Tag: Gautam Gambhir

  • ಕೊಹ್ಲಿಗೆ ಸೂರ್ಯನಂತೆ ಬ್ಯಾಟಿಂಗ್ ಮಾಡಲು ಹೇಳಿದ್ರೆ ಆಗಲ್ಲ – ಗಂಭೀರ್

    ಕೊಹ್ಲಿಗೆ ಸೂರ್ಯನಂತೆ ಬ್ಯಾಟಿಂಗ್ ಮಾಡಲು ಹೇಳಿದ್ರೆ ಆಗಲ್ಲ – ಗಂಭೀರ್

    ಮುಂಬೈ: 2023ರ ಏಕದಿನ ವಿಶ್ವಕಪ್‌ಗೆ (ODI Worldcup 2023) ಕೆಲವೇ ತಿಂಗಳು ಬಾಕಿ ಇದ್ದು, ಈಗಾಗಲೇ 20 ಆಟಗಾರರನ್ನ ಬಿಸಿಸಿಐ (BCCI) ಆಯ್ಕೆ ಮಾಡಿರುವುದಾಗಿ ಮೂಲಗಳು ತಿಳಿಸಿವೆ. ಈ ಆಟಗಾರರ ಕುರಿತು ತಜ್ಞರು ಚರ್ಚೆ ನಡೆಸಿದ್ದಾರೆ. ಈ ವೇಳೆ ಸಂಸದರೂ ಆಗಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಕೆಲವು ಅಂಶಗಳನ್ನ ಪ್ರಸ್ತಾಪಿಸಿದ್ದಾರೆ.

    ಒಬ್ಬ ಆಟಗಾರನಂತೆ ಮತ್ತೊಬ್ಬ ಆಟಗಾರ ಆಡಲು ಸಾಧ್ಯವಿಲ್ಲ. ಆದ್ದರಿಂದ ಉತ್ತಮ ಆಟಗಾರರನ್ನು ಆಯ್ಕೆ ಮಾಡುವುದು ಸೂಕ್ತ ಎಂದು ಹೇಳುವಾಗ ವಿರಾಟ್ ಕೊಹ್ಲಿ (Virat Kohli) ಮತ್ತು ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನ ಉದಾಹರಣೆ ನೀಡಿದ್ದಾರೆ. ಇದನ್ನೂ ಓದಿ: ಪಂತ್ ಮುಂಬೈಗೆ ಏರ್‌ಲಿಫ್ಟ್‌

    ಈಗ ನಾನು ಯುಸೂಫ್ (ಪಠಾಣ್) ಶೈಲಿಯಲ್ಲಿ ಆಡಲು ಸಾಧ್ಯವಿಲ್ಲ. ಹಾಗೆಯೇ ಅವರೂ ನನ್ನ ಶೈಲಿಯಲ್ಲಿ ಆಡಲು ಸಾಧ್ಯವಿಲ್ಲ. ಯಾರಾದ್ರೂ ಯುಸೂಫ್ ಶೈಲಿಯನ್ನ ಅನುಸರಿಸಲು ಹೇಳಿದ್ರೆ ನನಗೆ ಅದನ್ನ ಮಾಡಲು ಸಾಧ್ಯವಾಗಲ್ಲ. ಹಾಗೆಯೇ ವಿರಾಟ್ ಕೊಹ್ಲಿಗೆ ಸೂರ್ಯಕುಮಾರ್ ಯಾದವ್ ಅವರಂತೆ ಬ್ಯಾಟಿಂಗ್ ಮಾಡಲು ಹೇಳಿದ್ರೆ ಸಾಧ್ಯವಾಗೋದಿಲ್ಲ. ವಿರಾಟ್ ರೀತಿ ಸೂರ್ಯನಿಗೆ ಹೇಳಿದ್ರೂ ಅವರಿಂದ ಆಗೋದಿಲ್ಲ. ಆದ್ದರಿಂದ ಆಟಗಾರರನ್ನ ಗುರುತಿಸೋದು ಬಹಳ ಮುಖ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವೈಡ್ ಕೊಡದ ಅಂಪೈರ್‌ಗೆ ನಿಂದಿಸಿದ ದೀಪಕ್ ಹೂಡಾ

    ವಿರಾಟ್, ರೋಹಿತ್ ಪಾತ್ರ ಮುಖ್ಯ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ (Rohit Sharma) ಪ್ರಮುಖ ಆಟಗಾರರು. ಅವರಂತಹ ಅನುಭವಿ ಆಟಗಾರರು ಸ್ಪಿನ್ನರ್‌ಗಳನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. 2023ರ ಏಕದಿನ ವಿಶ್ವಕಪ್‌ನಲ್ಲಿ ಅವರು ದೊಡ್ಡ ಪಾತ್ರ ನಿರ್ವಹಿಸಲಿದ್ದಾರೆ. ಆದ್ರೆ ಕೆಲವರು ಮತ್ತೊಬ್ಬರ ಶೈಲಿಗೆ ಹೊಂದಿಕೊಳ್ಳುವುದಿಲ್ಲ. ನಿರ್ದಿಷ್ಟ ಶೈಲಿಯಲ್ಲಿ ಆಡುವಂತೆ ಆಟಗಾರರನ್ನು ಏಕೆ ದೂಡಬೇಕು? ಆದ್ದರಿಂದ ನಿರ್ದಿಷ್ಟ ಶೈಲಿ ಆಡಬೇಕು ಎಂದು ಯೋಚಿಸುವುದಕ್ಕಿಂತ, ಒಂದೇ ಮನಸ್ಥಿತಿಯಲ್ಲಿ ಆಟವಾಡುವವರನ್ನು ಆಯ್ಕೆ ಮಾಡುವುದು ಉತ್ತಮ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲಕಿಯ ಮೇಲೆ ಆ್ಯಸಿಡ್ ಎರಚಿದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ: ಗೌತಮ್ ಗಂಭೀರ್

    ಬಾಲಕಿಯ ಮೇಲೆ ಆ್ಯಸಿಡ್ ಎರಚಿದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ: ಗೌತಮ್ ಗಂಭೀರ್

    ನವದೆಹಲಿ: ಶಾಲೆಗೆ ಹೋಗುತ್ತಿದ್ದ 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿದ (Acid Attack) ವ್ಯಕ್ತಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಬಿಜೆಪಿ ಸಂಸದ ಗೌತಮ್ ಗಂಭೀರ್ (Gautam Gambhir) ಒತ್ತಾಯಿಸಿದರು.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆ್ಯಸಿಡ್ ಎರಚುವಂತಹ ಪ್ರಕರಣಗಳಲ್ಲಿ ಪಾಲ್ಗೊಳ್ಳುವವರಲ್ಲಿ ಭಯವನ್ನು ಹುಟ್ಟು ಹಾಕುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ಅವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ತಿಳಿಸಿದರು.

    ಬುಧವಾರ ಪಶ್ಚಿಮ ದೆಹಲಿಯಲ್ಲಿ ಇಬ್ಬರು ಬೈಕ್‍ನಲ್ಲಿ ಬಂದ ಮುಸುಕುಧಾರಿಗಳಿಂದ ಬಾಲಕಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಘಟನೆ ನಡೆದು ಗಂಟೆಗಳೊಳಗೆ, ಆಕೆಯ ನೆರೆ ಮನೆಯಾತ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಆ್ಯಸಿಡ್ ತರಕಾರಿಯಂತೆ ಮಾರಾಟವಾಗುತ್ತಿದೆ: ಡಿಸಿಡಬ್ಲ್ಯು ಮುಖ್ಯಸ್ಥೆ ಕಿಡಿ

    ಬಾಲಕಿಗೆ ಮುಖದ ಮೇಲೆ ಸುಟ್ಟ ಗಾಯಗಳಾಗಿದ್ದು, ಆಕೆ ಸಫ್ದರ್‍ಜಂಗ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    Live Tv
    [brid partner=56869869 player=32851 video=960834 autoplay=true]

  • ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದ ಗಂಭೀರ್‌ಗೆ ಕೋರ್ಟ್‍ನಿಂದ ಸಮನ್ಸ್

    ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದ ಗಂಭೀರ್‌ಗೆ ಕೋರ್ಟ್‍ನಿಂದ ಸಮನ್ಸ್

    ನವದೆಹಲಿ: ಕರ್ಕರ್ಡೂಮಾ ನ್ಯಾಯಾಲಯದ (Karkardooma court) ಬಳಿಯ ಪ್ರಿಯಾ ಎನ್‍ಕ್ಲೇವ್‍ನಲ್ಲಿ (Priya Enclave) ಡಂಪಿಂಗ್ ಯಾರ್ಡ್‍ಗಾಗಿ ಎಂಸಿಡಿ ನಿಗದಿಪಡಿಸಿದ್ದ ಭೂಮಿಯಲ್ಲಿ ಅನಧಿಕೃತವಾಗಿ ಗ್ರಂಥಾಲಯವನ್ನು ನಿರ್ಮಿಸಿದ ಆರೋಪದಡಿ ಬಿಜೆಪಿ ಸಂಸದ ಗೌತಮ್ ಗಂಭೀರ್‌ಗೆ (Gautam Gambhir)  ದೆಹಲಿ ನ್ಯಾಯಾಲಯ ( Delhi court) ಸಮನ್ಸ್ ಜಾರಿ ಮಾಡಿದೆ.

    court order law

    ಕರ್ಕರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಿಮಾಂಶು ರಮಣ್ ಸಿಂಗ್ ಅವರು ಸೋಮವಾರ ಗೌತಮ್ ಗಂಭೀರ್ ಅವರಿಗೆ 2022ರ ಡಿಸೆಂಬರ್ 13ಕ್ಕೆ ಈ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲಿಯೇ ಹೈದರಾಬಾದ್‍ಗೆ ಲಗ್ಗೆ ಇಡಲಿದೆ ಎಲೆಕ್ಟ್ರಿಕಲ್ ಡಬಲ್ ಡೆಕ್ಕರ್ ಬಸ್

    ಗಂಭೀರ್ ಮತ್ತು ಎಂಸಿಡಿ ವಿರುದ್ಧ ಅರ್ಜಿದಾರರಾದ ರವಿ ಭಾರ್ಗವ ಮತ್ತು ರೋಹಿತ್ ಕುಮಾರ್ ಮಹಿಯಾ ಅವರು ಸಿವಿಲ್ ಮೊಕದ್ದಮೆ ಹೂಡಿದ್ದು, ಗಂಭೀರ್ ಅಕ್ರಮವಾಗಿ ನಿರ್ಮಿಸಿರುವ ಗ್ರಂಥಾಲಯದ ಕಟ್ಟಡವನ್ನು ಬಳಸದಂತೆ ತಡೆಯಲು ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಸ್ತುತ ಮೊಕದ್ದಮೆಯನ್ನು ಸೆಕ್ಷನ್ 91 ಸಿಪಿಸಿ ಅಡಿಯಲ್ಲಿ ಪರಿಗಣಿಸಬಹುದು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಆಸ್ತಿ ಕೊಡಲ್ಲ ಎಂದಿದ್ದಕ್ಕೆ ಮಗ, ಸೊಸೆ ಸೇರಿ ತಾಯಿಗೆ ಬೆಂಕಿ ಹಚ್ಚಿದ್ರು

    Live Tv
    [brid partner=56869869 player=32851 video=960834 autoplay=true]

  • ಕೊಹ್ಲಿಯನ್ನು ಆರಂಭಿಕನನ್ನಾಗಿ ಆಡಿಸಿ ತಲೆ ಇಲ್ಲದ ಕೆಲಸ ಮಾಡ್ಬೇಡಿ- ಗಂಭೀರ್ ಗರಂ

    ಕೊಹ್ಲಿಯನ್ನು ಆರಂಭಿಕನನ್ನಾಗಿ ಆಡಿಸಿ ತಲೆ ಇಲ್ಲದ ಕೆಲಸ ಮಾಡ್ಬೇಡಿ- ಗಂಭೀರ್ ಗರಂ

    ಮುಂಬೈ: ಉತ್ತಮ ಲಯ ಕಂಡುಕೊಂಡಿರುವ ವಿರಾಟ್ ಕೊಹ್ಲಿ (Virat Kohli) ಅವರನ್ನ ಆರಂಭಿಕನನ್ನಾಗಿ ಆಡಿಸಿ ತಲೆ ಇಲ್ಲದ ಕೆಲಸ ಮಾಡಬೇಡಿ. ಕೆ.ಎಲ್ ರಾಹುಲ್ (KL Rahul) ಹಾಗೂ ರೋಹಿತ್ ಶರ್ಮಾ (Rohit Sharma) ಅವರ ಜೊತೆ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಲು ಸಾಧ್ಯವಿಲ್ಲ ಎಂದು ಟೀಂ ಇಂಡಿಯಾ (Team India) ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.

    ಇತ್ತೀಚೆಗೆ ನಡೆದ ಏಷ್ಯಾಕಪ್ 2022 (Aisa Cup 2022) ಟೂರ್ನಿಯಲ್ಲಿ ಭರ್ಜರಿ ಶತಕ ಹಾಗೂ ಅರ್ಧ ಶತಕಗಳೊಂದಿಗೆ ಒಟ್ಟು 276 ರನ್ ಸಿಡಿಸಿದ್ದಾರೆ. ಆ ಮೂಲಕ 1,021 ದಿನಗಳ ಬಳಿಕ ಮೊದಲ ಶತಕ ಸಿಡಿಸಿದ್ದಾರೆ. ಮೂರು ವರ್ಷಗಳ ಬಳಿಕ ಅತ್ಯುತ್ತಮ ಲಯ ಕಂಡುಕೊಂಡಿರುವ ಕೊಹ್ಲಿ ವಿಶ್ವಕಪ್‌ನಲ್ಲೂ (T20 WorldCup) ಉತ್ತಮ ಆಟವಾಡುವ ಭರವಸೆ ಮೂಡಿಸಿದ್ದಾರೆ. ಇದನ್ನೂ ಓದಿ: ಈಗ ಗ್ರೌಂಡ್ ಹೊರಗಡೆಯೂ ದಾಖಲೆ ಬರೆದ ಕೊಹ್ಲಿ

    ಈ ನಡುವೆ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಮಾತನಾಡಿರುವ ಗೌತಮ್ ಗಂಭೀರ್ (Gautam Gambhir), ಭಾರತ ಟಿ20 ತಂಡದಲ್ಲಿ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿಯೇ ಬ್ಯಾಟಿಂಗ್ ಮಾಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಆ ಮೂಲಕ ಕೆ.ಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಅವರೇ ಇನ್ನಿಂಗ್ಸ್ ಆರಂಭಿಸಬೇಕೆಂದೂ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ

    ವಿರಾಟ್ ಕೊಹ್ಲಿಯನ್ನು ಆರಂಭಿಕನನ್ನಾಗಿ ಆಡಿಸಿ ತಲೆ ಇಲ್ಲದಿರುವ ಕೆಲಸ ಮಾಡಬೇಡಿ. ರಾಹುಲ್ ಹಾಗೂ ಶರ್ಮಾ ಅವರ ಜೊತೆ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಲು ಸಾಧ್ಯವಿಲ್ಲ. ಈ ಹಿಂದೆಯೂ ಕೂಡ ನಾನು ಈ ವಿಷಯ ಹೇಳಿದ್ದೆ. ಕೊಹ್ಲಿ 3ನೇ ಕ್ರಮಾಂಕದಲ್ಲಿ ಆಡುವುದು ತುಂಬಾ ಆರಾಮದಾಯಕವಾಗಿರುತ್ತದೆ. ಆರಂಭಿಕ ಬ್ಯಾಟ್ಸ್‌ಮನ್‌ಗಳು 10 ಓವರ್‌ಗಳವರೆಗೂ ಬ್ಯಾಟ್ ಮಾಡಿದರೆ, 3ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಆಡಿಸಬೇಕೆಂದು ಬಯಸುತ್ತೇನೆ. ಒಂದು ವೇಳೆ ಆರಂಭಿಕರು ಬೇಗ ವಿಕೆಟ್ ಒಪ್ಪಿಸಿದರೆ, ಆಗ ಮಾತ್ರ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಆಡಬೇಕು ಎಂದು ಗಂಭೀರ್ ಗೇಮ್ ಪ್ಲ್ಯಾನ್‌ನಲ್ಲಿ ಹೇಳಿದ್ದಾರೆ.

    ಇದಕ್ಕೆ ದನಿ ಗೂಡಿಸಿರುವ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್, ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಆಡಬೇಕೆಂದು ನಾನೂ ಬಯಸುತ್ತೇನೆ. ಅವರು ಸ್ಟ್ರೈಕ್ ರೇಟ್ ಅನ್ನು ಕುಶಲತೆಯಿಂದ ನಿರ್ವಹಿಸಬಹುದು, ಅವರ ಓಟ ಕೂಡ ಅಸಾಧಾರಣವಾಗಿದೆ. ಸ್ಪಿನ್ನರ್‌ಗಳ ಪಾಲಿಗೆ ಅವರು ಸವಾಲುದಾಯಕವಾಗಬಹುದು ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ

    ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ

    ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ (Cricket) ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ (Shahid Afridi) ಭಾರತೀಯ ಕ್ರಿಕೆಟ್ ತಂಡದೊಂದಿಗೆ ವಿವಾದಗಳ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಗೌತಮ್ ಗಂಭೀರ್ ಮತ್ತು ಇತರ ಭಾರತೀಯ ಕ್ರಿಕೆಟಿಗರೊಂದಿಗೆ ಅನೇಕ ಬಾರಿ ಮುಖಾಮುಖಿಯಾಗಿದ್ದಾರೆ. ಆದರೆ ಅವರು ಮಾಧ್ಯಮದಲ್ಲಿ ನೀಡಿದ ಹೇಳಿಕೆಯೊಂದು ಭಾರತೀಯ ಕ್ರಿಕೆಟಿಗರಿಗೆ (Team India) ವಿಶ್ವದೆಲ್ಲೆಡೆ ಅಭಿಮಾನಿಗಳಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

    ಏಷ್ಯಾಕಪ್ ಟಿ20 (Aisa Cup T20) ಟೂರ್ನಿಯ ಕುರಿತು ಮಾತನಾಡಿರುವ ಅಫ್ರಿದಿ, ಭಾರತ ಮತ್ತು ಪಾಕಿಸ್ತಾನ (India Pakistan) ನಡುವಿನ ಏಷ್ಯಾ ಕಪ್ 2022ರ ಪಂದ್ಯದ ವೇಳೆ ನನ್ನ ಮಗಳು ಪಾಕಿಸ್ತಾನ ಧ್ವಜಕ್ಕಿಂತ ಭಾರತ ಧ್ವಜವನ್ನೇ ಹಿಡಿದು ಬೀಸುತ್ತಿದ್ದಳು ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪಾಕ್ ಕೈ ಹಿಡಿದ ರಿಜ್ವಾನ್ – ರೋಚಕ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನಕ್ಕೆ ಜಯ

    ಸ್ಟೇಡಿಯಂನಲ್ಲಿ ಕೇವಲ ಪಾಕಿಸ್ತಾನಿ ಅಭಿಮಾನಿಗಳು ಶೇ.10 ರಷ್ಟು ಇದ್ದರೆ, ಶೇ.90 ರಷ್ಟು ಭಾರತದ ಅಭಿಮಾನಿಗಳೇ ತುಂಬಿದ್ದರು. ಭಾರತೀಯ ಅಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಈ ವಿಷಯವನ್ನು ನನ್ನ ಹೆಂಡತಿ ನನಗೆ ಹೇಳಿದಳು ಎಂದು ಹೇಳಿಕೊಂಡಿದ್ದಾರೆ.

    ಪಾಕಿಸ್ತಾನದ ಧ್ವಜಗಳು ಅಲ್ಲಿ ಲಭ್ಯವಿರಲಿಲ್ಲ. ಆದ್ದರಿಂದ ನನ್ನ ಕಿರಿಯ ಮಗಳು ಭಾರತದ ಧ್ವಜವನ್ನು ಹಿಡಿದು ಬೀಸುತ್ತಿದ್ದಳು. ನಾನು ವೀಡಿಯೊವನ್ನು ಸ್ವೀಕರಿಸಿದ್ದೇನೆ. ಆದರೆ ಅದನ್ನು ಜಾಲತಾಣದಲ್ಲಿ ಹಂಚಿಕೊಳ್ಳಲು ಆಗಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರನ ಶವವನ್ನು ಹೊರತೆಗೆದು ಅಂತ್ಯಸಂಸ್ಕಾರಕ್ಕೆ ಅವಕಾಶ ಕೋರಿದ್ದ ಅರ್ಜಿ ವಜಾ

    ಮೊದಲ ಪಂದ್ಯದಲ್ಲಿ 147 ರನ್‌ಗಳಿಸಿ ಭಾರತದ ಎದುರು ಸೋತ ಪಾಕಿಸ್ತಾನ, ಸೂಪರ್ ಫೋರ್ ಲೀಗ್‌ನಲ್ಲಿ 182 ರನ್‌ಗಳಿಸಿ ಭಾರತದ ವಿರುದ್ಧ ಗೆಲುವು ದಾಖಲಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಅರ್ಶ್‌ದೀಪ್‌ ಸಿಂಗ್ ಬೆಂಬಲಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

    ಅರ್ಶ್‌ದೀಪ್‌ ಸಿಂಗ್ ಬೆಂಬಲಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

    ದುಬೈ: ಟೀಂ ಇಂಡಿಯಾ ಆಟಗಾರ ಅರ್ಶ್‌ದೀಪ್‌ ಸಿಂಗ್ ಅವರನ್ನು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಬೆಂಬಲಿಸಿದ್ದಾರೆ.

    ಏಷ್ಯಾಕಪ್‌ನ ಸೂಪರ್ ಫೋರ್ ಲೀಗ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಭಾನುವಾರ ಹಣಾಹಣಿ ನಡೆಯಿತು. ಈ ಪಂದ್ಯದ 18ನೇ ಓವರ್‌ನಲ್ಲಿ ಎಡಗೈ ವೇಗಿ ಬೌಲರ್ ಅರ್ಶ್‌ದೀಪ್‌ ಸಿಂಗ್ ಒತ್ತಡದ ಸಮಯದಲ್ಲಿ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿದರು.

    ಇದರಿಂದ ಭಾರೀ ಟಿಕೆಗಳು ವ್ಯಕ್ತವಾಯಿತು. ಅಲ್ಲದೇ ಅರ್ಶ್‌ದೀಪ್‌ ಅವರ ಪುಟದಲ್ಲಿ ಖಲಿಸ್ತಾನ ಆಟಗಾರ ಎಂದು ಎಡಿಟ್ ಮಾಡಲಾಗಿತ್ತು. ಇದರಿಂದ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಚರ್ಚೆ ಆಗುತ್ತಿದ್ದಂತೆ ಮಾಹಿತಿ ಮತ್ತು ತಂತ್ರಜ್ಞಾನ ಖಾತೆಯ ಸಚಿವಾಲಯ ವಿಕಿಪೀಡಿಯಾದ ಭಾರತದ ಪ್ರತಿನಿಧಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನೂ ಓದಿ: ಸುಷ್ಮಿತಾ ಸೇನ್ ಜೊತೆ ಬ್ರೇಕ್ ಅಪ್ ಘೋಷಿಸಿಕೊಂಡ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ

    ಅನೇಕ ಕಡೆ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಭಾರತೀಯ ಹಿರಿಯ ಹಾಗೂ ಮಾಜಿ ಕ್ರಿಕೆಟಿಗರು ಅರ್ಶ್‌ದೀಪ್‌ ಸಿಂಗ್ ಬೆಂಬಲಕ್ಕೆ ನಿಂತರು. ಈ ಬೆನ್ನಲ್ಲೇ ಇಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಸಹ ಅರ್ಶ್‌ದೀಪ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅವರನ್ನು ಅವಮಾನಿಸದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಿಷಭ್ ಪಂತ್‌ನ ಆ ಆಟ ಅಗತ್ಯವಿರಲಿಲ್ಲ – ಗೌತಮ್ ಗಂಭೀರ್ ಅಸಮಾಧಾನ

    ಈ ಕುರಿತು ಟ್ವೀಟ್ ಮಾಡಿರುವ ಮೊಹಮ್ಮದ್ ಹಫೀಜ್, ಎಲ್ಲಾ ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳಿಗೆ ನನ್ನ ವಿನಂತಿ ಏನೆಂದರೆ ನಾವು ಕ್ರೀಡೆಯಲ್ಲಿ ಮನುಷ್ಯರಾಗಿ ಸಹಜ ತಪ್ಪುಗಳನ್ನು ಮಾಡುತ್ತೇವೆ. ಆದರೆ ದಯವಿಟ್ಟು ಈ ತಪ್ಪುಗಳಿಂದ ಯಾರನ್ನೂ ಅವಮಾನಿಸಬೇಡಿ ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನೂಪುರ್ ಶರ್ಮಾಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ

    ನೂಪುರ್ ಶರ್ಮಾಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ

    ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವಾಗಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಗೆ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ಸಾಥ್ ನೀಡಿದ್ದಾರೆ.

    ಈ ಕುರಿತು #LetsTolerateintolerance ಹ್ಯಾಶ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿರುವ ಗಂಭೀರ್, ಕ್ಷಮೆಯಾಚಿಸಿದ ಮಹಿಳೆಯ ವಿರುದ್ಧ ದೇಶಾದ್ಯಂತ ದ್ವೇಷ ಮತ್ತು ಕೊಲೆ ಬೆದರಿಕೆ ಮುಂದುವರಿದಿದ್ದರೂ ಜಾತ್ಯಾತೀತ ಉದಾರವಾದಿಗಳೆಂದು ಕರೆಯಲ್ಪಡುವವರು ಮೌನವಾಗಿರುತ್ತಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಪಕ್ಷಿಗಳಿಗೆ ಆಹಾರವಿಡುವ ಟ್ರೇ ಹೊಂದಿದ್ದಕ್ಕೆ 3 ವಾರದಲ್ಲಿ 3 ಬಾರಿ ವ್ಯಕ್ತಿ ಅರೆಸ್ಟ್

    ಅಲ್ಲದೆ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಸತ್ಯ ಹೇಳುವುದು ಬಂಡಾಯವಾದರೆ, ನಾನು ಕೂಡಾ ಬಂಡಾಯವೇ ಎಂದು ಟ್ವೀಟ್ ಮಾಡುವ ಮೂಲಕ ನೂಪುರ್ ಶರ್ಮಾ ಅವರಿಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ – 11 ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಸುಮಾರು 15 ಇಸ್ಲಾಮಿಕ್ ರಾಷ್ಟ್ರಗಳ ಪ್ರತಿಭಟನೆ ನಡುವೆ ಬಿಜೆಪಿ ಕಳೆದ ವಾರ ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಿತ್ತು. ಜೊತೆಗೆ ದೆಹಲಿ ಘಟಕದ ಮಾಧ್ಯಮ ಮುಖ್ಯಸ್ಥ ನವೀನ್ ಜಿಂದಾಲ್ ಅವರನ್ನೂ ಪಕ್ಷದಿಂದ ಉಚ್ಛಾಟನೆ ಮಾಡಿತು.

  • ಸೋಲಿನ ಬಳಿಕ ನಾಯಕ ರಾಹುಲ್‌ನನ್ನು ದಿಟ್ಟಿಸಿದ ಗಂಭೀರ್ – ನೆಟ್ಟಿಗರಿಂದ ಟ್ರೋಲ್

    ಸೋಲಿನ ಬಳಿಕ ನಾಯಕ ರಾಹುಲ್‌ನನ್ನು ದಿಟ್ಟಿಸಿದ ಗಂಭೀರ್ – ನೆಟ್ಟಿಗರಿಂದ ಟ್ರೋಲ್

    ಮುಂಬೈ: ಬುಧವಾರ ನಡೆದ ಆರ್‌ಸಿಬಿ ತಂಡದ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್(ಎಲ್‌ಎಸ್‌ಜಿ) ತಂಡ ಸೋಲುಂಡಿದೆ. ಲಕ್ನೋ ತಂಡ ಹಲವು ಕ್ಯಾಚ್‌ಗಳನ್ನು ಕೈ ಬಿಟ್ಟಿದ್ದರಿಂದಲೇ ಸೋಲಿಗೆ ಕಾರಣವಾಯಿತು ಎಂದು ತಂಡದ ನಾಯಕ ಕೆಎಲ್ ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

    ಲಕ್ನೋ ತಂಡ ಸೋಲಿನ ಬೇಸರದಲ್ಲಿದ್ದರೂ ನೆಟ್ಟಿಗರು ಮಾತ್ರ ಟ್ರೋಲ್ ಮಾಡುವುದನ್ನು ಮುಂದುವರಿಸಿದ್ದಾರೆ. ತಂಡದ ಮಾರ್ಗದರ್ಶಕ ಗೌತಮ್ ಗಂಭೀರ್ ಸೋಲಿನ ಬಳಿಕ ಹತಾಶ ಭಾವದಲ್ಲಿ ನಾಯಕ ರಾಹುಲ್ ಕಡೆ ನೋಡುವ ಫೋಟೋವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ನಾವು ಸೋಲಲು ಇದೇ ಕಾರಣ – ಬೇಸರ ವ್ಯಕ್ತಪಡಿಸಿದ ಕೆ.ಎಲ್ ರಾಹುಲ್

    ಕ್ರಿಕೆಟ್ ಪ್ರಿಯರು ಗಂಭೀರ್ ರಾಹುಲ್ ಕಡೆ ದಿಟ್ಟಿಸಿ ನೋಡುವ ಫೋಟೋವನ್ನು ಬಳಸಿ ಮೀಮ್‌ಗಳನ್ನು ರಚಿಸುತ್ತಿದ್ದಾರೆ ಹಾಗೂ ತಮಾಷೆಯ ಪ್ರತಿಕ್ರಿಯೆಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.

    ಗೌತಮ್ ಗಂಭೀರ್ ಒಬ್ಬ ಭಾವನಾತ್ಮಕ ನಾಯಕ ಎಂದೇ ಹೆಸರುವಾಸಿ. ಅವರು ಮೈದಾನದ ಒಳಗೆ, ಹೊರಗೆ ಮಾತ್ರವಲ್ಲದೇ ಡ್ರೆಸ್ಸಿಂಗ್ ರೂಮ್‌ನಲ್ಲಿ ಭಾವನಾತ್ಮಕ ಹೇಳಿಕೆಗಳನ್ನು ಆಗಾಗ ನೀಡುತ್ತಲೇ ಇರುತ್ತಾರೆ. ಇದನ್ನೂ ಓದಿ: ಪಾಟಿದರ್ ಸ್ಫೋಟಕ ಶತಕ, ಡಿ.ಕೆ ಅಬ್ಬರ – ಅಹಮದಾಬಾದ್‌ಗೆ ಹಾರಿದ ಬೆಂಗ್ಳೂರು

    ಬುಧವಾರ ಲಕ್ನೋ ವಿರುದ್ಧ ಆರ್‌ಸಿಬಿ 14 ರನ್‌ಗಳ ಜಯ ಸಾಧಿಸಿದೆ. ಆರ್‌ಸಿಬಿಯೊಂದಿಗಿನ ಪಂದ್ಯದಲ್ಲಿ ಸುಲಭವಾಗಿ ಲಕ್ನೋಗೆ ಗೆಲ್ಲಲು ಅವಕಾಶವಿದ್ದರೂ ಹಲವು ಕ್ಯಾಚ್‌ಗಳನ್ನು ಬಿಟ್ಟು, ಸೋಲನ್ನೊಪ್ಪಿಕೊಂಡಿದೆ. ಇದೀಗ ಆರ್‌ಸಿಬಿ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಕಾಲಿಟ್ಟಿದ್ದು, ಲಕ್ನೋ ಸೋಲಿನೊಂದಿಗೆ 4ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

  • ಧೋನಿಯೇ ಮುಖ್ಯವಾದ್ರೆ ಉಳಿದ ಆಟಗಾರರು ಲಸ್ಸಿ ಕುಡಿಯಲು ಹೋಗಿದ್ರಾ: ಭಜ್ಜಿ ಪ್ರಶ್ನೆ

    ಧೋನಿಯೇ ಮುಖ್ಯವಾದ್ರೆ ಉಳಿದ ಆಟಗಾರರು ಲಸ್ಸಿ ಕುಡಿಯಲು ಹೋಗಿದ್ರಾ: ಭಜ್ಜಿ ಪ್ರಶ್ನೆ

    ಮುಂಬೈ: 2011ರ ವಿಶ್ವಕಪ್ ಅನ್ನು ಭಾರತ ಗೆಲ್ಲಲು ಎಂ ಎಸ್ ಧೋನಿಯೇ ಮುಖ್ಯ ಕಾರಣ ಎಂದು ಭಾವಿಸುವ ವ್ಯಕ್ತಿಗಳಿಗೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ತಿರುಗೇಟು ನೀಡಿದ್ದಾರೆ.

    2011 ರಲ್ಲಿ ತವರಿನಲ್ಲಿ ನಡೆದ ವಿಶ್ವಕಪ್‍ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹರ್ಭಜನ್, ಭಾರತದ ಗಮನಾರ್ಹ ವಿಶ್ವಕಪ್ ಗೆಲುವಿಗೆ ಧೋನಿಗೆ ಮಾತ್ರ ಮನ್ನಣೆ ನೀಡುವುದು ಅಸಮರ್ಥನೀಯ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: 4 ತಿಂಗಳ ಕಾಲ ಕ್ರಿಕೆಟ್‍ನಿಂದ ಹೊರಗುಳಿಯಬೇಕಾಗಿದೆ ದೀಪಕ್ ಚಹರ್ – ಟಿ20 ವಿಶ್ವಕಪ್‍ಗೂ ಡೌಟ್

    ದೆಹಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2022 ಪಂದ್ಯದ ಆರಂಭದ ಮೊದಲು ಮಾತನಾಡಿದ ಅವರು, ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದಾಗ ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದಿತು ಎಂದು ಶೀರ್ಷಿಕೆ ಬರುತ್ತದೆ. ಆದರೆ 2011 ರ ವಿಶ್ವಕಪ್ ಜಯಿಸಿದ್ದಾಗ ಎಲ್ಲರೂ ಮಹೇಂದ್ರ ಸಿಂಗ್ ಧೋನಿ ವಿಶ್ವಕಪ್ ಗೆಲ್ಲಿಸಿದ್ದಾರೆ ಎಂದು ಹೊಗಳುತ್ತಾರೆ. ಹಾಗಾದರೆ ಉಳಿದ 10 ಆಟಗಾರರು ಅಲ್ಲಿಗೆ ಲಸ್ಸಿ ಕುಡಿಯಲು ಹೋಗಿದ್ರಾ? ಹಾಗಾದರೆ ಮಾಜಿ ಬ್ಯಾಟರ್ ಗೌತಮ್ ಗಂಭೀರ್ ಏನು ಮಾಡಿದರು? ಕ್ರಿಕೆಟ್ ಒಂದು ಟೀಮ್ ಗೇಮ್. ಒಂದು ತಂಡದ 7-8 ಆಟಗಾರರು ಕೂಡಿ ಆಡಿದಾಗ ಮಾತ್ರ ಗೆಲ್ಲಲು ಸಾಧ್ಯ ಎಂದಿದ್ದಾರೆ. ಇದನ್ನೂ ಓದಿ: ಜ್ಯೂನಿಯರ್ ಎಬಿಡಿ ಅಬ್ಬರದಾಟ ವ್ಯರ್ಥ – ಮುಂಬೈ ವಿರುದ್ಧ ಪಂಜಾಬ್‍ಗೆ 12 ರನ್‌ಗಳ ಜಯ

    2011ರಲ್ಲಿ ಭಾರತ ತಂಡವು ಶ್ರೀಲಂಕಾ ತಂಡವನ್ನು ಬಗ್ಗು ಬಡಿದು ವಿಶ್ವಕಪ್ ಗೆದ್ದಿತ್ತು. ಮೊದಲ ಬ್ಯಾಟಿಂಗ್ ಮಾಡಿದ ಶ್ರೀಲಂಕಾ 6 ವಿಕೆಟ್ ನಷ್ಟಕ್ಕೆ 274 ರನ್ ಹೊಡೆದರೆ ಭಾರತ 48.2 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 277 ರನ್ ಹೊಡೆಯುವ ಮೂಲಕ 6 ವಿಕೆಟ್‍ಗಳ ಜಯ ಸಾಧಿಸಿತ್ತು.

  • ಕೇಜ್ರಿವಾಲ್ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ ಬಲಿಪಶು: ಗಂಭೀರ್

    ಕೇಜ್ರಿವಾಲ್ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ ಬಲಿಪಶು: ಗಂಭೀರ್

    ನವದೆಹಲಿ: ಕೇಜ್ರಿವಾಲ್ ಕಾಶ್ಮೀರಿ ಹಿಂದೂಗಳನ್ನು ಅವಮಾನಿಸಿ ಸಿಕ್ಕಿ ಬಿದ್ದಿದ್ದಾರೆ. ಈಗ ಅದರಿಂದ ಹೊರಬರಲು ಅವರಿಗೆ ಇರುವ ಒಂದೇ ಒಂದು ಮಾರ್ಗವೆಂದರೆ ಅದು ಬಲಿಪಶು ಎಂದು ತೋರಿಸಿಕೊಳ್ಳುವುದಾಗಿದೆ ಎಂದು ಬಿಜೆಪಿ ಸಂಸದ ಗೌತಮ್ ಗಂಭೀರ್ ಲೇವಡಿ ಮಾಡಿದರು.

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಬಿಜೆಪಿ ಕಾರ್ಯಕರ್ತರು ಧ್ವಂಸ ಮಾಡಿದ ನಂತರ ಕೇಜ್ರಿವಾಲ್ ಅವರ ಜೀವಕ್ಕೆ ಬೆದರಿಕೆ ಇದೆ ಎಂದು ಆಮ್ ಆದ್ಮಿ ಪಕ್ಷ ಹೇಳಿಕೊಂಡಿತ್ತು. ಇದಕ್ಕೆ ಗಂಭೀರ್ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

    ಕೇಜ್ರಿವಾಲ್ ಅವರನ್ನು ಲೇವಡಿ ಮಾಡಿದ ಗೌತಮ್ ಗಂಭೀರ್, ಕೇಜ್ರಿವಾಲ್ ಪರವಾಗಿ ಟ್ವೀಟ್ ಮಾಡಿದ್ದಾರೆ. ಟ್ವೀಟ್‍ನಲ್ಲಿ ಹಲೋ ದೆಹಲಿ, ಕಾಶ್ಮೀರಿ ಹಿಂದೂಗಳ ಬಗ್ಗೆ ಅವಹೇಳನಕಾರಿ ಕಾಮೆಂಟ್‍ಗಳನ್ನು ಮಾಡಿದ ನಂತರ ನಾನು ಸಿಕ್ಕಿಬಿದ್ದಿದ್ದೇನೆ. ಹಲವಾರು ಸಂದರ್ಶನಗಳನ್ನು ನೀಡಿದ ನಂತರವೂ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ಈಗ ನನಗೆ ಒಂದೇ ಒಂದು ದಾರಿ ಇರುವುದು. ಅದೇನೆಂದರೆ ಬಲಿಪಶುವಾಗಿದ್ದೇನೆಂದು ತೋರಿಸಿಕೊಳ್ಳುವುದಾಗಿದೆ. ಬಿಜೆಪಿ ನನ್ನನ್ನು ಕೊಲ್ಲಲು ಬಯಸುತ್ತಿದೆ. ದಯವಿಟ್ಟು ಇದರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿ. ನಿಮ್ಮ ಪ್ರಚಾರ ಸಚಿವರು ಎಂದು ವ್ಯಂಗ್ಯವಾಡಿದ್ದಾರೆ.

    ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿದೆ. ದೆಹಲಿ ಸಿಎಂ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ. ಈ ಮೂಲಕ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನಿಸಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ:  ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನ – ಎಎಪಿ ಆರೋಪ

    ಇತ್ತೀಚೆಗೆ ಬಿಡುಗಡೆಯಾಗಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕುರಿತು ಕೇಜ್ರಿವಾಲ್ ವಿರೋಧವಾಗಿ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ತಡೆಗೋಡೆ ಹಾಗೂ ಸಿಸಿಟಿವಿ ಕ್ಯಾಮೆರಾಗಳು ಧ್ವಂಸಗೊಂಡಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: 10ನೇ ದಿನದಲ್ಲಿ 9ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