Tag: Gautam Gambhir

  • ಕೊನೆಯ ದಿನವೂ ಮಳೆಯಾಟ – ಗಬ್ಬಾ ಟೆಸ್ಟ್‌ ಡ್ರಾನಲ್ಲಿ ಅಂತ್ಯ; WTC ಫೈನಲ್‌ ರೇಸ್‌ನಲ್ಲಿ ಉಳಿದ ಭಾರತ

    ಕೊನೆಯ ದಿನವೂ ಮಳೆಯಾಟ – ಗಬ್ಬಾ ಟೆಸ್ಟ್‌ ಡ್ರಾನಲ್ಲಿ ಅಂತ್ಯ; WTC ಫೈನಲ್‌ ರೇಸ್‌ನಲ್ಲಿ ಉಳಿದ ಭಾರತ

    ಬ್ರಿಸ್ಬೇನ್: ಬಾರ್ಡರ್‌ ಗವಾಸ್ಕರ್‌ ಟ್ರೋಫಿ 3ನೇ ಟೆಸ್ಟ್‌ ಪಂದ್ಯದ ಕೊನೆಯ ದಿನವೂ ಮಳೆ ಆಟವೇ ಮುಂದುವರಿದಿದ್ದು, ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇದರಿಂದ ಭಾರತಕ್ಕೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಹಾದಿ ಕೊಂಚ ಸುಗಮವಾದಂತಾಗಿದೆ. ಸದ್ಯ ಮೂರು ಪಂದ್ಯಗಳ ಪೈಕಿ 1-1ರಲ್ಲಿ ಸರಣಿ ಸಮಬಲಗೊಂಡಿದೆ. ಉಳಿದ 2 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದರೆ, WTC ಫೈನಲ್‌ ತಲುಪಲಿದೆ.

    ವೂಲೂಂಗಬ್ಬಾದ ಬ್ರಿಸ್ಬೇನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 4ನೇ ದಿನದ ಅಂತ್ಯಕ್ಕೆ ಭಾರತ 9 ವಿಕೆಟ್‌ ನಷ್ಟಕ್ಕೆ 252 ರನ್‌ ಗಳಿಸಿ, ಫಾಲೋ ಆನ್‌ ಭೀತಿಯಿಂದ ಪಾರಾಗಿತ್ತು. ಕೊನೆಯ ಕ್ರೀಸ್‌ ಆರಂಭಿಸಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 260 ರನ್‌ಗಳಿಗೆ ಆಲೌಟ್‌ ಆಯಿತು. ಬಳಿಕ 185 ರನ್‌ಗಳ ಮುನ್ನಡೆಯೊಂದಿಗೆ ತನ್ನ 2ನೇ ಇನ್ನಿಂಗ್ಸ್‌ ಆರಂಭಿಸಿದ ಆಸೀಸ್‌ 7 ವಿಕೆಟ್‌ ನಷ್ಟಕ್ಕೆ 89 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತು. ಈ ಮೂಲಕ ಭಾರತಕ್ಕೆ 275 ರನ್‌ಗಳ ಗುರಿ ನೀಡಿತು. ಇತ್ತ ಭಾರತ 2.1 ಓವರ್‌ಗಳಲ್ಲಿ 8 ರನ್‌ ಗಳಿಸುತ್ತಿದ್ದಂತೆ ಮಳೆ ಕಾಟ ಶುರುವಾಯಿತು. ನಿರಂತರವಾಗಿ ಸುರಿಯುತ್ತಿದ್ದರಿಂದ ಪಂದ್ಯ ಡ್ರಾನತ್ತ ತಿರುಗಿತು.

    ಭಾರತವನ್ನು ಕಾಪಾಡಿದ ಆಕಾಶ್‌ ದೀಪ್‌:
    ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತ್ಯುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ 3ನೇ ದಿನ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು 51 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿತ್ತು. 4ನೇ ದಿನ ಆರಂಭಿಕ ಕೆ.ಎಲ್ ರಾಹುಲ್ 84 ರನ್, ರವೀಂದ್ರ ಜಡೇಜಾ 77 ರನ್‌ಗಳ ಕೊಡುಗೆ ನೀಡಿದರೂ, ಫಾಲೋ ಆನ್‌ಗೆ ತುತ್ತಾಗುವ ಭೀತಿಯಲ್ಲಿತ್ತು. ಆದ್ರೆ ಕೊನೇ ಕ್ಷಣದಲ್ಲಿ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದ ಆಕಾಶ್ ದೀಪ್, ಪ್ಯಾಟ್ ಕಮ್ಮಿನ್ಸ್ ಅವರ ಪಾಲಿನ 21ನೇ ಓವರ್‌ನ 4ನೇ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಟೀಂ ಇಂಡಿಯಾವನ್ನು ಫಾಲೋ ಆನ್‌ನಿಂದ ಕಾಪಾಡಿದರು. ಜಸ್ಪ್ರೀತ್ ಬುಮ್ರಾ ಸಹ ಬ್ಯಾಟಿಂಗ್‌ನಲ್ಲಿ ನೆರವಾದರು.

    ಟೀಂ ಇಂಡಿಯಾ ಪರ ಕೆ.ಎಲ್ ರಾಹುಲ್ 84 ರನ್ (139 ಎಸೆತ, 8 ಬೌಂಡರಿ), ರವೀಂದ್ರ ಜಡೇಜಾ 77 ರನ್ (123 ರನ್, 7 ಬೌಂಡರಿ, 1 ಸಿಕ್ಸರ್), ರೋಹಿತ್ ಶರ್ಮಾ 10 ರನ್, ನಿತೀಶ್ ಕುಮಾರ್ ರೆಡ್ಡಿ 16 ರನ್ ಗಳಿಸಿದ್ರೆ ಉಳಿದವರು ಅಲ್ಪಮೊತ್ತಕ್ಕೆ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ಆಕಾಶ್ ದೀಪ್ 31 ರನ್ ಗಳಿಸಿದ್ರೆ, ಜಸ್ಪ್ರೀತ್ ಬುಮ್ರಾ 10 ರನ್‌ ಗಳಿಸಿದರು.

    ಭಾರತದ WTC ಫೈನಲ್‌ ಹಾದಿ ಹೇಗಿದೆ?
    ಇದೇ ಡಿ.26ರಿಂದ ದಕ್ಷಿಣ ಆಫ್ರಿಕಾ ತಂಡವು ಪಾಕಿಸ್ತಾನದ ವಿರುದ್ಧ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನಾಡಲಿದೆ. ಈ ಸರಣಿಯ ಒಂದು ಪಂದ್ಯದಲ್ಲಿ ಪಾಕ್‌ ಗೆಲ್ಲಬೇಕು. ಇದೇ ವೇಳೆ ಆಸೀಸ್‌ ವಿರುದ್ಧ ಸರಣಿಯನ್ನು ಭಾರತ 3-1 ಅಂತರದಲ್ಲಿ ಗೆದ್ದರೆ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಅಥವಾ ಭಾರತವು ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಸರಣಿಯನ್ನು 2-1 ಅಂತರದಲ್ಲಿ ಗೆದ್ದರೆ, ಶ್ರೀಲಂಕಾ ವಿರುದ್ಧ ಸರಣಿಯಲ್ಲಿ ಆಸೀಸ್‌ 1-1 ಅಥವಾ ಲಂಕಾ 1-0 ಅಂತರದಲ್ಲಿ ಕೊನೆಯಗೊಳ್ಳಬೇಕು. ಅಥವಾ ಭಾರತ ಆಸೀಸ್‌ ವಿರುದ್ಧ 2-2 ಅಂತರಲ್ಲಿ ಗೆದ್ದರೆ, ಲಂಕಾ, ಆಸೀಸ್‌ ಇರುದ್ಧ 1-0 ಅಥವಾ 2-0 ವಿರುದ್ಧ ಗೆದ್ದರೆ ಮಾತ್ರ ಭಾರತ ಫೈನಲ್‌ಗೆ ಅರ್ಹತೆ ಪಡೆಯುವ ಸಾಧ್ಯತೆಗಳಿವೆ.

    ಡ್ರೆಸ್ಸಿಂಗ್ ರೂಮ್‌ನಲ್ಲಿ ಕೊಹ್ಲಿ, ಗಂಭೀರ್ ಸಂಭ್ರಮ:
    213 ರನ್‌ಗಳಿಗೆ ಭಾರತ ತನ್ನ 9ನೇ ವಿಕೆಟ್ ಕಳೆದುಕೊಂಡಿತು. ಇದರಿಂದ ಭಾರತ ಫಾಲೋ ಆನ್‌ಗೆ ತುತ್ತಾಗಿ ಕಳೆದುಕೊಳ್ಳುವ ಭೀತಿ ಎದುರಾಗಿತ್ತು. ಆದ್ರೆ ಕೊನೆಯ ವಿಕೆಟ್‌ಗೆ ಜೊತೆಗೂಡಿದ ಬುಮ್ರಾ, ಆಕಾಶ್‌ದೀಪ್ ನಿರೀಕ್ಷೆಗೂ ಮೀರಿದ ಪ್ರದರ್ಶನ ತೋರಿದರು. ಪ್ಯಾಟ್ ಕಮ್ಮಿನ್ಸ್ ಅವರ 21ನೇ ಓವರ್‌ನ 4ನೇ ಎಸೆತವನ್ನು ಆಕಾಶ್ ದೀಪ್ ಬೌಂಡರಿಗೆ ಅಟ್ಟುತ್ತಿದ್ದಂತೆ ಡ್ರೆಸ್ಸಿಂಗ್ ರೂಮ್‌ನಲ್ಲಿದ್ದ ಹಿರಿಯ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು. ವಿರಾಟ್ ಕೊಹ್ಲಿ, ಕೋಚ್ ಗೌತಮ್ ಗಂಭೀರ್, ರೋಹಿತ್ ಶರ್ಮಾ, ಪರಸ್ಪರ ಕೈಕುಲುಕಿ ಸಂಭ್ರಮಿಸಿದ್ದರು.

  • ಫಾಲೋ ಆನ್‌ನಿಂದ ಭಾರತ ಬಚಾವ್‌ – ಕೊನೆಯ ವಿಕೆಟ್‌ಗೆ 39 ರನ್‌ಗಳ ಜೊತೆಯಾಟ ಉಳಿಸಿತು ಮಾನ!

    ಫಾಲೋ ಆನ್‌ನಿಂದ ಭಾರತ ಬಚಾವ್‌ – ಕೊನೆಯ ವಿಕೆಟ್‌ಗೆ 39 ರನ್‌ಗಳ ಜೊತೆಯಾಟ ಉಳಿಸಿತು ಮಾನ!

    – 4ನೇ ದಿನದಾಟ ಅಂತ್ಯಕ್ಕೆ ಭಾರತ 252/9, ಮೊದಲ ಇನ್ನಿಂಗ್ಸ್‌ನಲ್ಲಿ ಆಸೀಸ್ 445 ರನ್
    – ಫಾಲೋ ಆನ್‌ನಿಂದ ಬಚಾವ್ ಆಗುತ್ತಿದ್ದಂತೆಯೇ ಗಂಭೀರ್, ವಿರಾಟ್ ಸಂಭ್ರಮ

    ಬ್ರಿಸ್ಬೇನ್: ದಿನದ ಕೊನೆಯಲ್ಲಿ ಆಕಾಶ್‌ ದೀಪ್‌ (Akash Deep), ಜಸ್ಪ್ರೀತ್‌ ಬುಮ್ರಾ 39 ರನ್‌ಗಳ ಜೊತೆಯಾಟದಿಂದ ಭಾರತ, ಆಸ್ಟ್ರೇಲಿಯಾ ವಿರುದ್ಧ ಫಾಲೋ ಆನ್‌ನಿಂದ ಬಚಾವ್‌ ಆಗಿದೆ. ಇದರಿಂದ 3ನೇ ಟೆಸ್ಟ್‌ ಪಂದ್ಯ ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆಯಿದೆ.

    ವೂಲೂಂಗಬ್ಬಾದ ಬ್ರಿಸ್ಬೇನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಟೆಸ್ಟ್‌ ಪಂದ್ಯದಲ್ಲಿ‌ ಭಾರತ ತನ್ನ ಮೊದಲ ಇನ್ನಿಂಗ್ಸ್‌ ಆಡುತ್ತಿದೆ. ಮಳೆ ಕಾಟದ ಹೊರತಾಗಿಯೂ 4ನೇ ದಿನದ ಅಂತ್ಯಕ್ಕೆ ಭಾರತ 74.5 ಓವರ್‌ಗಳಲ್ಲಿ 9 ವಿಕೆಟ್‌ಗೆ 252 ರನ್‌ ಗಳಿಸಿದೆ. ವೇಗಿಗಳಾದ ಆಕಾಶ್‌ ದೀಪ್‌, ಜಸ್ಪ್ರೀತ್‌ ಬುಮ್ರಾ (Jasprit Bumrah) ಅಜೇಯರಾಗುಳಿದಿದ್ದು, ಕೊನೆಯ ದಿನ ಕ್ರೀಸ್‌ ಆರಂಭಿಸಲಿದ್ದಾರೆ.

    ಮೊದಲು ಬ್ಯಾಟಿಂಗ್‌ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ಗಳಿಗೆ ಆಲೌಟ್‌ ಆಗಿದೆ. ಇದಕ್ಕೆ ಪ್ರತ್ಯುತ್ತರವಾಗಿ ಬ್ಯಾಟಿಂಗ್‌ ಆರಂಭಿಸಿರುವ ಟೀಂ ಇಂಡಿಯಾ 3ನೇ ದಿನ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು 51 ರನ್‌ ಗಳಿಸಿ ಸಂಕಷ್ಟಕ್ಕೆ ಸಿಲುಕಿತ್ತು.

    ಆರಂಭಿಕ ಕೆ.ಎಲ್‌ ರಾಹುಲ್‌ 84 ರನ್‌, ರವೀಂದ್ರ ಜಡೇಜಾ 77 ರನ್‌ಗಳ ಕೊಡುಗೆ ನೀಡಿದರೂ, ಫಾಲೋ ಆನ್‌ಗೆ ತುತ್ತಾಗುವ ಭೀತಿಯಲ್ಲಿತ್ತು. ಆದ್ರೆ ತಾಳ್ಮೆಯ ಬ್ಯಾಟಿಂಗ್‌ ಪ್ರದರ್ಶಿಸಿದ ಆಕಾಶ್‌ ದೀಪ್‌ ಪ್ಯಾಟ್‌ ಕಮ್ಮಿನ್ಸ್‌ ಅವರ ಪಾಲಿನ 21ನೇ ಓವರ್‌ನ 4ನೇ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಟೀಂ ಇಂಡಿಯಾವನ್ನು ಫಾಲೋ ಆನ್‌ನಿಂದ ಕಾಪಾಡಿದರು. ಜಸ್ಪ್ರೀತ್‌ ಬುಮ್ರಾ ಸಹ ಬ್ಯಾಟಿಂಗ್‌ನಲ್ಲಿ ನೆರವಾದರು.

    ಟೀಂ ಇಂಡಿಯಾ ಪರ ಕೆ.ಎಲ್‌ ರಾಹುಲ್‌ 84 ರನ್‌ (139 ಎಸೆತ, 8 ಬೌಂಡರಿ), ರವೀಂದ್ರ ಜಡೇಜಾ 77 ರನ್‌ (123 ರನ್‌, 7 ಬೌಂಡರಿ, 1 ಸಿಕ್ಸರ್)‌, ರೋಹಿತ್‌ ಶರ್ಮಾ 10 ರನ್‌, ನಿತೀಶ್‌ ಕುಮಾರ್‌ ರೆಡ್ಡಿ 16 ರನ್‌ ಗಳಿಸಿದ್ರೆ ಉಳಿದವರು ಅಲ್ಪಮೊತ್ತಕ್ಕೆ ಪೆವಿಲಿಯನ್‌ ಸೇರಿದರು. ಜಸ್ಪ್ರೀತ್‌ ಬುಮ್ರಾ 10 ರನ್‌, ಆಕಾಶ್‌ ದೀಪ್‌ 27 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದಾರೆ.

