Tag: Genaric Hospital

  • ಆಸ್ಪತ್ರೆ ಬಳಿ ಗಂಡು ಮಗುವಿಗೆ ಜನ್ಮ ಕೊಟ್ಟು ಅಲ್ಲೇ ಬಿಟ್ಟು ಹೋದ ತಾಯಿ

    ಆಸ್ಪತ್ರೆ ಬಳಿ ಗಂಡು ಮಗುವಿಗೆ ಜನ್ಮ ಕೊಟ್ಟು ಅಲ್ಲೇ ಬಿಟ್ಟು ಹೋದ ತಾಯಿ

    ಚಾಮರಾಜನಗರ: ಹೃದಯಹೀನ ತಾಯಿಯೊಬ್ಬಳು ಆಸ್ಪತ್ರೆಯ ಮುಂಭಾಗದಲ್ಲಿ ನವಜಾತ ಗಂಡು ಶಿಶುವಿಗೆ ಜನ್ಮ ನೀಡಿ ಶಿಶುವನ್ನು ಆಸ್ಪತ್ರೆಯ ಬಳಿಯೇ ಬಿಟ್ಟು ಹೋಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

    ಚಾಮರಾಜನಗರದ ಜಿಲ್ಲಾಸ್ಪತ್ರೆಯ ಮುಂಭಾಗದ ಜನರಿಕ್ ಔಷಧಿ ಮಳಿಗೆಯ ಬಳಿ ಗಂಡು ಮಗುವಿಗೆ ಜನ್ಮ ನೀಡಿ ಮಗುವನ್ನು ಮಳಿಗೆಯ ಬಳಿ ತಾಯಿ ಬಿಟ್ಟು ಹೋಗಿದ್ದಾಳೆ. ಮಧ್ಯರಾತ್ರಿ 12 ಗಂಟೆ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

    ಮಗುವಿನ ಅಳುವಿನ ಶಬ್ದ ಕೇಳಿ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಮಗುವನ್ನು ಆಸ್ಪತ್ರೆಗೆ ಕರೆತಂದು ವೈದ್ಯರಿಗೆ ವಿಷಯ ತಿಳಿಸಿದ್ದಾರೆ.

    ನಂತರ ವೈದ್ಯರು ಜಿಲ್ಲಾಸ್ಪತ್ರೆಯ ಶಿಶು ನಿಗಾ ಘಟಕದಲ್ಲಿ ಮಗುವಿಗೆ ಚಿಕಿತ್ಸೆ ನೀಡಿದ್ದು, ಸದ್ಯ ಮಗು ಆರೋಗ್ಯಕರವಾಗಿದೆ.