Tag: gold

  • ಮಾಜಿ ಸಂಸದರ ಪತ್ನಿಯ ಕುತ್ತಿಗೆಯಿಂದ ಸರ ಎಗರಿಸಿದ ಕಳ್ಳನ ಬಂಧನ

    ಮಾಜಿ ಸಂಸದರ ಪತ್ನಿಯ ಕುತ್ತಿಗೆಯಿಂದ ಸರ ಎಗರಿಸಿದ ಕಳ್ಳನ ಬಂಧನ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಯಲ್ಲಿ ಮಾಜಿ ಸಂಸದನ ಮನೆಗೆ ಹಾಡಹಗಲೇ ಅಪರಿಚಿತ ವ್ಯಕ್ತಿಯೋರ್ವ ನೀರು ಕೇಳುವ ನೆಪದಲ್ಲಿ ನೀರು ಕೊಡಲು ಬಂದ ಮಾಜಿ ಸಂಸದನ ಪತ್ನಿಯ ಬಂಗಾರದ ಸರವನ್ನು ಹರಿದು ಪರಾರಿಯಾಗಿದ್ದ ಕಳ್ಳನನ್ನು ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತ ಹಾನಗಲ್ ಮೂಲದ ಪರಶುರಾಮ ಸಣ್ಣಮನಿ ಎಂಬ ವ್ಯಕ್ತಿ. ಈತನಿಂದ 1,85೦೦೦ ಮೌಲ್ಯದ 37ಗ್ರಾಂ ತೂಕದ ಬಂಗಾರದ ಚೈನ್ ಹಾಗೂ ಕೃತ್ಯಕ್ಕೆ ಬಳಸಿದ 15,೦೦೦ರೂ. ಮೌಲ್ಯದ ಬಜಾಜ್ ಡಿಸ್ಕವರ್ ಬೈಕ್ ವಶಕ್ಕೆ ಪಡೆಯಲಾಗಿದೆ.

    ಘಟನೆ ಏನು?: ಕಾಂಗ್ರೆಸ್ ನಿಂದ ನಾಲ್ಕು ಬಾರಿ ಉತ್ತರ ಕನ್ನಡ ಜಿಲ್ಲೆಯ ಸಂಸದರಾಗಿ ಆಯ್ಕೆಯಾಗಿದ್ದ ದೇವರಾಯ ನಾಯ್ಕರವರ ಪತ್ನಿ ಗೀತಾರವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಅಪರಿಚಿತ ವ್ಯಕ್ತಿ ನೀರು ಕೇಳುವ ನೆಪ ಮಾಡಿಕೊಂಡು, ಅವರ ಕುತ್ತಿಗೆಯಲ್ಲಿ ಸರವನ್ನು ಕಸಿದುಕೊಂಡು ಹೋಗಿದ್ದನು. ಇದನ್ನೂ ಓದಿ: ಮಗು ಮಾಡಿಕೊಳ್ಳುವ‌ ಬಗ್ಗೆ ಪ್ಲ್ಯಾನ್ ಇಲ್ವಾ- ವಿಕ್ಕಿ ಕೌಶಲ್ ಹೇಳೋದೇನು?

    ತಕ್ಷಣ ಕಾರ್ಯಪ್ರವೃತ್ತರಾದ ಶಿರಸಿ ಮಾರುಕಟ್ಟೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಸಿಪಿಐ ರಾಮಚಂದ್ರ ನಾಯ್ಕ ನೇತೃತ್ವದಲ್ಲಿ ತಂಡ ರಚಿಸಿ ಕೊನೆಗೂ ಆರೋಪಿಯನ್ನು ಹಾವೇರಿ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಿ20ಯಲ್ಲಿ ಭಾಗಿಯಾಗುವ ಗಣ್ಯರಿಗೆ ಭವ್ಯ ಭೋಜನ – ಚಿನ್ನ, ಬೆಳ್ಳಿ ಲೇಪಿತ ತಟ್ಟೆಯಲ್ಲಿ ಊಟದ ವ್ಯವಸ್ಥೆ

    ಜಿ20ಯಲ್ಲಿ ಭಾಗಿಯಾಗುವ ಗಣ್ಯರಿಗೆ ಭವ್ಯ ಭೋಜನ – ಚಿನ್ನ, ಬೆಳ್ಳಿ ಲೇಪಿತ ತಟ್ಟೆಯಲ್ಲಿ ಊಟದ ವ್ಯವಸ್ಥೆ

    ನವದೆಹಲಿ: ಜಿ20 ಶೃಂಗಸಭೆಗೆ (G20 Summit) ಭಾರತ ಸಂಪೂರ್ಣ ಸಿದ್ಧವಾಗಿದೆ. ವಿದೇಶಿ ಗಣ್ಯರ ವಾಸ್ತವ್ಯಕ್ಕೆ ಹೋಟೆಲ್‌ಗಳನ್ನು ಬುಕ್ ಮಾಡಲಾಗಿದ್ದು, ಇಲ್ಲಿ ಭೋಜನದ (Dinner) ವೇಳೆ ವಿಶೇಷ ಅನುಭೂತಿ ನೀಡಲು ಚಿನ್ನ (Gold) ಲೇಪಿತ ತಟ್ಟೆ (Plate), ಬೆಳ್ಳಿ (Silver) ಲೋಟಗಳಲ್ಲಿ (Glass) ಅತಿಥಿಗಳಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಈ ಮೂಲಕ ಭಾರತದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರದರ್ಶಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

    ಇದಕ್ಕಾಗಿ ಐಕಾನಿಕ್ ಐಟಿಸಿ ತಾಜ್ ಸೇರಿದಂತೆ 11 ಹೋಟೆಲ್‌ಗಳಿಗೆ ತಟ್ಟೆ ಮತ್ತು ಲೋಟಗಳನ್ನು ಸರಬರಾಜು ಮಾಡುವ ಕ್ರೋಕರಿ ಕಂಪನಿಗೆ ಚಿನ್ನ ಮತ್ತು ಬೆಳ್ಳಿ ಲೇಪಿತ ಅಗತ್ಯಗಳನ್ನು ಪೂರೈಕೆ ಮಾಡಲು ಜವಾಬ್ದಾರಿ ನೀಡಲಾಗಿದೆ. ಪಾತ್ರೆಗಳ ಮೇಲೆ ಜೈಪುರ, ಉದಯಪುರ, ವಾರಣಾಸಿ ಮತ್ತು ಕರ್ನಾಟಕದ ಸಂಕೀರ್ಣ ಕಲಾತ್ಮಕತೆ ಇರಲಿದ್ದು, ಇದು ಭಾರತದ ವೈವಿಧ್ಯಮಯ ಸಾಂಸ್ಕೃತಿಕತೆಯನ್ನು ಪ್ರತಿಬಿಂಬಿಸುತ್ತದೆ. ಇದನ್ನೂ ಓದಿ: ಜಿ20 ಶೃಂಗಸಭೆಯಲ್ಲಿ ಭಗವದ್ಗೀತೆಯ ನೀತಿಗಳನ್ನು ಹರಡಲಿರುವ ಗೀತಾ ಅಪ್ಲಿಕೇಷನ್!

     

    ಈ ವಸ್ತುಗಳು ತಯಾರಾದ ಬಳಿಕ ಪ್ರತಿ ವಸ್ತುವನ್ನು R&D ಲ್ಯಾಬ್‌ನಲ್ಲಿ ಸಂಪೂರ್ಣ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಈ ಪಾತ್ರೆಗಳ ವಿನ್ಯಾಸವು ಪ್ರತಿ ಹೋಟೆಲ್‌ನ ನಿರ್ದಿಷ್ಟ ಅವಶ್ಯಕತೆಗಳಿಗೆ ಅನುಗುಣವಾಗಿರುತ್ತದೆ. ಉದಾಹರಣೆಗೆ ‘ಮಹಾರಾಜ ಥಾಲಿ’ ಸೆಟ್, ಉಪ್ಪು ಮತ್ತು ಮೆಣಸಿನಕಾಯಿಗಾಗಿ ಪ್ರತ್ಯೇಕ ಬೆಳ್ಳಿಯ ಪೆಟ್ಟಿಗೆಗಳು ಮತ್ತು 5-6 ಬೌಲ್‌ಗಳನ್ನು ಒಳಗೊಂಡಿರುತ್ತದೆ. ಎಲ್ಲವನ್ನೂ ಹೋಟೆಲ್‌ನ ಮೆನು ಮತ್ತು ಶೈಲಿಗೆ ಹೊಂದಿಸಲು ವಿನ್ಯಾಸಗೊಳಿಸಲಾಗಿದೆ. ಇದನ್ನೂ ಓದಿ: G20 ಸಭೆಗೆ ಆಗಮಿಸುತ್ತಿರೋ ಜೋ ಬೈಡನ್‌ಗಾಗಿ ಮೂರು ಹಂತದ ಭದ್ರತೆ

    ಕ್ರೋಕರಿ ಕಂಪನಿಯು ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ವಿನ್ಯಾಸದಲ್ಲಿ ಅಳವಡಿಸಿಕೊಂಡಿದೆ. ಇದು ಈ ಹಿಂದೆ ಅತಿಥಿಗಳಿಂದ ಮೆಚ್ಚುಗೆಯನ್ನು ಗಳಿಸಿತ್ತು. ಮಹಾರಾಜ ಥಾಲಿ ಜೊತೆಗೆ, ದಕ್ಷಿಣ ಭಾರತದ ವಿನ್ಯಾಸಗಳನ್ನು ಸಹ ಸಂಗ್ರಹದಲ್ಲಿ ಒಳಗೊಳಿಸಲಾಗುತ್ತಿದೆ. ಕಂಪನಿಯ ಮಾಲೀಕ ರಾಜೀವ್, ಮಾಜಿ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಭಾರತಕ್ಕೆ ಭೇಟಿ ನೀಡಿದಾಗ ವಿಶೇಷ ಊಟದ ಸೆಟ್‌ಗಳನ್ನು ಪ್ರಸ್ತುತಪಡಿಸಿದ್ದರು. ಇವುಗಳನ್ನು ಕಂಡು ಒಬಾಮಾ ತುಂಬಾ ಪ್ರಭಾವಿತರಾಗಿ ತಮ್ಮೊಂದಿಗೆ ಊಟದ ಸೆಟ್ ಅನ್ನು ಕೊಂಡೊಯ್ದಿದ್ದರು. ಇದನ್ನೂ ಓದಿ: ಇಂಡಿಯಾ, ಭಾರತದ ನಡುವಿನ ವ್ಯತ್ಯಾಸ ವಿವರಿಸಿದ್ದ ಲಾಲೂ ಹಳೆಯ ವೀಡಿಯೋ ವೈರಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Athletics Championships- ಚಿನ್ನದ ಪದಕಕ್ಕೆ ಮುತ್ತಿಟ್ಟು ಹೊಸ ದಾಖಲೆ ಬರೆದ ನೀರಜ್ ಚೋಪ್ರಾ

    World Athletics Championships- ಚಿನ್ನದ ಪದಕಕ್ಕೆ ಮುತ್ತಿಟ್ಟು ಹೊಸ ದಾಖಲೆ ಬರೆದ ನೀರಜ್ ಚೋಪ್ರಾ

    ಬುಡಾಪೆಸ್ಟ್: ಹಂಗೇರಿಯ ಬುಡಾಪೆಸ್ಟ್ ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ (World Athletics Championships) ಜಾವೆಲಿನ್ ಥ್ರೋನಲ್ಲಿ ( Javelin Throw ) ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

    ಫೈನಲ್ ಪಂದ್ಯದಲ್ಲಿ 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ನೀರಜ್ ಚೋಪ್ರಾ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.

    ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್ (Neeraj Chopra), 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ. ಇದನ್ನೂ ಓದಿ: ʼಶಿವಶಕ್ತಿʼ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ಹೊರಗಿನ ಹುಡುಕಾಟಕ್ಕೆ ವಿಜ್ಞಾನವಾದರೆ ಅಂತರಂಗಕ್ಕೆ ಆಧ್ಯಾತ್ಮ: ಇಸ್ರೋ ಅಧ್ಯಕ್ಷ

    2022ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಈ ಬಾರಿ ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಹರಕೆ ಒಪ್ಪಿಸಿದ ಅಭಿಮಾನಿ

    ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಹರಕೆ ಒಪ್ಪಿಸಿದ ಅಭಿಮಾನಿ

    ಮೈಸೂರು: ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿ ಆಗಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಇದೀಗ ಹರಕೆ ಒಪ್ಪಿಸಿದ್ದಾರೆ.

    ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದಲ್ಲಿರುವ ಸಿದ್ದರಾಮಯ್ಯ ಅವರ ಮನೆ ದೇವರು ಸಿದ್ದರಾಮೇಶ್ವರ ದೇವರಿಗೆ ಹರಕೆ ತೀರಿಸಿದ್ದಾರೆ. ಅನಿವಾಸಿ ಭಾರತೀಯ ರವಿಮಹಾದೇವ, ದೇವರಿಗೆ ಚಿನ್ನಲೇಪಿತ ಬೆಳ್ಳಿಯ ನಾಗಾಭರಣ ನೀಡಿ ಹರಕೆ ಸಲ್ಲಿಸಿದ್ದಾರೆ.

    ದೇವೇಗೌಡನಹುಂಡಿಯ ಮಹಾದೇವರ ಪುತ್ರ ರವಿ ಸದ್ಯ ಸೌದಿ ಅರೇಬಿಯಾದಲ್ಲಿ ವಾಸವಾಗಿದ್ದಾರೆ. ಸಾಗರೋತ್ತರ ಕನ್ನಡಿಗರು ಸಂಸ್ಥೆಯ ಸಂಸ್ಥಾಪಕ ಹಾಗೂ ಜಂಟಿ ಕಾರ್ಯದರ್ಶಿ ಕೂಡ ಆಗಿದ್ದು, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಹರಕೆ ಅರ್ಪಣೆ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಸಲಿ ಚಿನ್ನ ಕದ್ದು, ನಕಲಿ ಚಿನ್ನ ಇಟ್ಟು ವಂಚನೆ ಮಾಡ್ತಿದ್ದ ಚಾಲಾಕಿ ಕಳ್ಳಿಯರು ಅರೆಸ್ಟ್

    ಅಸಲಿ ಚಿನ್ನ ಕದ್ದು, ನಕಲಿ ಚಿನ್ನ ಇಟ್ಟು ವಂಚನೆ ಮಾಡ್ತಿದ್ದ ಚಾಲಾಕಿ ಕಳ್ಳಿಯರು ಅರೆಸ್ಟ್

    ಮಡಿಕೇರಿ: ಚಿನ್ನಾಭರಣ (Gold) ಖರೀದಿಸುವ ನೆಪದಲ್ಲಿ ಅಂಗಡಿಯವರ ಗಮನವನ್ನು ಬೇರೆಡೆ ಸೆಳೆದು ನಕಲಿ ಆಭರಣ ಇಟ್ಟು ಅಸಲಿ ಚಿನ್ನಾಭರಣಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಕುಶಾಲನಗರ (Kushalnagar) ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳನ್ನು ಚಿತ್ರದುರ್ಗ ಜಿಲ್ಲೆಯ ಪಾಮರಹಳ್ಳಿಯ ಕೈರುನ್ (46) ಹಾಗೂ ಜೈರಾಭಿ (36) ಎಂದು ಗುರುತಿಸಲಾಗಿದೆ. ಬಂಧಿತರಿಂದ 22.34 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ನಮ್ಗೆ ಕಾರ್‌ ಪಾರ್ಕಿಂಗ್‌ ಮಾಡೋಕೆ ಸ್ಥಳ ಸಿಕ್ತಿಲ್ಲ – ಪರಿಷತ್ ನಲ್ಲಿ ಶಾಸಕರ ಅಳಲು

    ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಥಬೀದಿಯಲ್ಲಿರುವ ಶೀತಲ್ ಚಿನ್ನಾಭರಣದ ಅಂಗಡಿಗೆ ಜೂ.5ರಂದು ಆರೋಪಿಗಳು ಬಂದಿದ್ದರು. ಈ ವೇಳೆ ಬುರ್ಖಾ ಧರಿಸಿದ್ದ ಆರೋಪಿಗಳೊಂದಿಗೆ ಓರ್ವ ಯುವಕ ಸಹ ಇದ್ದ. ಯುವಕ ವ್ಯಾಪಾರಿಯನ್ನು ಮಾತನಾಡಿಸುತ್ತಾ ಗಮನ ಬೇರೆಡೆ ಸೆಳೆದಿದ್ದ. ಈ ವೇಳೆ ಮಹಿಳೆಯರು ಸುಮಾರು 22.4 ಗ್ರಾಂ ಚಿನ್ನವನ್ನು ಕಳ್ಳತನ ಮಾಡಿದ್ದರು. ಆರೋಪಿಗಳ ಪತ್ತೆಗಾಗಿ ಸೋಮವಾರಪೇಟೆ ಡಿವೈಎಸ್‍ಪಿ ಆರ್.ವಿ ಗಂಗಾಧರಪ್ಪ, ಕುಶಾಲನಗರ ವೃತ್ತದ ಇಸ್ಪೆಕ್ಟರ್ ಬಿ.ಜಿ ಮಹೇಶ್, ನಗರ ಠಾಣಾಧಿಕಾರಿ ರವೀಂದ್ರ ಇವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿತ್ತು.

    ಈ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಶ್ಲಾಘಿಸಿದ್ದಾರೆ. ಅಲ್ಲದೇ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಜಿಲ್ಲಾ ಪೊಲೀಸ್ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರಿಗೆ ಡ್ರೆಸ್ ಕೋಡ್ ಚರ್ಚಿಸಿ ತೀರ್ಮಾನ: ಮಧು ಬಂಗಾರಪ್ಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಟ್ಯಧೀಶನಾದ ಮಾದಪ್ಪ- ನಗದು ಜೊತೆ 77 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ ಸಂಗ್ರಹ

    ಕೋಟ್ಯಧೀಶನಾದ ಮಾದಪ್ಪ- ನಗದು ಜೊತೆ 77 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ ಸಂಗ್ರಹ

    ಚಾಮರಾಜನಗರ: ಎಂದಿನಂತೆ ಈ ಬಾರಿಯೂ ಇತಿಹಾಸ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದ (Malemahadeshwara Hills) ಮೇಲಿರುವ ಮಲೆಮಹದೇಶ್ವರನ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಈ ಬಾರಿಯೂ ಮಾದಪ್ಪ ಕೋಟ್ಯಧೀಶನಾಗಿದ್ದಾನೆ.

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ತಡರಾತ್ರಿವರೆಗೂ ಹುಂಡಿ ಎಣಿಕೆ ನಡೆದಿದೆ. ಈ ವೇಳೆ ಮಹದೇಶ್ವರನ ಹುಂಡಿಯಲ್ಲಿ 2.47 ಕೋಟಿ ರೂ. ಗೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಹಿನ್ನಡೆ- ಮಾನನಷ್ಟ ಪ್ರಕರಣದಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

    ಕಳೆದ 36 ದಿನಗಳ ಅವಧಿಯಲ್ಲಿ ಒಟ್ಟು 2,47,15,655 ರೂ. ನಗದು ಸಂಗ್ರಹವಾಗಿದೆ. ನಗದು ಹಣದ ಜೊತೆಗೆ 77 ಗ್ರಾಂ ಚಿನ್ನ (Gold), 2 ಕೆ.ಜಿ 250 ಗ್ರಾಂ ಬೆಳ್ಳಿಯನ್ನು (Silver) ಭಕ್ತರು ಹುಂಡಿಗೆ ಹಾಕುವ ಮೂಲಕ ಮಾದಪ್ಪನಿಗೆ ಸಮರ್ಪಿಸಿದ್ದಾರೆ. ನಗದು ಹಣದ (Money) ಪೈಕಿ 12 ಲಕ್ಷ ರೂ. ನಾಣ್ಯದ ರೂಪದಲ್ಲೇ ಸಂಗ್ರಹವಾಗಿರೋದು ವಿಶೇಷವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವವಿಖ್ಯಾತ ಪಶುಪತಿನಾಥ ದೇವಾಲಯದ 10 ಕೆಜಿ ಚಿನ್ನ ಕಳವು – ದೇವಾಲಯ ಬಂದ್

    ವಿಶ್ವವಿಖ್ಯಾತ ಪಶುಪತಿನಾಥ ದೇವಾಲಯದ 10 ಕೆಜಿ ಚಿನ್ನ ಕಳವು – ದೇವಾಲಯ ಬಂದ್

    ಕಾಠ್ಮಂಡು: ನೇಪಾಳದ (Nepal) ರಾಜಧಾನಿ ಕಾಠ್ಮಂಡುವಿನಲ್ಲಿರುವ (Kathmandu) ವಿಶ್ವವಿಖ್ಯಾತ ಪಶುಪತಿನಾಥ ದೇವಸ್ಥಾನದಲ್ಲಿ (Pashupatinath Temple) 10 ಕೆಜಿ ಚಿನ್ನ (Gold) ಕಳ್ಳತನವಾಗಿದೆ. ಇದನ್ನು ತನಿಖೆ ನಡೆಸಲು ಅಧಿಕಾರಿಗಳು ದೇವಾಲಯವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದು ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

    ಕಳೆದ ವರ್ಷ ಶಿವರಾತ್ರಿ ಹಬ್ಬದ ಆಚರಣೆ ವೇಳೆ ಗರ್ಭಗುಡಿಯಲ್ಲಿರುವ ಶಿವಲಿಂಗದ ಸುತ್ತ 103 ಕೇಜಿ ಚಿನ್ನದ ಜಲಹರಿಯನ್ನು ನಿರ್ಮಿಸಲಾಗಿತ್ತು. ಇದರಲ್ಲಿ 10 ಕೆಜಿ ಚಿನ್ನ ಕಾಣೆಯಾಗಿದೆ ಎಂದು ದೂರಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಬೆಂಗಳೂರಿನಲ್ಲಿ ಬೀಳಲಿದೆ ಮಳೆ – ಭಾನುವಾರ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

    ನೇಪಾಳದ ಉನ್ನತ ತನಿಖಾ ಸಂಸ್ಥೆ ಸಿಐಎಎ ಈ ಪ್ರಕರಣದ ತನಿಖೆ ಆರಂಭಿಸಿದೆ. ಭಾನುವಾರ ಮಧ್ಯಾಹ್ನದಿಂದಲೇ ಭಕ್ತರಿಗೆ ದೇವಾಲಯ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ನಾನು ಸಾವರ್ಕರ್‌ ವಂಶಸ್ಥ, ನನ್ನನ್ನ ಜೈಲಿಗೆ ಹಾಕ್ತೀರಾ – ಎಂಬಿಪಿಗೆ ಸೂಲಿಬೆಲೆ ಪ್ರಶ್ನೆ

  • ಗ್ರಾಹಕರ ಗಿರವಿ ಚಿನ್ನ ಎಗರಿಸಿ ನಕಲಿ ಚಿನ್ನ ತಂದಿಟ್ಟು 1 ಕೋಟಿ ರೂ. ವಂಚಿಸಿದ ಬ್ಯಾಂಕ್ ನೌಕರ ಅರೆಸ್ಟ್

    ಗ್ರಾಹಕರ ಗಿರವಿ ಚಿನ್ನ ಎಗರಿಸಿ ನಕಲಿ ಚಿನ್ನ ತಂದಿಟ್ಟು 1 ಕೋಟಿ ರೂ. ವಂಚಿಸಿದ ಬ್ಯಾಂಕ್ ನೌಕರ ಅರೆಸ್ಟ್

    ಹಾಸನ: ಗ್ರಾಹಕರು ಬ್ಯಾಂಕ್‍ನಲ್ಲಿ (Bank) ಗಿರಿವಿ ಇಟ್ಟಿದ್ದ ಚಿನ್ನವನ್ನು ಕಳ್ಳತನ ಮಾಡಿ, ನಕಲಿ ಚಿನ್ನ (Gold) ತಂದಿಟ್ಟ ಆರೋಪದ ಮೇಲೆ ಬ್ಯಾಂಕ್ ಸಿಬ್ಬಂದಿಯೊಬ್ಬನನ್ನು ಬಂಧಿಸಿದ ಪ್ರಕರಣ ಹಾಸನದ (Hassan) ಬೆಳವಾಡಿಯಲ್ಲಿ (Belavadi) ನಡೆದಿದೆ.

    ಬಂಧಿತ ಆರೋಪಿಯನ್ನು ಲವ ಬಿ.ಎನ್ ಎಂದು ಗುರುತಿಸಲಾಗಿದೆ. ಆರೋಪಿ 1 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದಾನೆ. ಅಲ್ಲದೇ ಆ ಜಾಗದಲ್ಲಿ ನಕಲಿ ಚಿನ್ನವನ್ನು ತಂದಿಟ್ಟಿದ್ದ ಎಂದು ಬ್ಯಾಂಕ್‍ನ ಪ್ರಧಾನ ವ್ಯವಸ್ಥಾಪಕಿ ಅನುರಾಧ ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಆಸ್ತಿ ವಿವಾದ ವ್ಯಕ್ತಿಗೆ ಚಾಕು ಇರಿತ – 10 ದಿನಗಳ ಕಾಲ ಒದ್ದಾಡಿ ಪ್ರಾಣಬಿಟ್ಟ

    ಆರೋಪಿ ಬೆಳವಾಡಿ ಗ್ರಾಮದ ಎಸ್‍ಬಿಐ (SBI) ಶಾಖೆಯಲ್ಲಿ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ. ಬ್ಯಾಂಕ್ ಅಧಿಕಾರಿಗಳ ಜೊತೆ ವಿಶ್ವಾಸಗಳಿಸಿ 2013 ರಿಂದ ಚಿನ್ನದ ಸಾಲದ ದಾಸ್ತಾನು ಉಸ್ತುವಾರಿ ವಹಿಸಿಕೊಂಡಿದ್ದ. ಇದನ್ನೇ ದುರ್ಬಳಕೆ ಮಾಡಿಕೊಂಡು ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

    ಇತ್ತೀಚೆಗೆ ಗಿರವಿ ವಿಭಾಗದ ಚಿನ್ನವನ್ನು ಪರಿಶೀಲನೆ ಮಾಡಿದ ವೇಳೆ ವಂಚನೆ ಬಯಲಾಗಿದೆ. 30 ಪ್ಯಾಕೆಟ್ ಚಿನ್ನದಲ್ಲಿ 18 ಪ್ಯಾಕೆಟ್ ಚಿನ್ನದಲ್ಲಿ ನಕಲಿ ಚಿನ್ನ ಇರುವುದು ಪತ್ತೆಯಾಗಿತ್ತು. ಅದರಲ್ಲಿ 2 ಪ್ಯಾಕೆಟ್ ಚಿನ್ನವನ್ನು ಸಂಪೂರ್ಣ ಕಳ್ಳತನ ಮಾಡಲಾಗಿದೆ. ಉಳಿದ ಪ್ಯಾಕೆಟ್‍ಗಳಲ್ಲಿ ಕೆಲವು ಚಿನ್ನದ ಆಭರಣವನ್ನು ಕಳ್ಳತನ ಮಾಡಲಾಗಿದೆ. ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ (FIR) ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಮಾವಿನ ಹಣ್ಣಿಗಾಗಿ ನಡೆದ ಗಲಾಟೆ- ಸಹೋದರರರನ್ನು ಬಡಿದು ಕೊಂದ ದುಷ್ಕರ್ಮಿಗಳು

  • ಇದು ರಾಕಿಭಾಯ್‌ ಇಲ್ಲದ ರಿಯಲ್‌ KGF – ಸಮುದ್ರದಲ್ಲಿ ಸಿಕ್ತು 20 ಕೋಟಿ ಮೌಲ್ಯದ ಚಿನ್ನ..!

    ಇದು ರಾಕಿಭಾಯ್‌ ಇಲ್ಲದ ರಿಯಲ್‌ KGF – ಸಮುದ್ರದಲ್ಲಿ ಸಿಕ್ತು 20 ಕೋಟಿ ಮೌಲ್ಯದ ಚಿನ್ನ..!

    ಚೆನ್ನೈ: ಯಶ್‌ ನಟನೆಯ KGF-2 ಸಿನಿಮಾ ನೀವೆಲ್ಲರೂ ನೋಡಿಯೇ ಇರುತ್ತೀರಾ. ಕೊನೆಯಲ್ಲಿ ರಾಕಿಭಾಯ್‌ ಯಶ್‌ ಇಡೀ ಹಡಗಿನ ತುಂಬಾ ಚಿನ್ನದೊಂದಿಗೆ ಸಮುದ್ರಕ್ಕೆ ಬೀಳುತ್ತಾನೆ. ಎಷ್ಟೇ ಪ್ರಯತ್ನಿಸಿದರೂ ಅಲ್ಲಿಂದ ಚಿನ್ನ ಹೊರತೆಯಲಾಗುವುದಿಲ್ಲ ಎಂದು ಸುಮ್ಮನಾಗಿಬಿಡುತ್ತಾರೆ. ಅದೇ ರೀತಿಯ ಘಟನೆಯೊಂದು ತಮಿಳುನಾಡಿನ (Tamil Nadu) ರಾಮೇಶ್ವರಂನಲ್ಲಿ ನಡೆದಿದ ಸಮುದ್ರದಕ್ಕೆ ಎಸೆದಿದ್ದ 20 ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನ ಹೊತೆಯುವಲ್ಲಿ ಯಶಸ್ವಿಯಾಗಿದ್ದಾರೆ.

    ರಾಮೇಶ್ವರಂ ಮಂಟಪ ಪ್ರದೇಶದಿಂದ ಸಮುದ್ರ ಮಾರ್ಗವಾಗಿ ಭಾರೀ ಮೌಲ್ಯದ ಚಿನ್ನವನ್ನ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಅಧಿಕಾರಿಗಳಿಗೆ ಅಪರಿಚಿತ ದೋಣಿ ಹೋಗುತ್ತಿರೋದು ಗಮನಕ್ಕೆ ಬಂದಿತ್ತು. ಖಚಿತ ಮಾಹಿತಿ ಪಡೆದ ಭಾರತೀಯ ಕೋಸ್ಟ್ ಗಾರ್ಡ್ (India Coast Guard) ಮತ್ತು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (Revenue Intelligence) ಜಂಟಿಯಾಗಿ ದಾಳಿ ನಡೆಸಿತ್ತು. ಅಧಿಕಾರಿಗಳನ್ನು ನೋಡಿದ ದೋಣಿಯಲ್ಲಿದ್ದವರು ತಮ್ಮಲ್ಲಿದ್ದ ಒಂದು ಬಾಕ್ಸನ್ನು ಸಮುದ್ರಕ್ಕೆ ಎಸೆದಿದ್ದರು. ಅಧಿಕಾರಿಗಳು ದೋಣಿಯಲ್ಲಿದ್ದವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಎಲ್ಲರೂ ಅಸ್ಪಷ್ಟ ಉತ್ತರ ನೀಡುತ್ತಿದ್ದರು. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಸಿಗ್ನಲ್ ಕಾರಣ- ಪ್ರಾಥಮಿಕ ವರದಿ

    ಕೊನೆಗೆ ಸಮುದ್ರಕ್ಕೆ ಎಸೆದ ಬಾಕ್ಸ್ ಪತ್ತೆ ಮಾಡಲು ಸ್ಕೂಬಾ ಡೈವರ್‌ಗಳ ತಂಡ ನಿಯೋಜಿಸಲಾಯಿತು. ಜೊತೆಗೆ ಸ್ಥಳೀಯ ಮೀನುಗಾರರ ಸಹಾಯ ಪಡೆದುಕೊಳ್ಳಲಾಗಿತ್ತು. ಶೋಧ ಕಾರ್ಯ ನಡೆದ 2ನೇ ದಿನ ಸಮುದ್ರದಲ್ಲಿ ಎಸೆಯಲಾಗಿದ್ದ ಬಾಕ್ಸ್​ ಪತ್ತೆಯಾಯಿತು. ಸ್ಕೂಬಾ ಡೈವರ್ಸ್​ಗಳು ಬಾಕ್ಸ್​ನ್ನು ಮೇಲೆತ್ತಿದರು. ಅದರಲ್ಲಿ 20 ಕೋಟಿಗೂ ಅಧಿಕ ಮೌಲ್ಯದ ಗೋಲ್ಡ್‌ ಬಿಸ್ಕೆಟ್‌ ಅನ್ನು ನೋಡಿ ಅಧಿಕಾರಿಗಳೇ ಶಾಕ್‌ ಆದರು. ಇದನ್ನೂ ಓದಿ: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಣೆ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ಕೆಲ ದಿನಗಳ ಹಿಂದೆಯೂ 17.74 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿತ್ತು.

  • ಚಿನ್ನ, ಬೆಳ್ಳಿ ಖರೀದಿಗೆ ಮುಗಿಬಿದ್ದ ಜನ – ದರ ಹೆಚ್ಚಿದ್ದರೂ ಖರೀದಿ ಜೋರು

    ಚಿನ್ನ, ಬೆಳ್ಳಿ ಖರೀದಿಗೆ ಮುಗಿಬಿದ್ದ ಜನ – ದರ ಹೆಚ್ಚಿದ್ದರೂ ಖರೀದಿ ಜೋರು

    ನವದೆಹಲಿ: ಆರ್‌ಬಿಐ (RBI) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಹಿಂದಕ್ಕೆ ಪಡೆಯುವ ಆದೇಶ ಪ್ರಕಟಿಸಿದ ಬೆನ್ನಲ್ಲೇ ಜನ ಚಿನ್ನ, ಬೆಳ್ಳಿ (Gold, Silver) ಖರೀದಿಸಲು ಮುಗಿಬಿದ್ದಿದ್ದಾರೆ.

    ಹೌದು. ಶನಿವಾರ ದೇಶಾದ್ಯಂತ ಜುವೆಲ್ಲರಿ ಅಂಗಡಿಗಳಲ್ಲಿ (Jewellery Shop) ಭರ್ಜರಿ ವ್ಯಾಪಾರ ನಡೆದಿದೆ. ಜನರು ಚಿನ್ನವನ್ನು ದುಬಾರಿ ಬೆಲೆ ನೀಡಿ ಖರೀದಿಸುತ್ತಿರುವುದು ವಿಶೇಷ.

    ಶನಿವಾರ ಜೈಪುರದಲ್ಲಿ 10 ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ 63 ಸಾವಿ ರೂ. ಇದ್ದರೂ ಗ್ರಾಹಕರು 66 ಸಾವಿರ ರೂ. ನೀಡಿ ಖರೀದಿಸಿದ್ದಾರೆ. ದೇಶಾದ್ಯಂತ 10% ರಿಂದ 20% ರಷ್ಟು ಆಭರಣ ವ್ಯಾಪಾರ ಹೆಚ್ಚಾಗಿದೆ. ಸಾಧಾರಣವಾಗಿ ಅಕ್ಷಯ ತೃತೀಯಾ ಅಥವಾ ಹಬ್ಬದ ಸಮಯದಲ್ಲಿ ಹೆಚ್ಚಾಗಿ ಚಿನ್ನ ಖರೀದಿ ನಡೆಯುತ್ತಿರುತ್ತದೆ. ಆದರೆ ಈಗ ಯಾವುದೇ ಹಬ್ಬ ಇಲ್ಲದೇ ಇದ್ದರೂ ಆರ್‌ಬಿಐ ನಿರ್ಧಾರದಿಂದ ಆಭರಣ ಖರೀದಿ ಹೆಚ್ಚಾಗುತ್ತಿದೆ.  ಇದನ್ನೂ ಓದಿ: ಅಂಡರ್ ಪಾಸ್‌ನಲ್ಲಿ ಐವರನ್ನು ರಕ್ಷಿಸಿದ ಪಬ್ಲಿಕ್ ಟಿವಿ ಚಾಲಕನಿಗೆ ಬಿಬಿಎಂಪಿ ಆಯುಕ್ತರಿಂದ ಸನ್ಮಾನ

    ಪೆಟ್ರೋಲ್‌ ಪಂಪ್‌ನಲ್ಲಿ 2 ಸಾವಿರ ರೂ. ಚಲಾವಣೆ ಬಹಳ ವಿರಳ. ಆದರೆ ಈಗ ಹಲವು ಮಂದಿ 2000 ರೂ. ನೀಡಿ ಪೆಟ್ರೋಲ್‌ ಹಾಕಿಸುತ್ತಿದ್ದಾರೆ ಎಂದು ಕೋಲ್ಕತ್ತಾ ಮೂಲದ ಪೆಟ್ರೋಲ್‌ ಪಂಪ್‌ ಉದ್ಯೋಗಿ ತಿಳಿಸಿದ್ದಾರೆ.

    2016ರ ನವೆಂಬರ್‌ 8 ರಂದು 500, 1000 ರೂ. ಮುಖಬೆಲೆಯ ನೋಟು ನಿಷೇಧ ನಿರ್ಧಾರ ಕೈಗೊಂಡ ಬೆನ್ನಲ್ಲೇ ಭಾರೀ ಸಂಖ್ಯೆಯ ಗ್ರಾಹಕರು ಚಿನ್ನವನ್ನು ಖರೀದಿ ಮಾಡಿದ್ದರು. ಈ ಕಾರಣಕ್ಕೆ ಆದಾಯ ತೆರಿಗೆ ಇಲಾಖೆ ಹಲವು ಜ್ಯುವೆಲ್ಲರಿ ಅಂಗಡಿಗಳಿಗೆ ನೋಟಿಸ್‌ ಜಾರಿ ಮಾಡಿ ಗ್ರಾಹಕರ ವಿವರ ಕೇಳಿತ್ತು. ಈ ಕಾರಣಕ್ಕೆ ಈ ಬಾರಿ ಜ್ಯುವೆಲ್ಲರಿಗಳು 2000 ರೂ. ಮುಖಬೆಲೆಯ ನೋಟುಗಳನ್ನು ನೀಡಿ ಆಭರಣ ಖರೀದಿಸುವ ಗ್ರಾಹಕರ ಎಲ್ಲಾ ವಿವರಗಳನ್ನು ಸಂಗ್ರಹಿಸುತ್ತಿದೆ.

     

    2000 ರೂ. ನೋಟು ಬಳಕೆಗೆ ಆರ್‌ಬಿಐ ಸಂಪೂರ್ಣ ನಿಷೇಧ ಹೇರಿಲ್ಲ. ಈಗಲೂ ವ್ಯವಹಾರಗಳಿಗೆ ಬಳಸಬಹುದು. ಪಾವತಿ ಮಾಡಲು, ಹಣವನ್ನು ಸ್ವೀಕರಿಸಲು ಬಳಕೆ ಮಾಡಬಹುದು. ಸೆಪ್ಟೆಂಬರ್‌ 30ರವರೆಗೂ ಈ ನೋಟುಗಳು ಕಾನೂನು ಮಾನ್ಯತೆ ಹೊಂದಿರಲಿವೆ.