Tag: gdp

  • 2ನೇ ತ್ರೈಮಾಸಿಕದಲ್ಲಿ ದೇಶದ ಬೆಳವಣಿಗೆ ದರವು 5.4% ರಷ್ಟಿದೆ – ನಿರ್ಮಲಾ ಸೀತಾರಾಮನ್

    2ನೇ ತ್ರೈಮಾಸಿಕದಲ್ಲಿ ದೇಶದ ಬೆಳವಣಿಗೆ ದರವು 5.4% ರಷ್ಟಿದೆ – ನಿರ್ಮಲಾ ಸೀತಾರಾಮನ್

    ನವದೆಹಲಿ: 2024-25ರ ಆರ್ಥಿಕ ವರ್ಷದ 2ನೇ ತ್ರೈಮಾಸಿಕದಲ್ಲಿ ದೇಶದ ಬೆಳವಣಿಗೆ (GDP Growth) ದರವು 5.4% ರಷ್ಟಿದೆ. ಈ ಅಂಕಿ ಅಂಶವು ನಿರೀಕ್ಷೆಗಿಂತ ಕಡಿಮೆಯಾಗಿದೆ. ಆದರೆ ಮುಂಬರುವ ತ್ರೈಮಾಸಿಕಗಳಲ್ಲಿ ಇದು ಸುಧಾರಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಲೋಕಸಭೆಯಲ್ಲಿ ತಿಳಿಸಿದ್ದಾರೆ.

    ಲೋಕಸಭೆಯಲ್ಲಿ (Lok Sabha) ಅನುದಾನಕ್ಕಾಗಿ ಪೂರಕ ಬೇಡಿಕೆಗಳ ಮೊದಲ ಬ್ಯಾಚ್‌ನ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, ಭಾರತವು ಸ್ಥಿರ ಮತ್ತು ನಿರಂತರ ಬೆಳವಣಿಗೆ ಕಂಡಿದೆ ಮತ್ತು ಅದರ GDP ಬೆಳವಣಿಗೆ ದರವು ಕಳೆದ ಮೂರು ವರ್ಷಗಳಲ್ಲಿ ಸರಾಸರಿ 8.3% ಹೊಂದಿದೆ ಎಂದು ಹೇಳಿದ್ದಾರೆ.

    ಆದಾಗ್ಯೂ ಭಾರತವು ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಉಳಿದಿದೆ. 2ನೇ ತ್ರೈಮಾಸಿಕ ಬೆಳವಣಿಗೆ ದರವು ಕೇವಲ ತಾತ್ಕಾಲಿಕ ಕುಸಿತ ಮತ್ತು ಮುಂಬರುವ ತ್ರೈಮಾಸಿಕಗಳಲ್ಲಿ ಆರ್ಥಿಕತೆಯು ಉತ್ತಮ ಬೆಳವಣಿಗೆಯನ್ನು ಕಾಣಲಿದೆ ಎಂದು ಸೀತಾರಾಮನ್ ಭರವಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: Delhi Assembly Election | ಚುನಾವಣಾ ಆಯೋಗದಿಂದ ಪೂರ್ವಸಿದ್ಧತಾ ಸಭೆ – ಮುಂದಿನ ವಾರವೇ ದಿನಾಂಕ ಪ್ರಕಟ ಸಾಧ್ಯತೆ

    ಉತ್ಪಾದನಾ ವಲಯದಲ್ಲಿ ಯಾವುದೇ ವ್ಯಾಪಕವಾದ ಮಂದಗತಿ ಇಲ್ಲ, ಒಟ್ಟಾರೆ ಉತ್ಪಾದನಾ ವಲಯದ ಅರ್ಧದಷ್ಟು ಬಲವಾಗಿ ಉಳಿದಿದೆ. ಭಾರತದ ಆರ್ಥಿಕತೆಯು ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) 6.7 ಪ್ರತಿಶತ ಮತ್ತು ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ 5.4 ಪ್ರತಿಶತದಷ್ಟು ಬೆಳೆದಿದೆ. ಇದನ್ನೂ ಓದಿ: ಫಾಲೋ ಆನ್‌ನಿಂದ ಭಾರತ ಬಚಾವ್‌ – ಕೊನೆಯ ವಿಕೆಟ್‌ಗೆ 39 ರನ್‌ಗಳ ಜೊತೆಯಾಟ ಉಳಿಸಿತು ಮಾನ!

    ಹಣದುಬ್ಬರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸೀತಾರಾಮನ್, ಎನ್‌ಡಿಎ ಆಡಳಿತದಲ್ಲಿ ಇದನ್ನು ಉತ್ತಮವಾಗಿ ನಿಯಂತ್ರಿಸಲಾಗಿತ್ತು, ಆದ್ರೆ ಯುಪಿಎ ಆಡಳಿತದಲ್ಲಿ ಇದು ಎರಡಂಕಿಗಳನ್ನು ಮುಟ್ಟಿತ್ತು ಎಂದು ಹೇಳಿದರು. 2017-18ರಲ್ಲಿ ನಿರುದ್ಯೋಗ ದರವು ಶೇ.6 ರಿಂದ ಈಗ ಶೇ. 3.2ಕ್ಕೆ ಇಳಿದಿದೆ ಎಂದು ಹೇಳಿದರು.

  • GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್ – ಸಿದ್ದರಾಮಯ್ಯ

    GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್ – ಸಿದ್ದರಾಮಯ್ಯ

    – ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕೆಂದ ಸಿಎಂ

    ಮಂಡ್ಯ: GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್, ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗಳಿಗೆ ಅವರೇ ಬೆಲೆ ನಿಗದಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.

    ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು, ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ? ಎಂದು ಪ್ರಶ್ನಿಸಿದರು.

    ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದು ಹೇಳಿದರು.

    ಕೆ.ಆರ್ ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀವಿ ಎಂದು ಭರವಸೆ ನೀಡಿದರು.‌ ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.

  • RBI ಬಡ್ಡಿ ದರ ಇಳಿಕೆ ಇಲ್ಲ – ಸತತ 10ನೇ ಬಾರಿಗೆ ಯಥಾಸ್ಥಿತಿ ಮುಂದುವರಿಕೆ

    RBI ಬಡ್ಡಿ ದರ ಇಳಿಕೆ ಇಲ್ಲ – ಸತತ 10ನೇ ಬಾರಿಗೆ ಯಥಾಸ್ಥಿತಿ ಮುಂದುವರಿಕೆ

    ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ಸತತ 10ನೇ ಬಾರಿಗೆ ರೆಪೋ ದರವನ್ನು (Repo Rate) ಯಥಾಸ್ಥಿತಿಯಲ್ಲೇ ಮುಂದುವರಿಸಿದೆ.

    ಗವರ್ನರ್‌ ಶಕ್ತಿಕಾಂತ ದಾಸ್‌ (Shaktikanta Das) ನೇತೃತ್ವದಲ್ಲಿ ಬುಧವಾರ (ಅ.9) 6 ಸದಸ್ಯರ ಹಣಕಾಸು ನೀತಿ ಸಮಿತಿ (MPC) ಸಭೆ ನಡೆಸಿತು. ಈ ಪೈಕಿ ಮೂವರು ಹೊಸ ಸದಸ್ಯರನ್ನು ಎಂಪಿಸಿಗೆ ಸೇರ್ಪಡೆಗೊಳಿಸಲಾಯಿತು. ದೆಹಲಿ ವಿವಿಯ (Dehli University) ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ ನಿರ್ದೇಶಕ ಪ್ರೊಫೆಸರ್ ರಾಮ್ ಸಿಂಗ್, ಅರ್ಥಶಾಸ್ತ್ರಜ್ಷ ಸೌಗತ ಭಟ್ಟಾಚಾರ್ಯ, ಕೈಗಾರಿಕಾ ಅಭಿವೃದ್ಧಿಯ ಅಧ್ಯಯನಗಳ ಸಂಸ್ಥೆಯ ಸಿಇಒ ಡಾ.ನಾಗೇಶ್ ಕುಮಾರ್ ನೂತನ ಸದಸ್ಯರು. ಇದನ್ನೂ ಓದಿ: Haryana Assembly Elections: ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್‌ಗೆ ಗೆಲುವು

    ಸಭೆಯ ಬಳಿಕ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ ಶಕ್ತಿಕಾಂತ ದಾಸ್‌, 2024-25ನೇ ಸಾಲಿನ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆಯು 7.2% ರಷ್ಟಾಗುವ ಮುನ್ಸೂಚನೆ ಇದೆ. ರೆಪೋ ದರದಲ್ಲಿ ಯಾವುದೇ ಬದಲಾವಣೆ ತರದೇ 6.5% ನಲ್ಲೇ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರಲ್ಲಿ ಪೈಕಿ 5:1 ರಷ್ಟು ಸದಸ್ಯರು ಈ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದರು ಎಂದು ತಿಳಿಸಿದರು.

    ಕಳೆದ ಆಗಸ್ಟ್‌ನಲ್ಲಿ ನಡೆದ ಸಭೆಯಲ್ಲೂ ಆರ್‌ಬಿಐ ಇದೇ ದರವನ್ನು ಕಾಯ್ದುಕೊಂಡಿತ್ತು. ಕೊನೆಯದ್ದಾಗಿ 2023ರ ಫೆಬ್ರವರಿ 8ರಂದು ನಡೆದ ಸಭೆಯಲ್ಲಿ ಆರ್‌ಬಿಐ ರೆಪೋ ದರ ಏರಿಕೆ ಮಾಡಿತ್ತು. ಇದನ್ನೂ ಓದಿ: 5 ಸ್ಟಾರ್‌ ಹೋಟೆಲ್‌ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡವರನ್ನ ಒಡೆಯುತ್ತಿದ್ದಾರೆ: ರಾಗಾಗೆ ಮೋದಿ ಚಾಟಿ

