Tag: Global Investors Meet

  • ತಯಾರಿಕಾ ವಲಯದಲ್ಲಿ ಮಾನವ-ಯಾಂತ್ರಿಕ ಬುದ್ಧಿಯ ಸಮನ್ವಯತೆ: ಭುವನ್ ಲೋಧಾ

    ತಯಾರಿಕಾ ವಲಯದಲ್ಲಿ ಮಾನವ-ಯಾಂತ್ರಿಕ ಬುದ್ಧಿಯ ಸಮನ್ವಯತೆ: ಭುವನ್ ಲೋಧಾ

    ಬೆಂಗಳೂರು: ತಂತ್ರಜ್ಞಾನದ ಅಭಿವೃದ್ಧಿಯೊಂದಿಗೆ ತಯಾರಿಕಾ ವಲಯದಲ್ಲಿ ಉದ್ಯೋಗಗಳು ಹಾಗೂ ಪೂರೈಕೆ ಸರಣಿಯ ಪರಿಸ್ಥಿತಿಗಳು ಬದಲಾಗುತ್ತಿವೆ ಎಂದು ಮಹಿಂದ್ರಾ ಗ್ರೂಪ್ (Mahindra Group) ಸಂಸ್ಥೆಯ ಎಐ ವಿಭಾಗದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭುವನ್ ಲೋಧಾ (Bhuwan Lodha) ಗುರುವಾರ ಹೇಳಿದರು.

    ‘ಜಾಗತಿಕ ಹೂಡಿಕೆದಾರರ ಸಮಾವೇಶ (GIM) ‘ಉದ್ಯಮ 5.0 – ಮಾನವ ಕೇಂದ್ರಿತ ಕ್ರಾಂತಿಯಾಗಿ ತಯಾರಿಕಾ ವಲಯದ ಮರುವ್ಯಾಖ್ಯಾನ ಗೋಷ್ಠಿಯಲ್ಲಿ ವಿಚಾರ ಮಂಡಿಸಿ, ಎಐ ತಂತ್ರಜ್ಞಾನ ಬಳಕೆಯೊಂದಿಗೆ ತಯಾರಿಕೆ ಸೇರಿದಂತೆ ವಿವಿಧ ವಲಯಗಳ ಕೌಶಲ್ಯ ನಿರೀಕ್ಷೆ ಮತ್ತು ಬೇಡಿಕೆ ಬದಲಾಗುತ್ತಿದೆ ಎಂದರು.

    ಸುಧಾರಿತ ಸಾಫ್ಟ್‌ವೇರ್‌ ಅಳವಡಿಕೆಯಿಂದಾಗಿ ಸರಕು ತಯಾರಿಕೆಯ ಸ್ವರೂಪ ಬದಲಾಗಿದೆ. ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳನ್ನು ರಿಯಲ್ ಟೈಮ್‌ನಲ್ಲಿ ಒದಗಿಸುವುದು ಹಿಂದೆಂದಿಂಗಿಂತಲೂ ಹೆಚ್ಚು ಮುಖ್ಯವಾಗಿದೆ. ಡಾಟಾ ಸೈನ್ಸ್ ಸೇರಿದಂತೆ ವಿವಿಧ ತಂತ್ರಜ್ಞಾನದಿಂದಾಗಿ ಗ್ರಾಹಕರ ಮನೋಗುಣವನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿದೆ. ಉದ್ಯಮ ವಲಯದಲ್ಲಿ ನಿರ್ಧಾರ ಕೈಗೊಳ್ಳುವಿಕೆ ಅಥವಾ ‘ಡಿಸಿಷನ್ ಮೇಕಿಂಗ್’ ಅತಿ ಪ್ರಮುಖ ಘಟ್ಟವಾಗಿದ್ದು, ಸುಧಾರಿತ ತಂತ್ರಜ್ಞಾನದ ಬಳಕೆಯಿಂದಾಗಿ ಡಿಸಿಷನ್ ಮೇಕಿಂಗ್ ವಿಧಾನ ಈಗ ಬದಲಾಗುತ್ತಿದೆ. ತಂತ್ರಜ್ಞಾನ ಯುಗದ ಹೊಸಜಗತ್ತಿನಲ್ಲಿ ಮಾನವ ಮತ್ತು ಯಂತ್ರಗಳು ಸಮನ್ವಯದಿಂದ ಒಟ್ಟಿಗೆ ಕಾರ್ಯ ನಿರ್ವಹಿಸುವುದು ಅನಿವಾರ್ಯವಾಗಿದೆ ಎಂದು ವಿವರಿಸಿದರು.

