Tag: Ghati Subramanya

  • ಪತ್ನಿಯೊಂದಿಗೆ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದ ಟೀಂ ಇಂಡಿಯಾ ಸ್ಟಾರ್‌ ಕೆ.ಎಲ್‌ ರಾಹುಲ್

    ಪತ್ನಿಯೊಂದಿಗೆ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದ ಟೀಂ ಇಂಡಿಯಾ ಸ್ಟಾರ್‌ ಕೆ.ಎಲ್‌ ರಾಹುಲ್

    ಚಿಕ್ಕಬಳ್ಳಾಪುರ: ಟೀಂ ಇಂಡಿಯಾ (Team India) ಸ್ಟಾರ್‌ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್ ರಾಹುಲ್ (KL Rahul) ಶನಿವಾರ ಪತ್ನಿಯೊಂದಿಗೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

    ಮಧ್ಯಾಹ್ನ 12:45ರ ಸುಮಾರಿಗೆ ಪತ್ನಿ ಅತಿಯಾಶೆಟ್ಟಿ ಜೊತೆ ಆಗಮಿಸಿದ ರಾಹುಲ್ ದೇವರ ದರ್ಶನ ಪಡೆದು ವಾಪಸಾಗಿದ್ದಾರೆ. ಇನ್ನೂ ಕೆ.ಎಲ್ ರಾಹುಲ್ ಸುಬ್ರಮಣ್ಯ ಸ್ವಾಮಿಯ ಭಕ್ತರು. ಈ ಹಿಂದೆಯೂ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ (Ghati Subramanya Temple) ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಇದನ್ನೂ ಓದಿ: ಏಷ್ಯಾಕಪ್‍ನಲ್ಲಿಂದು ಟೀಂ ಇಂಡಿಯಾ, ಪಾಕ್ ಹಣಾಹಣಿ- ಹೈವೋಲ್ಟೇಜ್ ಪಂದ್ಯಕ್ಕೆ ಅಭಿಮಾನಿಗಳ ಕಾತರ

    ಸದ್ಯ ಏಷ್ಯಾಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿರುವ ರಾಹುಲ್‌ ಮೊದಲ ಎರಡು ಪಂದ್ಯಗಳಿಂದ ದೂರ ಉಳಿದಿದ್ದರೆ, ಭಾರತ ಮತ್ತು ಪಾಕಿಸ್ತಾನ ಹಾಗೂ ಭಾರತ ಮತ್ತು ನೇಪಾಳ ನಡುವಿನ ಪಂದ್ಯಗಳಿಗೆ ಗೈರಾಗಲಿದ್ದು, ನಂತರ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ. ಇದನ್ನೂ ಓದಿ: ಕಿಂಗ್‌ ಕೊಹ್ಲಿ ಕಟ್ಟಿಹಾಕಲು ಬಾಬರ್‌ ಬಳಿ ಇದೆಯಾ ಮಾಸ್ಟರ್‌ ಪ್ಲ್ಯಾನ್‌? – ಇಬ್ಬರಲ್ಲಿ ಯಾರು ಬೆಸ್ಟ್‌?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಘಾಟಿ ಸುಬ್ರಹ್ಮಣ್ಯಕ್ಕೆ ಅಮೂಲ್ಯ ದಂಪತಿ ಭೇಟಿ

    ಘಾಟಿ ಸುಬ್ರಹ್ಮಣ್ಯಕ್ಕೆ ಅಮೂಲ್ಯ ದಂಪತಿ ಭೇಟಿ

    ಚಿತ್ರರಂಗದಲ್ಲಿ (Kannada Films) ಗೋಲ್ಡನ್ ಕ್ವೀನ್ ಆಗಿ ಮಿಂಚಿದ್ದ ಅಮೂಲ್ಯ (Amulya) ಈಗ ಮದುವೆ, ಸಂಸಾರ, ಮಕ್ಕಳು ಅಂತಾ ಬ್ಯುಸಿಯಾಗಿದ್ದಾರೆ. ಸದ್ಯ ಅವಳಿ ಮಕ್ಕಳೊಂದಿಗೆ ಘಾಟಿ ಸುಬ್ರಹ್ಮಣ್ಯಕ್ಕೆ (Ghati Subramanya) ಅಮೂಲ್ಯ ಮತ್ತು ಜಗದೀಶ್ ಭೇಟಿ ನೀಡಿದ್ದಾರೆ.

    ಸ್ಟಾರ್ ನಟಿಯಾಗಿ ಮಿಂಚ್ತಿದ್ದ ಅಮೂಲ್ಯ ಬೇಡಿಕೆಯಿರುವಾಗಲೇ ಜಗದೀಶ್ ಜೊತೆ ಹಸೆಮಣೆ ಏರಿದ್ದರು. ಈಗ ಅವಳಿ ಮಕ್ಕಳ ತಾಯಿಯಾಗಿ ಅವರ ಆರೈಕೆಯಲ್ಲಿ ನಟಿ ಫುಲ್ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೇ ಅವಳಿ ಮಕ್ಕಳಿಗೆ ಅದ್ದೂರಿಯಾಗಿ ನಾಮಕರಣ ಮಾಡಿದ್ದರು. ಇದನ್ನೂ ಓದಿ: `ಧಮಾಕ’ ಸಕ್ಸಸ್ ನಂತರ ಕನ್ನಡತಿ ಶ್ರೀಲೀಲಾಗೆ ತೆಲುಗಿನಲ್ಲಿ ಡಿಮ್ಯಾಂಡ್

    ಅಮೂಲ್ಯ ಅವರು ಕುಟುಂಬದ ಜೊತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಘಾಟಿಗೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ವೇಳೆ ಕೆಲ ಸಮಯ ಆವರಣದಲ್ಲಿ ಕುಳಿತುಕೊಂಡಿದ್ದರು. ಬಳಿಕ ಕುಟುಂಬದ ಜೊತೆ ಸೇರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

    ಅಮೂಲ್ಯ ಅವರನ್ನು ನೋಡಿದ ಸಂತಸದಲ್ಲಿ ಫ್ಯಾನ್ಸ್ ಅವರನ್ನು ಭೇಟಿ ಮಾಡಲು ಮುಗಿಬಿದ್ದಿದ್ದಾರೆ. ಸೆಲ್ಫಿಗಾಗಿ ತೆಗೆದುಕೊಂಡು ನಟಿಯ ಜೊತೆ ಸಂಭ್ರಮಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ –  72 ಲಕ್ಷ ರೂ. ಸಂಗ್ರಹ

    ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ – 72 ಲಕ್ಷ ರೂ. ಸಂಗ್ರಹ

    ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಐತಿಹಾಸಿಕ ನಾಗರಾಧಾನ ಕ್ಷೇತ್ರ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ (Ghati Subramanya Temple) ಎರಡು ತಿಂಗಳ ನಂತರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು 72 ಲಕ್ಷ ರೂ. ಸಂಗ್ರಹವಾಗಿದೆ.

    ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ (Temple) ಒಟ್ಟು 72,37098 ರೂ. ಮೊತ್ತ ಸಂಗ್ರಹವಾಗಿದ್ದು, ಜೊತೆಗೆ 40 ಸಾವಿರ ರೂಪಾಯಿ ಮೌಲ್ಯದ 9 ಗ್ರಾಂ 870 ಮಿಲಿ ಚಿನ್ನ, 72,200 ರೂ. ಮೌಲ್ಯದ 2 ಕೆ.ಜಿ 400 ಗ್ರಾಂ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ. ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಇಂದಿಗೆ 8 ಶತಕೋಟಿ ಮೀರಿತು ಜಾಗತಿಕ ಜನಸಂಖ್ಯೆ: ವಿಶ್ವಸಂಸ್ಥೆ