    ಅಮೆರಿಕದ ಫೆಡರಲ್‌ ರಿಸರ್ವ್‌ ಬಡ್ಡಿದರವನ್ನು ಇಳಿಕೆ ಮಾಡಿದ ಬೆನ್ನಲ್ಲೇ ಭಾರತದಲ್ಲೂ ಆರ್‌ಬಿಐ ಬಡ್ಡಿ ದರವನ್ನು ಇಳಿಕೆ ಮಾಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಇಸ್ರೇಲ್‌-ಇರಾನ್‌ ನಡುವೆ ಯುದ್ಧ ಭೀತಿಯಿಂದಾಗಿ ಬಡ್ಡಿದರವನ್ನು ಇಳಿಸದ ಆರ್‌ಬಿಐ ಯಥಾಸ್ಥಿತಿಯನ್ನೇ ಕಾಯ್ದುಕೊಂಡಿದೆ. ಇದನ್ನೂ ಓದಿ: ಭೂಪಿಂದರ್‌ ಹೂಡಾಗೆ ಮಣೆ ಹಾಕಿ ಕೈ ಸುಟ್ಟುಕೊಂಡ ಕಾಂಗ್ರೆಸ್!‌

    ರೆಪೋ ರೇಟ್ ಎಂದರೇನು?
    ವಾಣಿಜ್ಯ ಬ್ಯಾಂಕ್‌ಗಳ ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್‌ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್‍ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತಿರುತ್ತವೆ. ರೆಪೋ ರೇಟ್‌ ಜಾಸ್ತಿ ಇದ್ದರೆ ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡುತ್ತದೆ. ಇದರಿಂದ ವಾಹನ ಸಾಲ, ಗೃಹ ಸಾಲ್ಯ ಇತ್ಯಾದಿ ಸಾಲಗಳ ಬಡ್ಡಿ ದರ ಏರುತ್ತದೆ.

  • 2023-24 ಹಣಕಾಸು ವರ್ಷದಲ್ಲಿ 8.2% ಆರ್ಥಿಕ ಪ್ರಗತಿ – ಇದಿನ್ನೂ ಟ್ರೇಲರ್‌ ಎಂದ ಮೋದಿ

    2023-24 ಹಣಕಾಸು ವರ್ಷದಲ್ಲಿ 8.2% ಆರ್ಥಿಕ ಪ್ರಗತಿ – ಇದಿನ್ನೂ ಟ್ರೇಲರ್‌ ಎಂದ ಮೋದಿ

    – ಜಿಡಿಪಿ ಪ್ರಗತಿ; ಯಾವ ವರ್ಷ ಎಷ್ಟಿತ್ತು?

    ನವದೆಹಲಿ: ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿದ ಪ್ರಗತಿ ಸಾಧಿಸಿದೆ. ಜನವರಿ-ಮಾರ್ಚ್‌ ತ್ರೈಮಾಸಿಕದಲ್ಲಿ 7.8% ರಷ್ಟು ಜಿಡಿಪಿ (GDP) ಬೆಳವಣಿಗೆ ಸಾಧಿಸಿದ್ದು, 2023-24ರ ಹಣಕಾಸು ವರ್ಷದಲ್ಲಿ 8.2% ಪ್ರಗತಿ ಸಾಧಿಸಿದೆ. ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ಇದಿನ್ನೂ ಟ್ರೇಲರ್‌ ಎಂದು ಹೇಳಿದ್ದಾರೆ.

    ಜಿಡಿಪಿ ಪ್ರಗತಿ ಮೋದಿ ಶ್ಲಾಘನೆ:
    2023-24ರ Q4 GDP ಬೆಳವಣಿಗೆಯ ದತ್ತಾಂಶವು ನಮ್ಮ ಆರ್ಥಿಕತೆಯಲ್ಲಿ ದೃಢವಾದ ಆವೇಗವನ್ನು ತೋರಿಸುತ್ತದೆ. ಅದಕ್ಕಾಗಿ ಶ್ರಮವಹಿಸಿ ದುಡಿಯುವ ನಮ್ಮ ದೇಶದ ಜನತೆಗೆ ಧನ್ಯವಾದ ಹೇಳಲು ಬಯಸುತ್ತೇನೆ. 2023-24ರ ಹಣಕಾಸು ವರ್ಷದಲ್ಲಿ 8.2% ಜಿಡಿಪಿ ಬೆಳವಣಿಗೆಯು ಭಾರತವು ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ದೇಶ ಮತ್ತು ಪ್ರಮುಖ ಆರ್ಥಿಕತೆಯ ದೇಶವಾಗಿ ಮುನ್ನುಗ್ಗುತ್ತಿದೆ ಎಂಬುದನ್ನು ನಿರೂಪಿಸುತ್ತದೆ. ನಾನು ಹೇಳಿದಂತೆ, ಇದಿನ್ನೂ ಟ್ರೇಲರ್‌ ಅಷ್ಟೇ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    2023-24ರ ಹಣಕಾಸು ವರ್ಷದಲ್ಲಿ ಆರ್​ಬಿಐ (RBI) ಸೇರಿದಂತೆ ಬಹುತೇಕ ಎಲ್ಲಾ ಸಂಸ್ಥೆಗಳು ಅಂದಾಜು ಮಾಡಿದ್ದಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಆರ್ಥಿಕತೆ ಬೆಳವಣಿಗೆ ಸಾಧಿಸಿದೆ. ವಿವಿಧ ಆರ್ಥಿಕ ತಜ್ಞರು, ವಿದೇಶದಲ್ಲಿರುವ ರೇಟಿಂಗ್‌ ಸಂಸ್ಥೆಗಳು ಜಿಡಿಪಿ ದರ 7.5% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದ್ದವು. ಐಎಂಎಫ್ 6.8% ರಷ್ಟು ಮಾತ್ರ ಜಿಡಿಪಿ ದಾಖಲಿಸಬಹುದು ಎಂದು ಅಂದಾಸಿಜಿತ್ತು. ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾವಾಗಿದ್ದು ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿಯಾಗಿದೆ.

    ಯಾವ ವರ್ಷ ಎಷ್ಟಿತ್ತು?
    2012-13 : 5.5%
    2013-14 : 6.4%
    2016-17 : 8.3%
    2020-21 : -5.8%
    2021-22 : 9.7%
    2022-23 : 7.0%
    2023-24 : 8.2%

    ಜಿಡಿಪಿ ಎಂದರೇನು?
    ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಎಂದರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್‌ ಎಸ್ಟೇಟ್‌, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.

  • ನಿರೀಕ್ಷೆಗೂ ಮೀರಿ ಜಿಡಿಪಿ ಅಭಿವೃದ್ಧಿ – 4ನೇ ತ್ರೈಮಾಸಿಕದಲ್ಲಿ 7.8% , 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ

    ನಿರೀಕ್ಷೆಗೂ ಮೀರಿ ಜಿಡಿಪಿ ಅಭಿವೃದ್ಧಿ – 4ನೇ ತ್ರೈಮಾಸಿಕದಲ್ಲಿ 7.8% , 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ

    ನವದೆಹಲಿ: ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದ್ದು ಜನವರಿ- ಮಾರ್ಚ್‌ ತ್ರೈಮಾಸಿಕದಲ್ಲಿ 7.8% ರಷ್ಟು ಜಿಡಿಪಿ (GDP) ಬೆಳವಣಿಗೆ ಸಾಧಿಸಿದ್ದು, 2023-24ರ ಹಣಕಾಸು ವರ್ಷದಲ್ಲಿ 8.2% ಪ್ರಗತಿ ಸಾಧಿಸಿದೆ.

    2023-24ರ ಹಣಕಾಸು ವರ್ಷದಲ್ಲಿ ಆರ್​ಬಿಐ (RBI) ಸೇರಿದಂತೆ ಬಹುತೇಕ ಎಲ್ಲಾ ಸಂಸ್ಥೆಗಳು ಅಂದಾಜು ಮಾಡಿದ್ದಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಆರ್ಥಿಕತೆ ಬೆಳವಣಿಗೆ ಸಾಧಿಸಿದೆ. ಇದನ್ನೂ ಓದಿ: ಆರ್‌ಬಿಐನಿಂದ ಸಾಧನೆ – ಯುಕೆಯಿಂದ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ!

    ವಿವಿಧ ಆರ್ಥಿಕ ತಜ್ಞರು, ವಿದೇಶದಲ್ಲಿರುವ ರೇಟಿಂಗ್‌ ಸಂಸ್ಥೆಗಳು ಜಿಡಿಪಿ ದರ 7.5% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದ್ದವು. ಐಎಂಎಫ್ 6.8% ರಷ್ಟು ಮಾತ್ರ ಜಿಡಿಪಿ ದಾಖಲಿಸಬಹುದು ಎಂದು ಅಂದಾಸಿಜಿತ್ತು. ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾವಾಗಿದ್ದು ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿಯಾಗಿದೆ. ಇದನ್ನೂ ಓದಿ : Exit Polls ಚರ್ಚೆಗಳಲ್ಲಿ ಭಾಗವಹಿಸಲ್ಲ: ಕಾಂಗ್ರೆಸ್‌ ಅಧಿಕೃತ ಪ್ರಕಟಣೆ

    ಯಾವ ವರ್ಷ ಎಷ್ಟಿತ್ತು?
    2012-13 : 5.5%
    2013-14 : 6.4%
    2016-17 : 8.3%
    2020-21 : -5.8%
    2021-22 : 9.7%
    2022-23 : 7.0%
    2023-24 : 8.2%

     

    ಜಿಡಿಪಿ ಎಂದರೇನು?
    ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್‌ ಎಸ್ಟೇಟ್‌, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.

  • ನಿರೀಕ್ಷೆಗೂ ಮೀರಿ ಜಿಡಿಪಿ ಅಭಿವೃದ್ಧಿ – 3ನೇ ತ್ರೈಮಾಸಿಕದಲ್ಲಿ 8.4% ಪ್ರಗತಿ

    ನಿರೀಕ್ಷೆಗೂ ಮೀರಿ ಜಿಡಿಪಿ ಅಭಿವೃದ್ಧಿ – 3ನೇ ತ್ರೈಮಾಸಿಕದಲ್ಲಿ 8.4% ಪ್ರಗತಿ

    ನವದೆಹಲಿ: ಅಕ್ಟೋಬರ್‌- ಡಿಸೆಂಬರ್‌ ಅವಧಿಯ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ (Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದೆ.

