Tag: GIMS

  • ಕಲಬುರಗಿ | ಜಿಮ್ಸ್ ಆಸ್ಪತ್ರೆಯ ವೈದ್ಯರ ಎಡವಟ್ಟು – ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಹತ್ತಿ ಬಿಟ್ಟು ಹೊಲಿಗೆ

    ಕಲಬುರಗಿ | ಜಿಮ್ಸ್ ಆಸ್ಪತ್ರೆಯ ವೈದ್ಯರ ಎಡವಟ್ಟು – ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಹತ್ತಿ ಬಿಟ್ಟು ಹೊಲಿಗೆ

    ಕಲಬುರಗಿ: ಇಲ್ಲಿನ ಜಿಮ್ಸ್‌ ಆಸ್ಪತ್ರೆಯಲ್ಲಿ (GIMS Hospital) ವೈದ್ಯರ ಯಡವಟ್ಟು ಬಟಾಬಯಲಾಗಿದೆ. ಮಹಿಳೆಯೊಬ್ಬರಿಗೆ ಸಿಸೇರಿಯನ್‌ ಮಾಡುವ ವೇಳೆ ಹೊಟ್ಟೆಯಲ್ಲಿ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

    ಹೌದು. ಇದೇ ಫೆ.05ರಂದು ಭಾಗ್ಯಶ್ರೀ ಎಂಬ ಮಹಿಳೆಗೆ ಸಿಸೇರಿಯನ್‌ ಆಗಿತ್ತು. ಈ ವೇಳೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಹೊಟೆಯಲ್ಲೇ ಬಟ್ಟೆ ಹುಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ. ತಕ್ಷಣಕ್ಕೆ ಇದು ಮಹಿಳೆಯ ಅರಿವಿಗೆ ಬಂದಿಲ್ಲ. ಒಂದು ವಾರದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಸ್ಕ್ಯಾನಿಂಗ್‌ಗೆ ಬಂದಾಗ ವೈದ್ಯರ ಯಡವಟ್ಟು ಬಯಲಾಗಿದೆ. ಇದನ್ನೂ ಓದಿ: ಪಂದ್ಯಕ್ಕೂ ಮುನ್ನವೇ ಪಾಕ್‌ ಹೈಡ್ರಾಮಾ – ಏನೇ ಆದ್ರೂ ಭಾರತವನ್ನು ಸೋಲಿಸಬೇಕು ಎಂದ ಪಿಸಿಬಿ ಮುಖ್ಯಸ್ಥ

    ಬಳಿಕ ಅಫಜಲಪುರ ಕರಜಗಿ ಗ್ರಾಮದ ಪ್ರಾಥಮಿಕ ಕೇಂದ್ರಕ್ಕೆ ತೆರಳಿ ವೈದ್ಯರಿಂದ ಮರು ಶಸ್ತ್ರಚಿಕಿತ್ಸೆ ಮಾಡಿಸಿದ್ದು, ಹೊಟ್ಟೆಯಲ್ಲಿದ್ದ ಬಟ್ಟೆ ಉಂಡೆ ಹಾಗು ಹತ್ತಿ ತೆಗೆದಿದ್ದಾರೆ. ಆದ್ರೆ ಆದರೆ ಕುಟುಂಬಸ್ಥರ ಆರೋಪವನ್ನು ಜಿಮ್ಸ್ ವೈದ್ಯರು ತಳ್ಳಿಹಾಕಿದ್ದಾರೆ. ಇದನ್ನೂ ಓದಿ: Champions Trophy | ಇಂಡೋ-ಪಾಕ್ ಕಾದಾಟದ ರೋಚಕ ಇತಿಹಾಸ – ಹೈವೋಲ್ಟೇಜ್ ಕದನದಲ್ಲಿ ಯಾರ ಕೈ ಮೇಲು?

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಸರ್ಜನ್‌ ಡಾ. ಅಸ್ನಾ ಬೇಗ್, ಹೆರಿಗೆಯ ನಂತರ ಬ್ಲೀಡಿಂಗ್ ಸಲುವಾಗಿ ಪ್ಯಾಡ್ ಇಡಲಾಗಿದೆ. 2 ದಿನದ ನಂತರ ಮಹಿಳೆ ಬಂದು ಅದನ್ನ ತೆಗೆಸಿಕೊಳ್ಳಬೇಕಾಗಿತ್ತು. ಆದ್ರೆ ಅವರು ಬಂದಿರಲಿಲ್ಲ. ಸದ್ಯ ಈಗ ಮಹಿಳೆಗೆ ಯಾವುದೇ ರೀತಿಯ ತೊಂದರೆ ಇಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನವೇ ಭಾರತಕ್ಕೆ ಆಘಾತ – ಪ್ರಾಕ್ಟೀಸ್ ವೇಳೆ ಕೊಹ್ಲಿಗೆ ಮೊಣಕಾಲು ಗಾಯ

  • ಜಿಮ್ಸ್ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ 38 ವಿದ್ಯಾರ್ಥಿಗಳು ಅಮಾನತು

    ಜಿಮ್ಸ್ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ 38 ವಿದ್ಯಾರ್ಥಿಗಳು ಅಮಾನತು

    ಗದಗ: ಇಲ್ಲಿನ (Gadag) ಜಿಮ್ಸ್ ಆಸ್ಪತ್ರೆಯಲ್ಲಿ (GIMS Hospital) ರೀಲ್ಸ್ (Reels) ಮಾಡಿ ಹುಚ್ಚಾಟ ಮೆರೆದಿದ್ದ 38 ಜನ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.

    ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆಯ ಜನರಲ್ ವಾರ್ಡ್, ಕಾರಿಡಾರ್, ಮಕ್ಕಳ ವಾರ್ಡ್, ತರಗತಿ ಕೊಠಡಿ ಸೇರಿದಂತೆ ಆಸ್ಪತ್ರೆಯ ಎಲ್ಲಾ ಭಾಗಗಳಲ್ಲಿ ರೀಲ್ಸ್ ಮಾಡುತ್ತಿದ್ದರು. ಬಳಿಕ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದರು. ಇದರಿಂದ ರೋಗಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿತ್ತು. ಅಲ್ಲದೇ ಚಿಕಿತ್ಸೆಗೆ ತೆರಳಿದ್ದ ರೋಗಿಗಳಿಗೆ ಕಿರಿಕಿರಿ ಉಂಟಾಗುತ್ತಿತ್ತು. ರೀಲ್ಸ್ ಮಾಡುವ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದರು. ಈ ಬಗ್ಗೆ `ಪಬ್ಲಿಕ್ ಟಿವಿ’ಯಲ್ಲಿ ವರದಿ ಸಹ ಪ್ರಸಾರವಾಗಿತ್ತು. ಇದೀಗ ವರದಿಯಿಂದ ಎಚ್ಚೆತ್ತ ಜಿಮ್ಸ್ ಆಸ್ಪತ್ರೆಯ ಅಧಿಕಾರಿಗಳು, ರೀಲ್ಸ್ ಮಾಡಿದ್ದ 38 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರೆ. ಇದನ್ನೂ ಓದಿ: ಮೋದಿ ನಿತ್ಯ 3.5 ಗಂಟೆ ನಿದ್ದೆ, ಸಂಜೆ 6 ಗಂಟೆಯ ನಂತರ ಊಟ ಮಾಡಲ್ಲ

    ಈ ಬಗ್ಗೆ ಜೀಮ್ಸ್ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ಮಾಹಿತಿ ನೀಡಿದ್ದು, ಜಿಮ್ಸ್‍ನ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಡಿಸ್ಟ್ರಿಕ್ಟ್ ಸರ್ಜನ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳನ್ನು ಅಮಾನತು ಮಾಡುವ ನಿರ್ಧಾರ ತೆಗೆದುಕೊಂಡಿದ್ದೆವೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ರೀಲ್ಸ್ ಮಾಡಿರುವ ಎಲ್ಲರೂ ಎಂಬಿಬಿಎಸ್ ಇಂಟರ್ನ್‍ಶಿಪ್ ವಿದ್ಯಾರ್ಥಿಗಳು. ಅವರನ್ನು 10 ದಿನಗಳ ಕಾಲ ಅಮಾನತು ಮಾಡಲಾಗಿದೆ. ಆಸ್ಪತ್ರೆಯಲ್ಲಿ ಈ ರೀತಿ ಮಾಡಿರುವುದು ದೊಡ್ಡ ಅಪರಾಧ. ಈ ರೀತಿ ವೀಡಿಯೋ ಮಾಡಲು ನಾವ್ಯಾರು ಅನುಮತಿ ಕೊಟ್ಟಿಲ್ಲ. ರೋಗಿಗಳಿಗೆ ಅನಾನುಕೂಲ ಆಗುವ ರೀತಿ ನಡೆದು ಕೊಂಡಿರುವುದು ತಪ್ಪು. ಯಾರೇ ಇರಲಿ, ಆಸ್ಪತ್ರೆಯಲ್ಲಿ ಈ ರೀತಿ ಮಾಡಿದರೆ ಅಂತವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿಗಳಿಗೆ ಸಿಗಬೇಕಾಗಿದ್ದ ಪೋಸ್ಟಿಂಗ್ 10 ದಿನಗಳ ಕಾಲ ತಡವಾಗಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವರನ್ನು ಭೇಟಿಯಾದ 6 ವರ್ಷದ ʼರೈಲ್‌ ಮಂತ್ರಿʼ!

  • ಕೋವಿಡ್ ವಾರ್ಡ್‍ನಲ್ಲಿ ಅತ್ಯಾಚಾರಕ್ಕೆ ಯತ್ನ – ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವು

    ಕೋವಿಡ್ ವಾರ್ಡ್‍ನಲ್ಲಿ ಅತ್ಯಾಚಾರಕ್ಕೆ ಯತ್ನ – ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವು

    ಕಲಬುರಗಿ: ಜಿಮ್ಸ್ ಆಸ್ಪತ್ರೆ ಕೋವಿಡ್ ವಾರ್ಡ್ ನಲ್ಲಿ ಅತ್ಯಾಚಾರ ಯತ್ನಕ್ಕೆ ಒಳಗಾದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

    ಜೂನ್ 8ರ ರಾತ್ರಿಯಂದು ಖಾಸಗಿ ಅಂಬುಲೆನ್ಸ್ ಚಾಲಕ ಪಿಂಟು ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ವಾರ್ಡ್ ಪ್ರವೇಶಿಸಿದ್ದಾನೆ. ಈ ವೇಳೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯ ಬಳಿ ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

    ಕೂಡಲೇ ಎಚ್ಚೆತ್ತ ಯುವತಿ ಚೀರಾಟ ನಡೆಸಿದ್ದಾಳೆ. ಆ ವೇಳೆ ಅಕ್ಕ ಪಕ್ಕದ ಬೆಡ್ ನಲ್ಲಿ ಮಲಗಿದ್ದವರು ಎಚ್ಚರಗೊಂಡಾಗ ಪಿಂಟು ಪರಾರಿಯಾಗಿದ್ದ. ಘಟನೆಯ ಬಳಿಕ ಬ್ರಹ್ಮಪೂರ ಪೊಲೀಸರು ಪಿಂಟುನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.  ಇದನ್ನೂ ಓದಿ: ನಿಲ್ಲಿಸದೇ ಇದ್ರೆ ಗಾಡಿ ಒಳಗಡೆ ಮೂತ್ರ ಮಾಡ್ತೀನಿ – ಗ್ಯಾಂಗ್ ರೇಪ್ ಆರೋಪಿಗೆ ಗುಂಡೇಟು

    ಘಟನೆ ನಡೆದ ದಿನದಿಂದ ಮಾನಸಿಕವಾಗಿ ಮತ್ತಷ್ಟು ನೊಂದಿದ್ದ ಯುವತಿ ಚಿಕಿತ್ಸೆ ಫಲಿಸದೇ ಬುಧವಾರ ಮಧ್ಯಾಹ್ನ ಸಾವನ್ನಪ್ಪಿದ್ದಾಳೆ.

  • ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಗದಗ ಜಿಮ್ಸ್ ಗೆ ಆಕ್ಸಿಜನ್ ಪೂರೈಕೆ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಗದಗ ಜಿಮ್ಸ್ ಗೆ ಆಕ್ಸಿಜನ್ ಪೂರೈಕೆ

    ಗದಗ: ಕೊರೊನಾ ಸಂಕಷ್ಟದಲ್ಲಿ ಸೋಂಕಿತರ ಚಿಕಿತ್ಸೆಗೆ ಅನುಕೂಲಕ್ಕಾಗಿ ಶ್ರೀಧರ್ಮಸ್ಥಳದಿಂದ ನಗರದ ಜಿಮ್ಸ್ ಆಸ್ಪತ್ರೆಗೆ 2 ಟನ್ ಆಕ್ಸಿಜನ್ ಪೂರೈಸಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಶಿವಾನಂದ್ ಆಚಾರ್ಯ ಅವರು ಜಿಮ್ಸ್ ಆಸ್ಪತ್ರೆಗೆ ವಿತರಿಸಿದರು.

    ಜಿಲ್ಲಾ ನಿರ್ದೇಶಕ ಶಿವಾನಂದ್ ಆಚಾರ್ಯ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜಿಲ್ಲೆಯ ಕೋವಿಡ್ ರೋಗಿಗಳಿಗೆ ಉಚಿತ ವಾಹನ ವ್ಯವಸ್ಥೆ ಮಾಡಲಾಗಿದೆ. 420 ಜನ ಇದರ ಪ್ರಯೋಜನ ಪಡೆದಿದ್ದಾರೆ. ಜಿಲ್ಲೆಯಾದ್ಯಂತ ಇತ್ತೀಚಿಗೆ 481 ಕುಟುಂಬಕ್ಕೆ ಆಹಾರ ಧಾನ್ಯಗಳನ್ನು ಕಿಟ್ ವಿತರಣೆ ಮಾಡಲಾಗಿದೆ. ಇನ್ನೂ 620 ಕಿಟ್‍ಗಳ ಮಂಜೂರಾತಿಗಾಗಿ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜೊತೆಗೆ ಸ್ವ-ಸಹಾಯ ಸಂಘದ ಸದಸ್ಯರಿಗೆ ಕೋವಿಡ್-19 ವ್ಯಾಕ್ಸಿನೇಷನ್ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಸಿದ್ದಲಿಂಗೇಶ್ವರ ಪಾಟೀಲ್, ಡಾ.ಭರತ್, ಡಾ.ರಾಜಶೇಖರ್ ಮ್ಯಾಗೇರಿ, ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯಕ್, ಬೆಟಗೇರಿ ವಿಭಾಗದ ಮೇಲ್ವಿಚಾರಕ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.