Tag: Geeta Bharti Bhatt

  • ‘ರವಿಕೆ ಪ್ರಸಂಗ’ಕ್ಕೆ ಸೆನ್ಸಾರ್: ಫೆಬ್ರವರಿ 16ಕ್ಕೆ ರಿಲೀಸ್

    ‘ರವಿಕೆ ಪ್ರಸಂಗ’ಕ್ಕೆ ಸೆನ್ಸಾರ್: ಫೆಬ್ರವರಿ 16ಕ್ಕೆ ರಿಲೀಸ್

    ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ (Santhosh Kodenkeri) ನಿರ್ದೇಶನದ ರವಿಕೆ ಪ್ರಸಂಗ (Ravike Prasanga) ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ. ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

    ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ  ‘ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸ‌ರ್ ಮತ್ತು ಟ್ರೈಲರ್  ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ ಅಂದರೆ ಬ್ಲೌಸನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ ಕಥಾ ಹಂದರದಿಂದ ಹಾಸ್ಯಭರಿತ ಉತ್ತಮ ಸಂದೇಶವನ್ನು ಸಮಾಜಕ್ಕೆ ತಿಳಿಸುವ ಪ್ರಯತ್ನವನ್ನು ನಿರ್ದೇಶಕರು ರವಿಕೆ ಪ್ರಸಂಗ ಸಿನಿಮಾದಲ್ಲಿ ಮಾಡಿದ್ದಾರೆ.

    ‘ದೃಷ್ಟಿ ಮೀಡಿಯಾ’ ಪ್ರೊಡಕ್ಷನ್‌ ನಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದ ರವಿಕೆ ಸಾಂಗ್ ಅನ್ನು ಚೈತ್ರಾ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ಮನಸಲಿ ಜೋರು ಕಲರವ ಹಾಡನ್ನು ಮಾನಸ ಹೊಳ್ಳ, ಮತ್ತು ಹಸಿಮನಸಲಿ ಹಾಡನ್ನು ಜೋಗಿ ಸುನೀತಾ ಹಾಡಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಗೀತಾ ಭಾರತಿ ಭಟ್ (Geeta Bharti Bhatt)ಉತ್ತಮ ಅಭಿನಯದೊಂದಿಗೆ ಹಾಡಿಗೆ ಸಖತ್ ಸ್ಟೆಪ್ ಹಾಕಿ ಡ್ಯಾನ್ಸ್ ಮಾಡಿದ್ದಾರೆ.

    ರವಿಕೆ ಪ್ರಸಂಗ ಸಿನಿಮಾವನ್ನು ಮಾಷ್೯ ಡಿಸ್ಟ್ರಿಬ್ಯುಟರ್ಸ್ ಸಂಸ್ಥೆ ವಿಶಾಲ ಕರ್ನಾಟಕದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ ವಿದೇಶದಲ್ಲೂ ಸಿನಿಮಾ ಬಿಡುಗಡೆಗೊಳ್ಳಲಿದೆ. ಕುಟುಂಬ ಸಮೇತ ನೋಡಬೇಕಾದ ಸಿನಿಮಾ ಇದಾಗಿದೆ. ಪ್ರತಿಯೊಬ್ಬ ಮಹಿಳೆಯರ ಜೀವನದಲ್ಲಿ ನಡೆಯುವಂತಹ ಕತೆಯನ್ನು ಈ ಸಿನಿಮಾ ಹೊಂದಿದೆ.

     

    ಈ ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದಾರೆ. ಸಾಮಾನ್ಯವಾಗಿ ಸೀರೆ ಅಂದರೆ ಹೆಣ್ಣುಮಕ್ಕಳಿಗೆ ಬಹಳ ಇಷ್ಟ ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ ಸುಂದರವಾಗಿ ಬ್ಲೌಸ್ ಇರಬೇಕು. ಸಾವಿರಾರೂ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಒಂದು ಸಮಾರಂಭಕ್ಕೆ ಇಂಥದ್ದೇ ಸೀರೆ ಹೀಗೆ ಇರಬೇಕು ಅಂತ ಆಸೆಯಿಂದ ಒಳ್ಳೆಯ ಟೇಲರ್‌ ಹತ್ತಿರ ರವಿಕೆ ಹೊಲಿಸುತ್ತಾರೆ. ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರಲ್ಲ. ಏನೋ ಒಂದು ಸರಿಯಾಗಿರಲ್ಲ. ಇಂಥದ್ದೇ ಸರಿಹೊಂದದ ರವಿಕೆಯ ರಗಳೆಯ ಕಾಮಿಡಿ ಕಥೆ ‘ರವಿಕೆ ಪ್ರಸಂಗ’. ಚಿತ್ರದಲ್ಲಿ ಒಂದು ರವಿಕೆಯಿಂದ ನಾಯಕಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಚಿತ್ರದಲ್ಲಿ ಮಂಗಳೂರು ಕನ್ನಡ ಶೈಲಿ ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ.  ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಬಹಳ ಕುತೂಹಲವಿದೆ. ಫೆಬ್ರವರಿ 16 ರಂದು ರವಿಕೆಪ್ರಸಂಗ ರಾಜ್ಯಾದ್ಯಂತ ತೆರೆಕಾಣಲಿದೆ.

  • ‘ರವಿಕೆ ಪ್ರಸಂಗ’ ಹಾಡು ರಿಲೀಸ್ ಮಾಡಿದ ಗುರುಕಿರಣ್

    ‘ರವಿಕೆ ಪ್ರಸಂಗ’ ಹಾಡು ರಿಲೀಸ್ ಮಾಡಿದ ಗುರುಕಿರಣ್

    ಮೆಲೋಡಿ ಹಾಡುಗಳು ಎಂದಿಗೂ ಜನರ‌ ಜೀವನದ ಅವಿಭಾಜ್ಯ ಅಂಗವಾಗಿರುತ್ತವೆ. ಎಲ್ಲಾ ಕಾಲದಲ್ಲೂ ಎಲ್ಲರನ್ನೂ ಆಕರ್ಷಿಸುವ ಹಲವಾರು ಮೆಲೋಡಿ ಹಾಡುಗಳ ಗುಂಪಿಗೆ ‘ರವಿಕೆ ಪ್ರಸಂಗ’ (Ravike Parsanga) ಚಿತ್ರದ  ಮನಸಲಿ ಜೋರು ಕಲರವ ಎಂಬ ಅದ್ಭುತವಾದ  ಹಾಡು ಸೇರಿಕೊಂಡಿದೆ. ಈ ಮೆಲೋಡಿ ಹಾಡನ್ನು ನೂರಾರು ಎವರ್ ಗ್ರೀನ್ ಸೂಪರ್ ಹಿಟ್ ಮೆಲೋಡಿ ಹಾಡುಗಳನ್ನು ನೀಡಿರುವ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಬಿಡುಗಡೆ‌ ಮಾಡಿದ್ದಾರೆ.

    ಈ ವರ್ಷದ ಅತ್ಯುತ್ತಮ ಮೆಲೋಡಿ ಹಾಡುಗಳ (Song) ಪಟ್ಟಿಯಲ್ಲಿ ಅಗ್ರಸ್ಥಾನ‌ ಪಡೆಯುವ ಎಲ್ಲಾ ಅಂಶಗಳನ್ನು ಹೊಂದಿರುವ ಈ ಹಾಡಿಗೆ ಕಿರಣ್ ಕಾವೇರಪ್ಪ ಅವರ ಸಾಹಿತ್ಯ, ಮಾನಸ ಹೊಳ್ಳ ಅವರ ಮಧುರವಾದ ಧ್ವನಿ ಹಾಗೂ ವಿನಯ್ ಶರ್ಮಾ ಅವರ ಇಂಪಾದ ಸಂಗೀತ ಇದೆ.

    ಸಂತೋಷ್ ಕೊಡಂಕೇರಿ ಅವರ ಚಿತ್ರಕಥೆ-ನಿರ್ದೇಶನದಲ್ಲಿ, ಪಾವನ ಸಂತೋಷ್ ಅವರ ಕಥೆ-ಸಂಭಾಷಣೆ ಇರುವ ಈ ಚಿತ್ರವನ್ನು ದೃಷ್ಟಿ ಮೀಡಿಯಾ & ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿಲಾಗಿದೆ. ಚಿತ್ರದ ಎಲ್ಲಾ ಕೆಲಸಗಳು ಮುಕ್ತಾಯವಾಗಿದ್ದು ಬಿಡುಗಡೆಯ ಹೊಸ್ತಿಲಲ್ಲಿ ಜನರನ್ನು ರಂಜಿಸಲಿದೆ.