    ಈ ಅವಧಿಯಲ್ಲಿ ಹಲವು ಸಂಸ್ಥೆಗಳು ಜಿಡಿಪಿ (GDP) 6.6% ರಷ್ಟು ಪ್ರಗತಿ ಸಾಧಿಸಬಹುದು ಎಂದು ಅಂದಾಜು ಮಾಡಿದ್ದವು.  ಆದರೆ ಈ ನಿರೀಕ್ಷೆಗೂ ಮೀರಿ ಜಿಡಿಪಿ 8.4% ರಷ್ಟು ಪ್ರಗತಿ ಸಾಧಿಸಿದೆ.

    ಕಳೆದ ಹಣಕಾಸು ವರ್ಷದ ಈ ಅವಧಿಯಲ್ಲಿ 4.3% ಜಿಡಿಪಿ ಪ್ರಗತಿ ಸಾಧಿಸಿತ್ತು. ನಿರ್ಮಾಣ ವಲಯದ (10.7%), ಉತ್ಪಾದನಾ ವಲಯ (8.5%), ಫೈನಾನ್ಸ್‌, ರಿಯಲ್‌ ಎಸ್ಟೇಟ್‌ ಇತ್ಯಾದಿ ಕ್ಷೇತ್ರ(8.2%) ಬೆಳವಣಿಗೆ ಸಾಧಿಸಿದೆ. ಆದರೆ ದೇಶದಲ್ಲಿ ಬರದಿಂದಾಗಿ ಕೃಷಿ ಕ್ಷೇತ್ರದಲ್ಲಿ ಮಾತ್ರ 0.7% ಬೆಳವಣಿಗೆಯಾಗಿರುವುದು ಕಳವಳಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಪಾಕಿಸ್ತಾನ ಮತ್ತು ಕಾಂಗ್ರೆಸ್ ಸ್ಥಿತಿ ಒಂದೇ ರೀತಿಯಾಗಿದೆ: ಜೋಶಿ

    2023-24ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ದರಗಳಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದು 2022-23 ರ ಮೂರನೇ ತ್ರೈಮಾಸಿಕದಲ್ಲಿ 40.35 ಲಕ್ಷ ಕೋಟಿ ರೂ ಆಗಿತ್ತು.

    ಮೂರನೇ ತ್ರೈಮಾಸಿಕದಲ್ಲಿ 8.4% ಜಿಡಿಪಿ ಬೆಳವಣಿಗೆಯು ದೃಢವಾದ ಭಾರತೀಯ ಆರ್ಥಿಕತೆಯ ಶಕ್ತಿ ಮತ್ತು ಅದರ ಸಾಮರ್ಥ್ಯವನ್ನು ತೋರಿಸುತ್ತದೆ. ವೇಗದ ಆರ್ಥಿಕ ಬೆಳವಣಿಗೆಯನ್ನು ಕಾಣಲು ನಮ್ಮ ಪ್ರಯತ್ನಗಳು ಮುಂದುವರಿಯಲಿದೆ. ಇದು 140 ಕೋಟಿ ಭಾರತೀಯರಿಗೆ ಉತ್ತಮ ಜೀವನವನ್ನು ನಡೆಸಲು ಮತ್ತು ವಿಕಸಿತ್​ ಭಾರತವನ್ನು ರಚಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM NarendraModi) ಹೇಳಿದ್ದಾರೆ. ಇದನ್ನೂ ಓದಿ: ಮರಿ ಖರ್ಗೆ ಪುಕ್ಕಲ, ಸ್ವಂತ ಕ್ಷೇತ್ರದಲ್ಲಿ ಸತ್ಯವನ್ನು ಎದುರಿಸುವ ಧೈರ್ಯವಿಲ್ಲ: ಸೂಲಿಬೆಲೆ ಕಿಡಿ

    ಜಿಡಿಪಿ ಎಂದರೇನು?
    ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್‌ ಎಸ್ಟೇಟ್‌, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.

     

  • ನಿರೀಕ್ಷೆಗೂ ಮೀರಿ ವೃದ್ಧಿ – ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದ ಭಾರತ – ಯಾವ ದೇಶದ್ದು ಎಷ್ಟು?

    ನಿರೀಕ್ಷೆಗೂ ಮೀರಿ ವೃದ್ಧಿ – ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದ ಭಾರತ – ಯಾವ ದೇಶದ್ದು ಎಷ್ಟು?

    ನವದೆಹಲಿ: ಜುಲೈ- ಸೆಪ್ಟೆಂಬರ್ ಅವಧಿಯ ಎರಡನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ(Indian Economy) ನಿರೀಕ್ಷೆಗೂ ಮೀರಿ ವೃದ್ಧಿಯಾಗಿದೆ.

    ಈ ಅವಧಿಯಲ್ಲಿ ಹಲವು ಸಂಸ್ಥೆಗಳು ಜಿಡಿಪಿ (GDP) 6.8% ರಷ್ಟು ಪ್ರಗತಿ ಸಾಧಿಸಬಹುದು ಎಂದು ಅಂದಾಜು ಮಾಡಿತ್ತು. ಆರ್‌ಬಿಐ (RBI) 6.5% ಅಭಿವೃದ್ಧಿ ಸಾಧಿಸಬಹುದು ಎಂದು ನಿರೀಕ್ಷೆ ಮಾಡಿತ್ತು.ಆದರೆ ಈ ನಿರೀಕ್ಷೆಗೂ ಮೀರಿ ಜಿಡಿಪಿ 7.6% ರಷ್ಟು ಪ್ರಗತಿ ಸಾಧಿಸಿದೆ.

    ಎರಡನೇ ತ್ರೈಮಾಸಿಕದಲ್ಲಿ ಈ ಸಾಧನೆ ಮಾಡುವ ಮೂಲಕ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಲ್ಲಿ (World Fastest Economic Growth) ಮೊದಲ ಸ್ಥಾನದಲ್ಲೇ ಭಾರತ ಮುಂದುವರಿದಿದೆ.

    ಉತ್ಪದನಾ ವಲಯ (13.9%), ನಿರ್ಮಾಣ(13.3%), ಗಣಿಗಾರಿಕೆ(10.0%) ಕ್ಷೇತ್ರದ ಬೆಳವಣಿಗೆಯಿಂದ ಜಿಡಿಪಿ ದರ ವೃದ್ಧಿಯಾಗಿದೆ. ಮೊದಲ ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ಕೃಷಿ (1.2%), ಹೋಟೆಲ್‌, ಸಾರಿಗೆ, ಸಂವಹನ (4.3%), ಫೈನಾನ್ಸ್‌, ರಿಯಲ್‌ ಎಸ್ಟೇಟ್‌(6.0%) ಬೆಳವಣಿಗೆ ಕಡಿಮೆಯಾಗಿದೆ.

    2022-23ರ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ 6.2% ಜಿಡಿಪಿ ಬೆಳವಣಿಗೆ ಸಾಧಿಸಿದ್ದರೆ ಈ ಹಣಕಾಸು ವರ್ಷದ ಏಪ್ರಿಲ್‌-ಜೂನ್‌ ಅವಧಿಯ ಮೊದಲ ತ್ರೈಮಾಸಿಕದಲ್ಲಿ 7.8% ರಷ್ಟು ಬೆಳವಣಿಗೆ ಸಾಧಿಸಿತ್ತು. ಇದನ್ನೂ ಓದಿ: ಜಪಾನ್‌ ಹಿಂದಿಕ್ಕಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗುತ್ತಾ ಭಾರತ?

    ಯಾವ ದೇಶದ್ದು ಎಷ್ಟು?
    ಜುಲೈ-ಸೆಪ್ಟೆಂಬರ್‌ ಅವಧಿಯಲ್ಲಿ ಭಾರತ 7.6%, ಫಿಲಿಪೈನ್ಸ್ 5.9%, ರಷ್ಯಾ 5.5%, ಅಮೆರಿಕ 5.2%, ಚೀನಾ 4.9%, ಯುಕೆ 0.6%, ಜರ್ಮನಿ -0.4%, ಜಪಾನ್‌ -2.1% ಜಿಡಿಪಿ ಪ್ರಗತಿ ಸಾಧಿಸಿದೆ.

    ಜಿಡಿಪಿ ಎಂದರೇನು?
    ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪದನೆಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ಮೌಲ್ಯ. ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಗಣಿಗಾರಿಕೆ, ರಿಯಲ್‌ ಎಸ್ಟೇಟ್‌, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಎಂದು ಲೆಕ್ಕ ಹಾಕಲಾಗುತ್ತದೆ.

  • 2023ರ ಜಿಡಿಪಿ ದರ: ಚೀನಾಗೆ ಮತ್ತೆ ಶಾಕ್‌-ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಭಾರತ

    2023ರ ಜಿಡಿಪಿ ದರ: ಚೀನಾಗೆ ಮತ್ತೆ ಶಾಕ್‌-ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಭಾರತ

    ನವದೆಹಲಿ: ಹಲವು ಅಂತಾರಾಷ್ಟ್ರೀಯ ಅನಿಶ್ಚಿತೆಗಳ ಮಧ್ಯೆಯೂ 2023-24ರ ಹಣಕಾಸು ವರ್ಷದ ಒಟ್ಟು ರಾಷ್ಟ್ರೀಯ ಉತ್ಪನ್ನದಲ್ಲಿ (GDP) ಭಾರತ (India) ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಹೇಳಿದೆ.

    ಐಎಂಎಫ್‌ ಮಂಗಳವಾರ ಜಿಡಿಪಿ ಮುನ್ನೋಟವನ್ನು ಬಿಡುಗಡೆ ಮಾಡಿದೆ. 2023ರಲ್ಲಿ ಭಾರತದ ಜಿಡಿಪಿ ದರ 6.3% ಇದ್ದರೆ 2024ರಲ್ಲಿ 6.3% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದೆ. ಈ ಹಿಂದೆ 2023-24ರ ಹಣಕಾಸು ವರ್ಷದಲ್ಲಿ ಭಾರತ 6.1% ಜಿಡಿಪಿ ದಾಖಲಿಸಬಹುದು ಎಂದಿದ್ದ ಐಎಂಎಫ್‌ ಈಗ 20 ಬೇಸಿಸ್‌ ಪಾಯಿಂಟ್‌  ಏರಿಕೆ ಮಾಡಿ ವರದಿ ಬಿಡುಗಡೆ ಮಾಡಿದೆ.

    ಭಾರತದ ಆರ್‌ಬಿಐ ಈ ಹಣಕಾಸು ವರ್ಷದಲ್ಲಿ 6.5% ಜಿಡಿಪಿ ದಾಖಲಿಸಬಹುದು ಎಂದು ಅಂದಾಜಿಸಿದೆ.  ಇದನ್ನೂ ಓದಿ: ಮೂರನೇ ಅತಿದೊಡ್ಡ ಆರ್ಥಿಕತೆಯಾಗುತ್ತಾ ಭಾರತ?

    ಇದೇ ಜಿಡಿಪಿ ಪ್ರಗತಿಯನ್ನು ಕಾಯ್ದುಕೊಂಡರೆ 2026ರಲ್ಲಿ ಜಪಾನ್‌, 2027ರಲ್ಲಿ ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಬಹುದು ಎಂದು ಐಎಂಫ್‌ ಭವಿಷ್ಯ ನುಡಿದಿದೆ.

    2021ರ ಹಣಕಾಸು ವರ್ಷದ ಕೊನೆಯ ಮೂರು ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯಿಂದಾಗಿ ಭಾರತ ಯುಕೆಯನ್ನು ಹಿಂದಿಕ್ಕಿ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರ ಹೊಮ್ಮಿತ್ತು.

    ಚೀನಾದ ಜಿಡಿಪಿ ಬೆಳವಣಿಗೆ ದರವನ್ನು ಐಎಂಫ್‌ ಇಳಿಕೆ ಮಾಡಿದೆ. ಈ ಹಿಂದೆ 5.2% ಎಂದಿದ್ದ ಐಎಂಫ್‌ ಈಗ ದರವನ್ನು 5% ಇಳಿಸಿದೆ. ರಿಯಲ್‌ ಎಸ್ಟೇಟ್‌ ಕುಸಿತಗೊಂಡ ಹಿನ್ನೆಲೆಯಲ್ಲಿ ದರವನ್ನು ಇಳಿಕೆ ಮಾಡಿದೆ. 2024ರಲ್ಲಿ 4.2% ಜಿಡಿಪಿ ದಾಖಲಿಸಬಹುದು ಎಂದು ಹೇಳಿದೆ.

    2023ರಲ್ಲಿ ಯಾವ ದೇಶದ ಜಿಡಿಪಿ ಎಷ್ಟು?
    ಅಮೆರಿಕ 3%, ಜರ್ಮನಿ -0.5%, ಫ್ರಾನ್ಸ್‌ 1.0% ಜಪಾನ್‌ 2.0%, ಕೆನಡಾ 1.3% ಬ್ರೆಜಿಲ್‌ 3.1% ಜಿಡಿಪಿ ಪ್ರಗತಿ ಸಾಧಿಸಲಿದೆ ಎಂದು ಐಎಂಎಫ್‌ ಅಂದಾಜಿಸಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದ ಭಾರತ – ಯಾವ ದೇಶದ್ದು ಎಷ್ಟು?

    ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದ ಭಾರತ – ಯಾವ ದೇಶದ್ದು ಎಷ್ಟು?

    ನವದೆಹಲಿ: ಏಪ್ರಿಲ್-ಜೂನ್ ಮೊದಲ ತ್ರೈಮಾಸಿಕದಲ್ಲಿ ಭಾರತ (India) 7.8% ರಷ್ಟು ಬೆಳವಣಿಗೆ ದಾಖಲಿಸುವ ಮೂಲಕ ಈ ಬಾರಿಯೂ ಚೀನಾವನ್ನು (China) ಹಿಂದಿಕ್ಕಿದೆ.

    ಕೃಷಿ, ರಿಯಲ್‌ ಎಸ್ಟೇಟ್‌ ಮತ್ತು ಹಣಕಾಸು ಕ್ಷೇತ್ರಗಳಲ್ಲಿ ಉತ್ತಮ ಬೆಳವಣಿಗೆ ಸಾಧಿಸಿದ ಪರಿಣಾಮ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಲ್ಲಿ (World Fastest Economic Growth) ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಇದನ್ನೂ ಓದಿ: ಗೃಹಬಳಕೆಯ ಬೆನ್ನಲ್ಲೇ ವಾಣಿಜ್ಯ ಬಳಕೆಯ LPG ಬೆಲೆ 158 ರೂ. ಇಳಿಕೆ

    2022-23ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ13.1% ಜಿಡಿಪಿ (GDP) ದಾಖಲಾಗಿತ್ತು. ಇದಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. 2023ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ 6.1% ರಷ್ಟು ಜಿಡಿಪಿ ದಾಖಲಾಗಿತ್ತು. ಹಣಕಾಸು, ರಿಯಲ್ ಎಸ್ಟೇಟ್ ವಲಯ 12.2% ಬೆಳವಣಿಗೆ ಸಾಧಿಸಿದೆ. ಕೃಷಿ 3.5%, ಉತ್ಪಾದನಾ ವಲಯ 4.7%, ನಿರ್ಮಾಣ 7.9%, ವ್ಯಾಪಾರ ಕ್ಷೇತ್ರ 9.2% ಬೆಳವಣಿಗೆಯಾಗಿದೆ.  ಇದನ್ನೂ ಓದಿ: ಜಪಾನ್‌ ಹಿಂದಿಕ್ಕಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗುತ್ತಾ ಭಾರತ?

    ಯಾವ ದೇಶದ್ದು ಎಷ್ಟು?
    ಏಪ್ರಿಲ್‌-ಜೂನ್‌ ಅವಧಿಯಲ್ಲಿ ಭಾರತ 7.8%, ಚೀನಾ 6.3%, ಇಂಡೋನೇಷ್ಯಾ 5.17%, ರಷ್ಯಾ 4.9%, ಅಮೆರಿಕ 2.1%, ಜಪಾನ್‌ 2%, ದಕ್ಷಿಣ ಕೊರಿಯಾ 0.9%, ಯುಕೆ 0.4%, ಜರ್ಮನಿ -0.2%, ನೆದರ್‌ಲ್ಯಾಂಡ್‌ -0.3% ಜಿಡಿಪಿ ದಾಖಲಿಸಿದೆ.

    ಜಿಡಿಪಿ ಎಂದರೇನು?
    ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪತ್ತಿಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ವಾಲ್ಯುಯೇಶನ್. ಅಂದ್ರೆ ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಅಂತ ಲೆಕ್ಕ ಹಾಕಲಾಗುತ್ತದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • India GDP – ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ

    India GDP – ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ

    ನವದೆಹಲಿ: ಅಂತಾರಾಷ್ಟ್ರೀಯ ಪ್ರತಿಕೂಲತೆಗಳ ನಡುವೆಯೂ 2022-23ರ ಹಣಕಾಸು ವರ್ಷದಲ್ಲಿ ದೇಶದ ಆಂತರಿಕ ಉತ್ಪನ್ನ (GDP) ದರ 7.2% ರಷ್ಟು ದಾಖಲಾಗಿದೆ. ಈ ಮೂಲಕ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತ (India) ಹೊರಹೊಮ್ಮಿದ್ದು ಒಂದನೇ ಸ್ಥಾನದಲ್ಲೇ ಮುಂದುವರಿದಿದೆ.

    ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ಬುಧವಾರ ಜಿಡಿಪಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. 2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ ದರ 6.5% ರಷ್ಟು ದಾಖಲಾಗಬಹುದು  ಎಂದು ಅಂದಾಜಿಸಿದೆ. 2021-22ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ದರ 8.7% ರಷ್ಟು ದಾಖಲಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್‌ನ ಗ್ಯಾರಂಟಿಗಳು ದೇಶವನ್ನು ದಿವಾಳಿಗೆ ತಳ್ಳಬಹುದು: ಮೋದಿ ಎಚ್ಚರಿಕೆ

    ಜಾಗತಿಕ ಆರ್ಥಿಕ ಹಿಂಜರಿತ, ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳ ಪರಿಸ್ಥಿತಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಂಡುಬರುವ ಏರಿಳಿತಗಳು ದೇಶದ ಬೆಳವಣಿಗೆ ದರದ ಮೇಲೆ ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿದೆ.

    ಯಾವ ತ್ರೈಮಾಸಿಕದಲ್ಲಿ ಎಷ್ಟು?
    Q1 – 13.5% (ಏಪ್ರಿಲ್‌-ಜೂನ್‌, 2022)
    Q2 – 6.3% (ಜುಲೈ- ಸೆಪ್ಟೆಂಬರ್‌, 2022)
    Q3 – 4.4% (ಅಕ್ಟೋಬರ್‌-ನವೆಂಬರ್‌, 2022)
    Q4 – 6.1% (ಜನವರಿ- ಮಾರ್ಚ್‌, 2023)

     
    ಯಾವ ದೇಶದ ಜಿಡಿಪಿ ಎಷ್ಟು?
    ಭಾರತ – 7.2%
    ಇಂಡೋನೇಷ್ಯಾ – 5.3%
    ಯುಕೆ – 4.1%
    ಮೆಕ್ಸಿಕೋ -3.1%
    ಚೀನಾ – 3%
    ಫ್ರಾನ್ಸ್‌ – 2.6%
    ಅಮೆರಿಕ – 2.1%

    2021-22 ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ದರ 8.7% ದಾಖಲಾಗಿದ್ದರೆ ಚೀನಾ 8.1%, ಯುಕೆ 7.4% ರಷ್ಟು ದಾಖಲಾಗಿತ್ತು.