ಬೆಂಗಳೂರು: ಮಾತ್ರೆ ಹಾಗೂ ಒಳ ಉಡುಪಿನಲ್ಲಿ ಚಿನ್ನಭಾರಣ (Gold) ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಬೆಂಗಳೂರು ವಿಮಾನ ನಿಲ್ದಾಣದ (Airport) ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರಿಂದ 3.9 ಕೋಟಿ ರೂ. ಮೌಲ್ಯದ 5.135 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎರಡು ದಿನದಲ್ಲಿ ಕುವೈತ್, ದುಬೈ, ಶಾರ್ಜಾ, ಮತ್ತು ಬ್ಯಾಂಕಾಕ್‍ನಿಂದ ಬೆಂಗಳೂರು (Bengaluru) ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಳ್ಳ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್!
ಶಿವಮೊಗ್ಗ: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು (Police) ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಹಾವೇರಿ (Haveri) ಮೂಲದ ಆಕಾಶ್ (21), ಪ್ರವೀಣ್ ಹಡಗಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಅ.11 ರಂದು ತಮ್ಮ ಬೈಕ್‍ನಲ್ಲಿ (Bike) ಹಿಂಬದಿಯಿಂದ ಮಹಿಳೆಯ ಬೈಕ್‍ಗೆ ಡಿಕ್ಕಿ ಹೊಡೆಸಿದ್ದರು. ಬಳಿಕ ಬೈಕ್ ನಿಲ್ಲಿಸುತ್ತಿದ್ದಂತೆ ಇಬ್ಬರು ಮಹಿಳೆಯರ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು. ಇದನ್ನೂ ಓದಿ: ಪೊಲೀಸರು ಬಂಧಿಸಲು ಹೋದಾಗ ನದಿಗೆ ಹಾರಿ ಆರೋಪಿ ಎಸ್ಕೇಪ್
ಬಂಧಿತ ಆರೋಪಿಗಳು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ 2 ಸರಗಳ್ಳತನ ಪ್ರಕರಣಗಳು, ತುಂಗಾನಗರ ಪೊಲೀಸ್ ಠಾಣೆಯ 1 ಸರಗಳ್ಳತನ ಪ್ರಕರಣ, ತೀರ್ಥಹಳ್ಳಿ ಪೊಲೀಸ್ ಠಾಣೆಯ 1 ಸರಗಳ್ಳತನ ಪ್ರಕರಣ ಮತ್ತು ಉಡುಪಿ ಟೌನ್ ಪೊಲೀಸ್ ಠಾಣೆಯ 2 ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣ ಸೇರಿ ಒಟ್ಟು 6 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳಿಂದ 9,48,600 ರೂ. ಮೌಲ್ಯದ 186 ಗ್ರಾಂ ಬಂಗಾರದ ಆಭರಣಗಳು ಮತ್ತು 1 ಲಕ್ಷ ರೂ. ಮೌಲ್ಯದ 2 ದ್ವಿಚಕ್ರ ವಾಹನಗಳು ಸೇರಿ ಒಟ್ಟು 10,48,600 ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: 19 ಬಸ್ ಜೊತೆಗೆ ಲಕ್ಷ-ಲಕ್ಷ ಹಣವೂ ಬೆಂಕಿಗಾಹುತಿ ಆಯ್ತಾ? – ಪೊಲೀಸರು ಹೇಳಿದ್ದೇನು?
ಚಂಡೀಗಢ: ಮದುವೆಯಾದ ಮರುದಿನವೇ 1.5 ಲಕ್ಷ ಹಣ ಹಾಗೂ ಚಿನ್ನಾಭರಣಗಳೊಂದಿಗೆ ಅತ್ತೆ ಮನೆಯಿಂದ ವಧು ಪರಾರಿಯಾದ (Bride Escape With Gold And Jewellery) ಘಟನೆ ಗುರುಗ್ರಾಮದ ಬಿಲಾಸ್ಪುರ ಪ್ರದೇಶದಲ್ಲಿ ನಡೆದಿದೆ.
ಈ ಸಂಬಂಧ ವರನ ತಂದೆ ಅಶೋಕ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ತನ್ನ ಕಿರಿಯ ಮಗನಿಗೆ ಮದುವೆಯಾಗಬೇಕು. ಹೀಗಾಗಿ ಹುಡುಗಿ ಹುಡುಕುವಂತೆ ಸಂಬಂಧಿಕರ ಬಳಿ ಹೇಳಿದ್ದೆ. ಅಂತೆಯೇ ಸಂಬಂಧಿಕ ಮನಿಶ್ ಎಂಬಾತ ಮಂಜುವನ್ನು ಪರಿಚಯ ಮಾಡಿಕೊಟ್ಟಿದ್ದು, ಆತ ಒಬ್ಬಳು ಹುಡುಗಿಯನ್ನು ತೋರಿಸಿದ್ದಾನೆ. ನಿಮ್ಮ ಮಗನಿಗೆ ಈಕೆ ಸರಿಯಾದ ಜೋಡಿಯಾಗುತ್ತಾಳೆ ಎಂದು ತಿಳಿಸಿದ್ದಾನೆ ಎಂದು ಹೇಳಿದರು.
ಅಲ್ಲದೆ ಯುವತಿ ಕುಟುಂಬ ಬಡತನದಿಂದ ಕೂಡಿದ್ದು, ಅವರ ಬಳಿ ಹಣವಿಲ್ಲ ಎಂದು ಮಂಜು ಮತ್ತು ಆತನ ಸಹಚರರು ತಿಳಿಸಿದ್ದಾರೆ. ಇದಕ್ಕೆ ಅಶೋಕ್ ಕುಮಾರ್ ತನ್ನ ಕುಟುಂಬಕ್ಕೆ ವರದಕ್ಷಿಣೆ ಬೇಡ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಉಸಿರುಗಟ್ಟಿಸಿ ಅತ್ತೆ ಕೊಂದಿದ್ದ ಸೊಸೆ ಅರೆಸ್ಟ್
ಪ್ರೀತಿ ನನ್ನ ಮನೆಯವರಿಗೆ ಇಷ್ಟವಾದ ನಂತರ ನಾನು ಆಕೆಯ ಕುಟುಂಬಕ್ಕೆ 1 ಲಕ್ಷ ಮತ್ತು ಕೆಲವು ಬಟ್ಟೆಗಳನ್ನು ನೀಡಿದ್ದೇನೆ. ಮದುವೆಯ ನಂತರ ಮನೆಯಲ್ಲಿ ತಡರಾತ್ರಿಯವರೆಗೂ ಸಂಭ್ರಮಾಚರಣೆ ಇತ್ತು. ಎಂದಿನಂತೆ ಮರುದಿನ ಬೆಳಗ್ಗೆ ಮಗ ಕೆಲಸಕ್ಕೆ ತೆರಳಿದ್ದಾನೆ. ಈ ವೇಳೆ ಸೊಸೆ ಪ್ರೀತಿ ನಾಪತ್ತೆಯಾಗಿದ್ದಾಳೆ ಎಂದು ಕುಮಾರ್ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದರು.
ಸೊಸೆ ಕಾಣೆಯಾದ ಬಳಿಕ ಮನೆ ಪರಿಶೀಲನೆ ನಡೆಸಿದೆವು. ಈ ವೇಳೆ 1.5 ಲಕ್ಷ ನಗದು ಹಾಗೂ ಚಿನ್ನಾಭರಣಗಳು ಕೂಡ ಕಾಣೆಯಾಗಿದ್ದು, ಪ್ರೀತಿ ಅದರೊಂದಿಗೆ ಓಡಿ ಹೋಗಿರುವುದು ಬಯಲಾಯಿತು. ಇತ್ತ ಸಂಬಂಧ ಮಾಡಿದ್ದ ಮಂಜುಗೆ ಈ ವಿಚಾರ ತಿಳಿಸಲಾಯಿತು. ಆದರೆ ಆತ ಕೊಲೆ ಬೆದರಿಕೆ ಹಾಕಿದ ಎಂದು ಪೊಲೀಸರಿಗೆ ಆಶೋಕ್ ಕುಮಾರ್ ತಿಳಿಸಿದ್ದಾರೆ.
ಘಟನೆ ಬಳಿಕ ಪ್ರೀತಿ, ಮಂಜು ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಬಿಲಾಸ್‍ಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನವರಾತ್ರಿಯ ಮೊದಲ ದಿನದಂದೇ 2023ರ ತೆಲಂಗಾಣ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಚುನಾವಣೆಗಾಗಿ ಪಕ್ಷದ ಪ್ರಣಾಳಿಕೆಗೆ ಸಂಬಂಧಿಸಿದ ಚರ್ಚೆ ನಡೆಯುತ್ತಿದೆ.
ತೆಲಂಗಾಣ ಚುನಾವಣೆ 2023ರ (Telangana Election 2023) ಕಾಂಗ್ರೆಸ್ ಪ್ರಣಾಳಿಕೆಯನ್ನು (Congress Manifesto) ಇನ್ನೂ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ. ಆದರೆ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (TPCC) ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಡಿ. ಶ್ರೀಧರ್ ಬಾಬು ಅವರ ಪ್ರಕಾರ, ಪ್ರಣಾಳಿಕೆಯು ವಧು-ವರರಿಗೆ ನಗದು (Cash) ಮತ್ತು ಚಿನ್ನ (Gold) ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ (Free Internet) ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಇದನ್ನೂ ಓದಿ: ಚಂದ್ರಯಾನ-3ರ ಬಳಿಕ ಇಸ್ರೋ ತಂತ್ರಜ್ಞಾನ ಬಯಸಿದ ನಾಸಾ: ಸೋಮನಾಥ್
ಮಹಾಲಕ್ಷ್ಮಿ ಯೋಜನೆಯಡಿ ಮದುವೆಯ ಸಮಯದಲ್ಲಿ ಅರ್ಹ ಮಹಿಳೆಯರಿಗೆ 10 ಗ್ರಾಂ ಚಿನ್ನ, ಒಂದು ಲಕ್ಷ ರೂ. ನಗದು ಜೊತೆಗೆ ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಸೇರಿದಂತೆ ನವೆಂಬರ್ 30ರ ವಿಧಾನಸಭಾ ಚುನಾವಣೆಯ ತೆಲಂಗಾಣ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೆಲವು ಭರವಸೆಗಳು ಒಳಗೊಂಡಿವೆ.
ಪ್ರಸ್ತುತ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸರ್ಕಾರವು, ಕಲ್ಯಾಣ ಲಕ್ಷ್ಮಿ ಮತ್ತು ಶಾದಿ ಮುಬಾರಕ್ ಯೋಜನೆಗಳ ಅಡಿಯಲ್ಲಿ ತೆಲಂಗಾಣದ ನಿವಾಸಿಗಳಾಗಿರುವ ವಧುಗಳಿಗೆ ಮದುವೆಯ ಸಮಯದಲ್ಲಿ 1,00,116 ರೂ.ಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಆದರೆ ಮದುವೆಯ ಸಂದರ್ಭದಲ್ಲಿ ವಧು 18 ವರ್ಷ ಪೂರೈಸಿರಬೇಕು. ಮಾತ್ರವಲ್ಲದೇ ಪೋಷಕರ ವಾರ್ಷಿಕ ಆದಾಯ 2 ಲಕ್ಷ ರೂ. ಮೀರಬಾರದು. ಇದನ್ನೂ ಓದಿ: ಪಾಕ್ ಕ್ರಿಕೆಟಿಗರಿಗೆ ಜೈ ಶ್ರೀರಾಮ್ ಘೋಷಣೆ: ಉದಯನಿಧಿ ಆಕ್ಷೇಪ
ಪಕ್ಷದ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರಣಾಳಿಕೆ ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆ. ಅಧಿಕಾರಕ್ಕೆ ಬಂದ ನಂತರ ನಾವು ಇಂಟರ್ನೆಟ್ ಸೇವಾ ಪೂರೈಕೆದಾರರೊಂದಿಗೆ ಮಾತನಾಡುತ್ತೇವೆ ಮತ್ತು ವಿಧಾನಗಳನ್ನು ರೂಪಿಸುತ್ತೇವೆ ಎಂದು ಹೇಳಿದರು.
ಬಿಆರ್‌ಎಸ್ (BRS) ವಕ್ತಾರ ಶ್ರವಣ್ ದಾಸೋಜು ಅವರನ್ನು ಸಂಪರ್ಕಿಸಿದಾಗ, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತಮ್ಮ ಚುನಾವಣಾ ಭರವಸೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ. ಅವರು ಚಂದ್ರನ ಕೆಳಗೆ ಏನು ಬೇಕಾದರೂ ಭರವಸೆ ನೀಡುತ್ತಾರೆ. ಕೆಸಿಆರ್ (KCR) ಎಂದು ಕರೆಯಲ್ಪಡುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಬಡವರಿಗಾಗಿ ಸ್ವತಂತ್ರ ಭಾರತದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಎಂದಿಗೂ ಊಹಿಸದ ನವೀನ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಹೊರತರುವಲ್ಲಿ ಮತ್ತು ಅನುಷ್ಠಾನಗೊಳಿಸುವಲ್ಲಿ ಪ್ರವರ್ತಕರಾಗಿದ್ದಾರೆ ಎಂದರು. ಇದನ್ನೂ ಓದಿ: ದೆಹಲಿಗೆ ಬರ್ತಿದ್ದಂತೆ ಎಲ್ಲ ಭಾರ ಇಳಿದು ನೆಮ್ಮದಿ ಸಿಕ್ಕಿತು: ಇಸ್ರೇಲ್ ಯುದ್ಧ ಭೀಕರತೆ ಬಿಚ್ಚಿಟ್ಟ ಕನ್ನಡಿಗರು
ಬಿಆರ್‌ಎಸ್ ಅಧ್ಯಕ್ಷ ರಾವ್ ಅವರು ಉದಾರತೆಗೆ ಹೆಸರುವಾಸಿಯಾಗಿದ್ದಾರೆ. ಮುಖ್ಯವಾಗಿ ಬಡವರು ಮತ್ತು ದೀನದಲಿತರ ಬಗ್ಗೆ ಅವರ ಸಹಾನುಭೂತಿ ಹೊಂದಿದ್ದಾರೆ. ತೆಲಂಗಾಣ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಆರು ಗ್ಯಾರಂಟಿಗಳನ್ನು ಎದುರಿಸುವ ಮೂಲಕ 400 ರೂ.ಗೆ ಎಲ್‌ಪಿಜಿ ಸಿಲಿಂಡರ್ ಮತ್ತು ಸಾಮಾಜಿಕ ಪಿಂಚಣಿಗಳ ಹೆಚ್ಚಳದ ಭರವಸೆಯ ಬಿಆರ್‌ಎಸ್ ಪ್ರಣಾಳಿಕೆಯನ್ನು ಕೆಸಿಆರ್ ಭಾನುವಾರ ಪ್ರಕಟಿಸಿದರು.
ಮಹಾಲಕ್ಷ್ಮಿ ಖಾತ್ರಿಯಡಿ ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ನೆರವು, 500 ರೂ.ಗೆ ಎಲ್‌ಪಿಜಿ ಸಿಲಿಂಡರ್, ರಾಜ್ಯಾದ್ಯಂತ ಟಿಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ವಿರುದ್ಧ ‘ರಾಮಾಯಣ’ ನಟನನ್ನು ಕಣಕ್ಕಿಳಿಸಿದ ಕಾಂಗ್ರೆಸ್
ನಿನ್ನೆ ಚಿನ್ನದ ದರ 22 ಕ್ಯಾರೆಟ್ – 5,329 ರೂ. ಹಾಗೂ 24 ಕ್ಯಾರೆಟ್ – 5,759 ರೂ. ಆಗಿದೆ. ಮಾತ್ರವಲ್ಲದೆ ಇಸ್ರೇಲ್-ಹಮಾಸ್ ಯುದ್ಧದ ಎಫೆಕ್ಟ್ ಕಚ್ಚಾತೈಲದ ದರದ ಮೇಲೆಯೂ ಬೀಳುವ ಸಾಧ್ಯತೆಯಿದೆ. ಇದನ್ನೂ ಓದಿ: ಇಸ್ರೇಲ್‍ನಲ್ಲಿ ಸಿಲುಕಿದ್ದ 18,000 ಭಾರತೀಯರು ಸೇಫ್
ಚಿಕ್ಕಬಳ್ಳಾಪುರ/ಬೆಂಗಳೂರು: ಗುದದ್ವಾರ ಹಾಗೂ ಕಾಲಿನಮಂಡಿಯಲ್ಲಿ ಇಟ್ಟುಕೊಂಡು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 1 ಕೋಟಿ 77 ಲಕ್ಷ ಮೌಲ್ಯದ ಚಿನ್ನವನ್ನ (Gold) ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru Airport) ಕಸ್ಟಮ್ಸ್ ಅಧಿಕಾರಿಗಳು (Customs Officers) ವಶಪಡಿಸಿಕೊಂಡಿದ್ದಾರೆ.
ದುಬೈ (Dubai) ಹಾಗೂ ಕೊಲಂಬೋದಿಂದ (Colombo) ಆಗಮಿಸಿದ 4 ಮಂದಿ ಪ್ರಯಾಣಿಕರನ್ನ ತೀವ್ರ ತಪಾಸಣೆಗೆ ಒಳಪಡಿಸಿದಾಗ ನಾಲ್ವರ ಬಳಿ ಬರೋಬ್ಬರಿ 3 ಕೆ.ಜಿ ಚಿನ್ನ ಪತ್ತೆಯಾಗಿದೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಬಾಲ್ಯ ವಿವಾಹದ ವಿರುದ್ಧ ಸಮರ – ಮತ್ತೆ 800ಕ್ಕೂ ಅಧಿಕ ಮಂದಿಯ ಬಂಧನ
ಇನ್ನೂ ಮತ್ತೊಂದು ಪ್ರಕರಣದಲ್ಲಿ ಕೊಲಂಬೋದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೋರ್ವ ತನ್ನ ಪ್ಯಾಂಟ್ ನ ಒಳಭಾಗದಲ್ಲಿ ಗೋಲ್ಡ್ ಕೋಟಿಂಗ್ ಮಾಡಿಕೊಂಡು ಬಂದಿದ್ದು, ಬರೋಬ್ಬರಿ 75 ಗ್ರಾಂ ಹಾಗೂ 155 ಗ್ರಾಂ ಚಿನ್ನದ ಪೇಸ್ಟ್ ಅನ್ನ ವಶಪಡಿಸಿಕೊಂಡಿದ್ದಾರೆ.
ಹ್ಯಾಂಗ್‌ಝೌ: ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ನಲ್ಲಿ (Asian Games) ಪುರುಷರ 10 ಮೀಟರ್ ಏರ್ ಪಿಸ್ತೂಲ್ (Men’s 10m Air Pistol Team) ಸ್ಪರ್ಧೆಯಲ್ಲಿ ಭಾರತ (India) ತಂಡ ಚಿನ್ನದ ಪದಕ (Gold Medal) ಗೆದ್ದಿದೆ.
ಸರಬ್ಜೋತ್ ಸಿಂಗ್, ಅರ್ಜುನ್ ಸಿಂಗ್ ಚೀಮಾ ಮತ್ತು ಶಿವ ನರ್ವಾಲ್ ತಂಡ 1734 ಅಂಕಗಳಿಸಿ ಮೊದಲ ಸ್ಥಾನ ಪಡೆಯಿತು. ಚೀನಾದ 1733 ಅಂಕ ಪಡೆದರೆ ವಿಯೆಟ್ನಾಂನ 1730 ಅಂಕಗಳಿಸಿತು.
ಭಾರತ 6 ಚಿನ್ನ, 8 ಬೆಳ್ಳಿ, 10 ಕಂಚಿನ ಪದಕವನ್ನು ಗೆಲ್ಲುವುದರೊಂದಿಗೆ ಒಟ್ಟು 24 ಪದಕವನ್ನು ಪಡೆಯುವುದರ ಮೂಲಕ ಪದಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. 80 ಚಿನ್ನದ ಪದಕ ಸೇರಿ ಒಟ್ಟು145 ಪದಕ ಗೆದ್ದಿರುವ ಚೀನಾ ಮೊದಲ ಸ್ಥಾನದಲ್ಲಿದ್ದರೆ 19 ಚಿನ್ನ ಸೇರಿ ಒಟ್ಟು 70 ಪದಕ ಗೆದ್ದಿರುವ ದಕ್ಷಿಣ ಕೊರಿಯಾ ಎರಡನೇ ಸ್ಥಾನದಲ್ಲಿದೆ.
ಹಾವೇರಿ: 25 ಲಕ್ಷ ರೂ.ಗೆ 2 ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬನಿಗೆ ವಂಚಿಸಿದ್ದ ಆರೋಪಿಗಳನ್ನು ಶಿಗ್ಗಾಂವ್ (Shiggaon) ಪೊಲೀಸರು (Police) ಬಂದಿಸಿದ್ದಾರೆ. ಆರೋಪಿಗಳು ಮೊದಲು ಎರಡು ಚಿನ್ನದ ನಾಣ್ಯಗಳನ್ನು ನೀಡಿ ಹಣ ಪಡೆದು, ಬಳಿಕ ನಕಲಿ ಚಿನ್ನವನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕರಣ್ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೆಂಗಳೂರು (Bengaluru) ಮೂಲದ ಲಕ್ಷ್ಮಣ್ ಚೆನ್ನಬಸಯ್ಯ ಎಂಬವರಿಗೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿದ್ದರು. ಮೊದಲಿಗೆ ಚಿನ್ನದ ನಾಣ್ಯ ನೀಡಿ 25 ಲಕ್ಷ ರೂ. ಪಡೆದು ಬಳಿಕ ನಕಲಿ ಚಿನ್ನದ ನಾಣ್ಯಗಳನ್ನು ನೀಡಿದ್ದರು. ಇದನ್ನೂ ಓದಿ: ನಾಗೋರ್ನೊ-ಕರಾಬಖ್ ಇಂಧನ ಡಿಪೋ ಸ್ಫೋಟ – 20 ಮಂದಿ ಸಾವು
ಆರೋಪಿಗಳು ಚಿನ್ನದ ನಾಣ್ಯಗಳನ್ನು ನೀಡುವುದಾಗಿ ಹರಪನಹಳ್ಳಿಯ ಹೊಳಲು ಗ್ರಾಮದ ಬಳಿ ಲಕ್ಷ್ಮಣ್‍ನನ್ನು ಕರೆಸಿದ್ದರು. ಇಲ್ಲಿಯೇ ನಾಣ್ಯಗಳನ್ನು ನೀಡಿ ಹಣ ಪಡೆದಿದ್ದರು. ಬಳಿಕ ಇದನ್ನು ಪರೀಕ್ಷಿಸಿದಾಗ ನಕಲಿ ಎಂಬುದು ತಿಳಿದು ಬಂದಿತ್ತು.
ಹಾಂಗ್‌ಝೋ: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ (Asian Games) ಭಾರತ (India) ಮೊದಲ ಚಿನ್ನದ ಪದಕವನ್ನು (Gold medal) ಗೆದ್ದುಕೊಂಡಿದೆ. 10 ಮೀ. ರೈಫಲ್ ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ವಿಶ್ವದಾಖಲೆ (World Record) ನಿರ್ಮಿಸಿದೆ.
ಪುರುಷರ ರೋಯಿಂಗ್‌ನಲ್ಲಿ ಭಾರತ ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಜಸ್ವಿಂದರ್ ಸಿಂಗ್, ಭೀಮ್ ಸಿಂಗ್, ಪುನಿತ್ ಕುಮಾರ್ ಮತ್ತು ಆಶಿಶ್ ಅವರಿಂದ ತಂಡ ಮೂರನೇ ಸ್ಥಾನವನ್ನು ಪಡೆದುಕೊಂಡಿತು.
Many congratulations to our Rowing Team on winning the #BronzeMedal in the Men’s Four event.
ಸದ್ಯ 1 ಚಿನ್ನ, 3 ಬೆಳ್ಳಿ, 5 ಕಂಚಿನ ಪದಕ ಗೆದ್ದಿರುವ ಭಾರತ ಪದಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. 27 ಚಿನ್ನ, 11 ಬೆಳ್ಳಿ, 5 ಕಂಚು ಸೇರಿ ಒಟ್ಟು 43 ಪದಕ ಗೆದ್ದಿರುವ ಚೀನಾ ಮೊದಲ ಸ್ಥಾನದಲ್ಲಿ ಮುಂದುವರಿದಿದೆ.
ಬೆಂಗಳೂರು: ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ (Chaithra Kundapura) ಮತ್ತು ತಂಡ 5 ಕೋಟಿ ರೂ. ವಂಚಿಸಿ (Fraud) ಇದೀಗ ಬಂಧನಕ್ಕೊಳಗಾಗಿದ್ದಾರೆ. ಈ ಕುರಿತು ಸಿಸಿಬಿ (CCB) ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಇದುವರೆಗೂ 3 ಕೋಟಿ ರೂ. ಮೌಲ್ಯದಷ್ಟು ನಗದು ಮತ್ತು ಚಿನ್ನವನ್ನು ಜಪ್ತಿಪಡಿಸಿಕೊಂಡಿದ್ದಾರೆ.
ಯಾರಿಂದ ಎಷ್ಟು ಜಪ್ತಿ?: ಚೈತ್ರಾ ಕುಂದಾಪುರ ತನ್ನ ಸಂಬಂಧಿಕರ ಹೆಸರಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ 1.8 ಕೋಟಿ ರೂ. ಠೇವಣಿ ಇಟ್ಟಿದ್ದು, ಸಿಸಿಬಿ ಅಧಿಕಾರಿಗಳು ಈ ಹಣವನ್ನು ಜಪ್ತಿಪಡಿಸಿಕೊಂಡಿದ್ದಾರೆ. ಅಲ್ಲದೇ ಚೈತ್ರಾ ಮನೆಯಲ್ಲಿದ್ದ 65 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಸಹಾ ಜಪ್ತಿ ಮಾಡಿದ್ದಾರೆ. ಉಪ್ಪೂರು ಶ್ರೀರಾಮ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಚೈತ್ರಾ ಕುಂದಾಪುರ ಬಾವ ಮ್ಯಾನೇಜರ್ ಆಗಿದ್ದರು. ಅವರ ಸಹಾಯದ ಮೂಲಕ ಶ್ರೀರಾಮ್ ಬ್ಯಾಂಕ್‌ನಲ್ಲಿ ಚೈತ್ರಾ 40 ಲಕ್ಷ ರೂ. ಹಣವನ್ನು ಇಟ್ಟಿದ್ದಳು. ಈ ಹಣವನ್ನೂ ಅಧಿಕಾರಿಗಳು ವಶಕ್ಕೆ ಪಡಿದಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ
ಚೈತ್ರಾಳ ಗೆಳೆಯ ಶ್ರೀಕಾಂತ್ ನಾಯಕ್ (Shrikanth Nayak) ಖಾತೆಯಲ್ಲಿದ್ದ 45 ಲಕ್ಷ ರೂ. ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇನ್ನು ಅಭಿನವ ಹಾಲಶ್ರೀ ಸ್ವಾಮೀಜಿ ಈಗಾಗಲೇ 50 ಲಕ್ಷ ರೂ. ನಗದನ್ನು ಗೋವಿಂದ ಪೂಜಾರಿಗೆ (Govinda Babu Poojari) ಹಿಂದಿರುಗಿಸಿದ್ದಾರೆ. ಸದ್ಯ ಚೈತ್ರಾ ಖರೀದಿ ಮಾಡಿದ್ದ ಕಿಯಾ ಕಾರನ್ನು ಸಿಸಿಬಿ ವಶಕ್ಕೆ ಪಡೆದಿದೆ. ಸುಮಾರು 3.30 ಕೋಟಿ ರೂ. ಮೌಲ್ಯದ ಕಾರು, ಚಿನ್ನಾಭರಣ ಹಾಗೂ ನಗದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಉಳಿದ ಹಣಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚಾಟಿಂಗ್ ವಿಚಾರದಲ್ಲಿ ಗಲಾಟೆ – ಯುವತಿ ಅನುಮಾನಾಸ್ಪದ ಸಾವು