Tag: ghati subramanya temple

  • ನನ್ನ ಪ್ರಾರ್ಥನೆಗೆ ಫಲ ಸಿಕ್ಕಿದ್ದಕ್ಕೆ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ: ಡಿ.ಕೆ ಶಿವಕುಮಾರ್

    ನನ್ನ ಪ್ರಾರ್ಥನೆಗೆ ಫಲ ಸಿಕ್ಕಿದ್ದಕ್ಕೆ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ: ಡಿ.ಕೆ ಶಿವಕುಮಾರ್

    ಚಿಕ್ಕಬಳ್ಳಾಪುರ: ಡಿಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ಅವರು ಪತ್ನಿ ಸಮೇತ ಘಾಟಿ ಸುಬ್ರಮಣ್ಯ ಸ್ವಾಮಿಯ (Ghati Subramanya Temple) ದರ್ಶನ ಪಡೆದಿದ್ದಾರೆ.

    ವಿಶೇಷ ಪೂಜೆ ಹಾಗೂ ಅಭಿಷೇಕದಲ್ಲಿ ಡಿಕೆಶಿ ಹಾಗೂ ಅವರ ಪತ್ನಿ ಭಾಗಿಯಾದರು. ದೇವರ ದರ್ಶನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಪ್ರಾರ್ಥನೆಗೆ ಫಲ ಸಿಕ್ಕಿದೆ. ಹಾಗಾಗಿ ಘಾಟಿ ದೇವರ ದರ್ಶನಕ್ಕೆ ಆಗಮಿಸಿದ್ದೇನೆ. ಘಾಟಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರ ಸಹ ಮಾಡಿದ್ದೇವೆ. ನಾನು ಸಹ 30 ವರ್ಷದ ಹಿಂದೆ ಇಲ್ಲಿ ಸರ್ಪ ಸಂಸ್ಕಾರ ಮಾಡಿಸಿದ್ದೇನೆ. ದೇವಾಲಯದ ಅಭಿವೃದ್ಧಿಯನ್ನು ಕೆ.ಎಚ್ ಮುನಿಯಪ್ಪ ಮುಂದಾಳತ್ವದಲ್ಲಿ ಮಾಡಲಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಶ್ರದ್ಧಾ, ಭಕ್ತಿಯಿಂದ ನಡೆದ ಐತಿಹಾಸಿಕ ಬೆಂಗಳೂರು ಕರಗ ಶಕ್ತೋತ್ಸವ

    ಜಾತಿಗಣತಿ ಬಗ್ಗೆ ಕೇಳಿದ ಪ್ರಶ್ನೆಗೆ, ಜಾತಿಗಣತಿ ವಿಚಾರ ಬಗ್ಗೆ ಸಿಎಂ ಹೇಳಿದ್ದಾರೆ. ನಾನು ವರದಿ ನೋಡಿಲ್ಲ. ಶನಿವಾರ ಬೆಳಗಾವಿ ಹಾಗೂ ಮಂಗಳೂರಿಗೆ ಹೋಗಿದ್ದೆ. ಅದು ಕ್ಯಾಬಿನೆಟ್‌ನಲ್ಲಿ ಚರ್ಚೆ ಅಗಬೇಕು. ಆತುರದ ನಿರ್ಧಾರ ಯಾರೂ ತೆಗೆದುಕೊಳ್ಳುವುದಿಲ್ಲ. ಕೆಲವರು ರಾಜಕೀಯ ಹೇಳಿಕೆ ಕೊಡ್ತಾರೆ. ಸತ್ಯಾಂಶ ಏನು ಎಂದು ತಿಳಿದುಕೊಂಡು ತೀರ್ಮಾನ ಮಾಡ್ತೀವಿ ಎಂದಿದ್ದಾರೆ. ಜೆಡಿಎಸ್ ಪ್ರತಿಭಟನೆ ವಿಚಾರವಾಗಿ, ರಾಜಕಾರಣ ಬೇಡ ಅವರಿಗೆ ಒಳ್ಳೆಯದಾಗಲಿ.

    ದೇವಾಲಯಕ್ಕೆ ಡಿಸಿಎಂ ಭೇಟಿ ಸಾರ್ವಜನಿಕರಿಗೆ ದರ್ಶನ ಬಂದ್ ಮಾಡಲಾಗಿತ್ತು. ಡಿ.ಕೆ ಶಿವಕುಮಾರ್‌ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಮತ್ತು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಸಾಥ್ ನೀಡಿದ್ದಾರೆ. ಡಿಕೆಶಿ ದೇವಾಲಯಕ್ಕೆ ಬರುತ್ತಿದ್ದಂತೆ ಅಭಿಮಾನಿಗಳು ಮುಂದಿನ ಸಿಎಂ ಡಿಕೆಶಿ ಎಂದು ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: Photo Gallery | ಸಾಂಸ್ಕೃತಿಕ, ಪರಂಪರೆ ಹೆಗ್ಗುರುತು ಸಾರಿದ ಕರಗ ಶಕ್ತ್ಯೋತ್ಸವ

