Tag: Godhra train

  • ಗೋದ್ರಾ ರೈಲು ದಹನಕಾಂಡ – ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ದೋಷಿಗೆ ಜಾಮೀನು

    ಗೋದ್ರಾ ರೈಲು ದಹನಕಾಂಡ – ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ದೋಷಿಗೆ ಜಾಮೀನು

    ನವದೆಹಲಿ: ಗೋದ್ರಾ ರೈಲು ದಹನಕಾಂಡ(Godhra Train Burning Case) ಪ್ರಕರಣದಲ್ಲಿ ದೋಷಿಯಾಗಿ ಜೀವಾವಧಿ ಶಿಕ್ಷೆ ಅನುಭವಿಸ್ತಿದ್ದ ಓರ್ವ ಕೈದಿಗೆ ಸುಪ್ರೀಂಕೋರ್ಟ್(Supreme Court) ಜಾಮೀನು ಮಂಜೂರು ಮಾಡಿದೆ.

    ಗೋದ್ರಾ ರೈಲ್ವೇ ನಿಲ್ದಾಣದಲ್ಲಿ ಸಬರಮತಿ ಎಕ್ಸ್‌ಪ್ರೆಸ್‌(Sabarmati Express) ರೈಲಿನ ಎಸ್-6 ಬೋಗಿಗೆ ಬೆಂಕಿ ಹಚ್ಚಿದ ಕಾರಣ 56 ಕರಸೇವಕರು ಸಜೀವ ದಹನ ಆಗಿದ್ದರು. ಈ ಸಂದರ್ಭದಲ್ಲಿ ಬೋಗಿ ಮೇಲೆ ಕಲ್ಲು ತೂರಿದ್ದ ಫಾರೂಖ್ ಸೇರಿ ಹಲವರಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.

    ಕಳೆದ 17 ವರ್ಷಗಳಿಂದ ಜೈಲಲ್ಲಿದ್ದ ಫಾರೂಖ್ ಸೇರಿ ಹಲವರು ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸಿಜಿಐ ಚಂದ್ರಚೂಡ್‌ ನೇತೃತ್ವದ ಪೀಠ, 17 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದನ್ನು ಪರಿಗಣಿಸಿ ಫಾರೂಖ್‍ಗೆ ಜಾಮೀನು ಮಂಜೂರು ಮಾಡಿದೆ. ಉಳಿದವರ ಅರ್ಜಿಗಳ ಬಗ್ಗೆ ಶೀಘ್ರವೇ ನಿರ್ಣಯ ತೆಗೆದುಕೊಳ್ಳುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಇದನ್ನೂ ಓದಿ: ಚೀನಾ ತಲುಪಬಲ್ಲ ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ-5 ಕ್ಷಿಪಣಿ ಪ್ರಯೋಗ ಯಶಸ್ವಿ

    ಇದಕ್ಕೂ ಮೊದಲು ದೋಷಿಗಳಿಗೆ ಜಾಮೀನು ನೀಡಬಾರದು ಎಂದು ಗುಜರಾತ್ ಸರ್ಕಾರ ಆಕ್ಷೇಪಣೆ ಸಲ್ಲಿಸಿತ್ತು. ಗುಜರಾತ್ ಪರವಾಗಿ ಸಾಲಿಸಿಟರಲ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು.

    2002 ಫೆ.27 ರಂದು ಸಾಬರಮತಿ ಎಕ್ಸ್‌ಪ್ರೆಸ್‌ ರೈಲಿನ ಬೆಂಕಿ ಹಚ್ಚಿದ್ದ ಪರಿಣಾಮ 59 ಮಂದಿ ಕರ ಸೇವಕರು ಸಾವನ್ನಪ್ಪಿದ್ದರು. ಈ ಘಟನೆಯ ಮರು ದಿನ ಫೆ.28 ರಿಂದ ಮಾರ್ಚ್‌ 31ರವರೆಗೆ ಗುಜರಾತ್‌ನ ಅನೇಕ ಕಡೆಗಳಲ್ಲಿ ಕೋಮು ಗಲಭೆ ನಡೆದು 1,200 ಮಂದಿ ಸಾವನ್ನಪ್ಪಿದ್ದರು.

    Live Tv
    [brid partner=56869869 player=32851 video=960834 autoplay=true]

  • ಗೋಧ್ರಾ ಹತ್ಯಾಕಾಂಡ: 11 ದೋಷಿಗಳ ಗಲ್ಲು ಶಿಕ್ಷೆ ಜೀವಾವಧಿಯಾಗಿ ಮಾರ್ಪಾಡು

    ಗೋಧ್ರಾ ಹತ್ಯಾಕಾಂಡ: 11 ದೋಷಿಗಳ ಗಲ್ಲು ಶಿಕ್ಷೆ ಜೀವಾವಧಿಯಾಗಿ ಮಾರ್ಪಾಡು

    ಅಹಮದಾಬಾದ್: ಗೋಧ್ರಾ ಹತ್ಯಾಕಾಂಡ ಪ್ರಕರಣದಲ್ಲಿ 11 ದೋಷಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಮಾರ್ಪಾಡಿಸಿ ಗುಜರಾತ್ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.

    2011ರ ಫೆಬ್ರವರಿಯಲ್ಲಿ ವಿಶೇಷ ನ್ಯಾಯಾಲಯ(ಎಸ್‍ಐಟಿ) 11 ದೋಷಿಗಳಿಗೆ ಗಲ್ಲು ಶಿಕ್ಷೆ ಮತ್ತು 31 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಮಾರ್ಪಾಡುಗೊಳಿಸಿದ ನ್ಯಾಯಾಲಯ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿ ಸೋಮವಾರ ತನ್ನ ತೀರ್ಪು ಪ್ರಕಟಿಸಿದೆ.

    ಎಸ್‍ಐಟಿ ಪ್ರಕರಣದಿಂದ 63 ಜನರನ್ನು ಕೈಬಿಟ್ಟದ್ದನ್ನು ಪ್ರಶ್ನಿಸಿ ಗುಜರಾತ್ ಸರ್ಕಾರ ಸಲ್ಲಿಸಿದ್ದ ಮೇಲನವಿಯನ್ನು ನ್ಯಾ. ಎಎಸ್ ದಾವೆ ಮತ್ತು ಜಿಆರ್ ಉದಹರಿ ನೇತೃತ್ವದ ದ್ವಿಸದಸ್ಯ ಪೀಠ ವಜಾಗೊಳಿಸಿದೆ.

    ಇದೇ ವೇಳೆ 2002 ಗಲಭೆ ನಿಯಂತ್ರಿಸಲು ರಾಜ್ಯ ಸರ್ಕಾರ ಮತ್ತು ರೈಲ್ವೇ ಸಚಿವಾಲಯ ವಿಫಲವಾಗಿದೆ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಇದೇ ವೇಳೆ ಮೃತಪಟ್ಟ ಸದಸ್ಯರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಧನವನ್ನು ವಿತರಿಸುವಂತೆ ರಾಜ್ಯ ಸರ್ಕಾರಕ್ಕೆ ಮತ್ತು ರೈಲ್ವೇಗೆ ಸೂಚಿಸಿದೆ.

    ಏನಿದು ಪ್ರಕರಣ?
    2002ರ ಫೆಬ್ರವರಿ 22 ರಂದು ಗೋದ್ರಾದಲ್ಲಿ ಸಬರಮತಿ ಎಕ್ಸ್ ಪ್ರೆಸ್ ನ ಎಸ್6 ಬೋಗಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಪರಿಣಾಮ ಆಯೋಧ್ಯೆಯಿಂದ ಗುಜರಾತ್ ಗೆ ಮರಳುತ್ತಿದ್ದ 59 ಕರಸೇವಕರು ಸಜೀವವಾಗಿ ದಹನವಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ಕೋರ್ಟ್ 11 ದೋಷಿಗಳಿಗೆ ಗಲ್ಲು ಶಿಕ್ಷೆ, 20 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪ್ರಕರಣದಿಂದ 63 ಮಂದಿಯನ್ನು ಖುಲಾಸೆಗೊಳಿಸಿತ್ತು. ಈ ಹತ್ಯಾಕಾಂಡದ ನಂತರ ಗುಜರಾತ್‍ನ ಅನೇಕ ಕಡೆಗಳಲ್ಲಿ ಕೋಮು ಗಲಾಭೆ ಸಂಭವಿಸಿ 1,200 ಕ್ಕೂ ಹೆಚ್ಚು ಮಂದಿಯ ಹತ್ಯೆಯಾಗಿತ್ತು.

    ಗುಜರಾತ್ ಸರ್ಕಾರ ಈ ಪ್ರಕರಣದ ತನಿಖೆಗಾಗಿ ರಚಿಸಿದ್ದ ನಾನಾವತಿ ಆಯೋಗವು, ಸಬರಮತಿ ಎಕ್ಸ್‍ಪ್ರೆಸ್ ರೈಲಿನ ಎಸ್-6 ಬೋಗಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಲ್ಲ. ಪೆಟ್ರೋಲ್ ಸುರಿದು ಬೋಗಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯನ್ನು ಸಲ್ಲಿಸಿತ್ತು.