Tag: Girl Raped

  • ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತ ಮೂಕ, ಕಿವುಡ ಬಾಲಕಿ ಸಾವು

    ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತ ಮೂಕ, ಕಿವುಡ ಬಾಲಕಿ ಸಾವು

    ಕೋಲ್ಕತ್ತಾ: ಅಪ್ರಾಪ್ತ ಮೂಕ ಹಾಗೂ ಕಿವುಡ ಬಾಲಕಿಯ ಮೇಲೆ 18 ವರ್ಷದ ಯುವಕ ಅತ್ಯಾಚಾರ ಎಸಗಿದ್ದು, ಬಾಲಕಿ ಶುಕ್ರವಾರ ಮೃತಪಟ್ಟ ಅಮಾನವೀಯ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

    ಏನಿದು ಪ್ರಕರಣ?:
    ಹೌರಾ ಜಿಲ್ಲೆಯ ಸಿಮುಲಿಯಾ ಪ್ರದೇಶದಲ್ಲಿ ಬಾಲಕಿಯ ಮನೆಯ ಸಮೀಪದ ಶೌಚಗೃಹದೊಳಗೆ ಸೋಮವಾರ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಬಾಲಕಿ ಈ ಕುರಿತು ಯಾರೊಬ್ಬರಿಗೂ ಹೇಳಿಕೊಳ್ಳಲಿಲ್ಲ. ಆದರೆ ಮಗಳ ವರ್ತನೆಯಿಂದ ಆಕೆ ಮೂತ್ರದ ಸಮಸ್ಯೆ ಎದುರಿಸುತ್ತಿದ್ದಾಳೆ ಎಂದು ಅರಿತು ಬಾಲಕಿಯ ತಾಯಿ ಆಸ್ಪತ್ರೆಗೆ ಗುರುವಾರ ಕರೆದೊಯ್ದು ಪರೀಕ್ಷೆ ಮಾಡಿಸಿದ್ದಾರೆ.

    ಬಾಲಕಿಯನ್ನು ಪರೀಕ್ಷೆ ನಡೆಸಿದ ವೈದ್ಯರು, ಆಕೆಯ ಮೇಲೆ ಅತ್ಯಾಚಾರವಾಗಿ ಎಂದು ವರದಿ ನೀಡಿದ್ದಾರೆ. ಇದರಿಂದ ಗಾಬರಿಗೊಂಡ ಪೋಷಕರು, ಅಸ್ವಸ್ಥಗೊಂಡ ಬಾಲಕಿಯನ್ನು ಚಿಕಿತ್ಸೆಗಾಗಿ ಉಲುಬೇರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಶುಕ್ರವಾರ ಮೃತಪಟ್ಟಿದ್ದಾಳೆ.

    ಅತ್ಯಾಚಾರ ಎಸಗಿದ್ದ 18 ವರ್ಷದ ಯುವಕನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು 7 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews