Tag: Gold jewelry

  • ರಾಮನಗರಲ್ಲಿ 30 ಕೆಜಿಗೂ ಅಧಿಕ ಪ್ರಮಾಣದ ಚಿನ್ನ; ದಾವಣಗೆರೆಯಲ್ಲಿ 12.50 ಕೋಟಿ ರೂ. ಮೌಲ್ಯದ ಚಿನ್ನಾಭರಣ, ವಜ್ರ ಜಪ್ತಿ!

    ರಾಮನಗರಲ್ಲಿ 30 ಕೆಜಿಗೂ ಅಧಿಕ ಪ್ರಮಾಣದ ಚಿನ್ನ; ದಾವಣಗೆರೆಯಲ್ಲಿ 12.50 ಕೋಟಿ ರೂ. ಮೌಲ್ಯದ ಚಿನ್ನಾಭರಣ, ವಜ್ರ ಜಪ್ತಿ!

    ರಾಮನಗರ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಫುಲ್‌ ಅಲರ್ಟ್‌ ಆಗಿರುವ ಚುನಾವಣಾಧಿಕಾರಿಗಳು ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಕೋಟಿ ಕೋಟಿ ರೂ. ಬೆಲೆ ಬಾಳುವ ಚಿನ್ನ, ವಜ್ರ ಆಭರಣವನ್ನು ಜಪ್ತಿ ಮಾಡಿದ್ದಾರೆ. ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ (Gold Jewelry), ಕಚ್ಚಾ ಚಿನ್ನ ಹಾಗೂ ವಜ್ರಗಳನ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

    ರಾಮನಗರದ ಹೆಜ್ವಾಲ ಚೆಕ್‌ಪೋಸ್ಟ್‌ (Ramanagara Hejwala Checkpost) ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ, 30 ಕೆಜಿಗೂ ಹೆಚ್ಚು ಚಿನ್ನ, 10 ಕೆಜಿಯಷ್ಟು ಬೆಳ್ಳಿಯನ್ನ ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಬಾಡೂಟ ವಶಕ್ಕೆ ಪಡೆದ FST ಟೀಂ- ರಸ್ತೆಬದಿ ಚೆಲ್ಲಿದ ಊಟವನ್ನೇ ತಿಂದ ಕೆಲವರು!

    ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಮಲಬಾರ್‌ ಗೋಲ್ಡ್‌ & ಡೈಮಂಡ್‌ ಕಂಪನಿಗೆ ಸೇರಿದ್ದು ಎನ್ನಲಾದ ವಾಹನದಲ್ಲಿ ಚಿನ್ನ, ಬೆಳ್ಳಿ ಪತ್ತೆಯಾಗಿದೆ. ಸೂಕ್ತ ದಾಖಲೆ ಇಲ್ಲದಿದ್ದರಿಂದ ಅಧಿಕಾರಿಗಳು ಚಿನ್ನವನ್ನ ಜಪ್ತಿ ಮಾಡಿದ್ದಾರೆ. ಸೂಕ್ತ ದಾಖಲೆ ತೋರಿಸಿ, ಹಿಂಪಡೆದುಕೊಳ್ಳುವಂತೆ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Bengaluru: ಫ್ಲೈಓವರ್ ಮೇಲಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆ ಗುತ್ತಿಗೆ ನೌಕರ ಆತ್ಮಹತ್ಯೆ!

    ದಾವಣಗೆರೆಯಲ್ಲಿ 12.50 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸೀಜ್‌:
    ಮತ್ತೊಂದು ಪ್ರಕರಣದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12.50 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ ವಜ್ರವನ್ನು ದಾವಣಗೆರೆಯ ನಗರದ ಲೋಕಿಕೆರೆ ಚೆಕ್‌ಪೋಸ್ಟ್ ಬಳಿ ವಶಕ್ಕೆ ಪಡೆದಿದ್ದಾರೆ. ವಿವಿಧ ಆಭರಣ ಅಂಗಡಿಗಳಿಗೆ ಸಾಗಿಸುತ್ತಿದ್ದ ಚಿನ್ನಾಭರಣವನ್ನು ಸೂಕ್ತ ದಾಖಲೆಗಳಿಲ್ಲದ ಕಾರಣ ವಶಕ್ಕೆ ಪಡೆಯಲಾಗಿದೆ. ಚುನಾವಣಾ ಅಧಿಕಾರಿ ರೇಣುಕಾ, ಕಮರ್ಷಿಯಲ್ ಟ್ಯಾಕ್ಸ್ ನ ಇಲಾಖೆ ಉಪ ಆಯುಕ್ತ ಮಂಜುನಾಥ್ ನೇತೃತ್ವದಲ್ಲಿ ಜಪ್ತಿ ಮಾಡಲಾಗಿದೆ.

