Tag: Girl student

  • SSLC ವಿದ್ಯಾರ್ಥಿನಿಗೆ ತನ್ನ ಬೆತ್ತಲೆ ಫೋಟೋ ಕಳಿಸಿ ಕಿರುಕುಳ – ಕಾಮುಕ ಶಿಕ್ಷಕನ ವಿರುದ್ಧ ಕೇಸ್‌

    SSLC ವಿದ್ಯಾರ್ಥಿನಿಗೆ ತನ್ನ ಬೆತ್ತಲೆ ಫೋಟೋ ಕಳಿಸಿ ಕಿರುಕುಳ – ಕಾಮುಕ ಶಿಕ್ಷಕನ ವಿರುದ್ಧ ಕೇಸ್‌

    ಡೆಹ್ರಾಡೂನ್‌: 10ನೇ ತರಗತಿ ವಿದ್ಯಾರ್ಥಿನಿಯೊಬ್ಬರು (SSLC Girl Student) ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ಅನುಭವಿಸುತ್ತಿರುವುದಾಗಿ ದೂರು ದಾಖಲಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

    ಉತ್ತರಾಖಂಡದ (Uttarakhand) ಹಲ್ದ್ವಾನಿಯಲ್ಲಿ ಘಟನೆ ನಡೆದಿದೆ. ತನ್ನ ಶಾಲೆಯ ಶಿಕ್ಷಕನೇ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ವಾಟ್ಸಪ್‌ ಮತ್ತು ಸ್ನ್ಯಾಪ್‌ಚಾಟ್‌ನಲ್ಲಿ ತನಗೆ ಬೆತ್ತೆಲೆ ಫೋಟೋಗಳನ್ನು ಕಳಿಸಿದ್ದಾನೆ. ಈ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ ಬಳಿಕ ಪೊಲೀಸರಿಗೆ (Uttarakhand Police) ದೂರು ನೀಡಲಾಗಿದೆ. ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ರಾಯಚೂರು ಸಂಸದ ಜಿ.ಕುಮಾರ ನಾಯಕ್ ಹೆಸರು – ಅಕ್ರಮವಾಗಿ ಭೂಪರಿವರ್ತನೆ ಆರೋಪ

    ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಲ್ದ್ವಾನಿ ವೃತ್ತ ನಿರೀಕ್ಷಕ ನಿತಿನ್ ಲೋಹಾನಿ ಮಾಹಿತಿ ನೀಡಿದ್ದು, ಹಲ್ದ್ವಾನಿಯ ಖಾಸಗಿ ಶಾಲೆಯೊಂದರ ಶಿಕ್ಷಕನೊಬ್ಬ ಸೋಷಿಯಲ್‌ ಮೀಡಿಯಾದಲ್ಲಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳನ್ನ ಕಳಿಸಿದ್ದಾನೆ. ಈ ಬಗ್ಗೆ ದೂರು ಸ್ವೀಕರಿಸಿ, ಎಫ್‌ಐಆರ್‌ ದಾಖಲಿಸಿದ್ದು, ತನಿಖೆ ಪ್ರಾರಂಭಿಸಿದ್ದೇವೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಮಾಸ್ ಬಂಡುಕೋರರ ದಾಳಿ- ಒತ್ತೆಯಾಳುಗಳ 6 ಶವ ಪತ್ತೆಹಚ್ಚಿ ವಶಪಡಿಸಿಕೊಂಡ ಇಸ್ರೇಲ್

    ಘಟನೆ ಬೆಳಕಿಗೆ ಬಂದಿದ್ದು ಹೇಗೆ?
    ಇಲ್ಲಿನ ಖಾಸಗಿ ಶಾಲೆಯ ಶಿಕ್ಷಕ, ತನ್ನ ವಿದ್ಯಾರ್ಥಿನಿಗೆ ಆಗಾಗ್ಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಆಕೆಗೆ ಅನುಚಿತ ಸಂದೇಶಗಳನ್ನ ಕಳಿಸಿದ್ದಾನೆ. ಮೆಸೇಜ್‌ ಜೊತೆಗೆ ಸ್ನ್ಯಾಪ್‌ ಚಾಟ್‌ ಮತ್ತು ವಾಟ್ಸಪ್‌ಗಳಲ್ಲಿ ತನ್ನ ಬೆತ್ತಲೆ ಫೋಟೋಗಳನ್ನ ವಿದ್ಯಾರ್ಥಿನಿಗೆ ಕಳಿಸಿದ್ದಾನೆ. ಇದರಿಂದ ಮಾನಸಿಕ ತೊಂದರೆಗೆ ಒಳಗಾದ ವಿದ್ಯಾರ್ಥಿನಿ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ನಂತರ ಪೋಷಕರು ಕೊತ್ವಾಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ 2ನೇ ದಿನವೂ ಉತ್ತಮ ಸ್ಪಂದನೆ – ಸಂಜೆ 6 ಗಂಟೆವರೆಗೂ ಇರಲಿದೆ ಮೇಳ

