Tag: General Election 2024

  • Lok Sabha Election 2024: ಮತದಾನ ನಡೆಯುವ ದಿನ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

    Lok Sabha Election 2024: ಮತದಾನ ನಡೆಯುವ ದಿನ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

    ಬೆಂಗಳೂರು: ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭಾ ಚುನಾವಣೆಗೆ (Lok Sabha Election 2024) ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಾಗಾಗಿ ಕರ್ನಾಟಕದಲ್ಲಿ ಚುನಾವಣೆ ನಡೆಯುವ ಎರಡೂ ದಿನವೂ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

    ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ಹಾಗೂ 2ನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ. ಈ ದಿನಗಳಂದು ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಪ್ರತಿಯೊಬ್ಬರು ಮತದಾನ ಮಾಡಲಿ ಎಂಬ ಉದ್ದೇಶದಿಂದ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: Lok Sabha Election 2024 – 7 ಹಂತದಲ್ಲಿ ಚುನಾವಣೆ, ಜೂನ್‌ 4 ರಂದು ಮತ ಎಣಿಕೆ

    1ನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ?
    ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (SC), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (SC), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.

    2ನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ?
    ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ (SC), ಕಲಬುರಗಿ (SC), ರಾಯಚೂರು (ST), ಬೀದರ್‌, ಕೊಪ್ಪಳ, ಬಳ್ಳಾರಿ (ST), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಇದನ್ನೂ ಓದಿ: ಬಾಂಡ್‌ ಬರುವ ಮೊದಲು ಚುನಾವಣೆಗೆ ಫಂಡಿಂಗ್‌ ಹೇಗೆ ನಡೆಯುತ್ತಿತ್ತು – ದೇಶದ ಜನತೆಗೆ ಅಮಿತ್‌ ಶಾ ಪ್ರಶ್ನೆ

    ಮೊದಲ ಹಂತ
    ನಾಮಪತ್ರ ಸಲ್ಲಿಕೆಗೆ ಕೊನೇ ದಿನ – ಏ.04
    ನಾಮಪತ್ರ ಪರಿಶೀಲನೆ – ಏ.05
    ನಾಮಪತ್ರ ಹಿಂಪಡೆಯಲು ಕೊನೆ ದಿನ – ಏ.08
    ಮತದಾನ – ಏ.26
    ಮತ ಎಣಿಕೆ – ಜೂನ್‌ 4

    2ನೇ ಹಂತ
    ಅಧಿಸೂಚನೆ ಪ್ರಕಟ – ಏ.12
    ನಾಮಪತ್ರ ಸಲ್ಲಿಕೆಗೆ ಕೊನೆ ದಿನ – ಏ.19
    ನಾಮಪತ್ರ ಪರಿಶೀಲನೆ – ಏ.20
    ನಾಮಪತ್ರ ಹಿಂಪಡೆಯಲು ಕೊನೆ ದಿನ – ಏ.22
    ಮತದಾನ – ಮೇ 7
    ಮತ ಎಣಿಕೆ – ಜೂನ್‌ 4

  • Lok Sabha Election 2024: ಕರ್ನಾಟಕದಲ್ಲಿ ಏ.26, ಮೇ 7ಕ್ಕೆ ಮತದಾನ

    Lok Sabha Election 2024: ಕರ್ನಾಟಕದಲ್ಲಿ ಏ.26, ಮೇ 7ಕ್ಕೆ ಮತದಾನ

    ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣೆಗೆ (Lok Sabha Election 2024) ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

    ಏ.26 ಕ್ಕೆ ಮೊದಲ ಹಾಗೂ ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಲೋಕಸಭಾ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ನಿರ್ಧಾರವೇ ಅಂತಿಮ: ಬಿವೈ ವಿಜಯೇಂದ್ರ

    1ನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ?
    ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.

    2ನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ?
    ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ (ಎಸ್‌ಸಿ), ಕಲಬುರಗಿ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್‌, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ.

    ಮೊದಲ ಹಂತ
    ಅಧಿಸೂಚನೆ ಪ್ರಕಟ – ಮಾ.28
    ನಾಮಪತ್ರ ಸಲ್ಲಿಕೆಗೆ ಕೊನೆ ದಿನ – ಏ.04
    ನಾಮಪತ್ರ ಪರಿಶೀಲನೆ – ಏ.05
    ನಾಮಪತ್ರ ಹಿಂಪಡೆಯಲು ಕೊನೆ ದಿನ – ಏ.08
    ಮತದಾನ – ಏ.26
    ಮತ ಎಣಿಕೆ – ಜೂನ್‌ 4

    ಎರಡನೇ ಹಂತ
    ಅಧಿಸೂಚನೆ ಪ್ರಕಟ – ಏ.12
    ನಾಮಪತ್ರ ಸಲ್ಲಿಕೆಗೆ ಕೊನೆ ದಿನ – ಏ.19
    ನಾಮಪತ್ರ ಪರಿಶೀಲನೆ – ಏ.20
    ನಾಮಪತ್ರ ಹಿಂಪಡೆಯಲು ಕೊನೆ ದಿನ – ಏ.22
    ಮತದಾನ – ಮೇ 7
    ಮತ ಎಣಿಕೆ – ಜೂನ್‌ 4

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದರು.

    ಕಳೆದ ಬಾರಿ ಯಾವಾಗ ಮತದಾನ ನಡೆದಿತ್ತು?
    ಕಳೆದ ಬಾರಿ ಕರ್ನಾಟಕದಲ್ಲಿ (Karnataka Lok Sabha Election 2024) ಎರಡು ಹಂತದಲ್ಲಿ ಮತದಾನ ನಡೆದಿತ್ತು. ಏ.18 ರಂದು 14 ಕ್ಷೇತ್ರಗಳಿಗೆ ಹಾಗೂ ಏ.23 ರಂದು 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇದನ್ನೂ ಓದಿ: ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? – ಸಿಎಂ