Tag: germany

  • ಅಮೆರಿಕದ H-1B ವೀಸಾ ಹೊಡೆತ ಬೆನ್ನಲ್ಲೇ ಕೌಶಲ್ಯಪೂರ್ಣ ಭಾರತೀಯರಿಗೆ ಜರ್ಮನಿ ಸ್ವಾಗತ

    ಅಮೆರಿಕದ H-1B ವೀಸಾ ಹೊಡೆತ ಬೆನ್ನಲ್ಲೇ ಕೌಶಲ್ಯಪೂರ್ಣ ಭಾರತೀಯರಿಗೆ ಜರ್ಮನಿ ಸ್ವಾಗತ

    – ಪರಿಣತ ಭಾರತೀಯರು ಜರ್ಮನಿಗೆ ಬರಬಹುದು ಅಂತ ಬಿಗ್‌ ಆಫರ್‌

    ಬರ್ಲಿನ್: ಅಮೆರಿಕದ H-1B ವೀಸಾ‌ (H-1B Visa) ಶುಲ್ಕ ಹೆಚ್ಚಳ ವಿವಾದದ ಬೆನ್ನಲ್ಲೇ ಕೌಶಲ್ಯಪೂರ್ಣ ಭಾರತೀಯರಿಗೆ ಜರ್ಮನಿ ಬಿಗ್‌ ಆಫರ್‌ ನೀಡಿದೆ. ವೃತ್ತಿಪರ ಪರಿಣತ ಭಾರತೀಯರಿಗೆ ಜರ್ಮನಿಗೆ ಬರಬಹುದು ಎಂದು ರಾಯಭಾರಿ ಸ್ವಾಗತ ಕೋರಿದ್ದಾರೆ.

    ಎಲ್ಲಾ ಹೆಚ್ಚು ಕೌಶಲ್ಯಪೂರ್ಣ ಭಾರತೀಯರಿಗೆ ನನ್ನ ಕರೆ ಇಲ್ಲಿದೆ. ಜರ್ಮನಿ ತನ್ನ ಸ್ಥಿರ ವಲಸೆ ನೀತಿಗಳೊಂದಿಗೆ ಮತ್ತು ಐಟಿ, ನಿರ್ವಹಣೆ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತೀಯರಿಗೆ ಉತ್ತಮ ಉದ್ಯೋಗಾವಕಾಶ ಕಲ್ಪಿಸುತ್ತದೆ ಎಂದು ಫಿಲಿಪ್ ಅಕೆರ್ಮನ್ ಮಂಗಳವಾರ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: PublicTV Explainer: ಭಾರತದ ಯುವ ಪ್ರತಿಭೆಗಳಿಗೆ ಅಮೆರಿಕ ವೀಸಾ ತಡೆಗೋಡೆ?; ಏನಿದು H-1B ವೀಸಾ ಹೊಸ ರೂಲ್ಸ್‌?

    ವೀಡಿಯೋ ಕೂಡ ಹಂಚಿಕೊಂಡಿರುವ ಅಕೆರ್ಮನ್‌, ಜರ್ಮನಿಯಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ಗುಂಪಿನಲ್ಲಿ ಭಾರತೀಯರು ಸೇರಿದ್ದಾರೆ ಎಂದು ತಿಳಿಸಿದ್ದಾರೆ.

    ಜರ್ಮನಿಯಲ್ಲಿ ಕೆಲಸ ಮಾಡುವ ಭಾರತೀಯರು, ಸ್ಥಳೀಯ ಜರ್ಮನಿಯರಿಗಿಂತ ಹೆಚ್ಚು ಸಂಪಾದಿಸುತ್ತಾರೆ. ಏಕೆಂದರೆ, ಭಾರತೀಯರು ನಮ್ಮ ಸಮಾಜ ಮತ್ತು ನಮ್ಮ ಕಲ್ಯಾಣಕ್ಕೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಹೀಗಾಗಿ, ಅವರಿಗೆ ಹೆಚ್ಚಿನ ಸಂಬಳ. ನಾವು ಕಠಿಣ ಪರಿಶ್ರಮದ ಜನರಿಗೆ ಉತ್ತಮ ಉದ್ಯೋಗಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟ್ರಂಪ್‌ H-1B ವೀಸಾ ಟಫ್‌ ರೂಲ್ಸ್‌ ನಡುವೆಯೂ ಭಾರತೀಯರಿಗೆ ಮಣೆ ಹಾಕಿದ ಕಂಪನಿಗಳು – ಮೈಸೂರಲ್ಲಿ ಓದಿದ್ದ ವ್ಯಕ್ತಿಗೆ ಸಿಇಒ ಪಟ್ಟ

    ಹೆಚ್‌-1ಬಿ ವೀಸಾ ಶುಲ್ಕವನ್ನು 1 ಲಕ್ಷ ಡಾಲರ್‌ಗೆ ಹೆಚ್ಚಿಸಿ ಅಮೆರಿಕ ಸರ್ಕಾರ ಆದೇಶ ಹೊರಡಿಸಿದೆ. ಅಮೆರಿಕದ ಸ್ಥಳೀಯರಿಗೆ ಮಣೆ ಹಾಕುವ ಉದ್ದೇಶದಿಂದ ಟ್ರಂಪ್‌ ಅವರು ಈ ಕ್ರಮಕೈಗೊಂಡಿದ್ದಾರೆ. ಇದರಿಂದ ಅಮೆರಿಕದಲ್ಲಿ ಉದ್ಯೋಗ ಬಯಸುವ ಭಾರತ ಸೇರಿದಂತೆ ಇತರೆ ದೇಶಗಳ ಪರಿಣತ ಉದ್ಯೋಗಿಗಳಿಗೆ ತೊಂದರೆ ಆಗಲಿದೆ. ಇಷ್ಟು ಪ್ರಮಾಣದ ಹಣವನ್ನು ಅಮೆರಿಕ ಕಂಪನಿಗಳು ಭರಿಸಿ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳಬೇಕಾಗುತ್ತದೆ. ಇದಕ್ಕೆ ಅಮೆರಿಕ ಕಂಪನಿಗಳು ಹಿಂದೇಟು ಹಾಕುವ ಸಾಧ್ಯತೆ ಹೆಚ್ಚಿದೆ. ಅಮೆರಿಕದಲ್ಲಿ ವಿದೇಶಿಯರಿಗೆ ಉದ್ಯೋಗಾವಕಾಶ ಕಡಿಮೆಯಾಗುವ ಸಾಧ್ಯತೆ ಇದೆ.

