Tag: Gautam Gambhir

  • ಭಗತ್ ಸಿಂಗ್ ಹೆಸರಿನಲ್ಲಿ ಸಾರ್ವಜನಿಕ ಗ್ರಂಥಾಲಯ ತೆರೆದ ಗೌತಮ್ ಗಂಭೀರ್

    ಭಗತ್ ಸಿಂಗ್ ಹೆಸರಿನಲ್ಲಿ ಸಾರ್ವಜನಿಕ ಗ್ರಂಥಾಲಯ ತೆರೆದ ಗೌತಮ್ ಗಂಭೀರ್

    ನವದೆಹಲಿ: ಪೂರ್ವ ದೆಹಲಿಯ ಬಿಜೆಪಿ ಸಂಸದ ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ಯುವಪೀಳಿಗೆಗಾಗಿ ಭಗತ್ ಸಿಂಗ್ ಹೆಸರಿನಲ್ಲಿ ಸಾರ್ವಜನಿಕ ಗ್ರಂಥಾಲಯ ತೆರೆದಿದ್ದಾರೆ.

    ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಯುವಶಕ್ತಿಯ ಜ್ಞಾನಾರ್ಜನೆಗಾಗಿ ಇದೀಗ ಒಂದು ಸಾರ್ವಜನಿಕ ಗ್ರಂಥಾಲಯ ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಆನಂದ್ ವಿಹಾರ್, ಶಹದಾರ, ತ್ರಿಲೋಕಪುರಿ ಮತ್ತು ಮಯೂರ್ ವಿಹಾರ್‌ನಲ್ಲಿ ಕೂಡ ತಲಾ ಒಂದೊಂದು ಗ್ರಂಥಾಲಯ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು ಕ್ಷೇತ್ರದಲ್ಲಿ 5 ಸಾರ್ವಜನಿಕ ಗ್ರಂಥಾಲಯ ಪ್ರಾರಂಭಕ್ಕೆ ನಿರ್ಧರಿಸಲಾಗಿದೆ ಎಂದು ಸಂಸದರ ಕಚೇರಿಯಿಂದ ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಬಾಲಿವುಡ್ ನಲ್ಲಿ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ

    ಸಾರ್ವಜನಿಕ ಗ್ರಂಥಾಲಯ ದಿನದ 12 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದ್ದು, ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ತೆರೆದಿರಲಿದೆ. ಒಟ್ಟು 50 ಜನ ಕೂತು ಓದುವಂತಹ ಸೌಲಭ್ಯ ಕಲ್ಪಿಸಲಾಗಹಿದೆ. ಜೊತೆಗೆ ಉಚಿತ ವೈಫೈ ಮತ್ತು ಕಂಪ್ಯೂಟರ್‌ಗಳನ್ನು ಕೂಡ ಗ್ರಂಥಾಲಯದಲ್ಲಿ ಬಳಸಬಹುದಾಗಿದೆ.

    ಈ ಬಗ್ಗೆ ಟ್ವಿಟ್ಟರ್ ಮೂಲಕ ಸಂತಸ ವ್ಯಕ್ತ ಪಡಿಸಿರುವ ಗಂಭೀರ್, ಭಗತ್ ಸಿಂಗ್ ಕೇವಲ ಹೆಸರಲ್ಲ. ಅದೊಂದು ಶಕ್ತಿ. ಅದೊಂದು ಭಾವನೆ. ಇಂದು ನನ್ನ ಕ್ಷೇತ್ರದಲ್ಲಿ ಮೊದಲ ಸಾರ್ವಜನಿಕ ಗ್ರಂಥಾಲಯವನ್ನು ತೆರೆಯುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: IPL 2022: ಪ್ರೇಕ್ಷಕರಿಗೆ ಸ್ಟೇಡಿಯಂ ಪ್ರವೇಶಿಸಲು ಅನುಮತಿ – ಷರತ್ತುಗಳು ಅನ್ವಯ

    ಇದೀಗ ಗೌತಮ್ ಗಂಭೀರ್ 15ನೇ ಆವೃತ್ತಿ ಐಪಿಎಲ್‍ನ ನೂತನ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಾರ್ಚ್ 26 ರಿಂದ ಆರಂಭವಾಗಲಿರುವ ಐಪಿಎಲ್‍ನಲ್ಲಿ ಮೆಂಟರ್ ಆಗಿ ಗೌಂಭೀರ್ ಲಕ್ನೋ ತಂಡದ ಆಟಗಾರರಿಗೆ ನೆರವಾಗಲಿದ್ದಾರೆ.

  • ನಾಯಕತ್ವ ಯಾರೊಬ್ಬರ ಜನ್ಮಸಿದ್ಧ ಹಕ್ಕಲ್ಲ: ಗೌತಮ್ ಗಂಭೀರ್

    ನಾಯಕತ್ವ ಯಾರೊಬ್ಬರ ಜನ್ಮಸಿದ್ಧ ಹಕ್ಕಲ್ಲ: ಗೌತಮ್ ಗಂಭೀರ್

    ನವದೆಹಲಿ: ವಿರಾಟ್ ಕೊಹ್ಲಿ ಅವರು ಭಾರತ ಕ್ರಿಕೆಟ್ ತಂಡದ ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಅನೇಕ ಕ್ರಿಕೆಟಿಗರು ಹಾಗೂ ಮಾಜಿ ಆಟಗಾರರು ನಾನಾ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಅಂತೆಯೇ ಗೌತಮ್ ಗಂಭೀರ್ ಅವರು ಪ್ರತಿಕ್ರಿಯಿಸಿ, ನಾಯಕತ್ವ ಯಾರೊಬ್ಬರ ಜನ್ಮಸಿದ್ಧ ಹಕ್ಕಲ್ಲ ಎಂದು ಹೇಳಿದ್ದಾರೆ.

    ವಿರಾಟ್ ಕೊಹ್ಲಿ ಈಗ ಭಾರತ ಕ್ರಿಕೆಟ್ ತಂಡದ ಎಲ್ಲಾ ಮಾದರಿಯ ನಾಯಕತ್ವದಿಂದ ಹೊರನಡೆದಿದ್ದಾರೆ. ಈ ಬಗ್ಗೆ ಮಾತನಾಡಿದ ಗಂಭೀರ್, 33 ವಯಸ್ಸಿನ ಆಟಗಾರರು ರನ್ ಗಳಿಸುವತ್ತ ಗಮನ ಹರಿಸಬೇಕು. ಅದು ಹೆಚ್ಚು ಮುಖ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಮೂರು ಮಾದರಿ ತಂಡಕ್ಕೂ ಒಬ್ಬನೇ ನಾಯಕ – ಹಿಟ್‍ಮ್ಯಾನ್‍ಗೆ ಜಾಕ್‍ಪಾಟ್?

    ನಾಯಕತ್ವ ಯಾರೊಬ್ಬರ ಜನ್ಮಸಿದ್ಧ ಹಕ್ಕಲ್ಲ. ಎಂ.ಎಸ್.ಧೋನಿ ಅಂತಹವರು ತಮ್ಮ ನಾಯಕತ್ವವನ್ನು ಬಿಟ್ಟು ವಿರಾಟ್ ಕೊಹ್ಲಿಗೆ ಅವಕಾಶ ನೀಡಿದರು. ವಿರಾಟ್ ನಾಯಕತ್ವದಲ್ಲಿಯೂ ಆಟಗಾರನಾಗಿ ಧೋನಿ ಆಡಿದ್ದಾರೆ. ಅವರು ಮೂರು ಬಾರಿ ಐಸಿಸಿ ಟ್ರೋಫಿ ಹಾಗೂ ಐಪಿಎಲ್ ಟ್ರೋಫಿಗಳನ್ನೂ ಗೆದ್ದುಕೊಟ್ಟಿದ್ದಾರೆ ಎಂದು ಗಂಭೀರ್ ತಿಳಿಸಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಸೋಲನುಭವಿಸಿದ ಬಳಿಕ ವಿರಾಟ್ ಕೊಹ್ಲಿ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಮೂಲಕ ಅವರು ಭಾರತ ತಂಡದ ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದಂತಾಗಿದೆ. ಈಗ ಟೀಂ ಇಂಡಿಯಾದ ಮೂರು ಮಾದರಿ ತಂಡಕ್ಕೂ ರೋಹಿತ್ ಶರ್ಮಾ ನಾಯಕ ಎಂದು ಬಿಸಿಸಿಐ ಘೋಷಿಸಿದೆ. ಇದನ್ನೂ ಓದಿ: ಕೊಹ್ಲಿ ಯಾವುದೇ ವಿವಾದದಲ್ಲಿರಲು ಬಯಸುವುದಿಲ್ಲ: ಬಾಲ್ಯದ ಕೋಚ್

  • ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ

    ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ

    ಮುಂಬೈ: 15ನೇ ಆವೃತ್ತಿ ಐಪಿಎಲ್‍ಗೆ ಸೇರ್ಪಡೆಗೊಂಡಿರುವ ನೂತನ ತಂಡ ಲಕ್ನೋ ಫ್ರಾಂಚೈಸ್‍ನ ಮೆಂಟರ್ ಆಗಿ ಭಾರತ ತಂಡದ ಮಾಜಿ ಆಟಗಾರ ಬಿಜೆಪಿ ಸಂಸದ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ.

    ಟೀಂ ಇಂಡಿಯಾ ಪರ ಆರಂಭಿಕರಾಗಿ ಆಡುತ್ತಿದ್ದ ಗೌತಮ್ ಗಂಭೀರ್ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಬಳಿಕ ಐಪಿಎಲ್‍ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಕಾಪಿಟಲ್ಸ್ ತಂಡದ ಪರ ನಾಯಕನಾಗಿ ಆಡಿದ್ದರು. ಕೋಲ್ಕತ್ತಾ ಪರ ಎರಡು ಬಾರಿ ಐಪಿಎಲ್ ಟ್ರೋಫಿ ಗೆದ್ದ ನಾಯಕರಾಗಿದ್ದರು. ಇದೀಗ ಮತ್ತೆ ಐಪಿಎಲ್‍ನಲ್ಲಿ ಕಾಣಿಸಿಕೊಳ್ಳುವ ಅವಕಾಶ ಗಂಭೀರ್‌ಗೆ ಒಲಿದು ಬಂದಿದೆ. ಇದನ್ನೂ ಓದಿ: ಐಪಿಎಲ್‍ನ ನೂತನ ಫ್ರಾಂಚೈಸ್ ಲಕ್ನೋ ತಂಡದ ಕೋಚ್ ಆಗಿ ಆ್ಯಂಡಿ ಫ್ಲವರ್ ನೇಮಕ

    ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಸಂಜೀವ್ ಗೋಯೆಂಕಾ ಗ್ರೂಪ್, ಲಕ್ನೋ ತಂಡ ಗೌತಮ್ ಗಂಭೀರ್ ಅವರನ್ನು ಮೆಂಟರ್ ಆಗಿ ತಂಡಕ್ಕೆ ಸೇರಿಸಿಕೊಂಡಿದೆ. ಆರ್‌ಪಿಎಸ್‌ಜಿ ಕುಟುಂಬಕ್ಕೆ ಸ್ವಾಗತ ಎಂದು ಬರೆದುಕೊಂಡಿದೆ. ನಿನ್ನೆ ಲಕ್ನೋ ಫ್ರಾಂಚೈಸ್ ಕೋಚ್ ಆಗಿ ಜಿಂಬಾಬ್ವೆ ತಂಡದ ಮಾಜಿ ನಾಯಕ ಆ್ಯಂಡಿ ಫ್ಲವರ್‌ರನ್ನು ನೇಮಿಸಿಕೊಂಡಿತ್ತು. ಇದೀಗ ಗಂಭೀರ್ ಕೂಡ ತಂಡ ಸೇರುವ ಮೂಲಕ ಉತ್ತಮವಾದ ತಂಡ ಕಟ್ಟುವ ಯೋಜನೆಯಲ್ಲಿ ಲಕ್ನೋ ತಂಡವಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೋಹಿತ್, ಜಡೇಜಾ ಪ್ರಾಕ್ಟೀಸ್

  • ವಾರದಲ್ಲಿ ಮೂರನೇ ಬಾರಿ ಗೌತಮ್‌ ಗಂಭೀರ್‌ಗೆ ಐಸಿಸ್‌ನಿಂದ ಕೊಲೆ ಬೆದರಿಕೆ

    ವಾರದಲ್ಲಿ ಮೂರನೇ ಬಾರಿ ಗೌತಮ್‌ ಗಂಭೀರ್‌ಗೆ ಐಸಿಸ್‌ನಿಂದ ಕೊಲೆ ಬೆದರಿಕೆ

    ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್‌ ಗಂಭೀರ್‌ ಅವರಿಗೆ ಕಳೆದ ಒಂದು ವಾರದಿಂದ ಐಸಿಸ್‌ ಕಾಶ್ಮೀರದಿಂದ ಜೀವ ಬೆದರಿಕೆ ಕರೆಗಳು ಬಂದಿವೆ. ಇಂದು ಕೂಡ ನನಗೆ ಕೊಲೆ ಬೆದರಿಕೆ ಇದೆ ಎಂದು ಪೊಲೀಸ್‌ ಠಾಣೆಗೆ ಗಂಭೀರ್‌ ದೂರು ನೀಡಿದ್ದಾರೆ.

    ನಿಮ್ಮ ದೆಹಲಿ ಪೊಲೀಸರು ಹಾಗೂ ಐಪಿಎಸ್‌ ಅಧಿಕಾರಿ ಶ್ವೇತಾ ಅವರು ನಮ್ಮನ್ನು ಏನೂ ಮಾಡಲು ಆಗುವುದಿಲ್ಲ. ನಿಮ್ಮ ಪೊಲೀಸರ ನಡುವೆಯೇ ನಮ್ಮ ಗೂಢಾಚಾರಿಗಳಿದ್ದಾರೆ. ನಿಮ್ಮ ಬಗ್ಗೆ ಎಲ್ಲಾ ಮಾಹಿತಿಗಳನ್ನು ಕಲೆಹಾಕುತ್ತಿದ್ದೇವೆ ಎಂದು ಗಂಭೀರ್‌ ಅವರ ಇ-ಮೇಲ್‌ಗೆ ಐಸಿಸ್‌ ಕಾಶ್ಮೀರ ಹೆಸರಿನಿಂದ ಬೆದರಿಕೆಯ ಸಂದೇಶ ರವಾನೆಯಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಎಟಿಎಂ ಸೆಕ್ಯೂರಿಟಿ ಹಂತಕರ ಬಂಧನ

    ಒಂದು ವಾರದಲ್ಲಿ ಗೌತಮ್‌ ಗಂಭೀರ್‌ಗೆ ಕೇಳಿಬಂದಿರುವ 3ನೇ ಜೀವ ಬೆದರಿಕೆ ಕರೆ ಇದಾಗಿದೆ. ಇ-ಮೇಲ್‌ಗೆ ಸಂಬಂಧಿಸಿದಂತೆ ಮಾಹಿತಿಯನ್ನು ಕಲೆಹಾಕಲಾಗಿದೆ. ಈ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‌ ರೇಪ್: ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

    ನಿಮ್ಮ ಮತ್ತು ನಿಮ್ಮ ಕುಟುಂಬದವರನ್ನು ಕೊಲ್ಲುತ್ತೇವೆ ಎಂದು ಐಸಿಎಸ್‌ ಕಾಶ್ಮೀರ ಹೆಸರಿನಿಂದ ಗೌತಮ್‌ ಗಂಭೀರ್‌ ಅವರ ಇ-ಮೇಲ್‌ಗೆ ಮಂಗಳವಾರ ಬೆದರಿಕೆ ಸಂದೇಶ ಬಂದಿದೆ ಎಂದು ಗಂಭೀರ್‌ ಅವರ ಕಾರ್ಯದರ್ಶಿ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿದ ಪೊಲೀಸರು, ರಾಜೀಂದರ್‌ ನಗರದಲ್ಲಿರುವ ಗಂಭೀರ್‌ ಮನೆಗೆ ಹೆಚ್ಚಿನ ಭದ್ರತೆಯನ್ನು ಕಲ್ಪಿಸಿದ್ದರು. ಮತ್ತೊಂದು ಬೆದರಿಕೆ ಕರೆಯಲ್ಲಿ, ಗೌತಮ್‌ ಗಂಭೀರ್‌ ಅವರ ನಿವಾಸದ ವೀಡಿಯೋವನ್ನು ಹಾಕಲಾಗಿತ್ತು.

    ಸಂಬಂಧಪಟ್ಟ ಇ-ಮೇಲ್‌ ಖಾತೆ ನಿರ್ವಾಹಕರು ಮತ್ತು ಅವರಿಂದ ಬಂದಿರುವ ಬೆದರಿಕೆ ಸಂದೇಶಗಳನ್ನು ಗೂಗಲ್‌ಗೆ ಕಳುಹಿಸಿರುವ ಇಂಟೆಲಿಜೆನ್ಸ್‌ ಫ್ಯೂಷನ್‌ ಮತ್ತು ಸ್ಟ್ರ್ಯಾಟಜಿ ಆಪರೇಷನ್ಸ್‌ ಯೂನಿಟ್‌ನ ವಿಶೇಷ ಕೋಶವು ಹೆಚ್ಚಿನ ಮಾಹಿತಿ ಕಲೆಹಾಕುವಂತೆ ತಿಳಿಸಿದೆ.

  • ನಾವು ನಿಮ್ಮನ್ನು ಹತ್ಯೆ ಮಾಡುತ್ತೇವೆ – ಗಂಭೀರ್‌ಗೆ  ಐಸಿಸ್ ಕಾಶ್ಮೀರದಿಂದ ಜೀವ ಬೆದರಿಕೆ

    ನಾವು ನಿಮ್ಮನ್ನು ಹತ್ಯೆ ಮಾಡುತ್ತೇವೆ – ಗಂಭೀರ್‌ಗೆ ಐಸಿಸ್ ಕಾಶ್ಮೀರದಿಂದ ಜೀವ ಬೆದರಿಕೆ

    ನವದೆಹಲಿ: ಐಸಿಸ್ ಕಾಶ್ಮೀರದಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಬಿಜೆಪಿ ಸಂಸದ ಗೌತಮ್ ಗಂಭೀರ್ ದೂರು ದಾಖಲಿಸಿದ್ದಾರೆ. ಈ ಬಗ್ಗೆ ದೆಹಲಿ ಪೊಲೀಸರು ಗಂಭೀರ್ ಅವರ ಮನೆಗೆ ಹೆಚ್ಚಿನ ಭದ್ರತೆ ನೀಡಿತನಿಖೆ ಪ್ರಾರಂಭಿಸಿದ್ದಾರೆ.

    ಗೌತಮ್ ಗಂಭೀರ್‌ಗೆ ಬಂದಿರುವ ಬೆದರಿಕೆಯ ಮೇಲ್‍ಗಳ ಕುರಿತು ತನಿಖೆ ನಡೆಸುತ್ತಿದ್ದೇವೆ. ಅಷ್ಟೇ ಅಲ್ಲದೇ ಗಂಭೀರ್ ಮನೆಗೆ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ ಎಂದು ಎಂದು ಕೇಂದ್ರ ಡಿಸಿಪಿ ಶ್ವೇತಾ ಚೌಹಾಣ್ ಮಾಹಿತಿಯನ್ನು ನೀಡಿದರು.

    ನ.23ರಂದು ರಾತ್ರಿ 9:32ರ ವೇಳೆಗೆ ನನ್ನ ಅಧಿಕೃತ ಖಾತೆಗೆ ಐಸಿಸ್ ಕಾಶ್ಮಿರದಿಂದ ಇ-ಮೇಲ್ ಬಂದಿದೆ ಎಂದು ಗೌತಮ್ ಗಂಭೀರ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ: ಸುಮಲತಾ

    ಮೇಲ್‍ನಲ್ಲಿ ಏನಿದೆ?
    ನಾವು ನಿಮ್ಮನ್ನು ಹಾಗೂ ನಿಮ್ಮ ಕುಟುಂಬವನ್ನು ಕೊಲ್ಲಲಿದ್ದೇವೆ ಎಂದು ಮೇಲ್‍ನಲ್ಲಿ ಬರೆಯಲಾಗಿದೆ.

    ಕಟ್ಟಾ ರಾಷ್ಟ್ರೀಯವಾದಿಯಾದ 40 ವರ್ಷ ವಯಸ್ಸಿನ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯ ಬಗ್ಗೆ ತೀವ್ರವಾಗಿ ಖಂಡಿಸಿದ್ದರು. ಜೊತೆಗೆ ಭಯೋತ್ಪಾದನೆ ನಿಯಂತ್ರಣಗೊಳ್ಳುವವರೆಗೂ ಪಾಕ್‍ನೊಂದಿಗೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂದು ತಿಳಿಸಿದ್ದರು. ಇದನ್ನೂ ಓದಿ: ಭಾರತದಲ್ಲಿ ಮೂರನೇ ಅಲೆ ಸಾಧ್ಯತೆ ಕಡಿಮೆ: ಗುಲೇರಿಯಾ

    ಈ ಹಿಂದೆ 2019ರ ಡಿಸೆಂಬರ್ ತಿಂಗಳಲ್ಲೂ ಗಂಭೀರ್ ಅವರಿಗೆ ಅಂತರಾಷ್ಟ್ರೀಯ ಸಂಖ್ಯೆಯಿಂದ ಜೀವ ಬೆದರಿಕೆಯ ಕರೆಗಳು ಬಂದಿದ್ದವು. ಆಗಲೂ ದೂರು ದಾಖಲಾಗಿದ್ದು, ಪೊಲೀಸ್ ಬಿಗಿ ಭದ್ರತೆಯನ್ನು ನೀಡಿತ್ತು.

  • ನವಜೋತ್ ಸಿಧುರನ್ನು ತರಾಟೆಗೆ ತೆಗೆದುಕೊಂಡ ಗೌತಮ್ ಗಂಭೀರ್

    ನವಜೋತ್ ಸಿಧುರನ್ನು ತರಾಟೆಗೆ ತೆಗೆದುಕೊಂಡ ಗೌತಮ್ ಗಂಭೀರ್

    ನವದೆಹಲಿ: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ತಮ್ಮ ಹಿರಿಯ ಸಹೋದರ ಎಂದು ಕರೆದಿರುವ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಇಂತಹ ಹೇಳಿಕೆಯನ್ನು ನೀಡುವ ಬದಲು ತಮ್ಮ ಮಕ್ಕಳನ್ನು ಗಡಿಗೆ ಕಳುಹಿಸುವಂತೆ ಸಂಸದ ಗೌತಮ್ ಗಂಭೀರ್ ಸಲಹೆ ನೀಡಿದ್ದಾರೆ.

    ಭಯೋತ್ಪಾದಕ ರಾಷ್ಟ್ರದ ಪ್ರಧಾನಿಯನ್ನು ಅಣ್ಣನೆಂದು ಕರೆದಿರುವುದು ನಾಚಿಕೆಗೇಡಿನ ಸಂಗತಿ. ಮೊದಲು ನಿಮ್ಮ ಮಗ ಅಥವಾ ಮಗಳನ್ನು ರಾಷ್ಟ್ರಕ್ಕಾಗಿ ಹೋರಾಡಲು ಕಳುಹಿಸಿ. ಆನಂತರ ಭಯೋತ್ಪಾದಕ ರಾಷ್ಟ್ರದ ಪ್ರಧಾನಿಯನ್ನು ಅಣ್ಣನೆಂದು ಕರೆಯಿರಿ ಎಂದು ಗಂಭೀರ್ ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ನನ್ನ ದೊಡ್ಡಣ್ಣ – ಮತ್ತೆ ವಿವಾದ ಸೃಷ್ಟಿಸಿದ ನವಜೋತ್ ಸಿಂಗ್

    ಕಳೆದ ಒಂದು ತಿಂಗಳಿಂದ ಕಾಶ್ಮೀರದ ಪಾಕಿಸ್ತಾನಿ ಭಯೋತ್ಪಾದಕರು ನಮ್ಮ ದೇಶದ 40ಕ್ಕೂ ಹೆಚ್ಚು ಸೈನಿಕರನ್ನು ಹಾಗೂ ನಾಗರಿಕರನ್ನು ಕೊಂದಿದ್ದಾರೆ ಎಂದು ಸಿಧು ನೆನಪಿಸಿಕೊಳ್ಳುತ್ತಾರೆಯೇ ಎಂದು ಸಂಸದ ಪ್ರಶ್ನಿಸಿದ್ದಾರೆ.

    ಶನಿವಾರ ಪಾಕಿಸ್ತಾನದ ಕರ್ತಾರ್‌ಪುರ ಸಾಹಿಬ್ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದ ಸಿಧು, ಇಮ್ರಾನ್ ಖಾನ್ ಅವರನ್ನು ಹೊಗಳಿದ್ದರು. ಇಮ್ರಾನ್ ಖಾನ್ ನನ್ನ ಹಿರಿಯ ಅಣ್ಣ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಇಮ್ರಾನ್ ಅವರು ಸಾಕಷ್ಟು ಪ್ರೀತಿಯನ್ನು ನೀಡಿದ್ದಾರೆ ಎಂದಿದ್ದರು. ಇದನ್ನೂ ಓದಿ: ವಿದರ್ಭ ವಿರುದ್ಧ ಕರ್ನಾಟಕಕ್ಕೆ ರೋಚಕ ಜಯ – ಫೈನಲ್‍ಗೆ ಲಗ್ಗೆ

    ಈ ಹಿಂದೆ ಟೀಂ ಇಂಡಿಯಾದ ಮಾಜಿ ಆಟಗಾರರಗಿದ್ದ ಸಿಧು, ನೆರೆಯ ದೇಶಕ್ಕೆ ಭೇಟಿ ನೀಡಿದ್ದಾಗ ಆಗಿನ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಬಜ್ವಾ ಅವರನ್ನು ಅಪ್ಪಿಕೊಳ್ಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು.

  • ಸೋಂಕಿತರಿಗೆ ಉಚಿತ ವೈದ್ಯಕೀಯ ಸೇವೆ ನೀಡಲು ಮುಂದಾದ ಗೌತಮ್ ಗಂಭೀರ್

    ಸೋಂಕಿತರಿಗೆ ಉಚಿತ ವೈದ್ಯಕೀಯ ಸೇವೆ ನೀಡಲು ಮುಂದಾದ ಗೌತಮ್ ಗಂಭೀರ್

    ನವದೆಹಲಿ: ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಪ್ರತಿಷ್ಠಾನದ ಮೂಲಕ ದೆಹಲಿಯ ಕೋವಿಡ್ ಸೋಂಕಿತರಿಗೆ ಉಚಿತವಾಗಿ ಆಂಟಿ-ವೈರಲ್ ಡ್ರಗ್ ಫ್ಯಾಬಿಫ್ಲೂ ಮತ್ತು ಆಮ್ಲಜನಕ ಸಿಲಿಂಡರ್‍ಗಳನ್ನು ವಿತರಿಸಲಿದ್ದೇವೆ ಎಂದು ತಿಳಿಸಿದ್ದಾರೆ.

    ದೆಹಲಿ ನನ್ನ ಮನೆ, ನನ್ನ ಕೊನೆಯ ಉಸಿರು ಇರುವ ತನಕ ಜನರ ಸೇವೆಯನ್ನು ಮಾಡುತ್ತೇನೆ. ಆಕ್ಸಿಜನ್, ಬೆಡ್ ಮತ್ತು ಔಷಧ ಸಹಾಯ ಮಾಡಿ ಎಂದು ಹಲವರು ಮನವಿ ಮಾಡಿದ್ದಾರೆ. ನನಗೆ ಸಾಧ್ಯವಾದಷ್ಟು ಸಹಾಯವನ್ನು ಮಾಡುತ್ತೇನೆ ಎಂದು ತಿಳಿಸಿದ್ದಾರೆ.

    ಕೊರೊನಾ ಸೋಂಕಿತರು ಆಕ್ಸಿಜನ್ ಫ್ಯಾಬಿಫ್ಲೂ, ಔಷಧಗಳನ್ನು ಪಡೆಯಲು ಆಧಾರ್ ಕಾರ್ಡ್ ಜೊತೆಗೆ ಬರಬೇಕು ಎಂದು ಸೂಚನೆ ನೀಡಲಾಗಿದೆ. ಕೊರೊನಾ ಸೊಂಕಿತರಿಗೆ ಉಚಿತವಾಗಿ ವೈದ್ಯಕೀಯ ಅಗತ್ಯತೆಯನ್ನು ಪೂರೈಸಲು ಗೌತಮ್ ಗಂಭೀರ್ ಮುಂದಾಗಿದ್ದಾರೆ.

    ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಿರುವ ಲಾಕ್‍ಡೌನ್‍ಅನ್ನು ದೆಹಲಿಯಲ್ಲಿ ಇನ್ನು ಒಂದು ವಾರಗಳ ಕಾಲ ಮುಂದುವರಿಸಲಿದ್ದೇವೆ. ದೆಹಲಿಯಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆವಶ್ಯಕತೆ ಇದೆ. ಕೋವಿಡ್ ಹೋರಾಟವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಿಗೆ ನಿಂತು ಎದುರಿಸುತ್ತಿದ್ದೇವೆ. ದೆಹಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಆಕ್ಸಿಜನ್ ಸಮಸ್ಯೆ ಎದುರಾಗಿದ್ದು ರಾಜ್ಯಗಳು ಆಕ್ಸಿಜನ್ ನೀಡಬೇಕೆಂದು ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

  • ಮೋರ್ಗನ್ ವಿಲಕ್ಷಣ ನಾಯಕತ್ವ, ಭಾರತೀಯನಿಂದ ಈ ಬ್ಲಂಡರ್ ಆಗದ್ದಕ್ಕೆ ನನಗೆ ಸಂತೋಷವಿದೆ – ಗಂಭೀರ್

    ಮೋರ್ಗನ್ ವಿಲಕ್ಷಣ ನಾಯಕತ್ವ, ಭಾರತೀಯನಿಂದ ಈ ಬ್ಲಂಡರ್ ಆಗದ್ದಕ್ಕೆ ನನಗೆ ಸಂತೋಷವಿದೆ – ಗಂಭೀರ್

    ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮೋರ್ಗನ್ ನಾಯಕತ್ವದ ಬಗ್ಗೆ ಮಾಜಿ ನಾಯಕ ಗೌತಮ್ ಗಂಭೀರ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ 38 ರನ್‌ಗಳ ಸೋಲು ಅನುಭವಿಸಿದ ಬಳಿಕ ವಾಹಿನಿಯ ಜೊತೆ ಗಂಭೀರ್ ಮಾತನಾಡುತ್ತಿದ್ದರು.

    ಈ ವೇಳೆ ಮಾತನಾಡಿದ ಅವರು, ವರುಣ್ ಚಕ್ರವರ್ತಿ ಅವರು ತಮ್ಮ ಮೊದಲ ಓವರಿನಲ್ಲೇ ವಿರಾಟ್ ಕೊಹ್ಲಿ ಮತ್ತು ರಜತ್ ಪಾಟಿದರ್ ಅವರನ್ನು ಔಟ್ ಮಾಡಿದ್ದರು. ಮೂರನೇ ಓವರಿನಲ್ಲಿ ಅವರಿಗೆ ಬೌಲ್ ನೀಡದೇ ಬಾಂಗ್ಲಾದೇಶ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಅವರಿಗೆ ನೀಡಿದ್ದು ಯಾಕೆ ಎನ್ನುವುದನ್ನು ನಾನು ಅರ್ಥಮಾಡಿಕೊಳ್ಳಲು ವಿಫಲನಾಗಿದ್ದೇನೆ. ನನ್ನ ಜೀವನದಲ್ಲಿ ನಾನು ಕಂಡ ವಿಲಕ್ಷಣವಾದ ನಾಯಕತ್ವ ಇದೇ ಇರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಒಬ್ಬ ಭಾರತೀಯ ನಾಯಕ ಈ ಪ್ರಮಾದವನ್ನು ಮಾಡದಿದ್ದಕ್ಕೆ ನನಗೆ ಸಂತೋಷವಾಗಿದೆ. ಇದೊಂದು ದೊಡ್ಡ ಬ್ಲಂಡರ್. ಒಂದು ವೇಳೆ ಭಾರತೀಯ ನಾಯಕ ಏನಾದರೆ ಈ ಪ್ರಮಾದ ಮಾಡಿದ್ದರೆ ಜನ ಭಾರೀ ಟೀಕೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.

    ತಮ್ಮ ಮೊದಲ ಓವರ್‌ನಲ್ಲೇ ವರುಣ್ ಚಕ್ರವರ್ತಿ 2 ವಿಕೆಟ್ ಪಡೆದಿದ್ದರು. ನಂತರ ಅವರಿಗೆ ಇನ್ನಿಂಗ್ಸ್ ನ 8ನೇ ಓವರ್ ನೀಡಲಾಗಿತ್ತು. ವರುಣ್ ಚಕ್ರವರ್ತಿ 4 ಓವರ್ ಎಸೆದು 39 ರನ್ ನೀಡಿ 2 ವಿಕೆಟ್ ಪಡೆದಿದ್ದರು.

    ಎಬಿಡಿ ವಿಲಿಯರ್ಸ್ ಮತ್ತು ಗ್ಲೇನ್ ಮ್ಯಾಕ್ಸ್‌ವೆಲ್ ಅವರ ಸ್ಫೋಟಕ ಅರ್ಧಶತಕದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 38 ರನ್‌ಗಳಿಂದ ಜಯಗಳಿಸಿತ್ತು. ಗೆಲ್ಲಲು 205 ರನ್‌ಗಳ ಕಠಿಣ ಸವಾಲನ್ನು ಪಡೆದ ಕೋಲ್ಕತ್ತಾ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 166 ರನ್ ಗಳಿಸಿತು.

    ಈ ಮೂಲಕ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಬೆಂಗಳೂರು ಮುಂದುವರಿದಿದೆ. ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆರ್ಸಿಬಿ ಮೊದಲ 3 ಪಂದ್ಯಗಳನ್ನು ಗೆದ್ದುಕೊಂಡಿದೆ.

  • ಒಂದು ರೂ.ಗೆ ಊಟ ನೀಡಿ ಬಡವರ ಪಾಲಿನ ಅನ್ನದಾತನಾದ ಗೌತಮ್ ಗಂಭೀರ್

    ಒಂದು ರೂ.ಗೆ ಊಟ ನೀಡಿ ಬಡವರ ಪಾಲಿನ ಅನ್ನದಾತನಾದ ಗೌತಮ್ ಗಂಭೀರ್

    ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ, ಬಿಜೆಪಿ ಸಂಸದ ಗೌತಮ್ ಗಂಭೀರ್ ರಾಷ್ಟ್ರ ರಾಜಧಾನಿಯಲ್ಲಿ ಒಂದು ರೂಪಾಯಿಗೆ ಊಟ ನೀಡುವ “ಜನ್ ರಸೋಯಿ’ ಕ್ಯಾಂಟೀನ್ ಆರಂಭಿಸಿ ಬಡವರ ಪಾಲಿನ ಅನ್ನದಾತರಾಗಿ ಮೂಡಿಬಂದಿದ್ದಾರೆ.

    ಕ್ರಿಕೆಟ್‍ಗೆ ನಿವೃತ್ತಿ ನೀಡಿದ ಬಳಿಕ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿಕೊಟ್ಟ ಗಂಭೀರ್ ಬಿಜೆಪಿಯಿಂದ ಸ್ಪರ್ಧಿಸಿ ಪೂರ್ವ ದೆಹಲಿಯ ಸಂಸದರಾಗಿ ಆಯ್ಕೆಯಾಗಿದ್ದರು. ಸಂಸದರಾದ ಬಳಿಕ ಅಲ್ಲಿನ ಬಡವರ ಹಸಿವನ್ನು ನೀಗಿಸುವ ಸಲುವಾಗಿ ಕಳೆದ ವರ್ಷ ಡಿಸೆಂಬರ್‍ನಲ್ಲಿ ಗಾಂಧಿ ನಗರ ಮಾರ್ಕೆಟ್ ಬಳಿ ಮೊದಲು ಒಂದು ಜನ್ ರಸೋಯಿ ಕ್ಯಾಂಟೀನ್ ಆರಂಭಿಸಿದ್ದರು. ಇದೀಗ ನ್ಯೂ ಅಶೋಕ್ ನಗರದಲ್ಲಿ 2ನೇ ಕ್ಯಾಂಟೀನ್ ತೆರೆಯುದರೊಂದಿಗೆ ಬಡವರ ಪಾಲಿಗೆ ಅನ್ನದಾಸೋಹಿಯಾಗಿದ್ದಾರೆ.

    ಗಾಂಧಿ ನಗರ ಮಾರ್ಕೆಟ್‍ನಲ್ಲಿರುವ ಕ್ಯಾಂಟೀನ್‍ನಲ್ಲಿ ಈಗಾಗಲೇ 50 ಸಾವಿರ ಜನರಿಗೆ ಊಟ ನೀಡಲಾಗಿದ್ದು, ನ್ಯೂ ಅಶೋಕ್ ನಗರದಲ್ಲಿ ಹೊಸದಾಗಿ ಆರಂಭವಾಗಿರುವ ಕ್ಯಾಂಟೀನ್‍ನಲ್ಲಿ ಏಕಕಾಲಕ್ಕೆ 50 ಸಾವಿರ ಜನರಿಗೆ ಊಟ ನೀಡುವ ಅಚ್ಚುಕಟ್ಟಾದ ವ್ಯವಸ್ಥೆ ರೂಪಿಸಲಾಗಿದೆ.

    ಕ್ಯಾಂಟೀನ್ ತೆರೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಗಂಭೀರ್, ಇದು ಬರೀ ಕ್ಯಾಂಟೀನ್ ಅಲ್ಲ. ಒಂದು ರೀತಿ ಚಳವಳಿ ಜನರ ಹಸಿವನ್ನು ನೀಗಿಸುವ ಹೋರಾಟವಾಗಿದ್ದು, ನಾನು ನಾಟಕದ ರಾಜಕೀಯ ನಾಯಕನಾಗದೆ ಬದಲಾವಣೆಯನ್ನು ತರುವ ಉದ್ದೇಶದಿಂದ ಜನರ ಸೇವೆಗಾಗಿ ಬಂದಿದ್ದೇನೆ, ಅದನ್ನೇ ಮಾಡುತ್ತಿದ್ದೇನೆ ಎಂದರು.

    ಗಂಭೀರ್ ಕ್ಯಾಂಟೀನ್‍ಗೆ ಸಂಸದೀಯ ಅನುದಾನವನ್ನು ಬಳಸದೇ ತಮ್ಮದೇ ಸ್ವಂತ ಹಣವನ್ನು ವ್ಯಯಿಸಿ ಕ್ಯಾಂಟೀನ್ ನಡೆಸುತ್ತಿದ್ದಾರೆ. ಇಲ್ಲಿನ ಆಹಾರವು ಪೌಷ್ಠಿಕತೆಯಿಂದ ಕೂಡಿದ್ದು, ನೈರ್ಮಲ್ಯಕ್ಕೆ ಹೆಚ್ಚು ಒತ್ತು ಕೊಡಲಾಗಿದೆ.

    ಈ ಹಿಂದೆ ತಮಿಳುನಾಡು, ಕೇರಳ, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈ ರೀತಿಯ ಕ್ಯಾಂಟೀನ್ ಆರಂಭವಾಗಿದ್ದು, ದೆಹಲಿಯಲ್ಲಿ ಜನ್ ರಸೋಯಿ ಕ್ಯಾಟಿಂನ್ ಆರಂಭ ಮಾಡುವ ಮೂಲಕ ಗಂಭೀರ್ ಜನನಾಯಕನಾಗಿ ಗುರುತಿಸಿಕೊಂಡಿದ್ದಾರೆ.

  • ರೋಹಿತ್ ಶರ್ಮಾ ಕ್ಯಾಪ್ಟನ್ ಆಗದಿದ್ದರೆ ದೇಶಕ್ಕೆ ನಷ್ಟ: ಗಂಭೀರ್

    ರೋಹಿತ್ ಶರ್ಮಾ ಕ್ಯಾಪ್ಟನ್ ಆಗದಿದ್ದರೆ ದೇಶಕ್ಕೆ ನಷ್ಟ: ಗಂಭೀರ್

    ನವದೆಹಲಿ: ಟೀಂ ಇಂಡಿಯಾ ಸೀಮಿತ ಓವರ್ ಕ್ರಿಕೆಟ್‍ನಲ್ಲಿ ರೋಹಿತ್ ಶರ್ಮಾರನ್ನು ಕ್ಯಾಪ್ಟನ್ ಮಾಡಬೇಕು ಎಂಬ ಮಾತುಗಳು ಹಿಂದಿನಿಂದಲೂ ಕೇಳಿ ಬರುತ್ತಿದೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಶರ್ಮಾ 5ನೇ ಐಪಿಎಲ್ ಟ್ರೋಪಿಯನ್ನು ಗೆದ್ದು ತಂದಿದ್ದು, ಇದೇ ವೇಳೆ ಟೀಂ ಇಂಡಿಯಾ ಪರ ಕನಿಷ್ಠ ಸೀಮಿತ ಓವರ್ ಗಳ ಕ್ರಿಕೆಟ್‍ನಲ್ಲಿ ರೋಹಿತ್ ಶರ್ಮಾ ಭಾರತದ ತಂಡದ ನಾಯಕ ಆಗದಿದ್ದರೆ ಅದು ದೇಶಕ್ಕೆ ನಷ್ಟ ಎಂದು ಟೀಂ ಇಂಡಿಯಾ ಮಾಜಿ ಆಟಗಾರ, ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.

    ರೋಹಿತ್ ಶರ್ಮಾರನ್ನ ಟೀಂ ಇಂಡಿಯಾ ಟಿ20 ತಂಡಕ್ಕೆ ಕ್ಯಾಪ್ಟನ್ ಮಾಡಬೇಕು ಎಂದು ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಕೂಡ ರೋಹಿತ್ ಶರ್ಮಾ ಪರ ಬ್ಯಾಟ್ ಬೀಸಿದ್ದಾರೆ.

    ಏಕದಿನ ಮತ್ತು ಟಿ20 ಮಾದರಿ ಕ್ರಿಕೆಟ್‍ನಲ್ಲಿ ರೋಹಿತ್ ಶರ್ಮಾಗೆ ನಾಯಕತ್ವ ನೀಡಬೇಕು. ರೋಹಿತ್ ಶರ್ಮಾಗೆ ನಾಯಕತ್ವ ನೀಡದಿದ್ದರೆ ಅದು ಆತನಿಗೆ ನಷ್ಟವಿಲ್ಲ. ಆದರೆ ಇದರಿಂದ ಭಾರತಕ್ಕೆ ನಷ್ಟವಾಗಲಿದೆ. ಧೋನಿಯನ್ನು ಟೀಂ ಇಂಡಿಯಾ ಪರ ಅತ್ಯಂತ ಯಶಸ್ವಿ ನಾಯಕ ಎಂದು ಕರೆಯುತ್ತಾರೆ. ಏಕೆಂದರೆ ಧೋನಿ ನಾಯಕತ್ವದಲ್ಲಿ 2 ವಿಶ್ವಕಪ್ ಸೇರಿದಂತೆ 3 ಐಪಿಎಲ್ ಟ್ರೋಫಿಗಳನ್ನು ಗೆದ್ದು ತಂದಿದ್ದಾರೆ. ರೋಹಿತ್ 5 ಐಪಿಎಲ್ ಟ್ರೋಫಿಗಳನ್ನು ಗೆದ್ದುಕೊಂಡಿದ್ದು, ಐಪಿಎಲ್ ಇತಿಹಾಸದಲ್ಲೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ ಎಂದು ಗಂಭೀರ್ ಹೇಳಿದ್ದಾರೆ.

    ನಾಯಕತ್ವದ ಜವಾಬ್ದಾರಿಯನ್ನು ರೋಹಿತ್ ಶರ್ಮಾಗೆ ನೀಡಿದರೆ ಆತ ಯಶಸ್ವಿಯಾಗಿ ತಂಡವನ್ನು ಮುನ್ನಡೆಸುತ್ತಾನೆ. ಧೋನಿ ನಿವೃತ್ತಿಯ ಬಳಿಕ ಟೆಸ್ಟ್ ತಂಡದ ನಾಯಕತ್ವವನ್ನು ಕೊಹ್ಲಿ ನೀಡಲಾಗಿತ್ತು. ಬಳಿಕ ಸಿಮೀತ ಓವರ್ ಗಳ ನಾಯಕತ್ವವನ್ನು ಅವರಿಗೆ ವಹಿಸಲಾಯಿತು. ಸದ್ಯ ಟೀಂ ಇಂಡಿಯಾಗೆ ನಾಯಕತ್ವ ವಿಭಜನೆ ಮಾದರಿಯನ್ನು ಪರಿಗಣಿಸಬೇಕಿದೆ. ಆದರೆ ನಾನು ಕೊಹ್ಲಿಯನ್ನು ಉತ್ತಮ ನಾಯಕ ಅಲ್ಲ ಎಂದು ಹೇಳುತ್ತಿಲ್ಲ. ಕೊಹ್ಲಿ, ರೋಹಿತ್ ಇಬ್ಬರೂ ಐಪಿಎಲ್‍ನಲ್ಲಿ ನಾಯಕರಾಗಿ ತಂಡಗಳನ್ನು ಮುನ್ನಡೆಸಿದ್ದು, ನನ್ನ ದೃಷ್ಟಿಯಲ್ಲಿ ರೋಹಿತ್ ತಮ್ಮ ನಾಯಕತ್ವದಲ್ಲಿ ಯಶಸ್ವಿಯಾಗಿ ತಂಡವನ್ನು ಮುನ್ನಡೆಸುತ್ತಾರೆ ಎಂದು ಗಂಭೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.