Tag: Gold Mine

  • ಚಿನ್ನದ ಗಣಿ ಕುಸಿದು 15 ಕಾರ್ಮಿಕರು ಸಾವು

    ಚಿನ್ನದ ಗಣಿ ಕುಸಿದು 15 ಕಾರ್ಮಿಕರು ಸಾವು

    ಕೇಪ್‌ಟೌನ್: ಪೂರ್ವ ಆಫ್ರಿಕಾದ (Africa) ಬುರುಂಡಿಯಲ್ಲಿ (Burundi) ಚಿನ್ನದ ಗಣಿ ಕುಸಿದು ಹದಿನೈದು ಕಾರ್ಮಿಕರು ಬಲಿಯಾಗಿದ್ದಾರೆ. ಸಿಬಿಟೋಕ್ ಪ್ರಾಂತ್ಯದ ಮಾಬಾಯಿ ಕಮ್ಯೂನ್‌ನಲ್ಲಿ ಈ ದುರಂತ ನಡೆದಿದೆ.

    ಭಾರೀ ಮಳೆಯಿಂದಾಗಿ ಚಿನ್ನದ ಗಣಿಯಲ್ಲಿ (Gold Mine) ನೀರು ತುಂಬಿಕೊಂಡಿತ್ತು. ಕೆಲಸ ಮಾಡುತ್ತಿದ್ದಾಗ ಗಣಿ ಕುಸಿದು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿ 15 ಮಂದಿ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ತಿಳಿದ ನಂತರ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಇದನ್ನೂ ಓದಿ: ರಂಜಾನ್ ಸಂದರ್ಭ ಸಂಗೀತ ನಿಷೇಧ – ಅಫ್ಘಾನಿಸ್ತಾನದ ಮಹಿಳಾ ರೇಡಿಯೋ ಸ್ಟೇಷನ್ ಮುಚ್ಚಿದ ತಾಲಿಬಾನ್

    ಮಳೆ ಕಾರಣಕ್ಕೆ ರುಗೊಗೊ ನದಿ ಉಕ್ಕಿ ಹರಿದು ಚಿನ್ನದ ಗಣಿಯಲ್ಲಿ ನೀರು ತುಂಬಿಕೊಂಡಿತ್ತು. ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕ ಕಾರ್ಮಿಕರು ಹೊಂಡಗಳಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಹೊರ ಕರೆತರುವಲ್ಲಿ ರಕ್ಷಣಾ ತಂಡಕ್ಕೆ ಸಾಧ್ಯವಾಗಿಲ್ಲ. ನಂತರ ಕಾರ್ಮಿಕರು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇಂತಹ ಗಣಿಗಾರಿಕೆ ದುರಂತಗಳು ಬುರುಂಡಿಯ ವಾಯುವ್ಯ ಮತ್ತು ಈಶಾನ್ಯದಲ್ಲಿ ಆಗಾಗ್ಗೆ ವರದಿಯಾಗುತ್ತವೆ. ಅಲ್ಲಿ ಗಣಿಗಾರಿಕೆ ಮಾಡುವ ಜನರು ಅಧಿಕಾರಿಗಳ ಮೇಲ್ವಿಚಾರಣೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ರಾತ್ರಿ ವೇಳೆ ಕೆಲಸಕ್ಕೆ ಹೋಗುತ್ತಾರೆ. ಇಲ್ಲಿ ಅಕ್ರಮ ಗಣಿಗಾರಿಕೆ ಹೆಚ್ಚಾಗಿ ನಡೆಯುತ್ತದೆ. ಇದನ್ನೂ ಓದಿ: ಅಬ್ಬಾ..! ಇದೆಂಥಾ ಮೀನು? – ಡೆಡ್ಲಿ ಫಿಶ್‌ ಸೇವಿಸಿ ಮಹಿಳೆ ಸಾವು; ಕೋಮಾದಲ್ಲಿ ಪತಿ

  • ಬಾಕಿ ವೇತನ ಪಾವತಿಗೆ ಒತ್ತಾಯ: ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಂದ ಪ್ರತಿಭಟನೆ

    ಬಾಕಿ ವೇತನ ಪಾವತಿಗೆ ಒತ್ತಾಯ: ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಂದ ಪ್ರತಿಭಟನೆ

    ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಕಂಪನಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಬಾಕಿ ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

    ಹಟ್ಟಿ ಚಿನ್ನದ ಗಣಿ ಕಂಪನಿಯ ಹೊರಗುತ್ತಿಗೆ ಕಾರ್ಮಿಕರಿಗೆ ಮೂರು ತಿಂಗಳಿಂದ ವೇತನ ನೀಡದೆ ಇರುವುದರಿಂದ ಕೆಲಸಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದ್ದಾರೆ. ಗುತ್ತಿಗೆ ಪಡೆದ ಸಿಐಎಸ್ ಬಿ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಮಿಕರು ಸಂಬಳಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದಶಪಥ ರಸ್ತೆ ಕಾಮಗಾರಿ ವೀಡಿಯೋ ಇಷ್ಟು ಜನರ ಹೊಟ್ಟೆಗೆ ಬೆಂಕಿ ಬೀಳಿಸುತ್ತೆ ಅಂತಾ ಗೊತ್ತಿರಲಿಲ್ಲ: ಪ್ರತಾಪ್ ಸಿಂಹ ತಿರುಗೇಟು

    ಮೂಲ ಸೌಕರ್ಯಗಳು, ಅಗತ್ಯ ಸಲಕರಣೆಗಳಿಲ್ಲದೆ ಕಂಪನಿ ಕಾರ್ಮಿಕರನ್ನ ದುಡಿಸಿಕೊಳ್ಳುತ್ತಿದೆ ಅಂತ ಗುತ್ತಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ಉತ್ತರಾರಾಧನೆ

  • ಚಿನ್ನದ ಗಣಿ ಅಧಿಕಾರಿಗಳಿಗೆ ಗ್ರಾಮಸ್ಥರಿಂದ ದಿಗ್ಬಂಧನ: ಉದ್ಯೋಗಕ್ಕಾಗಿ ಆಗ್ರಹ

    ಚಿನ್ನದ ಗಣಿ ಅಧಿಕಾರಿಗಳಿಗೆ ಗ್ರಾಮಸ್ಥರಿಂದ ದಿಗ್ಬಂಧನ: ಉದ್ಯೋಗಕ್ಕಾಗಿ ಆಗ್ರಹ

    ರಾಯಚೂರು: ಜಿಲ್ಲೆಯ ಮಾನವಿ ತಾಲೂಕಿನ ಹೀರಾ ಬುದ್ದಿನ್ನಿ ಗ್ರಾಮದಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿ ಅಧಿಕಾರಿಗಳಿಗೆ ಗ್ರಾಮಸ್ಥರು ದಿಗ್ಬಂಧನ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಬೇಡಿಕೆ ಈಡೇರಿಸುವವರೆಗೆ ಅಧಿಕಾರಿಗಳನ್ನ ಗ್ರಾಮದಿಂದ ಹೊರಹೋಗಲು ಬಿಡುವುದಿಲ್ಲ ಅಂತ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

    ಕಳದ 26 ವರ್ಷಗಳಿಂದ ಹೀರಾ ಬುದ್ದಿನ್ನಿ ಗ್ರಾಮದ ಪಕ್ಕದಲ್ಲಿ ಚಿನ್ನದ ಗಣಿಗಾರಿಕೆ ನಡೆಯುತ್ತಿದ್ದು ಮನೆಗಳು ಬಿರುಕು ಬಿಟ್ಟಿವೆ. ಅಲ್ಲದೆ ಗಣಿಗಾಗಿ ಭೂಮಿ ನೀಡಿದ ಗ್ರಾಮಸ್ಥರಿಗೆ ಉದ್ಯೋಗ ನೀಡಿಲ್ಲ ಅಂತ ಆರೋಪಿಸಿ ಗ್ರಾಮಸ್ಥರು 15 ದಿನಗಳಿಂದ ಗ್ರಾಮದಲ್ಲಿ ಧರಣಿ ನಡೆಸುತ್ತಿದ್ದಾರೆ.

    ಗ್ರಾಮಸ್ಥರ ಹೋರಾಟ ಹಿನ್ನೆಲೆ ಇಂದು ಗ್ರಾಮಕ್ಕೆ ಭೇಟಿ ನೀಡಿದ ಹೀರಾ ಬುದ್ದಿನ್ನಿ ಗಣಿಯ ಉಸ್ತುವಾರಿ ಅಧಿಕಾರಿಗಳಿಗೆ ದಿಗ್ಬಂಧನ ಹಾಕಲಾಗಿದೆ. ಅಧಿಕಾರಿಗಳಾದ ಮೋಹನಸಿಂಗ್ ಹಾಗೂ ಸುರೇಶರನ್ನು ಗ್ರಾಮದಲ್ಲಿಯೇ ನಿರ್ಬಂಧಿಸಿದ ಗ್ರಾಮಸ್ಥರು ಗಣಿ ಕಂಪನಿಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಅಂತ ಆಗ್ರಹಿಸಿದ್ದಾರೆ. ಚಿನ್ನದ ಗಣಿಯಿಂದ ಬಾಧಿತವಾದ ಗ್ರಾಮಸ್ಥರಿಗೆ ಉದ್ಯೋಗ ನೀಡುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.