  • 50ನೇ ವಯಸ್ಸಿಗೆ ತಂದೆಯಾದ ಖುಷಿಯಲ್ಲಿ ಘಾಟಿ ಸುಬ್ರಹ್ಮಣ್ಯಕ್ಕೆ ಪ್ರಭುದೇವ ಭೇಟಿ

    50ನೇ ವಯಸ್ಸಿಗೆ ತಂದೆಯಾದ ಖುಷಿಯಲ್ಲಿ ಘಾಟಿ ಸುಬ್ರಹ್ಮಣ್ಯಕ್ಕೆ ಪ್ರಭುದೇವ ಭೇಟಿ

    ಟ ಪ್ರಭುದೇವ (Prabhudeva) ಅವರು ಸೋಮವಾರ (ಜೂನ್‌ 12)ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ (Ghati Subramanya Temple) ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಭುದೇವ ನೋಡಲು ದೇವಾಲಯಕ್ಕೆ ಆಗಮಿಸಿದ್ದ ಭಕ್ತರು ಮುಗಿಬಿದ್ದಿದ್ದು, ಕೆಲ ಅಭಿಮಾನಿಗಳು ಪ್ರಭುದೇವ ಜೊತೆ ಸೆಲ್ಫಿ ಪೋಟೋ ತೆಗೆದುಕೊಂಡು ಖುಷಿಪಟ್ರು, ಬಳಿಕ ದೇವಾಲಯದ ವತಿಯಿಂದ ಪ್ರಭುದೇವ ಅವರಿಗೆ ಸನ್ಮಾನ ಮಾಡಲಾಯಿತು.

    ಭಾರತದ ಮೈಕೆಲ್ ಜಾಕ್ಸನ್ ಎಂದೇ ಖ್ಯಾತಿಗಳಿಸಿರುವ ನಟ, ನಿರ್ದೇಶಕ, ಡಾನ್ಸರ್ ಪ್ರಭುದೇವ ಮತ್ತೆ ತಂದೆಯಾಗಿದ್ದಾರೆ. 50 ವರ್ಷದ ಪ್ರಭುದೇವ 3ನೇ ಬಾರಿಗೆ ತಂದೆಯಾಗಿದ್ದಾರೆ. ಪ್ರಭುದೇವ ಎರಡನೇ ಪತ್ನಿ ಹಿಮಾನಿ ಸಿಂಗ್ ಮುಂಬೈನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಪ್ರಭುದೇವ ಕುಟುಂಬಕ್ಕೆ ಮೊದಲ ಹೆಣ್ಣು ಮಗು ಆಗಮಿಸಿದ್ದು ಇಡೀ ಕುಟುಂಬ ಸಂಭ್ರಮದಲ್ಲಿದೆ. ಮೂರನೇ ಮಗು ಕಳೆದುಕೊಂಡಿದ್ದ ಪ್ರಭುದೇವ ಅವರಿಗೆ ಮಗಳು ಬೆಳಕಾಗಿ ಬಂದಿದ್ದಾಳೆ. ಇದನ್ನೂ ಓದಿ:ಬಾಲಿವುಡ್‌ ಚಿತ್ರಗಳ ಫ್ಲಾಪ್‌ ಬಳಿಕ ರಶ್ಮಿಕಾ ನಟನೆ 3ನೇ ಚಿತ್ರದ ಟೀಸರ್‌ ರಿಲೀಸ್

    ಈ ಬಗ್ಗೆ ಸ್ವತಃ ಪ್ರಭುದೇವ ಅವರೇ ಅಧಿಕೃತಗೊಳಿಸಿದ್ದಾರೆ. ಎಸ್ ಇದು ನಿಜ. ನಾನು ಮತ್ತೆ ತಂದೆ ಆಗಿದ್ದೀನಿ 50ನೇ ವಯಸ್ಸಿಗೆ. ನನಗೆ ತುಂಬಾ ಖುಷಿಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಪ್ರಭುದೇವ ಅವರಿಗೆ ಈಗ ಮೂವರು ಮಕ್ಕಳು.

    ಪ್ರಭುದೇವ 1995ರಲ್ಲಿ ರಾಮಲತಾ ಜೊತೆ ಮದುವೆಯಾದರು. ಪ್ರಭುದೇವ ಮತ್ತು ರಾಮಲತಾ ದಂಪತಿಗೆ ಮೂವರು ಮಕ್ಕಳು. ಮೊದಲ ಮಗ ವಿಶಾಲ್, 2ನೇ ಮಗ ರಿಷಿ ರಾಘವೇಂದ್ರ ದೇವ ಮತ್ತು ಅದಿತ್ ದೇವ. ಆದರೆ ಮೊದಲ ಮಗ ದುರದೃಷ್ಟವಶಾತ್ ವಿಶಾಲ್‌ನನ್ನು ಕಳೆದುಕೊಂಡರು ಪ್ರಭುದೇವ. ಪುಟ್ಟ ಬಾಲಕ ವಿಶಾಲ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ. ವಿಶಾಲ್ ನಿಧನದ ಮುಂಚೆ ಮೊದಲು 6 ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವು ಬದುಕಿನ ನಡುವೆ ಹೋರಾಟ ನಡೆಸಿ 2008ರಲ್ಲಿ ವಿಶಾಲ್ ಕೊನೆಯುಸಿರೆಳೆದರು. ಇದೀಗ ಪ್ರಭುದೇವ- ಹಿಮಾನಿ ಸಿಂಗ್ ದಂಪತಿಯ ಬದುಕಿಗೆ ಮುದ್ದು ಮಗಳ ಆಗಮನವಾಗಿದೆ. ಇದೇ ಖುಷಿಯಲ್ಲಿ ಘಾಟಿ ಸುಬ್ರಹ್ಮಣ್ಯಕ್ಕೆ ಪ್ರಭುದೇವ ವಿಶೇಷ ಸಲ್ಲಿಸಿದ್ದಾರೆ.

  • ಘಾಟಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟಿಗ ಕೆ.ಎಲ್.ರಾಹುಲ್

    ಘಾಟಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟಿಗ ಕೆ.ಎಲ್.ರಾಹುಲ್

    ಚಿಕ್ಕಬಳ್ಳಾಪುರ: ಭಾರತೀಯ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಕೆ.ಎಲ್.ರಾಹುಲ್ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

    ಗೆಳೆಯರೊಡನೆ ದೇವಾಲಯಕ್ಕೆ ಬಂದ ಅವರನ್ನು, ದೇವಾಲಯದ ಇಒ ನಾಗರಾಜ್, ಅಧೀಕ್ಷಕ ರಘು ಹುಚ್ಚಪ್ಪ, ಎಸ್‌ಡಿಸಿ ನಾಗರಾಜ್ ಭೇಟಿಯಾಗಿ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಿದರು. ಇದನ್ನೂ ಓದಿ: CWG 2022: ನಡಿಗೆ, ಜಾವೆಲಿನ್‌ನಲ್ಲಿ ಭಾರತಕ್ಕೆ ಕಂಚು

    ಕಳೆದ ಐದು ವರ್ಷಗಳ ಹಿಂದೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದು ರಾಹುಲ್ ಪೂಜೆ ಸಲ್ಲಿಸಿದ್ದರು. ಇಂದು ಸಂಜೆ ಕೂಡ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಬಳಿಕ ಗಾಯದ ಸಮಸ್ಯೆ ಹಾಗೂ ಕೋವಿಡ್‌-19 ನಿಂದಾಗಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿರುವ ಆರಂಭಿಕ ಬ್ಯಾಟ್ಸ್‌ಮನ್‌ ಕೆ.ಎಲ್‌.ರಾಹುಲ್‌ ಸದ್ಯ ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಭಾರತ ತಂಡವನ್ನು ರಾಹುಲ್‌ ಮುನ್ನಡೆಸಬೇಕಿತ್ತು. ಆದರೆ ಗಂಭೀರ ಗಾಯಕ್ಕೆ ತುತ್ತಾಗಿದ್ದರಿಂದ ಅವರು ತಂಡದಿಂದ ಹೊರ ನಡೆದು ಚಿಕಿತ್ಸೆಗಾಗಿ ಜಪಾನ್‌ಗೆ ತೆರಳಿದ್ದರು. ಇನ್ನೇನು ವೆಸ್ಟ್‌ ಇಂಡೀಸ್‌ ಪ್ರವಾಸ ಕೈಗೊಳ್ಳಬೇಕು ಎನ್ನುವಷ್ಟರಲ್ಲಿ ಅವರಿಗೆ ಕೋವಿಡ್‌-19 ಪಾಸಿಟಿವ್ ಬಂದಿತ್ತು. ಇದನ್ನೂ ಓದಿ: CWG 2022: ಟ್ರಿಪಲ್ ಜಂಪ್‍ನಲ್ಲಿ ಡಬಲ್ ಧಮಾಕ – ಎಲ್ದೋಸ್ ಪೌಲ್‍ಗೆ ಚಿನ್ನ, ಅಬ್ದುಲ್ಲಾ ಅಬೂಬಕರ್‌ಗೆ ಬೆಳ್ಳಿ

    Live Tv
    [brid partner=56869869 player=32851 video=960834 autoplay=true]