Tag: gold shop

  • ಬೆಂಗ್ಳೂರಲ್ಲಿ ಹಾಡಹಗಲೇ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ

    ಬೆಂಗ್ಳೂರಲ್ಲಿ ಹಾಡಹಗಲೇ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ

    ಬೆಂಗಳೂರು: ಚಿನ್ನದ ಮಳಿಗೆ (Gold Shop) ಮಾಲೀಕನ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ದೇವಿನಗರದಲ್ಲಿ (Devinagar) ನಡೆದಿದೆ.

    ಎರಡು ಬೈಕ್‍ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳಲ್ಲಿ, ಇಬ್ಬರು ಇಳಿದು ಗುಂಡಿನ ದಾಳಿ (Bengaluru Shoot Out) ಮಾಡಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ಅಪ್ಪುರಾಮ್ ಎಂಬವರ ಹೊಟ್ಟೆಗೆ ಗುಂಡು ತಗುಲಿದೆ. ಅಲ್ಲದೇ ಅಂತರಾಮ್ ಎಂಬವರ ಕಾಲಿಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪ್ಪುರಾಮ್ ಸ್ಥಿತಿ ಗಂಭೀರವಾಗಿದೆ.

    ಚಿನ್ನದಂಗಡಿಗೆ ಬಂದಿದ್ದ ದುಷ್ಕರ್ಮಿಗಳು ಗಲಾಟೆ ಮಾಡಿದ್ದಾರೆ. ಈ ವೇಳೆ ಗಲಾಟೆಗೆ ಅಂತರಾಮ್ ಅವರು ವಿರೋಧ ವ್ಯಕ್ತಪಡಿಸಿದಾಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಅಂಗಡಿ ಹೊರಗಿಂದ ಓರ್ವ ಹಾಗೂ ಅಂಗಡಿ ಒಳಗೆ ಓರ್ವ ಗುಂಡು ಹಾರಿಸಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಹೋಟೆಲ್‌ ರೂಮಿನಲ್ಲಿ ವಿದೇಶಿ ಮಹಿಳೆ ಶವವಾಗಿ ಪತ್ತೆ

    ಈ ಬಗ್ಗೆ ಪ್ರತಿಕ್ರಿಯಿಸಿರುವ ಕಮಿಷನರ್ ದಯಾನಂದ್, 11 ಗಂಟೆ ವೇಳೆಗೆ ನಾಲ್ವರು ಆರೋಪಿಗಳು ಎಂಟ್ರಿ ಕೊಟ್ಟಿದ್ದಾರೆ. ಅವರನ್ನು ನೋಡಿದ್ರೆ ರಾಬರಿಗೆ ಬಂದ ಹಾಗೇ ಇದೆ. ಇಬ್ಬರ ಮೇಲೆ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಘಟನಾ ಸ್ಥಳಕ್ಕೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ (Alok Mohan ), ಕಮಿಷನರ್ ದಯಾನಂದ್ ಹಾಗೂ ಕೋಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ತುಕಾಲಿ ಸಂತೋಷ್‌ ಕಾರು ಅಪಘಾತ ಪ್ರಕರಣ- ಆಟೋ ಚಾಲಕ ದುರ್ಮರಣ

  • ಚೀಲದಲ್ಲಿ ಲಾಂಗ್ ತಂದು ದರೋಡೆಗೆ ಯತ್ನ – ಮಾಲೀಕ, ಮಹಿಳಾ ಕೆಲಸಗಾರರ ಸಾಹಸದಿಂದ ವಿಫಲ

    ಚೀಲದಲ್ಲಿ ಲಾಂಗ್ ತಂದು ದರೋಡೆಗೆ ಯತ್ನ – ಮಾಲೀಕ, ಮಹಿಳಾ ಕೆಲಸಗಾರರ ಸಾಹಸದಿಂದ ವಿಫಲ

    ಚಿಕ್ಕಮಗಳೂರು: ಹಾಡಹಗಲೇ ನಡು ಮಧ್ಯಾಹ್ನ ಬಂಗಾರದ ಅಂಗಡಿಗೆ ನುಗ್ಗಿ ಲಾಂಗ್ ತೋರಿಸಿ ಮೂರು ಚಿನ್ನದ ಸರ ದರೋಡೆ ಮಾಡಿರುವ ಘಟನೆಯಿಂದ ಜಿಲ್ಲೆಯ ಶೃಂಗೇರಿ ತಾಲೂಕು ಬೆಚ್ಚಿ ಬಿದ್ದಿದೆ.

    ಹಾಡಹಗಲೇ ರಾಜಾರೋಷವಾಗಿ ಏಕಾಂಗಿಯಾಗಿ ವ್ಯಕ್ತಿಯೋರ್ವ ಈ ರೀತಿ ದರೋಡೆಗೆ ಮುಂದಾಗಿರುವುದರಿಂದ ಗ್ರಾಮೀಣ ಭಾಗದ ಜನ ಮತ್ತಷ್ಟು ಕಂಗಾಲಾಗಿದ್ದಾರೆ. ಜಿಲ್ಲೆಯ ಶೃಂಗೇರಿ ನಗರದಲ್ಲಿರೋ ನಾಗಪ್ಪ ಶೆಟ್ಟಿ ಎಂಬುವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿ ಒಡವೆಗಳನ್ನು ನೋಡುತ್ತಾ ಏಕಾಏಕಿ ಕೈನಲ್ಲಿದ್ದ ಬ್ಯಾಗಿನಿಂದ ಲಾಂಗ್ ತೆಗೆದು ಕುರ್ಚಿ ಮೇಲಿಟ್ಟಿದ್ದಾನೆ. ಲಾಂಗ್ ಕಂಡು ಅಂಗಡಿಯಲ್ಲಿದ್ದ ಮಹಿಳಾ ಕೆಲಸಗಾರರು ಕಿರುಚಿಕೊಂಡು ಸೈಡಿಗೆ ಹೋಗಿದ್ದಾರೆ.

    ಕೂಡಲೇ ಕ್ಯಾಶ್ ಟೇಬಲ್ ದಾಟಿ ಒಳ ಹೋದ ದರೋಡೆಕೋರ ಕೈಗೆ ಸಿಕ್ಕಷ್ಟು ಚಿನ್ನದ ಒಡವೆಗಳನ್ನು ದೋಚಿಕೊಂಡು ಬ್ಯಾಗ್‍ನಲ್ಲಿ ತುಂಬಿಕೊಂಡಿದ್ದಾನೆ. ಆ ವೇಳೆಗೆ ಅಂಗಡಿಯಲ್ಲಿದ್ದ ಮಾಲೀಕ ಕೂಡ ಓಡಿಬಂದು ಆತನ ಮೇಲೆ ಹಲ್ಲೆ ಮಾಡಿದ್ದಾನೆ. ಮಹಿಳಾ ಕೆಲಸಗಾರರು ಕೂಡ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಆದರೆ ಆತ ಕೈಗೆ ಸಿಕ್ಕಷ್ಟು ಚಿನ್ನವನ್ನು ಚೀಲದಲ್ಲಿ ತುಂಬಿಕೊಂಡು ಕ್ಯಾಶ್ ಟೇಬಲ್ ದಾಟುವಾಗ ಅಂಗಡಿ ಮಾಲೀಕ ಆತನ ಮೇಲೆ ಚೇರಿನಿಂದ ಹೊಡೆದಿದ್ದಾನೆ. ಈ ವೇಳೆ ಕ್ಯಾಶ್ ಟೇಬಲ್ ದಾಟುವಾಗ ಸಿಕ್ಕಿಬೀಳುತ್ತೇನೆ ಎಂಬ ಭಯದಿಂದ ಆತ ಲಾಂಗ್ ಹಾಗೂ ಚೀಲವನ್ನು ಅಲ್ಲೆ ಬಿಟ್ಟು ಹೋಗಿದ್ದಾನೆ. ಆದರೆ ಕೈಯಲ್ಲಿದ್ದ ಮೂರು ಚಿನ್ನದ ಸರಗಳೊಂದಿಗೆ ನಾಪತ್ತೆಯಾಗಿದ್ದಾನೆ.

    ಅಂಗಡಿಯವರು ಹಾಗೂ ಅಕ್ಕಪಕ್ಕದ ಜನ ಆತನನ್ನು ಹಿಡಿಯಲು ಪ್ರಯತ್ನಿಸಿದರೂ ಆತ ಯಾರ ಕೈಗೂ ಸಿಕ್ಕದೇ ನಾಪತ್ತೆಯಾಗಿದ್ದಾನೆ. ಮುಖಕ್ಕೆ ಮಾಸ್ಕ್ ಧರಿಸಿದ್ದರಿಂದ ಆತನ ಗುರುತು ಕೂಡ ಪತ್ತೆಯಾಗಿಲ್ಲ. ಆದರೆ ಆತನ ಈ ಎಲ್ಲ ಕೃತ್ಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೃಂಗೇರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಘಟನೆಯಿಂದ ಶೃಂಗೇರಿ ಪಟ್ಟಣ ಕೂಡ ಬೆಚ್ಚಿ ಬಿದ್ದಿದೆ.

  • ಚಾಕುವಿನಿಂದ ಕತ್ತು ಕೊಯ್ದು ಚಿನ್ನದಂಗಡಿ ಮಾಲೀಕನ ಬರ್ಬರ ಹತ್ಯೆ

    ಚಾಕುವಿನಿಂದ ಕತ್ತು ಕೊಯ್ದು ಚಿನ್ನದಂಗಡಿ ಮಾಲೀಕನ ಬರ್ಬರ ಹತ್ಯೆ

    ಚಿತ್ರದುರ್ಗ: ಚಾಕುವಿನಿಂದ ಕತ್ತು ಕೊಯ್ದು ಕೊಲೆ ಚಿನ್ನದಂಗಡಿ ಮಾಲೀಕನನ್ನು ಬರ್ಬರವಾಗಿ ಕೊಲೆಗೈದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

    ಕಲ್ಯಾಣ್ ಸಿಂಗ್ (54) ಬರ್ಬರವಾಗಿ ಕೊಲೆಯಾದ ಚಿನ್ನದಂಗಡಿ ಮಾಲೀಕ. ಈ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ರಾಮಗಿರಿ ಗ್ರಾಮದಲ್ಲಿ ನಡೆದಿದೆ.

    ವ್ಯಾಪಾರ ವಹಿವಾಟಿಗೆ ಸ್ನೇಹಿತರ ನಡುವೆ ಗಲಾಟೆ ನಡೆದು, ಗೊತ್ತಿಲ್ಲದ ಊರಿಗೆ ಬಂದು ಕಲ್ಯಾಣ್ ಸಿಂಗ್ ಹೆಣವಾಗಿದ್ದಾರೆ. ಕೊಲೆಗೈದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಸದ್ಯ ಸ್ಥಳಕ್ಕೆ ಸ್ಥಳೀಯ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv