Tag: Ghazipur

  • ಹಿಂಸಾಚಾರ ಪೀಡಿತ ಸಂಭಾಲ್‌ನತ್ತ ಹೊರಟ ರಾಹುಲ್‌, ಪ್ರಿಯಾಂಕಾಗೆ ಪೊಲೀಸರು ತಡೆ

    ಹಿಂಸಾಚಾರ ಪೀಡಿತ ಸಂಭಾಲ್‌ನತ್ತ ಹೊರಟ ರಾಹುಲ್‌, ಪ್ರಿಯಾಂಕಾಗೆ ಪೊಲೀಸರು ತಡೆ

    – ಇದು ಹೊಸ ಹಿಂದೂಸ್ತಾನ ಎಂದ ರಾಹುಲ್‌ ಗಾಂಧಿ

    ನವದೆಹಲಿ: ಶಾಹಿ ಜಾಮಾ ಮಸೀದಿ ಸಮೀಕ್ಷೆ ವಿಚಾರವಾಗಿ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಉತ್ತರ ಪ್ರದೇಶದ ಸಂಭಾಲ್‌ಗೆ ಭೇಟಿ ನೀಡಲು ತೆರಳುತ್ತಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi), ನೂತನ ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ಅವರನ್ನ ಮಾರ್ಗಮಧ್ಯೆಯೇ ಪೊಲೀಸರು ತಡೆದಿದ್ದಾರೆ.

    ಸ್ಥಳೀಯರಲ್ಲದವರು ಸಂಭಾಲ್‌ಗೆ ಭೇಟಿ ನೀಡುವಂತಿಲ್ಲ ಎಂಬ ನಿರ್ಬಂಧದ ಹಿನ್ನೆಲೆಯಲ್ಲಿ ರಾಹುಲ್, ಪ್ರಿಯಾಂಕಾರನ್ನು ಘಾಜಿಪುರ ಗಡಿಯಲ್ಲೇ ಉತ್ತರ ಪ್ರದೇಶ ಪೊಲೀಸರು ತಡೆಹಿಡಿದಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ರು. ಲೋಕಸಭೆ ವಿಪಕ್ಷ ನಾಯಕನಾಗಿ ಸಂಭಾಲ್‌ಗೆ ಭೇಟಿ ನೀಡೋದು ನನ್ನ ಹಕ್ಕು, ಪೊಲೀಸರ ಜೊತೆ ನಾನೊಬ್ಬನೇ ತೆರಳಲು ಸಿದ್ಧ ಇದ್ದೇನೆ. ಆದ್ರೂ, ನನಗೆ ಅವಕಾಶ ನಿರಾಕರಿಸಲಾಗ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಇದು ವಿಪಕ್ಷ ನಾಯಕನ ಸಂವಿಧಾನಿಕ ಹಕ್ಕುಗಳಿಗೆ ವಿರುದ್ಧವಾಗಿದೆ. ಬಿಜೆಪಿ (BJP) ಸತ್ಯ ಮತ್ತು ಸೋದರತ್ವವನ್ನು ಹತ್ತಿಕ್ಕಲು ಪೊಲೀಸರನ್ನು ಬಳಸುತ್ತಿದೆ. ಇದು ಹೊಸ ಹಿಂದೂಸ್ತಾನ, ಅಂಬೇಡ್ಕರರ ಸಂವಿಧಾನ ಮುಗಿಸುವ ಪ್ರಯತ್ನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ರು. ಮುಂಜಾಗ್ರತಾ ಕ್ರಮವಾಗಿ ಘಾಜೀಪುರ ಗಡಿಯಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿತ್ತು.

    ಟ್ರಾಫಿಕ್‌ ಜಾಮ್‌:
    ಇನ್ನೂ ಡಿಸೆಂಬರ್‌ 10ರ ವರೆಗೆ ಸಂಭಾಲ್‌ಗೆ ಹೊರಗಿನವರ ಪ್ರವೇಶವನ್ನು ನಿಷೇಧಿಸಲಾಗಿದೆ. ಹೀಗಾಗಿ ದೆಹಲಿ-ಸಂಭಾಲ್‌ ಮಾರ್ಗದ‌ ಹಲವು ಸ್ಥಳಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಬ್ಯಾರಿಕೆಡ್‌ಗಳನ್ನು ಅಳವಡಿಸಿ, ವಾಹನ ತಪಾಸಣೆ ನಡೆಸಲಾಗುತ್ತಿತ್ತು, ಇದರಿಂದ ಹಲವು ಸ್ಥಳಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

  • ಬಸ್ ಮೇಲೆ ಬಿದ್ದ 11,000 ವೋಲ್ಟ್ ಕರೆಂಟ್ ವೈರ್ – 10ಕ್ಕೂ ಹೆಚ್ಚು ಮಂದಿ ಸಜೀವ ದಹನ

    ಬಸ್ ಮೇಲೆ ಬಿದ್ದ 11,000 ವೋಲ್ಟ್ ಕರೆಂಟ್ ವೈರ್ – 10ಕ್ಕೂ ಹೆಚ್ಚು ಮಂದಿ ಸಜೀವ ದಹನ

    – ಮದುವೆಗೆ ತೆರಳುತ್ತಿದ್ದ ಅತಿಥಿಗಳು ಮಸಣಕ್ಕೆ
    – ಮೇಲ್ವಿಚಾರಣೆ ನಡೆಸುವಂತೆ ಉನ್ನತಾಧಿಕಾರಿಗಳಿಗೆ ಸಿಎಂ ಯೋಗಿ ಸೂಚನೆ

    ಲಕ್ನೋ: ಮದುವೆಗೆ ತೆರಳುತ್ತಿದ್ದ ಬಸ್‌ ಮೇಲೆ 11,000 ವೋಲ್ಟ್‌ನ ಹೈಟೆನ್ಷನ್ ಕರೆಂಟ್ ವೈರ್ ಬಿದ್ದು ಬಸ್‌ ಸ್ಥಳದಲ್ಲೇ ಸುಟ್ಟು ಕರಕಲಾಗಿರುವ (Ghazipur Bus Fire) ಘಟನೆ ಉತ್ತರ ಪ್ರದೇಶದ (Uttar Pradesh) ಗಾಜಿಪುರದಲ್ಲಿ ನಡೆದಿದೆ.

    ಇಲ್ಲಿನ ಮರ್ದಾಹ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 10ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ. ಒಟ್ಟು 36 ಮಂದಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

    36 ಜನ ಅತಿಥಿಗಳು ಮದುವೆಗೆ ತೆರಳುತ್ತಿದ್ದ ವೇಳೆ 11,000 ವೋಲ್ಟ್‌ನ ಹೈಟೆನ್ಷನ್ ಕರೆಂಟ್ ವೈರ್ (11,000 Volt Electricity Wire) ಬಸ್‌ ಮೇಲೆ ಬಿದ್ದು, ಕೂಡಲೇ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಭಾರೀ ಪ್ರಮಾಣದ ವಿದ್ಯುತ್‌ ಪ್ರವಹಿಸುತ್ತಿದ್ದರಿಂದ 10ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ. ಉಳಿದವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

    ಘಟನಾ ದೃಶ್ಯಾವಳಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.


    ತನಿಖೆಗೆ ಸಿಎಂ ಸೂಚನೆ: ಈ ಘಟನೆ ತಿಳಿಯುತ್ತಿದ್ದಂತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಅವರು, ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸುವಂತೆ ಉನ್ನತ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

  • ಪತ್ನಿ, ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ

    ಪತ್ನಿ, ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ

    ಲಕ್ನೋ: ವ್ಯಕ್ತಿಯೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.

    ಶಿವದಾಸ್ ಸೋನೇಕರ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪತ್ನಿ ರೀನಾ (30) ಮಗ ಆರವ್(5) ಹಾಗೂ ಮಗಳು ಸೆಜಲ್ ಮೃತ ದುರ್ದೈವಿಗಳು. ಶಿವದಾಸ್ ನಿರುದ್ಯೋಗಿಯಾಗಿದ್ದ. ಜೊತೆಗೆ ರೈಲ್ವೆ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ. ಆರ್ಥಿಕ ಕೊರತೆಯಿಂದಾಗಿ ಮನೆಯಲ್ಲಿ ಆಗಾಗ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಶಿವದಾಸ್ ಪತ್ನಿ ಹಾಗೂ ಮಕ್ಕಳನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

    CRIME 2

    ಇದಾದ ಬಳಿಕ ಶಿವದಾಸ್ ಕೋಣೆಯ ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯ ಬಾಗಿಲನ್ನು ತೆಗೆಯದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಖಾನಿಯಾ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ತರಕಾರಿ ಇಟ್ಟು ಪ್ರತಿಭಟನೆ

    POLICE JEEP

    ಮುಂಜಾನೆ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮಹೇಂದ್ರ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: ತೆರಿಗೆ ಹಣ ಕಳ್ಳ ರಾಜಕಾರಣಿಗಳ ಜೇಬು ಸೇರುವುದನ್ನು ತಪ್ಪಿಸುವುದು ಹೇಗೆಂದು ಕೇಜ್ರಿವಾಲ್ ತೋರಿಸಿಕೊಟ್ಟಿದ್ದಾರೆ: ಪೃಥ್ವಿ ರೆಡ್ಡಿ

