Tag: golden star ganesh

  • ಜೇಮ್ಸ್ ನಿರ್ದೇಶಕನ ಹೊಸ ಚಿತ್ರಕ್ಕೆ ಗಣೇಶ್ ಹೀರೋ

    ಜೇಮ್ಸ್ ನಿರ್ದೇಶಕನ ಹೊಸ ಚಿತ್ರಕ್ಕೆ ಗಣೇಶ್ ಹೀರೋ

    ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಮಯದಲ್ಲಿ ನೂತನ ಚಿತ್ರದ ಘೋಷಣೆಯಾಗಿದೆ.

    ಎಸ್‌ವಿಸಿ ಫಿಲಂಸ್ (SVC Films) ಲಾಂಛನದಲ್ಲಿ ಎಂ.ಮುನೇಗೌಡ ಅವರು ನಿರ್ಮಿಸುತ್ತಿರುವ ʻಪ್ರೊಡಕ್ಷನ್ ನಂ 3ʼ ಚಿತ್ರವನ್ನು “ಬಹದ್ದೂರ್”, “ಭರ್ಜರಿ “, “ಭರಾಟೆ”, `ಜೇಮ್ಸ್’ (James Movie) ನಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಚೇತನ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿದ್ದಾರೆ.

    ಗಣೇಶ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ತಮ್ಮ ಸಂಸ್ಥೆಯ ಮೂರನೇ ಚಿತ್ರವನ್ನು ಘೋಷಿಸಿರುವ ನಿರ್ಮಾಪಕ ಎಂ ಮುನೇಗೌಡ ಅವರು ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ಹಿಂದೆ “ಭುವನಂ ಗಗನಂ” ನಿರ್ಮಿಸಿದ್ದ ಎಂ.ಮುನೇಗೌಡ ಅವರು ಪ್ರಸ್ತುತ “ಅಯೋಗ್ಯ 2” ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗ ಮೂರನೇ ಚಿತ್ರದ ನಿರ್ಮಾಣಕ್ಕೆ ಮುಂದಾಗಿದ್ದಾರೆ.

    ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಚೇತನ್ ಕುಮಾರ್ ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಮೊದಲ ಚಿತ್ರವಿದು. ಈ ನೂತನ ಚಿತ್ರದ ಚಿತ್ರೀಕರಣ ಅಕ್ಟೋಬರ್ ನಲ್ಲಿ ಆರಂಭವಾಗಲಿದೆ. ಶಿವು ಗೌಡ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ “ಪ್ರೊಡಕ್ಷನ್ ನಂ ೩” ಚಿತ್ರದ ತಾರಾಬಳಗ ಹಾಗೂ ತಂತ್ರಜ್ಞರ ಕುರಿತು ಹೆಚ್ಚಿನ ಮಾಹಿತಿ ಸದ್ಯದಲ್ಲೇ ಹೊರ ಬೀಳಲಿದೆ.

  • `ಡಿಜಾಂಗೋ ಕೃಷ್ಣಮೂರ್ತಿ’ ಆದ ಗೋಲ್ಡನ್ ಸ್ಟಾರ್

    `ಡಿಜಾಂಗೋ ಕೃಷ್ಣಮೂರ್ತಿ’ ಆದ ಗೋಲ್ಡನ್ ಸ್ಟಾರ್

    ಎಸ್‌ಎನ್‌ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್‌ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸುತ್ತಿರುವ ಚಿತ್ರಕ್ಕೆ ‘ಡಿಜಾಂಗೋ ಕೃಷ್ಣಮೂರ್ತಿ’ (Django Krishnamurthy) ಎಂದು ಹೆಸರಿಡಲಾಗಿದೆ.

    ಗಣೇಶ್ ಅವರ ಹುಟ್ಟುಹಬ್ಬದ ದಿನವೇ ಶೀರ್ಷಿಕೆ ಅನಾವರಣ ಮಾಡಿರುವ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಹುನಿರೀಕ್ಷಿತ ಹಾಗೂ ಅಪಾರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದ್ದು, ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ.

    Golden Star Ganesh

    ಗಣೇಶ್ ಅವರಿಗೆ ನಾಯಕಿಯಾಗಿ ʻಹನುಮಾನ್ʼ ಖ್ಯಾತಿಯ ಅಮೃತ ಅಯ್ಯರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ರವಿಶಂಕರ್ ಗೌಡ, ಕಾಕ್ರೋಜ್ ಸುಧೀ, ಅರುಣ ಬಾಲರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಅನೂಪ್ ಸೀಳಿನ್ ಸಂಗೀತ, ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನವಿರುವ “ಡಿಜಾಂಗೋ ಕೃಷ್ಣಮೂರ್ತಿ” ಚಿತ್ರಕ್ಕೆ ಹೊಸ್ಮನೆ ಮೂರ್ತಿ ಅವರ ಕಲಾ ನಿರ್ದೇಶನವಿದೆ.

  • ಹುಟ್ಟು ಹಬ್ಬದ ದಿನ ಆಂಜನೇಯ ಅವತಾರವೆತ್ತ ಗಣೇಶ್

    ಹುಟ್ಟು ಹಬ್ಬದ ದಿನ ಆಂಜನೇಯ ಅವತಾರವೆತ್ತ ಗಣೇಶ್

    ಕನ್ನಡ ಚಿತ್ರರಂಗದ ತ್ಯಾಗರಾಜರು ಅಂತಾನೇ ಖ್ಯಾತಿ ಪಡೆದಿರುವ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಕಾಂಬೋ ‘Yours Sincerely Raamʼಗಾಗಿ ಒಂದಾಗಿರುವುದು ಗೊತ್ತೇ ಇದೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇಂದು ಗಣೇಶ್ ಹುಟ್ಟುಹಬ್ಬಕ್ಕೆ ಚಿತ್ರತಂಡ ವಿಶೇಷವಾಗಿ ಶುಭ ಕೋರಿದೆ. ‘Yours Sincerely Raamʼ ಪೋಸ್ಟರ್ ಬಿಡುಗಡೆ ಮಾಡಿ ಗೋಲ್ಡನ್ ಸ್ಟಾರ್‌ಗೆ ಬರ್ತ್‌ಡೇ ಶುಭಾಶಯ ತಿಳಿಸಿದೆ.

    ಗಣೇಶ್ ಜನ್ಮದಿನಕ್ಕೆ ಅನಾವರಣಗೊಂಡಿರುವ ಪೋಸ್ಟರ್ ಬಹಳ ವಿಶೇಷವಾಗಿದೆ. ಗಣೇಶ್ ಹಿಂದೆಂದೂ ಕಾಣದ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಭಜರಂಗಿ ಅವತಾರದಲ್ಲಿ ಮಳೆ ಹುಡ್ಗ ದರ್ಶನ ಕೊಟ್ಟಿದ್ದಾರೆ. ಹಿಮಾಲಯದ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ರಾಮ ಸೈಕಲ್ ಮೇಲೆ ಕುಳಿತಿದ್ದು, ಭಜರಂಗಿ ಭುಜದಲ್ಲಿ ಪೋಸ್ಟ್ ಮ್ಯಾನ್ ಬ್ಯಾಗ್ ಕಾಣಿಸುತ್ತದೆ. ಪೋಸ್ಟರ್ ನಾನಾ ಕುತೂಹಲ ಹುಟ್ಟುಹಾಕುವ ಕ್ರಿಯೇಟ್ ಮಾಡುವುದರ ಜೊತೆಗೆ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದನ್ನೂ ಓದಿ: ಪತ್ನಿಯನ್ನು ಎತ್ತಿ ಮುದ್ದಾಡಿದ ಯಶ್

    ʻಪುಷ್ಪಕ ವಿಮಾನ’, ʻಇನ್ಸ್ಪೆಕ್ಟರ್ ವಿಕ್ರಮ್ʼ, ʻಮಾನ್ಸೂನ್ ರಾಗʼದಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಿನಿಮಾ ಹಸಿವಿರುವ ವಿಖ್ಯಾತ್ ಎ ಆರ್ ಈ ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ

    ಐರಾ ಫಿಲ್ಮ್ಸ್ ಮತ್ತು ದಿ ರಾಯಲ ಸ್ಟುಡಿಯೋಸ್ ಬ್ಯಾನರ್ ಅಡಿ ಸತ್ಯ ರಾಯಲ Your’s sincerely ರಾಮ್ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಜೆ ಅನೂಪ್ ಸೀಳಿನ್ ಸಂಗೀತ, ಗುಣ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯ ಭರದಿಂದ ಚಿತ್ರೀಕರಣ ಸಾಗುತ್ತಿದ್ದು, ಈ ವರ್ಷಾಂತ್ಯಕ್ಕೆ Your’s sincerely ತೆರೆಗೆ ಬರಲಿದೆ. ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಮದಗಜ ಮಹೇಶ್

  • ಮನೆ ಹತ್ತಿರ ಬರಬೇಡಿ ಎಂದಿದ್ಯಾಕೆ ಗಣೇಶ ?

    ಮನೆ ಹತ್ತಿರ ಬರಬೇಡಿ ಎಂದಿದ್ಯಾಕೆ ಗಣೇಶ ?

    ಸಾಮಾನ್ಯವಾಗಿ ಸಿನಿಮಾ ತಾರೆಯರ ಹುಟ್ಟುಹಬ್ಬಕ್ಕೆ (Birthday) ಅವರವರ ಅಭಿಮಾನಿಗಳು ಮನೆ ಹತ್ತಿರ ಬಂದು ತಮ್ಮ ನೆಚ್ಚಿನ ನಟರಿಗೆ ಶುಭಾಶಯ ಕೋರುವುದು, ಕೇಕ್ ತಂದು ಕಟ್ ಮಾಡಿಸುವುದು ವಾಡಿಕೆ. ಆದರೆ ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಸ್ಟಾರ್‌ಗಳು ಅಭಿಮಾನಿಗಳ ಕೈಗೆ ಸುಲಭವಾಗಿ ಸಿಗುತ್ತಿಲ್ಲ. ಹೀಗಾಗಿ ಅಭಿಮಾನಿಗಳು ವರ್ಷಪೂರ್ತಿ ಕಾದಿದ್ದು ಕೊನೆ ಪಕ್ಷ ಹುಟ್ಟುಹಬ್ಬದ ದಿನವಾದ್ರೂ ಸಿಗಬೇಕು ಎಂದುಕೊಂಡಿದ್ದ ಫ್ಯಾನ್ಸ್‌ಗೆ ಇತ್ತೀಚೆಗೆ ಸ್ಟಾರ್‌ಗಳು ಸಬೂಬು ನೀಡುವಂತೆ ಕಾರಣ ಹೇಳಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್.

    ಜುಲೈ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಹುಟ್ಟುಹಬ್ಬ, ಹೀಗಾಗಿ ಎರಡು ದಿನ ಮುನ್ನವೇ ಗಣೇಶ್ ಇನ್ಸ್ಟಾಗ್ರಾಂನಲ್ಲಿ ಹುಟ್ಟುಹಬ್ಬದ ಕುರಿತಾಗಿ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಇರೋದಿಲ್ಲ. ಯಾರೂ ಮನೆ ಹತ್ತಿರ ಬರಬೇಡಿ ಎಂದಿದ್ದಾರೆ. ಬದಲಾಗಿ ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿ, ಅದೇ ನನಗೆ ಕೊಡುವ ಉಡುಗೊರೆ ಎಂದಿದ್ದಾರೆ. ಹೀಗಾಗಿ ಈ ಬಾರಿ ಗಣೇಶ್ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ.

    ಪಿನಾಕ ಹಾಗೂ ಯುವರ್ ಸಿನ್ಸಿಯರ್ಲಿ ರಾಮ್ ಸಿನಿಮಾದ ಚಿತ್ರೀಕರಣಕ್ಕಾಗಿ ಬೇರೆ ಊರಿನಲ್ಲಿರುವ ಕಾರಣಕ್ಕೆ ಗಣೇಶ್ ಅಭಿಮಾನಿಗಳಿಗೆ ಮನೆ ಹತ್ರ ಬರಬೇಡಿ ಎಂದಿದ್ದಾರೆ. `ಕೃಷ್ಣಂ ಪ್ರಣಯ ಸಖಿ’ ಚಿತ್ರದ ಯಶಸ್ಸಿನ ಬಳಿಕ ಗಣೇಶ್ ಚಿತ್ರಗಳಿಗೆ ಮತ್ತೆ ಪುಷ್ಠಿ ಸಿಕ್ಕಿದ್ದು ಬಲು ಬೇಡಿಕೆ ಹೊಂದಿದ್ದಾರೆ. ಹೀಗಾಗಿ ಈ ವರ್ಷದಲ್ಲಿ ಪಿನಾಕ ಹಾಗೂ ಯುವರ್ ಸಿನ್ಸಿಯರ್ಲಿ ರಾಮ್ ಚಿತ್ರವನ್ನ ತೆರೆಗೆ ತರಲು ಪ್ರಯತ್ನಸುತ್ತಿರುವ ಗಣೇಶ್ ನಿರಂತರ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರಂತೆ.

  • ‘ಜೇಮ್ಸ್’ ಡೈರೆಕ್ಟರ್ ಚೇತನ್ ಚಿತ್ರದಲ್ಲಿ ಗೋಲ್ಡನ್ ಸ್ಟಾರ್

    ‘ಜೇಮ್ಸ್’ ಡೈರೆಕ್ಟರ್ ಚೇತನ್ ಚಿತ್ರದಲ್ಲಿ ಗೋಲ್ಡನ್ ಸ್ಟಾರ್

    ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸಕ್ಸಸ್ ಬಳಿಕ ಗೋಲ್ಡನ್‌ ಸ್ಟಾರ್‌ ಗಣೇಶ್‌ (Golden Star Ganesh) ಅವರು ‘ಜೇಮ್ಸ್’ (James) ಡೈರೆಕ್ಟರ್ ಚೇತನ್ ಕುಮಾರ್ (Chethan Kumar) ನಿರ್ದೇಶನದ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದನ್ನೂ ಓದಿ:ಕಾನ್ 2025: ಸಿಂಧೂರ ಹಣೆಗಿಟ್ಟು ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ

    ಗಣೇಶ್ ಈಗೀಗ ಸ್ಕ್ರೀಪ್ಟ್ ಆಯ್ಕೆ ಮಾಡೋದ್ರಲ್ಲಿ ಸಖತ್ ಬ್ಯೂಸಿಯಾಗಿದ್ದಾರೆ. ಗಣೇಶ್‌ಗೆ ಒಂದು ವರ್ಷದ ಹಿಂದೆಯೇ ಚೇತನ್ ಕಥೆ ಹೇಳಿದ್ದರು. ಕಥೆ ಇಷ್ಟವಾಗಿ ಸಿನಿಮಾಗೆ ಓಕೆ ಎಂದಿದ್ದರು. ಆದರೆ ನಿರ್ಮಾಣ ಸಂಸ್ಥೆ ಅಂತಿಮಗೊಂಡಿರಲಿಲ್ಲ. ಇದೀಗ ಎಲ್ಲವೂ ಅಂತಿಮವಾಗಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣ ಶುರುವಾಗಲಿದೆ.

    ಪಿನಾಕ, ಯುವರ್ಸ್ ಸಿನ್ಸಿಯರ್ಲಿ ರಾಮ್, ‘ಹನುಮಾನ್’ ಖ್ಯಾತಿಯ ನಟಿ ಅಮೃತಾ ಅಯ್ಯರ್ ಜೊತೆಗಿನ ಚಿತ್ರದ ಶೂಟಿಂಗ್‌ನಲ್ಲಿ ನಟ ತೊಡಗಿಸಿಕೊಂಡಿದ್ದಾರೆ. ಆ ನಂತರ ಚೇತನ್ ಜೊತೆ ಗಣೇಶ್ ಸಿನಿಮಾ ಮಾಡಲಿದ್ದಾರೆ. ಇತ್ತ ‘ಗಟ್ಟಿಮೇಳ’ ನಟ ರಕ್ಷ್ ಜೊತೆ ಚೇತನ್ ಬರ್ಮ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ:ಮೊದಲ ಸಿನಿಮಾ ರಿಲೀಸ್‌ಗೂ ಮುನ್ನವೇ 2ನೇ ಪ್ರಾಜೆಕ್ಟ್ ಬಗ್ಗೆ ಯಶ್ ತಾಯಿ ಗುಡ್ ನ್ಯೂಸ್

