Tag: God Idol

  • ದಲಿತ ಬಾಲಕ ದೇವರ ಮೂರ್ತಿ ಮುಟ್ಟಿದ್ದಕ್ಕೆ 60 ಸಾವಿರ ರೂ. ದಂಡ ಹಾಕಿದ ಗ್ರಾಮಸ್ಥರು

    ದಲಿತ ಬಾಲಕ ದೇವರ ಮೂರ್ತಿ ಮುಟ್ಟಿದ್ದಕ್ಕೆ 60 ಸಾವಿರ ರೂ. ದಂಡ ಹಾಕಿದ ಗ್ರಾಮಸ್ಥರು

    ಕೋಲಾರ: (Kolara) ದೇವರ ಮೆರವಣಿಗೆ ವೇಳೆ ದಲಿತ ಸಮುದಾಯದ (Dalit Community) ಬಾಲಕ ಮೂರ್ತಿ ಮುಟ್ಟಿದನೆಂದು ಆ ಕುಟುಂಬಕ್ಕೆ 60 ಸಾವಿರ ರೂಪಾಯಿ ದಂಡ ಹಾಕಲಾಗಿದೆ.

    ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಲ್ಲೇರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಶೋಭಾ ಹಾಗೂ ರಮೇಶ್ ದಂಪತಿ ಕಾಲೋನಿಯಲ್ಲಿ ವಾಸ ಮಾಡುತ್ತಿದ್ದು, ಇವರಿಗೆ ದಂಡ ಹಾಕಲಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ- ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದ ಸ್ಥಳ ಮಹಜರು

    ಕಳೆದ 10 ದಿನಗಳ ಹಿಂದೆ ಗ್ರಾಮದ ಭೂತಮ್ಮ ದೇವರ ಮೂರ್ತಿ ಮೆರವಣಿಗೆ ವೇಳೆ, 15 ವರ್ಷದ ಬಾಲಕ ಚೇತನ್ ದೇವರ ಉತ್ಸವ ಮೂರ್ತಿಗಳನ್ನ ಮುಟ್ಟಿದ್ದಾನೆ. ದಲಿತರು ಮೂರ್ತಿ ಮುಟ್ಟಿದ್ದಕ್ಕೆ ಮೈಲಿಗೆಯಾಗಿದೆ. ಮತ್ತೊಮ್ಮೆ ಬಣ್ಣ ಬಳಿಸಬೇಕು. ಹೀಗಾಗಿ ದಂಡ ಕಟ್ಟಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ದಂಡ ಕಟ್ಟಲು ಆಗದಿದ್ದರೆ, ಊರು ಬಿಟ್ಟು ಹೋಗುವಂತೆ ಎಚ್ಚರಿಕೆ ಕೊಟ್ಟಿದ್ದಾರೆ. ನೊಂದ ಕುಟುಂಬ ಮಾಸ್ತಿ ಪೊಲೀಸ್ ಠಾಣೆಯಲ್ಲಿ ವೆಂಕಟೇಶ್ ಹಾಗೂ ನಾರಾಯಣಸ್ವಾಮಿ ಸೇರಿದಂತೆ 8 ಮಂದಿಯ ವಿರುದ್ಧ ದೂರು ನೀಡಿದ್ದಾರೆ. ಆದರೆ ಗ್ರಾಮಸ್ಥರು ಆರೋಪ ತಳ್ಳಿ ಹಾಕಿದ್ದಾರೆ. ಇದನ್ನೂ ಓದಿ: ಪರೀಕ್ಷೆಗೆ ಚೆನ್ನಾಗಿ ಓದಿಲ್ಲ ಅಂತ ಕಬ್ಬಿಣದ ರಾಡ್‌ನಿಂದ ಥಳಿಸಿದ ಅಣ್ಣ – ಸಹೋದರ ಸಾವು

    Live Tv
    [brid partner=56869869 player=32851 video=960834 autoplay=true]

  • 10 ಲಕ್ಷ ಮೌಲ್ಯದ ನೋಟುಗಳಿಂದ ದೇವಿಗೆ ವಿಶೇಷ ಅಲಂಕಾರ

    10 ಲಕ್ಷ ಮೌಲ್ಯದ ನೋಟುಗಳಿಂದ ದೇವಿಗೆ ವಿಶೇಷ ಅಲಂಕಾರ

    ಮೈಸೂರು: ದೀಪಾವಳಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ನಾಡಿನೆಲ್ಲೆಡೆ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದ್ದು, ನಗರದ ಅಮೃತೇಶ್ವರ ದೇಗುಲದಲ್ಲಿ ಬರೋಬ್ಬರಿ ಹತ್ತು ಲಕ್ಷ ರೂಪಾಯಿಯ ವಿವಿಧ ಬಗೆಯ ನೋಟುಗಳಿಂದ ದೇವಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ.

    ದೀಪಾವಳಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ನಗರದ ಅಮೃತೇಶ್ವರಿ ದೇಗುಲದ ಶ್ರೀ ಬಾಲಾ ತ್ರಿಪುರ ಸುಂದರಿ ದೇವಿಗೆ ಒಂದು ರೂ.ನಿಂದ ಹಿಡಿದು ಎರಡು ಸಾವಿರ ರೂಪಾಯಿವರೆಗಿನ ನೋಟಿನ ಅಲಂಕಾರವನ್ನು ಮಾಡಲಾಗಿತ್ತು. ಸುಮಾರು 10 ಲಕ್ಷ ರೂ. ಮೌಲ್ಯದ 1, 5, 10, 20, 50, 100, 200, 500 ಹಾಗೂ 2,000 ಮುಖಬೆಲೆ ನೋಟುಗಳಿಂದ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಈ ಅಲಂಕಾರವನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾಗಿದ್ದಾರೆ.

    ದೀಪಾವಳಿಯ ದಿನ ಲಕ್ಷ್ಮೀ ದೇವಿಗೆ ವಿಶೇಷ ಅಲಂಕಾರ ಮಾಡುವುದು ಸರ್ವೇ ಸಾಮಾನ್ಯ. ಆದರೆ ಅಮೃತೇಶ್ವರ ದೇವಾಲಯದ ಸಿಬ್ಬಂದಿ ಶ್ರದ್ಧಾ-ಭಕ್ತಿಯಿಂದ ದೇವಿಗೆ ವಿಶಿಷ್ಟ ರೂಪದಲ್ಲಿ ನೋಟಿನ ಅಲಂಕಾರವನ್ನು ಮಾಡಿದ್ದಾರೆ. ಇವರ ಈ ಕಾರ್ಯಕ್ಕೆ ಭಕ್ತಾದಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಇತ್ತೀಚೆಗೆ ಮಧ್ಯಪ್ರದೇಶದ ರತ್ಲಂ ನಗರದ ಮಹಾಲಕ್ಷ್ಮೀ ದೇವಾಲಯದ ದೇವಿಗೆ ನಗದು, ಚಿನ್ನಾಭರಣ ಮತ್ತು ವಜ್ರಾಭರಣ ಸೇರಿದಂತೆ ಒಟ್ಟು 100 ಕೋಟಿ ರೂ.ನಲ್ಲಿ ಅಲಂಕಾರ ಮಾಡಿದ್ದರು. ಮಹಾಲಕ್ಷ್ಮೀ ದೇಗುಲಕ್ಕೆ ಇದೇ ಮೊದಲ ಬಾರಿಗೆ ಅದ್ಧೂರಿಯಾಗಿ ಅಲಂಕಾರ ಮಾಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ನಿವಾಸಿ, ನಾನು ಹಲವು ವರ್ಷಗಳಿಂದ ಇಲ್ಲಿಯ ಆಚರಣೆಯನ್ನು ನೋಡಿಕೊಂಡು ಬಂದಿದ್ದೇನೆ. ಈ ಮೊದಲು 6 ರಿಂದ 7 ಲಕ್ಷ ರೂ. ಮಾತ್ರ ಬಳಸಿ ದೇಗುಲವನ್ನು ಅಲಂಕಾರ ಮಾಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ 100 ಕೋಟಿ ರೂ.ನಲ್ಲಿ ಆಲಯವನ್ನು ಅಲಂಕರಿಸಲಾಗಿದೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇವಸ್ಥಾನದಲ್ಲಿ ದೇವರ ಮೂರ್ತಿಗೆ ವಾಮಾಚಾರದಿಂದ ದಿಗ್ಬಂಧನ ವಿಧಿಸಿ ಕಳ್ಳತನ

    ದೇವಸ್ಥಾನದಲ್ಲಿ ದೇವರ ಮೂರ್ತಿಗೆ ವಾಮಾಚಾರದಿಂದ ದಿಗ್ಬಂಧನ ವಿಧಿಸಿ ಕಳ್ಳತನ

    ಚಿಕ್ಕಮಗಳೂರು: ದೇವಸ್ಥಾನದಲ್ಲಿ ದೇವರಿಗೆ ವಾಮಾಚಾರ ಮಾಡಿ ಕಳ್ಳತನ ಮಾಡಿರುವ ವಿಚಿತ್ರ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

    ಇಲ್ಲಿನ ಇಂದಾವರ ಗ್ರಾಮದ ಚೌಡೇಶ್ವರಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಕಳ್ಳರು ದೇವಾಲಯದ ಸುತ್ತ ದಿಗ್ಬಂಧನ ಮಾಡಿ, ದೇವರ ಮೂರ್ತಿಯನ್ನು ತಂತಿಯಿಂದ ಸುತ್ತಿದ್ದಾರೆ. ದೇವಸ್ಥಾನದದಲ್ಲಿ ವಾಮಾಚಾರಕ್ಕೆ ಬಳಸಲಾಗಿರುವ ನಿಂಬೆಹಣ್ಣು, ಅರಿಶಿಣ, ಕುಂಕುಮ ಪತ್ತೆಯಾಗಿವೆ.

    ಕಳ್ಳರು ದೇವರ ಬೆಳ್ಳಿ ವಿಗ್ರಹ ಸೇರಿ ಇತರೆ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ನಡೆದಿದೆ.