Tag: GESCOM

  • ಕಾನ್‌ಸ್ಟೆಬಲ್‌, ಸಹೋದರ ಸೇರಿ 7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ಅತ್ಯಾಚಾರ ಆರೋಪ

    ಕಾನ್‌ಸ್ಟೆಬಲ್‌, ಸಹೋದರ ಸೇರಿ 7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ಅತ್ಯಾಚಾರ ಆರೋಪ

    – ಬೆತ್ತಲೆ ದೇಹ ತೋರಿಸುವಂತೆ ಮಗಳಿಗೂ ಅಶ್ಲೀಲ ಮೆಸೇಜ್‌; ಸಂತ್ರಸ್ತೆ ಆರೋಪ

    ಯಾದಗಿರಿ: ಪೊಲೀಸ್‌ ಕಾನ್ಸ್‌ಟೆಬಲ್‌ವೊಬ್ಬ ತನ್ನ ಸೋದರನೊಂದಿಗೆ ಸೇರಿ ಕಳೆದ 7 ವರ್ಷಗಳಿಂದ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಹಿಳೆಯೊಬ್ಬರು ಯಾದಗಿರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ (Yadgir Women Police Station) ದೂರು ದಾಖಲಿಸಿದ್ದಾರೆ.

    ಕಾನ್ಸ್‌ಟೆಬಲ್‌ ರಮೇಶ ಹಾಗೂ ಜೆಸ್ಕಾಂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷ್ಮಣ್‌ ಸಹೋದರರ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ: ಸಂತಾನಹರಣ ಚಿಕಿತ್ಸೆ ವೇಳೆ ತಾಯಿ ಸಾವು – ಅನಸ್ತೇಶಿಯಾ ನೀಡದೇ ಶಸ್ತ್ರಚಿಕಿತ್ಸೆ ಮಾಡಿದ್ದಾಗಿ ಕುಟುಂಬಸ್ಥರ ಆರೋಪ

    ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ನಿವಾಸಿಯಾಗಿರುವ ಸಂತ್ರಸ್ತೆ, ಕಳೆದ 7 ವರ್ಷದಿಂದ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಇಬ್ಬರು ಸೋದರರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಇಬ್ಬರು ಆರೋಪಿಗಳಿಗೆ ಮಹಿಳೆ ಸಂಬಂಧದಲ್ಲಿ ಚಿಕ್ಕಮ್ಮ ಆಗಬೇಕು ಎನ್ನಲಾಗಿದೆ. ಇದನ್ನೂ ಓದಿ:  ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್ – ಯುವಕ ಬಲಿ, ಇಬ್ಬರ ಸ್ಥಿತಿ ಗಂಭೀರ

    ಮಗಳಿಗೂ ಅಶ್ಲೀಲ ಮೆಸೇಜ್‌
    ಇಬ್ಬರು ಸಹೋದರರು ಪ್ರಾಣ ಬೆದರಿಕೆ ಹಾಕಿ ಹಲವುಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಜೊತೆಗೆ ಜೊತೆಗೆ ನನ್ನ ಮಗಳು 14 ವರ್ಷದವಳಾಗಿದ್ದಾಗಿನಿಂದಲೂ ಅಶ್ಲೀಲವಾಗಿ ವಾಟ್ಸಪ್ ಮೆಸೇಜ್ ಕಳುಹಿಸ್ತಿದ್ದಾರೆ. ಬಟ್ಟೆ ಬಿಚ್ಚಿ ಬೆತ್ತಲೆ ದೇಹ ತೋರಿಸು ಅಂತ ಪೀಡಿಸುತ್ತಿದ್ದಾರೆ. ಹೀಗಾಗಿ ಇಬ್ಬರು ಸಹೋದರರಿಂದ ಮಾನಸಿಕ ಹಿಂಸೆ ಅನುಭಿಸುತ್ತಿದ್ದೇನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

  • ಜೆಸ್ಕಾಂ ನಿರ್ಲಕ್ಷ್ಯ- ಹೈಟೆನ್ಷನ್ ವೈಯರ್ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸಾವು

    ಜೆಸ್ಕಾಂ ನಿರ್ಲಕ್ಷ್ಯ- ಹೈಟೆನ್ಷನ್ ವೈಯರ್ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸಾವು

    ಯಾದಗಿರಿ: ಜೆಸ್ಕಾಂ (GESCOM) ನಿರ್ಲಕ್ಷ್ಯದಿಂದ ತುಂಡರಿಸಿ ಬಿದ್ದ ವಿದ್ಯುತ್ ಹೈಟೆನ್ಷನ್ ವೈಯರ್ ತಗುಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ (Yadagiri) ಮಾತಾಮಣಿಕೇಶ್ವರ ನಗರದಲ್ಲಿ ನಡೆದಿದೆ.

    ವಡಗೇರಾ (Vadagera) ತಾಲೂಕಿನ ಬಬಲಾದ ಗ್ರಾಮದ ನಿವಾಸಿ ಕಾಜಾ ಪಟೇಲ್(23) ಮೃತ ಬೈಕ್ ಸವಾರ. ಕಾಜಾ ಪಟೇಲ್, ಯಾದಗಿರಿಯ ಸಹೋದರಿ ಮನೆಗೆ ತೆರಳಿ, ವಾಪಸ್ ಆಗುತ್ತಿದ್ದ ವೇಳೆ ತುಂಡರಿಸಿ ಬಿದ್ದಿದ್ದ ಹೈಟೆನ್ಷನ್ ವೈಯರ್ ನೋಡದೇ ಬೈಕ್‌ನಲ್ಲಿ ಹೋಗುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Gadag | ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ

    ಕಳೆದ ಮೂರು ದಿನದ ಹಿಂದೆ ಬಿರುಗಾಳಿ ಮಳೆಗೆ ಹೈಟೆನ್ಷನ್ ವೈಯರ್ ತುಂಡರಿಸಿ ಬಿದ್ದಿದ್ದು, ತುಂಡರಿಸಿ ಬಿದ್ದಿದ್ದ ವೈಯರನ್ನು ಸರಿಪಡಿಸದೇ ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಿಂದ ಬಂದು ಜಡ್ಜ್ ಮನೆಯಲ್ಲಿ ಕಳ್ಳತನ – 8 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿಗಳು ಅರೆಸ್ಟ್

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಲಾರಿ, ಕಾರು ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ಜೆಸ್ಕಾಂ ಸಿಬ್ಬಂದಿ ಸಾವು

    ಲಾರಿ, ಕಾರು ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ಜೆಸ್ಕಾಂ ಸಿಬ್ಬಂದಿ ಸಾವು

    ರಾಯಚೂರು: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಜೆಸ್ಕಾಂ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು (Raichuru) ಜಿಲ್ಲೆಯ ಮಾನ್ವಿಯ (Manvi) ಬೊಮ್ಮನಾಳ ಕ್ರಾಸ್ ಬಳಿ ನಡೆದಿದೆ.

    ಮೃತ ವ್ಯಕ್ತಿಯನ್ನು ಕೊಪ್ಪಳದ (Koppal) ಗಂಗಾವತಿ ಮೂಲದ ವೆಂಕಟಾಚಲಪತಿ (45) ಎಂದು ಗುರುತಿಸಲಾಗಿದೆ.ಇದನ್ನೂ ಓದಿ:ದಾವಣಗೆರೆ | ಪ್ರೀತಿಸುವಂತೆ ಯುವತಿಗೆ ಪೀಡಿಸಿದ ಯುವಕನಿಗೆ 3 ತಿಂಗಳ ಜೈಲು!

    ಮೃತ ವೆಂಕಟಾಚಲಪತಿ ಗಂಗಾವತಿಯ ಜೆಸ್ಕಾಂನಲ್ಲಿ ಹಿರಿಯ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾರಿನಲ್ಲಿ ರಾಯಚೂರಿನಿಂದ ಗಂಗಾವತಿಗೆ ತೆರಳುತ್ತಿದ್ದರು. ಇದೇ ವೇಳೆ ಲಾರಿಯೊಂದು ರಾಯಚೂರಿಗೆ ಹೊರಟಿತ್ತು. ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಸಿದ್ದರಾಮಯ್ಯ

  • ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ನೀಡದ ಜೆಸ್ಕಾಂ – ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ಈಶ್ವರ್ ಖಂಡ್ರೆ

    ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ನೀಡದ ಜೆಸ್ಕಾಂ – ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ಈಶ್ವರ್ ಖಂಡ್ರೆ

    ಬೀದರ್: ರೈತರ ಜಮೀನುಗಳಿಗೆ ಬಳಸುವ ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ನೀಡದ ಜೆಸ್ಕಾಂ ಅಧಿಕಾರಿಗೆ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwara Khandre) ತರಾಟೆಗೆ ತೆಗೆದುಕೊಂಡಿದ್ದಾರೆ.

    ಬೀದರ್‌ನಲ್ಲಿ (Bidar) ನಡೆದ ಕೆಡಿಪಿ ಸಭೆಯಲ್ಲಿ ಜೆಸ್ಕಾಂ (GESCOM) ಅಧಿಕಾರಿಯೊಬ್ಬರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ನಾವು 300ಕ್ಕೂ ಅಧಿಕ ಸೋಲಾರ್ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದೇವೆ. ಆದರೂ ಕೂಡ ರಾತ್ರಿ ವೇಳೆ ರೈತರಿಗೆ ವಿದ್ಯುತ್ ನೀಡಿದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.ಇದನ್ನೂ ಓದಿ: ‘ಜೀಬ್ರಾ’ಗೆ ‘ಭೀಮ’ ಬೆಂಬಲ- ಡಾಲಿ, ಸತ್ಯದೇವ್ ಚಿತ್ರಕ್ಕೆ ದುನಿಯಾ ವಿಜಯ್ ಸಾಥ್

     ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಯಾವುಲ್ಲಾಖಾನ್ ಜೊತೆಗೆ ಮಾತನಾಡುತ್ತಾ, ರೈತರ ಕುಟುಂಬಕ್ಕೆ ನೀಡಿರುವ ಪರಿಹಾರದ ಚೆಕ್ ರಿಜೆಕ್ಟ್ ಆಗಿದೆ. ಪರಿಹಾರ ಚೆಕ್ ಕೊಟ್ಟರೂ ರಿಜೆಕ್ಟ್ ಆಗುತ್ತಾ? ನಿಮಗೆ ಕಾಮನ್‌ಸೆನ್ಸ್ ಇದೆಯಾ? ಎಂದು ಗರಂ ಆದರು.

    ಇದೇ ವೇಳೆ ಬಿಜೆಪಿ ಶಾಸಕರ ವಿರುದ್ಧ ಹರಿಹಾಯ್ದ ಅವರು, 2.5 ಲಕ್ಷ ಮತಗಳಿಂದ ಗೆದ್ದ ಜನಪ್ರತಿನಿಧಿಗಳಿಗೆ ಅವಮಾನ ಮಾಡುತ್ತಿದ್ದಿರಿ ಎಂದು ಶರಣ ಸಲಗರ್, ಶೈಲೇಂದ್ರ ಬೇಲ್ದಾಳೆ ವಿರುದ್ಧ ಅಸಮಧಾನ ಹೊರಹಾಕಿದರು.

    ಸಚಿವ ರಹೀಂಖಾನ್, ಶಾಸಕರಾದ ಶರಣು ಸಲಗರ್, ಶೈಲೇಂದ್ರ ಬೆಲ್ದಾಳೆ, ಡಿಸಿ ಶಿಲ್ಪಾ ಶರ್ಮಾ, ಎಸ್ಪಿ ಪ್ರದೀಪ್ ಗುಂಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.ಇದನ್ನೂ ಓದಿ: ತಮಿಳುನಾಡು | 68 ಮಂದಿ ಬಲಿ ಪಡೆದ ಮದ್ಯ ದುರಂತ – ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

  • ಕೇವಲ 2 ಬಲ್ಬ್ ಇದ್ದ ತಗಡಿನ ಮನೆಗೆ 1 ಲಕ್ಷ ರೂ. ಬಿಲ್ – ಶಾಕ್ ಆಗಿ ವೃದ್ಧೆ ಮನೆಗೆ ಅಧಿಕಾರಿ ದೌಡು!

    ಕೇವಲ 2 ಬಲ್ಬ್ ಇದ್ದ ತಗಡಿನ ಮನೆಗೆ 1 ಲಕ್ಷ ರೂ. ಬಿಲ್ – ಶಾಕ್ ಆಗಿ ವೃದ್ಧೆ ಮನೆಗೆ ಅಧಿಕಾರಿ ದೌಡು!

    ಕೊಪ್ಪಳ: 2 ಬಲ್ಬ್ ಇರುವ ಮನೆಗೆ 1 ಲಕ್ಷ ಬಿಲ್ (Electricity Bill) ಬಂದಿದ್ದ ಕೊಪ್ಪಳದ (Koppala) ವೃದ್ಧೆಯ ಮನೆಗೆ ಜೆಸ್ಕಾಂ (GESCOM) ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ವೇಳೆ ಮೀಟರ್ ಪರಿಶೀಲನೆ ಮಾಡಿದ ಇಂಜಿನಿಯರ್ ಮೀಟರ್ ರೀಡಿಂಗ್ ತೊಂದರೆಯಿಂದ ತಪ್ಪಾಗಿ ಬಿಲ್ ಬಂದಿದೆ. ಅದನ್ನು ಸರಿಪಡಿಸುತ್ತೇವೆ ಎಂದು ವೃದ್ಧೆಗೆ ಧೈರ್ಯ ಹೇಳಿ ತೆರಳಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಸ್ಕಾಂನ ಎಕ್ಸಿಕ್ಯುಟಿವ್ ಇಂಜಿನಿಯರ್ ರಾಜೇಶ್, 2021 ರಿಂದ ಮೀಟರ್ ರೀಡಿಂಗ್ ತೊಂದರೆಯಾಗಿದೆ. ಇದರಿಂದ ಹೆಚ್ಚಿನ ಬಿಲ್ ಬಂದಿದೆ. ಇದು ಈಗ ಬಂದಿರುವ ಬಿಲ್ ಅಲ್ಲ. ಒಂದೇ ಬಾರಿಗೆ 70 ಸಾವಿರ ರೂ. ಬಿಲ್ ಬಂದಿದೆ. ನಂತರ ಹೆಚ್ಚಿಗೆ ಆಗುತ್ತಾ ಹೋಗಿದೆ. ಬಳಿಕ ಅಜ್ಜಿಗೆ ಧೈರ್ಯ ಹೇಳಿ ಬಿಲ್ ಪಾವತಿ ಮಾಡುವ ಅವಶ್ಯಕತೆ ಇಲ್ಲ. ಎಲ್ಲವನ್ನೂ ಸರಿ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: 2 ಬಲ್ಬ್ ಇರುವ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ – ಕಂಗಲಾದ ವೃದ್ಧೆ

    ನಮ್ಮ ಸಿಬ್ಬಂದಿಗಳ ಹಾಗೂ ಬಿಲ್ ಕಲೆಕ್ಟರ್ ತಪ್ಪಿನಿಂದಾಗಿ ಈ ಸಮಸ್ಯೆಯಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ಯಾವುದೇ ಪ್ರಕರಣಗಳಿದ್ದರೂ ಗಮನಕ್ಕೆ ತರುವಂತೆ ಅವರು ತಿಳಿಸಿದ್ದಾರೆ. ಇನ್ನೂ ಬಿಲ್ ಕಟ್ಟುವಂತಿಲ್ಲ ಎನ್ನುತ್ತಿದ್ದಂತೆ ಅಜ್ಜಿ ಫುಲ್ ಖುಷಿಯಾಗಿದ್ದಾರೆ.

    ವೃದ್ಧೆ ಗಿರಿಜಮ್ಮ ಅವರ ಮನೆಗೆ 1,03,315 ರೂ. ಬಿಲ್ ನೀಡಲಾಗಿತ್ತು. ಇದರಿಂದ ಆತಂಕಕ್ಕೊಳಗಾದ ವೃದ್ಧೆ ಹಾಗೂ ಆಕೆಯ ಮಗ ಈ ಮನೆ ಮಾರಿದರೂ ಅಷ್ಟು ಬಿಲ್ ಕಟ್ಟಲು ಸಾಧ್ಯವಿಲ್ಲ. ನಾವು ಇರುವುದು ಇಬ್ಬರೇ. ಎರಡೇ ಬಲ್ಬ್ ಇರುವುದು. ಹೇಗೆ ಇಷ್ಟೆಲ್ಲ ಬಿಲ್ ಬಂತು ಎಂದು ಗೋಳಾಡಿದ್ದರು. ಇದನ್ನು ‘ಪಬ್ಲಿಕ್ ಟಿವಿ’ ಗುರುವಾರ ಬೆಳಗ್ಗೆ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಈಗ ವೃದ್ಧೆಯ ಮನೆಗೆ ಭೇಟಿ ನೀಡಿ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಬಸ್ ನಿಲ್ಲಿಸದೇ ಮಹಿಳೆ ಜೊತೆ ಅನುಚಿತ ವರ್ತನೆ – ನಿರ್ವಾಹಕನ ಮೇಲೆ ಸಂಬಂಧಿಕರಿಂದ ಹಲ್ಲೆ

  • 2 ಬಲ್ಬ್ ಇರುವ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ – ಕಂಗಲಾದ ವೃದ್ಧೆ

    2 ಬಲ್ಬ್ ಇರುವ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ – ಕಂಗಲಾದ ವೃದ್ಧೆ

    ಕೊಪ್ಪಳ: 2 ಬಲ್ಬ್ ಇರುವ ತಗಡಿನ ಶೆಡ್‍ನಲ್ಲಿ ವಾಸಿಸುವ ವೃದ್ಧೆಯೊಬ್ಬರ ಮನೆಗೆ ಜೆಸ್ಕಾಂ ಸಿಬ್ಬಂದಿ 1,03,315 ರೂ. ಬಿಲ್ ನೀಡಿದ ಘಟನೆ ಕೊಪ್ಪಳದಲ್ಲಿ (Koppala) ನಡೆದಿದೆ. ಇದರಿಂದ ಆತಂಕಕ್ಕೊಳಗಾದ ವೃದ್ಧೆ ಹಾಗೂ ಆಕೆಯ ಮಗ ಈ ಮನೆ ಮಾರಿದರೂ ಅಷ್ಟು ಬಿಲ್ (Electricity Bill) ಕಟ್ಟಲು ಸಾಧ್ಯವಿಲ್ಲ ಎಂದು ಗೋಳಾಡಿದ್ದಾರೆ.

    ವೃದ್ಧೆ ಗಿರಿಜಮ್ಮ ಎಂಬುವರ ಮನೆಗೆ ಈ ಬಿಲ್ ಬಂದಿದ್ದು, ಕಳೆದ ಆರು ತಿಂಗಳಿಂದ ಜೆಸ್ಕಾಂ (Gescom) ಸಿಬ್ಬಂದಿ ಇಷ್ಟೆಲ್ಲ ಬಿಲ್ ನೀಡುತ್ತಿದ್ದಾರೆ. ಭಾಗ್ಯ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಪಡೆದಿದ್ದು, ಮೊದಲು ಪ್ರತಿ ತಿಂಗಳು 70 ರೂ. ನಿಂದ 80 ರೂ. ಬಿಲ್ ಬರುತ್ತಿತ್ತು. ಅದರಲ್ಲೂ ನಾವಿರುವುದು ಇಬ್ಬರೇ ನಾವೆಷ್ಟು ಕರೆಂಟ್ ಬಳಸುತ್ತೇವೆ? ಈಗ ಇದ್ದಕ್ಕಿದ್ದಂತೆ ಇಷ್ಟೆಲ್ಲ ಜಾಸ್ತಿಯಾಗಿದೆ ಎಂದು ವೃದ್ಧೆ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಬಸ್ ನಿಲ್ಲಿಸದೇ ಮಹಿಳೆ ಜೊತೆ ಅನುಚಿತ ವರ್ತನೆ – ನಿರ್ವಾಹಕನ ಮೇಲೆ ಸಂಬಧಿಕರಿಂದ ಹಲ್ಲೆ

    ಭಾಗ್ಯ ಜ್ಯೋತಿ (Bhagya Jyothi) ಯೋಜನೆಯ ಪ್ರಕಾರ 18 ಯೂನಿಟ್ ಸರ್ಕಾರವೇ ಪಾವತಿ ಮಾಡುತ್ತಿತ್ತು. ಆದರೆ ಕಳೆದ ಆರು ತಿಂಗಳ ಹಿಂದೆ ಈ ಮನೆಗೆ ಜೆಸ್ಕಾಂ ಸಿಬ್ಬಂದಿ ಮೀಟರ್ ಅಳವಡಿಕೆ ಮಾಡಿದ್ದಾರೆ. ಮೀಟರ್ ಹಾಕಿದಾಗಿಂದ ಹತ್ತರಿಂದ ಇಪ್ಪತ್ತು ಸಾವಿರ ರೂ. ಬಿಲ್ ಬರುತ್ತಿದೆ. ಆದರೆ ಬಿಲ್ ಕೊಟ್ಟು ಹೋಗುವ ಸಿಬ್ಬಂದಿ ಹಣ ಕೇಳಲು ಮಾತ್ರ ಬರುತ್ತಿಲ್ಲ. ಒಂದು ವೇಳೆ ಬಂದರೆ ಎಂಬ ಭಯದಲ್ಲಿ ವೃದ್ಧೆ ಈ ಸಮಸ್ಯೆ ಬಗೆಹರಿಸುವಂತೆ ಸಿಕ್ಕ ಸಿಕ್ಕವರಲ್ಲಿ ಕೇಳಿಕೊಳ್ಳುತ್ತಿದ್ದಾರೆ.

    ಜೆಸ್ಕಾಂ ಸಿಬ್ಬಂದಿಗಳ ಯಡವಟ್ಟಿನಿಂದ ಈ ಬಡ ಜೀವ ಪರದಾಡುವಂತಾಗಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಈ ಸಮಸ್ಯೆಗೊಂದು ಪರಿಹಾರ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ದರ ಭಾರೀ ಏರಿಕೆ – ಉತ್ತರ, ಮಧ್ಯ ಕರ್ನಾಟಕದಲ್ಲಿ ಇಂದು ಉದ್ಯಮ ಬಂದ್‌

  • ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ

    ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ

    ರಾಯಚೂರು: ಕಾಂಗ್ರೆಸ್ ಸರ್ಕಾರ (Congress Government) ಘೋಷಿಸಿರುವ 200 ಯೂನಿಟ್‌ ಉಚಿತ ವಿದ್ಯುತ್ (200 Unit Electricity) ಗ್ಯಾರಂಟಿ ಗೊಂದಲದ ನಡುವೆ ರಾಯಚೂರಿನ ಗ್ರಾಮೀಣ ಭಾಗದಲ್ಲಿ ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಗೋಲ್‌ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ. ಜೆಸ್ಕಾಂಗೆ (GESCOM) ಲಕ್ಷಾಂತರ ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ.

    ಗ್ರಾಮಿಣ ಭಾಗದಲ್ಲಿ ಗ್ರಾಮಸ್ಥರು, ಬಡ ರೈತರಿಂದ (Farmers) ವಸೂಲಿ ಮಾಡಿದ ವಿದ್ಯುತ್ ಬಿಲ್‌ಗೆ ರಶೀದಿ ಕೊಡದೇ ಸಂಗ್ರಹಿಸಿದ ಹಣವನ್ನ ಬ್ಯಾಂಕ್‌ಗೂ ಕಟ್ಟದೇ ಗ್ರಾಮ ವಿದ್ಯುತ್ ಬಿಲ್‌ ಕಲೆಕ್ಟರ್‌ಗಳೇ ಗುಳುಂ ಮಾಡಿರುವುದು ಬಯಲಾಗಿದೆ. ತಕ್ಷಣದ ಮಾಹಿತಿ ಪ್ರಕಾರ ರಾಯಚೂರು ತಾಲೂಕಿನ ಚಂದ್ರಬಂಡಾ ಜೆಸ್ಕಾಂ ಶಾಖೆ ಸೇರಿ ಸುಮಾರು 20 ಲಕ್ಷ ರೂಪಾಯಿ ವಂಚನೆಯಾಗಿರುವುದು ಕಂಡುಬಂದಿದೆ ಎಂದು ಜೆಸ್ಕಾಂ ಇಇ ಚಂದ್ರಶೇಖರ ದೇಸಾಯಿ ಹೇಳಿದ್ದಾರೆ. ಇದನ್ನೂ ಓದಿ: ವಿಪಕ್ಷಗಳ ಬಹಿಷ್ಕಾರಕ್ಕೆ ದೊಡ್ಡಗೌಡರ ಡೋಂಟ್ ಕೇರ್ – ಸಂಸತ್ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ನಿರ್ಧಾರ

    ಆರ್.ಆರ್ ಸಂಖ್ಯೆಗಳ ವಸೂಲಾತಿ ಹಾಗೂ ಬ್ಯಾಂಕ್‌ಗೆ ಹಣ ಸಂದಾಯವಾದ ಕುರಿತು ಜೆಸ್ಕಾಂ ಅಧಿಕಾರಿಗಳು ಪರಿಶೀಲಿಸಿದಾಗ ನಕಲಿ ದಾಖಲೆಗಳ ಮೂಲಕ ಗೋಲ್‌ಮಾಲ್ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಚಂದ್ರಬಂಡಾ ಗ್ರಾಮದ ವಿದ್ಯುತ್ ಬಿಲ್‌ ಕಲೆಕ್ಟರ್‌ ಮಲ್ಲೇಶ್‌ಗೆ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನೋಟಿಸ್ ನೀಡಿದ್ದು ಕ್ರಮಕ್ಕೆ ಮುಂದಾಗಿದ್ದಾರೆ. ಆದ್ರೆ ಚಂದ್ರಬಂಡಾ ಮಾತ್ರವಲ್ಲದೇ ಹಲವೆಡೆ ಇದೇ ರೀತಿ ಗೋಲ್ ಮಾಲ್ ನಡೆದಿದ್ದು ಕೋಟ್ಯಾಂತರ ರೂಪಾಯಿ ವಂಚಿಸಿರುವ ಅನುಮಾನ ಮೂಡಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹಿಸುವುದನ್ನು ನಿಲ್ಲಿಸಿ: ಅಮಿತ್‌ ಶಾಗೆ ಸ್ಟಾಲಿನ್‌ ಪತ್ರ

    ಗ್ರಾಮೀಣ ಭಾಗದ ಬಹುತೇಕ ಬಡ ರೈತರು ಉಚಿತ ವಿದ್ಯುತ್ ಭರವಸೆ ಇಟ್ಟುಕೊಂಡು ಕುಳಿತಿರುವಾಗ ತಮ್ಮ ಹಣ ದುರ್ಬಳಕೆಯಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಬಿಲ್ ಕೊಡದೇ, ಹಣವನ್ನ ಬ್ಯಾಂಕ್‌ಗೂ ಕಟ್ಟದೇ ಇರುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಅಂತಾ ಒತ್ತಾಯಿಸಿದ್ದಾರೆ.

  • ವಿದ್ಯುತ್ ಬಿಲ್ ಕಟ್ಟು ಎಂದಿದ್ದಕ್ಕೆ ಹಲ್ಲೆ

    ವಿದ್ಯುತ್ ಬಿಲ್ ಕಟ್ಟು ಎಂದಿದ್ದಕ್ಕೆ ಹಲ್ಲೆ

    ಬಳ್ಳಾರಿ: ವಿದ್ಯುತ್ ಬಿಲ್ (Electricity Bill) ಕೇಳಲು ಹೋದ ಜೆಸ್ಕಾಂ (GESCOM) ಬಿಲ್ ಕಲೆಕ್ಟರ್ ಮೇಲೆ ಹಲ್ಲೆ ನಡೆದ ಘಟನೆ ಬಳ್ಳಾರಿ (Bellary) ನಗರದ ವರಬಸಪ್ಪನ ದೇವಸ್ಥಾನ ಹಿಂಭಾಗದಲ್ಲಿ ನಡೆದಿದೆ.

    ನಗರದ ರೂಪನಗೂಡಿ ರಸ್ತೆಯ ವರಬಸಪ್ಪನ ಗುಡಿ ಹಿಂಭಾಗದಲ್ಲಿನ ನಿವಾಸಿ ಗಿರೀಶ್ ಎಂಬಾತ ಜೆಸ್ಕಾಂ ಬಿಲ್ ಕಲೆಕ್ಟರ್ ಬಿ.ಎಂ.ಪಾರ್ವತೇಶ್ ಗೌಡ ಹಾಗೂ ನವೀನ್ ಎನ್ನುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಜೆಸ್ಕಾಂ ಸಿಬ್ಬಂದಿ ಇಬ್ಬರು ಗಿರೀಶ್ ಮನೆಗೆ ತೆರಳಿ 9 ಸಾವಿರ ಬಿಲ್ ಬಾಕಿ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ – ಬಿಬಿಸಿಯನ್ನು ಸಮರ್ಥಿಸಿಕೊಂಡ ಅಮೆರಿಕ

    ಗಿರೀಶ್ ನಮ್ಮದು ಮಾತ್ರ ಅಲ್ಲ ಬೇರೆಯವರದ್ದು ಕೂಡ ಬಿಲ್‌ ಬಾಕಿ ಇದೆ. ಪದೇಪದೇ ಮನೆಗೆ ಬರಬೇಡಿ, ನಾನು ಕಟ್ಟುತ್ತೇನೆ ಎಂದು ಬೈದಿದ್ದಾನೆ. ಅಲ್ಲದೆ, ಅವಾಚ್ಯ ಪದಗಳಿಂದ ನಿಂದಿಸಿ, ಬಿಲ್ ಕಲೆಕ್ಟರ್ ಪಾರ್ವತೇಶ್ ಗೌಡ ಹಾಗೂ ಜೆಸ್ಕಾಂ ಸಿಬ್ಬಂದಿ ನವೀನ್‌ಕುಮಾರ್ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ.  ಈ ಕುರಿತು  ಕುರಿತು ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಂತಿಮ ಹಂತದಲ್ಲಿ ಕೇಂದ್ರ ಬಜೆಟ್ – ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ – ಜೆಸ್ಕಾಂ ಲೆಕ್ಕಾಧಿಕಾರಿಗೆ ಎಸಿಬಿ ಶಾಕ್

    ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ – ಜೆಸ್ಕಾಂ ಲೆಕ್ಕಾಧಿಕಾರಿಗೆ ಎಸಿಬಿ ಶಾಕ್

    ಯಾದಗಿರಿ: ನಗರದ ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಕಳೆದ 20 ವರ್ಷದಿಂದ ಯಾದಗಿರಿ ಜೆಸ್ಕಾಂ ಕಚೇರಿಯಲ್ಲಿ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ರಾಜು ಪತ್ತಾರ ಮೇಲೆ ಆದಾಯಕ್ಕೂ ಮೀರಿ ಆಸ್ತಿ ಹೊಂದಿದ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆ ಯಾದಗಿರಿ ನಗರದ ಸಹರಾ ಕಾಲೋನಿಯಲ್ಲಿರುವ ನಿವಾಸಿ ಮೇಲೆ ಎಸಿಬಿ ದಾಳಿ ನಡೆಸಿದೆ. ದಾಳಿಯಲ್ಲಿ ಅಪಾರ ಪ್ರಮಾಣದ ನಗದು ಹಣ, ಚಿನ್ನಾಭರಣ ಸೇರಿದಂತೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

    ಎಸಿಬಿ ಎಸ್‍ಪಿ ಮಹೇಶ್ ಮೇಗಣ್ಣನವರ್ ಹಾಗೂ ಡಿವೈಎಸ್‍ಪಿ ಉಮಾಶಂಕರ್, ಇನ್‍ಸ್ಪೆಕ್ಟರ್ ಗುರುಪಾದ ಬಿರಾದರ್, ಶರಣಬಸವ ಕೊಡ್ಲಾ, ಮತ್ತು ಸಿಬ್ಬಂದಿ ವಿಜಯ್, ಗುತ್ತಪ್ಪಗೌಡ, ಅಮರನಾಥ್, ಸಾಬಣ್ಣ, ರವಿ ನೇತೃತ್ವದ ತಂಡ ಈ ದಾಳಿ ನಡೆಸಿದೆ. ಇನ್ನೂ ದಾಳಿ ವೇಳೆ ಅಧಿಕಾರಿ ಮನೆಯಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.