Tag: Ghataprabha

  • ಮಹಿಳೆಗೆ ಚಪಲಿ ಹಾರ ಹಾಕಿ ಮೆರವಣಿಗೆ ಪ್ರಕರಣ- 13 ಜನರ ಬಂಧನ

    ಮಹಿಳೆಗೆ ಚಪಲಿ ಹಾರ ಹಾಕಿ ಮೆರವಣಿಗೆ ಪ್ರಕರಣ- 13 ಜನರ ಬಂಧನ

    ಬೆಳಗಾವಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡುವ ಮೂಲಕ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಘಟಪ್ರಭಾದಲ್ಲಿ (Ghataprabha) ನಡೆದಿದ್ದು, ಇದೀಗ ಪೊಲೀಸರು 13 ಮಂದಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

    ಕೆಲ ಜನರು ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿ, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ನಂತರ ಆಕೆಗೆ ಚಪ್ಪಲಿ ಹಾರವನ್ನು ಹಾಕಿ ಮೆರವಣಿಗೆ ಮಾಡಿದ್ದಾರೆ. ಈ ವೇಳೆ ನಮ್ಮ ಪೊಲೀಸರು ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವುದಾಗಿ ಬೆಳಗಾವಿಯಲ್ಲಿ ಎಸ್‌ಪಿ ಡಾ. ಭೀಮಾಶಂಕರ್ ಗುಳೇದ ತಿಳಿಸಿದ್ದಾರೆ.

    ಘಟನೆಯೇನು?
    ಹನಿಟ್ರ್ಯಾಪ್ ಹಾಗೂ ಬ್ಲಾಕ್‌ಮೇಲ್ ಆರೋಪ ಹೊರಿಸಿ ಮಹಿಳೆಯೊಬ್ಬರಿಗೆ ಸ್ಥಳೀಯರೇ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಊರಿನವರು ಹಾಗೂ ಮಹಿಳೆ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ಕಾರಣಕ್ಕೆ ಮೃತ್ಯುಂಜಯ ಸರ್ಕಲ್‌ನಲ್ಲಿ ಮಹಿಳೆ ಮೇಲೆ ಸ್ಥಳೀಯರು ಅಮಾನವೀಯವಾಗಿ ವರ್ತಿಸಿದ್ದಾರೆ. ಇದನ್ನೂ ಓದಿ: ಪಾಕ್ ಕ್ರಿಕೆಟಿಗರಿಗೆ ಜೈ ಶ್ರೀರಾಮ್‌ ಘೋಷಣೆ: ಉದಯನಿಧಿ ಆಕ್ಷೇಪ

    ಇದೀಗ ಮಹಿಳೆಯ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಿ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭೀಮಾಶಂಕರ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಅರಭಾವಿಮಠದ ಸ್ವಾಮೀಜಿ ಲಿಂಗೈಕ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿಯಲ್ಲಿ ಸೇತುವೆ ದಾಟುವಾಗ ಆಯತಪ್ಪಿ ನದಿಗೆ ಬಿದ್ದಿದ್ದ ಇಬ್ಬರ ಶವ ಪತ್ತೆ

    ಬೆಳಗಾವಿಯಲ್ಲಿ ಸೇತುವೆ ದಾಟುವಾಗ ಆಯತಪ್ಪಿ ನದಿಗೆ ಬಿದ್ದಿದ್ದ ಇಬ್ಬರ ಶವ ಪತ್ತೆ

    ಬೆಳಗಾವಿ: ಆಯತಪ್ಪಿ ಬೈಕ್ ಮೇಲಿಂದ ಬಿದ್ದು ಇಬ್ಬರು ನದಿಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹಗಳನ್ನು ಎಸ್‌ಡಿಆರ್‌ಎಫ್ (SDRF) ತಂಡದ ಸಿಬ್ಬಂದಿ ಹೊರತೆಗೆದಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ (Mudalagi) ತಾಲೂಕಿನ ಅವರಾದಿ ಗ್ರಾಮದ ಬಳಿಯ ಘಟಪ್ರಭಾ ನದಿ ಸೇತುವೆ ದಾಟುವ ಸಂದರ್ಭ ಆಯತಪ್ಪಿ ಇಬ್ಬರು ಸವಾರರು ನದಿಗೆ ಬಿದ್ದಿದ್ದರು. ಚನ್ನಪ್ಪ ಹರಿಜನ (38), ದುರ್ಗಾಣಿ ಹರಿಜನ (35) ಮೃತ ದುರ್ದೈವಿಗಳಾಗಿದ್ದು, ನದಿಯಿಂದ ಮೃತದೇಹವನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಜೈನಮುನಿ ಹತ್ಯೆ ಕೇಸ್ ತನಿಖೆ ಚುರುಕು- 7 ದಿನ ಹಂತಕರು ಪೊಲೀಸ್ ಕಸ್ಟಡಿಗೆ

    ಕೆಲಸದ ನಿಮಿತ್ತ ಅವರಾದಿ ಗ್ರಾಮದಿಂದ ಮಹಾಲಿಂಗಪುರಕ್ಕೆ (Mahalingapura) ತೆರಳುತ್ತಿದ್ದಾಗ ಘಟನೆ ನಡೆದಿತ್ತು. ನಿರಂತರ ಕಾರ್ಯಾಚರಣೆ ನಡೆಸಿ ಮಂಗಳವಾರ ಚನ್ನಪ್ಪ ಹರಿಜನ ಮೃತದೇಹ ಎಸ್‌ಡಿಆರ್‌ಎಫ್ ತಂಡದ ಸಿಬ್ಬಂದಿ ಹೊರತೆಗೆದಿದ್ದರು. ಇಂದು ಮುಂಜಾನೆಯೇ ನದಿಗಿಳಿದು ಕಾರ್ಯಾಚರಣೆ ನಡೆಸಿ ದುರ್ಗಾಣಿ ಅವರ ಮೃತದೇಹವನ್ನೂ ಹೊರತೆಗೆದಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಡಹಗಲೇ ಡಬಲ್ ಮರ್ಡರ್!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಹುಡುಗ ನಾಪತ್ತೆ

    ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಹುಡುಗ ನಾಪತ್ತೆ

    ಬೆಳಗಾವಿ: ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಹುಡುಗನೊಬ್ಬ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದ ಬಳಿ ನಡೆದಿದೆ.

    ಕಮಲದಿನ್ನಿ ಗ್ರಾಮದ ಉದಯ ಪರಶುರಾಮ ಹಾದಿಮನಿ(17) ನದಿಯಲ್ಲಿ ನಾಪತ್ತೆಯಾವನು. ಈತ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಫ್ಯಾಬ್ರಿಕ್ ಗೋಡೌನ್‍ನಲ್ಲಿ ಬೆಂಕಿ – ಸ್ಥಳಕ್ಕೆ ಆಗಮಿಸಿದ 18 ಅಗ್ನಿ ಶಾಮಕ ವಾಹನ

    ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಪರಶುರಾಮನಿಗಾಗಿ ಶೋಧ ಕಾರ್ಯವನ್ನು ಆರಂಭಿಸಿದ್ದರು. ಗುರುವಾರ ರಾತ್ರಿ ಕತ್ತಲು ಇರುವುದರಿಂದ ಶೋಧಕಾರ್ಯ ಸ್ಥಗಿತಗೊಳಿಸಿದ್ದರು. ಬಳಿಕ ಶುಕ್ರವಾರ ಬೆಳಗ್ಗೆ 8.30ರಿಂದ ಮತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ ಅಗ್ನಿಶಾಮಕ ಸಿಬ್ಬಂದಿ ಎಸ್‍ಡಿಆರೆಫ್ ತಂಡಕ್ಕೆ ಮಾಹಿತಿ ರವಾನಿಸಿ ಅಗ್ನಿಶಾಮಕ ಅಧಿಕಾರಿಗಳು ಮತ್ತು ಎನ್‍ಡಿಆರೆಫ್ ತಂಡ ಬೋಟ್ ಮೂಲಕ ಯುವಕನ ಮತ್ತೆಗೆ ಶೋಧಕಾರ್ಯ ಮುಂದುವರಿಸಿದ್ದಾರೆ.

    ಈ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಮಳೆ -ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

    ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಮಳೆ -ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

    ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಒಂದು ಕಡೆ ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು ಪಡೆದಿದ್ದು, ಅತ್ತ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲಟ್ ಘೋಷಿಸಲಾಗಿದೆ. ಪುಣೆ, ಸತಾರಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 20ರವರೆಗೂ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಭಾರೀ ಮಳೆ ಆಗುವ ಮುನ್ನೆಚ್ಚರಿಕೆ ನೀಡಲಾಗಿದೆ.

    ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂಗಳಿಂದಲೂ ಅಪಾರ ಪ್ರಮಾಣದಲ್ಲಿ ನೀರನ್ನ ಹೊರಬಿಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ನವಿಲು ತೀರ್ಥ ಡ್ಯಾಂನಿಂದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸವದತ್ತಿ ತಾಲೂಕಿನ ಮುನವಳ್ಳಿ ಮನೆ, ಅಂಗಡಿಗಳು ಜಲಾವೃತಗೊಂಡಿವೆ. ಎಂಕೆ ಹುಬ್ಬಳ್ಳಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಮಂಡೋಳಿ ರಸ್ತೆಯಲ್ಲಿ ಪ್ರವಾಹದಲ್ಲಿ ಸಿಲುಕಿ ಒದ್ದಾಡ್ತಿದ್ದ ಬೈಕ್ ಸವಾರನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ವಡಗಾವಿ, ಓಂನಗರ, ಶಾಹು ನಗರ, ಮಚ್ಷೆ, ಮಾರಿಹಾಳ ಹಳ್ಳಗಳು ತುಂಬಿ ಹರಿಯುತ್ತಿವೆ. ಮಾರಿಹಾಳದಲ್ಲಿ ರಸ್ತೆಯ ಬದಿಯಲ್ಲಿ ಭೂಕುಸಿತ ಉಂಟಾಗಿದ್ದು, ಬೆಳಗಾವಿ-ಗೋವಾ ರಸ್ತೆ ಬಂದ್ ಆಗಿದೆ.

    ನವಿಲುತೀರ್ಥ ಡ್ಯಾಂನಿಂದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಮಲಪ್ರಭಾ ನದಿ ತಟದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿಲಾಗಿದೆ. ಕ್ಷೇತ್ರದ ಶಾಸಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿ ಕೆ ರಾಜೇಂದ್ರಗೆ ದೂರವಾಣಿ ಕರೆ ಮಾಡಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

    ಗೋವನಕೊಪ್ಪ-ಕೊಣ್ಣೂರು ಮಾರ್ಗದ ಹಳೆ ರಸ್ತೆ ಸೇತುವೆ ಜಲಾವೃತಗೊಂಡಿದೆ. ಸ್ಥಳಕ್ಕೆ ಎಸ್‍ಪಿ ಲೋಕೇಶ್ ಜಗಲಾಸರ್, ಎಸಿ ಗಂಗಪ್ಪ, ಬಾದಾಮಿ ತಹಸೀಲ್ದಾರ ಸುಹಾಸ ಇಂಗಳೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿಡಕಲ್ ಡ್ಯಾಂನಿಂದ 33 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟಿರುವ ಕಾರಣ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು ಮುಧೋಳ ತಾಲೂಕಿನ ಮಾಚಕನೂರಲ್ಲಿರುವ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.

    ತುಂಗಾಭದ್ರಾ ಜಲಾಶಯದ ಕ್ರಸ್ಟ್ ಗೇಟ್‍ನಿಂದ 4,539 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದ್ದು, ಹಾಲ್ನೊರೆಯಂತೆ ಉಕ್ಕುತ್ತಿರುವ ನೀರು ಬಣ್ಣದ ಬೆಳಕಿನಲ್ಲಿ ಚಿತ್ತಾರ ಮೂಡಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿರುವ ಜಲಾಶಯದ ಭರ್ತಿಗೆ ಅರ್ಧ ಅಡಿಯಷ್ಟೇ ಬಾಕಿ ಇದ್ದು, 1632 ಅಡಿಯಷ್ಟು ನೀರು ಸಂಗ್ರಹಗೊಂಡಿದೆ.

    ಯಾದಗಿರಿ ಜಿಲ್ಲೆಯ ನಾರಾಯಣಪುರ ಡ್ಯಾಂನಿಂದ 2 ಲಕ್ಷ 37 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗ್ತಿದೆ. ಹೀಗಾಗಿ ರಾಯಚೂರಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದ್ದು, ಎನ್‍ಡಿಆರ್‍ಎಫ್ ತಂಡ ಆಗಮಿಸಿದೆ. ಧಾರವಾಡ ತಾಲೂಕಿನ ಹೊಸೆಟ್ಟಿಯಲ್ಲಿ ಗ್ರಾಮಕ್ಕೆ ಕೆರೆ ನೀರು ನುಗ್ಗಿದೆ. ವಿಜಯಪುರ ಜಿಲ್ಲೆಯಲ್ಲೂ ಮಳೆ ಆಗಗುತ್ತಿದೆ. ಕಲಬುರಗಿ ಜಿಲ್ಲೆಯ ಸೊನ್ನ ಬ್ಯಾರೆಜ್‍ನಿಂದ ಭೀಮ ನದಿಗೆ 40 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ, ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಗದಗ ಜಿಲ್ಲೆಯಲ್ಲೂ ಪ್ರವಾಹ ಭೀತಿ ಉಂಟಾಗಿದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಲ್ಲೂ ಮಳೆ ಆಗ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಲ್ಲೂ ಮೂರು ದಿನ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.