  • ಅರಮನೆಯಲ್ಲಿ ಐಷಾರಾಮಿ ಜೀವನ ನಡೆಸುವ ರಾಜವಂಶಸ್ಥರಿಗೆ ಬಡವರ ಕಷ್ಟ ಅರ್ಥವಾಗಲ್ಲ: ಮೋದಿ

    ಅರಮನೆಯಲ್ಲಿ ಐಷಾರಾಮಿ ಜೀವನ ನಡೆಸುವ ರಾಜವಂಶಸ್ಥರಿಗೆ ಬಡವರ ಕಷ್ಟ ಅರ್ಥವಾಗಲ್ಲ: ಮೋದಿ

    ಲಕ್ನೋ: ರಾಜವಂಶಸ್ಥರು ಅರಮನೆಗಳಲ್ಲಿ ವೈಭೋಗದ ಜೀವನ ನಡೆಸುತ್ತಾರೆ. ಐಷಾರಾಮಿ ಕಾರುಗಳಲ್ಲಿ ಓಡಾಡುತ್ತಾರೆ. ಅವರಿಗೆ ಬಡವರ ಕಷ್ಟ ಅರ್ಥವಾಗಲ್ಲ ಎಂದು ಹೇಳಿದರು.

    ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಘಾಜಿಪುರದ ರ‍್ಯಾಲಿಯಲ್ಲಿ ಮಾತನಾಡಿದ ಅವರು, 100 ವರ್ಷಗಳಲ್ಲೇ ಅತ್ಯಂತ ಭೀಕರ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿಯೂ ಸರ್ಕಾರ ಉಚಿತವಾಗಿ ಪಡಿತರ ನೀಡುವ ಮೂಲಕ ಯಾರು ಸಹ ಖಾಲಿ ಹೊಟ್ಟೆಯಲ್ಲಿ ಮಲಗಲು ಬಿಟ್ಟಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆಳಗ್ಗೆಯಿಂದ ವಾಟ್ಸಪ್ ಸಂದೇಶಕ್ಕೆ ತಮ್ಮನಿಂದ ಉತ್ತರ ಬಂದಿಲ್ಲ: ವಿದ್ಯಾರ್ಥಿ ಸಹೋದರ

    ಘಾಜಿಪುರ ಈ ದೇಶಕ್ಕೆ ಅನೇಕ ಮಹಾನ್‌ ವ್ಯಕ್ತಿಗಳನ್ನು ನೀಡಿದೆ ಎಂದು ಸ್ಮರಿಸಿದ ಪ್ರಧಾನಿ ಮೋದಿ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಆಗಿ ಸೇವೆ ಸಲ್ಲಿಸುತ್ತಿರುವ ಘಾಜಿಪುರ ಮೂಲದ ಮನೋಜ್‌ ಸಿನ್ಹಾ ಅವರ ಹೆಸರನ್ನು ಪ್ರಸ್ತಾಪಿಸಿದರು.

    ಪ್ರತಿಯೊಂದು ಮತವೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಲು ಸಹಕಾರಿಯಾಗಲಿದೆ. ಅಭಿವೃದ್ಧಿ ಕೆಲಸ ಮಾಡಲು ನಮಗೆ ಹೊಸ ಶಕ್ತಿ ನೀಡಿದಂತಾಗುತ್ತದೆ. ಪ್ರತಿ ಮತವೂ ಪರಿವಾರವಾದಿ ಪಕ್ಷಗಳಿಗೆ ತಕ್ಕ ಉತ್ತರ ನೀಡಲಿದೆ ಎಂದರು. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ಪ್ರಯತ್ನ ನಿಲ್ಲಲ್ಲ: ಮೋದಿ

    ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಫೆ.10ರಿಂದ ವಿವಿಧ ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮಾ.7ರಂದು ಘಾಜಿಪುರ ಜಿಲ್ಲೆಗೆ ಮತದಾನ ನಡೆಯಲಿದೆ.

  • ದಂಗೆಯ ನೆಪ, ರೈತ ಹೋರಾಟ ಹತ್ತಿಕ್ಕಲು ಯತ್ನ? – ಧರಣಿ ಸ್ಥಳದಲ್ಲಿ ಕರೆಂಟ್, ನೀರು ಕಟ್

    ದಂಗೆಯ ನೆಪ, ರೈತ ಹೋರಾಟ ಹತ್ತಿಕ್ಕಲು ಯತ್ನ? – ಧರಣಿ ಸ್ಥಳದಲ್ಲಿ ಕರೆಂಟ್, ನೀರು ಕಟ್

    ನವದೆಹಲಿ: ರೈತರ ಹೋರಾಟ ಸ್ಥಳಗಳಾದ ದೆಹಲಿ ಗಡಿಗಳಲ್ಲಿ ಇಂದು ಸಂಜೆಯಿಂದ ಭಾರೀ ಹೈಡ್ರಾಮಾಗಳು ನಡೆಯುತ್ತಿವೆ. ಉದ್ವಿಗ್ನತೆ ಮನೆ ಮಾಡಿದೆ. ಯಾವಾಗ ಏನು ನಡೆಯುತ್ತೋ ಎಂಬ ಭಯ, ಆತಂಕ ಮನೆ ಮಾಡಿದೆ. ದೆಹಲಿ ಗಲಭೆ ಪ್ರಕರಣವನ್ನೇ ನೆಪ ಮಾಡಿಕೊಂಡು ಉತ್ತರ ಪ್ರದೇಶ ಸರ್ಕಾರ ರೈತ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆಸಿದೆ.

    ಘಾಜಿಪುರ ಗಡಿಯಲ್ಲಿ ಇದ್ದಕ್ಕಿದ್ದಂತೆ ಸಾವಿರಾರು ಶಸ್ತ್ರಸಜ್ಜಿತ ಪೊಲೀಸರು ಕಾಣಿಸಿಕೊಂಡಿದ್ದು, ಈ ಕೂಡಲೇ ಧರಣಿ ಅಂತ್ಯಗೊಳಿಸಿ ಜಾಗ ಖಾಲಿ ಮಾಡಿ ಒತ್ತಡ ಹಾಕಲಾಗ್ತಿದೆ. ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅನುಮಾಡಿಕೊಡುವಂತೆ ರೈತರ ಮೇಲೆ ಒತ್ತಡ ಹೇರುತ್ತಿದ್ದಾರೆ. ರೈತರು ಬೀಡುಬಿಟ್ಟಿರುವ ಘಾಜಿಪುರ ಗಡಿ ಪ್ರದೇಶದಲ್ಲಿ ವಿದ್ಯುತ್, ನೀರಿನ ಸಂಪರ್ಕವನ್ನು ಘಾಜಿಯಾಬಾದ್ ಜಿಲ್ಲಾಡಳಿತ ಕಡಿತ ಮಾಡಿದೆ.

    ರೈತ ಹೋರಾಟದ ಮುಂದಾಳು ರಾಕೇಶ್ ಟಿಕಾಯತ್ ಮಾತ್ರ, ಯಾವುದೇ ಕಾರಣಕ್ಕೂ ನಾವಿಲ್ಲಿಂದ ಕದಲಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಗುಂಡು ಹೊಡೀತೀರಾ ಹೊಡೀರಿ ಎಂದು ಎಂದು ನೇರ ಸವಾಲು ಹಾಕಿದ್ದಾರೆ. ನಮ್ಮನ್ನು ಏನಾದ್ರೂ ಮುಟ್ಟಿದ್ರೆ,. ಅರೆಸ್ಟ್ ಮಾಡಿದ್ರೆ, ನಮಗೆ ನಾವೇ ಪ್ರಾಣಗಳನ್ನು ಅರ್ಪಿಸಿಕೊಳ್ಳಲು ಸಿದ್ಧ ಎಂದು ಘೋಷಿಸಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ಅಡ್ಡಿಯಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಘಾಜಿಪುರದಲ್ಲಿ ಯಾವುದೇ ಹಿಂಸಾಚಾರ ಸಂಭವಿಸಿಲ್ಲ. ಹೀಗಾಗಿದ್ದು ನಮ್ಮನ್ನು ಒಕ್ಕಲೆಬ್ಬಿಸಲು ಹೊರಟಿರೋದು ಸರಿಯಲ್ಲ ಎಂದು ರಾಕೇಶ್ ಟಿಕಾಯತ್ ಗುಡುಗಿದ್ದಾರೆ.

    ಘಾಜಿಯಾಬಾದ್ ಜಿಲ್ಲಾಡಳಿತ ಮಾತ್ರ, ನೀವು ಸಾರ್ವಜನಿಕ ರಸ್ತೆಯಲ್ಲಿ ತೊಂದರೆ ಉಂಟು ಮಾಡುತ್ತಿರೋದನ್ನ ಸಹಿಸಲು ಸಾಧ್ಯವೇ ಇಲ್ಲ. ಈ ರಾತ್ರಿಯೊಳಗೆ ನೀವು ಖಾಲಿ ಮಾಡಲೇಬೇಕು. ಇಲ್ಲದಿದ್ರೆ ಬಲ ಪ್ರಯೋಗ ಮಾಡಬೇಕಾಗುತ್ತದೆ ಎಂದು ವಾರ್ನಿಂಗ್ ನೀಡಿದ್ದಾರೆ.

    ಸ್ಥಳದಲ್ಲಿ ಸಿಐಎಸ್‍ಎಫ್, ಸಿಆರ್ ಪಿಎಫ್, ಆರ್‍ಎಎಫ್ ಪಡೆಗಳನ್ನು ದೊಡ್ಡಮಟ್ಟದಲ್ಲಿ ನಿಯೋಜಿಸಲಾಗಿದೆ. 144 ಸೆಕ್ಷನ್ ಜಾರಿ ಮಾಡಲಾಗಿದೆ. ಡಿಸಿ, ಎಸ್‍ಪಿ, ಡಿಸಿಪಿಗಳು ಬೀಡುಬಿಟ್ಟಿದ್ದಾರೆ. ಇಂದು ರಾತ್ರಿಯೊಳಗೆ ರೈತರನ್ನು ಖಾಲಿ ಮಾಡಿಸುವಂತೆ ಉತ್ತರ ಪ್ರದೇಶ ಸರ್ಕಾರ, ಘಾಜಿಯಾಬಾದ್ ಜಿಲ್ಲಾಡಳಿತಕ್ಕೆ ಆದೇಶ ನೀಡಿದೆ. ಇನ್ನು ಸಿಂಘು, ಟಿಕ್ರಿ ಗಡಿಯಲ್ಲಿಯೂ ಹೆಚ್ಚು ಕಡಿಮೆ ಇದೇ ರೀತಿಯ ಪರಿಸ್ಥಿತಿ ಕಂಡು ಬರುತ್ತಿದೆ. ಎಲ್ಲಾ ಕಡೆ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದೆ. ದೆಹಲಿ ಗಡಿಗಳೆಲ್ಲಾ ಮೂರು ಸುತ್ತಿನ ಪೊಲೀಸ್ ಕೋಟೆಗಳಾಗಿ ಬದಲಾಗಿವೆ.

  • RSS ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲೆಗೈದ ದುಷ್ಕರ್ಮಿಗಳು

    RSS ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲೆಗೈದ ದುಷ್ಕರ್ಮಿಗಳು

    ಲಕ್ನೋ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದಿರುವ ಘಟನೆ ಉತ್ತರಪ್ರದೇಶದ ಘಾಜಿಪುರ ಜಿಲ್ಲೆಯ ಕರಂದಾ ಎಂಬಲ್ಲಿ ನಡೆದಿದೆ.

    ರಾಜೇಶ್ ಮಿಶ್ರಾ ಕೊಲೆಯಾದ ಆರ್‍ಎಸ್‍ಎಸ್ ಕಾರ್ಯಕರ್ತ. ರಾಜೇಶ್ ಪತ್ರಕರ್ತರೂ ಆಗಿದ್ದು, ಕರಂದ ಪಟ್ಟಣದಲ್ಲಿ ಸಣ್ಣದಾದ ದಿನಸಿ ಅಂಗಡಿಯನ್ನು ಹೊಂದಿದ್ದರು. ಮುಖವನ್ನು ಮುಚ್ಚಿಕೊಂಡು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಜೇಶ್‍ಗೆ ಹತ್ತಿರದಿಂದಲೇ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಈ ವೇಳೆ ರಾಜೇಶ್ ಪಕ್ಕದಲ್ಲಿದ್ದ ಅವರ ಸಹೋದರ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಂಡು ಬಿದ್ದ ತಕ್ಷಣವೇ ರಾಜೇಶ್ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

    ರಾಜೇಶ್ ಈ ಪ್ರದೇಶದಲ್ಲಿ ಆರ್‍ಎಸ್‍ಎಸ್ ನ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಳೆದ ವಾರವಷ್ಟೇ ಪಂಜಾಬ್‍ನ ಲೂಧಿಯಾನದಲ್ಲಿ ಆರ್‍ಎಸ್‍ಎಸ್ ಮುಖ್ಯ ಶಿಕ್ಷಕ ರವೀಂದರ್ ಗೋಸಿಯಾನ್ ಎಂಬವರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದಿದ್ದರು. ರವೀಂದರ್ ಹತ್ಯೆಯ ಪ್ರಕರಣವನ್ನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ತನಿಖೆ ಮಾಡುತ್ತಿದೆ.