೌರಿ’ ಶೂಟಿಂಗ್ ಮುಗಿಸಿದ್ದಾರೆ. ಇದೀಗ ಅವರು ಡಬ್ಬಿಂಗ್ (Dubbing) ಕೆಲಸದಲ್ಲಿ ನಿರತರಾಗಿದ್ದಾರೆ. ಡಬ್ಬಿಂಗ್ ಮಾಡುತ್ತಿರುವ ಫೋಟೋ ಅವನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಮಾಡಿದ್ದಾರೆ. ಜೊತೆಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ಇದ್ದಾರೆ.
‘ಗೌರಿ’ (Gauri) ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಂತೆಯೇ ಕಿರುತೆರೆಯ ಪುಟ್ಟಗೌರಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದಾರೆ. ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಾನ್ಯಾ ಅಯ್ಯರ್ (Sanya Iyer), ಈ ಚಿತ್ರಕ್ಕಾಗಿ ಮತ್ತೊಂದು ಫೋಟೋ ಶೂಟ್ (Photoshoot) ನಲ್ಲಿ ಭಾಗಿಯಾಗಿದ್ದರು.
ಬ್ಲೌಸ್ ಇಲ್ಲದೇ ಕೇವಲ ಸೀರೆ ಉಟ್ಟುಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿರುವ ಸಾನ್ಯಾ ಅಯ್ಯರ್. ಆ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಬ್ಯಾಕ್ ಲೆಸ್ ಪೋಸ್ ಕೂಡ ನೀಡಿದ್ದರು. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದ್ದವು.
ಈ ಹಿಂದೆಯೂ ಸಾನ್ಯಾ ಬಿಕಿನಿ ಫೋಟೋಶೂಟ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಗೌರಿ ಚಿತ್ರಕ್ಕಾಗಿ ಹೊಸ ಲುಕ್‌ನಲ್ಲಿ ಸ್ಟೈಲೀಶ್ ಗೆಟಪ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಬ್ಲೌಸ್ ಇಲ್ಲದೇ ಸೀರೆ ತೊಟ್ಟಿದ್ದಾರೆ.
ಗೌರಿ ಸಿನಿಮಾ ಚಿಕ್ಕಮಗಳೂರು ಸೇರಿದಂತೆ ನಾನಾ ಸ್ಥಳಗಳಲ್ಲಿ ಶೂಟ್ ಆಗಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿದೆ. ಸಮರ್ಜಿತ್ ನಾನು ಅಂದುಕೊಂಡದಕ್ಕಿಂತ ಚೆನ್ನಾಗಿ ಅಭಿನಯಿಸಿದ್ದಾರೆ. ಸಾನ್ಯ ಅವರು ಕೂಡ. ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತರ್ ನರೋನ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.
ಖ್ಯಾತ ಸಾಹಿತಿ ಪಿ.ಲಂಕೇಶ್ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ (Indrajit Lankesh) ಮಗ ಸಮರ್ಜಿತ್ ಲಂಕೇಶ್ ‘ಗೌರಿ’ (Gauri) ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಇತ್ತೀಚೆಗೆ ನಾಯಕ ಸಮರ್ಜಿತ್ (Samarjit) ಲಂಕೇಶ್ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಆಚರಿಸಿದರು. ಸಮರ್ಜಿತ್ ಅವರ ಅಜ್ಜಿ, ಪಿ.ಲಂಕೇಶ್ ಪತ್ನಿ ಇಂದಿರಾ ಲಂಕೇಶ್, ತಾಯಿ ಅರ್ಪಿತಾ ಲಂಕೇಶ್, ಇಂದ್ರಜಿತ್ ಲಂಕೇಶ್, ನಾಯಕಿ ಸಾನ್ಯ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತರ ನರೋನ, ಹಿರಿಯ ಛಾಯಾಗ್ರಾಹಕ ಕೆ.ಕೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
ಗೌರಿ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಈಗಾಗಲೇ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿದೆ. ಸಮರ್ಜಿತ್ ನಾನು ಅಂದುಕೊಂಡದಕ್ಕಿಂತ ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ಸಾನ್ಯ ಅವರು ಕೂಡ. ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತರ್ ನರೋನ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಿರಿಯ ಛಾಯಾಗ್ರಾಹಕ ಕೆ.ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಇದು ಅವರ ನೂರನೇ ಚಿತ್ರ ಎಂದು ಇಂದ್ರಜಿತ್ ಲಂಕೇಶ್ ತಿಳಿಸಿದರು.
ನಾನು ಹುಟ್ಟುಹಬ್ಬವನ್ನು (Birthday) ಅದ್ದೂರಿಯಾಗಿ ಆಚರಿಸಿಕೊಳ್ಳುವುದಿಲ್ಲ ಎಂದು ಮಾತನಾಡಿದ ಸಮರ್ಜಿತ್ ಲಂಕೇಶ್, ಇಂದು ಚಿತ್ರತಂಡದವರು ನನ್ನ ಹುಟ್ಟುಹಬ್ಬ ಆಚರಿಸಿದ್ದು ಖುಷಿಯಾಗಿದೆ. ಎಲ್ಲರಿಗೂ ಧನ್ಯವಾದ. ಸಾಕಷ್ಟು ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಚಿತ್ರ ಚೆನ್ನಾಗಿ ಮೂಡಿಬರುವ ಭರವಸೆ ಇದೆ ಎಂದರು. ನಾಯಕಿ ಸಾನ್ಯ ಅಯ್ಯರ್ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡರು. ಮಾನಸಿ ಸುಧೀರ್ ಹಾಗೂ ಎಸ್ತರ್ ನರೋನ ಸಹ ಚಿತ್ರದ ಕುರಿತು ಮಾತನಾಡಿದರು.
ಇದು ನನ್ನ ನೂರನೇ ಚಿತ್ರ. ನನ್ನ ಮಗ ನಾಣಿ ಕೂಡ ಈ ಚಿತ್ರದಲ್ಲಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಸಮರ್ಜಿತ್ ನಟನೆ ನೋಡಿದಾಗ ಮೊದಲ ಚಿತ್ರ ಅನಿಸುವುದಿಲ್ಲ. ಅಷ್ಟು ಚೆನ್ನಾಗಿ ನಟಿಸುತ್ತಿದ್ದಾರೆ ಎಂದರು ಛಾಯಾಗ್ರಾಹಕ ಕೆ.ಕೆ. ಸಮರ್ಜಿತ್ ಅಜ್ಜಿ ಇಂದಿರಾ ಲಂಕೇಶ್ ಅವರು ಮೊಮ್ಮಗನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.
ಸಮರ್ಜಿತ್ ತಮ್ಮ ಹುಟ್ಟುಹಬ್ಬವನ್ನು ಅನೇಕ ಸಾಮಾಜಿಕ ಕಾರ್ಯಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಮಾಡಿ ಆಶೀರ್ವಾದ ಪಡೆದುಕೊಂಡರು. ಆನಂತರ ಕಂಠೀರವ ಸ್ಟುಡಿಯೋಗೆ ಆಗಮಿಸಿ ಪುನೀತ್ ರಾಜಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಿದರು.
ನಕ್ಷತ್ರಗಳಿಗೆ (Stars) ತಮ್ಮ ನೆಚ್ಚಿನ ತಾರೆಯರು ಹೆಸರು ಇಡುವುದು ಇತ್ತೀಚೆಗೆ ಟ್ರೆಂಡ್ ಆಗಿದೆ. ಕನ್ನಡದಲ್ಲಿ ಇದನ್ನು ಮೊದಲು ಶುರು ಮಾಡಿದ್ದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು. ಪುನೀತ್ ಅಗಲಿದಾಗ ನಕ್ಷತ್ರವೊಂದಕ್ಕೆ ಪುನೀತ್ ಅವರ ಹೆಸರು ಇಡಲಾಗಿತ್ತು. ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬದಂದು ಹರೀಶ್ ಅರಸು ಅವರು ಸುದೀಪ್ ಅವರ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟಿದ್ದರು. ಇದೀಗ ಕಿರುತೆರೆ ನಟಿ ಸಾನ್ಯಾ ಅಯ್ಯರ್ ಅಭಿಮಾನಿಗಳು ನಟಿಯ ಹೆಸರಿನ್ನು ನಕ್ಷತ್ರವೊಂದಕ್ಕೆ ಇಟ್ಟಿದ್ದಾರೆ.
ಸಾನ್ಯಾ ಅಯ್ಯರ್ ಹುಟ್ಟು ಹಬ್ಬದಂದು ಅಭಿಮಾನಿಗಳು ಈ ಕೆಲಸ ಮಾಡಿದ್ದು, ಆ ವಿಡಿಯೋವನ್ನು ಸ್ವತಃ ಸಾನ್ಯಾ ಅಯ್ಯರ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಕ್ಷತ್ರಗಳಿಗೆ ಹೆಸರು ಇಡುವುದು ನನಗೆ ಗೊತ್ತೇ ಇರಲಿಲ್ಲ. ಇದೇ ಮೊದಲ ಬಾರಿಗೆ ನನಗೆ ಗೊತ್ತಾಗಿದ್ದು ಎಂದು ಅಚ್ಚರಿಯನ್ನು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಇಂಥದ್ದೊಂದು ಕೆಲಸ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳನ್ನೂ ಅವರು ಹೇಳಿದ್ದಾರೆ.
ಕಿರುತೆರೆಯ ಮುದ್ದಾದ ಗೊಂಬೆ ಎಂದೇ ಖ್ಯಾತರಾದವರು ಸಾನ್ಯಾ ಅಯ್ಯರ್ (Sanya Iyer). ಸಿನಿಮಾ ರಂಗಕ್ಕೆ ಎಂಟ್ರಿ ಕೊಡುವುದಕ್ಕಾಗಿಯೇ ಬಾಲಿವುಡ್ (Bollywood) ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ (Daboo Ratnani) ಅವರಿಂದ ಫೋಟೋಶೂಟ್ (Photo Shoot) ಮಾಡಿಸಿಕೊಂಡಿದ್ದರು. ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಥೇಟ್ ರಾಣಿಯಂತೆ ಕಂಡಿದ್ದರು.
ಬಾಲಿವುಡ್ ನ ಖ್ಯಾತ ನಟ ನಟಿಯರ ಫೋಟೋಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದ ಶ್ರೇಯಸ್ಸು ಡಬು ರತ್ನಾನಿಗೆ ಸಲ್ಲುತ್ತದೆ. ಅಮಿತಾಭ್ ಬಚ್ಚನ್ ರಿಂದ ಹಿಡಿದು ಈ ಹೊತ್ತಿನ ಯುವ ನಟರವರೆಗೂ ಡಬು ತಮ್ಮ ಕ್ಯಾಮೆರಾದಲ್ಲಿ ಅವರನ್ನು ಸೆರೆ ಹಿಡಿದಿದ್ದಾರೆ. ಈ ಹಿಂದೆ ಕನ್ನಡದ ಹೆಸರಾಂತ ನಟ ಯಶ್ ಕೂಡ ಇವರ ಬಳಿ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಸಾನ್ಯಾ ಕೂಡ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದರು. ಈ ಫೋಟೋ ಶೂಟ್ ಬಳಿಕ ಅವರು ಕನ್ನಡ ಸಿನಿಮಾವೊಂದನ್ನು ಒಪ್ಪಿಕೊಂಡರು. ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ (Gauri) ಚಿತ್ರಕ್ಕೆ ಇವರೇ ನಾಯಕಿಯಾಗಿ ನಟಿಸುತ್ತಿದ್ದಾರೆ.
ಸುದೀಪ್ ಹೆಸರಿನಲ್ಲೂ ನಕ್ಷತ್ರ
ಕಿಚ್ಚ ಸುದೀಪ್ (Sudeep) ಅವರ ಹುಟ್ಟು ಹಬ್ಬಕ್ಕೆ ವಿಶೇಷ ಉಡುಗೊರೆಯೊಂದನ್ನು ನೀಡಿತ್ತು ಅರಸು ಕ್ರಿಯೇಷನ್ಸ್ (Arasu Creation). ಸುದೀಪ್ ಅವರ ಹೆಸರನ್ನು ನಕ್ಷತ್ರವೊಂದಕ್ಕೆ (Nakshatra) ನಾಮಕರಣ ಮಾಡಿದ್ದು, ಅಧಿಕೃತವಾಗಿ ನೋಂದಣಿ ಕೂಡ ಮಾಡಿಸಿತ್ತು. ಈ ಹಿಂದೆ ದಕ್ಷಿಣದ ಖ್ಯಾತ ನಟ ಮಹೇಶ್ ಬಾಬು ಅವರ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ಇಂಥದ್ದೊಂದು ನೋಂದಣಿ ಮಾಡಿಸಿದ್ದರು. ಅಲ್ಲದೇ, ಪುನೀತ್ ರಾಜ್ ಕುಮಾರ್ ಹೆಸರಿನಲ್ಲೂ ಒಂದು ನಕ್ಷತ್ರವಿದೆ. ಅಂಥದ್ದೊಂದು ಗೌರವ ಸುದೀಪ್ ಪಾಲಾಗಿತ್ತು. ಮೀನ ರಾಶಿಯ ನಕ್ಷತ್ರಪುಂಜದಲ್ಲಿ ಕಾಣಸಿಗುವ ನಕ್ಷತ್ರವೊಂದಕ್ಕೆ ಸುದೀಪ್ ಹೆಸರು ಇಡಲಾಗಿತ್ತು.
ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಂತೆಯೇ ಕಿರುತೆರೆಯ ಪುಟ್ಟಗೌರಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದಾರೆ. ಸಖತ್ ಹಾಟ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿದ್ದ ಸಾನ್ಯಾ ಅಯ್ಯರ್ (Sanya Iyer), ಇದೀಗ ಮತ್ತೊಂದು ಫೋಟೋ ಶೂಟ್ (Photoshoot) ನಲ್ಲಿ ಭಾಗಿಯಾಗಿದ್ದು, ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಬ್ಲೌಸ್ ಇಲ್ಲದೇ ಕೇವಲ ಸೀರೆ ಉಟ್ಟುಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿರುವ ಸಾನ್ಯಾ ಅಯ್ಯರ್. ಆ ಫೋಟೋದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಯಾಕ್ ಲೆಸ್ ಪೋಸ್ ಕೂಡ ನೀಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿವೆ. ಕೆಲವರು ಪಾಸಿಟಿವ್ ಕಾಮೆಂಟ್ ಮಾಡಿದರೆ, ಇನ್ನೂ ಕೆಲವರು ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ.
ಈ ಹಿಂದೆಯೂ ಸಾನ್ಯಾ ಬಿಕಿನಿ ಫೋಟೋಶೂಟ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಈಗ ಹೊಸ ಲುಕ್‌ನಲ್ಲಿ ಸ್ಟೈಲೀಶ್ ಗೆಟಪ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಬ್ಲೌಸ್ ಇಲ್ಲದೇ ಸೀರೆ ತೊಟ್ಟಿದ್ದಾರೆ. ಇದನ್ನೂ ಓದಿ:‘ಫ್ಲರ್ಟ್’ ಮಾಡಲು ರೆಡಿಯಾದ ನಟ ಚಂದನ್
ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ(Bigg Boss Kannada) ಸಾನ್ಯ ಅಯ್ಯರ್ ಸ್ಪಧಿಯಾಗಿ ಭಾಗವಹಿಸಿದ್ದರು. ರೂಪೇಶ್ ಶೆಟ್ಟಿ ಜೊತೆಗಿನ ಸಾನ್ಯ ಸ್ನೇಹ ಹೈಲೆಟ್ ಆಗಿತ್ತು. ಈ ಸೀಸನ್‌ನಲ್ಲಿ ರೂಪೇಶ್ ಶೆಟ್ಟಿ (Roopesh Shetty) ವಿನ್ನರ್ ಆಗಿದ್ದರು.
ಪತ್ರಿಕೋದ್ಯಮದ ಖ್ಯಾತನಾಮರಾದ ಪಿ ಲಂಕೇಶ್ ಮೊಮ್ಮಗ ಸಮರ್ಜಿತ್ ಲಂಕೇಶ್ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಈಗಾಗಲೇ ಇಂದ್ರಜಿತ್ ಲಂಕೇಶ್ (Indrajit Lankesh) ಚಿತ್ರರಂಗದಲ್ಲಿ ಸ್ಟೈಲಿಶ್ ನಿರ್ದೇಶಕ ಎಂದೇ ಗುರುತಿಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನ ನಿರ್ದೇಶನ ಮಾಡಿರುವಂತಹ ಇಂದ್ರಜಿತ್ ಲಂಕೇಶ್ ಈ ಬಾರಿ ತಮ್ಮ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.
‘ಗೌರಿ’ (Gauri) ಹೆಸರಿನ ಸಿನಿಮಾದ ಮೂಲಕ ಸಮರ್ಜಿತ್ ಲಂಕೇಶ್ (Samarjit Lankesh) ಅವರನ್ನ ಚಿತ್ರರಂಗಕ್ಕೆ ನಾಯಕನನ್ನಾಗಿ ಪರಿಚಯ ಮಾಡುತ್ತಿದ್ದು ಇಂದು ಬೆಂಗಳೂರಿನಲ್ಲಿ ಸಿನಿಮಾದ ಮುಹೂರ್ತ ಅದ್ದೂರಿಯಾಗಿ ನಡೆದಿದೆ. ಗೌರಿ ಸಿನಿಮಾಗಾಗಿ ಸಮರ್ಜಿತ್ ಈಗಾಗಲೇ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಂಡಿದ್ದು ಸಮರ್ಜಿತ್ ಜೊತೆಯಾಗಿ ಸಾನ್ಯ ಐಯ್ಯರ್ ನಾಯಕಿಯಾಗಿ ಅಭಿನಯ ಮಾಡುತ್ತಿದ್ದಾರೆ.
ಸಿನಿಮಾ ಮುಹೂರ್ತಕ್ಕೂ ಮುನ್ನವೇ ಸಮರ್ಜಿತ್ ಹಾಗೂ ಸಾನಿಯಾ (Sanya Iyer) ಅವರ ಫೋಟೋಶೂಟ್ ನಡೆದಿದ್ದು ಸ್ಯಾಂಡಲ್ವುಡ್ ನ ಸ್ಟಾರ್ ಸಿನಿಮಾಟೋಗ್ರಾಫರ್ ಆದ ಭುವನ್ ಗೌಡ ಅವರು ಸಮರ್ಜಿತ್ ಅವರ ಫೋಟೋಶೂಟ್ ಮಾಡಿ ಲುಕ್ ಟೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ:‘ನಿಂಬಿಯಾ ಬನಾದ ಮ್ಯಾಗ’ ಬೆರಗು ಮೂಡಿಸಿದ ಅಶೋಕ್ ಕಡಬ!
ಭುವನ್ ಮಾತ್ರವಲ್ಲದೆ ಎಜೆ ಶೆಟ್ಟಿ ಅವ್ರಿಂದಲೂ ಫೋಟೋ ಶೂಟ್ ಮಾಡಿಸಿದ್ದು ಸಾನ್ಯ ಹಾಗೂ ಸಮಜಿತ್ ಇಬ್ಬರ ಕೆಮಿಸ್ಟ್ರಿ ಫೋಟೋ ಶೂಟ್ ನಲ್ಲಿ ಸಖತ್ತಾಗಿ ವರ್ಕ್ ಆಗಿದೆ. ಈಗಾಗಲೇ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿರುವಂತಹ ಇಂದ್ರಜಿತ್ ತಮ್ಮ ಮಗ ಯಾವ ಯಾವ ಪಾತ್ರದಲ್ಲಿ ಯಾವ ರೀತಿ ಕಾಣಿಸುತ್ತಾರೆ ಎಂಬುದನ್ನು ಚೆಕ್ ಮಾಡಲು ಸುಮಾರು ನಾಲ್ಕೈದು ಲುಕ್ ನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.
ಬರೀ ಫೋಟೋ ಶೂಟ್ ಮಾತ್ರವಲ್ಲದೇ ಕೆಲ ಹಳೆ ಸಿನಿಮಾ ಸೀನ್ ಗಳನ್ನ ರೀ ಕ್ರಿಯೇಟ್ ಮಾಡುವ ಮೂಲಕ ಮಗನ ನಟನೆಯನ್ನೂ ಕೂಡ ಟೆಸ್ಟ್ ಮಾಡಿದ್ದಾರೆ. ಲುಕ್ ಹಾಗೂ ಆಕ್ಟಿಂಗ್, ಸ್ಟಂಟ್, ಡ್ಯಾನ್ಸ್ ಎಲ್ಲಾ ವಿಚಾರದಲ್ಲಿಯೂ ಸಮರ್ಜಿತ್ ಪರ್ಫೆಕ್ಟ್ ಅನ್ನಿಸುತ್ತಿದ್ದು ಮುಹೂರ್ತ ಮಾಡಿ ನೇರವಾಗಿ ಶೂಟಿಂಗ್ ಹೋಗಲಿದೆ ಗೌರಿ ಸಿನಿಮಾ ಟೀಂ.
ಕನ್ನಡ ಸಿನಿಮಾ ರಂಗಕ್ಕೆ ಅತೀ ಹೆಚ್ಚು ಬಾಲಿವುಡ್ ನಟಿಯರನ್ನು ಪರಿಚಯಿಸಿದ ಕೀರ್ತಿ ಕ್ರೇಜಿಸ್ಟಾರ್ ರವಿಚಂದ್ರನ್‌ಗೆ ಸಲ್ಲುತ್ತದೆ. ಇದೀಗ ಮತ್ತೆ ರವಿಚಂದ್ರನ್ ಸಿನಿಮಾದಲ್ಲಿ ಹಿಂದಿ ನಟಿಯು ಕಾಣಿಸಿಕೊಂಡಿದ್ದು, ಇಂದು ನಡೆದ ಮುಹೂರ್ತ ಸಮಾರಂಭದಲ್ಲೂ ಅವರು ಹಾಜರಿದ್ದರು. ರವಿಚಂದ್ರನ್ ನಟನೆಯ ಗೌರಿ ಹೆಸರಿನ ಸಿನಿಮಾಗೆ ಇಂದು ಬೆಂಗಳೂರಿನಲ್ಲಿ ಮುಹೂರ್ತ ನಡೆದಿದ್ದು, ನಟಿ ಬರ್ಖಾ ಸೇನ್ ಗುಪ್ತಾ ಕೂಡ ಆಗಮಿಸಿದ್ದಾರೆ.
ಅನೀಶ್ ಅನ್ನುವವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಕಡಿಮೆ ಪಾತ್ರಗಳ ಮೂಲಕ ಕಥೆಯನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ಕೇವಲ ಮೂರೇ ಮೂರು ಪ್ರಮುಖ ಪಾತ್ರಗಳು ಸಿನಿಮಾದಲ್ಲಿದ್ದು, ಪ್ರಾಣಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಹಾಗಾಗಿ ದಾಂಡೇಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ: ಕರ್ನಾಟಕದ ಹುಡುಗಿಯ ಜೊತೆ ಸಲ್ಮಾನ್ ಖಾನ್‌ಗೆ ಪ್ಯಾರ್
ಮುಹೂರ್ತದ ನಂತರ ಮಾತನಾಡಿದ ರವಿಚಂದ್ರನ್, ‘ಇದು ಹೊಸ ಕಾಲಘಟ್ಟ. ಹೊಸ ಹೊಸ ಕಥೆಗಳು ಬರುತ್ತಿವೆ. ಒಂದೊಳ್ಳೆ ಕಥೆ ಸಿಕ್ಕಾಗ ಇಲ್ಲ ಅನ್ನುವುದಕ್ಕೆ ಆಗಲಿಲ್ಲ. ಹೊಸ ವರ್ಷದ ಶುರುವಿನಲ್ಲೇ ಹೊಸ ರೀತಿಯ ಸಿನಿಮಾ ಸಿಕ್ಕಿದೆ. ಖುಷಿ ಆಗುತ್ತಿದೆ’ ಎಂದಿದ್ದಾರೆ. ಕ್ಲ್ಯಾಪ್ ಮಾಡುವ ಮೂಲಕ ಚಿತ್ರಕ್ಕೆ ಶಿವರಾಜ್ ಕುಮಾರ್ ಚಾಲನೆ ನೀಡಿದ್ದಾರೆ. ಮುಂದಿನ ವಾರದಿಂದ ಚಿತ್ರತಂಡ ಶೂಟಿಂಗ್ ಪ್ರಾರಂಭ ಮಾಡಲಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ನಟಿ ಶ್ರುತಿ ಮಗಳು ಗೌರಿ ತಂದೆಯ ಬಗ್ಗೆ ಬರೆದು ಒಂದು ಭಾವನಾತ್ಮಕ ಪೋಸ್ಟ್ ಹಾಕಿದ್ದರು. ಇದರಿಂದ ನೆಟ್ಟಿಗರು ಶ್ರುತಿ ವಿರುದ್ಧ ಕಾಮೆಂಟ್ಸ್ ಮಾಡುತ್ತಿದ್ದರು. ಇದನ್ನು ನೋಡಿದ ಗೌರಿ ‘ಇನ್ನೊಬ್ಬರ ಜೀವನದ ಬಗ್ಗೆ ಸುಮ್ಮನೆ ಕಾಮೆಂಟ್ಸ್ ಮಾಡಬೇಡಿ’ ಎಂದು ನೆಟ್ಟಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಗೌರಿ, “ಇತ್ತೀಚಿಗೆ ನಾನು ಅಪ್ಪನ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಒಂದು ಪೋಸ್ಟ್ ಹಾಕಿದ್ದೆ. ಆದರೆ ಆ ಪೋಸ್ಟ್ ಗೆ ಅಮ್ಮನ ವಿರುದ್ಧ ಕಾಮೆಂಟ್ ಮಾಡುತ್ತಿದ್ದಾರೆ. ಅದನ್ನು ನೋಡಿ ನನಗೆ ಬೇಸರವಾಗಿದೆ. ಅಪ್ಪನಿಗೆ ಫೋನ್ ಮಾಡಲು, ಅವರನ್ನು ಭೇಟಿ ಮಾಡಲು ಅಮ್ಮನೇ ಕಳುಹಿಸುವುದು. ನಾನು ಮಾಡಿದ್ದ ಪೋಸ್ಟ್ ಅಪ್ಪನ ಬಗ್ಗೆ ಇದ್ದ ಪ್ರೀತಿಯನ್ನು ತಿಳಿಸುತ್ತದೆ ಹೊರತು ಅಮ್ಮನ ಬಗ್ಗೆ ಇರುವ ಬೇಸರವಲ್ಲ. ಹೀಗಾಗಿ ದಯವಿಟ್ಟು ಅಮ್ಮನ ಬಗ್ಗೆ ಕಾಮೆಂಟ್ಸ್ ಮಾಡಬೇಡಿ” ಎಂದು ಬೇಸರದಿಂದ ಹೇಳಿಕೊಂಡಿದ್ದಾರೆ.
“ನನ್ನ ಹುಟ್ಟಿಗೆ ಅಪ್ಪ ಮಾತ್ರ ಕಾರಣರಾಗಿದ್ದಾರೆ. ಆದರೆ ಅಂದಿನಿಂದ ಪ್ರೀತಿಯಿಂದ ನನ್ನನ್ನು ನೋಡಿಕೊಳ್ಳುತ್ತಿರುವುದು ಅಮ್ಮ. ಅವರ ಬಗ್ಗೆ ಗೊತ್ತಿಲ್ಲದೆ ಮಾತನಾಡುವುದು ತಪ್ಪು. ನಾನು ಅವರಿಬ್ಬರನ್ನು ಸಮಾನವಾಗಿ ಪ್ರೀತಿಸುತ್ತೇನೆ. ನಿಮಗೆ ಸತ್ಯ ತಿಳಿಯದೆ ಮಾತನಾಡುವುದು ಸರಿಯಿಲ್ಲ. ಇನ್ನೊಬ್ಬರ ಜೀವನದ ಬಗ್ಗೆ ಸುಮ್ಮನೆ ಕಾಮೆಂಟ್ಸ್ ಗಳನ್ನು ಮಾಡಬೇಡಿ ಧನ್ಯವಾದಗಳು” ಎಂದು ನೆಟ್ಟಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಅಪ್ಪನ ಬಗ್ಗೆ ಪೋಸ್ಟ್:
“ಹುಟ್ಟುಹಬ್ಬದ ಶುಭಾಶಯಗಳು ಅಪ್ಪ. ನೀವು ನನ್ನ ಮೊದಲ ಪ್ರೀತಿ ಮತ್ತು ನನ್ನ ನೆಚ್ಚಿನ ನಾಯಕನಾಗಿದ್ದೀರಿ. ನಿಮ್ಮ ಮೇಲಿನ ಪ್ರೀತಿ ಹಾಗೂ ನಮ್ಮಿಬ್ಬರ ನಡುವಿನ ಬಾಂಧವ್ಯವನ್ನು ಯಾರೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಆದರೆ ನಿಮ್ಮ ಜೊತೆ ಅತೀ ಶೀಘ್ರದಲ್ಲೇ ಕಾಲ ಕಳೆಯಲು ಕಾಯುತ್ತಿದ್ದೀನಿ” ಎಂದು ಪ್ರೀತಿಯಿಂದ ಬರೆದು ಪೋಸ್ಟ್ ಮಾಡಿದ್ದರು. ಜೊತೆಗೆ ತಮ್ಮ ತಂದೆ ಜೊತೆಗಿದ್ದ ಫೋಟೋವನ್ನು ಕೂಡ ಶೇರ್ ಮಾಡಿಕೊಂಡಿದ್ದರು.
ಬೆಂಗಳೂರು: ಹಿರಿಯ ನಟಿ ಶ್ರುತಿ ಅವರ ಮಗಳು ಗೌರಿ ತಮ್ಮ ತಂದೆಯನ್ನು ನೆನಪಿಸಿಕೊಂಡು ಒಂದು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಗೌರಿ ಅಪ್ಪ ಎಸ್.ಮಹೇಂದರ್ ಹುಟ್ಟುಹಬ್ಬವಿತ್ತು. ಈ ಹಿನ್ನೆಲೆಯಲ್ಲಿ ತಂದೆಯನ್ನು ನೆನಪಿಸಿಕೊಂಡು ಅವರ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಬರೆದುಕೊಂಡಿದ್ದಾರೆ.
“ಹುಟ್ಟುಹಬ್ಬದ ಶುಭಾಶಯಗಳು ಅಪ್ಪ. ನೀವು ನನ್ನ ಮೊದಲ ಪ್ರೀತಿ ಮತ್ತು ನನ್ನ ನೆಚ್ಚಿನ ನಾಯಕನಾಗಿದ್ದೀರಿ. ನಿಮ್ಮ ಮೇಲಿನ ಪ್ರೀತಿ ಹಾಗೂ ನಮ್ಮಿಬ್ಬರ ನಡುವಿನ ಬಾಂಧವ್ಯವನ್ನು ಯಾರೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಆದರೆ ನಿಮ್ಮ ಜೊತೆ ಕಾಲ ಕಳೆಯಲು ಕಾಯುತ್ತೀದ್ದೀನಿ” ಎಂದು ಪ್ರೀತಿಯಿಂದ ಬರೆದು ಪೋಸ್ಟ್ ಮಾಡಿದ್ದಾರೆ.
ಜೊತೆಗೆ ತಮ್ಮ ತಂದೆ ಜೊತೆಗಿದ್ದ ಫೋಟೋವನ್ನು ಕೂಡ ಶೇರ್ ಮಾಡಿಕೊಂಡಿದ್ದಾರೆ.
ಶ್ರುತಿ ಅವರು 1998ರಲ್ಲಿ ನಿರ್ದೇಶಕ ಎಸ್.ಮಹೇಂದರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಕೌಟುಂಬಿಕ ಕಾರಣದಿಂದ 2009ರಲ್ಲಿ ಶ್ರುತಿ ಮತ್ತು ಎಸ್.ಮಹೇಂದರ್ ಇಬ್ಬರು ವಿಚ್ಛೇದನ ಪಡೆದುಕೊಂಡಿದ್ದಾರೆ. ಅಂದಿನಿಂದ ತಮ್ಮ ಮಗಳು ಗೌರಿ ಜೊತೆ ಶ್ರುತಿ ಜೀವನ ನಡೆಸುತ್ತಿದ್ದು, ಇತ್ತ ವಿಚ್ಛೇದನದ ಬಳಿಕ ಎಸ್.ಮಹೇಂದರ್ ಅವರು ಮೈಸೂರು ಮೂಲದ ಯಶೋದ ಅವರನ್ನು ಎರಡನೇ ಮದುವೆಯಾಗಿದ್ದಾರೆ.