Tag: Godhra train tragedy

  • ಗೋಧ್ರಾ ದುರಂತ ಆಧರಿತ ಸಿನಿಮಾ ‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಲಿದ್ದಾರೆ ಮೋದಿ

    ಗೋಧ್ರಾ ದುರಂತ ಆಧರಿತ ಸಿನಿಮಾ ‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಲಿದ್ದಾರೆ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ದೆಹಲಿಯ ಸಂಸತ್‌ ಸಂಕೀರ್ಣದಲ್ಲಿರುವ ಗ್ರಂಥಾಲಯದ ಬಾಲಯೋಗಿ ಆಡಿಟೋರಿಯಂ ಹಿಂದಿ ಚಲನಚಿತ್ರ ʻದಿ ಸಾಬರಮತಿ ರಿಪೋರ್ಟ್‌ʼ (The Sabarmati Report) ವೀಕ್ಷಿಸಲಿದ್ದಾರೆ. ಮೋದಿ ಅವರೊಂದಿಗೆ ಚಿತ್ರನಟ ವಿಕ್ರಾಂತ್‌ ಮಾಸ್ಸೆ, ಚಿತ್ರದ ನಿರ್ಮಾಪಕಿ ಏಕ್ತಾ ಕಪೂರ್ ಚಲನಚಿತ್ರವನ್ನು ವೀಕ್ಷಿಸಲಿದ್ದಾರೆ.

    2002ರ ಫೆಬ್ರವರಿ 27ರಂದು ನಡೆದ ಗೋಧ್ರಾ ರೈಲು ದುರಂತವನ್ನಾಧರಿಸಿದ (Godhra train tragedy) ಚಿತ್ರ ಇದಾಗಿದೆ. ವಿಕ್ರಾಂತ್ ಮಾಸ್ಸೆ, ರಿಧಿ ಡೋಗ್ರಾ ಮತ್ತು ರಾಶಿ ಖನ್ನಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. 2002ರ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿ ಆಗಿದ್ದರು. ಕಳೆದ ತಿಂಗಳಷ್ಟೇ ಮೋದಿ ಚಿತ್ರತಂಡವನ್ನು ಶ್ಲಾಘಿಸಿದ್ದರು. ಘಟನೆಯ ಹಿಂದಿನ ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಹೊಗಳಿದ್ದರು. ಇದನ್ನೂ ಓದಿ: ಇಂದು ರೈತರ ಪ್ರತಿಭಟನೆ: ದೆಹಲಿ–ನೋಯ್ಡಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್

    ಏನಿದು ಗೋಧ್ರಾ ರೈಲು ದುರಂತ?
    ಬಿಹಾರದ ಮುಜಾಫರ್‌ಪುರದಿಂದ ಗುಜರಾತ್‌ನ ಅಹಮದಾಬಾದ್‌ಗೆ ಹೊರಟಿದ್ದ ಸಾಬರಮತಿ ಎಕ್ಸ್‌ಪ್ರೆಸ್ ರೈಲು 2002ರ ಫೆ.27,ರ ಬೆಳಗ್ಗೆ ತನ್ನ ನಿಗದಿತ ಸಮಯಕ್ಕೆ ಗುಜರಾತ್‌ನ ಗೋಧ್ರಾ ರೈಲು ನಿಲ್ದಾಣಕ್ಕೆ ತೆರಳಿತ್ತು. ಇದರಲ್ಲಿ ಕರಸೇವಕರು, ಹಿಂದೂ ಸ್ವಯಂಸೇವಕರು ಅಯೋಧ್ಯೆಯಲ್ಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದರು. ರೈಲಿಗೆ ಸುಮಾರು 2,000 ಜನರಿದ್ದ ಗುಂಪು ಕಲ್ಲು ತೂರಿ ನಾಲ್ಕು ಕೋಚ್‌ಗಳಿಗೆ ಬೆಂಕಿ ಹಚ್ಚಿತ್ತು.

    GODHRA

    ಈ ದುರಂತದಲ್ಲಿ 27 ಮಹಿಳೆಯರು ಮತ್ತು 10 ಮಕ್ಕಳು ಸೇರಿದಂತೆ 59 ಜನರು ಸಾವನ್ನಪ್ಪಿದ್ದರು. ದಾಳಿಯಲ್ಲಿ 48 ಪ್ರಯಾಣಿಕರು ಗಾಯಗೊಂಡಿದ್ದರು. ಇದರಿಂದ ಆದ ಗಲಭೆ ಮೂರು ತಿಂಗಳವರೆಗೆ ಮುಂದುವರೆದಿತ್ತು. ಈ ಗಲಭೆಗೆ ಆಗಿನ ಸಿಎಂ ಆಗಿದ್ದ ಮೋದಿ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಈ ದುರಂತದ ತನಿಖೆ ನಡೆಸಿದ್ದ ಸುಪ್ರೀಂ ಕೋರ್ಟ್ ನೇಮಿಸಿದ್ದ ತನಿಖಾ ತಂಡ, ವರದಿಯಲ್ಲಿ ಈ ಬಗ್ಗೆ ಯಾವುದೇ ಪುರಾವೆಗಳು ಇಲ್ಲ ಎಂದು ಉಲ್ಲೇಖಿಸಿತ್ತು. ಇದನ್ನೂ ಓದಿ: Uttar Pradesh| ಮಹಾ ಕುಂಭಮೇಳ ನಡೆಯುವ ಪ್ರದೇಶ ಹೊಸ ಜಿಲ್ಲೆಯಾಗಿ ಘೋಷಣೆ

    ಧೀರಜ್ ಸರ್ನಾ ನಿರ್ದೇಶನದ ‘ದಿ ಸಾಬರಮತಿ ರಿಪೋರ್ಟ್’ ಚಿತ್ರವು ನ.15 ರಂದು ಬಿಡುಗಡೆ ಆಗಿತ್ತು.‌ ಈ ಚಿತ್ರದಲ್ಲಿ ವಿಕ್ರಾಂತ್ ಮಾಸ್ಸೆ, ರಾಶಿ ಖನ್ನಾ ಮತ್ತು ರಿಧಿ ಡೋಗ್ರಾ ಸೇರಿದಂತೆ ಇತರರು ನಟಿಸಿದ್ದಾರೆ. ಇದನ್ನೂ ಓದಿ: ಸಮುದಾಯ ಉಳಿಯಬೇಕಾದ್ರೆ ಕನಿಷ್ಠ 3 ಮಕ್ಕಳನ್ನಾದರೂ ಪಡೆಯಬೇಕು: RSS ಮುಖ್ಯಸ್ಥ ಮೋಹನ್‌ ಭಾಗವತ್‌

  • ‘ದಿ ಸಾಬರಮತಿ ರಿಪೋರ್ಟ್’ | ಗೋಧ್ರಾ ದುರಂತದ ಹಿಂದಿನ ಸತ್ಯ ಬಹಿರಂಗ – ಮೋದಿ ಶ್ಲಾಘನೆ

    ‘ದಿ ಸಾಬರಮತಿ ರಿಪೋರ್ಟ್’ | ಗೋಧ್ರಾ ದುರಂತದ ಹಿಂದಿನ ಸತ್ಯ ಬಹಿರಂಗ – ಮೋದಿ ಶ್ಲಾಘನೆ

    ನವದೆಹಲಿ: 2002ರಲ್ಲಿ ನಡೆದ ಗೋಧ್ರಾ ದುರಂತಕ್ಕೆ (Godhra Train Tragedy) ಕಾರಣವಾದ ಘಟನೆಗಳ ಆಧಾರದ ಮೇಲೆ ನಿರ್ಮಾಣವಾದ ‘ದಿ ಸಾಬರಮತಿ ರಿಪೋರ್ಟ್’ (The Sabarmati Report) ಚಿತ್ರವನ್ನು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಶ್ಲಾಘಿಸಿದ್ದಾರೆ. ಘಟನೆಯ ಹಿಂದಿನ ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ಚಿತ್ರತಂಡವನ್ನು ಮೋದಿ ಹೊಗಳಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಈ ಘಟನೆಯ ಸತ್ಯ ಹೊರಬರುತ್ತಿರುವುದು ಒಳ್ಳೆಯದು. ಸಾಮಾನ್ಯ ಜನರು ಇದನ್ನು ಸಿನಿಮಾ ಮೂಲಕ ನೋಡಬಹುದು. ಈ ಚಲನಚಿತ್ರವನ್ನು ಜನರು ನೋಡಲೇಬೇಕು. ದುರಂತದ ಹಿಂದಿನ ಸತ್ಯವನ್ನು ಬಹಿರಂಗಪಡಿಸುವಲ್ಲಿ ಚಿತ್ರತಂಡ ಶ್ರಮಿಸಿದೆ ಎಂದು ಕೊಂಡಾಡಿದ್ದಾರೆ.

    ಈ ದುರಂತದ ಘಟನೆಯನ್ನು ಪಟ್ಟಭದ್ರ ಹಿತಾಸಕ್ತಿಯ ಗುಂಪುಗಳು ರಾಜಕೀಯಗೊಳಿಸಿವೆ. ಇದನ್ನು ಒಬ್ಬ ನಾಯಕನ ಪ್ರತಿಷ್ಠೆಗೆ ಕಳಂಕ ತರುವ ಅವಕಾಶವಾಗಿ ಬಳಸಿಕೊಂಡಿವೆ ಎಂದು ಬರೆದುಕೊಂಡಿದ್ದಾರೆ.

    ಏನಿದು ಗೋಧ್ರಾ ರೈಲು ದುರಂತ?
    ಬಿಹಾರದ ಮುಜಾಫರ್‌ಪುರದಿಂದ ಗುಜರಾತ್‌ನ ಅಹಮದಾಬಾದ್‌ಗೆ ಹೊರಟಿದ್ದ ಸಾಬರಮತಿ ಎಕ್ಸ್‌ಪ್ರೆಸ್ ರೈಲು 2002ರ ಫೆ.27,ರ ಬೆಳಗ್ಗೆ ತನ್ನ ನಿಗದಿತ ಸಮಯಕ್ಕೆ ಗುಜರಾತ್‌ನ ಗೋಧ್ರಾ ರೈಲು ನಿಲ್ದಾಣಕ್ಕೆ ತೆರಳಿತ್ತು. ಇದರಲ್ಲಿ ಕರಸೇವಕರು, ಹಿಂದೂ ಸ್ವಯಂಸೇವಕರು ಅಯೋಧ್ಯೆಯಲ್ಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದರು. ರೈಲಿಗೆ ಸುಮಾರು 2,000 ಜನರಿದ್ದ ಗುಂಪು ಕಲ್ಲು ತೂರಿ ನಾಲ್ಕು ಕೋಚ್‌ಗಳಿಗೆ ಬೆಂಕಿ ಹಚ್ಚಿತ್ತು.

    ಈ ದುರಂತದಲ್ಲಿ 27 ಮಹಿಳೆಯರು ಮತ್ತು 10 ಮಕ್ಕಳು ಸೇರಿದಂತೆ 59 ಜನರು ಸಾವನ್ನಪ್ಪಿದ್ದರು. ದಾಳಿಯಲ್ಲಿ 48 ಪ್ರಯಾಣಿಕರು ಗಾಯಗೊಂಡಿದ್ದರು. ಇದರಿಂದ ಆದ ಗಲಭೆ ಮೂರು ತಿಂಗಳವರೆಗೆ ಮುಂದುವರೆದಿತ್ತು. ಈ ಗಲಭೆಗೆ ಆಗಿನ ಸಿಎಂ ಆಗಿದ್ದ ಮೋದಿ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಈ ದುರಂತದ ತನಿಖೆ ನಡೆಸಿದ್ದ ಸುಪ್ರೀಂ ಕೋರ್ಟ್ ನೇಮಿಸಿದ್ದ ತನಿಖಾ ತಂಡ, ವರದಿಯಲ್ಲಿ ಈ ಬಗ್ಗೆ ಯಾವುದೇ ಪುರಾವೆಗಳು ಇಲ್ಲ ಎಂದು ಉಲ್ಲೇಖಿಸಿತ್ತು.

    ಧೀರಜ್ ಸರ್ನಾ ನಿರ್ದೇಶನದ ‘ದಿ ಸಾಬರಮತಿ ರಿಪೋರ್ಟ್’ ಚಿತ್ರವು ನ.15 ರಂದು ಬಿಡುಗಡೆ ಆಗಿತ್ತು.‌ ಈ ಚಿತ್ರದಲ್ಲಿ ವಿಕ್ರಾಂತ್ ಮಾಸ್ಸೆ, ರಾಶಿ ಖನ್ನಾ ಮತ್ತು ರಿಧಿ ಡೋಗ್ರಾ ಸೇರಿದಂತೆ ಇತರರು ನಟಿಸಿದ್ದಾರೆ.