  • 54 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದು ಪೊಲೀಸರ ಅತಿಥಿಯಾದ ಕಳ್ಳ

    54 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದು ಪೊಲೀಸರ ಅತಿಥಿಯಾದ ಕಳ್ಳ

    ನೆಲಮಂಗಲ: ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣವನ್ನು ಕದ್ದು, ಪ್ರಖ್ಯಾತ ಕಂಪೆನಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ವೃತ್ತಿಯಲ್ಲಿ ಚಾಲಕನಾಗಿದ್ದ ಆರೋಪಿ ಮಂಜು ಅಲಿಯಾಸ್ ಮಂಜುನಾಥ ಹಳದಿ ಲೋಹ ಬಂಗಾರದ ಆಸೆಗೆ ಬಿದ್ದು ಪೊಲೀಸರ ಅತಿಥಿಯಾಗಿದ್ದಾನೆ. ಮನೆ ಕಳ್ಳತನ ಮಾಡಿ ಪರಾರಿಯಾಗಿದ್ದ ಕುರಿತು ಪ್ರಕರಣ ದಾಖಲಿಸಿಕೊಂಡು ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸುಮಾರು 54 ಲಕ್ಷ ರೂ. ಬೆಲೆ ಬಾಳುವ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯಿಂದ ಪೊಲೀಸರು ಬರೋಬ್ಬರಿ 1 ಕೆ.ಜಿ 127 ಗ್ರಾಂ ಚಿನ್ನ, 400 ಗ್ರಾಂ ಬೆಳ್ಳಿ ವಶಕ್ಕೆ ಪಡೆದಿದ್ದಾರೆ.

    ಉದ್ಯಮಿ ಚೇತನ್ ಕುಟುಂಬ ವಿದೇಶಕ್ಕೆ ತೆರಳಿದ್ದಾಗ ಅವರ ನಿವಾಸದಲ್ಲಿ ಕಳ್ಳತನ ನಡೆದಿತ್ತು. ಆರೋಪಿ ಮಂಜುನಾಥ್ ಚಿಕ್ಕಬಿದರಕಲ್ಲು ಅಪಾರ್ಟ್ ಮೆಂಟ್ ನಲ್ಲಿ ಕಾರು ಚಾಲಕನಾಗಿದ್ದು, ಕದ್ದ ಆಭರಣಗಳನ್ನು ವಿವಿಧ ಪ್ರಖ್ಯಾತ ಕಂಪನಿಗಳಲ್ಲಿ ಮಾರಾಟ ಮಾಡಿದ್ದ.

    ಮಾದನಾಯಕನಹಳ್ಳಿ ವೃತ್ತದ ಸಿಪಿಐ ಸತ್ಯನಾರಾಯಣ ನೇತೃತ್ವದ ಸಿಬ್ಬಂದಿಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಮನೆ ಮಾಲೀಕರಿಗೆ ಚಿನ್ನಾಭರಣ ವಾಪಸ್ ವಿತರಣೆ ಮಾಡಿದ್ದಾರೆ. ಐಜಿಪಿ ಸೀಮಂತ್ ಕುಮಾರ್ ಸಿಂಗ್, ಎಸ್‍ಪಿ ರವಿ.ಡಿ ಚನ್ನಣ್ಣವರ್, ಎಎಸ್‍ಪಿ ಲಕ್ಷ್ಮಿಗಣೇಶ್, ಡಿವೈಎಸ್ ಪಿ ಮೋಹನ್ ಕುಮಾರು ಆಭರಣವನ್ನು ಹಸ್ತಾಂತರಿಸಿದರು. ಇತ್ತ ಕಾರ್ಯಚರಣೆಯಲ್ಲಿ ನಿರತರಾದ ಅಪರಾಧ ವಿಭಾಗದ ಸಿಬ್ಬಂದಿಗಳಿಗೆ ನಗದು ಬಹುಮಾನ ಸಮೇತ ಪ್ರಶಂಸೆ ಪತ್ರವನ್ನು ಐಜಿಪಿ ಸೀಮಂತ್ ಕುಮಾರ್ ಸಿಂಗ್ ನೀಡಿ ಅಭಿನಂದಿಸಿದರು.

  • ಮಹಿಳೆ ನೆಲಕ್ಕೆ ಬಿದ್ದರೂ 40 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಪರಾರಿ

    ಮಹಿಳೆ ನೆಲಕ್ಕೆ ಬಿದ್ದರೂ 40 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಪರಾರಿ

    – ಕಳ್ಳರ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

    ಯಾದಗಿರಿ: ಬೈಕ್‍ನಲ್ಲಿ ಬಂದ ಖದೀಮರಿಬ್ಬರು ಹಾಡಹಗಲೇ ಮಹಿಳೆಯೊಬ್ಬರ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

    ಲಕ್ಷ್ಮೀ ನಗರದ ಬಡಾವಣೆಯ ಲಕ್ಷ್ಮೀ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ಕಳ್ಳರ ಕೃತ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪದ್ಮಾವತಿ ಚನ್ನಪ್ಪ ಬೊರಡ್ಡಿ ಎಂಬವರ ಕೊರಳಲ್ಲಿದ್ದ 40 ಗ್ರಾಂ ಚಿನ್ನ ಕಳ್ಳತನವಾಗಿದ್ದು, ಇದರ ಮೌಲ್ಯ 1.40 ಲಕ್ಷ ರೂ. ಎಂದು ತಿಳಿದು ಬಂದಿದೆ.

    ಪದ್ಮಾವತಿ ಅವರು ಪರಿಚಯವಿರುವ ಇಬ್ಬರು ಮಹಿಳೆಯರ ಜೊತೆಗೆ ಗುರುವಾರ ಮಧ್ಯಾಹ್ನ 3:30 ಗಂಟೆ ಸುಮಾರಿಗೆ ಮಾರ್ಕೆಟ್‍ಗೆ ತೆರಳುತ್ತಿದ್ದರು. ಈ ವೇಳೆ ಬೈಕ್‍ನಲ್ಲಿ ಬಂದ ಖದೀಮರಿಬ್ಬರು ಲಕ್ಷ್ಮೀ ದೇವಸ್ಥಾನದ ಬಳಿ ಪದ್ಮಾವತಿ ಅವರ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕಳ್ಳರು ಎಳೆದ ರಭಸಕ್ಕೆ ಪದ್ಮವತಿ ಅವರು ನೆಲಕ್ಕೆ ಬಿದ್ದರೂ ನೋಡದೆ, ಸರವನ್ನ ದೋಚಿದ್ದಾರೆ. ಈ ಅಮಾನವೀಯ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೇರೆಯಾಗಿದೆ.

    ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಗಳನ್ನಾಧರಿಸಿ ಕಳ್ಳರ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಪದ್ಮಾವತಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

  • 1 ಲಕ್ಷ ರೂ. ಮೌಲ್ಯದ ಬಂಗಾರದ ಒಡವೆ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

    1 ಲಕ್ಷ ರೂ. ಮೌಲ್ಯದ ಬಂಗಾರದ ಒಡವೆ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

    ಹುಬ್ಬಳ್ಳಿ: ಮಹಿಳಾ ಪ್ರಯಾಣಿಕರೊಬ್ಬರು ಬ್ಯಾಗ್ ಸಮೇತ ಬಿಟ್ಟು ಹೋಗಿದ್ದ ಬಂಗಾರದ ಒಡವೆಗಳನ್ನು ಆಟೋ ಚಾಲಕರೊಬ್ಬರು ಮರಳಿ ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.

    ನಗರದಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಹಜರತ್ ಅಲಿ (19) ಪ್ರಯಾಣಿಕರು ಮರೆತು ಬಿಟ್ಟು ಹೋಗಿದ್ದ ಬಂಗಾರದ ಒಡವೆಗಳನ್ನು ವಾಪಸ್ ನೀಡಿದ್ದಾರೆ.

    ನೇಕಾರನಗರದ ನಿವಾಸಿ ಆಗಿರುವ ಹಜರತ್ ಅಲಿ ಅವರ ಆಟೋ ಹತ್ತಿದ್ದ ಆನಂದ ನಗರದ ನಿವಾಸಿ ಶೋಭಾ ಕೊಳ್ಳಿ ಅವರು ಆಟೋದಲ್ಲಿ ಬ್ಯಾಗ್ ಬಿಟ್ಟು ಇಳಿದಿದ್ದರು. ಆ ಬಳಿಕ ಆಟೋದಲ್ಲಿ ಪ್ರಯಾಣಿಕರ ಬ್ಯಾಗ್ ಇರುವುದನ್ನು ಗಮನಿಸಿದ್ದ ಹಜರತ್ ಅಲಿ ಅವರು ಉಪನಗರ ಠಾಣೆಯ ಪೊಲೀಸರ ಸಮ್ಮುಖದಲ್ಲಿ ಆಭರಣ ಹಾಗೂ ಬ್ಯಾಗ್ ಮರಳಿಸಿದ್ದಾರೆ.

    ಶೋಭಾ ಅವರು ತಮ್ಮ ಬ್ಯಾಗ್ ನಲ್ಲಿ ಸುಮಾರು ಒಂದು ಲಕ್ಷ ರೂ. ಅಧಿಕ ಮೌಲ್ಯದ ಬಂಗಾರದ ಆಭರಣಗಳು ಇಟ್ಟಿದ್ದರು. ಸದ್ಯ ಆಭರಣವಿದ್ದ ಬ್ಯಾಗ್ ಮರಳಿಸಿ ಸಿಕ್ಕ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಶೋಭಾ ಅವರ ಕುಟುಂಬ ಹಜರತ್ ಅಲಿ ಅವರಿಗೆ ಸನ್ಮಾನ ಮಾಡಿ ಅಭಿನಂದಿಸಿದ್ದಾರೆ.

  • ಇಬ್ಬರು ಸರ ಕಳ್ಳರ ಬಂಧನ- 11 ಲಕ್ಷ ರೂ, ಮೌಲ್ಯದ ಚಿನ್ನಾಭರಣ ವಶ

    ಇಬ್ಬರು ಸರ ಕಳ್ಳರ ಬಂಧನ- 11 ಲಕ್ಷ ರೂ, ಮೌಲ್ಯದ ಚಿನ್ನಾಭರಣ ವಶ

    ಮೈಸೂರು: ನಗರದ ವಿವಿಧ ಕಡೆಗಳಲ್ಲಿ ಸರ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಆಲನಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 11 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮೈಸೂರಿನ ಎನ್.ಆರ್.ಮೊಹಲ್ಲಾ ನಿವಾಸಿಗಳಾದ ಮಹಮದ್ ಸಾದ್ (21) ಹಾಗೂ ಮಹಮದ್ ಮೊಯಿಬ್ (23) ಬಂಧಿತ ಆರೋಪಿಗಳು. ಇಬ್ಬರನ್ನು ವಿಚಾರಣೆಗೆ ಒಳಪಡಿಸಿದಾಗ ಎಂಟು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿಗಳು ಕೇವಲ ಒಂದೇ ಪ್ರದೇಶದಲ್ಲಿ ಕೃತ್ಯ ಎಸಗದೇ ನಗರದ ವಿವಿಧ ಭಾಗಗಳಲ್ಲಿ ಕೈಚಳಕ ತೋರಿದ್ದಾರೆ.

    ಈ ಮೂಲಕ ಬಂಧಿತ ಆರೋಪಿಗಳಿಂದ ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 380 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ 2 ಬೈಕ್‍ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv