Tag: girls hostel

  • ಬಾಲಕಿಯರ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ – ವಾರ್ಡನ್‌ಗೆ ನೋಟಿಸ್ ಜಾರಿ ಮಾಡಲು ಜಿಪಂ ಸಿಇಓ ಸೂಚನೆ

    ಬಾಲಕಿಯರ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ – ವಾರ್ಡನ್‌ಗೆ ನೋಟಿಸ್ ಜಾರಿ ಮಾಡಲು ಜಿಪಂ ಸಿಇಓ ಸೂಚನೆ

    – ಅವ್ಯವಸ್ಥೆ ಸರಿಪಡಿಸಲು ಒಂದು ವಾರ ಗಡುವು

    ಮಂಡ್ಯ: ಇಲ್ಲಿನ ಜಿಪಂ ಸಿಒಓ ಕೆ.ಆರ್ ನಂದಿನಿ ಅವರು ಮದ್ದೂರು ತಾಲ್ಲೂಕಿನ ಅಣ್ಣೂರು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ (Hostel) ಶುಕ್ರವಾರ ದಿಢೀರ್ ಭೇಟಿ ನೀಡಿದ್ದಾರೆ. ವಿದ್ಯಾರ್ಥಿನಿಲಯದಲ್ಲಿ ಅವ್ಯವಸ್ಥೆಗಳನ್ನು ಪರಿಶೀಲಿಸಿ ವಾರ್ಡನ್‌ಗೆ ನೋಟಿಸ್ ಜಾರಿ ಮಾಡುವಂತೆ ಮದ್ದೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

    ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೇ ವಿದ್ಯಾಭ್ಯಾಸ ನಡೆಸಬೇಕು ಎಂದು ಸರ್ಕಾರ ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ನಿಲಯಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಸೌಲಭ್ಯ ನೀಡದೇ ಇದ್ದರೆ ಅವರ ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಯೋಜಿಸಿದ್ದಾರೆ. ಇದನ್ನೂ ಓದಿ: 2ನೇ ಗಂಡನೊಂದಿಗೆ ನಂಟು -3ನೇ ಗಂಡನಿಂದ ಪತ್ನಿ ಸೇರಿ ನಾಲ್ವರ ಬಾಳಿಗೆ ಕತ್ತಿಯೇಟು

    ಅಣ್ಣೂರು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ನೀಡುವ ಆಹಾರ ಶುಚಿ ಹಾಗೂ ರುಚಿಕರವಾಗಿರುವುದಿಲ್ಲ. ಅವರಿಗೆ ನಿದ್ರೆ ಮಾಡಲು ಹಾಸಿಗೆ ವ್ಯವಸ್ಥೆ ಇರುವುದಿಲ್ಲ. ಸ್ನಾನದ ಕೊಠಡಿಗಳು ಅಶುಚಿತ್ವದಿಂದ ಕೂಡಿರುತ್ತವೆ. ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ವಿಸರ್ಜಿಸಲು ನೀಡಿರುವ ಇನ್ಸಿನೇಟರ್ ಯಂತ್ರ ದುರಸ್ತಿಯಲ್ಲಿರುತ್ತದೆ. ಸ್ನಾನ ಮಾಡಲು ಸರಿಯಾದ ಸಮಯಕ್ಕೆ ನೀರಿನ ವ್ಯವಸ್ಥೆ ಇಲ್ಲದಿರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದ ಸಿಇಒ ಅವರು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಿಗೆ ತಕ್ಷಣ ಎಲ್ಲಾ ಅವ್ಯವಸ್ಥೆಗಳನ್ನು 7 ದಿನದೊಳಗಾಗಿ ಸರಿಪಡಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಕೆಲವೇ ದಿನಗಳಲ್ಲಿ ಪುನಃ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಲಿದ್ದು, ಇಂತಹ ಅವ್ಯವಸ್ಥೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಲಿಂಗಾಯತರು ಯಡಿಯೂರಪ್ಪ ಜೊತೆಗಿಲ್ಲ, ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡ್ತಿದ್ದಾರೆ – ಯತ್ನಾಳ್‌

    ಎಲ್ಲ ವಿದ್ಯಾರ್ಥಿನಿಲಯಗಳಲ್ಲಿ ಸಹಾಯವಾಣಿ:
    ಸಮಾಜ ಕಲ್ಯಾಣ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಸಹಾಯವಾಣಿ ಸಂಖ್ಯೆಯನ್ನು ಅನಾವರಣಗೊಳಿಸಲಾಗುವುದು. ವಿದ್ಯಾರ್ಥಿಗಳು ಯಾವುದಾದರೂ ವ್ಯವಸ್ಥೆಯಲ್ಲಿ ತೊಂದರೆಯಿದ್ದಲ್ಲಿ ಕರೆ ಮಾಡಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್ – ಪ್ರಭಾವಿಯನ್ನ ನೀವೇ ಹುಡುಕಿ, ನಿಮಗೆ ಸಿಕ್ಕೇ ಸಿಕ್ತಾರೆ: ಸತೀಶ್‌ ಜಾರಕಿಹೊಳಿ

    ಅಣ್ಣೂರು ಗ್ರಾಮದಲ್ಲಿ ಅಂಗನವಾಡಿಗೆ ಭೇಟಿ ನೀಡಿ ಅಂಗನವಾಡಿಗಳು ಹೈಟೆಕ್ ರೂಪದಲ್ಲಿ ಮಕ್ಕಳು ಹಾಗೂ ಪೋಷಕರನ್ನು ಆಕರ್ಷಿಸುವ ರೀತಿ ಇರಬೇಕು. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಮಕ್ಕಳ ಉತ್ತಮ ಬೆಳವಣಿಗೆಯ ಬಗ್ಗೆ ಸದಾ ನಿಗಾ ವಹಿಸಬೇಕು. ಭಾರತೀನಗರದ ಮಣಿಗೆರೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಬೂದು ನೀರು ತ್ಯಜ್ಯ ನಿರ್ವಹಣೆಯನ್ನು ಪರಿಶೀಲಿಸಿ, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ಇದನ್ನೂ ಓದಿ: 1ನೇ ತರಗತಿಗೆ ವಯೋಮಿತಿ ಗೊಂದಲ – ಪರಿಹಾರ ಕೇಳಲು ಬಂದ ಪೋಷಕರ ವಿರುದ್ಧ ಮಧು ಬಂಗಾರಪ್ಪ ಗರಂ!

    ಮನರೇಗಾ ಯೋಜನೆಯಡಿ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಗ್ರಾಮೀಣ ಭಾಗದ ಜನರಿಗೆ ವರದಾನವಾಗಿರುವ ಮನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅಧಿಕಾರಿಗಳು ಅನುಷ್ಠಾನ ಮಾಡಬೇಕು.

    ಯಾರೂ ಕೂಡ ವಲಸೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ದು ವಿಜಯೇಂದ್ರ & ಡಿಕೆಶಿ, ಹನಿಟ್ರ್ಯಾಪ್‌ ಕೇಸ್‌ನಲ್ಲೂ ಇದೇ ಟೀಂ ಇದೆ – ಯತ್ನಾಳ್‌ ಬಾಂಬ್‌

  • ಸ್ನೇಹಿತೆಯನ್ನ ಭೇಟಿಯಾಗಲು ಬುರ್ಖಾ ಧರಿಸಿ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ನುಗ್ಗಿದ ಯುವಕ

    ಸ್ನೇಹಿತೆಯನ್ನ ಭೇಟಿಯಾಗಲು ಬುರ್ಖಾ ಧರಿಸಿ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ನುಗ್ಗಿದ ಯುವಕ

    – ಯುವಕನಿಗೆ ಉಳಿದುಕೊಳ್ಳಲು ಸ್ಥಳವಿಲ್ಲದ ಕಾರಣ ಸ್ನೇಹಿತೆಯಿಂದ ಹಾಸ್ಟೆಲ್‌ನಲ್ಲಿ ವ್ಯವಸ್ಥೆ
    – ಬೆಂಗಳೂರಿನ ಜ್ಞಾನಭಾರತಿ ಹಾಸ್ಟೆಲ್‌ನಲ್ಲಿ ಘಟನೆ

    ಬೆಂಗಳೂರು: ಯುವಕನೋರ್ವ ಸ್ನೇಹಿತೆಯನ್ನು ಭೇಟಿಯಾಗಲು ಬುರ್ಖಾ ಧರಿಸಿ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿರುವ ಘಟನೆ ಬೆಂಗಳೂರಿನ (Bengaluru) ಜ್ಞಾನಭಾರತಿ ಕಾಲೇಜು (Gnana Bhrathi College) ಆವರಣದಲ್ಲಿ ನಡೆದಿದೆ.

    ಜ್ಞಾನಭಾರತಿ ಕಾಲೇಜಿನ ರಮಾಬಾಯಿ ಹಾಸ್ಟೆಲ್‌ಗೆ ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಯುವಕ ಬುರ್ಖಾ ಧರಿಸಿ ಪ್ರವೇಶಿಸಿದ್ದ. ಬುರ್ಖಾ ಧರಿಸಿದ ಯುವಕನನ್ನ ಮಾಲೂರು (Malur) ಮೂಲದವನು ಎನ್ನಲಾಗಿದೆ. ಯುವಕನ್ನು ಕಂಡ ವಿದ್ಯಾರ್ಥಿನಿಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಎರಡನೇ ಬಾರಿ ಹೋಗಿ ರಾಜಣ್ಣ ಕೈಗೆ ಸಿಕ್ಕಿ ಬಿದ್ದ ಹನಿಟ್ರ್ಯಾಪ್‌ ಅಸಾಮಿಗಳು!

    ಸ್ಥಳಕ್ಕಾಗಮಿಸಿದ ಜ್ಞಾನಭಾರತಿ ಠಾಣೆಯ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದರು. ವಿದ್ಯಾರ್ಥಿನಿಯರಿರುವ ಹಾಸ್ಟೆಲ್‌ಗೆ ನುಗ್ಗಿರುವ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದಾಗ ಸ್ನೇಹಿತೆಯಿಂದಲೇ ಬಟ್ಟೆ ತೆಗೆದುಕೊಂಡು ಹಾಸ್ಟೆಲ್‌ಗೆ ನುಗ್ಗಿದ್ದ ಯುವಕನಿಗೆ ಉಳಿದುಕೊಳ್ಳಲು ಸ್ಥಳವಿಲ್ಲದ ಕಾರಣ ಆಕೆಯೇ ಹಾಸ್ಟೆಲ್‌ನಲ್ಲಿ ವ್ಯವಸ್ಥೆ ಮಾಡಿರುವುದು ತಿಳಿದುಬಂದಿದೆ. ಇದನ್ನೂ ಓದಿ: `ಮಂಡ್ಯದ ಗಂಡು’ ಸಿನಿಮಾ ನಿರ್ದೇಶಕ, ಬರಹಗಾರ ಎಟಿ ರಘು ನಿಧನ

    ಮುಂಜಾಗ್ರತ ಕ್ರಮವಾಗಿ ಹುಡುಗಿಯರ ಹಾಸ್ಟೆಲ್‌ಗೆ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ (Gnana Bharathi Police Station) ಪ್ರಕರಣ ದಾಖಲಾಗಿದೆ.

  • ಫ್ರೀ ಬಸ್‌ ಹತ್ತಿ 33 ಗಂಟೆ ಸುತ್ತಾಟ – ಹಿಡಿದು ಪೋಷಕರಿಗೊಪ್ಪಿಸಿದ ಪೊಲೀಸರು!

    ಫ್ರೀ ಬಸ್‌ ಹತ್ತಿ 33 ಗಂಟೆ ಸುತ್ತಾಟ – ಹಿಡಿದು ಪೋಷಕರಿಗೊಪ್ಪಿಸಿದ ಪೊಲೀಸರು!

    ಹೈದರಾಬಾದ್‌: ಹಾಸ್ಟೆಲ್‌ಗೆ (Hostel) ಹೋಗುವುದನ್ನು ತಪ್ಪಿಸಿಕೊಳ್ಳುವುದಕ್ಕಾಗಿ 12 ವರ್ಷದ ಬಾಲಕಿಯೊಬ್ಬಳು ಉಚಿತ ಬಸ್ ಸೇವೆ ಬಳಸಿಕೊಂಡು 33 ಗಂಟೆಗಳ ಕಾಲ ಪ್ರಯಾಣ ಮಾಡಿದ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ.

