Tag: ghana

  • ಘಾನಾದಲ್ಲಿ ಹೆಲಿಕಾಪ್ಟರ್ ಪತನ – ಇಬ್ಬರು ಸಚಿವರು ಸೇರಿ 8 ಮಂದಿ ಸಾವು

    ಘಾನಾದಲ್ಲಿ ಹೆಲಿಕಾಪ್ಟರ್ ಪತನ – ಇಬ್ಬರು ಸಚಿವರು ಸೇರಿ 8 ಮಂದಿ ಸಾವು

    ಘಾನಾ: ಇಲ್ಲಿನ ರಾಜಧಾನಿ ಅಕ್ರಾದಿಂದ (Accra) ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಘಾನಾ ವಾಯುಪಡೆಗೆ ಸೇರಿದ ಮಿಲಿಟರಿ ಹೆಲಿಕಾಪ್ಟರ್ (Military Helicopter) ಪತನಗೊಂಡು ಇಬ್ಬರು ಸಚಿವರು ಸೇರಿ ಎಂಟು ಜನ ಸಾವನ್ನಪ್ಪಿದ್ದಾರೆ.

    ಬುಧವಾರ (ಆ.6) ಬೆಳಿಗ್ಗೆ ಅಕ್ರಾದಿಂದ ಚಿನ್ನದ ಗಣಿಗಾರಿಕಾ ಪ್ರದೇಶವಾದ ಒಬುವಾಸಿಗೆ ಹೋಗುತ್ತಿದ್ದ Z9 ಮಿಲಿಟರಿ ಹೆಲಿಕಾಪ್ಟರ್ ಘಾನಾದ ದಕ್ಷಿಣದಲ್ಲಿರುವ ಅಶಾಂತಿ ಎಂಬಲ್ಲಿ ಪತನಗೊಂಡಿದೆ. ಈ ವೇಳೆ ಘಾನಾದ ರಕ್ಷಣಾ ಸಚಿವ ಎಡ್ವರ್ಡ್ ಒಮಾನೆ ಬೋಮಾ, ಪರಿಸರ ಸಚಿವ ಇಬ್ರಾಹಿಂ ಮುರ್ತಲಾ ಮುಹಮ್ಮದ್ ಮೃತಪಟ್ಟಿರುವುದಾಗಿ ಘಾನಾ ಸರ್ಕಾರ ದೃಢಪಡಿಸಿದೆ.ಇದನ್ನೂ ಓದಿ: ಕಳ್ಳನ ಜೊತೆಗೆ ಪೊಲೀಸಪ್ಪ ರೂಮ್ ಶೇರ್ – ಕರ್ತವ್ಯ ಲೋಪ; ಪೇದೆ ಸಸ್ಪೆಂಡ್

    ಇನ್ನುಳಿದಂತೆ ಮೂವರು ಅಧಿಕಾರಿಗಳು ಹಾಗೂ ಮೂವರು ಹೆಲಿಕಾಪ್ಟರ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

    Z9 ಮಿಲಿಟರಿ ಹೆಲಿಕಾಪ್ಟರ್‌ನ್ನು ಸಾಮಾನ್ಯವಾಗಿ ಸಾರಿಗೆ ಹಾಗೂ ವೈದ್ಯಕೀಯ ಸಂಬಂಧಿತ ವಸ್ತುಗಳನ್ನು ಸ್ಥಳಾಂತರಿಸಲು ಉಪಯೋಗಿಸುತ್ತಾರೆ. ಸದ್ಯ ಈ ಅವಘಡವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಲಾಗಿದೆ. ಇದು ಕಳೆದ ಒಂದು ದಶಕದಲ್ಲಿ ಘಾನಾದಲ್ಲಿ ಸಂಭವಿಸಿದ ಅತ್ಯಂತ ಭೀಕರ ದುರಂತಗಳಲ್ಲಿ ಒಂದಾಗಿದೆ.

    ಇದಕ್ಕೂ ಮುನ್ನ 2014ರಲ್ಲಿ ಹೆಲಿಕಾಪ್ಟರ್‌ವೊಂದು ಕರಾವಳಿಯಲ್ಲಿ ಪತನಗೊಂಡು ಮೂರು ಜನರು ಸಾವನ್ನಪ್ಪಿದ್ದರು. 2021ರಲ್ಲಿ ವಿಮಾನವೊಂದು ರನ್‌ವೇ ದಾಟಿದ ಬಳಿಕ ಪ್ರಯಾಣಿಕರಿದ್ದ ಬಸ್‌ಗೆ ಡಿಕ್ಕಿ ಹೊಡೆದು 10 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಮಹಾದೇವಪುರದಲ್ಲಿ ಮತಗಳ್ಳತನ – ದಾಖಲೆ ಸಮೇತ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ

  • ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ `ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ (Officer Of The Order Of The Star) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    5 ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಮೊದಲು ಘಾನಾ (Ghana) ದೇಶಕ್ಕೆ ಭೇಟಿ ನೀಡಿದ್ದಾರೆ. 30 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿ ಇದಾಗಿದೆ. ಈ ಸಂದರ್ಭದಲ್ಲಿ ಪ್ರಭಾವಶಾಲಿ ಜಾಗತಿಕ ನಾಯಕ ಎಂದು ಗುರುತಿಸಿ ಘಾನಾದ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮ (John Dramani Mahama) ಅವರು ಮೋದಿಗೆ ರಾಷ್ಟ್ರೀಯ ಗೌರವ `ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.ಇದನ್ನೂ ಓದಿ: ಕೈಕೊಟ್ಟು ಬೇರೆ ಮದುವೆಯಾಗಲು ನಿರ್ಧರಿಸಿದ ಪ್ರೇಯಸಿ – ಲಾಡ್ಜ್‌ಗೆ ಕರೆಸಿ 20 ಬಾರಿ ಇರಿದು ಕೊಂದ ಪಾಗಲ್‌ ಪ್ರೇಮಿ

    ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಈ ಗೌರವ ಕೇವಲ ವೈಯಕ್ತಿಕ ಶ್ರಮದಿಂದಲ್ಲ, ಇದು 140 ಕೋಟಿ ಭಾರತೀಯರ ಸಾಧನೆ. ಅವರ ಪರವಾಗಿ ನಾನು ಇದನ್ನು ಸ್ವೀಕರಿಸಿದ್ದೇನೆ. ಈ ಪ್ರಶಸ್ತಿಯನ್ನು ರಾಷ್ಟ್ರದ ಯುವಜನತೆಗೆ ಅರ್ಪಿಸುತ್ತೇನೆ ಹಾಗೂ ಇದು ಭಾರತದ ಶ್ರೀಮಂತ ಪರಂಪರೆಯನ್ನು ಎತ್ತಿತೋರಿಸುತ್ತದೆ ಎಂದು ತಿಳಿಸಿದ್ದಾರೆ. ಈ ಕುರಿತು ಮೋದಿಯವರು ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಘಾನಾದ ರಾಷ್ಟ್ರೀಯ ಪ್ರಶಸ್ತಿ `ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ನೀಡಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

    ಈ ಪ್ರಶಸ್ತಿಯು ಭಾರತ ಮತ್ತು ಘಾನಾ ನಡುವಿನ ಸ್ನೇಹವನ್ನು ಗಟ್ಟಿಯಾಗಿರಿಸುತ್ತದೆ ಮತ್ತು ದ್ವಿಪಕ್ಷೀಯ ಸಂಬಂಧಗಳಿಗೆ ಒತ್ತು ನೀಡುತ್ತದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಈಡೇರದ ಸರ್ಕಾರದ ಭರವಸೆ | ಮತ್ತೆ ಸಾರಿಗೆ ನೌಕರರಿಂದ ಮುಷ್ಕರಕ್ಕೆ ಪ್ಲ್ಯಾನ್‌ – ಇಂದು ಮಹತ್ವದ ಸಭೆ

  • ಘಾನಾದಿಂದ ಬ್ರೆಜಿಲ್‌ವರೆಗೆ – ಆಪರೇಷನ್ ಸಿಂಧೂರ, ಗ್ಲೋಬಲ್ ಸೌತ್ ಸಂಬಂಧಕ್ಕೆ ಮೋದಿ ಒತ್ತು

    ಘಾನಾದಿಂದ ಬ್ರೆಜಿಲ್‌ವರೆಗೆ – ಆಪರೇಷನ್ ಸಿಂಧೂರ, ಗ್ಲೋಬಲ್ ಸೌತ್ ಸಂಬಂಧಕ್ಕೆ ಮೋದಿ ಒತ್ತು

    ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಜು.2 ರಿಂದ 9ರವರೆಗೆ ವಿದೇಶ ಪ್ರವಾಸಕ್ಕೆ ತೆರಳಲಿದ್ದು, ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ದೇಶಗಳಿಗೆ ಭೇಟಿ ನೀಡಲಿದ್ದಾರೆ.

    ಗ್ಲೋಬಲ್ ಸೌತ್ ರಾಷ್ಟ್ರಗಳೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ. `ಆಪರೇಷನ್ ಸಿಂಧೂರ’ (Operation Sindoor) ಮೂಲಕ ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಜಾಗತಿಕವಾಗಿ ಮಂಡಿಸುವುದು ಮತ್ತು ರಾಜತಾಂತ್ರಿಕ ಸಹಕಾರವನ್ನು ಉತ್ತೇಜಿಸುವುದಾಗಿದೆ. ಈ ಭೇಟಿಯು ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಗುರಿಯನ್ನು ಹೊಂದಿದೆ.ಇದನ್ನೂ ಓದಿ: ಸಾರ್ವಕಾಲಿಕ ದಾಖಲೆಯತ್ತ ತೆಂಗಿನಕಾಯಿ ದರ – ಕೆಜಿಗೆ ಬರೋಬ್ಬರಿ 70-80 ರೂ.

    ಘಾನಾ:
    ನಾಳೆ ವಿದೇಶ ಪ್ರವಾಸ ಕೈಗೊಳ್ಳಲಿರುವ ಮೋದಿ ಮೊದಲು ಘಾನಾ ದೇಶಕ್ಕೆ ಭೇಟಿ ನೀಡಲಿದ್ದಾರೆ. ಕಳೆದ 30 ವರ್ಷಗಳಲ್ಲಿ ಭಾರತದ ಪ್ರಧಾನಮಂತ್ರಿಯ ಮೊದಲ ಭೇಟಿ ಇದಾಗಿದೆ. ಜುಲೈ 2-3ರಂದು ನಡೆಯುವ ಈ ಭೇಟಿಯಲ್ಲಿ ಘಾನಾದ ರಾಷ್ಟ್ರಪತಿ ಜಾನ್ ಡ್ರಮಾನಿ ಮಹಾಮಾರೊಡನೆ ಮಾತುಕತೆ ನಡೆಸಲಿದ್ದಾರೆ. ಆರ್ಥಿಕ ಸಹಕಾರ, ಲಸಿಕೆ ಉತ್ಪಾದನಾ ಕೇಂದ್ರ ಸ್ಥಾಪನೆ, ಡಿಜಿಟಲ್ ತಂತ್ರಜ್ಞಾನ ಮತ್ತು ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ವೃದ್ಧಿಗೊಳಿಸುವುದು ಈ ಭೇಟಿಯ ಮುಖ್ಯ ಗುರಿಯಾಗಿದೆ. ಭಾರತ ಮತ್ತು ಘಾನಾದ ದ್ವಿಪಕ್ಷೀಯ ವ್ಯಾಪಾರವು 3 ಬಿಲಿಯನ್ ಡಾಲರ್ ಮೌಲ್ಯದ್ದಾಗಿದ್ದು, ಭಾರತವು ಘಾನಾದಿಂದ ಚಿನ್ನವನ್ನು ಆಮದು ಮಾಡಿಕೊಳ್ಳುವ ಪ್ರಮುಖ ರಾಷ್ಟ್ರವಾಗಿದೆ. ಈ ವೇಳೆ ಮೋದಿಯವರು ಘಾನಾದ ಸಂಸತ್ತನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

    ಟ್ರಿನಿಡಾಡ್ ಮತ್ತು ಟೊಬಾಗೊ
    ಜುಲೈ 3-4ರಂದು ಮೋದಿ ಟ್ರಿನಿಡಾಡ್ ಮತ್ತು ಟೊಬಾಗೊ ದೇಶಕ್ಕೆ ಭೇಟಿ ನೀಡಲಿದ್ದಾರೆ, 1999ರ ನಂತರ ಭಾರತದ ಪ್ರಧಾನಮಂತ್ರಿಯ ಮೊದಲ ಭೇಟಿ ಇದಾಗಿದೆ. ಈ ವರ್ಷ ಭಾರತೀಯ ವಲಸಿಗರು ಈ ದೇಶಕ್ಕೆ ಆಗಮಿಸಿದ 180ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದ್ದು, ಈ ಭೇಟಿಯು ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಟ್ರಿನಿಡಾಡ್‌ನ ರಾಷ್ಟ್ರಪತಿ ಕ್ರಿಸ್ಟಿನ್ ಕಾಂಗಲೂ ಮತ್ತು ಪ್ರಧಾನಮಂತ್ರಿ ಕಮಲಾ ಪರ್ಸಾದ್-ಬಿಸ್ಸೇಸರ್ ಇಬ್ಬರೂ ಭಾರತೀಯ ಮೂಲದವರಾಗಿದ್ದಾರೆ. ಇದು ಈ ಭೇಟಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತದೆ. ಮೋದಿಯವರು ಟ್ರಿನಿಡಾಡ್ ಸಂಸತ್ತಿನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಯುಪಿಐ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು ಒಪ್ಪಂದವನ್ನು ಮಾಡಿಕೊಳ್ಳಲಾಗುವುದು.

    ಅರ್ಜೆಂಟೀನಾ
    ಜುಲೈ 4-5ರಂದು, ಮೋದಿಯವರು ಅರ್ಜೆಂಟೀನಾಕ್ಕೆ ಭೇಟಿ ನೀಡಿ ರಾಷ್ಟ್ರಪತಿ ಜೇವಿಯರ್ ಮಿಲೇ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. 57 ವರ್ಷಗಳಲ್ಲಿ ಭಾರತದ ಪ್ರಧಾನ ಮಂತ್ರಿಯ ಮೊದಲ ಭೇಟಿ ಇದಾಗಿದೆ. ರಕ್ಷಣಾ ಸಹಕಾರ, ಕೃಷಿ, ಗಣಿಗಾರಿಕೆ, ಶೆಲ್ ಗ್ಯಾಸ್ ಮತ್ತು ನವೀಕರಣ ಶಕ್ತಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ವೃದ್ಧಿಗೊಳಿಸುವುದು ಈ ಭೇಟಿಯ ಗುರಿಯಾಗಿದೆ. ಅರ್ಜೆಂಟೀನಾದಲ್ಲಿ ಭಾರತದ ಗಣಿಗಾರಿಕೆ ಕಂಪನಿಯಾದ KABIL ಲಿಥಿಯಂ ಮತ್ತು ತಾಮ್ರದಂತಹ ಅಪರೂಪದ ಖನಿಜಗಳ ಶೋಧನೆಗೆ ಒಪ್ಪಂದವನ್ನು ಮಾಡಿಕೊಂಡಿದೆ.

    ಬ್ರೆಜಿಲ್:
    ಜುಲೈ 5-8 ರಂದು, ಮೋದಿಯವರು ಬ್ರೆಜಿಲ್‌ಗೆ ಭೇಟಿ ನೀಡಿ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಶೃಂಗಸಭೆಯು ಜಾಗತಿಕ ಆಡಳಿತ ಸುಧಾರಣೆ, ಶಾಂತಿ, ಎಐ ನಿಯಂತ್ರಣ, ಹವಾಮಾನ ಬದಲಾವಣೆ ಮತ್ತು ಆರೋಗ್ಯ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಲಿದೆ. ಭಾರತವು 2026ರಲ್ಲಿ ಬ್ರಿಕ್ಸ್‌ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದೆ. ಬ್ರೆಜಿಲ್‌ನ ರಾಷ್ಟ್ರಪತಿ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಜೊತೆ ದ್ವಿಪಕ್ಷೀಯ ಮಾತುಕತೆಯಲ್ಲಿ ರಕ್ಷಣಾ ಉತ್ಪಾದನೆ, ಸಮುದ್ರ ಗಸ್ತು ಹಡಗುಗಳು, ಮತ್ತು ಆಕಾಶ್ ಕ್ಷಿಪಣಿ ವ್ಯವಸ್ಥೆಯಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ಗಟ್ಟಿಗೊಳಿಸಲಾಗುವುದು. `ಆಪರೇಷನ್ ಸಿಂಧೂರ’ದಲ್ಲಿ ಬಳಸಲಾದ ಭಾರತದ ರಕ್ಷಣಾ ತಂತ್ರಜ್ಞಾನದ ಬಗ್ಗೆ ಬ್ರೆಜಿಲ್ ಆಸಕ್ತಿಯನ್ನು ತೋರಿದೆ.ಇದನ್ನೂ ಓದಿ: ರಾಜ್ಯದಲ್ಲಿ ಐದೂವರೆ ವರ್ಷದಲ್ಲಿ 82 ಹುಲಿಗಳ ಸಾವು; ಸಮಗ್ರ ವರದಿ ಕೇಳಿದ ಅರಣ್ಯ ಸಚಿವ

    ನಮೀಬಿಯಾ:
    ಭೇಟಿಯ ಕೊನೆಯ ತಾಣವಾದ ನಮೀಬಿಯಾಕ್ಕೆ ಜುಲೈ 9 ರಂದು ಮೋದಿಯವರು ಭೇಟಿ ನೀಡಲಿದ್ದಾರೆ. 27 ವರ್ಷಗಳಲ್ಲಿ ಭಾರತದ ಪ್ರಧಾನಮಂತ್ರಿಯ ಮೊದಲ ಭೇಟಿ ಇದಾಗಿದೆ. ನಮೀಬಿಯಾದ ರಾಷ್ಟ್ರಪತಿ ನೆಟುಂಬೊ ನಾಂಡಿ-ನ್ಡೈತ್ವಾಹ್ ಜೊತೆ ಮಾತುಕತೆ ನಡೆಸಲಾಗುವುದು ಮತ್ತು ಯುಪಿಐ ವ್ಯವಸ್ಥೆಯನ್ನು ಜಾರಿಗೆ ತರಲು ಒಪ್ಪಂದವನ್ನು ಮಾಡಿಕೊಳ್ಳಲಾಗುವುದು. ಮೋದಿಯವರು ನಮೀಬಿಯಾದ ಸಂಸತ್ತನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಡಿಕೋಲನೈಸೇಶನ್ ಐಕಾನ್ ಸ್ಯಾಮ್ ನುಜೋಮಗೆ ಗೌರವ ಸಲ್ಲಿಸಲಿದ್ದಾರೆ.

    ಭಯೋತ್ಪಾದನೆಯ ವಿರುದ್ಧ ಜಾಗತಿಕ ನಿಲುವು
    ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಮೇ 7ರಂದು ಪಾಕಿಸ್ತಾನದಲ್ಲಿನ ಉಗ್ರರ ತಾಣಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಕಾರ್ಯಾಚರಣೆಯೇ `ಆಪರೇಷನ್ ಸಿಂಧೂರ’. ಈ ಭೇಟಿಯು ಪ್ರಮುಖವಾಗಿ ಈ ಕಾರ್ಯಾಚರಣೆಗೆ ಸಂಬಂಧಿಸಿದೆ. ಇದು ಭಯೋತ್ಪಾದನೆಯ ವಿರುದ್ಧ ಭಾರತದ ಜಾಗತಿಕ ಕರೆಗೆ ಬೆಂಬಲವನ್ನು ಕೋರಲಿದೆ.

    ಗ್ಲೋಬಲ್ ಸೌತ್‌ನೊಂದಿಗೆ ಭಾರತದ ರಾಜತಾಂತ್ರಿಕತೆ
    ಈ ಐದು ರಾಷ್ಟ್ರಗಳ ಭೇಟಿಯು ಗ್ಲೋಬಲ್ ಸೌತ್ ರಾಷ್ಟ್ರಗಳೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸುವ ಒಂದು ಕಾರ್ಯತಂತ್ರದ ಹೆಜ್ಜೆಯಾಗಿದೆ. ರಕ್ಷಣಾ ಸಹಕಾರ, ಡಿಜಿಟಲ್ ಮೂಲಸೌಕರ್ಯ, ಕೃಷಿ, ಮತ್ತು ಶಕ್ತಿಯಂತಹ ಕ್ಷೇತ್ರಗಳಲ್ಲಿ ಭಾರತವು ತನ್ನ ಪಾಲುದಾರಿಕೆಯನ್ನು ವಿಸ್ತರಿಸುವ ಗುರಿಯನ್ನು ಹೊಂದಿದೆ.ಇದನ್ನೂ ಓದಿ: ಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

  • ಬಿಜೆಪಿ ತೊರೆದ ಗೋವಾ ಮಾಜಿ ಸಿಎಂ ಪುತ್ರ – ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ

    ಬಿಜೆಪಿ ತೊರೆದ ಗೋವಾ ಮಾಜಿ ಸಿಎಂ ಪುತ್ರ – ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ

    ಪಣಜಿ: ತನ್ನ ತಂದೆಯ ಕ್ಷೇತ್ರ ಪಣಜಿಯಲ್ಲಿ ಸ್ಪರ್ಧಿಸಲು ಟಿಕೆಟ್‌ ನಿರಾಕರಿಸಿದ್ದಕ್ಕೆ ಗೋವಾ ಮಾಜಿ ಸಿಎಂ ಮನೋಹರ್‌ ಪರಿಕ್ಕರ್‌ ಪುತ್ರ ಉತ್ಪಲ್‌ ಪರಿಕ್ಕರ್‌, ಬಿಜೆಪಿ ತೊರೆದಿದ್ದಾರೆ. ಅಲ್ಲದೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

    ಕಳೆದ ಹಾಗೂ ಈ ಚುನಾವಣೆ ಸಮಯದಲ್ಲಿ ಪಕ್ಷಕ್ಕೆ ಮನವರಿಕೆ ಮಾಡಲು ಪ್ರಯತ್ನಿಸಿದೆ. ಎಷ್ಟೇ ಪ್ರಯತ್ನಿಸಿದರೂ ಪಣಜಿ ಕ್ಷೇತ್ರದ ಉಮೇದುವಾರಿಕೆಯನ್ನು ಪಡೆಯಲು ನನಗೆ ಸಾಧ್ಯವಾಗಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ಪಕ್ಷಕ್ಕೆ ಅವಕಾಶವಾದಿಯಾಗಿ ಬಂದವರಿಗೆ ಟಿಕೆಟ್‌ ನೀಡಲಾಗಿದೆ. ಅದಕ್ಕಾಗಿಯೇ ನಾನು ಪಕ್ಷದಿಂದ ಹೊರಬರುವ ನಿರ್ಧಾರ ಮಾಡಿದ್ದೇನೆ. ಪಣಜಿ ಜನರು ನನ್ನ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತಾರೆ ಎಂದು ಪರಿಕ್ಕರ್‌ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪರಿಕ್ಕರ್ ಪುತ್ರನನ್ನು ಎಎಪಿಗೆ ಆಹ್ವಾನಿಸಿದ ಕೇಜ್ರಿವಾಲ್

    ಮೂರು ಬಾರಿ ಗೋವಾ ಮುಖ್ಯಮಂತ್ರಿಯಾಗಿದ್ದ ಹಾಗೂ ಕಡಲತೀರದ ರಾಜ್ಯದಲ್ಲಿ ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಮನೋಹರ್‌ ಪರಿಕ್ಕರ್‌ ಅವರು 2019ರಲ್ಲಿ ನಿಧನರಾದರು. ತಮ್ಮ ವರ್ಚಸ್ಸು ಹಾಗೂ ಜನಪ್ರಿಯತೆಯಿಂದಾಗಿ 25 ವರ್ಷಗಳ ಕಾಲ ಪಣಜಿ ಕ್ಷೇತ್ರದಲ್ಲಿ ರಾಜಕೀಯ ಪ್ರಾಬಲ್ಯ ಹೊಂದಿದ್ದರು.

    ತಂದೆಯಂತೆಯೇ ಮಗ ಉತ್ಪಲ್‌ ಪರಿಕ್ಕರ್‌ ಕೂಡ ಪಣಜಿ ಕ್ಷೇತ್ರದಿಂದಲೇ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಪಣಜಿ ಕ್ಷೇತ್ರದಲ್ಲಿ ಟಿಕೆಟ್‌ ನೀಡಲು ಬಿಜೆಪಿ ನಿರಾಕರಿಸಿದೆ. ಇದನ್ನೂ ಓದಿ: ಸಿಎಂ ಅಭ್ಯರ್ಥಿಯಾಗಿ ನನ್ನ ಮುಖವನ್ನು ನೋಡಬಹುದು ಅಲ್ಲವೇ: ಪ್ರಿಯಾಂಕಾ ಗಾಂಧಿ