Tag: glouse

  • ವೋಟ್ ಮಾಡಿ ಎಲ್ಲೆಂದರಲ್ಲಿ ಗ್ಲೌಸ್ ಬಿಸಾಕಿದ ಮತದಾರರು!

    ವೋಟ್ ಮಾಡಿ ಎಲ್ಲೆಂದರಲ್ಲಿ ಗ್ಲೌಸ್ ಬಿಸಾಕಿದ ಮತದಾರರು!

    ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್‍ಆರ್ ನಗರದ ಉಪಚುನಾವಣೆಗೆ ಈಗಾಗಲೇ ಮತದಾನ ಆರಂಭವಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಪೀಣ್ಯ ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಎಲ್ಲೆಂದರಲ್ಲಿ ಬಿಸಾಕಿರುವುದು ಕಂಡು ಬಂದಿದೆ.

    ಹೌದು. ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಬಿಸಾಡಲಾಗಿದೆ. ಮತದಾನ ಮಾಡಿದ ಬಳಿಕ ಜನ ಎಲ್ಲೆಂದರಲ್ಲಿ ಹಾಕಿಹೋಗಿದ್ದಾರೆ. ಮತದಾನ ಮಾಡಲು ಒಬ್ಬ ವ್ಯಕ್ತಿಗೆ ಒಂದು ಗ್ಲೌಸ್ ವಿತರಣೆ ಮಾಡಲಾಗುತ್ತಿದೆ. ಆದರೆ ಸಿಬ್ಬಂದಿ ಮತದಾರರಲ್ಲಿ ಜಾಗೃತಿ ಮೂಡಿಸಿಲ್ಲ. ಹೀಗಾಗಿ ಜನ ಮತದಾನ ಮಾಡಿ ಬಳಿಕ ಗ್ಲೌಸ್ ಗಳನ್ನು ಸಿಕ್ಕ ಸಿಕ್ಕ ಕಡೆ ಬಿಸಾಡಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಡಸ್ಟ್‍ಬಿನ್ ವ್ಯವಸ್ಥೆ ಮಾಡಬೇಕಿದೆ.

    ಪೀಣ್ಯದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮತದಾನ ಕೇಂದ್ರದಲ್ಲಿ ಆಗ್ಗಾಗ್ಗೆ ಸ್ಯಾನಿಟೈಸರ್ ಮಾಡಲಾಗುತ್ತಿದೆ. ಮತದಾನ ಕೇಂದ್ರದ ಹೊರಗೆ, ಕಾರಿಡಾರ್ ನಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ. ಬಿಬಿಎಂಪಿ ಸಿಬ್ಬಂದಿ ಪ್ರತೀ ಗಂಟೆಗೊಮ್ಮೆ ಸ್ಯಾನಿಟೈಸ್ ಮಾಡ್ತಿದ್ದಾರೆ.

  • ಪರೀಕ್ಷಾ ಕೇಂದ್ರದ ಸಿಬ್ಬಂದಿಗೆ 1 ಸಾವಿರ ಗ್ಲೌಸ್ ನೀಡಿದ ಶಾಸಕ ಪುಟ್ಟರಂಗ ಶೆಟ್ಟಿ

    ಪರೀಕ್ಷಾ ಕೇಂದ್ರದ ಸಿಬ್ಬಂದಿಗೆ 1 ಸಾವಿರ ಗ್ಲೌಸ್ ನೀಡಿದ ಶಾಸಕ ಪುಟ್ಟರಂಗ ಶೆಟ್ಟಿ

    – ನಾಳೆ ವಿದ್ಯಾರ್ಥಿಗಳಿಗೆ 5 ಸಾವಿರ ಮಾಸ್ಕ್ ವಿರತಣೆ

    ಚಾಮರಾಜನಗರ: ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಚಾಮರಾಜನಗರ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಅಲ್ಲದೆ ಕೊಠಡಿ ಶಿಕ್ಷಕರಿಗೆ ಒಂದು ಸಾವಿರ ಗ್ಲೌಸ್ ನೀಡಿದ್ದಾರೆ.

    ಇದೇ ವೇಳೆ ಚಾಮರಾಜನಗರದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಚೆನ್ನಾಗಿ ಬರೆಯುವಂತೆ ಶಾಸಕರು ಸಲಹೆ ನೀಡಿದ್ದಾರೆ. ಭಯವಿಲ್ಲದೆ ಪರೀಕ್ಷೆ ಬರೆಯುವಂತೆ ಧೈರ್ಯ ತುಂಬಿದ್ದಾರೆ. ಅಲ್ಲದೆ ಕೊಠಡಿ ಶಿಕ್ಷಕರಿಗೆ ಒಂದು ಸಾವಿರ ಗ್ಲೌಸ್ ನೀಡಿದ್ದಾರೆ.

    ಚಾಮರಾಜನಗರ ಕ್ಷೇತ್ರದ ಎಲ್ಲಾ ಪರೀಕ್ಷಾ ಸಿಬ್ಬಂದಿಗೆ ಗ್ಲೌಸ್ ನೀಡಿದ್ದಾರೆ. ನಾಳೆಯಿಂದ ವಿಧ್ಯಾರ್ಥಿಗಳಿಗೆ 5 ಸಾವಿರ ಮಾಸ್ಕ್ ವಿತರಿಸುತ್ತೇನೆಂದು ಭರಸವೆ ಕೂಡ ನೀಡಿದ್ದಾರೆ.

    ಕೊರೊನಾ ಮಹಾಮಾರಿಯ ನರ್ತನದ ನಡುವೆಯೇ ರಾಜ್ಯದಲ್ಲಿ ಇಂದಿನಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಿದೆ. ಕೊರೊನಾದಿಂದ ಮೂರು ತಿಂಗಳಿನಿಂದ ಮುಂದೂಡಿಕೆಯಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂದಿನಿಂದ ಜುಲೈ 4ರವರೆಗೆ ನಡೆಯಲಿದೆ.

  • ಮಾಸ್ಕ್ ಅಲ್ಲ ಗ್ಲೌಸ್ ಧರಿಸಿ – ನಟಿ ರಾಗಿಣಿಯಿಂದ ಉಚಿತ ಗ್ಲೌಸ್ ವಿತರಣೆ

    ಮಾಸ್ಕ್ ಅಲ್ಲ ಗ್ಲೌಸ್ ಧರಿಸಿ – ನಟಿ ರಾಗಿಣಿಯಿಂದ ಉಚಿತ ಗ್ಲೌಸ್ ವಿತರಣೆ

    ಬೆಂಗಳೂರು: ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಜನರ ಸಹಾಯಕ್ಕೆ ಧಾವಿಸಿದ್ದು, ಜನರಿಗೆ ಉಚಿತ ಗ್ಲೌಸ್‍ಗಳನ್ನು ವಿತರಿಸುತ್ತಿದ್ದಾರೆ.

    ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ರಾಗಿಣಿ ರಸ್ತೆಗೆ ಇಳಿದಿದ್ದಾರೆ. ಅಲ್ಲದೆ ಕೊರೊನಾಯಿಂದ ತಪ್ಪಿಸಿಕೊಳ್ಳಲು ಮಾಸ್ಕ್ ಅಲ್ಲ ಗ್ಲೌಸ್‍ಗಳನ್ನು ಧರಿಸಿ ಎಂದು ಹೇಳುವ ಮೂಲಕ ಜನರಿಗೆ ಉಚಿತವಾಗಿ ಕೈ ಗ್ಲೌಸ್‍ಗಳನ್ನು ವಿತರಿಸುತ್ತಿದ್ದಾರೆ. ಯಾವುದಾದರೂ ವಸ್ತುಗಳನ್ನು ಮುಟ್ಟಿದ್ದರೆ ಅದರಿಂದ ಕೊರೊನಾ ಬರುತ್ತೆ. ಹಾಗಾಗಿ ಮಾಸ್ಕ್ ಬದಲು ಕೈ ಗ್ಲೌಸ್‍ಗಳನ್ನು ಕಡ್ಡಾಯವಾಗಿ ಧರಿಸಿ ಎಂದು ರಾಗಿಣಿ ಜನರ ಬಳಿ ಮನವಿ ಮಾಡಿಕೊಳ್ಳುತ್ತಿದ್ದಾರೆ.

    ರಾಗಿಣಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ, ಮಾಸ್ಕ್ ಬದಲು ಗ್ಲೌಸ್‍ಗಳನ್ನು ಧರಿಸಿ. ಕಾಯಿಲೆ ಬಂದವರು ಮಾಸ್ಕ್ ಗಳನ್ನು ಧರಿಸುತ್ತಾರೆ. ಆದರೆ ನಾವು ನಮ್ಮ ಕೈಗಳಿಂದ ಎಲ್ಲವನ್ನು ಮುಟ್ಟುತ್ತೇವೆ. ಹಾಗಾಗಿ ನಾವು ನಮ್ಮ ಕೈಗಳನ್ನು ಕ್ಲೀನ್ ಆಗಿ ಇಟ್ಟುಕೊಳ್ಳಬೇಕು. ಕೊರೊನಾ ವೈರಸ್‍ನಿಂದ ದೂರವಿರಲು ಎಲ್ಲರೂ ಮಾಸ್ಕ್ ಬದಲು ಗ್ಲೌಸ್‍ಗಳನ್ನು ಧರಿಸಿ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ಈ ಹಿಂದೆ ಆರೋಗ್ಯ ಇಲಾಖೆ ಜನರಿಗೆ ಕೊರೊನಾ ಬಗ್ಗೆ ಎಚ್ಚರಿಕೆ ನೀಡಿತ್ತು. ಜನರು ತಮ್ಮ ಕೈಗಳನ್ನು ಶುಚಿಯಾಗಿಟ್ಟುಕೊಳ್ಳಿ. ತಮ್ಮ ಕೈಯಿಂದ ಕಣ್ಣು, ಬಾಯಿ ಹಾಗೂ ಮೂಗನ್ನು ಪದೇ ಪದೇ ಮುಟ್ಟುವುದನ್ನು ಕಡಿಮೆ ಮಾಡಿಕೊಳ್ಳಿ. ಈ ರೀತಿ ಮಾಡುವ ಮೊದಲು ನಿಮ್ಮ ಕೈಗಳನ್ನು ಸೋಪ್ ಅಥವಾ ಸ್ಯಾನಿಟೈಸರ್ ಯಿಂದ ತೊಳೆಯಬೇಕು. ಜೊತೆಗೆ ಮಾಸ್ಕ್ ಧರಿಸಲೇಬೇಕು ಎಂದು ಆರೋಗ್ಯ ಇಲಾಖೆ ಹೇಳಿತ್ತು.