Tag: Ghati Subrahmanya Temple

  • ಘಾಟಿ ಸುಬ್ರಹ್ಮಣ್ಯ ದೇವಾಲಯದ ರಸ್ತೆಯಲ್ಲಿ ಚಿರತೆ ದರ್ಶನ – ಭಕ್ತರಲ್ಲಿ ಆತಂಕ

    ಘಾಟಿ ಸುಬ್ರಹ್ಮಣ್ಯ ದೇವಾಲಯದ ರಸ್ತೆಯಲ್ಲಿ ಚಿರತೆ ದರ್ಶನ – ಭಕ್ತರಲ್ಲಿ ಆತಂಕ

    ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಚಿರತೆ (Leopard) ಉಪಟಳದ ಆತಂಕದ ನಡುವೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ (Ghati Subrahmanya Temple) ಸಾಗುವ ರಸ್ತೆಯಲ್ಲಿ ಚಿರತೆ ಕಂಡುಬಂದಿದ್ದು, ಭಕ್ತರ ಆತಂಕಕ್ಕೆ ಕಾರಣವಾಗಿದೆ.

    ಮಂಗಳವಾರ ಸಂಜೆ ಘಾಟಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮರುಳುತ್ತಿದ್ದ ಭಕ್ತರ ವಾಹನಗಳಿಗೆ ಲಘುಮೇನಹಳ್ಳಿ ಕ್ರಾಸ್ ಬಳಿ ಚಿರತೆ ಎದುರಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಲಘುಮೇನಹಳ್ಳಿ ಕ್ರಾಸ್ ಸಮೀಪ ಚಿರತೆ ರಸ್ತೆ ದಾಟಿದ್ದು, ವಾಹನ ಸವಾರರು ಆತಂಕಕ್ಕೆ ಒಳಗಾಗಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮೆಜೆಸ್ಟಿಕ್‌ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ

    ಕಳೆದ ಕೆಲ ದಿನಗಳ ಹಿಂದೆಯಷ್ಟೇ ಚನ್ನಾಪುರ ಗ್ರಾಮದ ಅಂಚಿನ ಕುರಿ ದೊಡ್ಡಿಗೆ ನುಗ್ಗಿದ್ದ ಚಿರತೆ ಕುರಿಯನ್ನು ತಿಂದು ಹೋಗಿತ್ತು. ಇದರಿಂದಾಗಿ ಗ್ರಾಮದಲ್ಲಿ ಸಂಜೆ ವೇಳೆ ಜನರು ಹೊರಗೆ ಬರಲು ಆತಂಕಪಡುವಂತಾಗಿತ್ತು. ಚನ್ನಾಪುರ ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ವತಿಯಿಂದ ಚನ್ನಾಪುರ ಸಮೀಪದ ನಂದಿಬೆಟ್ಟದ ತಪ್ಪಲಿನ ನೀಲಗಿರಿ ತೋಪಿನಲ್ಲಿ ಚಿರತೆ ಸೆರೆಹಿಡಿಯಲು ಬೋನು ಇರಿಸಲಾಗಿದೆ. ಇದನ್ನೂ ಓದಿ: ಕೊತ್ತಂಬರಿ ಸೊಪ್ಪಿನ ಹಾರ ಹಾಕಿ ಹೆಚ್‍ಡಿಕೆಯನ್ನು ಬರಮಾಡಿಕೊಂಡ ಗ್ರಾಮಸ್ಥರು

    Live Tv
    [brid partner=56869869 player=32851 video=960834 autoplay=true]

  • ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ-56 ಲಕ್ಷ ಹಣ ಸಂಗ್ರಹ

    ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ-56 ಲಕ್ಷ ಹಣ ಸಂಗ್ರಹ

    ಚಿಕ್ಕಬಳ್ಳಾಪುರ : ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, 56 ಲಕ್ಷ ಹಣ ಸಂಗ್ರಹವಾಗಿದೆ

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಇಂದು ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 56,64,318 ರೂ. ಮೊತ್ತ ಸಂಗ್ರಹವಾಗಿದೆ.

    ಇದರೊಂದಿಗೆ ರೂ 77,500 ಮೌಲ್ಯದ 2 ಕೆಜಿ 450 ಗ್ರಾಂ ಬೆಳ್ಳಿ, 13,600ರೂ ಮೌಲ್ಯದ 03 ಗ್ರಾಂ 40 ಮಿಲಿ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ. ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.  ಇದನ್ನೂ ಓದಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಲಕಿಗೆ ಕಿಡ್ನಿದಾನ ಮಾಡಿದ ತಾಯಿ!

    ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಜಿ.ಜೆ.ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗಾರಾಜ್, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಶಾಸ್ತ್ರಿ, ದೇವಾಲಯದ ಸೂಪರ್ ಡೆಂಟ್ ರಘು ಹುಚ್ಚಪ್ಪ ಸೇರಿದಂತೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.