Tag: Gaurigadde

  • ಚಂದ್ರು ಸಾವು ಪ್ರಕರಣದ ತನಿಖೆ ಚುರುಕು- ತನಿಖಾ ತಂಡದಿಂದ ವಿನಯ್ ಗುರೂಜಿ ಭೇಟಿ

    ಚಂದ್ರು ಸಾವು ಪ್ರಕರಣದ ತನಿಖೆ ಚುರುಕು- ತನಿಖಾ ತಂಡದಿಂದ ವಿನಯ್ ಗುರೂಜಿ ಭೇಟಿ

    ಚಿಕ್ಕಮಗಳೂರು: ಹೊನ್ನಾಳಿ ಶಾಕ ಎಂ.ಪಿ ರೇಣುಕಾಚಾರ್ಯ (MP Renukacharya) ಸಹೋದರನ ಪುತ್ರ ಚಂದ್ರಶೇಖರ್ (Chandashekhar) ಸಾವಿಗೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಸಾಕಷ್ಟು ಅನುಮಾನಗಳು ಎದ್ದಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವರದಿ ಕೇಳಿದ್ದಾರೆ.

    ಸಿಎಂ ವರದಿ ಬೆನ್ನಲ್ಲೇ ತನಿಖೆ ಚುರುಕುಗೊಂಡಿದ್ದು, ತನಿಖಾ ತಂಡ ಈಗಾಗಲೇ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿರುವ ಗೌರಿಗದ್ದೆಯ ವಿನಯ್ ಗುರೂಜಿ (Vinay Guruji) ಆಶ್ರಮಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ಚನ್ನಗಿರಿ ಪಿಎಸ್‍ಐ ನೇತೃತ್ವದ ನಾಲ್ವರ ತಂಡ ಆಶ್ರಮಕ್ಕೆ ಭೇಟಿ ಕೊಟ್ಟಿದೆ. ಪ್ರಕರಣ ಸಂಬಂಧ ಈವರೆಗೂ 4 ಬಾರಿ ಪೊಲೀಸರು ಭೇಟಿ ನೀಡಿದ್ದಾರೆ. ಆಶ್ರಮದ ಸಿಬ್ಬಂದಿ, ಉಸ್ತುವಾರಿ ವಹಿಸಿರುವ ಭಕ್ತರ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ್ ಸಾವಿನ ಪ್ರಕರಣ- ಇಂದು ಹೊರಬೀಳುತ್ತಾ ಪೋಸ್ಟ್‌ ಮಾರ್ಟಂ ರಿಪೋರ್ಟ್?

    ಇತ್ತ ಚಂದ್ರು ಸಾವಿಗೆ ನಿಖರವಾದ ಕಾರಣ ಇಂದು ಹೊರಬೀಳುವ ಸಾಧ್ಯತೆ ಇದೆ. ಈಗಾಗಲೇ ಇದು ಕೊಲೆಯಲ್ಲ, ಅಪಘಾತದಿಂದ ಉಂಟಾದ ಸಾವು ಎಂಬುದು ಪೊಲೀಸ್ ಹಾಗೂ ಎಫ್‍ಎಸ್‍ಎಲ್ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗುತ್ತಿದೆ. ಆದರೆ ರೇಣುಕಾಚಾರ್ಯ ಕುಟುಂಬಸ್ಥರು ಮಾತ್ರ ಇದೊಂದು ಪೂರ್ವನಿಯೋಜಿತ ಕೊಲೆ ಅಂತ ಆರೋಪ ಮಾಡಿರೋದೇ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿರೋದು. ಇಂದು ಚಂದ್ರು ಪೋಸ್ಟ್‍ಮಾರ್ಟಂ ವರದಿ ಹಾಗೂ ಎಫ್‍ಎಸ್‍ಎಲ್ ರಿಪೋರ್ಟ್ ಪೊಲೀಸರ ಕೈ ಸೇರುವ ಸಾಧ್ಯತೆ ಇದೆ.

    ಈಗಾಗಲೇ ಘಟನೆ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆ (Honnalli Police Station) ಯಲ್ಲಿ 302 ಹಾಗೂ 201 ಕೇಸ್ ಕೂಡ ದಾಖಲಾಗಿದೆ. ಚಂದ್ರುವಿನ ಕೊಲೆಯಾಗಿದೆ, ಅಲ್ಲದೆ ಆತನನ್ನು ಕೊಲೆ ಮಾಡಿ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತ ಎಫ್‍ಎಸ್‍ಎಲ್ ಅಧಿಕಾರಿಗಳ ಎರಡು ತಂಡ ಅಪಘಾತ ನಡೆದ ಹೊನ್ನಾಳಿ ಬಳಿ ಇರುವ ತುಂಗಾ ಮೇಲ್ದಂಡೆ ಕಾಲುವೆ ಬಳಿ ಪರಿಶೀಲನೆ ಮಾಡಿ ಎವಿಡೆನ್ಸ್ ಕಲೆಕ್ಟ್ ಮಾಡಿದ್ದಾರೆ. ಪೊಲೀಸರು ಕೂಡ ಟೆಕ್ನಿಕಲ್ ಎವಿಡೆನ್ಸ್ ಕೂಡ ಕಲೆಕ್ಟ್ ಮಾಡಿಲಾಗಿದ್ದು, ಇದೊಂದು ಅಪಘಾತ, ಓವರ್ ಸ್ಪೀಡ್‍ನಲ್ಲಿ ಬಂದ ಹಿನ್ನೆಲೆ ಚಾನಲ್ ನಲ್ಲಿ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಗೌರಿಗದ್ದೆಗೆ ಒಬ್ಬನೇ ಹೋಗಿದ್ದ ಚಂದ್ರಶೇಖರ್ – ತಮ್ಮನ ಮಗನನ್ನು ನೆನದು ರೇಣುಕಾಚಾರ್ಯ ಕಣ್ಣೀರು

    ಗೌರಿಗದ್ದೆಗೆ ಒಬ್ಬನೇ ಹೋಗಿದ್ದ ಚಂದ್ರಶೇಖರ್ – ತಮ್ಮನ ಮಗನನ್ನು ನೆನದು ರೇಣುಕಾಚಾರ್ಯ ಕಣ್ಣೀರು

    ದಾವಣಗೆರೆ: ಶಿವಮೊಗ್ಗದ (Shivamogga) ಗೌರಿಗದ್ದೆಗೆ ಚಂದ್ರಶೇಖರ್ (Chandrasekhar) ಹೋಗಿದ್ದನು. ಅಂದು ರಾತ್ರಿಯಿಂದಲೇ ಅವನ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಹೊನ್ನಾಳಿ (Honnali) ಕ್ಷೇತ್ರದ ಬಿಜೆಪಿ ಶಾಸಕ ಎಂ. ರೇಣುಕಾಚಾರ್ಯ (MP Renukacharya) ತಮ್ಮ ಸಹೋದರನ ಮಗ ನಾಪತ್ತೆಯಾಗಿರುವುದನ್ನು ನೆನೆದು ಕಣ್ಣೀರು ಹಾಕಿದ್ದಾರೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ ಅವರು, ಚಂದ್ರಶೇಖರ್ ಎಲ್ಲಿ ಹೋಗಿದ್ದಾನೆ, ಎಲ್ಲಿ ಇದ್ದಾನೆ ಎನ್ನುವುದು ಕೂಡ ತಿಳಿಯುತ್ತಿಲ್ಲ. ಯಾವಾಗಲೂ ಸ್ನೇಹಿತರ ಜೊತೆ ಇರುತ್ತಿದ್ದ, ಆದರೆ ಕಳೆದ ಭಾನುವಾರ ಒಬ್ಬನೇ ಗೌರಿಗದ್ದೆಗೆ (Gourigadde) ಹೋಗಿದ್ದ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ- ಕುಟುಂಬಸ್ಥರಲ್ಲಿ ಆತಂಕ

    ಬೆಳಗ್ಗೆಯಿಂದಲೂ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಎಲ್ಲರಿಗೂ ಕರೆ ಮಾಡಿ ವಿಚಾರಿಸುತ್ತಿದ್ದೇವೆ. ಯಾವುದೇ ಮಾಹಿತಿಯಾಗಲಿ, ಕಾರು ಕೂಡ ಸಿಗುತ್ತಿಲ್ಲ. ಮನಸ್ಸು ಎಷ್ಟೇ ಭಾರವಾಗಿದ್ದರೂ ಎರಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಂದಿದ್ದೇನೆ. ಎಲ್ಲರೂ ಆತ್ಮ ವಿಶ್ವಾಸ ತುಂಬುತ್ತಿದ್ದಾರೆ. ಚುನಾವಣೆ ಸೋತಾಗಲೂ ನಾನು ಇಷ್ಟು ಯೋಚನೆ ಮಾಡಿರಲಿಲ್ಲ. ಚಂದ್ರಶೇಖರ್ ಬಹಳ ಸೌಮ್ಯ ಸ್ವಭಾವದವನು. ಒಂದು ಕೆಟ್ಟ ಪದ ಕೂಡ ಮಾತನಾಡುತ್ತಿರಲಿಲ್ಲ. ಎಲ್ಲರೊಂದಿಗೂ ಅಷ್ಟು ಚೆನ್ನಾಗಿ ಬೆರೆಯುತ್ತಿದ್ದ. ಎಲ್ಲಾ ಕಾರ್ಯಕ್ರಮಗಳಲ್ಲಿಯೂ ನನ್ನೊಂದಿಗೆ ಇರುತ್ತಿದ್ದ. ಚಂದ್ರು ವಾಪಸ್ ಬರುತ್ತಾನೆ ಎಂದು ಭಗವಂತನನ್ನು ನಂಬಿದ್ದೇನೆ. ಅವನು ಬಂದ ತಕ್ಷಣ ಮುದ್ದಾಡಬೇಕು ಎಂಬ ಆಸೆಯಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

     

    ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಅವರು ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದಾರೆ. ಇತ್ತೀಚಿಗೆ ರೇಣುಕಾಚಾರ್ಯ ಜೊತೆ ಸಕ್ರಿಯವಾಗಿ ಓಡಾಡಿಕೊಂಡಿದ್ದ 27 ವರ್ಷದ ಚಂದ್ರಶೇಖರ್ ಭಾನುವಾರ ಗೌರಿಗದ್ದೆಯಿಂದ ಹೊನ್ನಾಳಿಗೆ ವಾಪಸ್ ಆಗಿದ್ದರು. ಅದೇ ದಿನ ರಾತ್ರಿ 11:30ರ ಸುಮಾರಿಗೆ ಹೊನ್ನಾಳಿಯ ಸಂತೆ ಮೈದಾನದ ಬಳಿ ಚಂದ್ರಶೇಖರ್ ಫೋನ್ ಸ್ವಿಚ್ ಆಫ್ ಆಗಿದೆ.

    ಎಲ್ಲಿ ಹುಡುಕಿದರೂ ಕಾಣುತ್ತಿಲ್ಲ. ಅವರ ಕಾರು ಕೂಡ ಎಲ್ಲಿಯೂ ಪತ್ತೆ ಆಗಿಲ್ಲ. ಇದು ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿದೆ. ರೇಣುಕಾಚಾರ್ಯ ಅವರು ಚಂದ್ರಶೇಖರ ಎಲ್ಲಿದ್ದರೂ ಬಾರಪ್ಪ ಎಂದು ಗೋಳಾಡುತ್ತಿದ್ದಾರೆ. ಹೊನ್ನಾಳಿ ಪೊಲೀಸರು ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]