Tag: gold rate

  • ಗಗನಕ್ಕೇರಿದ ಬಂಗಾರದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ!

    ಗಗನಕ್ಕೇರಿದ ಬಂಗಾರದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ!

    – ಚಿನ್ನದ ಮೇಲೆ ಹೂಡಿಕೆ ಬೇಡವೆಂದ ತಜ್ಞರು!

    ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಲಕ್ಷ್ಮೀ ಪೂಜೆಗೆ ಸಿದ್ಧತೆಗಳು ಆರಂಭವಾಗಿವೆ. ಜೊತೆಗೆ ಮದುವೆ ಸೀಜನ್ ಸಹ ಸ್ಟ್ರಾಟ್ ಆಗಿದೆ. ಆದ್ರೇ ಈ ಸಮಯದಲ್ಲೇ ಬಂಗಾರ (Gold), ಬೆಳ್ಳಿ ಬಲು ಭಾರವಾಗಿದ್ದು, ಮಧ್ಯಮ ಮತ್ತು ಬಡ ವರ್ಗದವರಿಗೆ ಕೈಗೆಟುಕದಂತಾಗಿದೆ.

    ದಿನದಿಂದ ದಿನಕ್ಕೆ ಚಿನ್ನದ ಬೆಲೆ (Gold Rate) ಗಗನಕ್ಕೇರುತ್ತಿದ್ದು, ಬಂಗಾರದ ಬೆಲೆಯಲ್ಲಿ ಆಲ್ ಟೈಮ್ ರೆಕಾರ್ಡ್ ನಿರ್ಮಾಣವಾಗ್ತಿದೆ. ಕಳೆದ ಒಂದು ವರ್ಷದಲ್ಲಿ 65% ರಷ್ಟು ದರ ಏರಿಕೆ ಆಗಿದ್ದರೂ ಸಹ ಚಿನ್ನದ ಮೇಲೆ ಕ್ರೇಜ್ ಮಾತ್ರ ಕಡಿಮೆ ಆಗಿಲ್ಲ. ಇನ್ನು ಬೆಳ್ಳಿ ಒಂದು ವರ್ಷದಲ್ಲಿ 75% ಏರಿಕೆಯಾಗಿದೆ. ಹಿಂದಿನ ಯಾವ ವರ್ಷಗಳಲ್ಲೂ ಆಗದ ಬೆಲೆ ಏರಿಕೆ ಕಳೆದ ಅಕ್ಟೋಬರ್‌ನಿಂದ ಈ ವರ್ಷ ಅಕ್ಟೋಬರ್‌ನಲ್ಲಿ ಆಗಿದೆ. ದೀಪಾವಳಿ ಹಾಗೂ ಈಗಾಗಲೇ ಮದುವೆ ಸೀಜನ್ ಆರಂಭವಾಗಿದ್ದು, ಮಧ್ಯಮ ವರ್ಗ ಹಾಗೂ ಬಡವರ್ಗದ ಮಹಿಳೆಯರಿಗೆ ಬಂಗಾರ ಕೊಳ್ಳಂಗಿಲ್ಲ, ಮುಟ್ಟಂಗಿಲ್ಲ ಎನ್ನುವಂತಾಗಿದೆ. ಇದನ್ನೂ ಓದಿ: ಬಿಗ್‌ ಬಾಸ್‌ ಶೂಟಿಂಗ್‌ನಲ್ಲಿ ಸುದೀಪ್‌ ಭಾಗಿ

    ಇನ್ನೂ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1,24,000 ರೂ. ಆಗಿದ್ರು, ಬೆಳ್ಳಿ ಕೆ.ಜಿಗೆ 1,60,000 ರೂ. ಆಗಿದೆ. ಪ್ರಮುಖವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿರೋದು, ವಿವಿಧ ದೇಶದ ಬ್ಯಾಂಕ್‌ಗಳು ಚಿನ್ನ ಕೊಳ್ಳುತ್ತಿರೋದು, ಟ್ರಂಪ್‌ನ ಟಾರಿಫ್ ನೀತಿ ಮೊದಲಾದ ಕಾರಣಗಳಿಂದ ಚಿನ್ನ, ಬೆಳ್ಳಿ ಏರಿಕೆಯಾಗ್ತಿದೆ. ಇದನ್ನೂ ಓದಿ: 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, 12 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

    ಇನ್ನೂ ಎರಡ್ಮೂರು ತಿಂಗಳು ಇದೇ ದರ ಇರಲಿದ್ದು, 10 ಗ್ರಾಂ ಚಿನ್ನದ ಬೆಲೆ 1,35,000 ರೂ. ಹಾಗೂ ಬೆಳ್ಳಿ ಕೆ.ಜಿಗೆ 1,75,000 ರೂ.ವರೆಗೆ ಹೆಚ್ಚಳವಾಗೋ ಸಾಧ್ಯತೆಯಿದೆ. ಇನ್ನೂ ಒಂದೆರಡು ತಿಂಗಳಲ್ಲಿ ಕೇವಲ 10ರಿಂದ 15% ಮಾತ್ರ ಇಳಿಕೆಯಾಗೋ ನಿರೀಕ್ಷೆಯಿದೆ. ಹೆಚ್ಚಿನ ಇಳಿಕೆಯನ್ನು ನಿರೀಕ್ಷಿಸಲಾಗ್ತಿಲ್ಲ. ಹೀಗಾಗಿ ಶಾಸ್ತ್ರಕ್ಕಾಗಿ ಚಿನ್ನ ಖರೀದಿಸಿ, ಯಾವುದೇ ಕಾರಣಕ್ಕೂ ಚಿನ್ನದ ಮೇಲೆ ಹೂಡಿಕೆ ಮಾಡಬೇಡಿ ಎಂದು ಹಣಕಾಸು ತಜ್ಞರು ಹೇಳುತ್ತಿದ್ದಾರೆ.

    ಒಟ್ಟಿನಲ್ಲಿ ಮಧ್ಯಮ ಮತ್ತು ಬಡ ವರ್ಗದವರಲ್ಲಿಯೇ ಈ ಚಿನ್ನದ ಮೇಲಿನ ಕ್ರೇಜ್ ಹೆಚ್ಚಾಗಿದೆ. ಇನ್ನು ಸದ್ಯಕ್ಕೆ ಚಿನ್ನ ಹಾಗೂ ಬೆಳ್ಳಿಯ ನಾಗಲೋಟಕ್ಕೆ ಬ್ರೇಕ್ ಬೀಳುವ ಲಕ್ಷಣಗಳಿಲ್ಲ.

  • ಗೋಲ್ಡ್‌ ಪ್ರಿಯರಿಗೆ ಶಾಕ್‌ – 1 ವಾರದಲ್ಲಿ ಚಿನ್ನದ ದರ 3,645 ರೂ. ಏರಿಕೆ

    ಗೋಲ್ಡ್‌ ಪ್ರಿಯರಿಗೆ ಶಾಕ್‌ – 1 ವಾರದಲ್ಲಿ ಚಿನ್ನದ ದರ 3,645 ರೂ. ಏರಿಕೆ

    ಟೆಲ್‌ ಅವಿವ್‌/ನವದೆಹಲಿ: ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ (Israel Iran Conflict) ಮತ್ತಷ್ಟು ತೀವ್ರಗೊಳ್ಳುತ್ತಿದ್ದಂತೆ ಚಿನ್ನದ ಬೆಲೆ (Gold Rate) ಗಗನಕ್ಕೇರಿದೆ. ಕಳೆದ ಒಂದು ವಾರದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂ ಗೆ 3,645 ರೂ. ಏರಿಕೆಯಾಗಿದ್ದರೆ, ದೇಶಿಯ ಮಾರುಕಟ್ಟೆಯಲ್ಲಿ 897 ರೂ.ಗಳಷ್ಟು ಹೆಚ್ಚಾಗಿದೆ.

    ಉಭಯ ದೇಶಗಳ ನಡುವಿನ ಪರಸ್ಪರ ಮಿಸೈಲ್‌ ದಾಳಿಗಳು ವಿಶ್ವದ ಷೇರು ಮಾರುಕಟ್ಟೆಯ (Stock Market) ಮೇಲೂ ಪರಿಣಾಮ ಬೀರುತ್ತಿದೆ. ಇದರಿಂದಾಗಿ ಚಿನ್ನದ ಬೆಲೆ ಗಗನಕ್ಕೇರಿದೆ. ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MSX) ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿ ಚಿನ್ನದ ಬೇಲೆ 1 ಲಕ್ಷ ರೂ. ಗಡಿ ದಾಟಿದೆ. ಅದೇ ರೀತಿ ದೇಶಿಯ ಮಾರುಕಟ್ಟೆಯಲ್ಲಿ 1 ಲಕ್ಷ ರೂ. ಸಮೀಪಿಸಿದೆ. ಇದರ ಇನ್ನಷ್ಟು ವಿವರ ಮುಂದೆ ನೋಡೋಣ…

    MSX ನಲ್ಲಿ 1 ಲಕ್ಷ ರೂ. ಗಡಿ ದಾಟಿದ ಗೋಲ್ಡ್‌ ರೇಟ್‌
    ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಂಘರ್ಷದಿಂದಾಗಿ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ (MSX) ಇಂಡಿಯಾ ಲಿಮಿಟೆಡ್‌ನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ಗಡಿ ದಾಟಿದೆ. ಇದೇ ಜೂನ್‌ 6ರಂದು 10 ಗ್ರಾಂ ಚಿನ್ನದ ಬೆಲೆ 97,036 ರೂ. ಇತ್ತು. ಇದು ಜೂನ್‌ 13ರಂದು ಮಾರುಕಟ್ಟೆ ಮುಕ್ತಾಯದ ವೇಳೆಗೆ 1,00,681 ರೂ.ಗಳಷ್ಟು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ. ಅಂದ್ರೆ ಕಳದೆ ಒಂದು ವಾರದಲ್ಲಿ 3,645 ರೂ. ಏರಿಕೆ ಕಂಡಿದೆ. ಇದನ್ನೂ ಓದಿ: ಕ್ಷಿಪಣಿ ದಾಳಿ, ಪ್ರತಿದಾಳಿ – ಇರಾನ್‌, ಇಸ್ರೇಲ್‌ನಲ್ಲಿ 80 ಮಂದಿ ಸಾವು

    ಸಾಂದರ್ಭಿಕ ಚಿತ್ರ

    ದೇಶಿ ಮಾರುಕಟ್ಟೆಯಲ್ಲೂ ಚಿನ್ನ ದುಬಾರಿ
    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಯು ದೇಶಿಯ ಮಾರುಕಟ್ಟೆ ಮೇಲೂ ಪರಿಣಾಮ ಬೀರಿದೆ. ಭಾರತೀಯ ಬುಲಿಯನ್ ಜ್ಯುವೆಲ್ಲರ್ಸ್ ಅಸೋಸಿಯೇಷನ್‌ನ IBJA.Com ಪ್ರಕಾರ, ಜೂನ್‌ 6ರಂದು 24 ಕ್ಯಾರೆಟ್‌ ಚಿನ್ನದ ದರ 10 ಗ್ರಾಂಗೆ 98,163 ರೂ. ಇತ್ತು. ಆದ್ರೆ ಜೂನ್‌ 13ರಂದು ಮಾರುಕಟ್ಟೆ ಅಂತ್ಯದ ವೇಳೆಗೆ 99,060 ರೂ. ಗಳಿಗೆ ತಲುಪಿತ್ತು. ಅಂದ್ರೆ ಕಳೆದ ಒಂದು ವಾರದಲ್ಲಿ 897 ರೂ.ಗಳಷ್ಟು ದರ ಏರಿಕೆ ಕಂಡಿದೆ. ಇದೀಗ ಇಸ್ರೇಲ್‌-ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿರುವುದರಿಂದ ಸೋಮವಾರ (ಜೂ.16) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: Israel vs Iran War: ಹೊತ್ತಿ ಉರಿದ ಟೆಹ್ರಾನ್‌- ತೈಲ ಡಿಪೋ ಮೇಲೆ ಇಸ್ರೇಲ್‌ ದಾಳಿ

    ಸದ್ಯದಲ್ಲಿ ಚಿನ್ನದ ದರ ಯಾವುದಕ್ಕೆ ಎಷ್ಟಿದೆ? (ಪ್ರತಿ 10 ಗ್ರಾಂಗೆ)
    * 22 ಕ್ಯಾರೆಟ್ ಚಿನ್ನ – 96,680 ರೂ.
    * 20 ಕ್ಯಾರೆಟ್ ಚಿನ್ನ – 88,160 ರೂ.
    * 18 ಕ್ಯಾರೆಟ್ ಚಿನ್ನ – 80,240 ರೂ.
    * 14 ಕ್ಯಾರೆಟ್ ಚಿನ್ನ – 63,890 ರೂ.

  • 1 ಲಕ್ಷ ರೂ. ದಾಟಿದ ಚಿನ್ನದ ಬೆಲೆ – ಸಾರ್ವಕಾಲಿಕ ದಾಖಲೆ

    1 ಲಕ್ಷ ರೂ. ದಾಟಿದ ಚಿನ್ನದ ಬೆಲೆ – ಸಾರ್ವಕಾಲಿಕ ದಾಖಲೆ

    ನವದೆಹಲಿ: ಅಮೆರಿಕ-ಚೀನಾ ವ್ಯಾಪಾರ ಸಮರ ನಡೆಯುತ್ತಿರುವ ಹೊತ್ತಲ್ಲೇ 10 ಗ್ರಾಂ ಚಿನ್ನದ ಬೆಲೆ (Gold Rate) 1 ಲಕ್ಷ ರೂ. ದಾಟಿ ಸಾರ್ವಕಾಲಿಕ ದಾಖಲೆ ಬರೆದಿದೆ.

    ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ದಾಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಮಂಗಳವಾರ 1 ಗ್ರಾಂಗೆ 10,135 ರೂ. ತಲುಪಿದ್ದು, 10 ಗ್ರಾಂಗೆ 1,01,135 ರೂ.ಗೆ ಏರಿಕೆಯಾಗಿದೆ. ಇದೇ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ಬೆಲೆ 1 ಲಕ್ಷ ರೂ. ದಾಟಿದೆ. ಇದನ್ನೂ ಓದಿ: 4 ವರ್ಷದ ಬಳಿಕ ಬೇಲೂರು ಶ್ರೀ ಚನ್ನಕೇಶವಸ್ವಾಮಿ ವಿಗ್ರಹ ಸ್ಪರ್ಶಿಸಿದ ಸೂರ್ಯನ ರಶ್ಮಿ

    22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ 9,290 ರೂ.ಗೆ ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 92,900 ರೂ. ತಲುಪಿದೆ. ಇದನ್ನೂ ಓದಿ:  Mandya | 39 ವರ್ಷ ಬಳಿಕ ನಡೆಯುತ್ತಿರುವ ಹಬ್ಬದಲ್ಲಿ ಸಿಎಂ ಭಾಗಿ

    ಇತರೆ ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಸುಂಕ ವಿಧಿಸಿದ್ದೇ ಚಿನ್ನದ ಬೆಲೆ ದಾಖಲೆಯ ಏರಿಕೆಗೆ ಕಾರಣ ಎನ್ನಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಹೀಗಾಗಿ, ಸುರಕ್ಷಿತ ಹೂಡಿಕೆಗಾಗಿ ಹೂಡಿಕೆದಾರರು ಚಿನ್ನದತ್ತ ಆಕರ್ಷಿತರಾಗಿದ್ದಾರೆ. ಇದನ್ನೂ ಓದಿ: ಹೊಸ ಪೋಪ್ ಆಯ್ಕೆ ಹೇಗೆ ಮಾಡಲಾಗುತ್ತೆ? ಹೊಗೆ ಹಾಕೋದು ಯಾಕೆ?

    ಅಕ್ಷಯ ತೃತೀಯಕ್ಕೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಲ್ಲೇ ಚಿನ್ನದ ಬೆಲೆ ಒಂದು ಲಕ್ಷ ದಾಟಿರುವುದು ಆಭರಣ ಪ್ರಿಯರಿಗೆ ನಿರಾಸೆ ಮೂಡಿಸಿದೆ. ಇದನ್ನೂ ಓದಿ: ವಿಂಗ್ ಕಮಾಂಡರ್ ಹಣೆಯಲ್ಲಿ ರಕ್ತ ಸೋರಿದ್ದು ಹೇಗೆ?

  • ಗೋಲ್ಡ್ ಪ್ರಿಯರಿಗೆ ಗುಡ್‌ನ್ಯೂಸ್ – ಚಿನ್ನದ ದರ ಇಳಿಕೆ!

    ಗೋಲ್ಡ್ ಪ್ರಿಯರಿಗೆ ಗುಡ್‌ನ್ಯೂಸ್ – ಚಿನ್ನದ ದರ ಇಳಿಕೆ!

    ಬೆಂಗಳೂರು: ಡೊನಾಲ್ಡ್ ಟ್ರಂಪ್ (Donald Trump) ಪ್ರತಿಸುಂಕದ ಪ್ರಭಾವ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲವಾಗಿದೆ. ಇದರ ಮಧ್ಯೆ ಚಿನ್ನದ ದರ (Gold Rate) ಇಳಿಕೆಯಾಗಿದ್ದು, ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ.

    ಶರವೇಗದಲ್ಲಿ ಚಿನ್ನದ ದರ ಏರಿಕೆ ಕಂಡಿತ್ತು. ಜನ ಸಾಮಾನ್ಯರು ಚಿನ್ನ ಮುಟ್ಟಿದ್ರೇ ಶಾಕ್ ಎಂಬ ಪರಿಸ್ಥಿತಿ ಉದ್ಭವವಾಗಿತ್ತು. ಆದರೀಗ ಟ್ರಂಪ್ ಸುಂಕ ನೀತಿಯಿಂದ ಚಿನ್ನದ ದರ ಇಳಿಕೆ ಕಂಡಿದೆ. ಇದನ್ನೂ ಓದಿ: ಮೇಲುಕೋಟೆಯ ವೈರಮುಡಿ ಬ್ರಹ್ಮೋತ್ಸವ ಸಂಪನ್ನ

    ಎಷ್ಟು ದರ ಇಳಿಕೆ?
    *ಚಿನ್ನದ ದರ ಕಳೆದ 3 ದಿನದಿಂದ ಇಳಿಯುತ್ತಿದೆ
    *22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 8,285 ರೂಪಾಯಿ ಆಗಿದೆ.
    *24 ಕ್ಯಾರೆಟ್ ಚಿನ್ನದ ದರ 9,038 ರೂಪಾಯಿ ಆಗಿದೆ.
    *22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಕಡಿಮೆ ಆಗಿದೆ.

    ಟ್ರಂಪ್ ಸುಂಕ ನೀತಿಯಿಂದ ಚಿನ್ನದ ದರ ದಿಢೀರ್ ಇಳಿಕೆ ಕಂಡಿದೆ. ಮುಂದಿನ ದಿನದಲ್ಲಿ ಪ್ರತಿ ಗ್ರಾಂಗೆ 7,500 ರೂ. ಆಗಬಹುದು ಎನ್ನುವ ಲೆಕ್ಕಾಚಾರ ವನ್ನು ತಜ್ಞರು ಮಾಡುತ್ತಿದ್ದಾರೆ. ಒಂದು ಲಕ್ಷದ ಗಡಿಗೆ ತಲುಪಿದ್ದ ಚಿನ್ನದ ದರ ಇಳಿಕೆ ಈಗ ಜನರಿಗೆ ಕೊಂಚ ರಿಲೀಫ್ ಮೂಡಿಸಿದೆ. ಇದನ್ನೂ ಓದಿ: ಆರ್‌ಸಿಬಿ ಗೆದ್ದ ಮೂರು ಗೆಲುವು ಸಾಮಾನ್ಯ ಗೆಲುವಲ್ಲ!

  • ಸಿಹಿ ಸುದ್ದಿ – ಚಿನ್ನದ ದರದಲ್ಲಿ ಭಾರೀ ಇಳಿಕೆ

    ಸಿಹಿ ಸುದ್ದಿ – ಚಿನ್ನದ ದರದಲ್ಲಿ ಭಾರೀ ಇಳಿಕೆ

    ನವದೆಹಲಿ: ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ ದಿಢೀರ್ ಭಾರೀ ಇಳಿಕೆಯಾಗಿದೆ. ಭಾರೀ ಕುಸಿತ ಕಂಡಿದ್ದು, ಪ್ರತಿ 10 ಗ್ರಾಂ ಚಿನ್ನದ ಬೆಲೆ 2,300 ರೂ. ಇಳಿಕೆಯಾಗಿದೆ.

    ಇತ್ತೀಚೆಗೆ ಸೆಪ್ಟೆಂಬರಿನಲ್ಲಿ ಪ್ರತಿ 10 ಗ್ರಾಂ.ಗೆ 40 ಸಾವಿರ ರೂ. ತಲುಪಿದ್ದ ಚಿನ್ನದ ಬೆಲೆ ಇದೀಗ ಕಡಿಮೆಯಾಗಿದೆ. ಸಿಎಕ್ಸ್(ಮಲ್ಟಿ ಕಮಾಡಿಟಿ ಎಕ್ಸ್‍ಚೇಂಜ್)ನಲ್ಲಿ ಚಿನ್ನದ ಬೆಲೆ ಸೋಮವಾರ ಪ್ರತಿ 10 ಗ್ರಾಂ. ಚಿನ್ನಕ್ಕೆ ಶೇ.0.04ರಷ್ಟು ಕಡಿಮೆಯಾಗಿದ್ದು, ಚಿನ್ನದ ಬೆಲೆ 37,671 ರೂ.ಗೆ ತಲುಪಿದೆ. ಇದನ್ನೂ ಓದಿ: ದೀಪಾವಳಿಗೆ 40 ಸಾವಿರ ರೂ. ಗಡಿ ದಾಟಲಿದೆ ಚಿನ್ನ – ಬೆಲೆ ಏರುತ್ತಿರುವುದು ಯಾಕೆ?

    ಚೀನಾ ಮತ್ತು ಅಮೆರಿಕದ ನಡುವಿನ ವ್ಯಾಪಾರ ಸಮರ ಕಡಿಮೆಯಾಗಲಿದೆ ಎನ್ನುವ ಸುಳಿವು ಸಿಕ್ಕಿದ ಬೆನ್ನಲ್ಲೇ ಹೂಡಿಕೆದಾರರು ಸಂತೋಷಗೊಂಡಿದ್ದು ಷೇರುಗಳ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಜೊತೆ ಭಾರತದ ಷೇರು ಮಾರುಕಟ್ಟೆ ಉತ್ತಮ ಫಲಿತಾಂಶ ಕಾಣುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಮೇಲಿನ ಹೂಡಿಕೆ ಕಡಿಮೆಯಾಗುತ್ತಿರುವುದರಿಂದ ಬೆಲೆ ಕಡಿಮೆಯಾಗುತ್ತಿದೆ.

    ಮದುವೆ ಸೀಸನ್ ಹತ್ತಿರದಲ್ಲಿರುವಾಗಲೇ ಚಿನ್ನದ ಬೆಲೆ ಕಡಿಮೆಯಾಗಿರುವುದು ಜಾಗತಿಕ ಮಾರುಕಟ್ಟೆ ಹಾಗೂ ಚಿಲ್ಲರೆ ಖರೀದಿದಾರರಲ್ಲಿ ಸಂತಸ ತಂದಿದೆ.

    ಇನ್ನೊಂದೆಡೆ ಎಂಸಿಎಕ್ಸ್‍ಲ್ಲಿ ಬೆಳ್ಳಿ ದರ ಪ್ರತಿ ಕೆ.ಜಿ.ಗೆ ಶೇ.0.30ರಷ್ಟು ಹೆಚ್ಚಳವಾಗಿದ್ದು, ಪ್ರತಿ ಕೆ.ಜಿ. ದರ 44,000 ರೂ. ತಲುಪಿದೆ. ಆದರೆ ಸೆಪ್ಟೆಂಬರ್ ತಿಂಗಳಿನಲ್ಲಿದ್ದ ದರಕ್ಕೆ ಹೋಲಿಸದರೆ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ. ದೇಶೀಯ ಚಿನ್ನದ ಬೆಲೆಯಲ್ಲಿ ಕುಸಿತದ ರೀತಿಯಲ್ಲೇ ಜಾಗತಿಕ ಮಾರುಕಟ್ಟೆಗಳಲ್ಲಿ ಕುಸಿತ ಕಂಡಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಸ್ಪಾಟ್ ಗೋಲ್ಡ್ ಪ್ರೈಸಸ್ 1,455.55 ಡಾಲರ್ ಕುಸಿತವನ್ನು ಕಂಡಿದೆ.

    ಯುಎಸ್-ಚೀನಾ ನಡುವಿನ ವ್ಯಾಪಾರ ಸಮರದಿಂದಾಗಿ ಹೂಡಿಕೆದಾರರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದರು. ಪರಿಣಾಮ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿತ್ತು. ಪ್ರತಿ ಆನ್ಸ್(1 ಆನ್ಸ್-28.34 ಗ್ರಾಂ.)ಗೆ 1,550 ಡಾಲರ್ ಏರಿಕೆಯಾಗಿತ್ತು.

  • ಗೋಲ್ಡ್ ಖರೀದಿಗೆ ಇದೇ ಗೋಲ್ಡನ್ ಟೈಂ- ಚಿನ್ನದ ದರದಲ್ಲಿ ಭಾರೀ ಇಳಿಕೆ

    ಗೋಲ್ಡ್ ಖರೀದಿಗೆ ಇದೇ ಗೋಲ್ಡನ್ ಟೈಂ- ಚಿನ್ನದ ದರದಲ್ಲಿ ಭಾರೀ ಇಳಿಕೆ

    ಬೆಂಗಳೂರು: ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಇದೇ ಸೂಕ್ತ ಸಮಯ. ಯಾಕಂದ್ರೆ ಚಿನ್ನದ ದರದಲ್ಲಿ ಭಾರಿ ಇಳಿಕೆಯಾಗಿದೆ.

    ಹತ್ತು ಗ್ರಾಂ ಚಿನ್ನಕ್ಕೆ ಒಂದು ಸಾವಿರ ರೂ. ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ ಚಿನ್ನದ ದರ ಹತ್ತು ಸಾವಿರ ರೂ. ಇಳಿಕೆ ಕಂಡಿದೆ.

     

    ಉತ್ತರ ಕೊರಿಯಾ ಹಾಗೂ ಅಮೆರಿಕ ನಡುವಿನ ಯುದ್ಧ ಭೀತಿಯಿಂದ ದರ ಇಳಿಕೆಯಾಗಿದೆ. ಜಾಗತಿಕ ಪರಿಣಾಮಗಳಿಂದಾಗಿ ಮಾರುಕಟ್ಟೆಯಲ್ಲಿ ಉಂಟಾದ ನೀರಸ ಪ್ರಕ್ರಿಯೆಯಿಂದ ಉದ್ಯಮದಾರರು ಚಿನ್ನ ಖರೀದಿಯಲ್ಲಿ ನಿರಾಸಕ್ತಿ ತೋರಿದ್ದಾರೆ. ಇದು ಚಿನ್ನದ ದರ ಇಳಿಕೆಯಾಗಲು ಕಾರಣ ಎನ್ನಲಾಗಿದೆ.

    24 ಕ್ಯಾರೆಟ್ ಚಿನ್ನದ ದರ ಮುವತ್ತು ಸಾವಿರದಿಂದ 29 ಸಾವಿರಕ್ಕೆ ಇಳಿಕೆ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನ 26250 ರೂ ಆಗಿದೆ. ಡಿಸೆಂಬರ್ ಪ್ರಾರಂಭದಲ್ಲಿ 27,369 ರೂ. ಇತ್ತು.