  • ಶಾಲೆಯಲ್ಲಿ ಬ್ರೆಡ್‌ ಮಾರಾಟ ಮಾಡಿ iPhone-14 ಖರೀದಿಸಿದ 12ರ ಬಾಲಕಿ

    ಶಾಲೆಯಲ್ಲಿ ಬ್ರೆಡ್‌ ಮಾರಾಟ ಮಾಡಿ iPhone-14 ಖರೀದಿಸಿದ 12ರ ಬಾಲಕಿ

    ದುಬೈ: ಸಾಧಿಸುವ ಛಲವಿದ್ದರೆ ಸಾಕು ಏನುಬೇಕಾದರೂ ಮಾಡಬಹುದು ಅನ್ನೋದಕ್ಕೆ ಸಾಕಷ್ಟು ನಿದರ್ಶನಗಳಿವೆ. ಅದಕ್ಕೆ ತಾಜಾ ಉದಾಹರಣೆ ಎನ್ನುವಂತೆ ಬಾಲಕಿಯೊಬ್ಬಳು ತನ್ನ ಸ್ವಂತ ದುಡಿಮೆಯಿಂದ 12ನೇ ವಯಸ್ಸಿಗೇ ಐಫೋನ್‌ (iPhone) ಖರೀದಿಸಿ ಸುದ್ದಿಯಾಗಿದ್ದಾಳೆ.

    ಯುನೈಟೆಡ್ ಅರಬ್ ಎಮಿರೇಟ್ಸ್‌ನ ದುಬೈ (Dubai City) ನಗರದಲ್ಲಿ ವಾಸಿಸುತ್ತಿರುವ ಭಾರತೀಯ ಮೂಲದ ಬಿಯಾಂಕಾ ಜೇಮಿ ವರಿಯಾವಾ ಅವರ ಪುತ್ರಿ ಬಿಯಾಂಕಾ ತಾನೇ ತಯಾರಿಸಿದ ಬ್ರೆಡ್‌ ಮಾರಾಟ ಮಾಡಿ 6 ವಾರಗಳಲ್ಲಿ 3 ಸಾವಿರ ದಿರ್ಹಮ್ (67,362ರೂ.) ಗಳಿಸಿ ಐಫೋನ್‌-14 (iPhone 14) ಖರೀದಿಸಿದ್ದಾಳೆ. ಈ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾಳೆ. ಇದನ್ನೂ ಓದಿ: ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

    ಐಫೋನ್‌-14 ಹಿಂದಿನ ಕಥೆಯೇ ರೋಚಕ?
    ದುಬೈ ನಗರದಲ್ಲಿ 7ನೇ ತರಗತಿ ಓದುತ್ತಿದ್ದ ಬಿಯಾಂಕಾ ಜೇಮಿ ವರಿಯಾವಾ ಐಫೋನ್‌ ತೆಗೆದುಕೊಳ್ಳಲೇಬೇಕೆಂದು ಬಯಸಿದ್ದಳು. ಆದರೆ ಮಗಳಿಗೆ ಐಫೋನ್‌ ಕೊಡಿಸುವಷ್ಟು ಹಣ ಪೋಷಕರ ಬಳಿ ಇರಲಿಲ್ಲ. ಇದನ್ನೂ ಓದಿ: ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

    ಒಂದು ದಿನ ಬಿಯಾಂಕಾಳ ತಾಯಿ ಮಧ್ಯಾಹ್ನದ ಊಟಕ್ಕಾಗಿ ತಾನೇ ತಯಾರಿಸಿದ ಬ್ರೇಡ್‌ ಅನ್ನು ಪ್ಯಾಕ್‌ ಮಾಡಿಕೊಟ್ಟಿದ್ದರು. ಶಾಲೆಗೆ ಹೋದಾಗ ಬಿಯಾಂಕಾ ಅದನ್ನು ಸ್ನೇಹಿತರೊಂದಿಗೆ ಹಂಚಿಕೊಂಡು ತಿಂದಿದ್ದಳು. ಬಿಯಾಂಕಾ ತಂದಿದ್ದ ಬ್ರೆಡ್‌ ತನ್ನ ಸ್ನೇಹಿತರಿಗೆಲ್ಲಾ ತುಂಬಾನೆ ಇಷ್ಟವಾಯಿತು. ಮರುದಿನ ಅಂತಹದ್ದೇ ಏನಾದರೂ ತರುವಂತೆ ಕೇಳಿಕೊಂಡರು. ಇದರಿಂದ ಆಕೆಗೆ ತಾನೇ ಬ್ರೆಡ್‌ ತಯಾರಿಸಿ ಏಕೆ ಮಾರಾಟ ಮಾಡಬಾರದು ಎಂಬ ಆಲೋಚನೆ ಬಂದಿತು.

    ಬಿಯಾಂಕಾಳ ಪೋಷಕರು ಈ ಹಿಂದೆ ದುಬೈನ ಪಂಚತಾರಾ ಹೋಟೆಲ್‌ನಲ್ಲಿ ಕೆಲಸ ಮಾಡಿದ್ದರು. ಅಲ್ಲಿಯೇ ಬ್ರೆಡ್‌ ಮಾಡುವುದನ್ನೂ ಕಲಿತುಕೊಂಡಿದ್ದರು. ಬಿಯಾಂಕ ಸಹ ತನ್ನ ಪೋಷಕರಿಗೆ ಆಗಾಗ್ಗೆ ಸಹಾಯ ಮಾಡುತ್ತಾ ಬ್ರೆಡ್‌ ಮಾಡೋದನ್ನ ಕಲಿತುಕೊಂಡಿದ್ದಳು. ಇದರಿಂದ ತಾನೇ ಬ್ರೆಡ್‌ ತಯಾರಿಸಿ ಮಾರಾಟ ಮಾಡಲು ಮುಂದಾದಳು. ಶಾಲೆಯಲ್ಲಿ ಬ್ರೆಡ್‌ ಮಾರಾಟ ಮಾಡಲು ಹೋದಾಗ ಅನೇಕ ಸ್ನೇಹಿತರು ಗೇಲಿ ಮಾಡಿದರು. ಅದಕ್ಕೆಲ್ಲ ಹಿಂದೆ ಸರಿಯದ ಬಿಯಾಂಕಾ ತನ್ನ ಗುರಿಯತ್ತ ಮುನ್ನುಗ್ಗಿದಳು. ಬ್ರೆಡ್‌ ಮಾರಾಟ ಮಾಡಿ 6 ವಾರಗಳಲ್ಲಿ 3 ಸಾವಿರ ದಿರ್ಹಮ್ (67,362ರೂ.) ಗಳಿಸಿ ಐಫೋನ್‌ ಖರೀದಿಸಿದಳು. ಅಲ್ಲದೇ ತಂದೆ ಜೆಮಿ ವರಿಯಾವ ಅವರಿಗೆ 100 ದಿರ್ಹಮ್ (2 ಸಾವಿರದ 245 ರೂಪಾಯಿ) ನೀಡಿ ಹಣದಿಂದ ವೃತ್ತಿ ಆರಂಭಿಸುವಂತೆ ಕೇಳಿಕೊಂಡಳು. ಮಗಳ ಈ ವಿಚಾರ ತಿಳಿದು ಪೋಷಕರು ಸಂತಸಗೊಂಡಿದ್ದಾರೆ.

  • ವಿದ್ಯಾರ್ಥಿನಿಗೆ ಕಿಸ್ ಕೊಟ್ಟು ಯಾರಿಗೂ ಹೇಳ್ಬೇಡ ಎಂದ ಶಿಕ್ಷಕನ ವಿರುದ್ಧ ಕೇಸ್

    ವಿದ್ಯಾರ್ಥಿನಿಗೆ ಕಿಸ್ ಕೊಟ್ಟು ಯಾರಿಗೂ ಹೇಳ್ಬೇಡ ಎಂದ ಶಿಕ್ಷಕನ ವಿರುದ್ಧ ಕೇಸ್

    ಚಿಕ್ಕೋಡಿ: ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯ (Private Educational Institution) ಪ್ರೌಢ ಶಾಲೆಯ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕನೊಬ್ಬ (Teacher) ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದೆ.

    ಪಟ್ಟಣದ ಖಾಸಗಿ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ಶಿಕ್ಷಕ ಬಿ.ಆರ್. ಬಾಡಕರ 10ನೇ ತರಗತಿಯ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಡಿ.23 ರಂದು ಶಿಕ್ಷಕನ ವಿರುದ್ಧ ದೂರು ನೀಡಿದ್ದಾಳೆ. ಇದನ್ನೂ ಓದಿ: ಹಾಸನ ಜೆಡಿಎಸ್ ಕಾರ್ಯಕರ್ತರಿಗೆ ಮೈಸೂರಿನಲ್ಲಿ ಭರ್ಜರಿ ಬಾಡೂಟ

    ಅಲ್ಲದೇ ಕಾಮುಕ ಶಿಕ್ಷಕ ಬಾಡಕರ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯವನ್ನೂ ನಡೆಸಿದ್ದಾನೆ. ಈ ವಿಷಯ ಯಾರಿಗಾದ್ರೂ ಹೇಳಿದ್ರೆ ಇಂಟರ್‌ನಲ್ ಅಂಕಗಳನ್ನ ಕಡಿತಗೊಳಿಸೋದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಶಿಕ್ಷಕನ ಈ ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಶಿಕ್ಷಕ ಕೆ.ಎಂ ಕೋಳಿ ವಿರುದ್ಧವೂ ದೂರು ನೀಡಲಾಗಿತ್ತು. ಇದನ್ನೂ ಓದಿ: ವಿದ್ಯಾರ್ಥಿನಿಯರು ಹಾಜರಾಗದಿದ್ರೆ ನಮಗೂ ಉನ್ನತ ಶಿಕ್ಷಣ ಬೇಡ – ತಾಲಿಬಾನ್‌ಗೆ ವಿದ್ಯಾರ್ಥಿಗಳಿಂದ ಎಚ್ಚರಿಕೆ

    ಈ ಹಿನ್ನೆಲೆಯಲ್ಲಿ ಆರೋಪಿಗಳ (Accused) ವಿರುದ್ಧ ಸಂಕೇಶ್ವರ ಪೋಲಿಸ್ ಠಾಣೆಯಲ್ಲಿ (Police Station) ಐಪಿಸಿ (IPC) ಸೆಕ್ಷನ್ 354 (A), 109, 506 ಅಡಿಯಲ್ಲಿ, ಪೋಕ್ಸೋ (POCSO Act) ಹಾಗೂ ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ-2015ರ ಅಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವಿವಾಹಿತ ಬಾಯ್‌ಫ್ರೆಂಡ್‌ಗೆ ಹಾಸ್ಟೆಲ್‌ಮೇಟ್ಸ್ ಬೆತ್ತಲೆ ವೀಡಿಯೋ ಕಳಿಸಿದ BED ಪದವೀಧರೆ- ಇಬ್ಬರೂ ಅರೆಸ್ಟ್

    ವಿವಾಹಿತ ಬಾಯ್‌ಫ್ರೆಂಡ್‌ಗೆ ಹಾಸ್ಟೆಲ್‌ಮೇಟ್ಸ್ ಬೆತ್ತಲೆ ವೀಡಿಯೋ ಕಳಿಸಿದ BED ಪದವೀಧರೆ- ಇಬ್ಬರೂ ಅರೆಸ್ಟ್

    ಚೆನ್ನೈ: ಇತ್ತೀಚೆಗೆ ಕಾಲೇಜು ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿನಿಯರೇ (Girls Hostel Students) ಕುಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಹೆಚ್ಚಾಗಿದೆ. ಚಂಡೀಗಢ ವಿಶ್ವವಿದ್ಯಾನಿಲಯ (Chandigarh University), ಗುಜರಾತ್ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವೀಡಿಯೋ (Obscene Videos) ಗಳನ್ನು ಸೆರೆ ಹಿಡಿದ ಪ್ರಕರಣ ಬೆಳಕಿಗೆ ಬಂದ ನಂತರ ತಮಿಳುನಾಡಿನಲ್ಲೂ ಅಂತಹದ್ದೇ ಕೃತ್ಯ ಬೆಳಕಿಗೆ ಬಂದಿದೆ.

    ತಮಿಳುನಾಡಿನ (Tamilnadu) ಮಧುರೈನಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್‌ಮೇಟ್ (Hostel Mates) ಆಕ್ಷೇಪಾರ್ಹ ವೀಡಿಯೋಗಳು ಹಾಗೂ ಫೋಟೋಗಳನ್ನು ಸೆರೆ ಹಿಡಿದು ಬಾಯ್‌ಫ್ರೆಂಡ್‌ಗೆ (Boyfriend) ಹಂಚಿಕೊಂಡಿದ್ದಾಳೆ. ಖಾಸಗಿ ಕಾಲೇಜಿನ ಬಿಇಡಿ (BED) ಪದವೀಧರೆ ಕಾಳೇಶ್ವರಿ ಹಾಗೂ ಆಕೆಯ ಬಾಯ್‌ಫ್ರೆಂಡ್ ಆಶಿಕ್‌ನನ್ನು ಬಂಧಿಸಲಾಗಿದೆ. ಕಾಳೇಶ್ವರಿ ವಾಸವಿದ್ದ ಅಣ್ಣಾನಗರದ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮೈಸೂರಿನಲ್ಲಿ ದಸರಾ ಸಂಭ್ರಮ- ಚಿನ್ನದ ಅಂಬಾರಿಯ ಉತ್ಸವ ಮೂರ್ತಿಗೆ ಪೂಜೆ

    ಕುಮುತಿ ನಗರದಲ್ಲಿ ಕ್ಲಿನಿಕ್ ನಡೆಸುತ್ತಿರುವ ಆಶಿಕ್ (31) ಮೂರು ವರ್ಷದ ಹಿಂದೆಯೇ ವಿವಾಹವಾಗಿದ್ದ. ಆದರೂ ಕಾಳೇಶ್ವರಿಯೊಂದಿಗೆ ಸ್ನೇಹ ಬೆಳೆಸಿದ್ದ, ಆಕೆಗೆ ಹಾಸ್ಟೆಲ್ ಮೇಟ್‌ಗಳು ಸ್ನಾನ ಮಾಡುವಾಗ ಮತ್ತು ಬಟ್ಟೆ ಬದಲಾಯಿಸುವಾಗ ಅವರ ವೀಡಿಯೋ ಶೂಟ್ ಮಾಡುವಂತೆ ಹೇಳಿದ್ದ. ಕಾಳೇಶ್ವರಿ ನಡೆ ಬಗ್ಗೆ ಅನುಮಾನಗೊಂಡ ವಾರ್ಡನ್ ಆಕೆಯ ಫೋನ್ ಅವನ್ನು ಪರಿಶೀಲಿಸಿದ್ದಾರೆ, ಬಳಿಕ ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್-ಬಿಜೆಪಿ ತಿಕ್ಕಾಟದ ನಡುವೆ ರೈತರಿಂದ ಶುರುವಾಯ್ತು ಪೇ ಫಾರ್ಮರ್ ಅಭಿಯಾನ

    ಸೈಬರ್ ಕ್ರೈಂ ತಂಡ ಈ ಬಗ್ಗೆ ತನಿಖೆ ಆರಂಭಿಸಿದ್ದು ಆಶಿಕ್ ಮತ್ತು ಕಾಳೀಶ್ವರಿಯನ್ನ ಬಂಧಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

    ಇತ್ತೀಚೆಗೆ ಪಂಜಾಬ್‌ನ ಚಂಡೀಗಢ ವಿವಿಯಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ಇದಾದ ಮೂರು ದಿನಗಳಲ್ಲೇ ಗುಜರಾತ್‌ನಲ್ಲಿ ಹಾಸ್ಟೆಲ್ ಮೆಸ್‌ನಲ್ಲಿ ಅಡುಗೆ ಮಾಡುವವರೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಸೆರೆ ಹಿಡಿದಿದ್ದ ಘಟನೆ ಬೆಳಕಿಗೆ ಬಂದಿತು. ಈ ಬೆನ್ನಲ್ಲೇ ಮತ್ತೊಂದು ಘಟಮನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ತಾಯಿ ಓದುವಂತೆ ಒತ್ತಾಯಿಸುತ್ತಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – 2 ವಾರಗಳಲ್ಲಿ 3ನೇ ಸಾವು

    ತಾಯಿ ಓದುವಂತೆ ಒತ್ತಾಯಿಸುತ್ತಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – 2 ವಾರಗಳಲ್ಲಿ 3ನೇ ಸಾವು

    ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ 3ನೇ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣ ಇದಾಗಿದೆ.

    ತಾಯಿ ಓದುವಂತೆ ಗದರಿಸುತ್ತಿದ್ದರಿಂದ ಬಾಲಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಏಷ್ಯಾದಲ್ಲಿ ಭಾರತ ಹೊರತು ಪಡಿಸಿ 13 ದೇಶಗಳಲ್ಲಿ ಆರ್ಥಿಕ ಹಿಂಜರಿತ ಸಾಧ್ಯತೆ

    crime

    ತನಿಖೆ ವೇಳೆ ಬಾಲಕಿಯ ಡೆತ್‌ನೋಟ್ ಪತ್ತೆಯಾಗಿದ್ದು, ಆಕೆಯ ಪೋಷಕರು ಐಎಎಸ್ ಪ್ರವೇಶ ಪರೀಕ್ಷೆಯಲ್ಲಿ ಮಗಳು ತೇರ್ಗಡೆಯಾಗಬೇಕು ಎಂದು ಬಯಸಿದ್ದರು. ಇದರಿಂದ ಆಕೆಗೆ ಅಪಾರ ಒತ್ತಡವಾಗಿತ್ತು. ತಾಯಿ ಓದುವಂತೆ ಗದರಿಸುತ್ತಿದ್ದರಿಂದ ಬಾಲಕಿ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಹದಿಹರೆಯದ ವಿದ್ಯಾರ್ಥಿಗಳ ಸಾವಿನಿಂದ ಕಳವಳ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಆತ್ಮಹತ್ಯೆಯ ಆಲೋಚನೆಗಳಿಂದ ದೂರವಿಡುವಂತೆ ಯುವಜನತೆಯಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ: ಪ್ರಹ್ಲಾದ್ ಜೋಶಿ ತಿರುಗೇಟು

    Crime-Scene

    ವಸತಿ ಶಾಲೆಯಲ್ಲಿ 2ನೇ ಆತ್ಮಹತ್ಯೆ: ತಮಿಳುನಾಡಿನ ಚಿನ್ನಸೇಲಂನ ಕಣಿಯೂರು ಪ್ರದೇಶದ ಖಾಸಗಿ ವಸತಿ ಶಾಲೆಯಲ್ಲಿ 2 ವಾರಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಆತ್ಮಹತ್ಯೆಯಿಂದಾಗಿ ಶಾಲೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು. ಆ ಘಟನೆ ಮಾಸುವುದಕ್ಕೂ ಮೊದಲೇ ಇನ್ನೊಂದು ವಿದ್ಯಾರ್ಥಿನಿ ನಿನ್ನೆ ವಸತಿ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿತ್ತು.

    ತಮಿಳುನಾಡಿನ ತಿರುವಳ್ಳೂರು ಜಿಲ್ಲೆ, ಕಿಲಚೇರಿ ಬಳಿಯ ಸರ್ಕಾರಿ ಅನುದಾನಿತ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯ ಹಾಸ್ಟೆಲ್‌ನಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಳು. ಘಟನೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ವಿದ್ಯಾರ್ಥಿನಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ಹಾಗೂ ಸಂಬಂಧಿಕರು ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಘಟನೆ ನಡೆದ ಪ್ರದೇಶದಲ್ಲಿ ಹಿಂಸಾಚಾರ ನಡೆಯದಂತೆ ಪೊಲೀಸರು ಎಚ್ಚರ ವಹಿಸಿದ್ದಾರೆ.

    ಈ ಘಟನೆ ಸಂಭವಿಸಿದ ಮರುದಿನವೇ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಪಾರ್ಟ್​ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

    ಅಪಾರ್ಟ್​ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

    ಬೆಂಗಳೂರು: ಅಪಾರ್ಟ್​ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    13 ವರ್ಷದ ವೈಷ್ಣವಿ ಮೃತ ದುರ್ದೈವಿ. ಉತ್ತರಪ್ರದೇಶ ಮೂಲದ ವೀರೇಂದ್ರಕುಮಾರ್ ಹಾಗೂ ಸುಮನ್ ದಂಪತಿಯ ಪುತ್ರಿ ವೈಷ್ಣವಿ. ಈ ದಂಪತಿ ಕಳೆದ 20 ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬೆಂಗಳೂರಿನ ವೇಣುಗೋಪಾಲ ನಗರದ ನಿತೀಶ್ ಪಾರ್ಕ್ ಅಪಾರ್ಟ್​ಮೆಂಟ್ ನಲ್ಲಿ ವಾಸಿಸುತ್ತಿದ್ದಾರೆ. ಬಾಲ್ಕನಿಯಲ್ಲಿ ಆಟವಾಡುತ್ತಿದ್ದಾಗ ಕೆಳಗೆ ಬಿದ್ದು ಈ ಅವಘಡ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ವೈಷ್ಣವಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು.

    ರಾತ್ರಿ ಕುಟುಂಬದವರ ಜೊತೆ ಕುಳಿತು ಊಟ ಮಾಡಿದ್ದಳು. ಹಾಲಿನಲ್ಲಿ ಮನೆಯವರು ಕುಳಿತಿದ್ದರು. ವೈಷ್ಣವಿ ಬಾಲ್ಕನಿಯಲ್ಲಿ ಲಾಕ್ ಮಾಡಿಕೊಂಡು ಆಟವಾಡುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಏನೋ ಬಿದ್ದ ರೀತಿ ಶಬ್ದ ಕೇಳಿದ ಕುಟುಂಬಸ್ಥರು ಬಾಲ್ಕನಿ ಬಳಿ ಹೋಗಿ ನೋಡಿದ್ದಾರೆ. ಆದರೆ ಅಲ್ಲಿ ಬಾಲ್ಕನಿಯಿಂದ ವೈಷ್ಣವಿ ಕೆಳಗೆ ಬಿದ್ದಿದ್ದು ಕಂಡಿದೆ. ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಸ್ಥಳದಲ್ಲೇ ವೈಷ್ಣವಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: 7 ಬಿಳಿ ಕುದುರೆಗಳ ಜೊತೆ ಮಂಟಪಕ್ಕೆ ವಿಕ್ಕಿ ಕೊಡಲಿದ್ದಾರೆ ರಾಯಲ್ ಎಂಟ್ರಿ

    ಘಟನೆ ಕುರಿತು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಯೋ ಅಥವಾ ಆಯತಪ್ಪಿ ಬಿದ್ದಳು ಎಂಬುದರ ಬಗ್ಗೆ ಪೊಲೀಸರಿಂದ ತನಿಖೆ ನಂತರ ತಿಳಿಯಬೇಕಾಗಿದೆ. ಇದನ್ನೂ ಓದಿ: ವಿಶೇಷ ಕ್ಲಸ್ಟರ್‌ನಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸೋಂಕು ಹೆಚ್ಚು: ಬೊಮ್ಮಾಯಿ

  • ಕಾಲೇಜಿನ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

    ಕಾಲೇಜಿನ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

    ಬೆಂಗಳೂರು: ಕಾಲೇಜಿನ ಎರಡನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಯತ್ನಿಸಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.

    ಟಿ ಸಿ ಪಾಳ್ಯದ ನಿವಾಸಿ ಮೀನಾ (19) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಜೀವನ್ ಭೀಮಾನಗರದ ಮಹಿಮಾ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದಾಳೆ. ಮೀನಾ ಕಾಲೇಜಿಗೆ ಅಕ್ಕನ ಮನೆಯಿಂದ ಬರುತ್ತಿದ್ದಳು. ಆದರೆ ಇಂದು ಕಾಲೇಜಿನಲ್ಲಿ ಪ್ರಾರ್ಥನೆ ನಡೆಯುವಾಗ ಮೀನಾ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ್ದಾಳೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: OMICRON ಸೋಂಕಿಗೆ ಪ್ರತ್ಯೇಕ ಆಸ್ಪತ್ರೆ: ದೆಹಲಿ ಸರ್ಕಾರ

    ಘಟನೆಯಿಂದಾಗಿ ವಿದ್ಯಾರ್ಥಿನಿಯ ತಲೆ ಮತ್ತು ಕಾಲಿಗೆ ಗಾಯಗಳಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ವಿದ್ಯಾರ್ಥಿನಿಯನ್ನು ದಾಖಲಿಸಲಾಗಿದೆ. ಘಟನೆ ಸಂಬಂಧಿಸಿದಂತೆ ಸ್ಥಳಕ್ಕೆ ಜೀವನ್ ಭೀಮಾನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.ಇದನ್ನೂ ಓದಿ: ಓಮಿಕ್ರಾನ್ ರೂಪಾಂತರಿಯಿಂದ ಜಾಗತಿಕ ಅಪಾಯ ಹೆಚ್ಚು-WHO

  • ಅನಾಮಧೇಯ ಪ್ರೇಮ ಪತ್ರದಿಂದಾಗಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ

    ಅನಾಮಧೇಯ ಪ್ರೇಮ ಪತ್ರದಿಂದಾಗಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ

    ಮುಂಬೈ: ಅನಾಮಧೇಯ ಪ್ರೇಮ ಪತ್ರದಿಂದಾಗಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಪಂಡರಾಪುರದಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ವಾಖ್ರಿ ಗ್ರಾಮದವಳಾಗಿದ್ದು, ಪಂಡರಾಪುರದಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

    ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಹಿಂದೆ ಇದ್ದ ಸಹಪಾಠಿಯೊಬ್ಬರು ಅನಾಮಧೇಯ ಪ್ರೇಮ ಪತ್ರ ನೀಡಿದ್ದಾರೆ. ಈ ವೇಳೆ ಅದನ್ನು ನೋಡಿದ ತರಗತಿಯ ಶಿಕ್ಷಕಿ ವಿದ್ಯಾರ್ಥಿನಿಯನ್ನು ನಿಲ್ಲಿಸಿ ಮನಬಂದಂತೆ ನಿಂದಿಸಿದ್ದಾರೆ. ಅಷ್ಟೇ ಅಲ್ಲದೆ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾರೆ. ಈ ಘಟನೆಯಿಂದ ಮನನೊಂದು ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಘಟನೆಯ ಕುರಿತು ಪ್ರತಿಕ್ರಿಯೆ ನೀಡಿರುವ ಮೃತ ವಿದ್ಯಾರ್ಥಿಯ ತಂದೆ, ನನಗೆ ಶಾಲೆಯಿಂದ ಫೋನ್ ಬಂದಿತ್ತು. ತಕ್ಷಣವೇ ನಾನು ಶಾಲೆಗೆ ಭೇಟಿ ನೀಡುತ್ತಿದ್ದಂತೆ ಮಗಳು ಅಳುತ್ತಾ ನನ್ನ ಬಳಿಗೆ ಬಂದಳು. ಬಳಿಕ ಶಿಕ್ಷಕಿ ಬಂದು ನಿಮ್ಮ ಮಗಳ ಕೈಯಲ್ಲಿ ಪ್ರೇಮ ಪತ್ರ ಸಿಕ್ಕಿದೆ ಅಂತ ದೂರಿದರು. ನನ್ನ ಮಗಳು ಯಾರನ್ನೂ ಪ್ರೀತಿಸುತ್ತಿಲ್ಲ. ಈ ಪತ್ರವನ್ನು ಆಕೆಗೆ ಯಾರೋ ಬರೆದಿದ್ದಾರೆ ಎಂದು ತಿಳಿಸಿ ಮಗಳನ್ನು ಮನೆಗೆ ಕರೆದುಕೊಂಡು ಬಂದಿದ್ದೆ ಎಂದರು.

    ತರಗತಿ ಹಾಗೂ ಶಾಲೆಯಲ್ಲಿ ಆದ ಘಟನೆಯಿಂದ ಮಗಳು ಮುಜುಗುರಕ್ಕೆ ಒಳಗಾಗಿದ್ದಳು. ಇದರಿಂದಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ದೂರಿದ್ದಾರೆ.

    ಶಿಕ್ಷಕಿ ಹಾಗೂ ಶಾಲಾ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮೃತ ವಿದ್ಯಾರ್ಥಿನಿ ಪೋಷಕರು ಹಾಗೂ ವಾಖ್ರಿ ಗ್ರಾಮಸ್ಥರು ಪಂಡರಾಪುರದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಶಿಕ್ಷಕಿಯ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv