Tag: Gautam Gambhir

  • Ind Vs Pak: ಪಾಕ್‌ ತಂಡಕ್ಕೆ ಅಗೌರವ ತೋರಬೇಡಿ – ಟೀಂ ಇಂಡಿಯಾ ಫ್ಯಾನ್ಸ್‌ಗೆ ಗಂಭೀರ್‌ ಮತ್ತೆ ಕ್ಲಾಸ್‌

    Ind Vs Pak: ಪಾಕ್‌ ತಂಡಕ್ಕೆ ಅಗೌರವ ತೋರಬೇಡಿ – ಟೀಂ ಇಂಡಿಯಾ ಫ್ಯಾನ್ಸ್‌ಗೆ ಗಂಭೀರ್‌ ಮತ್ತೆ ಕ್ಲಾಸ್‌

    ಅಹಮದಾಬಾದ್‌: ವಿಶ್ವಕಪ್‌ (World Cup 2023) ಟೂರ್ನಿಯ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಆರಂಭವಾಗಿದೆ. ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma) ಫೀಲ್ಡಿಂಗ್‌ ಆಯ್ದುಕೊಂಡಿದ್ದು, ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದ್ದಾರೆ.

    1.32 ಲಕ್ಷ ಸಾಮರ್ಥ್ಯ ಆಸನಗಳ ವ್ಯವಸ್ಥೆಯುಳ್ಳ ಮೋದಿ ಕ್ರೀಡಾಂಗಣಕ್ಕೆ ಜನಸಾಗರವೇ ಹರಿದುಬಂದಿದ್ದು, ಕ್ರೀಡಾಂಗಣದ ಹೊರಗೂ ಸಾವಿರಾರು ಅಭಿಮಾನಿಗಳು ಟೀಂ ಇಂಡಿಯಾವನ್ನು (Team India Fans) ಹುರಿದುಂಬಿಸುತ್ತಿದ್ದಾರೆ. ಈ ನಡುವೆ ಎದುರಾಳಿ ತಂಡದ ಆಟಗಾರರನ್ನೂ ವ್ಯಂಗ್ಯಮಾಡುವ ಪ್ರಸಂಗಗಳೂ ಕಂಡುಬಂದಿದ್ದು, ಅಂತಹ ಅಭಿಮಾನಿಗಳಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ.

    ಟಾಸ್‌ ಬಳಿಕ ಈ ಕುರಿತು ಮಾತನಾಡಿರುವ ಗೌತಮ್‌ ಗಂಭೀರ್‌ (Gautam Gambhir), ವಿಶ್ವಕಪ್‌ನಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ಪಾಕಿಸ್ತಾನ ತಂಡಕ್ಕೆ ಅಗೌರವ ತೋರಬೇಡಿ. ನಿಮ್ಮ ತಂಡವನ್ನು ಬೆಂಬಲಿಸಿ, ಆದ್ರೆ ನಿಮ್ಮ ಸಂದರ್ಶಕರೊಂದಿಗೆ ಮತ್ತು ಅತಿಥಿಗಳಾಗಿ ಬಂದವರೊಡನೆ ಅನುಚಿತವಾಗಿ ವರ್ತಿಸಬೇಡಿ. ಅವರು ಇಲ್ಲಿಗೆ ವಿಶ್ವಕಪ್‌ ಆಡಲು ಬಂದಿದ್ದಾರೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: World Cup 2023: ಇಂಡೋ-ಪಾಕ್‌ ಕದನ ಯಾವಾಗಲೂ ರಣಕಣ ಏಕೆ? – ನೆನಪಿದೆಯಾ ಆ ಕರಾಳ ದಿನಗಳು?

    ಟೀಂ ಇಂಡಿಯಾ ಪ್ಲೇಯಿಂಗ್‌-11: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಇದನ್ನೂ ಓದಿ: Ind vs Pak ರೋಚಕ ಸಮರಕ್ಕೆ ಕ್ಷಣಗಣನೆ – ಮೋದಿ ಕ್ರೀಡಾಂಗಣದಲ್ಲಿ ಜನಸಾಗರ, ಭಾರತದ ಗೆಲುವಿಗೆ ಹೋಮ ಹವನ

    ಪಾಕಿಸ್ತಾನ ಪ್ಲೇಯಿಂಗ್‌-11: ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕಾರ್‌ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಶಾ ಆಫ್ರಿದಿ, ಹ್ಯಾರಿಸ್ ರೌಫ್. ಇದನ್ನೂ ಓದಿ: ಇಂಡೋ-ಪಾಕ್‌ ವಿಶ್ವ ಸಮರ: ʻಗೆದ್ದು ಬಾ ಭಾರತʼ – ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದುಷ್ಮನ್‌ ಅಲ್ಲ ದೋಸ್ತಿ – ಕೊಹ್ಲಿಯನ್ನು ಹಾಡಿ ಹೊಗಳಿದ ಗಂಭೀರ್‌, ಫ್ಯಾನ್ಸ್‌ ವಿರುದ್ಧ ಮತ್ತೆ ಗರಂ

    ದುಷ್ಮನ್‌ ಅಲ್ಲ ದೋಸ್ತಿ – ಕೊಹ್ಲಿಯನ್ನು ಹಾಡಿ ಹೊಗಳಿದ ಗಂಭೀರ್‌, ಫ್ಯಾನ್ಸ್‌ ವಿರುದ್ಧ ಮತ್ತೆ ಗರಂ

    ನವದೆಹಲಿ: ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯಕ್ಕೂ ಮುನ್ನ ವಿರಾಟ್‌ ಕೊಹ್ಲಿ (Virat Kohli) ಹಾಗೂ ನವೀನ್‌ ಉಲ್‌ ಹಕ್‌ (Naveen-ul-Haq) ಮೈದಾನದಲ್ಲಿ ಮುಖಾಮುಖಿಯಾಗುವ ಬಗ್ಗೆ ಸಾಕಷ್ಟು ಕುತೂಹಲವಿತ್ತು. 2023ರ ಐಪಿಎಲ್‌ ಬಳಿಕ ಇದೇ ಮೊದಲಬಾರಿಗೆ ಮುಖಾಮುಖಿಯಾಗಿದ್ದು, ಮತ್ತೆ ಕಿರಿಕ್‌ ಆಗಬಹುದೇ? ಕೊಹ್ಲಿ ಕಣಕ್ಕಿಳಿದ್ರೆ ಬ್ಯಾಟಿಂಗ್‌ನಲ್ಲಿ ಹೇಗೆ ಅಬ್ಬರಿಸುತ್ತಾರೆ? ಅನ್ನೋದನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದುಕುಳಿತಿದ್ದರು. ಆದ್ರೆ ಮೈದಾನದಲ್ಲಿ ನಡೆದಿದ್ದೇ ಬೇರೆ.

    ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ (Afghanistan) ನೀಡಿದ 273 ರನ್‌ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಪರ ರೋಹಿತ್‌ ಶರ್ಮಾ ಹಾಗೂ ಇಶಾನ್‌ ಕಿಶನ್‌ ಜೋಡಿ ಮೊದಲ ವಿಕೆಟ್‌ಗೆ 156 ರನ್‌ಗಳ ಜೊತೆಯಾಟ ನೀಡಿತ್ತು. ಸ್ಫೋಟಕ ಇನ್ನಿಂಗ್ಸ್‌ ಆರಂಭಿಸಿದ್ದ ರೋಹಿತ್‌ ಶರ್ಮಾಗೆ ಸಾಥ್‌ ನೀಡುತ್ತಿದ್ದ ಇಶಾನ್‌ ಕಿಶನ್‌ 47 ರನ್‌ಗಳಿಗೆ ಔಟಾಗಿ ಪೆವಿಲಿಯನ್‌ಗೆ ಮರಳಿದರು. ಬಳಿಕ 3ನೇ ಕ್ರಮಾಂಕದಲ್ಲಿ ಕೊಹ್ಲಿ ಕ್ರೀಸ್‌ಗೆ ಇಳಿಯುತ್ತಿದ್ದಂತೆ ಅಭಿಮಾನಿಗಳು ಜೈಕಾರ ಹಾಕುವ ಮೂಲಕ ಸ್ವಾಗತ ಕೋರಿದರು. ಕೊಹ್ಲಿ ಕ್ರೀಸ್‌ಗೆ ಬಂದು ನವೀನ್‌ ಉಲ್‌ ಹಕ್‌ ಬೌಲಿಂಗ್‌ನಲ್ಲಿ ಎದುರಾದ ಕೊಹ್ಲಿ ಅಬ್ಬರಿಸುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದ್ರೆ ಅಭಿಮಾನಿಗಳ ನಿರೀಕ್ಷೆ ಹುಸಿಯಾಯಿತು.

    ನವೀನ್‌ ಉಲ್‌ ಹಕ್‌ ಅವರ ಹಲವು ಎಸೆತಗಳನ್ನು ಕೊಹ್ಲಿ ಡಾಟ್‌ ಮಾಡಿಸಿದರು. ಜೊತೆಗೆ ಕೊಹ್ಲಿ… ಕೊಹ್ಲಿ… ಎಂದು ಜೈಕಾರ ಕೂಗುತ್ತಾ ನವೀನ್‌ ಉಲ್‌ ಹಕ್‌ ನನ್ನ ರೇಗಿಸುತ್ತಿದ್ದ ಅಭಿಮಾನಿಗಳನ್ನ ಕೈಸನ್ನೆಯಲ್ಲೇ ಸುಮ್ಮನಿರುವಂತೆ ಮನವಿ ಮಾಡಿದರು. ಅಷ್ಟೇ ಅಲ್ಲದೇ ಪಂದ್ಯದ ವೇಳೆ ನವೀನ್‌ ಉಲ್‌ ಹಕ್‌ನನ್ನ ಆತ್ಮೀಯವಾಗಿ ಅಪ್ಪಿಕೊಂಡು ಮಾತನಾಡಿಸಿದರು. ನವೀನ್‌ ಹೆಗಲಮೇಲೆ ಕೈಯಿಟ್ಟು ಪ್ರೀತಿಯಿಂದ ಮಾತನಾಡಿಸಿದರು. ವಿರಾಟ್‌ ಕೊಹ್ಲಿ ನಡೆಗೆ ಅಭಿಮಾನಿಗಳೂ ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: World Cup 2023: ಗುಡ್‌ನ್ಯೂಸ್‌ – ಪಾಕ್‌ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಸೇರಲಿದ್ದಾರೆ ಗಿಲ್‌

    ಕೊಹ್ಲಿ ಫ್ಯಾನ್ಸ್‌ ವಿರುದ್ಧ ಗಂಭೀರ್‌ ಗರಂ:
    ಇನ್ನೂ ಕೊಹ್ಲಿ-ನವೀನ್‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ (Gautam Gambhir), ಕೊಹ್ಲಿಯನ್ನು ಹೊಗಳುತ್ತಲೇ ಅಭಿಮಾನಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಪ್ರತಿಯೊಬ್ಬ ಆಟಗಾರನೂ ತನ್ನ ತಂಡಕ್ಕಾಗಿ ಹೋರಾಡುತ್ತಾನೆ ಅನ್ನೋದಕ್ಕೆ ಕೊಹ್ಲಿ ಸಾಕ್ಷಿಯಾಗಿದ್ದಾರೆ. ಯಾರು ಯಾವ ದೇಶದವರು ಅನ್ನೋದಕ್ಕಿಂತ ಕ್ರೀಡೆಯಲ್ಲಿ ಎಷ್ಟು ಉತ್ತಮವಾಗಿ ಆಡುತ್ತಾರೆ ಎಂಬುದು ಮುಖ್ಯವಾಗುತ್ತದೆ. ಕೊಹ್ಲಿ ಮತ್ತು ನವೀನ್‌ ಅವರನ್ನು ಕ್ರೀಡೆಯ ಉದ್ದೇಶದಿಂದಲೇ ನೋಡಿದ್ರೆ ಒಳ್ಳೆಯದು. ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಿ ಆಟಗಾರರನ್ನ ಟ್ರೋಲ್‌ ಮಾಡುವುದನ್ನು ನಿಲ್ಲಿಸಬೇಕು ಎಂದು ಕೊಹ್ಲಿ ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ.

    ನವೀನ್‌ ಉಲ್‌ ಹಕ್‌ ರಿಯಾಕ್ಷನ್‌ ಏನು?
    ಇನ್ನೂ ಪಂದ್ಯ ಮುಗಿದ ಬಳಿಕ ಕೊಹ್ಲಿ ಜೊತೆಗಿನ ಮಾತುಗಳನ್ನ ರಿವೀಲ್‌ ಮಾಡಿರುವ ನವೀನ್‌ ಉಲ್‌ ಹಕ್‌, ಕೊಹ್ಲಿ ತುಂಬಾ ಒಳ್ಳೆಯ ವ್ಯಕ್ತಿ, ಉತ್ತಮ ಆಟಗಾರ ಕೂಡ ಹೌದು. ಪಂದ್ಯದ ವೇಳೆ ಪರಸ್ಪರ ಕೈಕುಲುಕಿದೆವು. ಆದ್ರೆ ಅಭಿಮಾನಿಗಳೇ ಅದನ್ನ ದೊಡ್ಡದು ಮಾಡ್ತಿದ್ದಾರೆ. ಅಂದು ನಡೆದ ಘಟನೆಯನ್ನ ನಾವು ಅಲ್ಲಿಗೆ ಬಿಟ್ಟಿದ್ದೇವೆ. ಅಭಿಮಾನಿಗಳು ಅದನ್ನ ಮುಂದುವರಿಸಿದ್ದಾರೆ ಎಂದು ಬೇಸರದಿಂದ ಹೇಳಿಕೊಂಡಿದ್ದಾರೆ.

    ಒಟ್ಟಿನಲ್ಲಿ ವಿರಾಟ್‌ ಕೊಹ್ಲಿ ಹಾಗೂ ನವೀನ್‌ ಉಲ್‌ ಹಕ್‌ ನಡುವಣ ಕದನ ಅಂತ್ಯವಾಗಿದೆ ಎಂದೆಲ್ಲಾ ನೆಟ್ಟಿಗರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರೋಹಿತ್‌ ಶರ್ಮಾ ಸ್ಫೋಟಕ ಶತಕ – 8 ವಿಕೆಟ್‌ಗಳ ಜಯದೊಂದಿಗೆ ಪಾಕ್‌ ಹಿಂದಿಕ್ಕಿದ ಭಾರತ

    2023ರ ಐಪಿಎಲ್‌ನಲ್ಲಿ ಏನಾಗಿತ್ತು?
    2023ರ ಐಪಿಎಲ್‌ ಟೂರ್ನಿವೇಳೆ ಏಕನಾ ಕ್ರೀಡಾಂಗಣದಲ್ಲಿ ನಡೆದ 43ನೇ ಪಂದ್ಯದಲ್ಲಿ ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 18 ರನ್‌ಗಳ ಜಯ ಸಾಧಿಸಿತು. ಈ ಹಿಂದೆ ಆರ್‌ಸಿಬಿ ತವರಿನಲ್ಲಿ ಲಕ್ನೋ ವಿರುದ್ಧದ ವಿರೋಚಿತ ಸೋಲಿಗೆ ಸೇಡು ತೀರಿಸಿಕೊಂಡಿತು. ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳ ನಡೆದಿವೆ. ಆ ನಂತರ ಇಬ್ಬರ ನಡುವೆ ಉತ್ತಮ ಬಾಂಧವ್ಯವಿತ್ತು. ಆದರೆ ಅಂದು ನಡೆದ ಪಂದ್ಯದ ಬಳಿಕ ಇವರಿಬ್ಬರ ನಡುವಿನ ಜಗಳ ಅತಿರೇಕಕ್ಕೆ ತಲುಪಿತ್ತು. ಒಂದು ವೇಳೆ ಸಹ ಆಟಗಾರರು ಮಧ್ಯ ಬಾರದೇ ಇದ್ದಿದ್ದರೆ ಕೈಕೈ ಮಿಲಾಯಿಸುವುದಕ್ಕೂ ಕಾರಣವಾಗುತ್ತಿತ್ತು.

    ಅಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ನಡುವಣ ಪಂದ್ಯದಲ್ಲಿ ಲಕ್ನೋ ತಂಡ 1 ವಿಕೆಟ್‌ಗಳ ಜಯ ದಾಖಲಿಸಿತ್ತು. ಆ ಪಂದ್ಯದ ಬಳಿಕ ಗಂಭೀರ್ ಬಾಯ್ಮೇಲೆ ಬೆರೆಳಿಟ್ಟು ಆರ್‌ಸಿಬಿ ಪ್ರೇಕ್ಷಕರು ಸುಮ್ಮನಿರುವಂತೆ ಸೂಚಿಸಿ ಸಂಭ್ರಮಿಸಿದ್ದರು. ಲಕ್ನೋ ತಂಡದ ಅವೇಶ್ ಖಾನ್ ಹೆಲ್ಮೆಟ್ ಕಿತ್ತೆಸೆದು ಅತಿರೇಖದ ವರ್ತನೆ ತೋರಿಸಿದ್ದರು. ಇದಕ್ಕೆ ಪ್ರತಿಯಾಗಿ ತವರಿನಲ್ಲಿ ಬುದ್ಧಿ ಕಲಿಸಲು ನಿರ್ಧರಿಸಿದ್ದ ಕೊಹ್ಲಿ ಪಂದ್ಯದ ನಡುವೆ ಅಭಿಮಾನಿಗಳು ಸುಮ್ಮನಿರಬಾರದು? ಹೃದಯತುಂಬಿ ಸಂಭ್ರಮಿಸಬೇಕು ಎಂದು ಸನ್ನೆ ಮೂಲಕ ತೋರಿಸಿದ್ದರು. ಇದನ್ನೂ ಓದಿ: ಲಂಕಾ ವಿರುದ್ಧ ಮೋಸದಾಟವಾಡಿತಾ ಪಾಕ್‌? – ಮತ್ತೆ ಮತ್ತೆ ಟೀಕೆಗೆ ಗುರಿಯಾಗ್ತಿರೋದೇಕೆ?

    127 ರನ್ ಗುರಿ ಬೆನ್ನತ್ತಿದ್ದ ಲಕ್ನೋ ತಂಡ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇನಿಂಗ್ಸ್ ಅಂತ್ಯದಲ್ಲಿ ಅಮಿತ್ ಮಿಶ್ರಾ 19 ರನ್ ಮತ್ತು ವೇಗಿ ನವೀನ್ ಉಲ್ ಹಕ್ 13 ನಡುವೆ ಸಣ್ಣ ಜೊತೆಯಾಟವೊಂದು ಮೂಡಿಬಂದಿತ್ತು. ಕವರ್ಸ್ ವಿಭಾಗದಲ್ಲಿ ಒಂದು ಫೋರ್ ಕೂಡ ಬಾರಿಸಿದ್ದ ನವೀನ್ ಉಲ್‌ಹಕ್‌ ಆರ್‌ಸಿಬಿ ಸ್ಟಾರ್‌ ವಿರಾಟ್ ಕೊಹ್ಲಿ ಅವರನ್ನ ದುರುಗುಟ್ಟಿ ನೋಡಿ, ದೊಡ್ಡ ಜಗಳಕ್ಕೆ ಸಣ್ಣ ಕಿಡಿ ಹಚ್ಚಿದ್ದರು. ಪಂದ್ಯ ಮುಗಿದ ಬಳಿಕ ನವೀನ್ ಮತ್ತು ಕೊಹ್ಲಿ ಕೈ ಕುಲುಕುವಾಗಲೂ ಮಾತಿನ ಚಕಮಕಿ ನಡೆದಿತ್ತು. ಕೈ-ಕೈ ಮಿಲಾಯಿಸುವುದಕ್ಕೂ ಮುಂದಾಗಿದ್ದರು. ಆದ್ರೆ ಮ್ಯಾಕ್ಸ್ವೆಲ್ ಹಾಗೂ ಹರ್ಷಲ್ ಪಟೇಲ್ ಸಮಾಧಾನಪಡಿಸಿ ಕಳುಹಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಬರ್‌ ಆಜಂ ಬಳಿಕ ನವೀನ್ ಉಲ್ ಹಕ್‌ನನ್ನ ಹೊಗಳಿದ ಗಂಭೀರ್‌ – ಕಾಲೆಳೆದ ಕೊಹ್ಲಿ ಫ್ಯಾನ್ಸ್‌

    ಬಾಬರ್‌ ಆಜಂ ಬಳಿಕ ನವೀನ್ ಉಲ್ ಹಕ್‌ನನ್ನ ಹೊಗಳಿದ ಗಂಭೀರ್‌ – ಕಾಲೆಳೆದ ಕೊಹ್ಲಿ ಫ್ಯಾನ್ಸ್‌

    ಮುಂಬೈ: ನಿನ್ನೆಯಷ್ಟೇ ಪಾಕಿಸ್ತಾನ ತಂಡದ ನಾಯಕ ಬಾಬರ್‌ ಆಜಂ ವಿಶ್ವಕಪ್‌ ಟೂರ್ನಿಯಲ್ಲಿ ಬೆಂಕಿ ಬ್ಯಾಟಿಂಗ್‌ ಮಾಡ್ತಾರೆ ಎಂದು ಹೇಳಿದ್ದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಇದೀಗ ಐಪಿಎಲ್‌ ವೇಳೆ ವಿರಾಟ್‌ ಕೊಹ್ಲಿ ಜೊತೆಗೆ ಕಿರಿಕ್‌ ಮಾಡಿದ್ದ ನವೀನ್‌ ಉಲ್‌ ಹಕ್‌ನನ್ನ ಬಾಯ್ತುಂಬ ಹೊಗಳಿದ್ದಾರೆ.

     

    View this post on Instagram

     

    A post shared by Gautam Gambhir (@gautamgambhir55)

    ಗಂಭೀರ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗ ನವೀನ್‌ ಉಲ್‌ ಹಕ್‌ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಜೊತೆಗೆ ನಿಮ್ಮಂಥವರು ಬಹಳ ಕಡಿಮೆ, ಎಂದಿಗೂ ಬದಲಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಇದರಿಂದ ವಿರಾಟ್‌ ಕೊಹ್ಲಿ ಅಭಿಮಾನಿಗಳು ಮತ್ತೆ ಗಂಭೀರ್‌ ಅವರನ್ನ ಕೆಣಕುವ ಪ್ರಯತ್ನ ಮಾಡಿದ್ದಾರೆ. ಅಲ್ಲದೇ ಬಾಬರ್‌ ಆಜಂ ಅವರನ್ನ ಹೊಗಳಿರುವುದಕ್ಕೆ ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: RCB ಮ್ಯಾಚ್‌ ನೋಡಲು ಟಿಕೆಟ್ ಸಿಗದಿದ್ದಕ್ಕೆ ರೊಚ್ಚಿಗೆದ್ರು ಫ್ಯಾನ್ಸ್‌ – ದ್ರಾವಿಡ್‌ ಕಾರಿಗೆ ಮುತ್ತಿಗೆ

    ನೆನಪಿದೆಯಾ ಕೊಹ್ಲಿ-ನವೀನ್‌ ಕಿರಿಕ್‌?
    2023ರ ಐಪಿಎಲ್‌ ಟೂರ್ನಿವೇಳೆ ಏಕನಾ ಕ್ರೀಡಾಂಗಣದಲ್ಲಿ ನಡೆದ 43ನೇ ಪಂದ್ಯದಲ್ಲಿ ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 18 ರನ್‌ಗಳ ಜಯ ಸಾಧಿಸಿತು. ಈ ಹಿಂದೆ ಆರ್‌ಸಿಬಿ ತವರಿನಲ್ಲಿ ಲಕ್ನೋ ವಿರುದ್ಧದ ವಿರೋಚಿತ ಸೋಲಿಗೆ ಸೇಡು ತೀರಿಸಿಕೊಂಡಿತು. ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳ ನಡೆದಿವೆ. ಆ ನಂತರ ಇಬ್ಬರ ನಡುವೆ ಉತ್ತಮ ಬಾಂಧವ್ಯವಿತ್ತು. ಆದರೆ ಅಂದು ನಡೆದ ಪಂದ್ಯದ ಬಳಿಕ ಇವರಿಬ್ಬರ ನಡುವಿನ ಜಗಳ ಅತಿರೇಕಕ್ಕೆ ತಲುಪಿತ್ತು. ಒಂದು ವೇಳೆ ಸಹ ಆಟಗಾರರು ಮಧ್ಯ ಬಾರದೇ ಇದ್ದಿದ್ದರೆ ಕೈಕೈ ಮಿಲಾಯಿಸುವುದಕ್ಕೂ ಕಾರಣವಾಗುತ್ತಿತ್ತು. ಇದನ್ನೂ ಓದಿ: ನವೀನ್ ವಿರುದ್ಧ ಕಿತ್ತಾಡಿದ್ದಕ್ಕೆ ಕೊಹ್ಲಿಗೆ 1.07 ಕೋಟಿ ಲಾಸ್ – ಕೊಹ್ಲಿ, ಗಂಭೀರ್ ಕಿರಿಕ್‌ಗೆ ಕಾರಣ ಏನು?

    ಅಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ನಡುವಣ ಪಂದ್ಯದಲ್ಲಿ ಲಕ್ನೋ ತಂಡ 1 ವಿಕೆಟ್‌ಗಳ ಜಯ ದಾಖಲಿಸಿತ್ತು. ಆ ಪಂದ್ಯದ ಬಳಿಕ ಗಂಭೀರ್ ಬಾಯ್ಮೇಲೆ ಬೆರೆಳಿಟ್ಟು ಆರ್‌ಸಿಬಿ ಪ್ರೇಕ್ಷಕರು ಸುಮ್ಮನಿರುವಂತೆ ಸೂಚಿಸಿ ಸಂಭ್ರಮಿಸಿದ್ದರು. ಲಕ್ನೋ ತಂಡದ ಅವೇಶ್ ಖಾನ್ ಹೆಲ್ಮೆಟ್ ಕಿತ್ತೆಸೆದು ಅತಿರೇಖದ ವರ್ತನೆ ತೋರಿಸಿದ್ದರು. ಇದಕ್ಕೆ ಪ್ರತಿಯಾಗಿ ತವರಿನಲ್ಲಿ ಬುದ್ಧಿ ಕಲಿಸಲು ನಿರ್ಧರಿಸಿದ್ದ ಕೊಹ್ಲಿ ಪಂದ್ಯದ ನಡುವೆ ಅಭಿಮಾನಿಗಳು ಸುಮ್ಮನಿರಬಾರದು? ಹೃದಯತುಂಬಿ ಸಂಭ್ರಮಿಸಬೇಕು ಎಂದು ಸನ್ನೆ ಮೂಲಕ ತೋರಿಸಿದ್ದರು.

    127 ರನ್ ಗುರಿ ಬೆನ್ನತ್ತಿದ್ದ ಲಕ್ನೋ ತಂಡ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇನಿಂಗ್ಸ್ ಅಂತ್ಯದಲ್ಲಿ ಅಮಿತ್ ಮಿಶ್ರಾ 19 ರನ್ ಮತ್ತು ವೇಗಿ ನವೀನ್ ಉಲ್ ಹಕ್ 13 ನಡುವೆ ಸಣ್ಣ ಜೊತೆಯಾಟವೊಂದು ಮೂಡಿಬಂದಿತ್ತು. ಕವರ್ಸ್ ವಿಭಾಗದಲ್ಲಿ ಒಂದು ಫೋರ್ ಕೂಡ ಬಾರಿಸಿದ್ದ ನವೀನ್ ಆರ್‌ಸಿಬಿ ತಾರೆ ವಿರಾಟ್ ಕೊಹ್ಲಿ ಅವರನ್ನ ದುರುಗುಟ್ಟಿ ನೋಡಿ, ದೊಡ್ಡ ಜಗಳಕ್ಕೆ ಸಣ್ಣ ಕಿಡಿ ಹಚ್ಚಿದ್ದರು. ಪಂದ್ಯ ಮುಗಿದ ಬಳಿಕ ನವೀನ್ ಮತ್ತು ಕೊಹ್ಲಿ ಕೈ ಕುಲುಕುವಾಗಲೂ ಮಾತಿನ ಚಕಮಕಿ ನಡೆದಿತ್ತು. ಕೈ-ಕೈ ಮಿಲಾಯಿಸುವುದಕ್ಕೂ ಮುಂದಾಗಿದ್ದರು. ಆದ್ರೆ ಮ್ಯಾಕ್ಸ್ವೆಲ್ ಹಾಗೂ ಹರ್ಷಲ್ ಪಟೇಲ್ ಸಮಾಧಾನಪಡಿಸಿ ಕಳುಹಿಸಿದ್ದರು.

    ಕೊಹ್ಲಿ ಮತ್ತು ನವೀನ್ ನಡುವಣ ಸಣ್ಣ ಜಗಳವನ್ನು ಅಲ್ಲೇ ಇದ್ದ ಎರಡೂ ತಂಡಗಳ ಆಟಗಾರರು ಬಗೆ ಹರಿಸಿದ್ದರು. ಆದರೆ, ಡಗೌಟ್‌ನಿಂದ ಹೊರಬಂದ ಗೌತಮ್ ಗಂಭೀರ್ ಜಗಳವನ್ನು ಮತ್ತಷ್ಟು ಗಂಭೀರವಾಗಿಸಿದರು. ವಿರಾಟ್ ಜೊತೆಗೆ ಮಾತನಾಡುತ್ತಿದ್ದ ಎಲ್‌ಎಸ್‌ಜಿ ಆಟಗಾರ ಕೈಲ್ ಮೇಯರ್ಸ್ ಅವರನ್ನು ಎಳೆದೊಯ್ದ ಗಂಭೀರ್ ಈ ಸಂದರ್ಭದಲ್ಲಿ ಮಾತಿನ ಚಕಮಕಿಯೇ ನಡೆಸಿದ್ದರು. ಕೊಹ್ಲಿ ಮತ್ತು ಗಂಭೀರ್‌ನ ತಡೆದು ನಿಲ್ಲಿಸಲು ಎರಡೂ ತಂಡದ ಆಟಗಾರರು ಹರಸಾಹನ ನಡೆಸಿದರು. ಈ ವೇಳೆ ಕೆ.ಎಲ್ ರಾಹುಲ್ ಹಾಗೂ ಅಮಿತ್ ಮಿಶ್ರಾ ಪರಿಸ್ಥಿತಿಯನ್ನು ತಣ್ಣಗಾಗಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • IPL 2023 Eliminator: 5 ರನ್‌ಗೆ 5 ವಿಕೆಟ್‌ ಉಡೀಸ್‌ – ಲಕ್ನೋ ಮನೆಗೆ, ಮುಂಬೈಗೆ 81ರನ್‌ಗಳ ಭರ್ಜರಿ ಜಯ

    IPL 2023 Eliminator: 5 ರನ್‌ಗೆ 5 ವಿಕೆಟ್‌ ಉಡೀಸ್‌ – ಲಕ್ನೋ ಮನೆಗೆ, ಮುಂಬೈಗೆ 81ರನ್‌ಗಳ ಭರ್ಜರಿ ಜಯ

    ಚೆನ್ನೈ: ಆಕಾಶ್‌ ಮಧ್ವಾಲ್‌ ಮಾರಕ ಬೌಲಿಂಗ್‌ ದಾಳಿ ಹಾಗೂ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನದಿಂದ ಮುಂಬೈ ಇಂಡಿಯನ್ಸ್‌ ತಂಡವು, ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ‌ 81 ರನ್‌ಗಳ ಭರ್ಜರಿ ಜಯ ಸಾಧಿಸಿದ್ದು, ಎಲಿಮಿನೇಟರ್‌ 2ನೇ ಹಂತಕ್ಕೆ ತಲುಪಿದೆ. ಮೇ 26 ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 2ನೇ ಎಲಿಮಿನೇಟರ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಸೆಣಸಲಿದೆ. ಇನ್ನೂ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಲಕ್ನೋ ಸೂಪರ್‌ ಜೈಂಟ್ಸ್‌ ಸೋತು ನಿರಾಸೆ ಅನುಭವಿಸಿದೆ.

    ಕಳೆದ ವರ್ಷವಷ್ಟೇ ಐಪಿಎಲ್‌ ಪ್ರವೇಶಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ 2ನೇ ಬಾರಿಯೂ ಮೊದಲ ಎಲಿಮಿನೇಟರ್‌ ಪಂದ್ಯದಲ್ಲೇ ಸೋತು ಹೊರನಡೆದಿದೆ. 2022ರ ಆವೃತ್ತಿಯಲ್ಲಿ ಆರ್‌ಸಿಬಿ ವಿರುದ್ಧ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಸೋತಿತ್ತು.

    ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ 8 ವಿಕೆಟ್‌ ನಷ್ಟಕ್ಕೆ 182 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನದಿಂದ 16.3 ಓವರ್‌ಗಳಲ್ಲೇ 101 ರನ್‌ಗಳಿಗೆ ಸರ್ವಪತನಕಂಡಿತು.

    ಚೇಸಿಂಗ್‌ ಆರಂಭಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದಲ್ಲಿ ಮುಂಬೈ ಬೌಲರ್‌ಗಳ ದಾಳಿಗೆ ತರಗೆಲೆಗಳಂತೆ ವಿಕೆಟ್‌ ಉದುರಿತು. ಪವರ್‌ ಪ್ಲೇ ನಲ್ಲಿ ವಿಕೆಟ್‌ ಕಳೆದುಕೊಂಡ ಹೊರತಾಗಿಯೂ ಉತ್ತಮ ರನ್‌ ಕಲೆಹಾಕಿತ್ತು. ಬಳಿಕ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳ ಕಳಪೆ ಪ್ರದರ್ಶನದಿಂದ ಮುಂಬೈ ಎದುರು ಮಂಡಿಯೂರಬೇಕಾಯಿತು.

    ಲಕ್ನೋ ತಂಡದ ಪರ ಮಾರ್ಕಸ್‌ ಸಗ್ಟೋಯ್ನಿಸ್‌ 40 ರನ್‌ (27 ಎಸೆತ, 5 ಬೌಂಡರಿ, 1 ಸಿಕ್ಸರ್‌), ಕೈಲ್‌ ಮೇಯರ್ಸ್‌ 18 ರನ್‌, ದೀಪಕ್‌ ಹೂಡಾ 15 ರನ್‌ ಗಲಿಸಿದ್ದು ಬಿಟ್ಟರೆ ಉಳಿದ ಯಾರೊಬ್ಬರೂ ಕ್ರೀಸ್‌ನಲ್ಲಿ ದೃಢವಾಗಿ ನಿಲ್ಲದ ಕಾರಣ ಲಕ್ನೋ ಹೀನಾಯ ಸೋಲನುಭವಿಸಿತು.

    ಅನಿಲ್‌ ಕುಂಬ್ಳೆ ದಾಖಲೆ ಸರಿಗಟ್ಟಿದ ಮಧ್ವಾಲ್‌:
    ಮುಂಬೈ ಇಂಡಿಯನ್ಸ್‌ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ಆಕಾಶ್‌ ಮಧ್ವಾಲ್‌ 3.3 ಓವರ್‌ಗಳಲ್ಲಿ 5 ರನ್‌ ನೀಡಿ 5 ವಿಕೆಟ್‌ ಉಡೀಸ್‌ ಮಾಡಿದರು. ಈ ಮೂಲಕ ಅನಿಲ್‌ ಕುಂಬ್ಳೆ ದಾಖಲೆ ಸರಿಗಟ್ಟಿದರು. ಕೇಪ್‌ಟೌನ್‌ನಲ್ಲಿ ನಡೆದ 2009ರ ಐಪಿಎಲ್‌ ಆವೃತ್ತಿಯಲ್ಲಿ ಕುಂಬ್ಳೆ 3.1 ಓವರ್‌ಗಳಲ್ಲಿ 5 ರನ್‌ ನೀಡಿ 5 ವಿಕೆಟ್‌ ಪಡೆದಿದ್ದರು. ಇದೀಗ ಆಕಾಶ್‌ ಮಧ್ವಾಲ್‌ 3.3 ಓವರ್‌ಗಳಲ್ಲಿ 5 ರನ್‌ ನೀಡಿ 5 ವಿಕೆಟ್‌ ಪಡೆದಿದ್ದಾರೆ. ಚಿರ್ಸ್‌ ಜೋರ್ಡನ್‌ ಹಾಗೂ ಪಿಯೂಷ್‌ ಚಾವ್ಲಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರು ಹೆಚ್ಚಿನ ರನ್‌ ಕಲೆಹಾಕುವಲ್ಲಿ ವಿಫಲವಾದರೂ 3ನೇ ವಿಕೆಟ್‌ಗೆ ಕ್ಯಾಮರೂನ್‌ ಗ್ರೀನ್‌ ಹಾಗೂ ಸೂರ್ಯಕುಮಾರ್‌ ಜೋಡಿ 38 ಎಸೆತಗಳಲ್ಲಿ 66 ರನ್‌ ಬಾರಿಸಿತ್ತು. ಇವರಿಬ್ಬರ ಆಟದಿಂದ ಮುಂಬೈ ಮೊದಲ 10 ಓವರ್‌ಗಳಲ್ಲಿ 98 ರನ್‌ ಗಳಿಸಿತ್ತು. ಬಳಿಕ ಸೂರ್ಯ ಹಾಗೂ ಗ್ರೀನ್‌ ಔಟಾಗುತ್ತಿದ್ದಂತೆ ರನ್‌ ವೇಗ ಕಳೆದುಕೊಂಡ ಮುಂಬೈ ತಂಡ ಮುಂದಿನ 10 ಓವರ್‌ಗಳಲ್ಲಿ ಕೇವಲ 84 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು.

    ಮುಂಬೈ ಪರ ಕ್ಯಾಮರೂನ್‌ ಗ್ರೀನ್‌ 41 ರನ್‌ (23 ಎಸತೆ, 6 ಬೌಂಡರಿ, 1 ಸಿಕ್ಸರ್), ಸೂರ್ಯಕುಮಾರ್‌ ಯಾದವ್‌ 33 ರನ್‌ (20 ಎಸೆತ, 2 ಬೌಂಡರಿ, 2 ಸಿಕ್ಸ್‌ರ್‌), ತಿಲಕ್‌ ವರ್ಮಾ 26 ರನ್‌, ನೇಹಾಲ್‌ ವಧೇರಾ 23 ರನ್‌, ರೋಹಿತ್‌ ಶರ್ಮಾ 11 ರನ್‌, ಇಶಾನ್‌ ಕಿಶನ್‌ 15 ರನ್‌ ಗಳಿಸಿದರು.

  • RCB ಪ್ಲೇ ಆಫ್‌ ಲೆಕ್ಕಾಚಾರ ಏನು? – ಮತ್ತೆ ಮುಖಾಮುಖಿಯಾಗ್ತಾರಾ ಕೊಹ್ಲಿ-ಗಂಭೀರ್‌?

    RCB ಪ್ಲೇ ಆಫ್‌ ಲೆಕ್ಕಾಚಾರ ಏನು? – ಮತ್ತೆ ಮುಖಾಮುಖಿಯಾಗ್ತಾರಾ ಕೊಹ್ಲಿ-ಗಂಭೀರ್‌?

    ಮುಂಬೈ: ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ಕಣಕ್ಕಿಳಿಯುತ್ತಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡಕ್ಕೆ ಗುರುವಾರದ ಪಂದ್ಯದ ಸೋಲು-ಗೆಲುವಿನ ಲೆಕ್ಕಾಚಾರದ ಮೇಲೆ ಮುಂದಿನ ಭವಿಷ್ಯ ನಿರ್ಧಾರವಾಗಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಆರ್‌ಸಿಬಿ ಪ್ಲೇ ಆಫ್‌ (Playoffs) ಪ್ರವೇಶಿಸುವ ಅವಕಾಶ ಪಡೆದುಕೊಳ್ಳಲಿದೆ.

    ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 2023ರ ಐಪಿಎಲ್‌ (IPL 2023) ಆವೃತ್ತಿಯಲ್ಲಿ ಪ್ಲೇ ಆಫ್‌ಗೆ ಅರ್ಹತೆ ಪಡೆಯಲು ಅತ್ಯುತ್ತಮ ಅವಕಾಶವಿದೆ. ಹಾಗಾಗಿ ತನ್ನ ಕೊನೆಯ ಎರಡೂ ಪಂದ್ಯಗಳು ಆರ್‌ಸಿಬಿ ಪಾಲಿಗೆ ನಿರ್ಣಾಯಕವಾಗಿದೆ. ಇದನ್ನೂ ಓದಿ: ಯಾರಾದ್ರು ಕೊಟ್ರೆ ನಾವೂ ತಿರುಗಿಸಿ ಕೊಡ್ತೀವಿ – ಮತ್ತೆ ಗಂಭೀರ್‌ಗೆ ಕೌಂಟರ್‌ ಕೊಟ್ಟ ಕಿಂಗ್‌ ಕೊಹ್ಲಿ

    ಪ್ರಸ್ತುತ ಆರ್‌ಸಿಬಿಗೆ ಮುಂಬೈ ಇಂಡಿಯನ್ಸ್ (Mumbai Indians) ತಂಡದಿಂದ ಕಠಿಣ ಪೈಪೋಟಿ ಎದುರಾಗಿದೆ. ಮುಂಬೈ ಇಂಡಿಯನ್ಸ್‌ -0.128 ರನ್‌ರೇಟ್‌ ಹೊಂದಿದ್ದರೆ, ಆರ್‌ಸಿಬಿ +0.166 ರನ್‌ರೇಟ್‌ನೊಂದಿಗೆ 5ನೇ ಸ್ಥಾನದಲ್ಲಿದೆ. ಒಂದು ವೇಳೆ ಆರ್‌ಸಿಬಿ ಉಳಿದೆರಡು ಪಂದ್ಯಗಳಲ್ಲಿ ಗೆದ್ದರೆ ಪ್ಲೇ ಆಫ್‌ ಪ್ರವೇಶಿಸಲಿದೆ. ಮುಂಬೈ ರನ್‌ ರೇಟ್‌ ಕಡಿಮೆ ಇರುವುದರಿಂದ ಮುಂದಿನ ಪಂದ್ಯದಲ್ಲಿ ಗೆದ್ದು 15 ಅಂಕ ಪಡೆದರೂ ಆರ್‌ಸಿಬಿ 2 ಪಂದ್ಯಗಳಲ್ಲಿ ಗೆದ್ದರೆ ಪ್ಲೇ ಆಫ್‌ ಪ್ರವೇಶಿಸಬಹುದು. ಇದನ್ನೂ ಓದಿ: ನವೀನ್ ವಿರುದ್ಧ ಕಿತ್ತಾಡಿದ್ದಕ್ಕೆ ಕೊಹ್ಲಿಗೆ 1.07 ಕೋಟಿ ಲಾಸ್ – ಕೊಹ್ಲಿ, ಗಂಭೀರ್ ಕಿರಿಕ್‌ಗೆ ಕಾರಣ ಏನು?

    ಹಾಗೆಯೇ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ಉಳಿದ ಒಂದೊಂದು ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಚೆನ್ನೈ 2 ಮತ್ತು ಲಕ್ನೋ 3ನೇ ಸ್ಥಾನದಲ್ಲಿ ಮುಂದುವರಿಯಲಿದೆ. ಆಗ ಮತ್ತೊಮ್ಮೆ ಪ್ಲೇ ಆಫ್‌ನ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಆರ್‌ಸಿಬಿ ನಡುವೆ ಹೈವೋಲ್ಟೇಜ್‌ ಕದನ ಏರ್ಪಡಲಿದೆ. ಒಂದು ವೇಳೆ ಚೆನ್ನೈ ಸೋತು, ಲಕ್ನೋ ಗೆದ್ದರೆ ಲಕ್ನೋ 2ನೇ ಸ್ಥಾನಕ್ಕೆ ಜಿಗಿಯಲಿದೆ. ಆರ್‌ಸಿಬಿ ಚೆನ್ನೈನೊಂದಿಗೆ ಸೆಣಸಬೇಕಾಗುತ್ತದೆ.

  • ಯಾರಾದ್ರು ಕೊಟ್ರೆ ನಾವೂ ತಿರುಗಿಸಿ ಕೊಡ್ತೀವಿ – ಮತ್ತೆ ಗಂಭೀರ್‌ಗೆ ಕೌಂಟರ್‌ ಕೊಟ್ಟ ಕಿಂಗ್‌ ಕೊಹ್ಲಿ

    ಯಾರಾದ್ರು ಕೊಟ್ರೆ ನಾವೂ ತಿರುಗಿಸಿ ಕೊಡ್ತೀವಿ – ಮತ್ತೆ ಗಂಭೀರ್‌ಗೆ ಕೌಂಟರ್‌ ಕೊಟ್ಟ ಕಿಂಗ್‌ ಕೊಹ್ಲಿ

    ಲಕ್ನೋ: ಲಕ್ನೋ: ಆರ್‌ಸಿಬಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ (Virat Kohli) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಮೆಂಟರ್‌ ಗೌತಮ್‌ ಗಂಭೀರ್‌ (Gautam Gambhir) ಸದ್ಯ ಸುದ್ದಿಯಲ್ಲಿದ್ದಾರೆ. ಸೋಮವಾರ ಅಟಲ್‌ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ಇತ್ತಂಡಗಳ ನಡುವಿನ ಪಂದ್ಯದ ಬಳಿಕ ನಡೆದ ಜಗಳ ದೇಶಾದ್ಯಂತ ಭಾರೀ ಚರ್ಚೆಯಲ್ಲಿದೆ.

    ಮೊದಲು ಈ ಘಟನೆಗೆ ಕಾರಣವಾಗಿದ್ದು, ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೌತಮ್‌ ಗಂಭೀರ್‌ ಮಾಡಿದ್ದ ವರ್ತನೆ. ಅಂದು ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿತ್ತು. ಈ ಗೆಲುವಿನ ಸಂಭ್ರಮದಲ್ಲಿ ಲಕ್ನೋ ತಂಡದ ಮೆಂಟರ್ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳಿಗೆ ಸೈಲೆಂಟಾಗಿರಬೇಕು ಎಂದು ಕೈಸನ್ನೆ ಮಾಡಿದ್ದರು. ಇದನ್ನೂ ಓದಿ: ನವೀನ್ ವಿರುದ್ಧ ಕಿತ್ತಾಡಿದ್ದಕ್ಕೆ ಕೊಹ್ಲಿಗೆ 1.07 ಕೋಟಿ ಲಾಸ್ – ಕೊಹ್ಲಿ, ಗಂಭೀರ್ ಕಿರಿಕ್‌ಗೆ ಕಾರಣ ಏನು?

    ಇದಕ್ಕೆ ಪ್ರತ್ಯುತ್ತರವಾಗಿ ವಿರಾಟ್ ಕೊಹ್ಲಿ ಕೂಡ ಲಕ್ನೋ ಸೂಪರ್ ಜೈಂಟ್ಸ್ ಅನ್ನು ಟಾರ್ಗೆಟ್ ಮಾಡಿ ಸಂಭ್ರಮಿಸಿದ್ದರು. ಪ್ರತಿ ವಿಕೆಟ್‌ ಪಡೆದಾಗಲೂ ಫುಲ್‌ ಜೋಶ್‌ನಿಂದ ಸಂಭ್ರಮಿಸಿದರು. ಆದರೆ ಪಂದ್ಯದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೆಂಟರ್ ಗೌತಮ್ ಗಂಭೀರ್ ಹಾಗೂ ಕೊಹ್ಲಿ ನಡುವೆ ವಾಗ್ವಾದ ನಡೆಯಿತು. ಇದರಿಂದಾಗಿ ಐಪಿಎಲ್‌ ಮಂಡಳಿ ದಂಡದ ಬಿಸಿ ಮುಟ್ಟಿಸಿತು. ಬಳಿಕ ಆರ್‌ಸಿಬಿ ತಂಡದ ಡ್ರೆಸ್ಸಿಂಗ್‌ ರೂಂ ನಲ್ಲಿ ಕಾಣಿಸಿಕೊಂಡ ಕೊಹ್ಲಿ, ಗಂಭೀರ್‌ಗೆ ಕೌಂಟರ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ನೆನಪಿದೆಯಾ.. ಅಂದು ಕೊಹ್ಲಿಗಾಗಿ ತನ್ನ ಪ್ರಶಸ್ತಿಯನ್ನೇ ಬಿಟ್ಟುಕೊಟ್ಟಿದ್ದರು ಗಂಭೀರ್‌

    ನಿಮಗೆ ಕೊಡೋಕೆ ಗೊತ್ತಿದ್ರೆ, ಅದನ್ನ ಇಸ್ಕೋಳ್ಳೋಕು ಗೊತ್ತಿರಬೇಕು. ಇಲ್ಲದಿದ್ರೆ ಕೊಡೋಕೆ ಬರಬಾರದು, ಕೊಟ್ಟರೆ, ನಾವು ತಿರುಗಿಸಿ ಕೊಡ್ತೀವಿ, ಇಲ್ಲದಿದ್ರೆ ನೀವು ಕೊಡೋಕೆ ಬರಬಾರದು ಎಂದು ಪರೋಕ್ಷವಾಗಿ ಡಿಚ್ಚಿಕೊಟ್ಟಿದ್ದಾರೆ.

  • ನೆನಪಿದೆಯಾ.. ಅಂದು ಕೊಹ್ಲಿಗಾಗಿ ತನ್ನ ಪ್ರಶಸ್ತಿಯನ್ನೇ ಬಿಟ್ಟುಕೊಟ್ಟಿದ್ದರು ಗಂಭೀರ್‌

    ನೆನಪಿದೆಯಾ.. ಅಂದು ಕೊಹ್ಲಿಗಾಗಿ ತನ್ನ ಪ್ರಶಸ್ತಿಯನ್ನೇ ಬಿಟ್ಟುಕೊಟ್ಟಿದ್ದರು ಗಂಭೀರ್‌

    ಲಕ್ನೋ: ಆರ್‌ಸಿಬಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ (Virat Kohli) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಮೆಂಟರ್‌ ಗೌತಮ್‌ ಗಂಭೀರ್‌ (Gautam Gambhir) ಸದ್ಯ ಸುದ್ದಿಯಲ್ಲಿದ್ದಾರೆ. ಸೋಮವಾರ ಅಟಲ್‌ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ಇತ್ತಂಡಗಳ ನಡುವಿನ ಪಂದ್ಯದ ಬಳಿಕ ನಡೆದ ಜಗಳ ದೇಶಾದ್ಯಂತ ಭಾರೀ ಚರ್ಚೆಯಲ್ಲಿದೆ.

    ಈ ನಡುವೆ ವಿರಾಟ್‌ ಕೊಹ್ಲಿ ಹಾಗೂ ಗೌತಮ್‌ ಗಂಭೀರ್‌ ನಡುವಿನ ಪಾಟ್ನರ್‌ಶಿಪ್‌ ಈ ಹಿಂದೆ ಹೇಗಿತ್ತು ಎನ್ನುವ ವೀಡಿಯೋ ತುಣುಕೊಂದು ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಕೆಲವರು ಗೌತಮ್‌ ಗಂಭೀರ್‌ ಪರ ಬ್ಯಾಟ್‌ ಬೀಸಿದರೆ, ಇನ್ನೂ ಕೆಲವರು ವಿರಾಟ್‌ ಕೊಹ್ಲಿಯನ್ನ ಬೆಂಬಲಿಸಿದ್ದಾರೆ. ಇದನ್ನೂ ಓದಿ: ನವೀನ್ ವಿರುದ್ಧ ಕಿತ್ತಾಡಿದ್ದಕ್ಕೆ ಕೊಹ್ಲಿಗೆ 1.07 ಕೋಟಿ ಲಾಸ್ – ಕೊಹ್ಲಿ, ಗಂಭೀರ್ ಕಿರಿಕ್‌ಗೆ ಕಾರಣ ಏನು?

    ಗಂಭೀರ್‌ ಪ್ರಶಸ್ತಿ ಬಿಟ್ಟುಕೊಟ್ಟಿದ್ದರು: ಈ ಹಿಂದೆ 2009ರಲ್ಲಿ ಶ್ರೀಲಂಕಾ (SriLanka) ವಿರುದ್ಧ ನಡೆದ ಪಂದ್ಯದಲ್ಲಿ ಗೌತಮ್‌ ಗಂಭೀರ್‌ ತಮ್ಮ ಮ್ಯಾನ್‌ ಆಫ್‌ದಿ ಮ್ಯಾಚ್‌ (ಪಂದ್ಯಶ್ರೇಷ್ಠ) ಪ್ರಶಸ್ತಿಯನ್ನ ಕೊಹ್ಲಿಗೆ ಬಿಟ್ಟುಕೊಟ್ಟಿದ್ದರು.

    ಹೌದು. 2009ರ ಡಿಸೆಂಬರ್‌ 24 ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ (Team India) 7 ವಿಕೆಟ್‌ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿತ್ತು. ಈ ಪಂದ್ಯದಲ್ಲಿ ಭಾರತ 316 ರನ್‌ಗಳ ಗುರಿ ಬೆನ್ನಟ್ಟಿತ್ತು. ಸಚಿನ್‌ ತೆಂಡೂಲ್ಕರ್‌, ವೀರೇಂದ್ರ ಸೆಹ್ವಾಗ್‌ ಬೇಗನೆ ನಿರ್ಗಮಿಸಿದರು. ನಂತರ ಸುರಂಗ ಲಕ್ಮಲ್ ಉತ್ತಮ ಆರಂಭ ನೀಡಿದ್ದರು. ಇದಾದ ಬಳಿಕ ಜೊತೆಗೂಡಿದ ವಿರಾಟ್‌ ಕೊಹ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ್ದರು.

    3ನೇ ವಿಕೆಟ್‌ ಜೊತೆಯಾಟಕ್ಕೆ ಈ ಜೋಡಿ 35.4 ಓವರ್‌ಗಳಲ್ಲಿ 224 ರನ್‌ ಜೊತೆಯಾಟ ನೀಡಿತ್ತು. ಗಂಭೀರ್‌ 137 ಎಸೆತಗಳಲ್ಲಿ 14 ಬೌಂಡರಿಗಳೊಂದಿಗೆ 150 ರನ್‌ ಗಳಿಸಿ, ಅಜೇಯರಾಗುಳಿದಿದ್ದರು. ಆದ್ರೆ ವಿರಾಟ್‌ ಕೊಹ್ಲಿ 114 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸರ್‌ನೊಂದಿಗೆ 107 ರನ್‌ ಗಳಿಸಿ ಔಟಾಗಿದ್ದರು. ಅದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಅವರ ಚೊಚ್ಚಲ ಶತಕವಾಗಿತ್ತು. ಇದನ್ನೂ ಓದಿ: ಬೊಂಬಾಟ್‌ ಬೌಲಿಂಗ್‌, ಮ್ಯಾಜಿಕ್‌ ಫೀಲ್ಡಿಂಗ್‌ – RCBಗೆ 18 ರನ್‌ಗಳ ಭರ್ಜರಿ ಜಯ

    ಆ ಸಮಯದಲ್ಲಿ ವಿರಾಟ್‌ ಕೊಹ್ಲಿ ಹೊಸಬರಾಗಿದ್ದರು, ಆದ್ರೆ ಗಂಭೀರ್‌, ವಿರಾಟ್‌‌ ಟೀಂ ಇಂಡಿಯಾಗೆ ಬರುವುದಕ್ಕೂ ಮುನ್ನವೇ 6 ವರ್ಷಗಳ ಕಾಲ ಆಡಿದ್ದರು. ಅಂದು ಗಂಭೀರ್ ಅವರು ಕೋಲ್ಕತ್ತಾದ ಐಕಾನಿಕ್ ಸ್ಥಳದಲ್ಲಿ ಆಡಿದ ನಂತರ ಪಂದ್ಯಶ್ರೇಷ್ಠರಾಗಿ ಆಯ್ಕೆಯಾದರು. ಆದರೆ, ಗಂಭೀರ್ ತಮ್ಮ ಪ್ರಶಸ್ತಿಯನ್ನ ಕೊಹ್ಲಿಗೆ ನೀಡಲು ನಿರ್ಧರಿಸಿದರು. ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಈ ವಿಷಯ ಪ್ರಕಟಿಸಿದ್ದರು. ಈ ವಿಚಾರ ಇದೀಗ ಮುನ್ನೆಲೆಗೆ ಬಂದಿದ್ದು, ಕೆಲವರು ವಿರಾಟ್‌ ಕೊಹ್ಲಿಗೆ ಗಂಭೀರ್‌ ಪ್ರೋತ್ಸಾಹಿಸಿದ್ದನ್ನು ನೆನಪಿಟ್ಟುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

  • ನವೀನ್ ವಿರುದ್ಧ ಕಿತ್ತಾಡಿದ್ದಕ್ಕೆ ಕೊಹ್ಲಿಗೆ 1.07 ಕೋಟಿ ಲಾಸ್ – ಕೊಹ್ಲಿ, ಗಂಭೀರ್ ಕಿರಿಕ್‌ಗೆ ಕಾರಣ ಏನು?

    ನವೀನ್ ವಿರುದ್ಧ ಕಿತ್ತಾಡಿದ್ದಕ್ಕೆ ಕೊಹ್ಲಿಗೆ 1.07 ಕೋಟಿ ಲಾಸ್ – ಕೊಹ್ಲಿ, ಗಂಭೀರ್ ಕಿರಿಕ್‌ಗೆ ಕಾರಣ ಏನು?

    ಲಕ್ನೋ: ಸೋಮವಾರ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಪಂದ್ಯದ ಬಳಿಕ ವಿರಾಟ್ ಕೊಹ್ಲಿ (Virat Kohli) ಮತ್ತು ಗೌತಮ್ ಗಂಭೀರ್ ಅವರಿಗೆ ತಮ್ಮ ಐಪಿಎಲ್ (IPL) ಪಂದ್ಯದ ಶೇ.100 ರಷ್ಟು ದಂಡ ವಿಧಿಸಲಾಗಿದೆ.

    ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅತಿರೇಖದ ವರ್ತನೆಯಿಂದ ಐಪಿಎಲ್ ನೀತಿ ಸಂಹಿತೆ (IPL Code of Conduct) ಉಲ್ಲಂಘಿಸಿದ್ದಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ (25 ಲಕ್ಷ ರೂ.) ಹಾಗೂ ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ 100 ಪ್ರತಿಶತದಷ್ಟು (1.07 ಕೋಟಿ ರೂ.) ದಂಡ ವಿಧಿಸಲಾಗಿದೆ. ಐಪಿಎಲ್ ನೀತಿಸಂಹಿತೆಯ ಆರ್ಟಿಕಲ್ 2.21ರ ಅಡಿಯಲ್ಲಿ ಗೌತಮ್ ಗಂಭೀರ್ 2ನೇ ಹಂತದ ಅಪರಾಧ ಒಪ್ಪಿಕೊಂಡಿದ್ದಾರೆ ಎಂದು ಐಪಿಎಲ್ ಮಂಡಳಿ ಪ್ರಕಟಣೆ ಮೂಲಕ ತಿಳಿಸಿದೆ. ಈ ನಡುವೆ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ನವೀನ್-ಉಲ್-ಹಕ್‌ಗೆ (Naveen-ul-Haq) ಶೇ.50 ರಷ್ಟು(1.79 ಲಕ್ಷ ರೂ.) ದಂಡ ವಿಧಿಸಲಾಗಿದೆ. ಇದನ್ನೂ ಓದಿ: ಒಂದು ಹುಡ್ಗನ್ನ ಪಟಾಯಿಸಿಕೊಡು ವಿರಾಟ್‌ – ಪೋಸ್ಟರ್‌ ಹಿಡಿದು ರಿಕ್ವೆಸ್ಟ್‌ ಮಾಡಿದ RCB ಫ್ಯಾನ್ಸ್‌

    ಏನಿದು ಕೊಹ್ಲಿ-ಗಂಭೀರ್ ವಾರ್?
    ಏಕನಾ ಕ್ರೀಡಾಂಗಣದಲ್ಲಿ ನಡೆದ 43ನೇ ಪಂದ್ಯದಲ್ಲಿ ಆರ್‌ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 18 ರನ್‌ಗಳ ಜಯ ಸಾಧಿಸಿತು. ಈ ಹಿಂದೆ ಆರ್‌ಸಿಬಿ ತವರಿನಲ್ಲಿ ಲಕ್ನೋ ವಿರುದ್ಧದ ವಿರೋಚಿತ ಸೋಲಿಗೆ ಸೇಡು ತೀರಿಸಿಕೊಂಡಿತು. ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳ ನಡೆದಿವೆ. ಆ ನಂತರ ಇಬ್ಬರ ನಡುವೆ ಉತ್ತಮ ಬಾಂಧವ್ಯವಿತ್ತು. ಆದರೆ ಸೋಮವಾರ ನಡೆದ ಪಂದ್ಯದ ಬಳಿಕ ಇವರಿಬ್ಬರ ನಡುವಿನ ಜಗಳ ಅತಿರೇಕಕ್ಕೆ ತಲುಪಿತ್ತು. ಒಂದು ವೇಳೆ ಸಹ ಆಟಗಾರರು ಮಧ್ಯ ಬಾರದೇ ಇದ್ದಿದ್ದರೆ ಕೈಕೈ ಮಿಲಾಯಿಸುವುದಕ್ಕೂ ಕಾರಣವಾಗುತ್ತಿತ್ತು. ಇದನ್ನೂ ಓದಿ: ಬೊಂಬಾಟ್‌ ಬೌಲಿಂಗ್‌, ಮ್ಯಾಜಿಕ್‌ ಫೀಲ್ಡಿಂಗ್‌ – RCBಗೆ 18 ರನ್‌ಗಳ ಭರ್ಜರಿ ಜಯ

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ನಡುವಣ ಪಂದ್ಯದಲ್ಲಿ ಲಕ್ನೋ ತಂಡ 1 ವಿಕೆಟ್‌ಗಳ ಜಯ ದಾಖಲಿಸಿತ್ತು. ಆ ಪಂದ್ಯದ ಬಳಿಕ ಗಂಭೀರ್ ಬಾಯ್ಮೇಲೆ ಬೆರೆಳಿಟ್ಟು ಆರ್‌ಸಿಬಿ ಪ್ರೇಕ್ಷಕರು ಸುಮ್ಮನಿರುವಂತೆ ಸೂಚಿಸಿ ಸಂಭ್ರಮಿಸಿದ್ದರು. ಲಕ್ನೋ ತಂಡದ ಅವೇಶ್ ಖಾನ್ ಹೆಲ್ಮೆಟ್ ಕಿತ್ತೆಸೆದು ಅತಿರೇಖದ ವರ್ತನೆ ತೋರಿಸಿದ್ದರು. ಇದಕ್ಕೆ ಪ್ರತಿಯಾಗಿ ತವರಿನಲ್ಲಿ ಬುದ್ಧಿ ಕಲಿಸಲು ನಿರ್ಧರಿಸಿದ್ದ ಆರ್‌ಸಿಬಿ ತಂಡ ಕೊನೆಗೂ ಗೆದ್ದು ಬೀಗಿತು. ಪಂದ್ಯದ ನಡುವೆ ವಿರಾಟ್ ಅಭಿಮಾನಿಗಳು ಸುಮ್ಮನಿರಬಾರದು ?ಹೃದಯತುಂಬಿ ಸಂಭ್ರಮಿಸಬೇಕು’ ಎಂದು ಸನ್ನೆ ಮೂಲಕ ತೋರಿಸಿದರು.

    127 ರನ್ ಗುರಿ ಬೆನ್ನತ್ತಿದ ಲಕ್ನೋ ತಂಡ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇನಿಂಗ್ಸ್ ಅಂತ್ಯದಲ್ಲಿ ಅಮಿತ್ ಮಿಶ್ರಾ 19 ರನ್ ಮತ್ತು ವೇಗಿ ನವೀನ್ ಉಲ್ ಹಕ್ 13 ನಡುವೆ ಸಣ್ಣ ಜೊತೆಯಾಟವೊಂದು ಮೂಡಿಬಂದಿತ್ತು. ಕವರ್ಸ್ ವಿಭಾಗದಲ್ಲಿ ಒಂದು ಫೋರ್ ಕೂಡ ಬಾರಿಸಿದ್ದ ನವೀನ್ ಆರ್‌ಸಿಬಿ ತಾರೆ ವಿರಾಟ್ ಕೊಹ್ಲಿ ಅವರನ್ನ ದುರುಗುಟ್ಟಿ ನೋಡಿ, ದೊಡ್ಡ ಜಗಳಕ್ಕೆ ಸಣ್ಣ ಕಿಡಿ ಹಚ್ಚಿದ್ದರು. ಪಂದ್ಯ ಮುಗಿದ ಬಳಿಕ ನವೀನ್ ಮತ್ತು ಕೊಹ್ಲಿ ಕೈ ಕುಲುಕುವಾಗಲೂ ಮಾತಿನ ಚಕಮಕಿ ನಡೆದಿತ್ತು. ಕೈ-ಕೈ ಮಿಲಾಯಿಸುವುದಕ್ಕೂ ಮುಂದಾಗಿದ್ದರು. ಆದ್ರೆ ಮ್ಯಾಕ್ಸ್ವೆಲ್ ಹಾಗೂ ಹರ್ಷಲ್ ಪಟೇಲ್ ಸಮಾಧಾನಪಡಿಸಿ ಕಳುಹಿಸಿದ್ದರು.

    ಕೊಹ್ಲಿ ಮತ್ತು ನವೀನ್ ನಡುವಣ ಸಣ್ಣ ಜಗಳವನ್ನು ಅಲ್ಲೇ ಇದ್ದ ಎರಡೂ ತಂಡಗಳ ಆಟಗಾರರು ಬಗೆ ಹರಿಸಿದ್ದರು. ಆದರೆ, ಡಗೌಟ್‌ನಿಂದ ಹೊರಬಂದ ಗೌತಮ್ ಗಂಭೀರ್ ಜಗಳವನ್ನು ಮತ್ತಷ್ಟು ಗಂಭೀರವಾಗಿಸಿದರು. ವಿರಾಟ್ ಜೊತೆಗೆ ಮಾತನಾಡುತ್ತಿದ್ದ ಎಲ್‌ಎಸ್‌ಜಿ ಆಟಗಾರ ಕೈಲ್ ಮೇಯರ್ಸ್ ಅವರನ್ನು ಎಳೆದೊಯ್ದ ಗಂಭೀರ್ ಈ ಸಂದರ್ಭದಲ್ಲಿ ಮಾತಿನ ಚಕಮಕಿಯೇ ನಡೆಸಿದರು. ಕೊಹ್ಲಿ ಮತ್ತು ಗಂಭೀರ್‌ನ ತಡೆದು ನಿಲ್ಲಿಸಲು ಎರಡೂ ತಂಡದ ಆಟಗಾರರು ಹರಸಾಹನ ನಡೆಸಿದರು. ಈ ವೇಳೆ ಕೆ.ಎಲ್ ರಾಹುಲ್ ಹಾಗೂ ಅಮಿತ್ ಮಿಶ್ರಾ ಪರಿಸ್ಥಿತಿಯನ್ನು ತಣ್ಣಗಾಗಿಸಿದರು.

    ಕೊಹ್ಲಿ-ಗಂಭೀರ್ ಜಗಳಕ್ಕೆ ಕಾರಣವೇನು?
    ಕಳೆದ ಏಪ್ರಿಲ್ 10ರಂದು ಬೆಂಗಳೂರಿನಲ್ಲಿ ನಡೆದಿದ್ದ ಆರ್‌ಸಿಬಿ ಹಾಗೂ ಲಕ್ನೋ ನಡುವಣ ಪಂದ್ಯದಲ್ಲಿ ಲಕ್ನೋ ಆಟಗಾರರು ಅತಿರೇಕದ ವರ್ತನೆ ತೋರಿದ್ದರು. ಕೊನೆಯ ಎಸೆತದಲ್ಲಿ ಗೆಲುವು ಪಡೆದ ಬಳಿಕ ಅವೇಶ್ ಖಾನ್ ತಮ್ಮ ಹೆಲ್ಮೆಟ್ ಅನ್ನು ನೆಲಕ್ಕೆ ಜೋರಾಗಿ ಎಸೆದು ಸಂಭ್ರಮಿಸಿದ್ದರು. ಅಷ್ಟೇ ಅಲ್ಲದೆ, ಲಕ್ನೋ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ತಮ್ಮ ಕೈ ಸನ್ನೆಯ ಮೂಲಕ ಆರ್‌ಸಿಬಿ ಅಭಿಮಾನಿಗಳಿಗೆ ಸೈಲೆನ್ಸ್ ಎಂದು ಹೇಳಿದ್ದರು. ಈ ಎಲ್ಲಾ ಘಟನೆಗಳನ್ನು ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿ ಆಟಗಾರರು ಗಮನಿಸಿದ್ದರು ಮತ್ತು ಲಕ್ನೋ ಆಟಗಾರರ ಈ ವರ್ತನೆ ಬಗ್ಗೆ ಅಸಮಾಧಾನಗೊಂಡಿದ್ದರು. ಸೋಮವಾರ ಪಂದ್ಯ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ಕೂಡ ಕೈ ಸನ್ನೆ ಮೂಲಕ ಗಂಭೀರ್‌ಗೆ ತಿರುಗೇಟು ನೀಡಿದರು.

    ಸೋಮವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 9 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್ ಜೈಂಟ್ಸ್ 19.5 ಓವರ್‌ಗಳಲ್ಲಿ 108 ರನ್ ಗಳಿಗೆ ಸರ್ವಪತನ ಕಂಡು ತವರಿನಲ್ಲಿ ಸೋತು ಮುಖಭಂಗ ಅನುಭವಿಸಿತು.

  • IPL 2023: ಸೈಲೆಂಟಾಗಿರ್ಬೇಕ್‌ ಅಷ್ಟೇ – RCB ಫ್ಯಾನ್ಸ್‌ಗೆ ಗಂಭೀರ್‌ ವಾರ್ನಿಂಗ್‌

    IPL 2023: ಸೈಲೆಂಟಾಗಿರ್ಬೇಕ್‌ ಅಷ್ಟೇ – RCB ಫ್ಯಾನ್ಸ್‌ಗೆ ಗಂಭೀರ್‌ ವಾರ್ನಿಂಗ್‌

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (RCB) ವಿರುದ್ಧ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ರೋಚಕ ಜಯ ಸಾಧಿಸಿತು.

    ಈ ಪಂದ್ಯದಲ್ಲಿ 240 ಎಸೆತಗಳಲ್ಲಿ ಬರೋಬ್ಬರಿ 425 ರನ್‌ ಸಿಡಿಯಿತು. ಸಿಕ್ಸರ್‌ ಬೌಂಡರಿಗಳ ಆಟದಲ್ಲಿ ಒಟ್ಟು 27 ಸಿಕ್ಸರ್‌, 29 ಬೌಂಡರಿಗಳು ದಾಖಲಾಯಿತು. ಆರ್‌ಸಿಬಿ ಪರ 15 ಸಿಕ್ಸರ್‌, 12 ಬೌಂಡರಿ ಸಿಡಿದರೆ, ಲಕ್ನೋ ಸೂಪರ್‌ ಜೈಂಟ್ಸ್‌ ಪರ 12 ಸಿಕ್ಸರ್‌, 17 ಬೌಂಡರಿ ಸಿಡಿಯಿತು. ಇದನ್ನೂ ಓದಿ: IPL 2023: ಲಕ್ನೋಗೆ ಸೂಪರ್‌ ಜಯ – KGF ವೀರಾವೇಷದ ಆಟ ವ್ಯರ್ಥ, RCBಗೆ ವಿರೋಚಿತ ಸೋಲು

    ಕೊನೆಯ ಓವರ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ 5 ರನ್‌ಗಳ ಅಗತ್ಯವಿತ್ತು. ಕ್ರೀಸ್‌ನಲ್ಲಿದ್ದ ಜಯದೇವ್‌ ಉನಾದ್ಕಟ್‌ 1 ರನ್‌ ತೆಗೆದುಕೊಂಡರು. 2ನೇ ಎಸೆತದಲ್ಲಿ ಮಾರ್ಕ್‌ವುಡ್‌, ಹರ್ಷಲ್‌ ಪಟೇಲ್‌ ದಾಳಿಗೆ ಕ್ಲೀನ್‌ ಬೌಲ್ಡ್‌ ಆದರು. ಬಳಿಕ ಕ್ರೀಸ್‌ಗೆ ಬಂದ ರವಿ ಬಿಷ್ಣೋಯಿ 3ನೇ ಎಸೆತದಲ್ಲಿ 2 ರನ್‌, 4ನೇ ಎಸೆತದಲ್ಲಿ 1 ರನ್‌ ಕದ್ದರು, ಇನ್ನೆರಡು ಎಸೆತಗಳಿಗೆ 1 ರನ್‌ ಬೇಕಿದ್ದಾಗಲೇ 5ನೇ ಎಸೆತದಲ್ಲಿ ಜಯದೇವ್‌ ಉನಾದ್ಕಟ್‌ ಕ್ಯಾಚ್‌ ನೀಡಿ ವಿಕೆಟ್‌ ಒಪ್ಪಿಸಿದರು. ಇನ್ನೂಂದು 1 ಎಸೆತಕ್ಕೆ 1 ರನ್‌ ಬೇಕಿದ್ದಾಗ ಅವೇಶ್‌ಖಾನ್‌ ಕೊನೆಯ ಎಸೆತ ಎದುರಿಸುವಲ್ಲಿ ವಿಫಲರಾದರು. ಆದರೆ ವಿಕೆಟ್‌ ಕೀಪರ್‌ ದಿನೇಶ್‌ ಕಾರ್ತಿಕ್‌ ನೇರವಾಗಿ ಬಾಲ್‌ ಕ್ಯಾಚ್‌ ಮಾಡದೇ ಕೈಚೆಲ್ಲಿದರು. ಇದೇ ಚಾನ್ಸ್‌ ಬಳಸಿಕೊಂಡ ಲಕ್ನೋ ಆಟಗಾರರು 1 ರನ್‌ ಬೈಸ್‌ ಕದ್ದು ತಂಡವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾದರು.

    ಪಂದ್ಯ ಗೆಲುವು ಸಾಧಿಸಿದ ನಂತರ ಮೈದಾನಕ್ಕೆ ಬಂದ ಗೌತಮ್‌ ಗಂಭೀರ್‌ (Gautam Gambhir) ಆರ್‌ಸಿಬಿ ಆಟಗಾರರಿಗೆ ಶೇಖ್‌ ಹ್ಯಾಂಡ್‌ ಮಾಡುತ್ತಿದ್ದರು. ಲಕ್ನೋ ಗೆಲುವು ಸಾಧಿಸಿದ ನಂತರವೂ ʻಆರ್‌ಸಿಬಿ, ಆರ್‌ಸಿಬಿʼ ಎಂದು ಕೂಗುತ್ತಿದ್ದ ಅಭಿಮಾನಿಗಳ ಕಡೆ ತಿರುಗಿದ ಗಂಭೀರ್‌ ತಮ್ಮ ಬಾಯಿಮೇಲೆ ಬೆರಳಿಟ್ಟು ʻಉಶ್‌, ಸೈಲೆಂಟಾಗಿರಬೇಕುʼ ಎನ್ನುವಂತೆ ರಿಯಾಕ್ಷನ್‌ ಕೊಟ್ಟರು. ಈ ಕುರಿತ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಆರ್‌ಸಿಬಿ ಫ್ಯಾನ್ಸ್‌ಗಳು ಗಂಭೀರ್‌ ವಿರುದ್ಧ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಸಿಕ್ಸರ್‌, ಬೌಂಡರಿಗಳಿಂದಲೇ 50 ರನ್‌ – ಇಬ್ಬರು ವಿಶೇಷ ವ್ಯಕ್ತಿಗಳಿಗೆ ಅರ್ಧಶತಕ ಅರ್ಪಿಸಿದ ಪೂರನ್‌

    ಸೋಮವಾರ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 212 ರನ್‌ ಕಲೆಹಾಕಿತು. 213 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 213 ರನ್‌ ಗಳಿಸಿ ರೋಚಕ ಜಯ ಸಾಧಿಸಿತು.

  • ಗಂಭೀರ್‌ಗೆ ಯಾಕೆ ಧೋನಿ, ಕೊಹ್ಲಿ ಮೇಲೆ ಅಷ್ಟೊಂದು ಸಿಟ್ಟು?

    ಗಂಭೀರ್‌ಗೆ ಯಾಕೆ ಧೋನಿ, ಕೊಹ್ಲಿ ಮೇಲೆ ಅಷ್ಟೊಂದು ಸಿಟ್ಟು?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k