Tag: gold

  • ಪಕ್ಕದ ಮನೆಗೆ ಕನ್ನ ಹಾಕಿ ಪೊಲೀಸರ ಅತಿಥಿಯಾದ ಬೆಂಗ್ಳೂರು ನೆಂಟ!

    ಪಕ್ಕದ ಮನೆಗೆ ಕನ್ನ ಹಾಕಿ ಪೊಲೀಸರ ಅತಿಥಿಯಾದ ಬೆಂಗ್ಳೂರು ನೆಂಟ!

    ಕಾರವಾರ: ಸಣ್ಣಪುಟ್ಟ ಕಳ್ಳತನ ಮಾಡಿ ಊರು ಬಿಟ್ಟು ಬೆಂಗಳೂರಿಗೆ ಸೇರಿದ್ದ ಯುವಕನೊಬ್ಬ, ಊರಿಗೆ ಬಂದು ಪಕ್ಕದ ಮನೆಗೆ ಕನ್ನ ಹಾಕಿ ಚಿನ್ನ (Gold) ಲೂಟಿ ಮಾಡಿ ಪೊಲೀಸರ (Police) ಅತಿಥಿಯಾಗಿದ್ದಾನೆ.

    ಬಂಧಿತ ಆರೋಪಿಯನ್ನು ಬೇಡ್ಕಣಿಯ ಗಣೇಶ್ ಎಂದು ಗುರುತಿಸಲಾಗಿದೆ. ಈತ ಚಿಕ್ಕಪುಟ್ಟ ಕಳ್ಳತನ ಮಾಡಿ, ಊರು ಬಿಟ್ಟು ಬೆಂಗಳೂರು ಸೇರಿ ಕೂಲಿ ಕೆಲಸ ಮಾಡಿಕೊಂಡಿದ್ದ. ಊರಿಗೆ ಬಂದವನೆ ಪಕ್ಕದ ಮನೆಗೆ ಕನ್ನ ಹಾಕಿ 1.26 ಲಕ್ಷ ರೂ. ಮೌಲ್ಯದ 21 ಗ್ರಾಂ ಚಿನ್ನ ಕದ್ದು, ಪರಾರಿಯಾಗಿದ್ದ.

    ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಪೊಲೀಸರು ಚಿನ್ನಾಭರಣ ಸಮೇತ ಈತನನ್ನು ಬಂಧಿಸಿದ್ದಾರೆ.

    ಈ ಹಿಂದೆ ಆರೋಪಿಯ ಚಿಕ್ಕಪುಟ್ಟ ತಪ್ಪುಗಳನ್ನು ಊರಿನ ಜನ ಕ್ಷಮಿಸಿದ್ದರು. ಇದೀಗ ದೊಡ್ಡ ಕಳ್ಳತನ ಮಾಡಿ ಕಂಬಿ ಹಿಂದೆ ಸೇರಿದ್ದಾನೆ.

  • ಗಲ್ಫ್, ಸಿಂಗಾಪುರಕ್ಕೆ ಹೋಲಿಸಿದರೆ ಭಾರತದಲ್ಲಿ ಚಿನ್ನ ಅಗ್ಗವಾಗಿರಲು ಕಾರಣವೇನು?

    ಗಲ್ಫ್, ಸಿಂಗಾಪುರಕ್ಕೆ ಹೋಲಿಸಿದರೆ ಭಾರತದಲ್ಲಿ ಚಿನ್ನ ಅಗ್ಗವಾಗಿರಲು ಕಾರಣವೇನು?

    ಸಾಮಾನ್ಯವಾಗಿ ಚಿನ್ನ ಎಂದರೆ ಎಲ್ಲರಿಗೂ ಇಷ್ಟವಾಗುವಂತೆ ವಸ್ತುವೇ. ಆದರೆ ದೇಶದಿಂದ ದೇಶಕ್ಕೆ ತುಲನೆ ಮಾಡಿದಾಗ ಚಿನ್ನದ ಬೆಲೆಯಲ್ಲಿ ವ್ಯತ್ಯಾಸ ಕಾಣಬಹುದು. ಇನ್ನೂ ಗಲ್ಫ್ ರಾಷ್ಟ್ರಗಳಾದ ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್), ಕತಾರ್, ಓಮನ್ ಹಾಗೂ ಸಿಂಗಾಪುರದಲ್ಲಿ ಭಾರತಕ್ಕಿಂತ ದುಬಾರಿಯಾಗಿದೆ.

    ಭಾರತದಲ್ಲಿ ಚಿನ್ನವನ್ನು ಕೇವಲ ಒಂದು ಬೆಲೆಬಾಳುವ ವಸ್ತುವನ್ನಾಗಿ ನೋಡದೆ ಅದೃಷ್ಟದ ಭಾಗವನ್ನಾಗಿ ಕೂಡ ನೋಡಲಾಗುತ್ತದೆ. ಈ ಕಾರಣದಿಂದಾಗಿ ಭಾರತದಲ್ಲಿ ಚಿನ್ನದ ಬಳಕೆ ಹಾಗೂ ಸಂಗ್ರಹಣೆ ಹೆಚ್ಚಾಗಿದೆ. ವಿಶ್ವದ ಎಲ್ಲಾ ದೇಶಗಳ ನಾಗರಿಕರ ಚಿನ್ನವನ್ನು ಒಟ್ಟುಗೂಡಿಸಿದರೆ ಭಾರತದ ಪ್ರಜೆಗಳಲ್ಲಿರುವ ಚಿನ್ನಕ್ಕಿಂತ ಕಡಿಮೆಯೇ ಆಗಿರುತ್ತದೆ.

    ಭಾರತದಲ್ಲಿ ನ.16 ರ ಹೊತ್ತಿಗೆ ಚಿನ್ನದ ಬೆಲೆ 10 ಗ್ರಾಂಗೆ 75,650 ರೂ ಆಗಿತ್ತು. ಹಬ್ಬದ ಸಂದರ್ಭ, ಮದುವೆ ಅಥವಾ ಶಾಪಿಂಗ್ ಮಾಡುವ ಯೋಚನೆಯಿಂದ ಒಂದಲ್ಲ ಒಂದು ರೀತಿಯಲ್ಲಿ ಚಿನ್ನವನ್ನು ಕೊಳ್ಳುತ್ತಲೇ ಇರುತ್ತಾರೆ. ಮುಖ್ಯವಾಗಿ ಚಿನ್ನವನ್ನು ಸುರಕ್ಷಿತ ಲೋಹವಾಗಿ ಪರಿಗಣಿಸುತ್ತಾರೆ. ಹೀಗಾಗಿ ಭಾರತದಲ್ಲಿ ಚಿನ್ನದ ಬೆಲೆ ಇದೀಗ ಗಲ್ಫ್, ಸಿಂಗಾಪುರಕ್ಕಿಂತ ಅಗ್ಗವಾಗಿದೆ.

    ಭಾರತದಲ್ಲಿ ಕುಸಿಯುತ್ತಿರುವ ಚಿನ್ನದ ಬೆಲೆ ಹಾಗೂ ಗಲ್ಫ್ ರಾಷ್ಟ್ರಗಳು ಮತ್ತು ಸಿಂಗಾಪುರದಲ್ಲಿ ಏರುತ್ತಿರುವ ದರಗಳ ನಡುವಿನ ಹಲವಾರು ವ್ಯತ್ಯಾಸಗಳ ಪ್ರಭಾವವಿದೆ.

    ಭಾರತದಲ್ಲಿ ಚಿನ್ನದ ಬೆಲೆ ಏಕೆ ಕುಸಿಯುತ್ತಿದೆ?
    ಜಾಗತಿಕ ಚಿನ್ನದ ಪ್ರವೃತ್ತಿಗಳು:
    ಜಾಗತಿಕವಾಗಿ, ಚಿನ್ನವು ಮೂರು ವರ್ಷಗಳಲ್ಲಿ ಅದರ ತೀಕ್ಷ್ಣವಾದ ಕುಸಿತವನ್ನು ಕಂಡಿದೆ. ಸಾಮಾನ್ಯವಾಗಿ ಡಾಲರ್ ಬೆಲೆಯಲ್ಲಿ ಕುಸಿತ ಕಂಡಾಗ ಚಿನ್ನದ ಬೆಲೆ ಏರಿಕೆಯಾಗುತ್ತದೆ. ಹಾಗೆಯೇ ಡಾಲರ್ ಬೆಲೆಯಲ್ಲಿ ಏರಿಕೆ ಕಂಡಾಗ ಚಿನ್ನದ ಬೆಲೆ ಇಳಿಕೆಯಾಗುತ್ತದೆ.

    ಭಾರತದಲ್ಲಿ ಬೇಡಿಕೆ
    ಭಾರತದಲ್ಲಿ ಚಿನ್ನದ ಬೇಡಿಕೆಯು ಹೆಚ್ಚುತ್ತಿದೆ ಇದರಿಂದಾಗಿ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತದೆ. ಸದ್ಯ ಮದುವೆಯ ಸೀಸನ್ ಮತ್ತು ಹಬ್ಬ ಇರುವುದರಿಂದ ಖರೀದಿಸುವವರ ಸಂಖ್ಯೆ ಜಾಸ್ತಿಯಾಗಿದ್ದು, ಬೆಲೆ ಕಡಿಮೆಯಾಗಿದೆ.

    ಜಾಗತಿಕ ಆರ್ಥಿಕ ಸೂಚಕಗಳು:
    ಫೆಡರಲ್ ರಿಸ‌ರ್ವ್‌ನಿಂದ ಬಡ್ಡಿದರ ಕಡಿಗೊಂಡಾಗ ಬೆಲೆ ಏರಿಕೆಯಾಗುತ್ತದೆ. ಇನ್ನೂ ಬಡ್ಡಿದರ ಜಾಸ್ತಿಯಾದಾಗ ಬೆಲೆ ಕಡಿಮೆಯಾಗುತ್ತದೆ. ಸಾಮಾನ್ಯವಾಗಿ ಬಡ್ಡಿದರ ಕಡಿಮೆಯಾದಾಗ ಹೂಡಿಕೆ ಮಾಡುವವರ ಸಂಖ್ಯೆ ಕಡಿಮೆಯಾಗುತ್ತದೆ. ಬಡ್ಡಿದರ ಜಾಸ್ತಿಯಾದಾಗ ಹೂಡಿಕೆ ಮಾಡುವವರ ಜಾಸ್ತಿಯಾಗುತ್ತದೆ. ಆಗ ಚಿನ್ನಕ್ಕೆ ಬೇಡಿಕೆ ಜಾಸ್ತಿಯಾಗುತ್ತದೆ. ಇದರಿಂದಾಗಿ ಸಿನ್ನದ ಬೆಲೆ ಇಳಿಕೆಯಾಗುತ್ತದೆ. ಸದ್ಯ ಬಡ್ಡಿದರ ಹೆಚ್ಚಾಗಿದ್ದು, ಚಿನ್ನದ ಬೆಲೆ ಕಡಿಮೆಯಾಗಿದೆ. ಇದರಿಂದ ಈ ಅಂಶ ಮಾರುಕಟ್ಟೆಯ ಮೇಲೆ ಪ್ರಭಾವ ಬೀರುತ್ತದೆ.

    ಕರೆನ್ಸಿ ಮತ್ತು ಆಮದು ವೆಚ್ಚಗಳು:
    ವಿನಿಮಯ ದರ ವ್ಯತ್ಯಾಸವಾದಾಗ ಆ ಪ್ರದೇಶದ ಚಿನ್ನದ ಬೆಲೆಯಲ್ಲಿ ವ್ಯತ್ಯಾಸ ಕಾಣುತ್ತದೆ. ಸ್ಥಳೀಯ ಮಾರುಕಟ್ಟೆಯ ಪರಿಸ್ಥಿತಿ, ತೆರಿಗೆ ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರಬಹುದು

  • ಚಿನ್ನದ ಬೆಲೆ ಒಂದು ವಾರದಲ್ಲಿ 6 ಸಾವಿರ ಇಳಿಕೆ – ಇಂದು 680 ರೂ. ಇಳಿಕೆ

    ಚಿನ್ನದ ಬೆಲೆ ಒಂದು ವಾರದಲ್ಲಿ 6 ಸಾವಿರ ಇಳಿಕೆ – ಇಂದು 680 ರೂ. ಇಳಿಕೆ

    ನವದೆಹಲಿ: ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ. 10 ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ (Gold Price) ಇಂದು (ನ.14) 680 ರೂ. ಇಳಿಕೆಯಾಗಿದ್ದರೆ 22 ಕ್ಯಾರೆಟ್‌ ಚಿನ್ನದ ಬೆಲೆ 624 ರೂ. ಇಳಿದಿದೆ.

    ಬೆಲೆ ಇಳಿಕೆಯಿಂದ 10 ಗ್ರಾಂ 24 ಕ್ಯಾರೆಟ್‌ ಚಿನ್ನದ ದರ  73,940 ರೂ. ಇದ್ದರೆ 10 ಗ್ರಾಂ 22 ಕ್ಯಾರೆಟ್‌ ಚಿನ್ನ ದರ  67,778 ರೂ.ಗೆ ಇಳಿದಿದೆ. 1 ಕೆಜಿ ಬೆಳ್ಳಿ ದರ 1,067 ರೂ. ಇಳಿಕೆಯಾಗಿದ್ದು ಇಂದು 88,130 ರೂ. ನಲ್ಲಿ ವ್ಯವಹಾರ ನಡೆಸುತ್ತಿದೆ. ಇದನ್ನೂ ಓದಿ: ಅಮೆರಿಕದ ಗುಪ್ತಚರ ವಿಭಾಗಕ್ಕೆ ತುಳಸಿ ಬಾಸ್‌- ಭಾರತ ಸಂಬಂಧ ಇಲ್ಲದೇ ಇದ್ದರೂ ಹಿಂದೂ ಹೆಸರು ಬಂದಿದ್ದು ಹೇಗೆ?

    ಅಮೆರಿಕದ ಅಧ್ಯಕ್ಷೀಯ ಚುನಾವಣೆ ಫಲಿತಾಂಶ (US Presidential Election Results) ಪ್ರಕಟಗೊಂಡ ದಿನವಾದ ನ.6 ರಂದು 10 ಗ್ರಾಂ 24 ಕ್ಯಾರೆಟ್‌ ಚಿನ್ನಕ್ಕೆ 80,413 ರೂ. ದರ ಇತ್ತು. ಒಂದು ವಾರದಲ್ಲಿ ಚಿನ್ನದ ಬೆಲೆ ಸುಮಾರು 6 ಸಾವಿರ ರೂ. ಇಳಿಕೆಯಾಗಿದೆ.

    ಯಾಕೆ ಇಳಿಕೆ?
    ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್‌ (Donald Trump) ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಡಾಲರ್‌ (Dollar) ಮೌಲ್ಯ ಏರಿಕೆಯಾಗುತ್ತದೆ. ಅಮೆರಿಕದಲ್ಲಿ ಈಗ ಹಣದುಬ್ಬರ ಜಾಸ್ತಿಯಿದ್ದು ಬೆಲೆಗಳು ಏರಿಕೆಯಾಗಿದೆ. ಬೆಲೆ ಏರಿಕೆಯನ್ನು ನಿಯಂತ್ರಿಸಲು ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಫೆಡರಲ್‌ ರಿಸರ್ವ್‌ ಮುಂದೆ ಬಡ್ಡಿದರವನ್ನ ಏರಿಸುವ ಸಾಧ್ಯತೆಯಿದೆ. ಬಡ್ಡಿದರ ಏರಿಕೆಯಾದರೆ ಡಾಲರ್‌ ಮೌಲ್ಯವೂ ಏರಿಕೆ ಆಗುತ್ತದೆ. ಡಾಲರ್‌ ಬಾಂಡ್‌ಗಳ ಮೌಲ್ಯ ಏರಿಕೆ ವಿಶ್ವದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರುತ್ತದೆ.

    ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಭೀತಿಯಿಂದ ಹೂಡಿಕೆದಾರರು ಹಿಂದೆ ಸ್ಟಾಕ್‌ ಮಾರುಕಟ್ಟೆ ಮತ್ತು ಚಿನ್ನದ ಮೇಲೆ ಭಾರೀ ಹೂಡಿಕೆ ಮಾಡುತ್ತಿದ್ದರು. ಇದರಿಂದಾಗಿ ಚಿನ್ನದ ಬೆಲೆ ಏರಿಕೆಯಾಗಿತ್ತು. ಈಗ ಡಾಲರ್‌ ಬಲಗೊಳ್ಳುತ್ತಿದ್ದು ಹೂಡಿಕೆದಾರರು ಚಿನ್ನದ ಮೇಲಿನ ಹೂಡಿಕೆ ಕಡಿಮೆ ಮಾಡುತ್ತಿರುವುದರಿಂದ ಬೆಲೆಗಳು ಇಳಿಕೆಯಾಗುತ್ತಿದೆ.

    ಅಕ್ಟೋಬರ್‌ನಲ್ಲಿ ಭಾರತ ಷೇರು ಮಾರುಕಟ್ಟೆಯಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) 1,14,445 ಕೋಟಿ ರೂ. ಹಣವನ್ನು ಹಿಂದಕ್ಕೆ ಪಡೆದರೆ ಈಗಾಲೇ ನವೆಂಬರ್‌ನಲ್ಲಿ 27,683 ಕೋಟಿ ರೂ. ಹಿಂದಕ್ಕೆ ಪಡೆದಿದ್ದಾರೆ. ಪರಿಣಾಮ ಷೇರು ಮಾರುಕಟ್ಟೆಯಲ್ಲಿ ರಕ್ತಪಾತವಾಗಿದೆ. ಕಳೆದ ಅಕ್ಟೋಬರ್‌ನಲ್ಲಿ 81,973 ಇದ್ದ ಸೆನೆಕ್ಸ್‌ ಈಗ ಸುಮಾರು 4 ಸಾವಿರ ಅಂಕ ಪತನಗೊಂಡು 77,500 ಅಂಕಕ್ಕೆ ಕುಸಿದಿದೆ.

     

  • ಕಲ್ಯಾಣ ಮಂಟಪಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ – ಖತರ್ನಾಕ್ ಕಳ್ಳರ ಬಂಧನ

    ಕಲ್ಯಾಣ ಮಂಟಪಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ – ಖತರ್ನಾಕ್ ಕಳ್ಳರ ಬಂಧನ

    ದಾವಣಗೆರೆ: ಕಲ್ಯಾಣ ಮಂಟಪಕ್ಕೆ ನುಗ್ಗಿ ಚಿನ್ನಾಭರಣ (Gold) ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ದಾವಣಗೆರೆಯ (Davanagere) ಶಾಂತಿನಗರ ನಿವಾಸಿಗಳಾದ ಕಿರಣ್ ನಾಯ್ಕ್ (25), ವಿನೋದ್ ನಾಯ್ಕ್ (23) ಎಂದು ಗುರುತಿಸಲಾಗಿದೆ. ಆರೋಪಿಗಳು ಮದುವೆ ನಡೆಯುತ್ತಿದ್ದಾಗ ಕಲ್ಯಾಣ ಮಂಟಪಕ್ಕೆ ನುಗ್ಗಿ ಕಳ್ಳತನ ಮಾಡುತ್ತಿದ್ದರು. ಇತ್ತೀಚೆಗೆ ನಿಜಲಿಂಗಪ್ಪ ಬಡಾವಣೆಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಗೆ ನುಗ್ಗಿ ಕಳ್ಳತನ ಮಾಡಿದ್ದರು ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಆರೋಪಿಗಳು ಸುಮಾರು 73 ಗ್ರಾಂ ತೂಕದ ಮಾಂಗಲ್ಯ ಸರ, ಚೈನ್ ಹಾಗೂ ಒಂದು ಜೊತೆ ಚಿಕ್ಕ ಜುಮುಕಿ ಕಳ್ಳತನ ಮಾಡಿಕೊಂಡು ಬಂದಿದ್ದರು. ಈ ಸಂಬಂಧ ಬಡಾವಣೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ಬಂಧಿತರಿಂದ ಅಂದಾಜು 7,83,000 ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಕಿರಣ್ ನಾಯ್ಕ್ ಈ ಹಿಂದೆ 12 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪವಿದೆ.

  • ದಾವಣಗೆರೆ | ಬ್ಯಾಂಕ್‍ನಲ್ಲಿದ್ದ 13 ಕೋಟಿ ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳರು!

    ದಾವಣಗೆರೆ | ಬ್ಯಾಂಕ್‍ನಲ್ಲಿದ್ದ 13 ಕೋಟಿ ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳರು!

    – 17.705 ಕೆಜಿ ಚಿನ್ನ ಕಳ್ಳತನ
    – ಶ್ವಾನದಳದ ಕಣ್ತಪ್ಪಿಸಲು ಖಾರದ ಪುಡಿ ಬಳಕೆ!

    ದಾವಣಗೆರೆ: ನ್ಯಾಮತಿಯ ಎಸ್‍ಬಿಐ ಬ್ಯಾಂಕ್‍ನಲ್ಲಿದ್ದ 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು (Gold) ಕಳ್ಳರು ಹೊತ್ತೊಯ್ದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಸುನೀಲ್ ಕುಮಾರ್ ಯಾದವ್ ಮಾಹಿತಿ ನೀಡಿದ್ದಾರೆ.

    ನಗರದ ನೆಹರು ರಸ್ತೆಯಲ್ಲಿರುವ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (State Bank of India) ಶಾಖೆಯಲ್ಲಿ ಕಿಟಕಿ ಸರಳುಗಳನ್ನು ಮುರಿದು ಲಾಕರ್‌ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದಿದ್ದರು. ಎರಡು ದಿನಗಳ ಹಿಂದೆ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು (Police) ಶಂಕೆ ವ್ಯಕ್ತಪಡಿಸಿದ್ದಾರೆ. ಶನಿವಾರ ಹಾಗೂ ಭಾನುವಾರ ಎರಡು ದಿನ ಬ್ಯಾಂಕ್ ರಜೆ ಇದ್ದ ಕಾರಣ ಶುಕ್ರವಾರ ರಾತ್ರಿ ಕಳ್ಳರು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.

    ಕಳ್ಳರು ಗುರುತು ಪತ್ತೆಯಾಗದಂತೆ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಸಮೇತ ಪರಾರಿಯಾಗಿದ್ದರು. ಅಲ್ಲದೇ ಶ್ವಾನದಳದ ಶ್ವಾನಗಳಿಗೆ ವಾಸನೆ ಗ್ರಹಿಸಲು ಸಾಧ್ಯವಾಗದಂತೆ ಬ್ಯಾಂಕ್‌ನ ಒಳಗಡೆ ಖಾರದ ಪುಡಿ ಎರಚಿದ್ದಾರೆ. ಕಳ್ಳರನ್ನು ಹಿಡಿಯಲು ಎಎಸ್ಪಿ ಸ್ಯಾಮ್ ವರ್ಗೀಸ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.

    ಐದು ವರ್ಷಕ್ಕೊಮ್ಮೆ ಬ್ಯಾಂಕ್ ಕಳ್ಳತನ!
    ಹೊನ್ನಾಳಿ- ನ್ಯಾಮತಿಯಲ್ಲಿ ಐದು ವರ್ಷಕ್ಕೊಮ್ಮೆ ಬ್ಯಾಂಕ್ ಕಳ್ಳತನವಾಗುತ್ತಿದೆ. 2014ರಲ್ಲಿ ಅರಕೆರೆ ಬಳಿಯ ಕರ್ನಾಟಕ ಬ್ಯಾಂಕ್‌ನಲ್ಲಿ ಕಳ್ಳತನ ನಡೆದಿತ್ತು. 2019ರಲ್ಲಿ ಅದೇ ಬ್ಯಾಂಕ್ ಮತ್ತೆ ಕಳ್ಳತನ ಮಾಡಿ 2 ಕೋಟಿ ರೂ. ಮೌಲ್ಯದ ನಗದು ಚಿನ್ನಾಭರಣ ಕಳವು ಮಾಡಲಾಗಿತ್ತು. ಈಗ 2024 ರಲ್ಲಿ ನ್ಯಾಮತಿಯಲ್ಲಿ ಎಸ್‌ಬಿಐ ಬ್ಯಾಂಕ್ ಕಳ್ಳತನ ನಡೆದಿದೆ.

  • ಉತ್ತರ ಪ್ರದೇಶ| ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12.5 ಕೆಜಿ ಚಿನ್ನ ಸೀಜ್

    ಉತ್ತರ ಪ್ರದೇಶ| ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12.5 ಕೆಜಿ ಚಿನ್ನ ಸೀಜ್

    ಲಕ್ನೋ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12.5 ಕೆಜಿ ಚಿನ್ನವನ್ನು (Gold) ಪೊಲೀಸರು ವಶವಡಿಸಿಕೊಂಡ ಘಟನೆ ಉತ್ತರಪ್ರದೇಶದ (Uttar Pradesh) ಮಥುರಾದಲ್ಲಿ ನಡೆದಿದೆ.

    ಮಥುರಾ ಪೊಲೀಸರು ಯಮುನಾ ಎಕ್ಸ್ಪ್ರೆಸ್ ವೇಯಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭ ಸೂಕ್ತ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 12.5 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Cyclone Dana |ಒಡಿಶಾ, ಪಶ್ಚಿಮ ಬಂಗಾಳ ಕಡೆ ಹೋಗುವ 150ಕ್ಕೂ ಹೆಚ್ಚು ರೈಲುಗಳ ಸೇವೆ ರದ್ದು

    ಮಾಂಟ್ ಟೋಲ್‌ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಕಾರಿನಿಂದ ಸುಮಾರು 12.5 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ದೆಹಲಿಯಿಂದ ಡಿಯೋರಿಯಾ ಕಡೆಗೆ ಚಿನ್ನವನ್ನು ಸಾಗಿಸುತ್ತಿದ್ದರು. ಚಿನ್ನ ಸಾಗಣೆಯ ಸಂಬಂಧ ಯಾವುದೇ ದಾಖಲೆ ಇರಲಿಲ್ಲ. ಆದ್ದರಿಂದ ಚಿನ್ನವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಓರ್ವ ಉತ್ತರ ಪ್ರದೇಶದವನಾಗಿದ್ದು, ಇನ್ನೊಬ್ಬ ಬಿಹಾರದವನು ಎಂದು ಮಥುರಾ ಗ್ರಾಮಾಂತರ ಎಸ್‌ಪಿ ತ್ರಿಗುಣ್ ವಿಶೇನ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನ ಮಲಿಯಾಬಾದ್ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ- ಕ್ಯಾಮೆರಾದಲ್ಲಿ ಚಲನವಲನ ಸೆರೆ

  • ಧಾರವಾಡ| ಖಾಸಗಿ ಬಸ್‌ನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 98 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ

    ಧಾರವಾಡ| ಖಾಸಗಿ ಬಸ್‌ನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 98 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ

    ಧಾರವಾಡ: ಯಾವುದೇ ದಾಖಲಾತಿ ಇಲ್ಲದೇ ಮುಂಬೈನಿಂದ (Mumbai) ಹುಬ್ಬಳ್ಳಿಗೆ (Hubballi) ಖಾಸಗಿ ಬಸ್‌ನಲ್ಲಿ ಸಾಗಿಸುತ್ತಿದ್ದ 98 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಧಾರವಾಡ ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಧಾರವಾಡದ (Dharawada) ನರೇಂದ್ರ ಕ್ರಾಸ್ ಬಳಿ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಎರಡು ದಿನಗಳ ಹಿಂದೆ ಆ ಬಸ್ ತಡೆದು ಚಿನ್ನಾಭರಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 18.14 ಲಕ್ಷ ಮೌಲ್ಯದ ಕ್ಷೀರ ಭಾಗ್ಯ ಹಾಲಿನ ಪುಡಿ ಜಪ್ತಿ

    ಭವರ್‌ಸಿಂಗ್ ಬಂಧಿತ ವ್ಯಕ್ತಿ. ಈತನಿಂದ ಒಬರೊಬ್ಬರಿ 98 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಸಾಮಾನುಗಳನ್ನು ಜಪ್ತಿ ಮಾಡಲಾಗಿದೆ. ಮೇಲ್ನೋಟಕ್ಕೆ ಸುಮಾರು 2 ಕೋಟಿ ರೂ. ನಷ್ಟು ಚಿನ್ನಾಭರಣವನ್ನು ಜಪ್ತಿ ಮಾಡಲಾಗಿತ್ತು ಎಂದು ಊಹಿಸಲಾಗಿತ್ತು. ಆದರೆ, 98 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಸಾಮಾನುಗಳನ್ನು ಜಪ್ತಿ ಮಾಡಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ವಿಕಾಸಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನದ್ದು 80 ಪರ್ಸೆಂಟ್‌ ಭ್ರಷ್ಟಾಚಾರ ಸರ್ಕಾರ: ಕಟೀಲ್‌ ವಾಗ್ದಾಳಿ

    ಮೂಲತಃ ರಾಜಸ್ಥಾನದವನಾದ ಹಾಗೂ ಹಾಲಿ ಹುಬ್ಬಳ್ಳಿಯ ದುರ್ಗದಬೈಲ್‌ನಲ್ಲಿ ವಾಸವಿದ್ದ ಭರವರಸಿಂಗ್ ಚೌಹಾಣ್ ಎಂಬಾತ ಯಾವುದೇ ದಾಖಲೆ ಇಲ್ಲದೇ ಒಂದು ಬ್ಯಾಗ್ ಹಾಗೂ ಒಂದು ಸೂಟ್‌ಕೇಸ್‌ನಲ್ಲಿ ಒಟ್ಟು 1237.20 ಗ್ರಾಂ ತೂಕದ ಚಿನ್ನದ ಆಭರಣ ಹಾಗೂ ಚಿನ್ನದ ಬಿಸ್ಕೆಟ್, 15 ಕೆಜಿ ಬೆಳ್ಳಿಯ ಗಟ್ಟಿ ಆಭರಣ ಹಾಗೂ ಸಾಮಾನುಗಳನ್ನು ಸಾಗಿಸುತ್ತಿದ್ದ. ಒಟ್ಟು 98 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಸಾಮಾನುಗಳನ್ನು ಆತನಿಂದ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರಿಟೇಲ್‌ ಸ್ಟೋರ್‌ ತೆರೆಯಲು ಮುಂದಾದ ಆಪಲ್‌

    ಭವರಸಿಂಗ್ ಕೊರಿಯರ್ ಸರ್ವಿಸ್ ಕೆಲಸ ಮಾಡುತ್ತಿದ್ದ. ರಾಜಸ್ತಾನ (Rajasthan) ಮೂಲದ ನರಪಲ್‌ಸಿಂಗ್ ಬಾಲೋಥ್ ಕೂಡ ಕೊರಿಯರ್ ಸರ್ವಿಸ್ ಕೆಲಸ ಮಾಡುತ್ತಿದ್ದ. ನರಪಲ್ ಸಿಂಗ್ ಕೈಕೆಳಗಡೆ ಈ ಭವರ್‌ಸಿಂಗ್ ಕೆಲಸ ಮಾಡುತ್ತಿದ್ದ. ಸದ್ಯ ಭವರ್‌ಸಿಂಗ್ ಪೊಲೀಸರ ವಶದಲ್ಲಿದ್ದು, ನರಪಲ್‌ಸಿಂಗ್ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಜಾಲ ಬೀಸಲಾಗಿದೆ. ಸದ್ಯ ಧಾರವಾಡದಲ್ಲಿ ಸಿಕ್ಕ ಚಿನ್ನ ಹಾಗೂ ಬೆಳ್ಳಿಯ ಆಭರಣಕ್ಕೆ ಯಾವುದೇ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿಯನ್ನು ಸ್ವತಃ ಐಜಿಪಿಯವರೇ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢ ಎನ್‌ಕೌಂಟರ್| 35 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

  • ಬಜೆಟ್‌ ಭಾಷಣ ಮುಗಿದ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಭಾರೀ ಇಳಿಕೆ

    ಬಜೆಟ್‌ ಭಾಷಣ ಮುಗಿದ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಭಾರೀ ಇಳಿಕೆ

    ನವದೆಹಲಿ: ನಿರ್ಮಲಾ ಸೀತಾರಾಮನ್‌ (Nirmala Sitharaman) ಬಜೆಟ್‌ (Union Budget) ಭಾಷಣ ಮುಗಿದ ಬೆನ್ನಲ್ಲೇ ಚಿನ್ನ (Gold) ಮತ್ತು ಬೆಳ್ಳಿ (Silver) ದರದಲ್ಲಿ ಭಾರೀ ಇಳಿಕೆಯಾಗಿದೆ.

    ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ(MCX) 10 ಗ್ರಾಂ ಚಿನ್ನದ ಬೆಲೆ 3,916 ರೂ. ಇಳಿಕೆಯಾಗಿದ್ದರೆ 1 ಕೆಜಿ ಬೆಳ್ಳಿ ದರ 4,213 ರೂ. ಇಳಿಕೆಯಾಗಿದೆ. ಅಂತಿಮವಾಗಿ 10 ಗ್ರಾಂ ಚಿನ್ನದ ದರ 68,789 ರೂ. ಕೊನೆಯಾದರೆ 1 ಕೆಜಿ ಬೆಳ್ಳಿ ದರ 84,990 ರೂ.ನಲ್ಲಿ ಅಂತ್ಯವಾಗಿದೆ. ಇದನ್ನೂ ಓದಿ: Budget 2024 | ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ.

    ಬಜೆಟ್‌ ಪ್ರಸ್ತಾಪ ಅಲ್ಲದೇ ವಿಶ್ವದೆಲ್ಲೆಡೆ ನಡೆಯುತ್ತಿರುವ ಹಲವು ವಿದ್ಯಮಾನಗಳಿಂದ ಚಿನ್ನ ಬೆಳ್ಳಿ ದರ ಇಳಿಕೆಯಾಗುತ್ತಿದೆ. ಈ ಬಜೆಟ್‌ನಲ್ಲಿ ಚಿನ್ನ (Gold) ಮತ್ತು ಬೆಳ್ಳಿಯ (Silver) ಆಮದು ಸುಂಕವನ್ನು ಕಡಿತ ಮಾಡಿದ್ದರಿಂದ ಆಭರಣಗಳ ದರ ಇಳಿಕೆಯಾಗಲಿದೆ. ಇದನ್ನೂ ಓದಿ: ದಿಢೀರ್‌ ಕುಸಿತಗೊಂಡು ನಂತರ ಸಾವಿರ ಅಂಕ ಏರಿಕೆಯಾಗಿ ಸೆನ್ಸೆಕ್ಸ್‌ ಮತ್ತೆ ಕುಸಿದಿದ್ದು ಯಾಕೆ?

    ಈ ಮೊದಲು ಚಿನ್ನ ಮತ್ತು ಬೆಳ್ಳಿಗೆ 15% ಆಮದು ಸುಂಕ (Customs Duty) ವಿಧಿಸಲಾಗುತ್ತಿತ್ತು. ಆದರೆ ಈಗ ಆಮದು ಸುಂಕವನ್ನು 6% ಇಳಿಕೆ ಮಾಡಲಾಗಿದೆ.

    ದೇಶದಲ್ಲಿ ಚಿನ್ನ ಮತ್ತು ಬೆಲೆಬಾಳುವ ಲೋಹದ ಆಭರಣಗಳಲ್ಲಿ ದೇಶೀಯ ಮೌಲ್ಯವರ್ಧನೆ ಹೆಚ್ಚಿಸಲು ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು 6% ಕ್ಕೆ ಮತ್ತು ಪ್ಲಾಟಿನಂ ಮೇಲೆ 6.4% ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಮ್ಮ ಬಜೆಟ್‌ ಭಾಷಣದಲ್ಲಿ (Budget Speech) ಹೇಳಿದರು.

    6% ತೆರಿಗೆ ಹೇಗೆ?
    ಚಿನ್ನ ಮತ್ತು ಬೆಳ್ಳಿ ಮೇಲಿನ ಅಮದು ಸುಂಕವನ್ನು 10% ರಿಂದ 5% ಇಳಿಕೆ ಮಾಡಿದ್ದರೆ ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್ (AIDC) 5% ರಿಂದ 1% ಕ್ಕೆ ಇಳಿಸಲಾಗಿದೆ. ಹೀಗಾಗಿ ಈ ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಮೇಲೆ 6% ತೆರಿಗೆ ವಿಧಿಸುವ ಪ್ರಸ್ತಾಪ ಮಾಡಲಾಗಿದೆ. ಇದನ್ನೂ ಓದಿ: ಉದ್ಯೋಗಿಗಳಿಗೆ 17,500 ರೂ. ಉಳಿತಾಯ – ಮೊದಲು ತೆರಿಗೆ ಎಷ್ಟಿತ್ತು? ಈಗ ಏನು ಬದಲಾವಣೆಯಾಗಿದೆ?

  • ಆಭರಣ ಪ್ರಿಯರಿಗೆ ಸಿಹಿ ಸುದ್ದಿ – ಕಡಿಮೆಯಾಗಲಿದೆ ಚಿನ್ನ, ಬೆಳ್ಳಿ ದರ

    ಆಭರಣ ಪ್ರಿಯರಿಗೆ ಸಿಹಿ ಸುದ್ದಿ – ಕಡಿಮೆಯಾಗಲಿದೆ ಚಿನ್ನ, ಬೆಳ್ಳಿ ದರ

    ನವದೆಹಲಿ: ಆಭರಣ ಪ್ರಿಯರಿಗೆ ಸಿಹಿ ಸುದ್ದಿ. ಈ ಬಜೆಟ್‌ನಲ್ಲಿ ಚಿನ್ನ (Gold) ಮತ್ತು ಬೆಳ್ಳಿಯ (Silver) ಮೇಲೆ ಆಮದು ಸುಂಕವನ್ನು ಕಡಿತ ಮಾಡಿದ್ದರಿಂದ ಆಭರಣಗಳ ದರ ಇಳಿಕೆಯಾಗಲಿದೆ.

    ಈ ಮೊದಲು ಚಿನ್ನ ಮತ್ತು ಬೆಳ್ಳಿಗೆ 15% ಆಮದು ಸುಂಕ (Customs Duty) ವಿಧಿಸಲಾಗುತ್ತಿತ್ತು. ಆದರೆ ಈಗ ಆಮದು ಸುಂಕವನ್ನು 6% ಇಳಿಕೆ ಮಾಡಲಾಗಿದೆ.

    ದೇಶದಲ್ಲಿ ಚಿನ್ನ ಮತ್ತು ಬೆಲೆಬಾಳುವ ಲೋಹದ ಆಭರಣಗಳಲ್ಲಿ ದೇಶೀಯ ಮೌಲ್ಯವರ್ಧನೆ ಹೆಚ್ಚಿಸಲು, ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು 6% ಕ್ಕೆ ಮತ್ತು ಪ್ಲಾಟಿನಂ ಮೇಲೆ 6.4% ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ತಮ್ಮ ಬಜೆಟ್‌ ಭಾಷಣದಲ್ಲಿ (Budget Speech) ಹೇಳಿದರು. ಇದನ್ನೂ ಓದಿ: ಬಜೆಟ್ 2024 – ಯಾವೆಲ್ಲ ವಸ್ತುಗಳ ಬೆಲೆ ಏರಿಕೆ? ಯಾವುದರ ಬೆಲೆ ಇಳಿಕೆ?

    ವಿಘ್ನಹರ್ತಾ ಗೋಲ್ಡ್‌ನ ಅಧ್ಯಕ್ಷ ಮತ್ತು ಸಂಸ್ಥಾಪಕ ಮಹೇಂದ್ರ ಲುನಿಯಾ ಪ್ರತಿಕ್ರಿಯಿಸಿ, 2023 ಹಣಕಾಸು ವರ್ಷದಲ್ಲಿ ಭಾರತ ಅಂದಾಜು 2.8 ಲಕ್ಷ ಕೋಟಿ ರೂ. ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಂಡಿದೆ. 15% ಆಮದು ಸುಂಕ ಇರುವ ಕಾರಣ ಅಂದಾಜು 42,000 ಕೋಟಿ ರೂ. ಪಾವತಿಸಲಾಗಿದೆ ಎಂದು ತಿಳಿಸಿದರು.

    ವರ್ಷದಿಂದ ವರ್ಷಕ್ಕೆ ಚಿನ್ನದ ಬೇಡಿಕೆ ಹೆಚ್ಚಾಗುತ್ತಿದ್ದಂತೆ ಚಿನ್ನದ ದರವೂ ಭಾರತದಲ್ಲಿ ಏರಿಕೆಯಾಗುತ್ತಿದೆ. ಆಮದು ಸುಂಕವು ಹೆಚ್ಚಿದ್ದರಿಂದ  ಚಿನ್ನದ ಕಳ್ಳಸಾಗಾಣೆ ಹೆಚ್ಚಾಗುತ್ತಿದೆ. ಈ ಕಳ್ಳ ಸಾಗಾಣೆಯನ್ನು ನಿಯಂತ್ರಿಸಲು ಸರ್ಕಾರ ಈಗ ಆಮದು ಸುಂಕವನ್ನು ಇಳಿಸಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ. ಇದನ್ನೂ ಓದಿ: Union Budget 2024: ಬಿಹಾರ, ಆಂಧ್ರಪ್ರದೇಶಕ್ಕೆ ಬಜೆಟ್‌ನಲ್ಲಿ ಭರ್ಜರಿ ಅನುದಾನ

     

  • 46 ವರ್ಷದ ನಂತರ ತೆರೆಯಲಿದೆ ಪುರಿ ಜಗನ್ನಾಥ ದೇಗುಲ ರತ್ನ ಭಂಡಾರದ ಬಾಗಿಲು!

    46 ವರ್ಷದ ನಂತರ ತೆರೆಯಲಿದೆ ಪುರಿ ಜಗನ್ನಾಥ ದೇಗುಲ ರತ್ನ ಭಂಡಾರದ ಬಾಗಿಲು!

    – 1985ರ ಜುಲೈ 14ರಂದು ಕೊನೆಯ ಬಾರಿ ಓಪನ್‌
    – ಸುಪ್ರೀಂ ಆದೇಶದಂತೆ ರತ್ನ ಭಂಡಾರ ತೆರೆಯಲು ಮುಂದಾದ ಸರ್ಕಾರ

    ಭುವನೇಶ್ವರ: ತಿರುವಂತನಪುರಂನಲ್ಲಿರುವ ಪದ್ಮನಾಭ ದೇವಸ್ಥಾನ (Padmanabhaswamy Temple Thiruvananthapuram) ತಳ ಮಹಡಿಯಲ್ಲಿ ದೊಡ್ಡ ಪ್ರಮಾಣ ಪುರಾತನ ಕಾಲದ ಚಿನ್ನಾಭರಣ ಪತ್ತೆಯಾಗಿತ್ತು. ಇದು ಇಡೀ ದೇಶದ ಗಮನ ಸೆಳೆದಿತ್ತು. ಅಂತಹದೇ ಮತ್ತೊಂದು ಘಟನೆ ಈಗ ಒಡಿಶಾದ (Odisha) ಪುರಿಯಲ್ಲಿ ನಡೆಯಬಹುದಾ ಎನ್ನುವ ಕುತೂಹಲ ಮನೆ ಮಾಡಿದೆ. 46 ವರ್ಷಗಳ ಬಳಿಕ ಪುರಿಯ ಜಗನ್ನಾಥ ದೇವಾಲಯದ (Puri Jagannath Temple) ರತ್ನ ಭಂಡಾರದ ಬಾಗಿಲನ್ನು ತೆರೆಯಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಅಲ್ಲಿರುವ ಪುರಾತನ ಚಿನ್ನಾಭರಣ, ವಜ್ರ, ವೈಡೂರ್ಯದ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಹೆಚ್ಚಾಗತೊಡಗಿದೆ.

    1985ರ ಜುಲೈ 14ರಂದು ಬಲಭದ್ರ ದೇವರ ಚಿನ್ನಾಭರಣಗಳ ಪತ್ತೆಗಾಗಿ ರತ್ನ ಭಂಡಾರವನ್ನು ಕೊನೆಯ ಬಾರಿಗೆ ತೆರೆಯಲಾಗಿತ್ತು. ರತ್ನ ಭಂಡಾರದಲ್ಲಿ ಎಷ್ಟು ನಿಧಿಗಳಿವೆ ಎಂಬ ಬಗ್ಗೆ 1978ರ ಮೇ 13ರಿಂದ ಜುಲೈ 13ರವರೆಗೆ ಲೆಕ್ಕಾಚಾರ ಹಾಕಲಾಗಿದ್ದು, ಇದು ಕೊನೆಯದಾಗಿ ನಡೆದ ಲೆಕ್ಕಾಚಾರವಾಗಿತ್ತು. ಆ ಬಳಿಕ ರತ್ನ ಭಂಡಾರದೊಳಗೆ ವಿಷಕಾರಿ ಸರ್ಪಗಳು, ನಾಗರ ಹಾವುಗಳು ಕಾವಲು ಕಾಯುತ್ತಿರುವ ಬಗ್ಗೆ ದಂತಕಥೆಗಳು, ಜಾನಪದ ಕಥೆಗಳು ಹುಟ್ಟಿಕೊಂಡಿದ್ದವು, ಹೀಗಾಗೀ ಬಾಗಿಲು ತೆರೆಯುವ ಸಾಹಸ ಮಾಡಲು ಯಾವ ಸರ್ಕಾರ ಹೋಗಿರಲಿಲ್ಲ.

    ಬರೋಬ್ಬರಿ 45 ವರ್ಷಗಳ ಬಳಿಕ ರತ್ನ ಭಂಡಾರದ ಬಾಗಿಲು ತೆರೆಯಲ್ಲಿದ್ದು, ಅಲ್ಲಿರುವ ಪುರಾತನ ಚಿನ್ನಾಭರಣ, ವಜ್ರ, ವೈಡೂರ್ಯದ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಹೆಚ್ಚಾಗತೊಡಗಿದೆ. ಅದರ ಜೊತೆಗೆ ಅಲ್ಲಿ ವಾಸವಾಗಿರುವ ಹಾವುಗಳ ಬಗ್ಗೆಯೂ ಅಧಿಕಾರಿಗಳಿಗೆ ಅಷ್ಟೇ ಭಯ ಹುಟ್ಟಿಸಿದೆ. ಹೀಗಾಗೀ ನುರಿತ ಉರಗ ತಜ್ಞರು ವೈದ್ಯರ ತಂಡ, ಅಂಬುಲೆನ್ಸ್‌ ಸನ್ನದ್ಧವಾಗಿಟ್ಟುಕೊಳ್ಳಲಾಗಿದೆ.

    ಸಂಪತ್ತು ಎಷ್ಟಿದೆ?
    ಜಗನ್ನಾಥ ದೇವಸ್ಥಾನದ ರತ್ನ ಭಂಡಾರದಲ್ಲಿ ಇರುವ ಅಮೂಲ್ಯ ವಜ್ರ ವೈಡೂರ್ಯ, ಚಿನ್ನಾಭರಣಗಳನ್ನು ಬಳಸಿಕೊಂಡರೆ ವಿಶ್ವದ ಹಲವು ಬಡ ರಾಷ್ಟ್ರಗಳ ಆರ್ಥಿಕತೆಯನ್ನು ಸುಧಾರಿಸಬಹುದಂತೆ.  2018 ರಲ್ಲಿ, ಆಗಿನ ಕಾನೂನು ಸಚಿವ ಪ್ರತಾಪ್ ಜೆನಾ ಅವರು ‘ರತ್ನ ಭಂಡಾರ್’ 12,831 ಭಾರಿ (ಒಂದು ಭಾರಿ 11.66 ಗ್ರಾಂಗೆ ಸಮ) ಚಿನ್ನಾಭರಣಗಳನ್ನು ಹೊಂದಿದೆ. 22,153 ಭಾರಿ ಬೆಳ್ಳಿ ಪಾತ್ರೆಗಳು ಮತ್ತು ಇತರ ವಸ್ತುಗಳನ್ನು ಅಮೂಲ್ಯವಾದ ಕಲ್ಲುಗಳಿಂದ ಅಳವಡಿಸಲಾಗಿದೆ ಎಂದು ರಾಜ್ಯ ವಿಧಾನಸಭೆಗೆ ತಿಳಿಸಿದ್ದರು.

    ದೇವಾಲಯದಲ್ಲಿ ಕೆಲಸ ಮಾಡುತ್ತಿರುವ ಹಿರಿಯ ವ್ಯಕ್ತಿಗಳ ಪ್ರಕಾರ ರತ್ನ ಭಂಡಾರವು ಮೂರು ಭಾಗಗಳನ್ನು ಒಳಗೊಂಡಿದೆ. ಹೊರಗಿನ ಕೋಣೆಯಲ್ಲಿ ದೇವಸ್ಥಾನದ ಆಚರಣೆಗಳಲ್ಲಿ ಬಳಸುವ ಆಭರಣ, ಒಳಗಗಿನ ಕೊಠಡಿಯಲ್ಲಿ ದೇವಸ್ಥಾನ ಬಳಸದ ಆಭರಣ ಮತ್ತು ರಾಜರು ಮತ್ತು ಭಕ್ತರು ದಾನ ಮಾಡಿದ ಇತರ ಅಮೂಲ್ಯ ವಸ್ತುಗಳನ್ನು ಹೊಂದಿದೆ.

     

    ಬಾಗಿಲು ತೆರೆಯಿರಿ ಎಂದಿದ್ದ ಸುಪ್ರೀಂ
    2018ರಲ್ಲಿ ಸುಪ್ರೀಂಕೋರ್ಟ್ ಪುರಾತತ್ವ ಇಲಾಖೆಗೆ ರತ್ನ ಭಂಡಾರದ ಆಭರಣಗಳನ್ನು ಪರಿಶೀಲಿಸುವಂತೆ ಆದೇಶಿಸಿತ್ತು. ಈ ಸಂದರ್ಭದಲ್ಲಿ ದೇವಾಲಯಕ್ಕೆ ಪರಿಶೀಲನೆಗಾಗಿ ಆಗಮಿಸಿದ್ದ ಎಎಸ್ಐ ಅಧಿಕಾರಿಗಳ ತಂಡಕ್ಕೆ ದೇವಾಲಯದ ಕೀಲಿ ಕೈ ನಾಪತ್ತೆಯಾಗಿದೆ ಎಂದು ತಿಳಿಸಿದ್ದರು‌. ಇದೀಗ ಹೆಚ್ಚುವರಿಯಾಗಿ ಇರುವ ಕೀ ಮೂಲಕ ಬೀಗ ತೆರೆಯಲು ಪ್ರಯತ್ನ ನಡೆಯಲಿದೆ. ಒಂದು ವೇಳೆ ಆ ಕೀಯಿಂದಲೂ ಬಾಗಿಲು ತೆರೆಯದಿದ್ದರೆ, ಬಾಗಿಲನ್ನು ಒಡೆದು ರತ್ನ ಭಂಡಾರದಲ್ಲಿರುವ ಚಿನ್ನಾಭರಣಗಳ ಲೆಕ್ಕಾಚಾರ ನಡೆಯಲಿದೆ.