Tag: girl students

  • ಪ್ರವಾಸಕ್ಕೆ ತೆರಳಿದ್ದ ಮೂವರು ಯುವತಿಯರ ಭೀಕರ ಹತ್ಯೆ – ಈಕ್ವೆಡಾರ್‌ ಬೀಚ್‌ನಲ್ಲಿ ನಡೆದಿದ್ದೇನು?

    ಪ್ರವಾಸಕ್ಕೆ ತೆರಳಿದ್ದ ಮೂವರು ಯುವತಿಯರ ಭೀಕರ ಹತ್ಯೆ – ಈಕ್ವೆಡಾರ್‌ ಬೀಚ್‌ನಲ್ಲಿ ನಡೆದಿದ್ದೇನು?

    ವಾಷಿಂಗ್ಟನ್‌: ಪ್ರವಾಸಕ್ಕೆ ತೆರಳಿದ್ದ ಮೂವರು ಯುವತಿಯರು ಅಮೆರಿಕದ (USA) ಈಕ್ವೆಡಾರ್‌ ಬೀಚ್‌ನಲ್ಲಿ (Ecuador Beach) ಭೀಕರ ಹತ್ಯೆಗೀಡಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ನಂತರ ಸಂತ್ರಸ್ತರು ಕಳುಹಿಸಿದ್ದ ಸಂದೇಶ ಬಹಿರಂಗವಾಗಿದೆ.

    ಪ್ರವಾಸಕ್ಕೆಂದು ತೆರಳಿದ್ದ ಡೆನಿಸ್ ರೆಯ್ನಾ (19) ಯುಲಿಯಾನಾ ಮಾಸಿಯಾಸ್ (21) ಹಾಗೂ ನಯೆಲಿ ತಫಿಯಾ (22) ಯುವತಿಯರು ಏಪ್ರಿಲ್‌ 4ರಂದು ನಾಪತ್ತೆಯಾಗಿ, ಏಪ್ರಿಲ್‌ 5 ರಂದು ಹತ್ಯೆಗೀಡಾಗಿದ್ದರು. ಆದ್ರೆ ಅದಕ್ಕೂ ಮುನ್ನ ತಮ್ಮ ಆಪ್ತರಿಗೆ ʻಇಲ್ಲೇನಾದರು ಘಟನೆ ಸಂಭವಿಸಬಹುದು ಅನ್ನಿಸುತ್ತಿದೆʼ ಅಂತಾ ಸಂದೇಶ ಕಳುಹಿಸಿರುವುದು ಇದೀಗ ಬೆಳಕಿಗೆ ಬಂದಿದೆ.

    ಹತ್ಯೆಯಾವದರಲ್ಲಿ ಮಾಸಿಯಾಸ್ ಗಾಯಕಿಯಾಗಿದ್ದರು, ಮೃತ ನಯೆಲಿ ತಫಿಯಾ ತಾಯಿ ಹಾಗೂ ಡೆನಿಸ್‌ ರೆಯ್ನಾ ಕೃಷಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಾಗಿದ್ದರು (Agricultural Engineering Student). ಇದನ್ನೂ ಓದಿ: ನಮ್ಮದು ವೈಭವೀಕರಿಸಿದ ಕಾರ್ಯಕರ್ತರ ಸಂಘಟನೆಯಲ್ಲ: ಟ್ವಿಟ್ಟರ್‌ 6 ಸಾವಿರ ಉದ್ಯೋಗ ಕಡಿತಕ್ಕೆ ಮಸ್ಕ್‌ ಸ್ಪಷ್ಟನೆ

    ಮಾಹಿತಿ ಪ್ರಕಾರ, ಇದೇ ಏಪ್ರಿಲ್‌ 5 ರಂದು ಮೂವರು ಯುವತಿಯರನ್ನ ಚಿತ್ರಹಿಂಸೆ ನೀಡಿ ಯಾರೋ ಹತ್ಯೆ ಮಾಡಿದ್ದಾರೆ. ನಂತರ ಈಕ್ವೆಡಾರ್‌ನ ಕ್ವಿನಿಂಡೆ ಬಳಿಯ ಎಸ್ಮೆರಾಲ್ಡಾಸ್ ನದಿಯ ಬಳಿ ಹೂತುಹಾಕಿದ್ದಾರೆ. ಈ ಸ್ಥಳದಲ್ಲಿ ನಾಯಿಯೊಂದು ದುರ್ವಾಸನೆ ಹೊರಬರುತ್ತಿರುವುದನ್ನು ಗುರುತಿಸಿದೆ. ಇದನ್ನು ಕಂಡ ಮೀನುಗಾರರ ಗುಂಪು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದೆ. ಇದನ್ನೂ ಓದಿ: ಸುಡಾನ್ ಸೈನಿಕರ ಸಂಘರ್ಷ – 200ಕ್ಕೆ ಏರಿದ ಸಾವಿನ ಸಂಖ್ಯೆ, ಸಾವಿರಾರು ಜನರಿಗೆ ಗಾಯ

    ಸಾವಿಗೂ ಮುನ್ನ ಏಪ್ರಿಲ್‌ 4ರಂದು ಸಂತ್ರಸ್ತೆ ತಫಿಯಾ ತನ್ನ ಸಹೋದರನಿಗೆ ತಾನಿರುವ ಲೈವ್‌ ಲೊಕೇಶನ್‌ ನೊಂದಿಗೆ ಸುಮ್ಮನೆ ಕಳುಹಿಸಿರುವುದಾಗಿ ವಾಟ್ಸಪ್‌ ಸಂದೇಶ ಕಳುಹಿಸಿದ್ದಾಳೆ. ಮೃತ ರೇನಾ ಸಹ ತಾನು ನಾಪತ್ತೆಯಾಗುವ ಗಂಟೆಗಳಿಗೂ ಮೊದಲು ತನ್ನ ಸ್ನೇಹಿತನಿಗೆ ʻಇಲ್ಲೇನೋ ಆಗಲಿದೆ ಅಂತಾ ಅನಿಸುತ್ತಿದೆ. ನನಗೆ ಏನಾದ್ರೂ ಸಂಭವಿಸಬಹುದು. ಆದ್ರೆ ನೆನಪಿರಲಿ ನಾನು ನಿನ್ನನ್ನ ತುಂಬಾ ಪ್ರೀತಿಸುತ್ತೇನೆʼ ಅಂತಾ ಸಂದೇಶ ಕಳುಹಿಸಿದ್ದಾಳೆ. ಇದು ಆಕೆಯ ಹತ್ಯೆಯ ನಂತರ ಬೆಳಕಿಗೆ ಬಂದಿದೆ.

    ಅವರನ್ನ ಸಮಾಧಿ ಮಾಡಿ ಹೂತುಹಾಕುವುದಕ್ಕೂ ಮುನ್ನ ಬಾಯಿಗೆ ಬಟ್ಟೆ ತುರುಕಲಾಗಿತ್ತು. ಅವರು ಮೃತಪಟ್ಟ ಸ್ಥಳದಲ್ಲಿ ಅವರ ಬೀಚ್ ಉಡುಪುಗಳು, ಸ್ನಾನದ ಸೂಟ್‌ಗಳು, ಲಘು ಉಡುಪುಗಳು, ಶಾರ್ಟ್ಸ್‌ಗಳನ್ನ ಕ್ವಿನಿಂಡೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಮೂವರ ಮೊಬೈಲ್‌ ಫೋನ್‌ಗಳು ಪೊಲೀಸರಿಗೆ ಲಭ್ಯವಾಗಿದ್ದು, ತನಿಖೆ ಮುಂದುವರಿದಿದೆ.

  • ನಮ್ಮ ಸ್ನಾನದ ವೀಡಿಯೋ ಮಾಡಿದ್ದಾರೆ – ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಠಾಣೆ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

    ನಮ್ಮ ಸ್ನಾನದ ವೀಡಿಯೋ ಮಾಡಿದ್ದಾರೆ – ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಠಾಣೆ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

    ಲಕ್ನೋ: ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದಾಗ ಹಾಸ್ಟೆಲ್ (Hostel) ಸಿಬ್ಬಂದಿ ವೀಡಿಯೋ ಮಾಡಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ (Kanpur) ನಡೆದಿದೆ.

    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯರು (Girl Students) ದೂರು ನೀಡಿದ್ದರು. ಆದರೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

    ಹಾಸ್ಟೆಲ್ ಸಿಬ್ಬಂದಿಯ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋಗಳಿವೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋಗಳು ಹೆಚ್ಚಾಗಿವೆ ಎಂದು ಆರೋಪಿಸಲಾಗಿತ್ತು. ಹಾಸ್ಟೆಲ್ ಕಟ್ಟಡದ ಸ್ಕೈಲೈಟ್‌ನಿಂದ ಉದ್ಯೋಗಿ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಇದನ್ನೂ ಓದಿ: RSSನ ಕೂದಲನ್ನು ಸಹ ಮುಟ್ಟಲು ಸಾಧ್ಯವಿಲ್ಲ – ಸಿದ್ದರಾಮಯ್ಯಗೆ ಬಿ.ವೈ.ರಾಘವೇಂದ್ರ ತಿರುಗೇಟು

    ಈ ಘಟನೆಯು ವಾರಗಳ ಹಿಂದೆ ಚಂಡೀಗಢ ವಿಶ್ವವಿದ್ಯಾಲಯದ (Chandigarh University) ವಿವಾದದ ಬಳಿಕ ನಡೆದಿದೆ. ಚಂಡೀಗಢ ವಿವಿಯ ವಿದ್ಯಾರ್ಥಿನಿಯರ ಹಾಸ್ಟೆಲ್‌ನಿಂದ ವೀಡಿಯೋ ಸೋರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಂದ ಭಾರಿ ಪ್ರತಿಭಟನೆಗಳು ನಡೆದಿದ್ದವು. ಇದನ್ನೂ ಓದಿ: ಪ್ರವೀಣ್ ಪತ್ನಿಗೆ ಗ್ರೂಪ್ ಸಿ ಹುದ್ದೆ- ಸರ್ಕಾರ ಆದೇಶ

    Live Tv
    [brid partner=56869869 player=32851 video=960834 autoplay=true]

  • ತರಗತಿಗೆ ಚಕ್ಕರ್ – ವಿದ್ಯಾರ್ಥಿನಿಯರ ಕೈಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿಸಿ ಶಿಕ್ಷೆ

    ತರಗತಿಗೆ ಚಕ್ಕರ್ – ವಿದ್ಯಾರ್ಥಿನಿಯರ ಕೈಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿಸಿ ಶಿಕ್ಷೆ

    ಗದಗ: ತರಗತಿಗೆ ಚಕ್ಕರ್ ಹಾಕಿದ ವಿದ್ಯಾರ್ಥಿನಿಯರಿಗೆ ಶೌಚಾಲಯ ಶುಚಿಗೊಳಿಸುವ ಶಿಕ್ಷೆ ನೀಡಿದ ಘಟನೆ ಗದಗ ಜಿಲ್ಲೆ ನಾಗಾವಿ ಶಾಲೆಯಲ್ಲಿ ನಡೆದಿದೆ.

    ನಾಗಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿಯ ಆದೇಶದ ಅನ್ವಯ 7ನೇ ತರಗತಿಯ ಐದಾರು ವಿದ್ಯಾರ್ಥಿನಿಯರು ಶೌಚಾಲಯ ಶುಚಿ ಮಾಡಿದ್ದಾರೆ. ಶೌಚಾಲಯ ಸ್ವಚ್ಛಗೊಳಿಸದಿದ್ದರೆ ಟೀಚರ್ ಹೊಡೀತಾರೆ, ಅವರು ಹೇಳಿದ ಮೇಲೆ ಮಾಡಲೇಬೇಕಲ್ವಾ ಎಂದು ಮಕ್ಕಳು ದೂರಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವ ಅಲ್ಲ ಅದು ಸಿದ್ದರಾಮಯ್ಯ ಅವರ ಕೊನೆಗಾಲದ ಉತ್ಸವ: ಲಕ್ಷ್ಮಣ ಸವದಿ ವ್ಯಂಗ್ಯ

    ಇದೇ ರೀತಿ 6 ಮತ್ತು 7ನೇ ತರಗತಿ ಮಕ್ಕಳಿಗೂ ಟಾಯ್ಲೆಟ್ ಸ್ವಚ್ಛಗೊಳಿಸಲು ಶಿಕ್ಷಕಿ ಹೇಳುತ್ತಾರೆ ಎಂದು ಮಕ್ಕಳು ತಿಳಿಸಿದ್ದಾರೆ. ಅಲ್ಲದೇ ಮಕ್ಕಳು ಟಾಯ್ಲೆಟ್ ಕ್ಲೀನ್ ಮಾಡುವ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದ ಅಡುಗೆ ಸಹಾಯಕಿಯ ಮೇಲೆ ಶಿಕ್ಷಕರು ಮತ್ತು ಅಧಿಕಾರಿಗಳು ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪ್ರೇಯಸಿ ಕತ್ತು ಹಿಸುಕಿ ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡ ಭಗ್ನ ಪ್ರೇಮಿ

    Live Tv
    [brid partner=56869869 player=32851 video=960834 autoplay=true]

  • ಪ್ರಾಂಶುಪಾಲ, ಶಿಕ್ಷಕರು ಸೇರಿ 9 ಮಂದಿಯಿಂದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ರೇಪ್

    ಪ್ರಾಂಶುಪಾಲ, ಶಿಕ್ಷಕರು ಸೇರಿ 9 ಮಂದಿಯಿಂದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ರೇಪ್

    ಜೈಪುರ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರು ಹಾಗೂ ಒಂಬತ್ತು ಶಿಕ್ಷಕರು ಕಿರುಕುಳ ನೀಡಿ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ತಂದೆ ಶಾಲೆಗೆ ಹೊಗದ ಕಾರಣವನ್ನು ವಿಚಾರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ 10ನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಒಂದು ವರ್ಷದಿಂದ ಆಕೆಯ ಮೇಲೆ ಪ್ರಾಂಶುಪಾಲರು ಹಾಗೂ ಶಿಕ್ಷಕರು ಸಾಮೂಹಿಕ ಅತ್ಯಾಚಾರವೆಸಗುತ್ತಿದ್ದಾರೆ. ಜೊತೆಗೆ ಇಬ್ಬರು ಮಹಿಳಾ ಶಿಕ್ಷಕರು ಘಟನೆಯ ವೀಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.

    ಈ ಬಗ್ಗೆ ಪೊಲೀಸರಿಗೆ ಸಂತ್ರಸ್ತೆಯ ತಂದೆ ದೂರು ನೀಡಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಿದ ಸಂದರ್ಭದಲ್ಲಿ ಇನ್ನೂ ಮೂವರು ವಿದ್ಯಾರ್ಥಿನಿಗಳು ಅತ್ಯಾಚಾರಕ್ಕೆ ಒಳಗಾಗಿರುವುದು ತಿಳಿದುಬಂದಿದೆ. ಇವರು 6ನೇ ತರಗತಿ, 4ನೇ ತರಗತಿ ಮತ್ತು 3ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಗಳಾಗಿದ್ದಾರೆ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಸಂತ್ರಸ್ತರು ತಿಳಿಸಿದ್ದಾರೆ. ಇದನ್ನೂ ಓದಿ: ಖ್ಯಾತ ಫೋಟೋಗ್ರಾಫರ್ ತೆಗೆದಿರುವ ಸೂರ್ಯನ ಒಂದು ಫೋಟೋಗೆ 3766ರೂ.!

    ಮಹಿಳಾ ಶಿಕ್ಷಕರಿಗೆ ಈ ವಿಷಯವನ್ನು ತಿಳಿಸಿದಾಗ ಅವರು ಶಾಲಾ ಶುಲ್ಕ ಹಾಗೂ ಪುಸ್ತಕಗಳ ಹಣವನ್ನು ಪಾವತಿಸುವುದಾಗಿ ಆಮಿಷ ನೀಡಿದ್ದರು. ಜೊತೆಗೆ ದೂರು ನೀಡದಂತೆಯೂ ತಿಳಿಸಿದ್ದರು ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.

    RAPE CASE

    ಮೂವರು ಶಿಕ್ಷಕರು ಹಾಗೂ ಪ್ರಿನ್ಸಿಪಾಲ್‌ರು ಹಲವಾರು ಬಾರಿ ಸಂತ್ರಸ್ತರನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಅವರು ಮದ್ಯ ಸೇವಿಸಿ ಅತ್ಯಾಚಾರವನ್ನು ಎಸಗಿದ್ದಾರೆ ಎಂದು ವಿಚಾರಣೆ ವೇಳೆ ಸಂತ್ರಸ್ತೆ ತಿಳಿಸಿದ್ದಾರೆ. ಈ ಬಗ್ಗೆ ದೂರು ನೀಡಲು ಹೋದಾಗ ಪ್ರಾಂಶುಪಾಲರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ತಂದೆ ತಿಳಿಸಿದ್ದಾರೆ. ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ ಪ್ರಾಂಶುಪಾಲರು, ಅಂತಹ ಯಾವುದೇ ಪ್ರಕರಣದ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

    ಅಲ್ವಾರ್‌ನ ಸರ್ಕಾರಿ ಶಾಲೆಯ ನಾಲ್ವರು ವಿದ್ಯಾರ್ಥಿನಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಶಾಲೆಯ ಪ್ರಾಂಶುಪಾಲರು ಮತ್ತು ಒಂಬತ್ತು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಮ್ಮ ದೂರಿನಲ್ಲಿ, ಸಂತ್ರಸ್ತರು ಶಿಕ್ಷಕರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಮಾಡಿದ್ದಾರೆ. ಮಂಧಾನ ಪೊಲೀಸ್ ಠಾಣಾಧಿಕಾರಿ ಮುಖೇಶ್ ಯಾದವ್ ಮಾತನಾಡಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಮೂರು ವಿಭಿನ್ನ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಪೊಲೀಸರು ಪ್ರಕರಣದ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವೀಡಿಯೋ: ಆರತಿ ಬೆಳಗಿ ಮುದ್ದಿನ ಶ್ವಾನದ ಹುಟ್ಟುಹಬ್ಬ ಆಚರಿಸಿದ ಸುಧಾಮೂರ್ತಿ!

  • ಒಂದೇ ಬಣ್ಣದ ಒಳಉಡುಪು ಧರಿಸುವಂತೆ ವಿದ್ಯಾರ್ಥಿನಿಯರಿಗೆ ಶಾಲೆಯ ನ್ಯೂ ರೂಲ್ಸ್

    ಒಂದೇ ಬಣ್ಣದ ಒಳಉಡುಪು ಧರಿಸುವಂತೆ ವಿದ್ಯಾರ್ಥಿನಿಯರಿಗೆ ಶಾಲೆಯ ನ್ಯೂ ರೂಲ್ಸ್

    ಮುಂಬೈ: ಪುಣೆಯ ಪ್ರತಿಷ್ಠಿತ ಶಾಲೆಯೊಂದು ವಿದ್ಯಾರ್ಥಿನಿಯರಿಗೆ ಒಂದೇ ರೀತಿಯ ಬಣ್ಣದ ಒಳಉಡುಪು ಧರಿಸಬೇಕೆಂದು ಹೊಸ ವಸ್ತ್ರ ನಿಯಮವನ್ನು ಜಾರಿ ಮಾಡಿದೆ.

    ಪುಣೆಯ ಮಯೀರ್ ಎಂಐಟಿಯ ಶಾಲೆ ಈ ರೀತಿ ಹೊಸ ನಿಯಮವನ್ನು ಮಾಡಿದೆ. ವಿದ್ಯಾರ್ಥಿನಿಯರು ಬಿಳಿ ಬಣ್ಣದ ಅಥವಾ ಚರ್ಮದ ಬಣ್ಣದ ಒಳ ಉಡುಪುಗಳನ್ನು ಶಾಲೆಗೆ ಧರಿಸಿಕೊಂಡು ಬರಬೇಕು ಎಂದು ಆದೇಶ ಹೊರಡಿಸಿದೆ. ಜೊತೆಗೆ ಶಾಲಾ ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡುವ ಸಲುವಾಗಿ ಈ ಹೊಸ ನಿಯಮವನ್ನು ಮಾಡಲಾಗಿದೆ ಎಂದು ಶಾಲೆ ತಿಳಿಸಿದೆ.

    ಶಾಲೆ ಈ ನಿಯಮದ ಬಗ್ಗೆ ವಿದ್ಯಾರ್ಥಿನಿಯರ ದಿನಚರಿ ಡೈರಿಯಲ್ಲಿ ಬರೆದು ಪೋಷಕರ ಬಳಿ ಸಹಿ ಮಾಡಿಸಿಕೊಂಡು ಬರುವಂತೆ ತಿಳಿಸಿದೆ. ಬಳಿಕ ಶಾಲೆಯ ಈ ಹೊಸ ನಿಯಮದ ವಿರುದ್ಧ ಆಕ್ರೋಶಗೊಂಡು ವಿದ್ಯಾರ್ಥಿಗಳ ಪೋಷಕರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

    ಅಷ್ಟೇ ಅಲ್ಲದೇ ಈ ಶಾಲೆಯಲ್ಲಿ ವಿದ್ಯಾರ್ಥಿಗಳು ಅನೇಕ ಸಲ ಟಾಯ್ಲೆಟ್ ಬಳಸಲು ಸಹ ಅನುಮತಿಸುವುದಿಲ್ಲ. ಅವರು ಧರಿಸಬೇಕಾದ ಸ್ಕರ್ಟ್ ನ ಉದ್ದವನ್ನೂ ಶಾಲೆ ಅವರೇ ಉಲ್ಲೇಖಿಸಿದ್ದಾರೆ. ಈ ಹೊಸ ನಿಯಮಕ್ಕೆ ನಮ್ಮ ಬಳಿ ಸಹಿ ಹಾಕಿಸಿಕೊಂಡು ಬನ್ನಿ ಎಂದು ಹೇಳುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ.

    ಶಾಲೆ ಮಾಡಿದ ನಿಯಮವನ್ನು ಉಲ್ಲಂಘಿಸಿದರೆ ವಿದ್ಯಾರ್ಥಿನಿಯರು ಮತ್ತು ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಈ ನಿಯಮದಿಂದ ಪೋಷಕರಿಗೆ ಮತ್ತು ವಿದ್ಯಾಥಿಗಳಿಗೆ ತೊಂದರೆ ಆಗುವುದಿಲ್ಲ. ಶಾಲೆಯ ಈ ನಿಯಮ ಒಳ್ಳೆಯದಾಗಿದೆ ಎಂದು ಎಂಐಟಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಸುಚಿತ್ರ ಕರದ್ ನಗರೆ ಹೇಳಿದ್ದಾರೆ.

    ನಾವು ಈ ಹಿಂದೆ ಕೆಲವು ಅನುಭವಗಳನ್ನು ಹೊಂದಿದ್ದೇವೆ. ಆದ್ದರಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಇದರಿಂದ ನಾವು ಯಾವುದೇ ರಹಸ್ಯ ಕಾರ್ಯಸೂಚಿಯನ್ನು ಹೊಂದಿಲ್ಲ. ಇದು ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಠಿಯಿಂದ ಮಾಡಲಾಗಿದೆ ಎಂದು ತಮ್ಮ ಹೊಸ ನಿಯಮವನ್ನು ಸಮರ್ಥಿಸಿಕೊಂಡಿದ್ದಾರೆ.