    ಈ ವೇಳೆ ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಜೆ.ಜೆ.ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜ್, ಪ್ರಧಾನ ಅರ್ಚಕ ಎಸ್.ಎನ್.ಸುಬ್ಬಕೃಷ್ಣಶಾಸ್ತ್ರೀ, ದೇವಾಲಯದ ಸೂಪರ್ ಡೆಂಟ್ ರಘು, ನಂಜಪ್ಪ ಹುಚ್ಚಪ್ಪ ಸೇರಿದಂತೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗ, ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಗಿದೆ. ಇದನ್ನೂ ಓದಿ: ಮುಸ್ಲಿಮರ ವೋಟು ಪಡೆಯೋಕೆ ಕಾಂಗ್ರೆಸ್‌ ಕೇಸರಿ ವಿರೋಧ ಮಾಡ್ತಿದೆ – ಬಿ.ಸಿ.ನಾಗೇಶ್‌ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಸೂರ್ಯ ಗ್ರಹಣದಂದು ಘಾಟಿ, ಭೋಗನಂದಿಶ್ವರ ದೇವಾಲಯ ಬಂದ್

    ಸೂರ್ಯ ಗ್ರಹಣದಂದು ಘಾಟಿ, ಭೋಗನಂದಿಶ್ವರ ದೇವಾಲಯ ಬಂದ್

    ಚಿಕ್ಕಬಳ್ಳಾಪುರ: ಡಿಸೆಂಬರ್ 26ರಂದು ಘಟಿಸಲಿರುವ ಸೂರ್ಯ ಗ್ರಹಣದ ದಿನ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಶ್ರೀ ಭೋಗನಂದೀಶ್ವರನ ದೇವಾಲಯ ಬಂದ್ ಆಗಲಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಗ್ಗೆ 08.05 ನಿಮಿಷಕ್ಕೆ ಗ್ರಹಣ ಸ್ಪರ್ಶ ಕಾಲ ಆರಂಭವಾಗಲಿದ್ದು, 9.30 ನಿಮಿಷಕ್ಕೆ ಮಧ್ಯ ಕಾಲ ಸೇರಿದಂತೆ 11.05 ನಿಮಿಷಕ್ಕೆ ಗ್ರಹಣ ಮೋಕ್ಷಕಾಲವಾಗಲಿದೆ. ಹೀಗಾಗಿ ಸೂರ್ಯ ಗ್ರಹಣದ ಹಿಂದಿನ ದಿನ ಡಿಸೆಂಬರ್ 25ರ ರಾತ್ರಿ ಪೂಜೆ ನಂತರ ದೇವಾಲಯದ ಬಾಗಿಲು ಬಂದ್ ಆಗಲಿದೆ.

    ಎಂದಿನಂತೆ ಡಿಸೆಂಬರ್ 26ರ ಮುಂಜಾನೆ ದೇವಾಲಯದ ಬಾಗಿಲು ತೆರೆಯುವುದಿಲ್ಲ. ಗ್ರಹಣ ಮುಕ್ತಾಯದ ನಂತರ ದೇವಾಲಯದಲ್ಲಿ ಶುದ್ಧಿ ಕಾರ್ಯಗಳನ್ನು ನೆರವೇರಿಸಿ ತದನಂತರ 1 ಗಂಟೆಗೆ ದೇವಾಲಯದ ಬಾಗಿಲು ತೆರೆಯಲಾಗುವುದು ಎಂದು ಚಿಕ್ಕಬಳ್ಳಾಪುರ ತಹಶೀಲ್ದಾರ್ ನರಸಿಂಹಮೂರ್ತಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯವೂ ಸಹ ಆ ದಿನ ಬಂದ್ ಆಗಲಿದೆ. ಗ್ರಹಣ ಮುಕ್ತಾಯದ ನಂತರ ದೇವಾಲಯದಲ್ಲಿ ಶುದ್ಧಿ ಕಾರ್ಯ ನೆರವೇರಿಸಿದ ನಂತರ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸುವುದಾಗಿ ದೇವಾಲಯದ ಕಾರ್ಯ ನಿರ್ವಾಹಕಾಧಿಕಾರಿ ಕೃಷ್ಣಪ್ಪ ಪಬ್ಲಿಕ್ ಟಿವಿಗೆ ತಿಳಿಸಿದರು.