    ಬಾಲಕಿ ತಪ್ಪಿಸಿಕೊಂಡಿರುವುದಾಗಿ ನೀಡಲಾದ ದೂರನ್ನು ಆಧರಿಸಿ ತನಿಖೆ ಆರಂಭಿಸಿದ್ದ ಪೊಲೀಸರು (Police) ಬಾಲಕಿಯನ್ನು ಹೈದರಾಬಾದ್‌ನ (Hyderabad) ಜ್ಯೂಬಿಲಿ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಭಗವಂತ ಶಿವನ ಚಿತ್ರ ಬಳಸಿ ಅಪಮಾನ – ಕಾಂಗ್ರೆಸ್‌ನಿಂದ ದೂರು

    ಅಷ್ಟಕ್ಕೂ ನಡೆದಿದ್ದೇನು?
    ವಿದ್ಯಾರಣ್ಯಪುರಿಯ ನಿವಾಸಿಯಾದ ಬಾಲಕಿ ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿದ್ದುಕೊಂಡು 8ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಕ್ರಿಸ್ಮಸ್ ರಜೆಗಾಗಿ ಪೆದ್ದಪಳ್ಳಿಯಲ್ಲಿರುವ ತಾತನ ಮನೆಗೆ ತೆರಳಿದ್ದಳು. ರಜೆ ಮುಗಿದ ಬಳಿಕ ತಾತನ ಮನೆಯಿಂದ ಹೊರಟ ಬಾಲಕಿ ಹಾಸ್ಟೆಲ್‌ಗೆ ಹೋಗಲು ಇಷ್ಟವಿಲ್ಲದೇ ಒಂದಾದ ಮೇಲೋಂದು ಬಸ್ ಬದಲಾಯಿಸುತ್ತಾ ಸುಮಾರು 33 ಗಂಟೆ ಪ್ರಯಾಣ ಮಾಡಿದ್ದಾಳೆ.

    ಬಸ್ ಹತ್ತಿಸಿದ ಬಳಿಕ ಬಾಲಕಿ ಊರು ತಲುಪಿಲ್ಲ, ಹಾಸ್ಟೆಲ್‌ಗೂ ಸೇರಿಲ್ಲ ಎಂಬುದನ್ನ ತಿಳದು ಆತಂಕಗೊಂಡ ಆಕೆಯ ತಾತ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಸತತ ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆ ಮಾಡಿ ಪೋಷಕರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಕಚೇರಿಗೆ ಹೋಗದಂತೆ ತಡೆ; ಕರ್ತವ್ಯ ಪಥದಲ್ಲೇ ಖೇಲ್‌ ರತ್ನ, ಅರ್ಜುನ ಪ್ರಶಸ್ತಿ ಬಿಟ್ಟು ಹೋದ ಕುಸ್ತಿಪಟು

  • ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ರೆಕಾರ್ಡ್ ಮಾಡಿದ್ದವ ಅರೆಸ್ಟ್

    ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ರೆಕಾರ್ಡ್ ಮಾಡಿದ್ದವ ಅರೆಸ್ಟ್

    ಜೈಪುರ: ಬಾಲಕಿಯರ ಹಾಸ್ಟೆಲ್‍ನಲ್ಲಿ ತಂಗಿದ್ದ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ವೀಡಿಯೋ ಮಾಡಿದ್ದಾನೆ ಎಂದು ಆರೋಪಿಸಿದ ಹಿನ್ನೆಲೆ ಕಾನ್ಪುರ ಪೊಲೀಸರು (Kanpur Police) ಕಸ ಗುಡಿಸುವವನನ್ನು (Sweeper) ಬಂಧಿಸಿದ್ದಾರೆ.

    ಸಾಯಿ ನಿವಾಸ್ ಬಾಲಕಿಯರ ಹಾಸ್ಟೆಲ್‍ನಲ್ಲಿ (Sai Niwas Girls Hostel) ಉಳಿದುಕೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಕಸ ಗುಡಿಸುವ ಸಿಬ್ಬಂದಿ ತಾನು ಸ್ನಾನ ಮಾಡುತ್ತಿರುವಾಗ ವೀಡಿಯೋ ಮಾಡಿದ್ದಾನೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಮೊದಲಿಗೆ ಪೊಲೀಸರು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಇತರ ಹುಡುಗಿಯರು ತಾವು ಸ್ನಾನ ಮಾಡುತ್ತಿದ್ದ ವೀಡಿಯೋವನ್ನು ಆರೋಪಿ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಿದ ನಂತರ ಈ ವಿಚಾರವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.

    POLICE JEEP

    ಇದೀಗ ಆರೋಪಿಯ ಬಳಿ ಇದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗಿದೆ ಎಂದು ಕಲ್ಯಾಣಪುರದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಡಿಕೆ ಶುಕ್ಲಾ ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಸ್ನಾನದ ವೀಡಿಯೋ ಮಾಡಿದ್ದಾರೆ – ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಠಾಣೆ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

    ಹಾಸ್ಟೆಲ್ ಸಿಬ್ಬಂದಿಯ ಮೊಬೈಲ್‍ನಲ್ಲಿ ಅಶ್ಲೀಲ ವೀಡಿಯೋಗಳಿವೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋಗಳು ಹೆಚ್ಚಾಗಿವೆ ಎಂದು ಆರೋಪಿಸಲಾಗಿತ್ತು. ಹಾಸ್ಟೆಲ್ ಕಟ್ಟಡದ ಸ್ಕೈಲೈಟ್‍ನಿಂದ ಉದ್ಯೋಗಿ ವೀಡಿಯೊಗಳನ್ನು ಚಿತ್ರೀಕರಿಸಿದ್ದಾನೆ. ಸುಮಾರು 8 ವರ್ಷಗಳಿಂದ ಆರೋಪಿ ಈ ಕೆಲಸ ಮಾಡಿಕೊಂಡು ಬಂದಿದ್ದಾನೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

    ವಿಚಾರಣೆ ವೇಳೆ ಆರೋಪಿ ಸುಮಾರು 8 ವರ್ಷಗಳಿಂದ ಹಾಸ್ಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿಸಿದ್ದು, ಇದೀಗ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಮತ್ತು ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಪಡಿತರ ಚೀಟಿ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ಆಹಾರ ಇಲಾಖೆ

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಪ್ರಕರಣ – ಬಾಯ್‌ಫ್ರೆಂಡ್‌ಗೆ ಹೆದರಿ ವೀಡಿಯೋ ಮಾಡಿದ್ಲು ಸಹಪಾಠಿ

    ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಪ್ರಕರಣ – ಬಾಯ್‌ಫ್ರೆಂಡ್‌ಗೆ ಹೆದರಿ ವೀಡಿಯೋ ಮಾಡಿದ್ಲು ಸಹಪಾಠಿ

    ಚಂಡೀಗಢ: ಮೊಹಾಲಿಯಲ್ಲಿರುವ ಚಂಡೀಗಢ ವಿವಿಯ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಲೀಕ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸಹ ವಿದ್ಯಾರ್ಥಿನಿಯ ಬಾಯ್‌ಫ್ರೆಂಡ್ ಬೆದರಿಕೆ ಹಾಕಿದ್ದರಿಂದಲೇ ಇತರ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಸೆರೆ ಹಿಡಿದು ಹಂಚಿಕೊಂಡಿದ್ದಾಳೆ ಎಂಬ ಸಂಗತಿ ತನಿಖೆ ವೇಳೆ ಬಯಲಾಗಿದೆ.