     

    ‘ಕಿಂಡ್ರಿಲ್ ಇಂಡಿಯಾ’ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲಿಂಗರಾಜ್ ಸಾವಕಾರ್, ಪ್ರಸಕ್ತ ಕಾಲಘಟ್ಟದಲ್ಲಿ, ಮಾರುಕಟ್ಟೆಯ ಮುಂದಿನ ಋತುಮಾನದಲ್ಲಿ ಗ್ರಾಹಕರ ನಿರೀಕ್ಷೆಗಳೇನು ಎಂದು ಊಹಿಸುವುದು ಸವಾಲಾಗಿದೆ ಎಂದರು.

    ತಂತ್ರಜ್ಞಾನದಿಂದಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (MSME) ವಲಯದ ತಯಾರಿಕಾ ವಿನ್ಯಾಸ ಮತ್ತು ಉತ್ಪನ್ನದಲ್ಲಿ ಮೌಲ್ಯವರ್ಧನೆಯಾಗಿದೆ. ಇದಕ್ಕೆ ಪೂರಕವಾಗಿ ಈ ವಲಯಕ್ಕೆ ಹೂಡಿಕೆಯೂ ಹರಿದುಬರಬೇಕಿದ್ದು, ಸರ್ಕಾರದ ನೀತಿಯೂ ಬದಲಾಗಬೇಕಿದೆ ಎಂದು ಹೇಳಿದರು.

    ವೇಲ್ಸ್ ನ ಸ್ವಾನ್ ಸೀ ವಿ.ವಿ. ಕಂಪ್ಯೂಟರ್ ಸೈನ್ಸಸ್ ವಿಭಾಗದ ನಿರ್ದೇಶಕ ಬರ್ಟಿ ಮುಲ್ಲರ್, ತಯಾರಿಕಾ ವಲಯದಲ್ಲಿ ಸಾಂಪ್ರದಾಯಿಕ ವಿಧಾನಕ್ಕಿಂತ ತಂತ್ರಜ್ಞಾನ ಬಲದ ಸ್ಮಾರ್ಟ್ ವಿಧಾನ ಇಂದು ಹೆಚ್ಚು ಅಗತ್ಯವಾಗಿದೆ ಎಂದರು.

    ಎಐ ತಂತ್ರಜ್ಞಾನದ ಬಳಕೆಯೊಂದಿಗೆ ಕೈಗಾರಿಕಾ ವಲಯದಲ್ಲಿ ಭಾವನಾತ್ಮಕ ಬುದ್ಧಿಮತ್ತೆ ಹಾಗು ಸೃಜನಶೀಲ ಬುದ್ಧಿಮತ್ತೆಯ ಸಮನ್ವಯತೆ ಆಗುತ್ತಿದೆ. ಇದರ ಪರಿಣಾಮವನ್ನು ಉತ್ಪನ್ನಗಳಲ್ಲಿ ಕಾಣುತ್ತಿದ್ದೇವೆ. ಇಂದು ಗ್ರಾಹಕರ ವೈಯಕ್ತಿಕ ಬೇಡಿಕೆ ಅನುಸಾರ ವ್ಯಕ್ತಿಗತ ಅಪೇಕ್ಷೆಗೆ ತಕ್ಕಂತೆ (ಪರ್ಸನಲೈಸ್ಡ್) ಉತ್ಪನ್ನಗಳ ತಯಾರಿಕೆ ಸಾಧ್ಯವಾಗಿದೆ ಎಂದು ತಿಳಿಸಿದರು.ಏಷ್ಯಾ-ಪೆಸಿಫಿಕ್ ಇಕನಾಮಿಸ್ಟ್ ಇಂಪ್ಯಾಕ್ಟ್ ವೇದಿಕೆಯ ತಂತ್ರಜ್ಞಾನ ಮತ್ತು ಸೊಸೈಟಿ ವಿಭಾಗದ ಮುಖ್ಯಸ್ಥ ಚಾರ್ಲ್ಸ ರಾಸ್ ಗೋಷ್ಠಿ ನಿರ್ವಹಿಸಿದರು.

     

  • ಜಾಗತಿಕ ಹೂಡಿಕೆದಾರರ ಸಮಾವೇಶ – 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ.ಬಿ ಪಾಟೀಲ್

    ಜಾಗತಿಕ ಹೂಡಿಕೆದಾರರ ಸಮಾವೇಶ – 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಎಂ.ಬಿ ಪಾಟೀಲ್

    ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜೊತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ (M.B Patil) ತಿಳಿಸಿದ್ದಾರೆ.

    ಜಾಗತಿಕ ಹೂಡಿಕೆದಾರರ ಸಮಾವೇಶ (Global Investors Meet) ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ ಒದಗಿಸಲಾಗುವುದು. ಕೆಐಎಡಿಬಿ (KIADB) ರಾಜ್ಯದಲ್ಲಿ ಈಗಾಗಲೇ 85 ಸಾವಿರ ಎಕರೆಗೂ ಹೆಚ್ಚು ವಿಸ್ತೀರ್ಣದ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿದ್ದು, ಇಲ್ಲಿ 25 ಸಾವಿರ ಕೈಗಾರಿಕೆಗಳು ನೆಲೆಯೂರಿವೆ ಎಂದಿದ್ದಾರೆ.

    ಉತ್ಪಾದನಾ ವೆಚ್ಚ ಕಡಿಮೆಯಾಗಿ, ದಕ್ಷತೆ ಹೆಚ್ಚಾಗಬೇಕು ಎನ್ನುವುದು ಸರ್ಕಾರದ ನೀತಿಯಾಗಿದೆ. ಇದನ್ನು ಸಾಧಿಸಲು `ಕ್ಲಸ್ಟರ್ ಆಧಾರಿತ ನೀತಿ’ ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಬೇರೆಬೇರೆ ಭಾಗಗಳಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಇ.ವಿ.ತಯಾರಿಕೆ ಕ್ಲಸ್ಟರ್, ಫಾರ್ಮಾ, ಡೀಪ್-ಟೆಕ್ ಮತ್ತು ಡ್ರೋನ್ ಪಾರ್ಕ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಕೈಗಾರಿಕಾ ಪ್ರದೇಶಗಳಿಗೆ ಹತ್ತಿರದ ನದಿ ಮೂಲಗಳಿಂದ ಶುದ್ಧ ಕುಡಿಯುವ ನೀರು ಪೂರೈಸಲು 3,800 ಕೋಟಿ ರೂ. ಮೊತ್ತದ ಬೃಹತ್ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

    ಜಾಗತಿಕ ಮಟ್ಟದಲ್ಲಿ ಚೀನಾದಿಂದ ತೀವ್ರ ಸವಾಲು ಎದುರಾಗಿದ್ದು, ತಯಾರಿಕೆ ವಲಯದ ಚಿತ್ರಣವೇ ಬದಲಾಗಬೇಕಾದ ಅನಿವಾರ್ಯತೆ ಇದೆ. ಜೊತೆಗೆ ಜಾಗತಿಕ ಅಸ್ಥಿರತೆಯ ಸಮಸ್ಯೆಯೂ ಇದೆ. ಸರ್ಕಾರ ಪ್ರಗತಿಗೆ ಹೊಸ ಭಾಷ್ಯ ಬರೆಯಲು ಮುಂದಾಗಿದ್ದು, ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ತಯಾರಿಕೆ ಮತ್ತು ನಾವೀನ್ಯತೆಯ ತೊಟ್ಟಿಲನ್ನಾಗಿ ಪ್ರತಿಷ್ಠಾಪಿಸಲಿದೆ ಎಂದಿದ್ದಾರೆ.

    ತಂತ್ರಜ್ಞಾನದ ಬಳಕೆ, ಹೂಡಿಕೆ ಆಕರ್ಷಣೆ ಮತ್ತು ಸ್ಪರ್ಧಾತ್ಮಕ ಉದ್ಯಮಗಳ ಸ್ಥಾಪನೆಯೇ ಭವಿಷ್ಯದ ಆರ್ಥಿಕ ಬೆಳವಣಿಗೆಯ ನಿರ್ಣಾಯಕ ಶಕ್ತಿಗಳಾಗಿವೆ. ಇದಕ್ಕಾಗಿ ಕೈಗಾರಿಕಾ ರಂಗದಲ್ಲಿ ಡಿಜಿಟಲ್ ಪರಿವರ್ತನೆಯನ್ನು ಅಳವಡಿಸಿ ಕೊಳ್ಳಲಾಗುತ್ತಿದೆ. ಜತೆಗೆ ಇಂಗಾಲವನ್ನು ಕಡಿಮೆ ಹೊರಸೂಸುವ ಹಾಗೂ ಪರಿಸರಸ್ನೇಹಿ ಉಪಕ್ರಮಗಳಿಗೂ ಗಮನಹರಿಸಲಾಗಿದೆ. 55 ಲಕ್ಷ ಜನರಿಗೆ ಉದ್ಯೋಗ ನೀಡಿರುವ 8 ಲಕ್ಷ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ವಿಶೇಷ ಒತ್ತು ಕೊಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

  • ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 9,81,784 ಕೋಟಿ ರೂ. ಹೂಡಿಕೆ ಒಪ್ಪಂದ: ಸಚಿವ ನಿರಾಣಿ

    ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 9,81,784 ಕೋಟಿ ರೂ. ಹೂಡಿಕೆ ಒಪ್ಪಂದ: ಸಚಿವ ನಿರಾಣಿ

    – ಶೇ.90 ರಷ್ಟು ಬಂಡವಾಳ ಹೂಡಿಕೆಗಳು ಬೆಂಗಳೂರಿನ ಆಚೆ ಆಗುತ್ತಿದೆ
    – 6 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

    ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ (Global Investors Meet) ದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ (Murugesh Nirani) ತಿಳಿಸಿದ್ದಾರೆ.

    ಜಾಗತಿಕ ಹೂಡಿಕೆದಾರರ ಸಮಾವೇಶದ ವಿವರಗಳನ್ನು ಹಂಚಿಕೊಳ್ಳಲು ಶನಿವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ. ಈ ಪೈಕಿ ಶೇ.90ಕ್ಕೂ ಹೆಚ್ಚು ಯೋಜನೆಗಳು ಬೆಂಗಳೂರಿನ ಆಚೆ ಅನುಷ್ಠಾನಗೊಳ್ಳುತ್ತಿದೆ ಎಂದು ಅವರು ಹೇಳಿದರು.

    ಮೂರು ದಿನಗಳ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದ್ದು, ಈ ಪೈಕಿ ಲಕ್ಷ ಕೋಟಿ ರೂ. ಮೊತ್ತದ 68 ಯೋಜನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. 5, 41,369 ಕೋಟಿ ರೂ. ಮೊತ್ತದ 57 ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 1,57,000 ಕೋಟಿ ರೂ. ಮೊತ್ತದ 2 ಯೋಜನೆಗಳನ್ನು ಸಮಾವೇಶದಲ್ಲಿ ಘೋಷಿಸಲಾಗಿದೆ ಎಂದು ಅವರು ವಿವಿರ ನೀಡಿದರು.

    ವಿವಿಧ ಉದ್ಯಮಿಗಳು (Businessman) 2 ಲಕ್ಷ ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಪ್ರಸ್ತಾವನೆಗಳೊಂದಿಗೆ ಬಂದಿದ್ದರು. ಆದರೆ ಈ ಯೋಜನೆಗಳಿಗೆ ಭೂಮಿ, ವಿದ್ಯುತ್, ಕಚ್ಚಾ ವಸ್ತುಗಳು, ಸಬ್ಸಿಡಿ ಸೇರಿದಂತೆ ವಿವಿಧ ವಿಷಯಗಳು ಇತ್ಯರ್ಥವಾಗಬೇಕಾಗಿರುವುದರಿಂದ ಒಪ್ಪಂದ ಮಾಡಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಉದ್ಯಮಿಗಳೊಂದಿಗೆ ನಮ್ಮ ಅಧಿಕಾರಿಗಳು ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ದೇಶದಲ್ಲೇ ಮೊದಲ ಏಥರ್ ಕಂಪೆನಿಯ ಇವಿ ಚಾರ್ಜಿಂಗ್ ವ್ಯವಸ್ಥೆಗೆ ಚಾಲನೆ

    90 ದಿನಗಳೊಳಗೆ ಅನುಮೋದನೆ: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಡಂಬಡಿಕೆಗಳನ್ನು ಕಾಲ ಮಿತಿಯೊಳಗೆ ಅನುಷ್ಠಾನ ಮಾಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಹೂಡಿಕೆದಾರರ ಸಮಾವೇಶದಲ್ಲಿ ಆಗಿರುವ ಒಪ್ಪಂದಗಳನ್ನು ತೊಂಬತ್ತು ದಿನದೊಳಗೆ ಅನುಮೋದನೆ ನೀಡಲಾಗುವುದು. ಒಡಂಬಡಿಕೆಗಳ ಅನುಷ್ಠಾನಕ್ಕಾಗಿ ಜಿಲ್ಲಾವಾರು ಸಮನ್ವಯ ಸಮಿತಿ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಮುಖ್ಯವಾಗಿ ಈ ಸಮಾವೇಶದಲ್ಲಿ ಆಗಿರುವ ಒಪ್ಪಂದಗಳ ಪೈಕಿ ಅಂದಾಜು ಶೇ.70ರಷ್ಟು ಯೋಜನೆಗಳು ಅನುಷ್ಠಾನಗೊಳ್ಳುವ ವಿಶ್ವಾಸ ಇದೆ ಎಂದು ಅವರು ವಿವರಿಸಿದರು.

    ಬಿಯಾಂಡ್ ಬೆಂಗಳೂರು: ಬೆಂಗಳೂರಿನ ಆಚೆಗೆ ಕೈಗಾರಿಕೆಗಳನ್ನು ವಿಸ್ತರಿಸುವುದು ಈ ಜಾಗತಿಕ ಹೂಡಿಕೆದಾರರ ಸಮಾವೇಶದ ಪ್ರಮುಖ ಉದ್ದೇಶವಾಗಿತ್ತು. ಅದರಂತೆ ಸಮಾವೇಶದಲ್ಲಿ ಆಗಿರುವ ಒಟ್ಟು ಒಪ್ಪಂದಗಳ ಪೈಕಿ ಶೇ.90ರಷ್ಟು ಬೆಂಗಳೂರಿನ ಆಚೆ ಆಗುತ್ತಿದೆ. ಮೈಸೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಸೇರಿದಂತೆ 2 ಮತ್ತು 3ನೇ ಹಂತದ ನಗರಗಳಲ್ಲೂ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ಸಚಿವರು ಪ್ರಶಂಸಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯರಿಂದ `ಧ್ಯಾನ’ ಭಂಗ- ಬಿ.ಸಿ ನಾಗೇಶ್ ತೀವ್ರ ವಾಗ್ದಾಳಿ

    ಪತ್ರಿಕಾ ಗೋಷ್ಠಿಯಲ್ಲಿ ವಾಣಿಜ್ಯ ಮತ್ತು ಕೈಗರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿನ ಡಾ. ಇ ವಿ ರಮಣ ರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಿರೀಕ್ಷೆಗೂ ಮೀರಿ ಯಶಸ್ವಿ: ರಾಜ್ಯದಲ್ಲಿ 10.5 ಲಕ್ಷ ಕೋಟಿ ಹೂಡಿಕೆ

    ನಿರೀಕ್ಷೆಗೂ ಮೀರಿ ಯಶಸ್ವಿ: ರಾಜ್ಯದಲ್ಲಿ 10.5 ಲಕ್ಷ ಕೋಟಿ ಹೂಡಿಕೆ

    ಬೆಂಗಳೂರು: ಮೂರು ದಿನ ಬೆಂಗಳೂರಿನಲ್ಲಿ ನಡೆದ ವಿಶ್ವ ಹೂಡಿಕೆದಾರರ ಸಮಾವೇಶ(Global Investors Meet) ಕರ್ನಾಟಕ ಸರ್ಕಾರದ( Karnataka Government) ನಿರೀಕ್ಷೆ ಮೀರಿ ಯಶಸ್ವಿಯಾಗಿದೆ. ರಾಜ್ಯದಲ್ಲಿ 10.5 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆಯ ಒಪ್ಪಂದಗಳು ಏರ್ಪಟ್ಟಿದೆ.

    ಈ ಪೈಕಿ 2.83 ಲಕ್ಷ ಕೋಟಿ ಮೊತ್ತದ ಯೋಜನೆಗಳ ಜಾರಿಗೆ ಏಕಗವಾಕ್ಷಿ ಯೋಜನೆಯಡಿ ರಾಜ್ಯ ಸರ್ಕಾರ ತಕ್ಷಣ ಅನುಮೋದನೆ ನೀಡಿದೆ. ಈ ಜಿಮ್(GIM) ಸಮಾವೇಶದಲ್ಲಿ 7 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಹರಿದು ಬರುವ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿತ್ತು. ಇದನ್ನೂ ಓದಿ: ಜಿಮ್‌ ಸಮಾವೇಶ – ಮೊದಲ ದಿನವೇ ಕರ್ನಾಟಕದಲ್ಲಿ ಬಂಪರ್ ಹೂಡಿಕೆ

    ಕೊನೆಯ ದಿನವಾದ ಇಂದು ನಡೆದ ಸಮಾರೋಪ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಖುಷಿ ಹಂಚಿಕೊಂಡರು.

    ಬೊಮ್ಮಾಯಿ ಮಾತನಾಡಿ, ಕನ್ನಡಿಗರು ಬಂಡವಾಳ ಹೂಡಿ ಬಿಸ್ನೆಸ್ ಮ್ಯಾನ್ ಆಗಿ ವಿಶ್ವವಿಖ್ಯಾತರಾಗಬೇಕೆಂಬುದು ನಮ್ಮ ಆಶಯ. ಆ ಸಾಮರ್ಥ್ಯ ಕನ್ನಡಿಗರಲ್ಲಿ ಬರಬೇಕು ಎಂಬುದು ನಮ್ಮ ಉದ್ದೇಶ ಎಂದರು.

    ಈ ಹೂಡಿಕೆಯಿಂದ 5 ಲಕ್ಷ ಜನರಿಗೆ ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಮಾಡಲಾಗಿದೆ. ಜಿಮ್ ಸಮಾವೇಶದಲ್ಲಿ ಮೊದಲ ದಿನವೇ ಭರಪೂರ ಬಂಡವಾಳ ಹೂಡಿಕೆ ಹರಿದು ಬಂದಿತ್ತು. ಮೊದಲ ದಿನ 4.5 ಲಕ್ಷ ಕೋಟಿ ರೂ.ಗೂ ಹೆಚ್ಚು ಮೊತ್ತದ ಒಡಂಬಡಿಕೆಗಳಿಗೆ ಸಹಿ ಹಾಕಲಾಗಿತ್ತು.

    Live Tv
    [brid partner=56869869 player=32851 video=960834 autoplay=true]