    ಏನಿದು ಫಾಲೊ-ಆನ್‌ ನಿಯಮ?
    ಎಂಸಿಸಿ ಕಾನೂನು 14.1.1 ರ ಪ್ರಕಾರ, 5 ದಿನಗಳು ಅಥವಾ ಅದಕ್ಕಿಂತ ಹೆಚ್ಚಿನ ತಲಾ ಎರಡು ಇನ್ನಿಂಗ್ಸ್ ಟೆಸ್ಟ್‌ ಪಂದ್ಯದಲ್ಲಿ, ಮೊದಲು ಬ್ಯಾಟಿಂಗ್ ಮಾಡುವ ತಂಡವು ಕನಿಷ್ಠ 200 ರನ್‌ಗಳಿಂದ ಮುನ್ನಡೆ ಸಾಧಿಸಿದರೆ, ಎದುರಾಳಿ ತಂಡಕ್ಕೆ ಅದರ ಇನ್ನಿಂಗ್ಸ್ ಅನ್ನು ಅನುಸರಿಸಲು (ಫಾಲೊ-ಆನ್) ಹೇಳುವ ನಿಯಮ ಆಗಿದೆ. ಅಂದ್ರೆ ಮೊದಲ ಇನ್ನಿಂಗ್ಸ್‌ನಲ್ಲಿ ಚೇಸಿಂಗ್‌ ಮಾಡುವ ತಂಡವು 200 ರನ್‌ಗಳ ಹಿನ್ನಡೆ ಅನುಭವಿಸಿದರೆ, 2ನೇ ಇನ್ನಿಂಗ್ಸ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಬೇಕಾಗುತ್ತದೆ.

    ಭಾರತಕ್ಕೆ ಫಾಲೋ ಆನ್‌ನಿಂದ ಪಾರಾಗಲು 246 ರನ್‌ಗಳ ಅಗತ್ಯವಿತ್ತು. ಆದ್ರೆ 252 ರನ್‌ ಗಳಿಸಿರೋದ್ರಿಂದ ಪಂದ್ಯವನ್ನು ಡ್ರಾ ಮಾಡುವ ಪ್ರಯತ್ನ ನಡೆಸಬಹುದಾಗಿದೆ.

    ಡ್ರೆಸ್ಸಿಂಗ್‌ ರೂಮ್‌ನಲ್ಲಿ ಕೊಹ್ಲಿ, ಗಂಭೀರ್‌ ಸಂಭ್ರಮ:
    213 ರನ್‌ಗಳಿಗೆ ಭಾರತ ತನ್ನ 9ನೇ ವಿಕೆಟ್‌ ಕಳೆದುಕೊಂಡಿತು. ಇದರಿಂದ ಭಾರತ ಫಾಲೋ ಆನ್‌ಗೆ ತುತ್ತಾಗಿ ಕಳೆದುಕೊಳ್ಳುವ ಭೀತಿ ಎದುರಾಗಿತ್ತು. ಆದ್ರೆ ಕೊನೆಯ ವಿಕೆಟ್‌ಗೆ ಜೊತೆಗೂಡಿದ ಬುಮ್ರಾ, ಆಕಾಶ್‌ದೀಪ್‌ ನಿರೀಕ್ಷೆಗೂ ಮೀರಿದ ಪ್ರದರ್ಶನ ತೋರಿದರು. ಪ್ಯಾಟ್‌ ಕಮ್ಮಿನ್ಸ್‌ ಅವರ 21ನೇ ಓವರ್‌ನ 4ನೇ ಎಸೆತವನ್ನು ಆಕಾಶ್‌ ದೀಪ್‌ ಬೌಂಡರಿಗೆ ಅಟ್ಟುತ್ತಿದ್ದಂತೆ ಡ್ರೆಸ್ಸಿಂಗ್‌ ರೂಮ್‌ನಲ್ಲಿದ್ದ ಹಿರಿಯ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು. ವಿರಾಟ್‌ ಕೊಹ್ಲಿ, ಕೋಚ್‌ ಗೌತಮ್‌ ಗಂಭೀರ್‌, ನಾಯಕ ರೋಹಿತ್‌ ಶರ್ಮಾ, ಪರಸ್ಪರ ಕೈಕುಲುಕಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಈ ಕುರಿತ ಫೋಟೋಗಳು ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

  • ಸ್ಪಿನ್‌ ಮಾಂತ್ರಿಕ ಅಶ್ವಿನ್‌ ಆಲ್‌ರೌಂಡ್‌ ಆಟ – ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ; 1-0 ಸರಣಿ ಮುನ್ನಡೆ

    ಸ್ಪಿನ್‌ ಮಾಂತ್ರಿಕ ಅಶ್ವಿನ್‌ ಆಲ್‌ರೌಂಡ್‌ ಆಟ – ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ; 1-0 ಸರಣಿ ಮುನ್ನಡೆ

    ಚೆನ್ನೈ: ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ (Ravichandran Ashwin) ಅವರ ಆಲ್‌ರೌಂಡರ್‌ ಪ್ರದರ್ಶನದಿಂದಾಗಿ ಭಾರತ ಕ್ರಿಕೆಟ್‌ ತಂಡವು ಬಾಂಗ್ಲಾದೇಶ (Bangladesh) ತಂಡದ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

    ಇಲ್ಲಿನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ದಿನದಾಟದಲ್ಲಿ ಕಠಿಣ ಗುರಿ ಬೆನ್ನಟ್ಟಿದ ಬಾಂಗ್ಲಾ ಭಾರತದ ಸ್ಪಿನ್‌ ಮಾಂತ್ರಿಕರ ದಾಳಿಗೆ ಮಕಾಡೆ ಮಲಗಿದರು. 158 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿದ್ದ ಬಾಂಗ್ಲಾದೇಶ ತಂಡ 357 ರನ್‌ಗಳ ಹಿನ್ನಡೆಯೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿತು. 200 ರನ್‌ ದಾಟುತ್ತಿದ್ದಂತೆ ಪೆವಿಲಿಯನ್‌ ಪರೇಡ್‌ ನಡೆಸಿತು. ಪರಿಣಾಮ 234 ರನ್‌ಗಳಿಗೆ ಬಾಂಗ್ಲಾ ಸರ್ವಪತನ ಕಂಡಿತು.

    ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಬಾಂಗ್ಲಾ ಪರ 5ನೇ ವಿಕೆಟ್‌ಗೆ ಶಕೀಬ್‌ ಮತ್ತು ನಾಯಕ ನಜ್ಮುಲ್‌ ಹೊಸೈನ್‌ ಸ್ಯಾಂಟೋ (Najmul Hossain Shanto) ತಾಳ್ಮೆಯ ಇನ್ನಿಂಗ್ಸ್‌ ಕಟ್ಟಿದ್ದರು. 108 ಎಸೆತಗಳಲ್ಲಿ ಈ ಜೋಡಿ 48 ರನ್‌ ಗಳಿಸಿತ್ತು. ಶಕೀಬ್‌ (Shakib Al Hasan) ಔಟಾಗುತ್ತಿದ್ದಂತೆ ಬಾಂಗ್ಲಾ ಆಟಗಾರರು ಪೆವಿಲಿಯನ್‌ ಪರೇಡ್‌ ನಡೆಸಲು ಶುರು ಮಾಡಿದರು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾ ಪರ‌ ಸ್ಯಾಂಟೋ 82 ರನ್‌, ಜಾಕಿರ್‌ ಹಸನ್‌ 33 ರನ್‌, ಶದಾಮನ್‌ ಇಸ್ಲಾಮ್‌ 35 ರನ್‌, ಮಮಿನ್ಮುಲ್‌ ಹಾಕಿ ಹಾಗೂ ರಹೀಂ ತಲಾ 13 ರನ್‌ ಗಳಿಸಿದ್ರೆ, ಶಕೀಬ್‌ 25 ರನ್‌ ಗಳಿಸಿದರು. ಉಳಿದ ಆಟಗಾರರು ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರದ ಕಾರಣ, ಭಾರತದ ಎದುರು ಮಂಡಿಯೂರಬೇಕಾಯಿತು.

    ಭಾರತ 287ಕ್ಕೆ ಡಿಕ್ಲೆರ್:
    ಇದರ ನಡುವೆ ಭಾರತ ತಂಡ 287/4 ಸ್ಕೋರ್‌ಗೆ ಎರಡನೇ ಇನಿಂಗ್ಸ್ ಅನ್ನು ಡಿಕ್ಲೇರ್ ಮಾಡಿಕೊಂಡಿತು. ಮೊದಲ ಇನಿಂಗ್ಸ್‌ನಲ್ಲಿ 227 ರನ್‌ಗಳ ಮುನ್ನಡೆ ಸೇರಿದಂತೆ ಬಾಂಗ್ಲಾದೇಶಕ್ಕೆ ಭಾರತ, 515 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ. ಪಂತ್ ಜೊತೆಗೆ ಶುಭಮನ್ ಗಿಲ್ (ಔಟಾಗದೆ 119; 176 ಎಸೆತ, 10 ಬೌಂಡರಿ, 4 ಸಿಕ್ಸರ್) ಕೂಡ ಶತಕ ಗಳಿಸಿದರು. ಕೆಎಲ್ ರಾಹುಲ್ (ಔಟಾಗದೆ 22; 19 ಎಸೆತ, 4 ಬೌಂಡರಿ) ಅಜೇಯರಾಗಿ ಉಳಿದರು.

    ಭಾರತ ಪ್ರಥಮ ಇನಿಂಗ್ಸ್‌ನಲ್ಲಿ 376 ರನ್:
    ಬಾಂಗ್ಲಾದೇಶ ಬೌಲರ್‌ಗಳಲ್ಲಿ ಮೆಹದಿ ಹಸನ್ ಮಿರಾಜ್ ತಲಾ ಎರಡು, ಟಾಸ್ಕಿನ್ ಅಹ್ಮದ್ ಮತ್ತು ನಹಿದ್ ತಲಾ ಒಂದೊಂದು ವಿಕೆಟ್ ಪಡೆದರು. ಇದರ ನಡುವೆ ಭಾರತ ಮೊದಲ ಇನಿಂಗ್ಸ್ನಲ್ಲಿ 376 ರನ್‌ಗಳ ಬೃಹತ್ ಸ್ಕೋರ್ ಮಾಡಿತು. ರವಿಚಂದ್ರನ್ ಅಶ್ವಿನ್ (113) ಮತ್ತು ರವೀಂದ್ರ ಜಡೇಜಾ (86) ಬ್ಯಾಟಿಂಗ್‌ನಲ್ಲಿ ಮಿಂಚಿದ್ದರು. ಹಸನ್ ಮಹ್ಮೂದ್ (5/83) ಐದು ವಿಕೆಟ್ ಪಡೆದಿದ್ದರು.

    ಬಾಂಗ್ಲಾ 149ಕ್ಕೆ ಆಲ್‌ಔಟ್
    ಜಸ್‌ಪ್ರೀತ್ ಬುಮ್ರಾ (4/50), ಆಕಾಶ ದೀಪ್ (2/19), ರವೀಂದ್ರ ಜಡೇಜಾ (2/19) ಮತ್ತು ಮೊಹಮ್ಮದ್ ಸಿರಾಜ್ (2/30) ನೆರವಿನಿಂದ ಭಾರತ ತಂಡ, ಪ್ರಥಮ ಇನಿಂಗ್ಸ್ನಲ್ಲಿ ಬಾಂಗ್ಲಾದೇಶ ತಂಡವನ್ನು 149 ರನ್‌ಗಳಿಗೆ ಆಲ್‌ಔಟ್ ಮಾಡಿತ್ತು. ಶಕಿಬ್ ಅಲ್ ಹಸನ್ (32) ಗರಿಷ್ಠ ಸ್ಕೋರರ್ ಆಗಿದ್ದರು.

  • ಸ್ವಾತಂತ್ರ್ಯ ದಿನದ ಸಂಭ್ರಮ – ದೇಶಭಕ್ತಿ ಮೆರೆದ ಟೀಂ ಇಂಡಿಯಾ ಸ್ಟಾರ್ಸ್‌!

    ಸ್ವಾತಂತ್ರ್ಯ ದಿನದ ಸಂಭ್ರಮ – ದೇಶಭಕ್ತಿ ಮೆರೆದ ಟೀಂ ಇಂಡಿಯಾ ಸ್ಟಾರ್ಸ್‌!

    ಮುಂಬೈ: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ (78th Independence Day) ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಅಸಂಖ್ಯಾತ ಹೋರಾಟಗಾರರ ತ್ಯಾಗಬಲಿದಾನಗಳನ್ನ ಸ್ಮರಿಸುತ್ತಿದ್ದಾರೆ. ಹಾಗೆಯೇ ಟೀಂ ಇಂಡಿಯಾದ (Team India) ಸ್ಟಾರ್‌ ಆಟಗಾರರೂ ಸಹ ಸ್ವಾತಂತ್ರ್ಯ ದಿನವನ್ನು ವಿಭಿನ್ನವಾಗಿ ಆಚರಿಸಿದ್ದಾರೆ.

    ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma), ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ, ಟೀಂ ಇಂಡಿಯಾದ ಮುಖ್ಯಕೋಚ್‌ ಗೌತಮ್‌ ಗಂಭೀರ್‌ (Gautam Gambhir), ಸ್ಟಾರ್‌ ವೇಗಿ ಮೊಹಮ್ಮದ್‌ ಶಮಿ, ಒಲಿಂಪಿಕ್ಸ್‌ ಪದಕ ವಿಜೇತ ನೀರಜ್‌ ಚೋಪ್ರಾ ಸೇರಿದಂತೆ ಅನೇಕ ಕ್ರೀಡಾಪಟುಗಳು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಶುಭ ಸಂದೇಶ ಹಂಚಿಕೊಳ್ಳುವ ಮೂಲಕ ಸ್ವಾತಂತ್ರ್ಯ ದಿನವನ್ನು ಆಚರಿಸಿದ್ದಾರೆ. ಇದನ್ನೂ ಓದಿ: Independence Day | ರಾಜಸ್ಥಾನಿ ಲೆಹರಿಯಾ ಪೇಟ ಧರಿಸಿ ಗಮನ ಸೆಳೆದ ಮೋದಿ

    ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ 2024ರ ಟಿ20 ವಿಶ್ವಕಪ್‌ ಗೆದ್ದ ಸಂದರ್ಭದಲ್ಲಿ ಬಾರ್ಬಡೋಸ್‌ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜವನ್ನು ನೆಟ್ಟು ಗಮನ ಸೆಳೆದಿದ್ದರು. ಗುರುವಾರ (ಇಂದು) ಅದೇ ಚಿತ್ರವನ್ನು ಎಕ್ಸ್‌ ಖಾತೆಯ ಡಿಪಿ ಹಾಕಿಕೊಳ್ಳುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಹಾರ್ದಿಕ್‌ ಪಾಂಡ್ಯ ಸಹ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ರಾಷ್ಟ್ರಧ್ವಜ ಹೊತ್ತು ಮೆರೆದಾಡಿದ ಫೋಟೋವನ್ನ ಹಂಚಿಕೊಂಡಿದ್ದು, ಸ್ವಾತಂತ್ರ್ಯ ದಿನಾಚರಣೆಗೆ ಶುಭ ಕೋರಿದ್ದಾರೆ.

    ಕುಟುಂಬದೊಂದಿಗೆ ಸ್ವಾತಂತ್ರ್ಯ ದಿನಾಚರಣೆ:
    ಟೀಂ ಇಂಡಿಯಾದ ಮುಖ್ಯಕೋಚ್‌ ಗೌತಮ್‌ ಗಂಭೀರ್‌ ತಮ್ಮ ಕುಟುಂಬದೊಂದಿಗೆ ಸ್ವಾತಂತ್ರ್ಯ ದಿನವನ್ನ ಸರಳವಾಗಿ ಆಚರಿಸಿದ್ದಾರೆ. ಮನೆಯ ಆವರಣದಲ್ಲೇ ಧ್ಚಜಾರೋಹಣ ನೆರವೇರಿಸಿ ದೇಶದ ಜನತೆಗೆ ಶುಭ ಕೋರಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ – 2,500 ಅಡಿ ಉದ್ದದ ರಾಷ್ಟ್ರಧ್ವಜ ಪ್ರದರ್ಶನ

  • ಮಾರ್ನೆ ಮಾರ್ಕೆಲ್ ಈಗ ಟೀಂ ಇಂಡಿಯಾದ ಬೌಲಿಂಗ್‌ ಕೋಚ್‌

    ಮಾರ್ನೆ ಮಾರ್ಕೆಲ್ ಈಗ ಟೀಂ ಇಂಡಿಯಾದ ಬೌಲಿಂಗ್‌ ಕೋಚ್‌

    ನವದೆಹಲಿ: ದಕ್ಷಿಣ ಆಫ್ರಿಕಾದ (South Africa) ಮಾಜಿ ಕ್ರಿಕೆಟಿಗ, ವೇಗಿ ಬೌಲರ್ ಮಾರ್ನೆ ಮಾರ್ಕೆಲ್ (Morne Morkel) ಭಾರತ ಕ್ರಿಕೆಟ್ ತಂಡಕ್ಕೆ (Team India) ಬೌಲಿಂಗ್ ಕೋಚ್ (Bowling Coach) ಆಗಿ ನೇಮಕವಾಗಿದ್ದಾರೆ.

    ಈ ಹಿಂದೆ ಮಾರ್ಕೆಲ್ ಅವರು 2023ರ ಏಕದಿನ ವಿಶ್ವಕಪ್ ಸಮಯದಲ್ಲಿ ಪಾಕಿಸ್ತಾನದ ಕ್ರಿಕೆಟ್ ತಂಡಕ್ಕೆ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಐಪಿಎಲ್‌ನಲ್ಲಿ (IPL) ಕೋಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಡೆರ್‌ಡೇವಿಲ್ಸ್ ತಂಡಗಳಲ್ಲಿ ಆಟವಾಡಿದ್ದರು. ಇದನ್ನೂ ಓದಿ: ವಿನೇಶ್‌ ಫೋಗಟ್‌ ʼಬೆಳ್ಳಿʼ ತೀರ್ಪು ಆ.16ಕ್ಕೆ ಮುಂದೂಡಿಕೆ

    ಭಾರತ ತಂಡದ ಹೊಸ ಕೋಚ್ ಆಗಿರುವ ಗೌತಮ್ ಗಂಭೀರ್ (Gautam Gambhir) ಸಲಹೆಯ ಮೇರೆಗೆ ಮಾರ್ಕೆಲ್‌ ಅವರನ್ನು ಆಯ್ಕೆ ಮಾಡಲಾಗಿದೆ. ಲಕ್ನೋ ತಂಡದಲ್ಲಿ ಗೌತಮ್ ಗಂಭೀರ್ ಮತ್ತು ಮಾರ್ಕೆಲ್ ಜೊತೆಯಾಗಿ ಕೆಲಸ ಮಾಡಿದ್ದರು.

    39 ವರ್ಷದ ಮಾರ್ಕೆಲ್ ದಕ್ಷಿಣ ಆಫ್ರಿಕಾ ಪರವಾಗಿ 86 ಟೆಸ್ಟ್, 117 ಏಕದಿನ, 44 ಟಿ20 ಪಂದ್ಯಗಳನ್ನಾಡಿ ಒಟ್ಟು 544 ವಿಕೆಟ್‌ಗಳು ಪಡೆದಿದ್ದಾರೆ.

     

  • ಸೂಪರ್‌ ಓವರ್‌ ಥ್ರಿಲ್ಲಿಂಗ್‌ – ಮೊದಲ ಎಸೆತದಲ್ಲೇ ಭಾರತಕ್ಕೆ ಗೆಲುವು – ಕ್ಲೀನ್‌ಸ್ವೀಪ್‌ನೊಂದಿಗೆ ಸರಣಿ ಜಯ

    ಸೂಪರ್‌ ಓವರ್‌ ಥ್ರಿಲ್ಲಿಂಗ್‌ – ಮೊದಲ ಎಸೆತದಲ್ಲೇ ಭಾರತಕ್ಕೆ ಗೆಲುವು – ಕ್ಲೀನ್‌ಸ್ವೀಪ್‌ನೊಂದಿಗೆ ಸರಣಿ ಜಯ

    ಕೊಲಂಬೊ: ಸೂಪರ್‌ ಓವರ್‌ನ ಮೊದಲ ಎಸೆತದಲ್ಲೇ ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav) ಬೌಂಡರಿಯೊಂದಿಗೆ ಲಂಕಾ ವಿರುದ್ಧ ಭಾರತ ರೋಚಕ ಗೆಲುವು ಸಾಧಿಸಿತು. ಅಲ್ಲದೇ ಲಂಕಾ ತವರಿನಲ್ಲೇ ಕ್ಲೀನ್‌ ಸ್ವೀಪ್‌ನೊಂದಿಗೆ ಸರಣಿ ಗೆದ್ದುಕೊಂಡಿತು.

    ಗೆಲುವಿಗೆ 138 ರನ್‌ ಗುರಿ ಪಡೆದಿದ್ದ ಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ಕೆ 137 ರನ್‌ ಗಳಿಸಿ ಮ್ಯಾಚ್‌ ಟೈನಲ್ಲಿ ನಿಂತಿತು. ಇದರಿಂದ ಮ್ಯಾಚ್‌ ಸೂಪರ್‌ ಓವರ್‌ನತ್ತ ತಿರುಗಿತು. ಸೂಪರ್‌ ಓವರ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಂಕಾ ತಂಡ 2 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಪೆವಿಲಿಯನ್‌ಗೆ ಮರಳಿತು. ಆದ್ರೆ ಟೀಂ ಇಂಡಿಯಾ ಪರ ಕಣಕ್ಕಿಳಿದ ನಾಯಕ ಸೂರ್ಯಕುಮಾರ್‌, ಮಹೀಶ್‌ ತೀಕ್ಷಣ ಬೌಲಿಂಗ್‌ನಲ್ಲಿ ಮೊದಲ ಎಸೆತದಲ್ಲೇ ಬೌಂಡರಿ ಚಚ್ಚಿ ನೀರು ಕುಡಿದಂತೆ ಮ್ಯಾಚ್‌ ಗೆಲ್ಲಿಸಿದರು.

    ಕೊನೇ 2 ಓವರ್‌ ಥ್ರಿಲ್ಲಿಂಗ್‌:
    138 ರನ್‌ ಗುರಿ ಬೆನ್ನಟ್ಟಿದ್ದ ಲಂಕಾ ತಂಡಕ್ಕೆ ಕೊನೇ 2 ಓವರ್‌ಗಳಲ್ಲಿ ಗೆಲುವಿಗೆ 9 ರನ್‌ ಬೇಕಿತ್ತು. ಆದ್ರೆ 19ನೇ ಓವರ್‌ನಲ್ಲಿ ಬೌಲಿಂಗ್‌ ಮಾಡಿದ ರಿಂಕು ಸಿಂಗ್‌ 2 ಪ್ರಮುಖ ವಿಕೆಟ್‌ ಕಿತ್ತು, ಕೇವಲ 3 ರನ್‌ ಬಿಟ್ಟುಕೊಟ್ಟರು. ಕೊನೇ ಓವರ್‌ನಲ್ಲಿ 6 ರನ್‌ ಬೇಕಿದ್ದಾಗ ನಾಯಕ ಸೂರ್ಯಕುಮಾರ್‌ ಯಾದವ್‌ ಅವರೇ ಖುದ್ದು ಬೌಲಿಂಗ್‌ಗೆ ಇಳಿದರು. ಮೊದಲ ಎಸೆತದಲ್ಲಿ ರನ್‌ ಬಿಟ್ಟುಕೊಡದ ಸೂರ್ಯ 2-3ನೇ ಎಸೆತಗಳಲ್ಲಿ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಕಿತ್ತರು. 4ನೇ ಎಸೆತದಲ್ಲಿ 1 ರನ್‌ ಬಿಟ್ಟುಕೊಟ್ಟರು. 5ನೇ ಎಸೆತದಲ್ಲಿ ರನೌಟ್‌ಗೆ ಸುಲಭ ಸಾಧ್ಯತೆ ಇದ್ದರೂ ಕೊಂಚ ಗಲಿಬಿಲಿಯಿಂದ ಸೂರ್ಯ 2 ರನ್‌ ಕೈಚೆಲ್ಲಿದರು. ಕೊನೇ ಎಸೆತದಲ್ಲಿ ಲಂಕಾ ಬ್ಯಾಟರ್‌ಗಳು 2 ರನ್‌ ಕದಿಯುವಲ್ಲಿ ಯಶಸ್ವಿಯಾದ ಪರಿಣಾಮ ಮ್ಯಾಚ್‌ ಸೂಪರ್‌ ಓವರ್‌ನತ್ತ ತಿರುಗಿತು.

    ಸೂಪರ್ ಓವರ್ ನಿಯಮವೇನು?:
    * ಪ್ರತಿ ತಂಡವು 3 ಬ್ಯಾಟ್ಸ್ ಮೆನ್ ಹಾಗೂ ಓರ್ವ ಬೌಲರನ್ನು ಆಯ್ಕೆ ಮಾಡಬೇಕು.
    * ಇಬ್ಬರು ಆಟಗಾರರು ಔಟ್ ಆದರೆ ತಂಡ ಆಲೌಟ್ ಆದಂತೆ ಲೆಕ್ಕ.
    * ಸೂಪರ್ ಓವರ್ ನಲ್ಲಿ ಅತ್ಯಧಿಕ ರನ್ ಗಳಿಸಿದ ತಂಡ ವಿಜೇತ ಎಂದು ಘೋಷಣೆ
    * ಪ್ರತಿ ತಂಡಕ್ಕೆ 1 ಓವರ್ ಆಡುವ ಅವಕಾಶ

    ಚೇಸಿಂಗ್‌ ಮಾಡಿದ ಲಂಕಾ ಪರ ಆರಂಭಿಕರಾದ ಪಥುಮ್‌ ನಿಸ್ಸಾಂಕ 26ರನ್‌, ಕುಸಲ್‌ ಮೆಂಡಿಸ್‌ 43 ರನ್‌, ಕುಸಲ್‌ ಪೆರೆರಾ 46 ರನ್‌ ಬಾರಿಸಿದರು. ಲಂಕಾ ಬ್ಯಾಟರ್‌ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಪರ ವಾಷಿಂಗ್ಟನ್‌ ಸುಂದರ್‌, ರವಿ ಬಿಷ್ಣೋಯಿ, ರಿಂಕು ಸಿಂಗ್‌, ಸೂರ್ಯಕುಮಾರ್‌ ಯಾದವ್‌ ತಲಾ 2 ವಿಕೆಟ್‌ ಪಡೆದು ಮಿಂಚಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಪರ ಜೈಸ್ವಾಲ್‌ 10 ರನ್‌, ಶುಭಮನ್‌ ಗಿಲ್‌ 39 ರನ್‌, ಶಿವಂ ದುಬೆ 13 ರನ್‌, ಸೂರ್ಯ 8 ರನ್‌, ರಿಂಕು ಸಿಂಗ್‌ 1 ರನ್‌, ರಿಯಾನ್‌ ಪರಾಗ್‌ 26 ರನ್‌, ವಾಷಿಂಗ್ಟನ್‌ ಸುಂದರ್‌ 25 ರನ್‌ ಹಾಗೂ ರವಿ ಬಿಷ್ಣೋಯಿ 8 ರನ್‌ ಗಳಿಸಿದ್ರೆ ಸಿರಾಜ್‌, ಸಂಜು ಸ್ಯಾಮ್ಸನ್‌ ಶೂನ್ಯ ಸುತ್ತಿದರು.

  • ಟೀಂ ಇಂಡಿಯಾ ಆರ್ಭಟಕ್ಕೆ ಲಂಕಾ ಭಸ್ಮ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ, ಸರಣಿ ಕೈವಶ

    ಟೀಂ ಇಂಡಿಯಾ ಆರ್ಭಟಕ್ಕೆ ಲಂಕಾ ಭಸ್ಮ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ, ಸರಣಿ ಕೈವಶ

    ಕೊಲಂಬೊ: ಸಂಘಟಿತ ಬೌಲಿಂಗ್‌ ಪ್ರದರ್ಶನ, ಯಶಸ್ವಿ, ಸೂರ್ಯ, ಹಾರ್ದಿಕ್‌ ಪಾಂಡ್ಯ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡವು ಶ್ರೀಲಂಕಾ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಟಿ20 ಸರಣಿಯನ್ನು 2-0 ರಲ್ಲಿ ಗೆದ್ದುಕೊಂಡಿದ್ದು, ಸರಣಿ ಕೈವಶ ಮಾಡಿಕೊಂಡಿದೆ.

    ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ಸರಣಿಯ 2ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 161 ರನ್‌ ಬಾರಿಸಿತ್ತು. 162 ರನ್‌ಗಳ ಗುರಿ ಬೆನ್ನತ್ತಿದ ಭಾರತ ಮೊದಲ ಮೂರು ಎಸೆತಗಳಲ್ಲಿ 6 ರನ್‌ ಗಳಿಸುತ್ತಿದ್ದಂತೆ ಮಳೆಯ ಆರ್ಭಟ ಶುರುವಾಯಿತು. ಸುಮಾರು 1 ಗಂಟೆಗಳ ಕಾಲ ಮಳೆಯಾದ ಕಾರಣ ಡಕ್ವರ್ತ್‌ ಲೂಯಿಸ್‌ ನಿಯಮದ ಅನ್ವಯ ಟೀಂ ಇಂಡಿಯಾಕ್ಕೆ 8 ಓವರ್‌ಗಳಲ್ಲಿ 78 ರನ್‌ ಗುರಿ ನೀಡಲಾಯಿತು. ಸ್ಪರ್ಧಾತ್ಮಕ ಗುರಿ ಪಡೆದ ಭಾರತ ಕೇವಲ 6.3 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 81 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

    ಚೇಸಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್‌ ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿದ್ರೆ ಸಂಜು ಸ್ಯಾಮ್ಸನ್‌ ಮೊದಲ ಎಸೆತದಲ್ಲೇ ಗೋಲ್ಡನ್‌ ಡಕ್‌ ಆಗುವ ಮೂಲಕ ಆಘಾತ ನೀಡಿದರು. ನಂತರ ಕ್ರೀಸ್‌ಗಿಳಿದ ಸೂರ್ಯಕುಮಾರ್‌ ಯಾದವ್‌, ಜೈಸ್ವಾಲ್‌ ಜೊತೆಗೂಡಿ ಲಂಕಾ ಬೌಲರ್‌ಗಳಲ್ಲ ಬೆಂಡೆತ್ತಿದರು. 216.66 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸೂರ್ಯ 12 ಎಸೆತಗಳಲ್ಲಿ ಸ್ಫೋಟಕ 26 ರನ್‌ ಚಚ್ಚಿ ಔಟಾದರು. ಈ ಬೆನ್ನಲ್ಲೇ 200 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಸ್‌ ಬೀಸಿದ ಯಶಸ್ಬಿ ಜೈಸ್ವಾಲ್‌ 15 ಎಸೆತಗಳಲ್ಲಿ 30 ರನ್‌ ಬಾರಿಸಿ ಪೆವಿಲಿಯನ್‌ಗೆ ಮರಳಿದರು. ಅಷ್ಟೊತ್ತಿಗಾಗಲೇ ಭಾರತದ ಗೆಲುವಿನ ಹಾದಿ ಸುಗಮನವಾಗಿತ್ತು.

    ನಂತರ 4ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹಾರ್ದಿಕ್‌ ಪಾಂಡ್ಯ 9 ಎಸೆತಗಳಲ್ಲಿ 2 ಸಿಕ್ಸರ್‌, 1 ಬೌಂಡರಿಯೊಂದಿಗೆ ಸ್ಫೋಟಕ 22 ರನ್‌ ಬಾರಿಸಿ ಗೆಲುವು ತಂದುಕೊಟ್ಟರು. ರಿಷಭ್‌ ಪಂತ್‌ 2 ರನ್‌ ಗಳಿಸಿ ಅಜೇಯರಾಗುಳಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ಪರ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅಬ್ಬರಿಸಿದರು. ಪಥುಮ್‌ ನಿಸ್ಸಾಂಕ 32 ರನ್‌, ಕುಸಲ್‌ ಪೆರೆರಾ ಅಮೋಘ 53 ರನ್‌ (34 ಎಸೆತ, 2 ಸಿಕ್ಸರ್‌, 6 ಬೌಂಡರಿ) ಸಿಡಿಸಿ ಮಿಂಚಿದರು. ಇದರೊಂದಿಗೆ ಕುಸಲ್‌ ಮೆಂಡಿಸ್‌ 10 ರನ್‌, ಕಮಿಂಡು ಮೆಂಡಿಸ್‌ 26 ರನ್‌, ಚರಿತ್‌ ಹಸಲಂಕ 14 ರನ್‌, ರಮೇಶ್‌ ಮೆಂಡಿಸ್‌ 12 ರನ್‌ಗಳ ಕೊಡುಗೆ ನೀಡಿದರು.

    ಭಾರತದ ಪರ ರವಿ ಬಿಷ್ಣೋಯಿ 3 ವಿಕೆಟ್‌ ಕಿತ್ತರೆ, ಅರ್ಷ್‌ ದೀಪ್‌ ಸಿಂಗ್‌, ಅಕ್ಷರ್‌ ಪಟೇಲ್‌, ಹಾರ್ದಿಕ್‌ ಪಾಂಡ್ಯ ತಲಾ 2 ವಿಕೆಟ್‌ ಪಡೆದು ಮಿಂಚಿದರು.

  • ಗೌತಮ್‌ ಗಂಭೀರ್‌ ಟೀಂ ಇಂಡಿಯಾದ ಕೋಚ್‌ : ಜಯ್‌ ಶಾ ಅಧಿಕೃತ ಘೋಷಣೆ

    ಗೌತಮ್‌ ಗಂಭೀರ್‌ ಟೀಂ ಇಂಡಿಯಾದ ಕೋಚ್‌ : ಜಯ್‌ ಶಾ ಅಧಿಕೃತ ಘೋಷಣೆ

    ಮುಂಬೈ: ಬಹುದಿನಗಳಿಂದ ಹರಿದಾಡುತ್ತಿದ್ದ ಸುದ್ದಿ ಕೊನೆಗೂ ಖಚಿತವಾಗಿದ್ದು ಟೀಂ ಇಂಡಿಯಾದ (Team India) ಕೋಚ್‌ ಆಗಿ ಗೌತಮ್‌ ಗಂಭೀರ್‌ (Gautam Gambhir)  ಆಯ್ಕೆಯಾಗಿದ್ದಾರೆ.

    ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಅಧಿಕೃತವಾಗಿ ಈ ವಿಚಾರವನ್ನು ತಿಳಿಸಿದ್ದಾರೆ. ಪುರುಷರ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಿಸಲಾಗಿದೆ ಜಯ್ ಶಾ ಪ್ರಕಟಿಸಿದರು.


    ಟೀಂ ಇಂಡಿಯಾದ ನೂತನ ಕೋಚ್‌ ಗೌತಮ್‌ ಗಂಭೀರ್‌ ಅವರನ್ನು ನಾನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಆಧುನಿಕ ಕ್ರಿಕೆಟ್‌ ಬಹಳ ವೇಗವಾಗಿ ಬದಲಾಗುತ್ತಿದ್ದು ಗೌತಮ್ ಅವರು ಈ ಬದಲಾವಣೆಯನ್ನು ಬಹಳ ಹತ್ತಿರದಿಂದ ಗಮನಿಸಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ಹಲವು ಪಾತ್ರಗಳನ್ನು ನಿರ್ವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹೀಗಾಗಿ ಟೀಂ ಇಂಡಿಯಾವನ್ನು ಮುನ್ನಡೆಸಲು ಅವರು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂಬ ವಿಶ್ವಾಸ ನನಗಿದೆ. ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವ ಗೌತಮ್‌ ಗಂಭೀರ್‌ ಅವರಿಗೆ ಬಿಸಿಸಿಐ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಜಯ್‌ ಶಾ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

    ರಾಹುಲ್‌ ದ್ರಾವಿಡ್‌ (Rahul Dravid) ಅವರ ನಂತರ ಟೀಂ ಇಂಡಿಯಾ ಮುಖ್ಯಕೋಚ್‌ ಹುದ್ದೆ ಅಲಂಕರಿಸುವಂತೆ ಬಿಸಿಸಿಐ ಈ ಹಿಂದೆ ಗೌತಮ್‌ ಗಂಭೀರ್‌ ಬಳಿ ಮನವಿ ಮಾಡಿರುವುದಾಗಿ ವರದಿಯಾಗಿತ್ತು. ಟಿ20 ವಿಶ್ವಕಪ್‌ ಟೂರ್ನಿ ಬಳಿಕ ದ್ರಾವಿಡ್‌ ಅವರ ಮುಖ್ಯಕೋಚ್‌ ಹುದ್ದೆಯ ಅವಧಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಬಿಸಿಸಿಐ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು.

    ಗಂಭೀರ್ ಕೋಚಿಂಗ್ ಅನುಭವ ಹೇಗಿದೆ?
    ಟೀಂ ಇಂಡಿಯಾಕ್ಕಾಗಿ 2 ಬಾರಿ ವಿಶ್ವಕಪ್‌ ಗೆದ್ದುಕೊಟ್ಟಿರುವ ಗೌತಮ್‌ ಗಂಭೀರ್‌ ಕೋಚಿಂಗ್‌ನಲ್ಲೂ ಅನುಭವ ಹೊಂದಿದ್ದಾರೆ. 2022-23ರಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ‌ ಮೆಂಟರ್‌ ಆಗಿ ಕೆಲಸ ಮಾಡಿದ್ದ ಗಂಭೀರ್‌, ತಂಡವನ್ನು ಸತತ ಎರಡು ಬಾರಿ ಪ್ಲೇ ಆಫ್‌ ಪ್ರವೇಶಿಸುವಂತೆ ಮಾಡಿದ್ದರು. ನಂತರ ಗಂಭೀರ್‌ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಮುಖ್ಯಕೋಚ್‌ ಆಗಿದ್ದು, ಇವರ ನೇತೃತ್ವದಲ್ಲಿ ಕೆಕೆಆರ್‌ ಸಹ ಪ್ಲೇ ಆಫ್‌ ಪ್ರವೇಶಿಸಿದೆ. ಆದರೆ ದೇಶೀಯ ಅಥವಾ ಅಂತಾರಾಷ್ಟ್ರೀಯ ತಂಡಗಳಿಗೆ ತರಬೇತಿ ನೀಡಿದ ಅನುಭವ ಗಂಭೀರ್‌ ಅವರಿಗಿಲ್ಲ.

  • ಟೀಂ ಇಂಡಿಯಾ ಮುಖ್ಯಕೋಚ್‌ ಹುದ್ದೆಗೆ ಗಂಭೀರ್‌ ಫಿಕ್ಸ್‌? – ಗಂಭೀರ್‌ ಸ್ಪಷ್ಟನೆ ಏನು?

    ಟೀಂ ಇಂಡಿಯಾ ಮುಖ್ಯಕೋಚ್‌ ಹುದ್ದೆಗೆ ಗಂಭೀರ್‌ ಫಿಕ್ಸ್‌? – ಗಂಭೀರ್‌ ಸ್ಪಷ್ಟನೆ ಏನು?

    ಮುಂಬೈ: ಟೀಂ ಇಂಡಿಯಾದ ಮುಖ್ಯಕೋಚ್‌ ಆಗಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ (Gautam Gambhir) ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆಗಳು ಕೆಲ ದಿನಗಳಿಂದ ನಡೆಯುತ್ತಿವೆ. ಈ ಬಗ್ಗೆ ಸ್ವತಃ ಗಂಭೀರ್‌ ಅವರೇ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಈಗಾಗಲೇ ಟೀಂ ಇಂಡಿಯಾದ ಮುಖ್ಯ ಕೋಚ್ (eam India Head Coach) ಹುದ್ದೆಯ ಆಕಾಂಕ್ಷಿಯಾಗಿರುವ ಗಂಭೀರ್ ಅವರನ್ನು ಬಿಸಿಸಿಐ ಸಲಹಾ ಸಮಿತಿಯು ಸಂದರ್ಶನ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದೆ ಶ್ರೀಲಂಕಾ ವಿರುದ್ಧ ನಡೆಯಲಿರುವ ದ್ವಿಪಕ್ಷೀಯ ಸರಣಿ ವೇಳೆಗೆ ಗಂಭೀರ್‌ ತಂಡವನ್ನು ಮುನ್ನಡೆಸಲಿದ್ದಾರೆ. ಈ ನಡುವೆ ಮುಖ್ಯ ಕೋಚ್‌ ಹುದ್ದೆಗೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿರುವ ಗಂಭೀರ್‌, ಈ ಸಂದರ್ಭದಲ್ಲಿ ಉತ್ತರಿಸುವುದು ಕಷ್ಟ. ನಾನು ಭವಿಷ್ಯದ ಬಗ್ಗೆ ತುಂಬಾ ಯೋಚಿಸುತ್ತಿಲ್ಲ. ನೀವು ನನಗೆ ಕಠಿಣವಾದ ಪ್ರಶ್ನೆಗಳನ್ನು ಕೇಳಿ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದೀರಿ ಎಂದು ಮಾಧ್ಯಮಗಳಿಗೆ ನಗುಮುಖದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ.

    ‘ಈಗ ಇರುವ ಜವಾಬ್ದಾರಿಯನ್ನು (ಕೆಕೆಆರ್ ತಂಡದ ಮೆಂಟ‌ರ್) ಆನಂದಿಸುತ್ತಿದ್ದೇನೆ. ಈಗಷ್ಟೇ ಐಪಿಎಲ್‌ನಲ್ಲಿ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಕ್ಷಣವನ್ನು ಆನಂದಿಸೋಣ. ಭವಿಷ್ಯದಲ್ಲಿ ಏನು ನಡೆಯಬೇಕೋ ಅದು ನಡೆಯಲಿದೆ. ಸದ್ಯ ತುಂಬಾ ಖುಷಿಯಲ್ಲಿದ್ದೇನೆ. ಕೋಲ್ಕತ್ತಾ ಜನರನ್ನು ಖುಷಿಪಡಿಸುವುದೇ ನನ್ನ ಕೆಲಸ. ನೀವು ಖುಷಿಪಟ್ಟರೆ ನನಗೂ ಖುಷಿ ಎಂದು ಹೇಳಿದ್ದಾರೆ.

    ಗಂಭೀರ್ ಕೋಚಿಂಗ್ ಅನುಭವ ಹೇಗಿದೆ?
    ಟೀಂ ಇಂಡಿಯಾಕ್ಕಾಗಿ 2 ಬಾರಿ ವಿಶ್ವಕಪ್‌ ಗೆದ್ದುಕೊಟ್ಟಿರುವ ಗೌತಮ್‌ ಗಂಭೀರ್‌ ಕೋಚಿಂಗ್‌ನಲ್ಲೂ ಅನುಭವ ಹೊಂದಿದ್ದಾರೆ. 2022-23ರಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ‌ ಮೆಂಟರ್‌ ಆಗಿ ಕೆಲಸ ಮಾಡಿದ್ದ ಗಂಭೀರ್‌, ತಂಡವನ್ನು ಸತತ ಎರಡು ಬಾರಿ ಪ್ಲೇ ಆಫ್‌ ಪ್ರವೇಶಿಸುವಂತೆ ಮಾಡಿದ್ದರು. ಇದಘ ಗಂಭೀರ್‌ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಮುಖ್ಯಕೋಚ್‌ ಆಗಿದ್ದು, ಇವರ ನೇತೃತ್ವದಲ್ಲಿ ಕೆಕೆಆರ್‌ ಸಹ ಪ್ಲೇ ಆಫ್‌ ಪ್ರವೇಶಿಸಿದೆ. ಆದ್ರೆ ದೇಶೀಯ ಅಥವಾ ಅಂತಾರಾಷ್ಟ್ರೀಯ ತಂಡಗಳಿಗೆ ತರಬೇತಿ ನೀಡಿದ ಅನುಭವ ಗಂಭೀರ್‌ ಅವರಿಗಿಲ್ಲ.

  • ಗೌತಮ್‌ ಗಂಭೀರ್‌ಗೆ ಬ್ಲ್ಯಾಂಕ್‌ ಚೆಕ್‌ ಆಫರ್‌ ಕೊಟ್ಟಿದ್ದೇಕೆ ಶಾರುಖ್‌?

    ಗೌತಮ್‌ ಗಂಭೀರ್‌ಗೆ ಬ್ಲ್ಯಾಂಕ್‌ ಚೆಕ್‌ ಆಫರ್‌ ಕೊಟ್ಟಿದ್ದೇಕೆ ಶಾರುಖ್‌?

    ಮುಂಬೈ: ಭಾರತ ಪುರುಷರ ಕ್ರಿಕೆಟ್‌ ತಂಡಕ್ಕೆ ಗೌತಮ್‌ ಗಂಭೀರ್‌ ಮುಂದಿನ ಮುಖ್ಯಕೋಚ್‌ (Team India Head Coach) ಆಗುವ ಬಗ್ಗೆ ಮಾತುಕತೆ ನಡೆಯುತ್ತಿರುವಾಗಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಕೆಕೆಆರ್‌ ತಂಡದ ಸಹ ಮಾಲೀಕರೂ ಆಗಿರುವ ನಟ ಶಾರುಖ್‌ ಖಾನ್‌ (Shah Rukh Khan), ಬ್ಲ್ಯಾಂಕ್‌ ಚೆಕ್‌ ಆಫರ್‌ ಕೊಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

    17ನೇ ಐಪಿಎಲ್‌ ಆವೃತ್ತಿಯ ಚಾಂಪಿಯನ್‌ ಆಗಿರುವ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಮೆಂಟರ್‌ ಆಗಿಯೇ ಮುಂದಿನ 10 ವರ್ಷಗಳ ಕಾಲ ಮುಂದುವರಿಯಲು ಶಾರುಖ್‌, ಗೌತಮ್‌ ಗಂಭೀರ್‌(Gautam Gambhir) ಅವರಿಗೆ ಬ್ಲ್ಯಾಂಕ್‌ ಚೆಕ್‌ (Blank Cheque) ಆಫರ್‌ ನೀಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಂದು ಕ್ಯಾಪ್ಟನ್, ಇಂದು ಮೆಂಟರ್‌ ಆಗಿ ಟ್ರೋಫಿ‌ ಗೆದ್ದುಕೊಟ್ಟ ಗಂಭೀರ್‌; ಹಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡ ಬಾದ್‌ ಷಾ

    ಸದ್ಯ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಮುಖ್ಯಕೋಚ್‌ ಹುದ್ದೆಗೆ ಆಸಕ್ತಿ ತೋರಿದ್ದಾರೆ. ಆದ್ರೆ ಈವರೆಗೆ ಅರ್ಜಿ ಸಲ್ಲಿಸಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಗಂಭೀರ್‌ ಅರ್ಜಿ ಸಲ್ಲಿಸಿದರೆ 100% ಅವರು ಹುದ್ದೆಗೆ ಆಯ್ಕೆಯಾಗುತ್ತಾರೆ. ಗಂಭೀರ್‌ ಮುಂದಿನ ಮುಖ್ಯಕೋಚ್‌ ಹುದ್ದೆಗೆ ಆಸಕ್ತಿ ಹೊಂದಿರುವುದರಿಂದ ಅವರು ಕೆಕೆಆರ್‌ ತಂಡವನ್ನು ತೊರೆಯುವ ಬಗ್ಗೆ ಎಸ್‌ಆರ್‌ಕೆ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: IPL 2024: ದಣಿವರಿಯದೇ ದುಡಿದ ಕ್ರೀಡಾ ಸಿಬ್ಬಂದಿಗೆ ತಲಾ 25 ಲಕ್ಷ ರೂ. ಬಹುಮಾನ ಘೋಷಿಸಿದ ಜಯ್‌ ಶಾ

    ಕೋಚ್‌ ಹುದ್ದೆಗೆ ಆಸಿಸ್‌ ಆಟಗಾರರನ್ನ ಸಂಪರ್ಕಿಲ್ಲ:
    ಇತ್ತೀಚೆಗೆ ಟೀಂ ಇಂಡಿಯಾದ ಮುಖ್ಯಕೋಚ್‌ ಹುದ್ದೆ ಆಫರ್‌ ತಿರಸ್ಕರಿಸಿರುವುದಾಗಿ ಆಸೀಸ್‌ ಕ್ರಿಕೆಟ್‌ ದಿಗ್ಗಜ ರಿಕಿ ಪಾಂಟಿಂಗ್‌ ಅವರು ಹೇಳಿದ ಬಳಿಕ, ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಇದಕ್ಕೆ ಸ್ಪಷ್ಟನೆ ನೀಡಿದ್ದರು. ಟೀಂ ಇಂಡಿಯಾದ ಕೋಚ್‌ ಹುದ್ದೆಗೆ ನಾನು ಯಾವುದೇ ಆಸ್ಟ್ರೇಲಿಯಾ ಆಟಗಾರರನ್ನು ಸಂಪರ್ಕಿಸಿಲ್ಲ. ನಮ್ಮ ರಾಷ್ಟ್ರೀಯ ತಂಡಕ್ಕೆ ಸರಿಯಾದ ತರಬೇತುದಾರನನ್ನು ಹುಡುಕುವುದು ಒಂದು ನಿಖರವಾದ ಮತ್ತು ಸಂಪೂರ್ಣ ಪ್ರಕ್ರಿಯೆಯಾಗಿದೆ. ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆ ಹೊಂದಿರುವ ಮತ್ತು ಶ್ರೇಯಾಂಕಗಳ ಮೂಲಕ ಏರಿದ ವ್ಯಕ್ತಿಗಳನ್ನು ಆಯ್ಕೆ ಮಾಡಲು ನಾವು ಗಮನಹರಿಸಿದ್ದೇವೆ. ಟೀಂ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ನಮ್ಮ ಕೋಚ್ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ ಎಂದು ಹೇಳಿದ್ದರು.

    ನವೆಂಬರ್‌ 2021 ರಿಂದ ದ್ರಾವಿಡ್‌ (Rahul Dravid) ಕೋಚ್‌ ಹುದ್ದೆಯನ್ನು ಅಲಂಕರಿಸಿದ್ದು ಪ್ರಸಕ್ತ ವರ್ಷದ ಜೂನ್‌ನಲ್ಲಿ ಅವಧಿ ಅಂತ್ಯವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದೆ. ಇದನ್ನೂ ಓದಿ: T20 World Cup: ಚುಟುಕು ಕ್ರಿಕೆಟ್ ಯುಗದ ಆರಂಭ – ಚೊಚ್ಚಲ ಆವೃತ್ತಿಯಲ್ಲೇ ಭಾರತ ಚಾಂಪಿಯನ್!