    ಆರೋಪಿಗಳಾದ ಸನ್ನಿ ಮೆಹ್ತಾ ಮತ್ತು ಆತನ ಸ್ನೇಹಿತ ರಂಕಜ್ ವರ್ಮಾ, ಹಾಸ್ಟೆಲ್‌ನ ಸಾಮಾನ್ಯ ಶೌಚಗೃಹದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರ ಬೆತ್ತಲೆ ದೃಶ್ಯಗಳನ್ನು ಚಿತ್ರೀಕರಿಸಿ, ಹಂಚಿಕೊಳ್ಳದಿದ್ದರೇ ನಿನ್ನ ಖಾಸಗಿ ವೀಡಿಯೋಗಳನ್ನ ವೈರಲ್ ಮಾಡುವುದಾಗಿ ಆರೋಪಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದರು. ಆದ್ದರಿಂದಲೇ ಸಹ ವಿದ್ಯಾರ್ಥಿನಿ ಇತರರ ಖಾಸಗಿ ವೀಡಿಯೋಗಳನ್ನ ಸೆರೆ ಹಿಡಿದು ಹಂಚಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್‌ ಕೇಸ್‌ – ಹುಡುಗಿಯ ಬಾಯ್‌ಫ್ರೆಂಡ್‌ ಸಹ ಅರೆಸ್ಟ್‌

    ಈ ಪ್ರಕರಣದಲ್ಲಿ ಪಂಜಾಬ್ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಮೂವರಲ್ಲಿ 23 ವರ್ಷದ ಆರೋಪಿಯೊಬ್ಬ ಬಂಧಿತ ವಿದ್ಯಾರ್ಥಿನಿಯ ಬಾಯ್‌ಫ್ರೆಂಡ್ ಎಂದು ತಿಳಿದುಬಂದಿದೆ. 31 ವರ್ಷದ ಇನ್ನೊಬ್ಬ ಆರೋಪಿ ಆತನ ಸ್ನೇಹಿತನಾಗಿದ್ದಾನೆ.

    ಏನಿದು ಘಟನೆ? 
    ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋವನ್ನು ಸಹ ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ಸೋರಿಕೆಯಾದ ಬೆನ್ನಲ್ಲೇ ಭಾರೀ ಪ್ರತಿಭಟನೆ ಭುಗಿಲೆದ್ದಿದ್ದು, ಈ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ

    ವ್ಯಾಪಕ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಚಂಗೀಗಢ ವಿಶ್ವವಿದ್ಯಾಲಯವನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗಿದೆ. ಆದರೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದ್ಯಾರ್ಥಿನಿಯರು ಭಯಭೀತರಾಗಿದ್ದು, ಹಾಸ್ಟೆಲ್ ತೊರೆದು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇನ್ನು ಇರುವ ವಿದ್ಯಾರ್ಥಿನಿಯರಂತು ಸ್ನಾನದ ಕೊಠಡಿಗಳನ್ನು ಬಳಸೋದಕ್ಕೆ ಹೆದರುತ್ತಿದ್ದಾರೆ. ಈ ಬೆನ್ನಲ್ಲೇ ತನಿಖೆಗೆ ವಿಶೇಷ ತಂಡ ನಿಯೋಜನೆ ಮಾಡುವುದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ನಾನದ ವೀಡಿಯೋ ಲೀಕ್ – ವಾಶ್ ರೂಂ ಅಂದ್ರೆನೇ ಬೆಚ್ಚಿ ಬೀಳ್ತಿದ್ದಾರೆ ವಿದ್ಯಾರ್ಥಿನಿಯರು

    ಸ್ನಾನದ ವೀಡಿಯೋ ಲೀಕ್ – ವಾಶ್ ರೂಂ ಅಂದ್ರೆನೇ ಬೆಚ್ಚಿ ಬೀಳ್ತಿದ್ದಾರೆ ವಿದ್ಯಾರ್ಥಿನಿಯರು

    ಚಂಡೀಗಢ: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ (Chandigarh University) ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ (Private Video) ಲೀಕ್ ಪ್ರಕರಣ ಬೆಳಕಿಗೆ ಬಂದ ಬಳಿಕ ವಿದ್ಯಾರ್ಥಿನಿಯರು ಹಾಸ್ಟೆಲ್‌ನಲ್ಲಿ (Hostel Toilet) ವಾಶ್ ರೂಂ ಬಳಸೋದಕ್ಕೂ ಹೆದರುತ್ತಿದ್ದಾರೆ.

    ಹಾಸ್ಟೆಲ್ ವಿದ್ಯಾರ್ಥಿನಿಯರ (Hostel Students) ಸ್ನಾನದ ವೀಡಿಯೋ ಲೀಕ್ ಪ್ರಕರಣವು ವ್ಯಾಪಕ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಚಂಗೀಗಢ ವಿಶ್ವವಿದ್ಯಾಲಯವನ್ನು 5 ದಿನ ಬಂದ್ ಮಾಡಲಾಗಿದೆ. ಸೆ.24ರವರೆಗೆ ವಿವಿಯನ್ನು ಬಂದ್ ಮಾಡಲಾಗಿದೆ. ಆದರೆ ಪ್ರಕರಣ ಬೆಳಕಿಗೆ ಬಂದಾಗಿನಿಂದ ವಿದ್ಯಾರ್ಥಿನಿಯರು ಭಯಭೀತರಾಗಿದ್ದು, ಹಾಸ್ಟೆಲ್ ತೊರೆದು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇನ್ನು ಇರುವ ವಿದ್ಯಾರ್ಥಿನಿಯರಂತು ಸ್ನಾನದ ಕೊಠಡಿಗಳನ್ನು ಬಳಸೋದಕ್ಕೆ ಹೆದರುತ್ತಿದ್ದಾರೆ.

    ನಿನ್ನೆ ರಾತ್ರಿಯಷ್ಟೇ ವೀಡಿಯೋ ಲೀಕ್ ಮಾಡಿದ ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆದು, ಆಕೆಯಿಂದ ವೀಡಿಯೋ ಕಳಿಸಿಕೊಂಡಿದ್ದ ಬಾಯ್‌ಫ್ರೆಂಡ್‌ನನ್ನು ಬಂಧಿಸಲಾಗಿದೆ. ಆದರೂ ವಿದ್ಯಾರ್ಥಿಗಳ ಆಕ್ರೋಶ ಕಡಿಮೆಯಾಗಿಲ್ಲ. ವೀಡಿಯೋ ಲೀಕ್ ಆದಾಗಿನಿಂದಲೂ ವಿದ್ಯಾರ್ಥಿನಿಯರು ವಾಶ್‌ರೂಂ ಗಳಲ್ಲಿ ಸ್ನಾನ ಮಾಡಲು ಹೆದರುತ್ತಿದ್ದಾರೆ. ಹಾಗಾಗಿ ಪೊಲೀಸರು (Police) ಹಾಸ್ಟೆಲ್‌ನಲ್ಲಿ ಹಿಡನ್ ಕ್ಯಾಮೆರಾಗಳಿವೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಸ್ನಾನದ ವೀಡಿಯೋ ಲೀಕ್‌ ಬೆನ್ನಲ್ಲೇ ಹಾಸ್ಟೆಲ್‌ ತೊರೆಯುತ್ತಿರುವ ವಿದ್ಯಾರ್ಥಿನಿಯರು – 5 ದಿನ ವಿವಿ ಬಂದ್‌

    ಇದೇ ವೇಳೆ ವಿದ್ಯಾರ್ಥಿನಿಯೋರ್ವಳು ಮಾತನಾಡಿ, ನಾನು ಡೇ ಸ್ಕಾಲರ್, ಖಂಡಿತವಾಗಿಯೂ ಇಲ್ಲಿನ ವಿದ್ಯಾರ್ಥಿಗಳಿಗೆ ಭಯವಿದೆ. ವಿವಿ ಆಡಳಿತ ಮಂಡಳಿ ಪೊಲೀಸರಿಗೆ ಲಂಚ ನೀಡಿದೆ. ಆದ್ದರಿಂದ ಪೊಲೀಸರು ವಿದ್ಯಾರ್ಥಿನಿಯರಿಗೆ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್‌ ಕೇಸ್‌ – ಹುಡುಗಿಯ ಬಾಯ್‌ಫ್ರೆಂಡ್‌ ಸಹ ಅರೆಸ್ಟ್‌

    ಪ್ರಕರಣ ಕುರಿತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagawant mann) ತನಿಖೆಗೆ ಆದೇಶಿಸಿದ್ದಾರೆ. ಪಂಜಾಬ್ ಪೊಲೀಸರು (Panjab Police) ಸಹ ಉನ್ನತಮಟ್ಟದಲ್ಲಿ ತನಿಖೆ ನಡೆಸಲು ವಿಶೇಷ ತಂಡ ನಿಯೋಜಿಸುವುದಾಗಿ ಭರವಸೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್‌ ಕೇಸ್‌ – ಹುಡುಗಿಯ ಬಾಯ್‌ಫ್ರೆಂಡ್‌ ಸಹ ಅರೆಸ್ಟ್‌

    ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್‌ ಕೇಸ್‌ – ಹುಡುಗಿಯ ಬಾಯ್‌ಫ್ರೆಂಡ್‌ ಸಹ ಅರೆಸ್ಟ್‌

    ಚಂಡೀಗಢ: ವಿಶ್ವವಿದ್ಯಾಲಯದಲ್ಲಿ (Chandigarh University) ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ (Private Video) ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಕಳಿಸಿದ್ದ ಹುಡುಗಿ ಹಾಗೂ ಆಕೆಯ ಬಾಯ್‌ಫ್ರೆಂಡ್‌ (BoyFriend) ಇಬ್ಬರನ್ನೂ ಪಂಜಾಬ್‌ ಪೊಲೀಸರು (Panjab Police) ಬಂಧಿಸಿದ್ದಾರೆ.

    ವಿವಿಯಲ್ಲಿ ನಡೆದ ಘಟನೆಯಿಂದಾಗಿ ಪರಸ್ಪರ ಪರಿಚಯವಿಲ್ಲದ ವಿದ್ಯಾರ್ಥಿಗಳಲ್ಲಿ ಭಾರೀ ಆತಂಕವನ್ನೇ ಉಂಟುಮಾಡಿದೆ. ತನ್ನ ವೈಯಕ್ತಿಕ ವೀಡಿಯೋವನ್ನು ಕಳಿಸಿದ್ದ ವಿದ್ಯಾರ್ಥಿನಿ ಹಾಗೂ ಬಾಯ್‌ ಫ್ರೆಂಡ್‌ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಹೆಚ್ಚಿನ ತನಿಖೆಗೆ ವಿಶೇಷ ತನಿಖಾ ತಂಡ (Speical Investigation Team) ನಿಯೋಜಿಸುವುದಾಗಿ ಭರವಸೆ ನೀಡಿದ್ದರೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದ್ದಾರೆ ಎಂದು ಪಂಜಾಬ್‌ ಪೊಲೀಸರು ತಿಳಿಸಿದ್ದಾರೆ.

    ಘಟನೆ ಕುರಿತು ಇಂದು ಮಧ್ಯಾಹ್ನ ಸ್ಪಷ್ಟನೆ ನೀಡಿದ್ದ ಚಂಡೀಗಢ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಆರ್.ಎಸ್ ಬಾವಾ, ವಿದ್ಯಾರ್ಥಿಗಳ 60 ಆಕ್ಷೇಪಾರ್ಹ ಎಂಎಂಎಸ್‌ಗಳು ಕಂಡುಬಂದಿದೆ ಎನ್ನುತ್ತಿರುವ ವದಂತಿ ಸಂಪೂರ್ಣ ಸುಳ್ಳು ಹಾಗೂ ಆಧಾರ ರಹಿತವಾದುದು. ವಿವಿಯಲ್ಲಿ ವಿದ್ಯಾರ್ಥಿನಿ ಚಿತ್ರೀಕರಿಸಿದ ವೈಯಕ್ತಿಕ ವೀಡಿಯೋವನ್ನು ಹೊರತುಪಡಿಸಿ, ಉಳಿದ ಯಾವುದೇ ಆಕ್ಷೇಪಾರ್ಹ ವೀಡಿಯೋಗಳು ಕಂಡುಬಂದಿಲ್ಲ. ಅಲ್ಲದೇ ವಿದ್ಯಾರ್ಥಿನಿ ತನ್ನ ವೈಯಕ್ತಿಕ ವೀಡಿಯೋವನ್ನು ತನ್ನ ಬಾಯ್‌ಫ್ರೆಂಡ್‌ಗೆ ಹಂಚಿಕೊಂಡಿದ್ದಾಳೆ ಎಂದು ಹೇಳಿದ್ದರು.

    ಏನಿದು ಘಟನೆ?
    ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋವನ್ನು ಸಹ ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ಸೋರಿಕೆಯಾದ ಬೆನ್ನಲ್ಲೇ ಭಾರೀ ಪ್ರತಿಭಟನೆ ಬುಗಿಲೆದ್ದಿದ್ದು, ಈ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ, ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಲಾಗಿದೆ. ವೀಡಿಯೋ ಕಳಿಸಿದ್ದ ಹುಡುಗಿಯನ್ನು ಇಂದು ಬೆಳಗ್ಗೆ ಬಂಧಿಸಲಾಗಿತ್ತು, ನಿರಂತರ ತನಿಖೆಯಿಂದಾಗಿ ಇಂದು ರಾತ್ರಿ ಬಾಯ್‌ಫ್ರೆಂಡ್‌ನನ್ನೂ ಬಂಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿನಿ ತನ್ನ ಖಾಸಗಿ ವೀಡಿಯೋ ಮಾತ್ರ ಬಾಯ್‌ಫ್ರೆಂಡ್‌ಗೆ ಹಂಚಿಕೊಂಡಿದ್ಲು – ವಿವಿ ಸ್ಪಷ್ಟನೆ

    ವಿದ್ಯಾರ್ಥಿನಿ ತನ್ನ ಖಾಸಗಿ ವೀಡಿಯೋ ಮಾತ್ರ ಬಾಯ್‌ಫ್ರೆಂಡ್‌ಗೆ ಹಂಚಿಕೊಂಡಿದ್ಲು – ವಿವಿ ಸ್ಪಷ್ಟನೆ

    ಚಂಡೀಗಢ: ಇಲ್ಲಿನ ವಿಶ್ವವಿದ್ಯಾನಿಲಯದಲ್ಲಿ (Chandigarh University) ವಿದ್ಯಾರ್ಥಿಗಳ ಆಕ್ಷೇಪಾರ್ಹ (Videos Leaked) ವೀಡಿಯೋಗಳನ್ನು ಸೋರಿಕೆ ಮಾಡಿದ ಆರೋಪ ಹೊತ್ತಿರುವ ವಿದ್ಯಾರ್ಥಿನಿ ತನ್ನ ವೈಯಕ್ತಿಕ ವೀಡಿಯೋ ಬಿಟ್ಟು ಬೇರೆ ಯಾವುದೇ ವೀಡಿಯೋ ರೆಕಾರ್ಡ್ (Video Record) ಮಾಡಿಲ್ಲ. ಅಲ್ಲದೇ ಆಕೆ ತನ್ನ ವೈಯಕ್ತಿಕ ವೀಡಿಯೋ ಹಂಚಿಕೊಂಡಿದ್ದು ಆಕೆಯ ಬಾಯ್‌ಫ್ರೆಂಡ್‌ಗೆ ಎಂದು ಚಂಡೀಗಢ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಆರ್.ಎಸ್ ಬಾವಾ (SR Bawa) ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ (Hostel) ಸುಮಾರು 60 ವಿದ್ಯಾರ್ಥಿನಿಯರು (Girls Students) ಸ್ನಾನ ಮಾಡುತ್ತಿರುವ ವೀಡಿಯೋವನ್ನು ಸಹ ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೋ ಸೋರಿಕೆಯಾದ ಬೆನ್ನಲ್ಲೇ ಭಾರೀ ಪ್ರತಿಭಟನೆ (Protest) ಬುಗಿಲೆದ್ದಿದ್ದು, ಈ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

    ಘಟನೆ ಬಳಿಕ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಆರೋಪವನ್ನು ಚಂಡೀಗಢ ವಿಶ್ವವಿದ್ಯಾನಿಲಯವು ತಳ್ಳಿಹಾಕಿದೆ. ಒಬ್ಬ ಹುಡುಗಿಗೆ ಮಾತ್ರ ಪ್ರಜ್ಞೆ ತಪ್ಪಿತ್ತು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ ಬಳಿ ಆರೋಗ್ಯ ಸ್ಥಿರವಾಗಿದೆ ಎಂದು ಖಾಸಗಿ ವಿಶ್ವವಿದ್ಯಾನಿಲಯದ ಅಧಿಕಾರಿಗಳು ಹೇಳಿದ್ದಾರೆ.

    ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಚಂಡೀಗಢ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಆರ್.ಎಸ್ ಬಾವಾ, ವಿದ್ಯಾರ್ಥಿಗಳ 60 ಆಕ್ಷೇಪಾರ್ಹ ಎಂಎಂಎಸ್‌ಗಳು ಕಂಡುಬಂದಿದೆ ಎನ್ನುತ್ತಿರುವ ವದಂತಿ ಸಂಪೂರ್ಣ ಸುಳ್ಳು ಹಾಗೂ ಆಧಾರ ರಹಿತವಾದುದು. ವಿವಿಯಲ್ಲಿ ವಿದ್ಯಾರ್ಥಿನಿ ಚಿತ್ರೀಕರಿಸಿದ ವೈಯಕ್ತಿಕ ವೀಡಿಯೋವನ್ನು ಹೊರತುಪಡಿಸಿ, ಉಳಿದ ಯಾವುದೇ ಆಕ್ಷೇಪಾರ್ಹ ವೀಡಿಯೋಗಳು ಕಂಡುಬಂದಿಲ್ಲ. ಅಲ್ಲದೇ ವಿದ್ಯಾರ್ಥಿನಿ ತನ್ನ ವೈಯಕ್ತಿಕ ವೀಡಿಯೋವನ್ನು ಸ್ವತಃ ತನ್ನ ಬಾಯ್‌ಫ್ರೆಂಡ್‌ಗೆ ಹಂಚಿಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ.

    ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಚಂಡೀಗಢ ವಿಶ್ವವಿದ್ಯಾನಿಲಯವು ಸ್ವಯಂಪ್ರೇರಿತವಾಗಿ ತನಿಖೆಯನ್ನು ಪಂಜಾಬ್ ಪೊಲೀಸರಿಗೆ ಒಪ್ಪಿಸಿದೆ ಎಂದು ಬಾವಾ ತಿಳಿಸಿದ್ದಾರೆ.

    ಉನ್ನತಮಟ್ಟದ ತನಿಖೆಗೆ ಆದೇಶ: ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ನಮ್ಮ ಹೆಣ್ಣುಮಕ್ಕಳು ನಮ್ಮ ಹೆಮ್ಮೆ. ಆದರೆ ಚಂಡೀಗಢದ ಘಟನೆ ವಿಷಾದನೀಯವಾಗಿದೆ. ಘಟನೆ ಬಗ್ಗೆ ಉನ್ನತಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ನಾನು ನಿರಂತರವಾಗಿ ಆಡಳಿತಾಧಿಕಾರಿಗಳ ಸಂಪರ್ಕದಲ್ಲಿ ಇರುತ್ತೇನೆ. ಹಾಗಾಗಿ ವದಂತಿಗಳನ್ನು ತಪ್ಪಿಸುವಂತೆ ಮನವಿ ಮಾಡುತ್ತೇನೆ ಎಂದು ಕೋರಿದ್ದಾರೆ.

    ಇದು ನಾಚಿಗೇಡಿನ ಸಂಗತಿ: ಚಂಡೀಗಢ ಘಟನೆಯ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಇದು ಅತ್ಯಂತ ನಾಚಿಗೇಡಿನ ಸಂಗತಿ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇದರಲ್ಲಿ ಭಾಗಿಯಾಗಿರುವ ಎಲ್ಲ ಅಪರಾಧಿಗಳಿಗೂ ಕಠಿಣ ಶಿಕ್ಷೆಯಾಗಬೇಕು. ಸಂತ್ರಸ್ತ ಹೆಣ್ಣುಮಕ್ಕಳಿಗೆ ಧೈರ್ಯವಿದೆ. ಅವರು ಯಾವುದಕ್ಕೂ ಹೆದರಬೇಕಿಲ್ಲ. ನಾವು ಅವರೊಂದಿಗೆ ಇದ್ದೇವೆ ಎಂದು ಟ್ವೀಟ್ ಮೂಲಕ ಭರವಸೆಯ ನುಡಿಗಳನ್ನಾಡಿದ್ದಾರೆ.

    ಆಕೆ ವೀಡಿಯೋ ರೆಕಾರ್ಡ್ ಮಾಡಿಲ್ಲ: ಈವರೆಗೆ ನಡೆದ ತನಿಖೆಯಲ್ಲಿ ಆರೋಪಿಯ ಒಂದು ವೀಡಿಯೋ ಮಾತ್ರ ಇದೆ. ಆಕೆ ಬೇರೆಯವರ ಯಾವುದೇ ವೀಡಿಯೋಗಳನ್ನ ರೆಕಾರ್ಡ್ ಮಾಡಿಲ್ಲ. ಈಗಾಗಲೇ ಎಲ್ಲಾ ಇಲೆಕ್ಟ್ರಾನಿಕ್ ಸಾಧನಗಳು ಹಾಗೂ ಮೊಬೈಲ್ ಫೋನ್‌ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಶೀಘ್ರದಲ್ಲೇ ಅವುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಿದ್ದೇವೆ. ಸದ್ಯ ಈವರೆಗೆ ಸಾವು-ನೋವುಗಳಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ. ಆದರೆ ಆಂಬುಲೆನ್ಸ್ನಲ್ಲಿ ಕರೆದೊಯ್ಯಲಾದ ಓರ್ವ ವಿದ್ಯಾರ್ಥಿನಿ ಆತಂಕದಲ್ಲಿದ್ದು, ನಮ್ಮ ತಂಡವು ಆಕೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ. ಹಾಗಾಗಿ ಯಾರೂ ವದಂತಿಗಳಿಗೆ ಕಿವಿಗೊಡಬಾರದು ಎಂದು ಮೊಹಾಲಿ ಪೊಲೀಸ್ ಮುಖ್ಯಸ್ಥ ವಿವೇಕ್ ಸೋನಿ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಡ್ಯ ಜಿಲ್ಲೆ ಕ್ರೀಡಾಸಕ್ತ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ – ಬಾಲಕಿಯರ ಕ್ರೀಡಾ ವಸತಿನಿಲಯ ಮಂಜೂರು

    ಮಂಡ್ಯ ಜಿಲ್ಲೆ ಕ್ರೀಡಾಸಕ್ತ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ – ಬಾಲಕಿಯರ ಕ್ರೀಡಾ ವಸತಿನಿಲಯ ಮಂಜೂರು

    ಮಂಡ್ಯ: ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದು ಕೊಟ್ಟ ಮಂಡ್ಯ ಜಿಲ್ಲೆಯವರಾದ ಮಮತಾ ಶೆಟ್ಟಿ, ಸವಿತಾ, ಪವಿತ್ರ, ಭವ್ಯ ಅವರಂತೆ, ನಾವೂ ಸಾಧಿಸಬೇಕು ಎಂಬ ಹಂಬಲದಲ್ಲಿರುವ ಮಂಡ್ಯದ ಕ್ರೀಡಾ ವಿದ್ಯಾರ್ಥಿನಿಯರಿಗೆ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾಲಕಿಯರ ಕ್ರೀಡಾ ವಸತಿ ನಿಲಯ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.

    ಕ್ರೀಡೆಯಲ್ಲಿ ಸಾಧನೆಯತ್ತ ನಿಮ್ಮ ಗುರಿ ಇರಲಿ. ಅದಕ್ಕೆ ಬೇಕಾದ ಎಲ್ಲ ಬೆಂಬಲ ನೀಡಲು ಸರ್ಕಾರ ಸಿದ್ಧ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಕ್ರೀಡಾಪಟುಗಳಿಗೆ ಆಶ್ವಾಸನೆ ನೀಡಿದ್ದರು. ಅದರಂತೆ ಮಂಡ್ಯ ಜಿಲ್ಲಾ ಕ್ರೀಡಾಂಗಣವನ್ನು 10 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಾಡುತ್ತಿದ್ದಾರೆ. ಖೇಲೊ ಇಂಡಿಯಾ ಅಡಿ ಖೇಲೊ ಇಂಡಿಯಾ ಕೇಂದ್ರ ಕೂಡ ಸ್ಥಾಪನೆ ಆಗುತ್ತಿದೆ. ಇದೆಲ್ಲಕ್ಕಿಂತ ಪ್ರಮುಖವಾಗಿ ವೈಜ್ಞಾನಿಕವಾಗಿ ಕ್ರೀಡಾ ಪಟುಗಳಲ್ಲಿರುವ ಕ್ರೀಡಾ ಸಾಮರ್ಥ್ಯ ಗುರುತಿಸುವಂತ ಕ್ರೀಡಾ ವಿಜ್ಞಾನ ಕೇಂದ್ರ 2 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಪನೆಯಾಗುತ್ತಿದೆ.

    ಜಿಲ್ಲೆಗೆ ಮಂಜೂರಾಗಿದೆ ಬಾಲಕಿಯರ ವಸತಿ ನಿಲಯ
    ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಆದರೆ ವಸತಿ ನಿಲಯವೇ ಇಲ್ಲದ ಕಾರಣ ಗ್ರಾಮೀಣ ಭಾಗದ ಕ್ರೀಡಾಪ್ರತಿಭೆಗಳಿಗೆ ಅವಕಾಶ ಮರೀಚಿಕೆಯಾಗುತ್ತಿತ್ತು. ಅದರಲ್ಲು ವಿಶೇಷವಾಗಿದೆ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸದ ಜೊತೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳುವುದಕ್ಕೆ ಬಹಳ ಕಠಿಣ ಪರಿಸ್ಥಿತಿ ಇತ್ತು. ಬಾಲಕಿಯರೂ ಕ್ರೀಡೆಯಲ್ಲಿ ಸಾಧನೆ ತೋರಿಸುವುದಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಆಗಿರುವ ಡಾ. ನಾರಾಯಣಗೌಡ ಮಂಡ್ಯ ಜಿಲ್ಲೆಗೆ 2 ಕೋಟಿ ರೂ. ವೆಚ್ಚದಲ್ಲಿ ಬಾಲಕಿಯರ ಕ್ರೀಡಾ ವಸತಿ ನಿಲಯವನ್ನು ಮಂಜೂರು ಮಾಡಿಸಿದ್ದಾರೆ.

    ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಂಡ್ಯದ ಕ್ರೀಡಾಪಟುಗಳ ಸಾಧನೆ
    ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾಪ್ರತಿಭೆಗಳಿಗೆ ಬರವಿಲ್ಲ ಎನ್ನುವುದಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೋರಿಸಿದ ಸಾಧನೆಗಳೇ ಸಾಕ್ಷಿ. ವಾಲಿಬಾಲ್‍ನಲ್ಲಿ ಮಮತಾ ಶೆಟ್ಟಿ ಹಾಗೂ ಪವಿತ್ರ, ಬಾಸ್ಕೆಟ್ ಬಾಲ್ ನಲ್ಲಿ ಸವಿತಾ, ಕಬ್ಬಡ್ಡಿಯಲ್ಲಿ ಭವ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡಿ ಕೀರ್ತಿಪತಾಕೆ ಹಾರಿಸಿರುವ ಇವರೆಲ್ಲ ಮಂಡ್ಯ ಜಿಲ್ಲೆಯವರು. ವಿಪರ್ಯಾಸ ಎಂದರೆ ಇಂತಹ ಸಾಧಕರ ತವರು ಜಿಲ್ಲೆಯಲ್ಲೇ ಬಾಲಕಿಯರಿಗೆ ಕ್ರೀಡಾ ವಸತಿನಿಲಯ ಇರಲಿಲ್ಲ. ಈಗ ಸರ್ಕಾರ ವಸತಿನಿಲಯ ಮಂಜೂರು ಮಾಡಿದೆ. ಹೀಗಾಗಿ ಈ ಎಲ್ಲ ಕ್ರೀಡಾ ಸಾಧಕರಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ವಿದ್ಯಾರ್ಥಿನಿಯರು ಮಿಂಚಲು ಅವಕಾಶವಾಗಲಿದೆ.

    ಮಂಡ್ಯ ಜಿಲ್ಲೆಯಲ್ಲಿ ಬಾಲಕರ ವಸತಿನಿಲಯ ಇದೆ. ಆದರೆ ಬಾಲಕಿಯರಿಗೆ ವಸತಿನಿಲಯ ಬೇಕು ಎನ್ನುವುದು ಬಹು ವರ್ಷಗಳ ಬೇಡಿಕೆಯಾಗಿತ್ತು. ಈಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಬಾಲಕಿಯರ ವಸತಿನಿಲಯ ಮಂಜೂರು ಮಾಡಿಸಿರುವುದು ಶ್ಲಾಘನೀಯ. ಕ್ರೀಡೆಯಲ್ಲಿ ಸಾಧನೆ ತೋರುವ ಕನಸು ಹೊತ್ತಿರುವ ಅದೆಷ್ಟೋ ಬಾಲಕಿಯರಿಗೆ ಇದು ವರದಾನವಾಗಲಿದೆ ಎಂದು ಮಂಡ್ಯ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್. ಅನಿತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಶೀಘ್ರದಲ್ಲೆ ಶಂಕುಸ್ಥಾಪನೆ
    ಬಾಲಕಿಯರ ಕ್ರೀಡಾ ವಸತಿನಿಲಯ ಕಟ್ಟಡಕ್ಕೆ ಶೀಘ್ರದಲ್ಲೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಅಲ್ಲದೆ 8 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.

  • ಧಗಧಗನೇ ಹೊತ್ತಿ ಉರಿಯಿತು ಬೆಡ್ ಹೊತ್ತು ತಂದ ಲಾರಿ

    ಧಗಧಗನೇ ಹೊತ್ತಿ ಉರಿಯಿತು ಬೆಡ್ ಹೊತ್ತು ತಂದ ಲಾರಿ

    ಯಾದಗಿರಿ: ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯಕ್ಕೆ ತಲುಪಬೇಕಾಗಿದ್ದ ಬೆಡ್ ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಯಾದಗಿರಿ ನಗರದ ಗಂಜ್ ಪ್ರದೇಶದಲ್ಲಿ ನಡೆದಿದೆ.

    ಲಾರಿ ಧಗಧಗನೇ ಹೊತ್ತಿ ಉರಿದಿದ್ದು, ವಿದ್ಯಾರ್ಥಿನಿಯರಿಗೆ ತಲುಪಬೇಕಾದ ಬೆಡ್ ಗಳು ಸುಟ್ಟು ಕರಕಲವಾಗಿವೆ. ಬೆಂಗಳೂರಿನಿಂದ ಬಂದಿರುವ ಬೆಡ್‍ಗಳನ್ನ ತುಂಬಿದ ಲಾರಿ ವಿದ್ಯುತ್ ತಂತಿ ಕಡಿದು ಬಿದ್ದಿರುವ ಪರಿಣಾಮ ಸುಮರು 300ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ತಲುಪಬೇಕಾಗಿದ್ದು, ಬೆಂಕಿಗೆ ಆಹುತಿಯಾಗಿವೆ. ಇದನ್ನು ಓದಿ:ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ- ಲಾಕ್‍ಡೌನ್ ಎಫೆಕ್ಟ್‌ಗೆ ಸಿಕ್ಕು ನಲುಗಿದ ಶುಂಠಿ, ಕಲ್ಲಂಗಡಿ

    ಸಂಪೂರ್ಣ ಲಾರಿ ಜೊತೆ ಬೆಡ್‍ಗಳು ಸುಟ್ಟು ಕರಕಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಆಗಿಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದೆ.

    ಇತ್ತೀಚೆಗಷ್ಟೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ 6 ಮಂದಿ ಕಾರ್ಮಿಕರು ಗಾಯಗೊಂಡಿದ್ದರು. ಇದನ್ನು ಓದಿ: ಕೆಐಎಎಲ್ ವಿಮಾನ ನಿಲ್ದಾಣದಲ್ಲಿ ಭಾರೀ ಸ್ಫೋಟ – 6 ಮಂದಿಗೆ ಗಾಯ