Tag: Goa Liquor

  • ಉಡುಪಿ| ರಾಶಿ ರಾಶಿ ಗೋವಾ ಮದ್ಯ ಬಾಟಲಿಗಳು ವಶ

    ಉಡುಪಿ| ರಾಶಿ ರಾಶಿ ಗೋವಾ ಮದ್ಯ ಬಾಟಲಿಗಳು ವಶ

    ಉಡುಪಿ: ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ರಾಶಿ ರಾಶಿ ಗೋವಾ ಮದ್ಯ (Goa Liquor) ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.

    ಉಡುಪಿ (Udupi) ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ, ಅವಿನಾಶ್ ಮಲ್ಲಿ ಎಂಬವರಿಗೆ ಸಂಬಂಧಿಸಿದ ಎರಡು ಮನೆಗಳಿಂದ ಅಪಾರ ಮದ್ಯ ಜಪ್ತಿ ಮಾಡಿದ್ದಾರೆ. ಲಕ್ಷಾಂತರ ಮೌಲ್ಯದ 240 ಕ್ಕೂ ಅಧಿಕ ಬಾಕ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.

    ಗೋವಾದಿಂದ ಅಕ್ರಮವಾಗಿ ತರಿಸಿಕೊಂಡಿರುವ ಮದ್ಯವನ್ನು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದರು. ಅವಿನಾಶ್ ಎಂಬಾತ ಮನೆಯಿಂದಲೇ ಲಿಕ್ಕರ್ ವ್ಯವಹಾರ ನಡೆಸುತ್ತಿದ್ದ.

    ಅಬಕಾರಿ ಇಲಾಖೆ ಎಡಿಸಿ ಬಿಂದುಶ್ರೀ ಮಾತನಾಡಿ, ಒಟ್ಟು 15 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದೇವೆ. ಕಾರ್ಕಳ ತಾಲೂಕು ಬೋಳ ಗ್ರಾಮದ ಅಬ್ಯನಡ್ಕದಲ್ಲಿ ಕಾರ್ಯಾಚರಣೆಯಾಗಿದೆ. ಅವಿನಾಶ್ ಮಲ್ಲಿ ಮನೆಗೆ ದಾಳಿ ಮಾಡಿದ್ದೇವೆ. ಬರಿಮಾರು ಗುತ್ತು ಎಂಬ ಮನೆಗೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ದಾಳಿಯಲ್ಲಿ 272 ಪೆಟ್ಟಿಗೆ ಮದ್ಯ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

    ದಾಳಿಯಲ್ಲಿ ಒಟ್ಟು 2360.850 ಲೀಟರ್ ಮದ್ಯ ಜಪ್ತಿ ಮಾಡಿದ್ದೇವೆ. ವಿವಿಧ ಬ್ರ‍್ಯಾಂಡ್‌ಗಳ ಗೋವಾದ ಲಿಕ್ಕರ್‌ಗಳನ್ನು ಅಕ್ರಮ ದಾಸ್ತಾನು ಮಾಡಲಾಗಿತ್ತು. ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಾದ ಆದಿ ಉಡುಪಿಯ ಪ್ರಶಾಂತ್ ಸುವರ್ಣ, ಬೋಳದ ಅವಿನಾಶ್ ಮಲ್ಲಿ ತಲೆಮರೆಸಿಕೊಂಡಿದ್ದಾರೆ.

  • ಗೋವಾದಿಂದ ಟ್ರಾನ್ಸ್‌ಫಾರ್ಮರ್‌ನಲ್ಲಿ ಮದ್ಯ ಸಾಗಾಟ – ಆರೋಪಿ ಅರೆಸ್ಟ್

    ಗೋವಾದಿಂದ ಟ್ರಾನ್ಸ್‌ಫಾರ್ಮರ್‌ನಲ್ಲಿ ಮದ್ಯ ಸಾಗಾಟ – ಆರೋಪಿ ಅರೆಸ್ಟ್

    ಬೆಳಗಾವಿ: ನಕಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಸೃಷ್ಟಿಸಿ ಅದರಲ್ಲಿ ಗೋವಾ ಮದ್ಯದ (Goa Liquor) ಬಾಕ್ಸ್‌ಗಳನ್ನು ತುಂಬಿಕೊಂಡು ಬರುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆ (Excise Department) ಅಧಿಕಾರಿಗಳು ಹಿರೇಬಾಗೇವಾಡಿ ಬಳಿ ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಶ್ರೀಧರ್ ಎಂದು ಗುರುತಿಸಲಾಗಿದೆ. ಆರೋಪಿ ಐಷರ್ ವಾಹನದಲ್ಲಿ ನೋಡಲು ಟ್ರಾನ್ಸ್‌ಫಾರ್ಮರ್‌ನಂತೆ ಕಾಣುವ ಎರಡು ಪೆಟ್ಟಿಗೆಯನ್ನು ಸಿದ್ಧಪಡಿಸಿದ್ದಾನೆ. ಬಳಿಕ ಅದರಲ್ಲಿ ಗೋವಾ ಮದ್ಯವನ್ನು ತುಂಬಿಸಿಕೊಂಡು ಬಂದಿದ್ದಾನೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 20 ವರ್ಷಗಳ ಹಿಂದಿನ ಕೊಲೆ ಪ್ರಕರಣ – ಮೃತ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!

    ಕಳೆದ 15 ದಿನಗಳಿಂದ ಈ ರೀತಿ ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಇತ್ತು. ನಮ್ಮ ಸಿಬ್ಬಂದಿ ವಾಹನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದರು. ಈಗ ಖಚಿತ ಮಾಹಿತಿ ಮೇರೆಗೆ ವಾಹನವನ್ನು ವಶಪಡಿಸಿಕೊಂಡಿದ್ದೇವೆ. ಗೋವಾದಿಂದ ಕರ್ನಾಟಕ ಮಾರ್ಗವಾಗಿ ತೆಲಂಗಾಣಕ್ಕೆ (Telangana) ಈ ಮದ್ಯ ಸಾಗಾಟ ಆಗುತ್ತಿರುವ ಬಗ್ಗೆ ಮಾಹಿತಿ ಇದೆ ಎಂದು ಅಬಕಾರಿ ಜಂಟಿ ಆಯುಕ್ತ ಮಂಜುನಾಥ ಹೇಳಿದ್ದಾರೆ.

    ಕಳೆದ ಬಾರಿ ಫ್ಲೈವುಡ್ ಶೀಟ್‍ನಲ್ಲಿ ಮದ್ಯ ಇಟ್ಟು ಸಾಗಾಟ ಮಾಡಿದ್ದರು. ಇದು ಎಲ್ಲಿಂದ ಖರೀದಿ ಆಗಿದೆ ಎನ್ನುವುದು ಕಂಡು ಹಿಡಿಯುವುದು ಕಷ್ಟ. ವಾಹನವನ್ನು ಜಿಪಿಎಸ್ ಮೂಲಕ ಆನ್ ಆಂಡ್ ಆಫ್ ಮಾಡುವ ಮೂಲಕ ಆರೋಪಿಗಳಿಗೆ ಅಧಿಕಾರಿಗಳಿಗೆ ಶಾಕ್ ನೀಡಿದ್ದರು. ನಾವು ವಾಹನ ಹಿಡಿದ ತಕ್ಷಣ ಜಿಪಿಎಸ್ ಮೂಲಕ ವಾಹನವನ್ನು ಆಫ್ ಮಾಡಿದ್ದರು. ನಂತರ ಜಿಪಿಎಸ್ ಡಿಸ್ಕ್ ಕನೆಕ್ಟ್ ಮಾಡಿ ವಾಹನ ಜಪ್ತಿ ಮಾಡಿದ್ದೆವು. ಇದರ ಹಿಂದೆ ಯಾರಿದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆಸುತ್ತೇವೆ. ಅಬಕಾರಿ ಡಿಸಿ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ FIR ದಾಖಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KSRTC ಬಸ್‍ನಲ್ಲಿ 1.27 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ವಶ – ಇಬ್ಬರ ಬಂಧನ

    KSRTC ಬಸ್‍ನಲ್ಲಿ 1.27 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ವಶ – ಇಬ್ಬರ ಬಂಧನ

    ಕಾರವಾರ: ಕೆಎಸ್‌ಆರ್‌ಟಿಸಿ ಬಸ್‍ನಲ್ಲಿ ಸಾಗಿಸುತ್ತಿದ್ದ 1.27 ಲಕ್ಷ ರೂ. ಮೌಲ್ಯದ ಗೋವಾ ಮದ್ಯವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

    ಸಾಗರ-ಪಣಜಿ ಕೆಎಸ್‌ಆರ್‌ಟಿಸಿ ಬಸ್‍ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚೆಕ್‌ ಪೋಸ್ಟ್‌ನಲ್ಲಿ ನಡೆದಿದೆ. ಜೊತೆಗೆ ಆರೋಪಿಗಳ ಬಳಿ ಇದ್ದ 1.27 ಲಕ್ಷ ರೂ. ಮೌಲ್ಯದ ವಿವಿಧ ಬ್ರಾಂಡ್‍ನ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಒಂದು ಲಕ್ಷ ಉದ್ಯೋಗ ಸೃಷ್ಟಿಸುವ FMCG ಕ್ಲಸ್ಟರ್ ಯೋಜನೆ ಇದೇ ವರ್ಷ ಪ್ರಾರಂಭ: ಬೊಮ್ಮಾಯಿ

    ಶಿವಮೊಗ್ಗ ಮೂಲದ 35 ವರ್ಷದ ನಾಗರಾಜ, ಇಪ್ಪತೈದು ವರ್ಷದ ಸಾಗರ್ ಬಂಧಿತರಾಗಿದ್ದು, ಗೋವಾದಿಂದ ಶಿವಮೊಗ್ಗಕ್ಕೆ ಬ್ಯಾಗ್‍ನಲ್ಲಿ ವಿವಿಧ ಬ್ರಾಂಡ್‍ನ ಮದ್ಯವನ್ನು ತುಂಬಿಕೊಂಡು ಬಸ್‍ನಲ್ಲಿ ತೆರಳುತಿದ್ದರು. ಈ ವೇಳೆ ತಪಾಸಣೆ ನಡೆಸಿದ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಮದ್ಯವನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಕಾರವಾರ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಧ್ವನಿವರ್ಧಕಗಳ ವಿಚಾರವಾಗಿ ಬಿಜೆಪಿ ರಾಜಕೀಯ ಮಾಡ್ತಿದೆ: ಸಂಜಯ್ ರಾವತ್

  • ಇಟ್ಟಿಗೆಗಳ ಮಧ್ಯೆ ಸಾಗಿಸುತ್ತಿದ್ದ 15 ಲಕ್ಷ ಮೌಲ್ಯದ ಗೋವಾ ಮದ್ಯ ವಶ

    ಇಟ್ಟಿಗೆಗಳ ಮಧ್ಯೆ ಸಾಗಿಸುತ್ತಿದ್ದ 15 ಲಕ್ಷ ಮೌಲ್ಯದ ಗೋವಾ ಮದ್ಯ ವಶ

    – ಮಧ್ಯಪ್ರದೇಶದ ಇಬ್ಬರು ಅರೆಸ್ಟ್

    ಚಿಕ್ಕೋಡಿ: ಲಾರಿಯಲ್ಲಿ ಇಟ್ಟಿಗೆಗಳ ಮಧ್ಯೆ ಅಕ್ರಮವಾಗಿ ಗೋವಾ ರಾಜ್ಯದಿಂದ ಗುಜರಾತ್ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ 15 ಲಕ್ಷ ರೂ. ಮೌಲ್ಯದ 600 ಅಕ್ರಮ ಮದ್ಯದ ಬಾಟಲಿಗಳನ್ನು ಚಿಕ್ಕೋಡಿ ಉಪ ವಿಭಾಗದ ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಜೊತೆಗೆ ಇಬ್ಬರನ್ನು ಅರೆಸ್ಟ್ ಮಾಡಿದ್ದು, ಮಧ್ಯಪ್ರದೇಶ ರಾಜ್ಯದ ಇಂದೋರಿನ ಧನಪಾಲಸಿಂಗ್ ತೋಮರ್, ರಾಜು ಕಂಠಿ ಬಂಧಿತರು. ಆರೋಪಿಗಳು ಲಾರಿಯಲ್ಲಿ ಇಟ್ಟಿಗೆಗಳ ಮಧ್ಯೆ ಮದ್ಯದ ಬಾಟಲಿಗಳ ಬಾಕ್ಸ್ ಗಳನ್ನು ತುಂಬಿ ಸಾಗಿಸುತ್ತಿದ್ದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ರಾಧಾನಗರ ರಸ್ತೆ ಅಂಡರ್ ಪಾಸ್ ತಿರುವಿನ ಹತ್ತಿರ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೋಲಿಸರು ದಾಳಿ ನಡೆಸಿದ್ದಾರೆ.

    ಜಪ್ತಾದ ಗೋವಾ ರಾಜ್ಯದ 15 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನದ ಮೌಲ್ಯ 20 ಲಕ್ಷ ಹೀಗೆ ಒಟ್ಟು 35 ಲಕ್ಷ್ಯದ ಮೌಲ್ಯ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಿಕ್ಕೋಡಿ ಉಪವಿಭಾಗ ಅಬಕಾರಿ ಉಪ ಅಧೀಕ್ಷಕರು ವಿಜಯಕುಮಾರ ಹೀರೆಮಠ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.