Tag: Godhra train burning

  • ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು: ಬಿ.ಕೆ.ಹರಿಪ್ರಸಾದ್‌

    ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು: ಬಿ.ಕೆ.ಹರಿಪ್ರಸಾದ್‌

    – ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು ಎಂದ ಕಾಂಗ್ರೆಸ್‌ ನಾಯಕ

    ಬೆಂಗಳೂರು: ಅಯೋಧ್ಯೆಗೆ (Ayodhya Ram Mandir) ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂದು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ (B.K.Hariprasad) ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.

    ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ವಿರುದ್ಧ ಅಕ್ರಮ ಸಾರಾಯಿ, ಮಟ್ಕಾ, ಜೂಜಾಟ ಸೇರಿ 16 ಕೇಸ್‌ಗಳಿವೆ: ಹು-ಧಾ ಪೊಲೀಸ್ ಕಮಿಷನರ್

    ಮೋದಿಯ ಧರ್ಮವೇ ಇನ್ನೂ ಯಾವುದು ಅಂತ ಗೊತ್ತಾಗಿಲ್ಲ. ಅಮಿತ್ ಶಾ ಧರ್ಮವೇ ಯಾವುದೂ ಅಂತ ಗೊತ್ತಾಗಿಲ್ಲ. ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು. ನಮಗೆ ಮಾಹಿತಿ ಸಿಗ್ತಾ ಇದೆ. ಮಾಹಿತಿ ಇದ್ದೇ ಹೇಳ್ತಾ ಇದ್ದೇನೆ. ಇವು ನನ್ನ ವೈಯಕ್ತಿಕ ಹೇಳಿಕೆ, ಪಕ್ಷಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಕರಸೇವಕರ ಬಂಧನ ಕುರಿತು ಮಾತನಾಡಿ, ಹೋರಾಟಕ್ಕೂ ಅಪರಾಧಕ್ಕೂ ವ್ಯತ್ಯಾಸ ಇದೆ. ಕರಸೇವಕ ಅಂತಾ ಯಾವುದೋ ಅಪರಾಧ ಪ್ರಕರಣದಲ್ಲಿ ಇರುವವರನ್ನು ಹಾಗೆಯೇ ಬಿಡಲು ಆಗುವುದಿಲ್ಲ. ಬಂಧಿತನ ಮೇಲೆ 13 ಕೇಸ್ ಇದೆ. ಕಾನೂನುಬಾಹಿರ ಅಪರಾಧ ಮಾಡಿದ್ದಾರೆ. ಧರ್ಮದ ಹೆಸರಲ್ಲಿ ಏನೇನು ಕೆಲಸ ಮಾಡಿದ್ದಾರೆ ಅಂತಾ ಗೊತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಸೀದಿಯವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಳ್ಳುತ್ತಾರೆ, ದೇವಿ ದರ್ಶನಕ್ಕೆ ಸಮಯವಿಲ್ಲ: ಸಿದ್ದು ವಿರುದ್ಧ ಬಿಜೆಪಿ ಕಿಡಿ

    ಬಿಜೆಪಿಯವರು ಈಗ ಬೊಬ್ಬೆ ಹೊಡೆಯುತ್ತಿದ್ದಾರೆ. ಶಾಂತಿ ಕದಡುವ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲೇಬೇಕು. 30 ವರ್ಷ ಅವರನ್ನು ಬಿಟ್ಟಿದ್ದೇ ತಪ್ಪು. ಬಾಬರಿ ಮಸೀದಿ ಧ್ವಂಸ ಮಾಡಿದ್ದು, ಅಪರಾಧವೇ. ಎಲ್‌.ಕೆ.ಅಡ್ವಾಣಿಯವರ ಮೇಲೆ ಇರುವ ಕೇಸೇ ಇನ್ನೂ ಕ್ಲಿಯರ್ ಆಗಿಲ್ಲ. ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಇಷ್ಟು ದಿನ ಹಳೆ ಕೇಸ್ ಮೇಲೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಹಾಗೇ ಬಿಟ್ಟಿದ್ದೇ ತಪ್ಪು ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

    ಗೋದ್ರಾ ಹತ್ಯಾಕಾಂಡ ಕರಾಳತೆ
    2002 ರ ಫೆ.27 ರಂದು ಸಬರಮತಿ ಎಕ್ಸ್‌ಪ್ರೆಸ್‌ ರೈಲಿನ ಎಸ್‌-6 ಬೋಗಿಗೆ ಬೆಂಕಿ ಹಚ್ಚಿದ್ದರಿಂದ 59 ಕರಸೇವಕರ ಸಜೀವ ದಹನ ಆಗಿತ್ತು. ಗೋದ್ರಾ ರೈಲು ಹತ್ಯಾಕಾಂಡದ (Godhra Riots) ಬಳಿಕ ಗುಜರಾತ್‌ನ ಅನೇಕ ಕಡೆಗಳಲ್ಲಿ ಕೋಮು ಗಲಭೆ ಆಗಿತ್ತು. ಇದರಿಂದ 1,200 ಮಂದಿಯ ಹತ್ಯೆಯಾದರು. ಸತ್ತವರಲ್ಲಿ ಬಹುತೇಕರು ಮುಸ್ಲಿಮರಾಗಿದ್ದರು. ಇದನ್ನೂ ಓದಿ: ಹುಬ್ಬಳ್ಳಿ ಕರಸೇವಕರ ಬಂಧನ ಕೇಸ್‌ – ಹೈಕಮಾಂಡ್‌ಗೆ ವರದಿ ನೀಡಿದ ಕಾಂಗ್ರೆಸ್‌

    ರೈಲು ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರೆಂದು ಪರಿಗಣಿಸಲಾಗಿದ್ದ 31 ಜನರ ಪೈಕಿ 11 ಮಂದಿಗೆ ಮರಣದಂಡನೆ ಮತ್ತು ಇತರ 20 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು.

  • ದೇಶದಲ್ಲೇ ಅಪಖ್ಯಾತಿ ಹೊಂದಿದ್ದ ನಿಮ್ಮಿಂದ ಪಾಠ ಕಲಿಯಬೇಕಿಲ್ಲ – ಅಮಿತ್ ಶಾ ವಿರುದ್ಧ ಓವೈಸಿ ಕಿಡಿ

    ದೇಶದಲ್ಲೇ ಅಪಖ್ಯಾತಿ ಹೊಂದಿದ್ದ ನಿಮ್ಮಿಂದ ಪಾಠ ಕಲಿಯಬೇಕಿಲ್ಲ – ಅಮಿತ್ ಶಾ ವಿರುದ್ಧ ಓವೈಸಿ ಕಿಡಿ

    ಗಾಂಧಿನಗರ: ದೇಶದಲ್ಲೇ ನೀವು ಅಪಖ್ಯಾತಿ ಹೊಂದಿದ್ದೀರಿ. ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi), ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ಕೇಂದ್ರ ಸಚಿವ ಅಮಿತ್ ಶಾ  (Amit Shah) ಕಾಂಗ್ರೆಸ್ (Congress) ವಿರುದ್ಧ ಸತತವಾಗಿ ಹರಿಹಾಯುತ್ತಿದ್ದಾರೆ. ಶುಕ್ರವಾರ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ `2002ರಲ್ಲಿ ಹಿಂಸಾಚಾರದಲ್ಲಿ ತೊಡಗಿದ್ದ ಶಕ್ತಿಗಳಿಗೆ ಬಿಜೆಪಿ (BJP) ತಕ್ಕ ಪಾಠ ಕಲಿಸಿತು’ ಎಂದಿದ್ದ ಶಾ ಹೇಳಿಕೆ ವಿರುದ್ಧ ಓವೈಸಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್‌ನಲ್ಲಿ ಡೀಸೆಲ್‌ ಖಾಲಿ – ದಾರಿ ಮಧ್ಯೆ ಅಸುನೀಗಿದ ಬಡ ಜೀವ

    ಗುಜರಾತಿನ ಜುಹಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಅಮಿತ್ ಶಾ ಅವರೇ ನಮಗೆ ಏನು ಪಾಠ ಕಲಿಸಿದ್ದೀರಿ? ಬಿಲ್ಕಿಸ್‌ನ ಅತ್ಯಾಚಾರಿಗಳನ್ನು ಬಿಡುಗಡೆ ಮಾಡೋದು ಪಾಠವೇ? ಬಿಲ್ಕಿಸ್‌ನ 3 ವರ್ಷದ ಮಗಳನ್ನು ಕಣ್ಣೆದುರೇ ಹೊಡೆದು ಕೊಂದವರನ್ನು ಬಿಡುಗಡೆ ಮಾಡುವುದು ಪಾಠವೇ? ಎಹ್ಸಾನ್ ಜಾಫ್ರಿ ಕೊಲ್ಲುವಂತಹ ಪಾಠ ಕಲಿಸಿದ್ದೀರಿ, ಇವೆಲ್ಲವೂ ಪಾಠವೇ? ಇಡೀ ದೇಶದಲ್ಲಿ ನೀವು ಅಪಖ್ಯಾತಿ ಹೊಂದಿದ್ದೀರಿ. ದೆಹಲಿಯಲ್ಲಿ ಕೋಮುಗಲಭೆಗಳು ನಡೆಯುತ್ತಿವೆ. ನೀವು ಯಾವ ಪಾಠ ಕಲಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮುಗ್ಗರಿಸಿ ಬಿದ್ದ ದಿಗ್ವಿಜಯ್‌ ಸಿಂಗ್

    2022ರ ಕೋಮು ದ್ವೇಷದಿಂದ ಬೆಸ್ಟ್ ಬೇಕರಿಯನ್ನು ಸುಟ್ಟುಹಾಕಲಾಯಿತು. ಅದು ಸಾವಿರಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿತು. `ಮಿಸ್ಟರ್ ಅಮಿತ್ ಶಾ ಅವರೇ, ನಿಮ್ಮ ಇಂತಹ ಎಷ್ಟು ಪಾಠಗಳನ್ನು ನಾವು ನೆನಪಿನಲ್ಲಿಟ್ಟುಕೊಂಡಿದ್ದೇವೆ. ನಿಮ್ಮಿಂದ ಪಾಠ ಕಲಿಯೋದು ಏನೂ ಇಲ್ಲ. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಿದಾಗ ಮಾತ್ರ ನಿಜವಾದ ಶಾಂತಿ ಬಲಗೊಳ್ಳುತ್ತದೆ ಎಂದು ಸಲಹೆ ನೀಡಿದ್ದಾರೆ.

    ಅಧಿಕಾರದ ಅಮಲಿನಲ್ಲಿ ಇಂದು ಗೃಹ ಸಚಿವರು ನಾವು ತಕ್ಕ ಪಾಠ ಕಲಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ಅಧಿಕಾರ ಯಾವತ್ತೋ ಒಬ್ಬರ ಬಳಿಯೇ ಇರಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕುಟುಕಿದ್ದಾರೆ. ಇದನ್ನೂ ಓದಿ: BJP ಸರ್ಕಾರ ಕರ್ನಾಟಕಕ್ಕೆ `ಕಳಂಕಿತ ರಾಜ್ಯ’ ಅನ್ನೋ ಬಿರುದು ತಂದುಕೊಟ್ಟಿದೆ – ಡಿಕೆಶಿ

    ಗುಜರಾತ್ ವಿಧಾನಸಭಾ ಚುನಾವಣೆಯು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂ ತನ್ನ 14 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಉಳಿದ 93 ವಿಧಾನಸಭಾ ಸ್ಥಾನಗಳಿಗೆ 2ನೇ ಹಂತದ ಮತದಾನ ನಡೆಯಲಿದೆ.

    ಅಮಿತ್ ಶಾ ಹೇಳಿದ್ದೇನು?
    ಗುಜರಾತ್ ಚುನಾವಣಾ ಪ್ರಚಾರದ ರ‍್ಯಾಲಿಯಲ್ಲಿದ್ದ ಅಮಿತ್ ಶಾ, 2002ರ ಹಿಂಸಾಚಾರದ ಕುರಿತು ಮಾತನಾಡಿದ್ದರು. ಕಾಂಗ್ರೆಸ್ ಪಕ್ಷದ ಸರ್ಕಾರ ಇದ್ದಾಗ ಆಗಾಗ ಕೋಮುಗಲಭೆಗಳು ನಡೆಯುತ್ತಿದ್ದವು. ಆಗಾಗ ಕರ್ಫ್ಯೂ ಹೇರಲಾಗುತ್ತಿತ್ತು, ಕಾನೂನು ಸುವ್ಯವಸ್ಥೆ ಸರಿ ಇರಲಿಲ್ಲ. ಕಾಂಗ್ರೆಸ್ ಆಳ್ವಿಕೆ ಇದ್ದಾಗ ಕೋಮು ಹಿಂಸೆ ನಡೆಯುತ್ತಿತ್ತೆ ಇಲ್ಲವೇ ಹೇಳಿ? 2002ರಲ್ಲಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಹಿಂಸಾಚಾರದ ಪ್ರಯತ್ನ ನಡೆಯಿತು. ಆಗ ಅವರಿಗೆ ಸರಿಯಾದ ಪಾಠ ಕಲಿಸಲಾಯಿತು. ಅದಾದ ಬಳಿಕ ಒಂದೇ ಒಂದು ಕೋಮು ಹಿಂಸಾಚಾರ ನಡೆದಿಲ್ಲ. ಹಿಂಸೆಯಲ್ಲಿ ತೊಡಗಿದ್ದವರನ್ನು ಉಚ್ಚಾಟಿಸಲಾಯಿತು. ಕರ್ಫ್ಯೂರಹಿತ ಗುಜರಾತ್ ಅನ್ನು ಬಿಜೆಪಿ ಸ್ಥಾಪಿಸಿದೆ ಎಂದು ಶಾ ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]