    ಗೀತಾ ಭಾರತಿ ಭಟ್ (Geeta Bharti Bhatt), ಸುಮನ್ ರಂಗನಾಥ್, ರಾಕೇಶ್ ಮಯ್ಯ, ಸಂಪತ್ ಮೈತ್ರೇಯ, ಕೃಷ್ಣಮೂರ್ತಿ ಕವತಾರ್, ಪದ್ಮಜಾ ರಾವ್, ರಘು ಪಾಂಡೇಶ್ವರ್, ಪ್ರವೀಣ್ ಅಥರ್ವ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಹೋಮ್ ಸ್ಟೇ ನಿರ್ದೇಶಕನ ಹೊಸ ಚಿತ್ರದಲ್ಲಿ ಗೀತಾ ಭಾರತಿ ಭಟ್ ನಟನೆ

    ಹೋಮ್ ಸ್ಟೇ ನಿರ್ದೇಶಕನ ಹೊಸ ಚಿತ್ರದಲ್ಲಿ ಗೀತಾ ಭಾರತಿ ಭಟ್ ನಟನೆ

    ಹೋಮ್  ಸ್ಟೇ ಚಿತ್ರದ ಖ್ಯಾತಿಯ ಸಂತೋಷ್ ಕೊಡಂಕೇರಿ (Santhosh Kodankeri)  ನಿರ್ದೇಶಿಸುತ್ತಿರುವ ಇನ್ನೂ ಹೆಸರಿಡದ “ಪ್ರೊಡಕ್ಷನ್ ನಂ 02” ನೂತನ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಸುಳ್ಯದ ಶ್ರೀ ಚನ್ನಕೇಶವ  ದೇವಸ್ಥಾನದಲ್ಲಿ ಜರುಗಿತು. ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ  ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದರು.

    ತೂಗು ಸೇತುವೆಗಳ ಸರದಾರ ಪದ್ಮಶ್ರೀ ಶ್ರೀ ಗಿರೀಶ್ ಭಾರಧ್ವಾಜ್ ರವರು, ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಲಯನ್ಸ್ ಕ್ಲಬ್ ಜಿಲ್ಲಾ ಮಾಜಿ ಗವರ್ನರ್ ಹಾಗೂ ಜೆಡಿಎಸ್ ರಾಜ್ಯ ಸಂಚಾಲಕ ಎಂ.ಬಿ. ಸದಾಶಿವ, ಶ್ರೀಚನ್ನಕೇಶವ ದೇವಳದ ಆಡಳಿತ ಮೊಕೇಸ್ತರ ಡಾ. ಹರಪ್ರಸಾದ್ ತುದಿಯಡ್ಕ, ನ.ಪಂ. ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಹಾಗೂ ಇನ್ನಿತರ ಸ್ಥಳೀಯ ಮುಖಂಡರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಇದನ್ನೂ ಓದಿ:ರಾಕೇಶ್‌ಗಾಗಿ ಬಿಗ್ ಬಾಸ್ ಮನೆನಾ ಎರಡು ಮನೆ ಮಾಡಬೇಕಾ: ಸೋನು ವಿರುದ್ಧ ಗುರೂಜಿ ಗರಂ

    ಗೀತಾ ಭಾರತಿ ಭಟ್ (Geeta Bharati Bhatt), ಪದ್ಮಜಾ ರಾವ್, ಕೃಷ್ಣಮೂರ್ತಿ ಕವತಾರ್, ಸಂಪತ್ ಮೈತ್ರೇಯ, ರಘು ಪಾಂಡೇಶ್ವರ್, ಖುಷಿ ಆಚಾರ್, ಮೀನ ಹಾಗೂ ದರ್ಶಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪಾವನಾ ಸಂತೋಷ್  ಕಥೆ ಮತ್ತು ಸಂಭಾಷಣೆ ಬರೆದಿದ್ದು, ಸಂತೋಷ್ ಕೊಡಂಕೇರಿ ಚಿತ್ರಕಥೆ ಬರೆದು  ನಿರ್ದೇಶನ ಮಾಡುತ್ತಿದ್ದಾರೆ. ಮುರಳಿಧರ್. ಎಂ ಛಾಯಾಗ್ರಹಣ, ವಿನಯ್ ಶರ್ಮಾ ಸಂಗೀತ ನಿರ್ದೇಶನ,  ರಘು ಎಸ್. ಸಂಕಲನ, ಕಿರಣ್ ಕಾವೇರಪ್ಪ ಗೀತರಚನೆ ಹಾಗೂ  ಪ್ರಸನ್ನ – ಕಲ್ಯಾಣ್ ರೆಡ್ಡಿ ಅವರ ಸಹ ನಿರ್ದೇಶನ ಈ ಚಿತ್ರಕ್ಕಿದೆ. ಈ ಚಲನಚಿತ್ರವು ದಕ್ಷಿಣ ಕನ್ನಡದ ಸೊಗಡು, ಭಾಷೆ, ಸಂಸ್ಕೃತಿ ಹೊಂದಿದ್ದು, ದಕ್ಷಿಣ ಕನ್ನಡದ ಸುಳ್ಯ, ಸಂಪಾಜೆ, ತೋಡಿಕಾನ ಆಸುಪಾಸಿನಲ್ಲಿ 30 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ‌ ಎಂದು ನಿರ್ದೇಶಕರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]