Tag: Geetha Shivraj Kumar

  • ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು?: ಶಿವರಾಜಕುಮಾರ್

    ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು?: ಶಿವರಾಜಕುಮಾರ್

    ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು?,ನಾನು ಅವರ ಮನೆಯ ಅಳಿಯ ಅಷ್ಟೇ, ಮಗನಲ್ಲ ಎಂದು ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ್ ಹೇಳಿದರು. ನಗರದಲ್ಲಿ ಪತ್ನಿಗೆ ಗೀತಾ ಶಿವರಾಜಕುಮಾರ್ (Shivaraj Kumar)ಗೆ ಟಿಕೆಟ್ ಘೋಷಣೆ ವಿಚಾರಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆ ಚುನಾವಣೆ ಸಿದ್ಧತೆ ನಡೆಯುತ್ತಿದೆ.ಯಾವಾಗಿಂದ ಚುನಾವಣಾ ಪ್ರಚಾರಕ್ಕೆ ಹೋಗಬೇಕು ಅನ್ನೋದು ತೀರ್ಮಾನ ಆಗಿಲ್ಲ.ಯಾವಾಗ ಹೋಗಬೇಕು ಅವಾಗ ಹೋಗ್ತೇನಿಈ ಬಾರಿ ಪೂರ್ತಿ ಚುನಾವಣೆಯಲ್ಲಿ ತೊಡಗಿಸಿಕೊಳ್ಳುತ್ತೇನಿ.ಸಂಸದರಾಗಬೇಕೆಂದೇ ಚುನಾವಣೆಗೆ ಬಂದಿರೋದು.ಕುಮಾರ್ ಬಂಗಾರಪ್ಪ ಬರ್ತಾರಾ ಚುನಾವಣೆ ಪ್ರಚಾರಕ್ಕೆ, ಅದೆಲ್ಲವೂ ಗೊತ್ತಿಲ್ಲ ‌ಸರ್ ನನಗೆ ಎಂದರು‌.

    ಸ್ಟಾರ್ ನಟರು ಚುನಾವಣಾ ಪ್ರಚಾರಕ್ಕೆ ಬರ್ತಾರೆ ಎಂಬ ಪ್ರಶ್ನೆಗೆ ಇನ್ನೂ ನಾವು ಯಾರಿಗೂ ತೊಂದರೆ ಕೊಡುವುದಕ್ಕೆ ಹೋಗಿಲ್ಲ.ಈ ಬಾರಿ ಬಿಸಿಲು ಜಾಸ್ತಿಯಿದೆ.ಅವರು ಪಾಪ ಒತ್ತಡದಿಂದ ಚುನಾವಣಾ ಪ್ರಚಾರಕ್ಕೆ ಬರಬಾರದು.ನಾನು ಕರೆದ್ರೆ ಬರ್ತಾರೆ ಹಾಗಂತ ಅವರನ್ನ ಕರೆಯುವುದಕ್ಕೆ ಹೋಗಬಾರದು.ನಮ್ಮ ನಟರಿಗೆ ಯಾವಾಗಲೂ ಸ್ಪೇಸ್ ಕೊಡಬೇಕು.ಇರೋ ಪ್ರೀತಿ ವಿಶ್ವಾಸ ಹಾಗೇ ಉಳಿಸಿಕೊಳ್ಳಬೇಕು ಎಂದರು.

    ಬಂಗಾರಪ್ಪ ಕುಟುಂಬ ಒಂದಾಗಿಸಲು ಶಿವಕುಮಾರ್ ಮುಂದಾಗ್ತಿಲ್ಲಾ ಯಾಕೇ ಎಂಬ ಪ್ರಶ್ನೆಗೆ‌ನೋಡಿ ಅವರನ್ನ ಒಂದು ಮಾಡೋಕೇ ನಾನ್ಯಾರು.ಅವರಾಗಿಯೇ ಒಂದಾಗಬೇಕು ಅಷ್ಟೇ ನಾನೇನು ಮಾಡಕ್ಕಾಗಲ್ಲ.ನಾನು ಅವರ ಅಳಿಯ ಹೊರತು ಅವರ ಮನೆ ಮಗನಲ್ಲ ಎಂದರು.

    ಲೋಕಸಭೆ ಸಭೆ ಚುನಾವಣೆಯಲ್ಲಿ ಎಲ್ಲೆಡೆಗೂ ಪ್ರಚಾರ ಮಾಡ್ತಿರಾ ಎಂಬ ಪ್ರಶ್ನೆಗೆ ಟೈಮ್ ನೋಡ್ಕೋಂಡು ತೀರ್ಮಾನ ಮಾಡ್ತೇನಿ.ನಾನು ಶೂಟಿಂಗ್ ಹೋಗಬೇಕು, ಗೀತಾ ಅವರ ಏನೇನೂ ಪ್ಲ್ಯಾನ್ ಇದೆ ಅನ್ನೋದನ್ನ ನೋಡಬೇಕು.ಗೀತಾ ನನ್ನ ಹೆಂಡ್ತಿ ಆಗಿರೋದ್ರಿಂದ್ರ ನಾನು ಜಾಸ್ತಿ ಸರ್ಫೋಟ್ ಮಾಡಬೇಕು ಎಂದರು. ಸರ್ಕಾರ ಗ್ಯಾರಂಟಿ ಯೋಜನೆ ವರ್ಕೌಟ್ ಆಗುತ್ತಾ ಪ್ರಶ್ನೆಗೆ ಅದು ನನಗೆ ಗೊತ್ತಿಲ್ಲ, ಒಟ್ಟಿನಲ್ಲಿ ನಾನು ಪ್ರಚಾರಕ್ಕೆ ಹೋಗ್ತಿದಿನಿ.ಮೋಸ್ಟಲಿ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ವರ್ಕೌಟ್ ಆಗ್ತಾವೆ.ಮಹಾದಾಯಿ ಹೋರಾಟದಲ್ಲಿ ನೂರರಷ್ಟು ನಟರು ಬರ್ತಾರೆ.ಈ ಬಾರಿ ಎಲ್ಲರೂ ಬರ್ತಾರೆ ನಾನೇ ಕರೆದುಕೊಂಡು ಬರ್ತಿನಿ.ಟೈಮ್ ಇದ್ದರೆ ಈ ಭಾಗದಲ್ಲಿ ಚುನಾವಣೆ ಪ್ರಚಾರಕ್ಕೆ ಬರ್ತಿನಿ ಎಂದು ಶಿವಣ್ಣ ಹೇಳಿದರು.

  • ಅಧಿಕೃತವಾಗಿ ಕಾಂಗ್ರೆಸ್ ಸೇರಿದ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್

    ಅಧಿಕೃತವಾಗಿ ಕಾಂಗ್ರೆಸ್ ಸೇರಿದ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್

    ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivraj Kumar) ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ (Congress) ಅಧಿಕೃತವಾಗಿ ಸೇರ್ಪಡೆಗೊಂಡರು. ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ (D.K. Shivakumar) ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅವರನ್ನು ಸ್ವಾಗತಿಸಿದರು. ಮಧು ಬಂಗಾರಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ‘ಇಂದು ಗೀತಾ ಕಾಂಗ್ರೆಸ್ ಪಕ್ಷ ಸೇರಿ, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳುತ್ತಾರೆ. ಅವರ ಜೊತೆ ನಾನೂ ತೆರಳುತ್ತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಮುಂದುವರೆದು ಮಾತನಾಡಿದ ಶಿವರಾಜ್ ಕುಮಾರ್, ‘ಬಂಗಾರಪ್ಪ ಅವರ ಮಕ್ಕಳಾದ ಮಧು ಹಾಗೂ ಗೀತಾರಿಗೆ ರಾಜಕೀಯ ಹೇಳಿಕೊಡೋದು ಬೇಡ. ತಾಯಿ ಹೋದ ಬಳಿಕ ಎರಡು ವರ್ಷದಿಂದ ಶಕ್ತಿ ಧಾಮದ ಪ್ರೆಸಿಡೆಂಟ್ ಆಗಿದ್ದಾರೆ ಗೀತೆ. ಮಕ್ಕಳಿಗೆ ಸ್ಕಿಲ್ ಡೆವಲಪ್ಮೆಂಟ್ ಮಾಡುತ್ತಿದ್ದಾರೆ. ಸುತ್ತಮುತ್ತ ಫ್ರೀ ಬೇಕಿಂಗ್ ಕ್ಯಾಂಪ್ ಮಾಡಿ ಅವೇರ್‌ನೆಸ್ ಕೂಡ ಮಾಡಿದ್ದಾರೆ. ಸಮಾಜಮುಖಿ ಕೆಲಸಗಳ ಬಗ್ಗೆ ಅವರಿಗೆ ಆಸಕ್ತಿ ಇದೆ’ ಎಂದು ಹೇಳಿದರು.

    ಗೀತಾ ಶಿವರಾಜ್ ಕುಮಾರ್‌ರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ಅವರ ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.