  • Gold Smuggling Case| ಪ್ರಭಾವಿ ನಾಯಕನ ಜರ್ಮನಿ ಟೂರ್ ಬಗ್ಗೆ ಅನುಮಾನ

    Gold Smuggling Case| ಪ್ರಭಾವಿ ನಾಯಕನ ಜರ್ಮನಿ ಟೂರ್ ಬಗ್ಗೆ ಅನುಮಾನ

    ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಗೆ ಪ್ರಕರಣದ (Gold Smuggling Case) ತನಿಖೆ ತೀವ್ರಗೊಳ್ಳುತ್ತಿದ್ದಂತೆ ಕರ್ನಾಟಕದ (Karnataka) ಪ್ರಭಾವಿ ನಾಯಕನ ಜರ್ಮನಿ (Germany Tour) ಟೂರ್ ಬಗ್ಗೆ ಈಗ ಭಾರೀ ಅನುಮಾನ ಎದ್ದಿದೆ.

    ಹೌದು. ಕಳ್ಳ ಸಾಗಾಣಿಕೆ ಪ್ರಕರಣ ತನಿಖೆಗೆ ಈಗ ಕೇಂದ್ರೀಯ ತನಿಖಾ ದಳ (CBI) ಎಂಟ್ರಿ ಕೊಟ್ಟಿದೆ. ಈ ತನಿಖೆಯಲ್ಲಿ ನಾಲ್ಕೈದು ವರ್ಷದ ವಿದೇಶಿ ಪ್ರವಾಸದ ಲಿಂಕ್ ಜಾಲಾಡುವ ಸಾಧ್ಯತೆಯಿದೆ. ಇದನ್ನೂ ಓದಿ: 2 ವರ್ಷದಲ್ಲಿ ದುಬೈಗೆ 52 ಟ್ರಿಪ್‌ – ಈ ಪೈಕಿ 45 ಬಾರಿ ಒಂದೇ ದಿನದಲ್ಲಿ ಹೋಗಿ ಬಂದಿದ್ದ ರನ್ಯಾ

    ತನ್ನ ಬಗ್ಗೆ ಅನುಮಾನ ಬರುತ್ತಿದ್ದಂತೆ ನನಗೆ ಯಾವುದೇ ಸಂಬಂಧ ಇಲ್ಲ. ನಾನು ವೈಯಕ್ತಿಕ ಪ್ರವಾಸಕ್ಕೆ ಜರ್ಮನಿಗೆ ತೆರಳಿದ್ದೇನೆ ಎಂದು ಆಪ್ತರ ಜೊತೆ ಆ ನಾಯಕ ಹೇಳಿರುವ ವಿಚಾರ ಮೂಲಗಳಿಂದ ಪಬ್ಲಿಕ್‌ ಟಿವಿಗೆ ತಿಳಿದು ಬಂದಿದೆ.

    ಜರ್ಮನಿ ಪ್ರವಾಸಕ್ಕೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗೂ ಯಾವುದೇ ಸಂಬಂಧ ಇಲ್ಲ. ನಾನು ಸ್ನೇಹಿತರ ಜೊತೆ ಜರ್ಮನಿಗೆ ಹೋಗಿದ್ದೇನೆ. ಸಿಬಿಐ ಟೂರ್ ಟ್ರ‍್ಯಾಕ್ ಮಾಡಿದ್ರೂ ತನಗೆ ಸಂಬಂಧ ಇಲ್ಲ ಎಂದು ಸಮರ್ಥನೆ ನೀಡಿದ್ದಾರೆ.

    ಹೀಗಿದ್ದರೂ ಸಿಬಿಐ ತನಿಖೆ ಪೂರ್ಣಗೊಳ್ಳುವವರೆಗೂ ಆ ವ್ಯಕ್ತಿ ಆತಂಕದಲ್ಲಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಸಿಬಿಐ ತನಿಖೆಯಲ್ಲಿ ಹೆಸರು ಬಂದರೆ ರಾಜ್ಯದಲ್ಲಿ ದೊಡ್ಡ ಪೊಲಿಟಿಕಲ್‌ ಟರ್ನ್‌ ತೆಗೆದುಕೊಳ್ಳುವ ಸಾಧ್ಯತೆಯಿದೆ.

     

  • 2007ರ ಘಟನೆ ಉಲ್ಲೇಖಿಸಿ ಎಂಜೆಲಾ ಮರ್ಕೆಲ್ ಬಳಿ ಈಗ ಕ್ಷಮೆ ಕೇಳಿದ ಪುಟಿನ್‌

    2007ರ ಘಟನೆ ಉಲ್ಲೇಖಿಸಿ ಎಂಜೆಲಾ ಮರ್ಕೆಲ್ ಬಳಿ ಈಗ ಕ್ಷಮೆ ಕೇಳಿದ ಪುಟಿನ್‌

    ಮಾಸ್ಕೋ: ರಷ್ಯಾದ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರು ಜರ್ಮನಿಯ ಮಾಜಿ ಚಾನ್ಸೆಲರ್ (Germany ex- chancellor) ಎಂಜೆಲಾ ಮರ್ಕೆಲ್ (Angela Merkel) ಅವರಲ್ಲಿ ಕ್ಷಮೆಯಾಚಿಸಿದ್ದಾರೆ.

    2007 ರಲ್ಲಿ ತಮ್ಮ ಮುದ್ದಿನ ಲ್ಯಾಬ್ರಡಾರ್ ನಾಯಿಯನ್ನು (Dog) ಅವರೊಂದಿಗೆ ಸಭೆಗೆ ಕರೆತಂದಾಗ ನಾನು ಅವರನ್ನು ಹೆದರಿಸುವ ಉದ್ದೇಶವನ್ನು ಹೊಂದಿರಲಿಲ್ಲ ಎಂದು ತಿಳಿಸಿದರು.

    ಕಝಕಿಸ್ತಾನದ ರಾಜಧಾನಿ ಅಸ್ತಾನದಲ್ಲಿ ಮಾತನಾಡಿದ ಅವರು, ಅವರು ನಾಯಿಗೆ ಹೆದರುತ್ತಾರೆ ಎನ್ನುವುದು ನನಗೆ ತಿಳಿದಿರಲಿಲ್ಲ. ನಾನು ಮತ್ತೊಮ್ಮೆ ಮಾಧ್ಯಮದ ಮೂಲಕ ಎಂಜೆಲಾ ಮರ್ಕೆಲ್ ಅವರಲ್ಲಿ ಮನವಿ ಮಾಡುತ್ತಿದ್ದೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ. ನೀವು ಮತ್ತೆ ರಷ್ಯಾಗೆ ಬನ್ನಿ. ಈ ಭೇಟಿಯ ಸಂದರ್ಭದಲ್ಲಿ ನಾನು ಈ ರೀತಿ ವರ್ತಿಸುವುದಿಲ್ಲ  ಎಂದು ಹೇಳಿದರು.

    ಈಗ ಕ್ಷಮೆ ಕೇಳಿದ್ದು ಯಾಕೆ?
    ಎಂಜೆಲಾ ಮರ್ಕೆಲ್ ಅವರ ಆತ್ಮಚರಿತ್ರೆ ಮಂಗಳವಾರ (ನ.26) ಬಿಡುಗಡೆಯಾಗಿತ್ತು. ಈ ಪುಸ್ತಕದಲ್ಲಿ ನನಗೆ ಇರುಸು ಮುರುಸು ಮಾಡಲೆಂದೇ ಪುಟಿನ್‌ ನಾಯಿ ತಂದಿದ್ದರು ಎಂದು ಬರೆದಿದ್ದರು.

    ಪುಟಿನ್ ಕೆಲವೊಮ್ಮೆ ಸಾಕುಪ್ರಾಣಿಗಳನ್ನು ವಿದೇಶಿ ಅತಿಥಿಗಳ ಜೊತೆಗಿನ ಸಭೆಗೆ ಕರೆತರುವುದು ನನಗೆ ತಿಳಿದಿತ್ತು. ನಾನು ನಾಯಿಗೆ ಹೆದರುವ ಕಾರಣ ಪುಟಿನ್‌ ಜೊತೆಗಿನ ಸಭೆಗೆ ನಾಯಿ ತರದಂತೆ ನಾನು ಹೇಳಿದ್ದೆ. ಹೀಗಿದ್ದರೂ ನಾಯಿಯನ್ನು ತರಲಾಗಿತ್ತು. ನಾನು ನಾಯಿಯನ್ನು ನಿರ್ಲಕ್ಷಿಸಲು ಪ್ರಯತ್ನಿಸುತ್ತಿದ್ದೆ. ನನ್ನ ಪಕ್ಕದಲ್ಲೇ ನಾಯಿ ಸಂಚರಿಸುತ್ತಿದ್ದಾಗ ನನಗೆ ಭಯವಾಗುತ್ತಿತ್ತು. ಪುಟಿನ್‌ ಮುಖಭಾವವನ್ನು ಗಮನಿಸಿದಾಗ ಅವರು ನನ್ನ ಸ್ಥಿತಿಯನ್ನು ನೋಡಿ ಆನಂದಿಸುತ್ತಿದ್ದರು ಎಂದು ಬರೆದಿದ್ದಾರೆ.

    2007 ರಲ್ಲಿ ಎಂಜೆಲಾ ಮರ್ಕೆಲ್ ಅವರನ್ನು ಪುಟಿನ್‌ ಅವರು ರಷ್ಯಾದ ಸೋಚಿಯಲ್ಲಿರುವ ತಮ್ಮ ಬೇಸಿಗೆಯ ನಿವಾಸದಲ್ಲಿ ಭೇಟಿಯಾದರು. ಈ ಭೇಟಿಯ ವೇಳೆ ಪುಟಿನ್‌ ಅವರು ನಾಯಿಯನ್ನು ಕರೆ ತಂದಿದ್ದರು. ಸಭೆಗೆ ನಾಯಿ ತಂದಿದ್ದರಿಂದ ಮರ್ಕೆಲ್ ಭಯಗೊಂಡಿದ್ದರು. ಅಷ್ಟೇ ಅಲ್ಲದೇ ಮರ್ಕೆಲ್‌ ಅಹಿತಕರವಾಗಿ ಕಾಣುವಂತೆ ಫೋಟೋ ತೆಗೆಯಲಾಗಿತ್ತು.

    ಎಂಜೆಲಾ ಮರ್ಕೆಲ್ 22 ನವೆಂಬರ್ 2005 ರಿಂದ 8 ಡಿಸೆಂಬರ್ 2021 ರವರೆಗೆ ಜರ್ಮನಿಯ ಚಾನ್ಸೆಲರ್ ಆಗಿದ್ದರು . ಇಷ್ಟು ದೀರ್ಘ ಅವಧಿವರೆಗೆ ಚಾನ್ಸೆಲರ್ ಆಗಿದ್ದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಎಂಜೆಲಾ ಮರ್ಕೆಲ್ ಪಾತ್ರವಾಗಿದ್ದಾರೆ.

    ವ್ಲಾಡಿಮಿರ್ ಪುಟಿನ್ ಅವರಿಗೆ ನಾಯಿಗಳು ಪ್ರಾಣಿಗಳೆಂದರೆ ಇಷ್ಟ. ಹಿಂದೆ ಹಲವಾರು ಬಾರಿ ವಿಶ್ವದ ನಾಯಕರ ಜೊತೆಗಿನ ಭೇಟಿ ಸಂದರ್ಭದಲ್ಲಿ ನಾಯಿಗಳನ್ನು ಕರೆ ತಂದಿದ್ದರು.

  • 4 ದಿನದಲ್ಲಿ 20ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆ – ಲಂಡನ್‌, ಜರ್ಮನಿಯಲ್ಲಿ ಐಪಿ ಅಡ್ರೆಸ್‌ ಪತ್ತೆ

    4 ದಿನದಲ್ಲಿ 20ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆ – ಲಂಡನ್‌, ಜರ್ಮನಿಯಲ್ಲಿ ಐಪಿ ಅಡ್ರೆಸ್‌ ಪತ್ತೆ

    ನವದೆಹಲಿ: ಭಾರತ ಹಾಗೂ ವಿದೇಶಿ ವಿಮಾನಗಳು ಸೇರಿದಂತೆ 20ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆ (Bomb Threats) ಬಂದಿದ್ದ ಐಪಿ ವಿಳಾಸವನ್ನು (IP addresses) ಕೇಂದ್ರ ಗುಪ್ತಚರ ಸಂಸ್ಥೆಗಳು ಪತ್ತೆಹಚ್ಚಿವೆ. ಬಾಂಬ್‌ ಬೆದರಿಕೆ ಬಂದಿದ್ದ ಸೋಷಿಯಲ್‌ ಮೀಡಿಯಾ ಐಪಿ ವಿಳಾಸಗಳು ಲಂಡನ್‌ ಮತ್ತು ಜರ್ಮನಿಯಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ.

    ಇದೇ ಅಕ್ಟೋಬರ್‌ 14ರಿಂದ 17ರ ವರೆಗೆ ಸುಮಾರು 20ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆ ಬಂದಿರುವ ಪ್ರಕರಣಗಳು ವರದಿಯಾಗಿವೆ. ಭಾರತ ಸೇರಿದಂತೆ ಅನೇಕ ವಿದೇಶಿ ವಿಮಾನಗಳಿಗೂ (Indian flights) ಬೆದರಿಕೆ ಬಂದಿವೆ. ಭದ್ರತಾ ಪಡೆಗಳು ತಪಾಸಣೆ ನಡೆಸಿದ ನಂತರ ಅವು ಹುಸಿ ಬಾಂಬ್‌ ಬೆದರಿಕೆ ಎಂಬುದು ಗೊತ್ತಾಗಿದೆ. ಈ ಬೆನ್ನಲ್ಲೇ ಕೇಂದ್ರ ಗುಪ್ತಚರ ಸಂಸ್ಥೆ ಬೆದರಿಕೆ ಮೂಲವನ್ನು ಪತ್ತೆಹಚ್ಚುವ ಕೆಲಸಕ್ಕೆ ಮುಂದಾಗಿತ್ತು. ಬಳಿಕ ಲಂಡನ್‌ ಮತ್ತು ಜರ್ಮನಿಯಲ್ಲಿ ವಿಳಾಸ ಪತ್ತೆಯಾಗಿದ್ದು, ಎಕ್ಸ್‌ ಖಾತೆಗಳನ್ನು ನಿಷ್ಕ್ರಿಯಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು 4 ವಿಮಾನಗಳಿಗೆ ಬಾಂಬ್ ಬೆದರಿಕೆ – ಮುಂಬೈನಲ್ಲಿ ಅಪ್ರಾಪ್ತ ಅರೆಸ್ಟ್‌

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗುಪ್ತಚರ ಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು, ನಾವು ಪ್ರಾಥಮಿಕ ವರದಿಗಳನ್ನು ಸ್ವೀಕರಿಸಿದ್ದೇವೆ. ಈ ಮೂರು ಪ್ರತ್ಯೇಕ ಹ್ಯಾಂಡಲ್‌ಗಳಿಂದ ಪೋಸ್ಟ್‌ ಮಾಡಲಾಗಿದೆ. ಲಂಡನ್‌ನಲ್ಲಿ ಪತ್ತೆಯಾದ 2 ಐಪಿ ವಿಳಾಸ ಸಾಮಾನ್ಯ ವಿಳಾಸವಾಗಿದೆ. ಉಳಿದಂತೆ ಬಳಕೆದಾರರೊಬ್ಬರು VPN (ವರ್ಚುವಲ್ ಖಾಸಗಿ ನೆಟ್‌ವರ್ಕ್) ಬಳಸಿ ಎಕ್ಸ್‌ ಖಾತೆಯಲ್ಲಿ ಬೆದರಿಕೆ ಪೋಸ್ಟ್‌ ಮಾಡಿದ್ದಾರೆ ಎಂದು ತಿಳಿಸಿರುವುದಾಗಿ ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ಬೆಂಗಳೂರು, ದೆಹಲಿಗೆ ಹೊರಟಿದ್ದ 2 ವಿಮಾನಗಳಿಗೆ ಬಾಂಬ್‌ ಬೆದರಿಕೆ – 3 ದಿನಗಳಲ್ಲಿ 12 ಕೇಸ್‌

    ಅ.16ರಂದು ಸಹ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ (Akasa Air) ವಿಮಾನ ಹಾಗೂ ಮುಂಬೈನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಗಳಿಗೂ (IndiGo Flight) ಬಾಂಬ್‌ ಬೆದರಿಕೆ ಬಂದಿತ್ತು. ಬೆದರಿಕೆ ಬೆನ್ನಲ್ಲೇ ವಿಮಾನಗಳನ್ನು ತುರ್ತು ಲ್ಯಾಂಡಿಂಗ್‌ ಮಾಡಿ ತೀವ್ರ ತಪಾಸಣೆ ನಡೆಸಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕ್ಯಾಬಿನೆಟ್‌ ಅನುಮೋದನೆ

  • ಜರ್ಮನಿಯಲ್ಲಿ ಒನ್‌ಪ್ಲಸ್‌ ಫೋನ್‌ ಮಾರಾಟ ನಿಷೇಧ

    ಜರ್ಮನಿಯಲ್ಲಿ ಒನ್‌ಪ್ಲಸ್‌ ಫೋನ್‌ ಮಾರಾಟ ನಿಷೇಧ

    ಬರ್ಲಿನ್‌: ಜರ್ಮನಿಯಲ್ಲಿ ಒನ್‌ಪ್ಲಸ್‌ ಫೋನ್‌ (OnePlus Phones) ಮಾರಾಟವನ್ನು ನಿಷೇಧಿಸಲಾಗಿದೆ. ದೇಶದಲ್ಲಿ ಪೇಟೆಂಟ್ ಸಮಸ್ಯೆಗಳ (Patent Dispute) ಕಾನೂನು ವಿವಾದದಿಂದಾಗಿ ಜರ್ಮನ್ (Germany) ಅಧಿಕಾರಿಗಳು ಒನ್‌ಪ್ಲಸ್‌ ಉತ್ಪನ್ನಗಳನ್ನು ನಿಷೇಧಿಸಿದ್ದಾರೆ.

    ವೈರ್‌ಲೆಸ್ ಸಾಧನಗಳ ಸಂಶೋಧನೆ ಮತ್ತು ಅಭಿವೃದ್ಧಿ ಕಂಪನಿಯಾದ ಇಂಟರ್‌ಡಿಜಿಟ್‌ ಮತ್ತು ಒನ್‌ ಪ್ಲಸ್‌ ಮಧ್ಯೆ 5ಜಿ ಮತ್ತು ಮೊಬೈಲ್‌ ತಂತ್ರಜ್ಞಾನ ವಿಚಾರವಾಗಿ ತಿಕ್ಕಾಟ ನಡೆಯುತ್ತಿದೆ.
    ಇದನ್ನೂ ಓದಿ: ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಅಸಾಂವಿಧಾನಿಕ – ತಾರತಮ್ಯ ನಡೆದರೆ ಆಯಾ ರಾಜ್ಯಗಳೇ ಹೊಣೆ: ಸುಪ್ರೀಂ

    5ಜಿಯಲ್ಲಿ ತನ್ನ ಪೇಟೆಂಟ್‌ ಅನ್ನು ಒನ್‌ಪ್ಲಸ್‌ ಉಲ್ಲಂಘಿಸಿದೆ ಎಂದು ಇಂಟರ್‌ಡಿಜಿಟ್‌ ಆರೋಪಿಸಿದೆ. ನಿಷೇಧದಿಂದಾಗಿ ಒನ್‌ಪ್ಲಸ್‌ ಓಪನ್‌, ಒನ್‌ಪ್ಲಸ್‌ 12, ಒನ್‌ ಪ್ಲಸ್‌ 11 ಫೋನ್‌ಗಳ ಮಾರಾಟವನ್ನು ಆನ್‌ಲೈನ್‌ ಸ್ಟೋರ್‌ನಿಂದಲೇ ತೆಗೆಯಲಾಗಿದೆ. ಸದ್ಯ ಜರ್ಮನಿಯಲ್ಲಿ ಒನ್‌ಪ್ಲಸ್‌ ಪ್ಯಾಡ್‌ 2 ಮತ್ತು ಒನ್‌ ಪ್ಲಸ್‌ ವಾಚ್‌ 2 ಮಾತ್ರ ಆನ್‌ಲೈನ್‌ ಸ್ಟೋರ್‌ನಲ್ಲಿ ಲಭ್ಯವಿದೆ. ಈ ಎರಡೂ ಉತ್ಪನ್ನಗಳಿಗೆ ಸೆಲ್ಯುಲಾರ್ ಬೆಂಬಲದ ಅಗತ್ಯ ಇಲ್ಲದ ಕಾರಣ ಇವುಗಳಿಗೆ ನಿಷೇಧ ಅನ್ವಯವಾಗುವುದಿಲ್ಲ.

    ಈ ಹಿಂದೆ ನೋಕಿಯಾ ಕಂಪನಿಯ ಜೊತೆಗೆ ಒನ್‌ ಪ್ಲಸ್‌ ಸಂಘರ್ಷ ಇತ್ತು.ಇದರಿಂದಾಗಿ ಒನ್‌ಪ್ಲಸ್‌ ಮೇಲೆ ಜರ್ಮನಿಯಲ್ಲಿ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿತ್ತು. ವಿವಾದ ಪರಿಹಾರವಾದ ನಂತರ ಒನ್‌ಪ್ಲಸ್‌ ಜರ್ಮನಿ ಮಾರುಕಟ್ಟೆಗೆ ಎಂಟ್ರಿಕೊಟ್ಟಿತ್ತು.

     

  • Paris Olympics | ಟೀಂ ಇಂಡಿಯಾದ ಚಿನ್ನದ ಪದಕದ ಕನಸು ಭಗ್ನ

    Paris Olympics | ಟೀಂ ಇಂಡಿಯಾದ ಚಿನ್ನದ ಪದಕದ ಕನಸು ಭಗ್ನ

    – ಸೆಮಿಫೈನಲ್‌ನಲ್ಲಿ ಜರ್ಮನಿ ವಿರುದ್ಧ ಸೋಲು

    ಪ್ಯಾರಿಸ್‌: 44 ವರ್ಷಗಳ ಬಳಿಕ ಒಲಿಂಪಿಕ್ಸ್‌ (Olympics) ಹಾಕಿಯಲ್ಲಿ (Hockey) ಫೈನಲ್‌ ಪ್ರವೇಶದ ಕನಸು ಕಂಡಿದ್ದ ಟೀಂ ಇಂಡಿಯಾದ (Team India) ಕನಸು ಭಗ್ನಗೊಂಡಿದೆ. ಸೆಮಿಫೈನಲ್‌ನಲ್ಲಿ ಜರ್ಮನಿ (Germany) ವಿರುದ್ಧ 3-2 ಗೋಲುಗಳಿಂದ ಸೋತ ಕಂಚಿನ ಪದಕಕ್ಕೆ ಹೋರಾಡಬೇಕಿದೆ.

    ಆರಂಭದ 7ನೇ ನಿಮಿಷದಲ್ಲಿ ಭಾರತ ಮೊದಲ ಗೋಲು ಬಾರಿಸಿತು. ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಮೊದಲ ಗೋಲು ಬಾರಿಸಿದರು. ಆದರೆ 18 ಮತ್ತು 27ನೇ ನಿಮಿಷದಲ್ಲಿ ಜರ್ಮನಿ 2 ಗೋಲು ಬಾರಿಸಿ ಮೊದಲಾರ್ಧದಲ್ಲಿ 2-1 ಮುನ್ನಡೆ ಪಡೆಯಿತು.


    ದ್ವಿತೀಯಾರ್ಧದಲ್ಲಿ ಪ್ರಬಲವಾಗಿ ಹೋರಾಡಿದ ಭಾರತ 36ನೇ ನಿಮಿಷದಲ್ಲಿ ಗೋಲ್‌ ಹೊಡೆಯುವ ಮೂಲಕ ಸಮಬಲ ಸಾಧಿಸಿತು. ಆದರೆ 54ನೇ ನಿಮಿಷದಲ್ಲಿ ಜರ್ಮನಿಯ ಮಿಲ್ಟ್‌ಕಾವು ಗೋಲು ಹೊಡೆದು ಮುನ್ನಡೆ ತಂದುಕೊಟ್ಟರು. ಇದನ್ನೂ ಓದಿ: ವಿನೇಶ್‌ ಫೋಗಟ್‌ ಫೈನಲ್‌ಗೆ ಲಗ್ಗೆ – ಒಲಿಂಪಿಕ್ಸ್‌ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು

    ಕೊನೆಯ 2 ನಿಮಿಷ ಇದ್ದಾಗ ಗೋಲ್‌ಕೀಪರ್‌ ಶ್ರೀಜೇಶ್‌ ಅವರನ್ನು ಹೊರಗಡೆ ಇಟ್ಟು ಹೆಚ್ಚುವರಿ ಆಟಗಾರ ಶಮ್ಶೇರ್‌ ಸಿಂಗ್‌ ಸಿಂಗ್‌ ಅವರನ್ನು ಆಡಿಸಲಾಯಿತು. ಇನ್ನೇನು ಪಂದ್ಯ ಮುಗಿಯುವಷ್ಟರಲ್ಲಿ ಭಾರತ ಗೋಲ್‌ ಹೊಡೆಯುವ ಅವಕಾಶ ಸಿಕ್ಕಿತ್ತು. ಆದರೆ ಚೆಂಡು ಗೋಲು ಪೆಟ್ಟಿಗೆಯ ಮೇಲಕ್ಕೆ ಹೋಗುವ ಮೂಲಕ ಫೈನಲ್‌ ಪ್ರವೇಶಿಸುವ ಕನಸು ಛಿದ್ರಗೊಂಡಿತು. ಆರಂಭದಲ್ಲಿ ಭಾರತಕ್ಕೆ ಹಲವು ಪೆನಾಲ್ಟಿ ಅವಕಾಶ ಸಿಕ್ಕಿತ್ತು. ಆದರೆ ಭಾರತ ಗೋಲು ಹೊಡೆಯುವಲ್ಲಿ ವಿಫಲವಾಗಿತ್ತು.


    ಕಂಚಿಗಾಗಿ ಹೋರಾಟ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಬ್ರಿಟನ್‌ ವಿರುದ್ಧ ಗೆದ್ದು ಕಂಚು ಗೆದ್ದುಕೊಂಡಿತ್ತು. ಗುರುವಾರ ಸ್ಪೇನ್‌ ವಿರುದ್ಧ ಕಂಚಿನ ಪದಕಕ್ಕೆ ಸೆಣಸಾಡಲಿದೆ. ಈ ಹಿಂದೆ 1980 ರ ಮಾಸ್ಕೋ ಒಲಿಂಪಿಕ್ಸ್‌ನಲ್ಲಿ ಫೈನಲ್ ಪ್ರವೇಶಿಸಿ ಭಾರತ ತಂಡ ಚಿನ್ನವನ್ನು ಗೆದ್ದುಕೊಂಡಿತ್ತು.

  • ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಪ್ರಜ್ವಲ್ ಗರ್ಲ್‍ಫ್ರೆಂಡ್‍ಗೆ SIT ನೋಟಿಸ್

    ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಪ್ರಜ್ವಲ್ ಗರ್ಲ್‍ಫ್ರೆಂಡ್‍ಗೆ SIT ನೋಟಿಸ್

    ಬೆಂಗಳೂರು: ಅತ್ಯಾಚಾರ ಆರೋಪದಡಿಯಲ್ಲಿ ಬಂಧನವಾಗಿರೋ ಹಾಸನದ ಮಾಜಿ ಸಂಸದ ಆರೋಪಿ ಪ್ರಜ್ವಲ್ ರೇವಣ್ಣಗೆ (Prajwal Revanna) ವಿದೇಶದಲ್ಲಿದ್ದಾಗ ಗರ್ಲ್‍ಫ್ರೆಂಡ್ ಸಹಾಯ ಮಾಡಿದ್ದಾರೆ ಅನ್ನೋ ಸ್ಫೋಟಕ ಮಾಹಿತಿ ವಿಶೇಷ ತನಿಖಾ ದಳ (ಎಸ್‍ಐಟಿ) ತನಿಖೆಯ ವೇಳೆ ಬಹಿರಂಗವಾಗಿದೆ.

    ಆರೋಪಿ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯ ಜೊತೆ ಇರುವ ವೀಡಿಯೋ ವೈರಲ್ ಆಗುತ್ತಿದ್ದಂತೆ ಜರ್ಮನಿಗೆ (Germany) ಹೋಗಿ ಅಡಿಗಿಕೊಂಡಿದ್ದ. ಸುಮಾರು 34 ದಿನಗಳ ಕಾಲ ಯಾರ ಸಂಪರ್ಕಕ್ಕೂ ಸಿಗದೇ ಜರ್ಮನಿಯಲ್ಲಿದ್ರು. ಈ ವೇಳೆ ಆರೋಪಿ ಪ್ರಜ್ವಲ್‍ಗೆ ಗರ್ಲ್‍ಫ್ರೆಂಡ್ ಸಹಾಯ ಮಾಡಿರೋದು ಬೆಳಕಿಗೆ ಬಂದಿದೆ.

    ಹಾಗಾಗಿ ಎಸ್‍ಐಟಿ ಅಧಿಕಾರಿಗಳು ಆರೋಪಿ ಪ್ರಜ್ವಲ್ ಸ್ನೇಹಿತೆಗೆ ನೋಟಿಸ್ ಕೊಟ್ಟಿದ್ದಾರೆ. ಪ್ರಜ್ವಲ್‍ಗೆ ವಿದೇಶದಲ್ಲಿರುವಾಗ ಸಹಾಯ ಮಾಡಿರೋ ಬಗ್ಗೆ ದಾಖಲೆಗಳಿದ್ದು, ಪ್ರಕರಣ ಸಂಬಂಧ ಮಾಹಿತಿ ನೀಡುವಂತೆ ಕೋರಿ ಎಸ್‍ಐಟಿ ಅಧಿಕಾರಿಗಳು ಪ್ರಜ್ವಲ್ ಗರ್ಲ್‍ಫ್ರೆಂಡ್‍ಗೆ ನೋಟಿಸ್ ಕೊಟ್ಟಿದೆ. ಇದನ್ನೂ ಓದಿ: ಗುಜರಿ ಗೋಡೌನ್‍ನಲ್ಲಿ ವಿಷಾನಿಲ ಸೋರಿಕೆ- 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ

  • ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿ ಕುರಿತು ಜೂ.2ರ ಬಳಿಕ ಕ್ರಮ: ಕೇಂದ್ರ

    ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿ ಕುರಿತು ಜೂ.2ರ ಬಳಿಕ ಕ್ರಮ: ಕೇಂದ್ರ

    ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಪಾಸ್‌ಪೋರ್ಟ್‌ಗೆ ಸಂಬಂಧಿಸಿದಂತೆ ಮುಂದಿನ ಕ್ರಮವನ್ನು ಜೂ.2ರ ಬಳಿಕ ಕೈಗೊಳ್ಳುವುದಾಗಿ ವಿದೇಶಾಂಗ ಸಚಿವಾಲಯ (MEA) ಹೇಳಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್, ಪಾಸ್‌ಪೋರ್ಟ್‌ ರದ್ದತಿ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿ ಆಧರಿಸಿ, ನಿಮ್ಮ ರಾಜತಾಂತ್ರಿಕ ಪಾಸ್ಪೋರ್ಟ್ ಏಕೆ ರದ್ದು ಮಾಡಬಾರದು? ಎಂದು ಪ್ರಶ್ನಿಸಿ ಮೇ 23 ರಂದು ಶೋಕಾಸ್ ನೋಟಿಸ್‌ ನೀಡಲಾಗಿದೆ. ಅದಕ್ಕೆ ಸ್ಪಷ್ಟಿಕರಣ ನೀಡಲು ಪ್ರಜ್ವಲ್ ರೇವಣ್ಣಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಜೈಸ್ವಾಲ್‌ ಹೇಳಿದ್ದಾರೆ. ಇದನ್ನೂ ಓದಿ: ಕೊನೆಗೂ ಪ್ರಜ್ವಲ್‌ ರೇವಣ್ಣ ಬಂಧನ: ಎಸ್‌ಐಟಿ ಮುಂದಿನ ತನಿಖೆ ಪ್ರಕ್ರಿಯೆ ಏನು?

    10 ದಿನಗಳ ಒಳಗೆ ಪ್ರಜ್ವಲ್‌ ಸಮಂಜಸವಾಗಿ ಉತ್ತರಿಸದಿದ್ದಲ್ಲಿ ಮುಂದಿನ ಪ್ರಕ್ರಿಯೆಯನ್ನು ಜೂ.2ರ ಬಳಿಕ ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:  ಬಸ್‌ ಕಂದಕಕ್ಕೆ ಉರುಳಿ‌ 22 ಮಂದಿ ಸಾವು – ಮೃತರ ಕುಟುಂಬಗ್ಗೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ!

  • ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಕೇಸ್: ಇದುವರೆಗೆ ಏನಾಯ್ತು? – ಇಲ್ಲಿದೆ ಪಿನ್‌ ಟು ಪಿನ್‌ ಡಿಟೇಲ್ಸ್….

    ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಕೇಸ್: ಇದುವರೆಗೆ ಏನಾಯ್ತು? – ಇಲ್ಲಿದೆ ಪಿನ್‌ ಟು ಪಿನ್‌ ಡಿಟೇಲ್ಸ್….

    ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನ ಕೊನೆಗೂ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧನದ ಬಳಿಕ ಪ್ರಜ್ವಲ್‌ ಅವರನ್ನ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಗಿದ್ದು, ಇಂದು (ಶುಕ್ರವಾರ) ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

    ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಮೇ 31ರ ತಡರಾತ್ರಿ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದಿದ್ದಾರೆ.

    ಅಷ್ಟಕ್ಕೂ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣ (Prajwal Pendrive Case) ಹುಟ್ಟಿಕೊಂಡದ್ದು ಹೇಗೆ? ಕಳೆದ ಏಪ್ರಿಲ್ 23 ರಿಂದ ಮೇ 31ರ ವರೆಗೆ ಏನೇನಾಯ್ತು? ಅನ್ನೋದರ ಕಂಪ್ಲೀಟ್ ಮಾಹಿತಿ ಇಲ್ಲಿದೆ… ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

    • ಏ.23: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಆರೋಪ ಪ್ರಕರಣ ಬೆಳಕಿಗೆ ಬಂದಿತು.
    • ಏ.27: ದೇಶದ 2ನೇ ಹಂತ ಹಾಗೂ ರಾಜ್ಯದಲ್ಲಿ ಮೊದಲ ಹಂತದ ಲೋಕಚಣಾ ಚುನಾವಣೆ (Lok Sabha Elections) ಮುಗಿಯುತ್ತಿದ್ದಂತೆ ಪ್ರಜ್ಬಲ್ ವಿದೇಶಕ್ಕೆ ಎಸ್ಕೇಪ್ ಆಗಿದ್ದರು.
    • ಏ.28: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣವನ್ನು ತನಿಖೆ ನಡೆಸಲು ರಾಜ್ಯ ಸರ್ಕಾರ ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ತನಿಖಾ ತಂಡವನ್ನು ರಚನೆ ಮಾಡಿತು.
    • ಏ.29: ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪ್ರಜ್ವಲ್ ರೇವಣ್ಣ ಅವರಿಗೆ ಎಸ್‌ಐಟಿ ಮೊದಲ ನೋಟಿಸ್ ಜಾರಿಗೊಳಿಸಿತು.
    • ಮೇ 1: ಜರ್ಮನಿಗೆ ತೆರಳಿದ್ದ ಪೊಲೀಸ್ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ತಮ್ಮ ವಕೀಲರ ಮೂಲಕ 7 ದಿನಗಳ ಕಾಲವಕಾಶ ಕೋರಿದ್ದರು.
    • ಮೇ 2: ಅಶ್ಲೀಲ ವೀಡಿಯೋ ಪ್ರಕರಣದ ಆರೋಪಿಯಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನ ಬಂಧಿಸಲು ಎಸ್‌ಐಟಿ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿತು.
    • ಮೇ 5: ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ತೆರಳಿದ್ದರಿಂದ ಎಸ್‌ಐಟಿ ಇಂಟರ್‌ಪೋಲ್ ಮೂಲಕ ಬ್ಲೂಕಾರ್ನರ್‌ ನೋಟಿಸ್ ಜಾರಿಗೊಳಿಸಿತು.
    • ಮೇ 6: ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರು.
    • ಮೇ 18: ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ವಾರಂಟ್ ಜಾರಿಗೊಳಿಸಲಾಯಿತು.
    • ಮೇ 20: ಪ್ರಜ್ವಲ್ ಎಲ್ಲಿದ್ದರೂ ಬಂದು ಧೈರ್ಯವಾಗಿ ತನಿಖೆ ಎದುರಿಸುವಂತೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಮನವಿ. ಹಾಗೂ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ ವಿದೇಶಾಂಗ ಸಚಿವಾಲಯಕ್ಕೆ ಎಸ್‌ಐಟಿ ಪತ್ರ.
    • ಮೇ 23: ಪ್ರಜ್ವಲ್ ಎಲ್ಲಿದ್ದರೂ ಬಂದು ಶರಣಾಗುವಂತೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ವಾರ್ನಿಂಗ್.
    • ಮೇ 24: ಪ್ರಜ್ವಲ್ ರೇವಣ್ಣಗೆ ಕೇಂದ್ರದಿಂದ ಶೋಕಾಸ್ ನೋಟಿಸ್.
    • ಮೇ 27: ವಿದೇಶದಲ್ಲಿದ್ದುಕೊಂಡೇ ವೀಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ, ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ, ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿಕೆ.
    • ಮೇ 28: ಮ್ಯೂನಿಕ್‌ನಿಂದ ಬೆಂಗಳೂರಿಗೆ ಬರೋದಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ.
    • ಮೇ 29: ಹಾಸನ ನಗರದ ಆರ್.ಸಿ ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸಿತ್ತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಹಾಗೂ ಇತರೆ ವಸ್ತುಗಳನ್ನು ಅಧಿಕಾರಿಗಳು ಕೊಂಡೊಯ್ದರು.
    • ಮೇ 30: ಮ್ಯೂನಿಕ್‌ನಿಂದ ಹೊರಟ ಲುಫ್ತಾನ್ಸಾ ಏರ್‌ಲೈನ್ಸ್ನ ಡಿಎಲ್‌ಎಚ್ 764 ಎ-359 ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.
    • ಮೇ 31: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ. ಇಮಿಗ್ರೇಷನ್‌ ಬಳಿಕ ಎಸ್‌ಐಟಿ ಅರೆಸ್ಟ್‌, ರಾತ್ರಿ ಎಸ್‌ಐಟಿ ಕಚೇರಿಯಲ್ಲೇ ವಾಸ್ತವ್ಯ.

  • ಅರೆಸ್ಟ್‌ ಬಳಿಕ SIT ಕಚೇರಿಗೆ ಪ್ರಜ್ವಲ್‌ ರೇವಣ್ಣ; ಏರ್‌ಪೋರ್ಟ್‌ನಲ್ಲಿ ಏನೆಲ್ಲಾ ಬೆಳವಣಿಗೆ ಆಯ್ತು? – ಮುಂದೇನು ಕ್ರಮ?

    ಅರೆಸ್ಟ್‌ ಬಳಿಕ SIT ಕಚೇರಿಗೆ ಪ್ರಜ್ವಲ್‌ ರೇವಣ್ಣ; ಏರ್‌ಪೋರ್ಟ್‌ನಲ್ಲಿ ಏನೆಲ್ಲಾ ಬೆಳವಣಿಗೆ ಆಯ್ತು? – ಮುಂದೇನು ಕ್ರಮ?

    – ಶುಕ್ರವಾರ ಬೆಳಗ್ಗಿನ ಜಾವ ಮೆಡಿಕಲ್‌ ಟೆಸ್ಟ್‌ ಸಾಧ್ಯತೆ

    ಬೆಂಗಳೂರು: 35 ದಿನಗಳ ಬಳಿಕ ಬೆಂಗಳೂರಿಗೆ ಬಂದಿಳಿದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನ ಎಸ್‌ಐಟಿ ಅಧಿಕಾರಿಗಳು ಏರ್‌ಪೋರ್ಟ್‌ನಲ್ಲೇ ಬಂಧಿಸಿ, ಎಸ್‌ಐಟಿ ಕಚೇರಿಗೆ ಕರೆದೊಯ್ದಿದ್ದಾರೆ. ಪ್ರಜ್ವಲ್‌ ಅವರನ್ನು ಅರೆಸ್ಟ್‌ ಮಾಡಿದ ಬಳಿಕ ಏನೆಲ್ಲಾ ಬೆಳವಣಿಗೆ ಆಯ್ತು? ಮುಂದಿನ ಕ್ರಮಗಳೇನು ಎಂಬ ಪಿನ್‌ ಟು ಪಿನ್‌ ಡಿಟೇಲ್ಸ್‌ ಇಲ್ಲಿದೆ…

    * ಶುಕ್ರವಾರ ಮಧ್ಯರಾತ್ರಿ 12:35ರ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್‌ ರೇವಣ್ಣ ಅವರಿದ್ದ ಲುಫ್ತಾನ್ಸಾ ಏರ್‌ಲೈನ್ಸ್‌ನ (Lufthansa Airlines) DLH 764 A-359 ವಿಮಾನ ಲ್ಯಾಂಡಿಗ್‌ ಆಯಿತು. ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್!

    * ವಿಮಾನ ಲ್ಯಾಂಡಿಂಗ್‌ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಸಿಐಎಸ್‌ಎಫ್‌ ಸಿಬ್ಬಂದಿ ವಿಮಾನದ್ವಾರದಲ್ಲೇ ಸುತ್ತುವರಿದು ಪ್ರಜ್ವಲ್‌ ಅವರನ್ನ ವಶಕ್ಕೆ ಪಡೆಯಲು ಮುಂದಾದರು. ವಿಮಾನ ನಿಲ್ದಾಣದಲ್ಲಿ ಮಿಗ್ರೇಷನ್‌ ಅಧಿಕಾರಿಗಳು ಇಮಿಗ್ರೇಷನ್‌ ಪ್ರಕ್ರಿಯೆ (ಲಗೇಜ್‌ ಪರಿಶೀಲಿಸಿ, ಭಾರತಕ್ಕೆ ಮರಳಿರುವುದಾಗಿ ಸ್ಟ್ಯಾಂಪ್‌ ಹಾಕಿದ್ದಾರೆ) ಪೂರ್ಣಗೊಳಿಸುತ್ತಿದ್ದಂತೆ ಎಸ್‌ಐಟಿಗೆ ಹಸ್ತಾಂತರಿಸಿದ್ದಾರೆ.

    * ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದಾರೆ. ಇದನ್ನೂ ಓದಿ: 35 ದಿನಗಳ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್!

    * ಮಾಧ್ಯಮದವರ ಕಣ್ತಪ್ಪಿಸಲು ಮಾರ್ಗ ಬದಲಿಸಿದ್ದ ಎಸ್‌ಐಟಿ ಅಧಿಕಾರಿಗಳು ಮಧ್ಯರಾತ್ರಿ 2 ಗಂಟೆ ವೇಳೆಗೆ ಎಸ್‌ಐಟಿ ಕಚೇರಿಗೆ ಕರೆತಂದಿದ್ದಾರೆ.

    * ಪ್ರಜ್ವಲ್‌ ರೇವಣ್ಣ ಅವರು ಮೇಲ್ನೋಟಕ್ಕೆ ಆರೋಗ್ಯವಾಗಿರುವಂತೆ ಕಂಡುಬಂದಿದ್ದಾರೆ. ಹಾಗಾಗಿ ಎಸ್‌ಐಟಿ ಕಚೇರಿಗೆ ಕರೆದೊಯ್ಯಲಾಗಿದೆ. ಶುಕ್ರವಾರ ಬೆಳಗ್ಗಿನ ಜಾವ ಅವರನ್ನ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗುತ್ತದೆ. ವೈದ್ಯಕೀಯ ಪರೀಕ್ಷೆ ನಂತರ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಸ್‌ಐಟಿ ಮೂಲಗಳು ತಿಳಿಸಿವೆ.