    ಹೀಗಾಗಿ ಒಪ್ಪಿಕೊಂಡ ಚಿತ್ರಗಳು ಇಬ್ಬರೂ ಪೂರ್ಣಗೊಳಿಸಿದ್ಮೇಲೆ ಆಗಸ್ಟ್‌ನಲ್ಲಿ ಚಿತ್ರ ಸೆಟ್ಟೇರಲಿದೆ. ಗಣೇಶ್‌ಗಾಗಿ ವಿಭಿನ್ನ ಕಥೆಯನ್ನೇ ಚೇತನ್ ಬರೆದಿದ್ದಾರೆ. ಇಬ್ಬರ ಕಾಂಬಿನೇಷನ್ ಚಿತ್ರ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.

  • ಗಣೇಶ್‌, ಅಮೃತಾ ಅಯ್ಯರ್‌ ಸಿನಿಮಾಗೆ ಸಿಕ್ತು ಅದ್ಧೂರಿ ಚಾಲನೆ

    ಗಣೇಶ್‌, ಅಮೃತಾ ಅಯ್ಯರ್‌ ಸಿನಿಮಾಗೆ ಸಿಕ್ತು ಅದ್ಧೂರಿ ಚಾಲನೆ

    ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಟನೆಯ ಹೊಸ ಸಿನಿಮಾಗೆ ಇಂದು (ಏ.6) ಅದ್ಧೂರಿಯಾಗಿ ಮುಹೂರ್ತ ಸಮಾರಂಭ ಜರುಗಿದೆ. ರಾಮನವಮಿಯ ದಿನದಂದು ಬೆಂಗಳೂರಿನ ಗಣಪತಿ ಸನ್ನಿಧಿಯಲ್ಲಿ ಈ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇದನ್ನೂ ಓದಿ:ರಾಮ್ ಚರಣ್ ‘ಪೆದ್ದಿ’ ಚಿತ್ರದ ಗ್ಲಿಂಪ್ಸ್ ಔಟ್‌- ನಟನ ಮಾಸ್‌ ಅವತಾರಕ್ಕೆ ಫ್ಯಾನ್ಸ್‌ ಫಿದಾ

    ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಹೊಸ ಸಿನಿಮಾವೊಂದನ್ನು ಗಣೇಶ್ ಒಪ್ಪಿಕೊಂಡಿದ್ದಾರೆ. ಇಂದು ಈ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಗಣೇಶ್, ಅಮೃತಾ ಅಯ್ಯರ್ (Amritha Aiyer), ರವಿ ಶಂಕರ ಗೌಡ, ರಂಗಾಯಣ ರಘು, ನಿರ್ಮಾಪಕ ಉದಯ್ ಮೆಹ್ತಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ. ಇದನ್ನೂ ಓದಿ:ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿ- ಕನ್ನಡಕ್ಕೆ ಬಂದ ‘ಹನುಮಾನ್’ ಖ್ಯಾತಿಯ ಅಮೃತಾ ಅಯ್ಯರ್

    ಅರಸು ಅಂತಾರೆ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಗಣೇಶ್‌ಗೆ ನಾಯಕಿಯಾಗಿ ‘ಜೈ ಹನುಮಾನ್’ (Jai Hanuman) ಖ್ಯಾತಿಯ ಅಮೃತಾ ಅಯ್ಯರ್ (Amritha Aiyer) ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ಕನ್ನಡಕ್ಕೆ ಅವರು ಎಂಟ್ರಿ ಕೊಡುತ್ತಿದ್ದಾರೆ. ಇನ್ನೂ ಹೆಸರಿಡದ ಈ ಸಿನಿಮಾದ ಫಸ್ಟ್ ಶೆಡ್ಯೂಲ್ ಮುಗಿಸಿ ನಂತರ ಟೈಟಲ್ ಅನೌನ್ಸ್ ಮಾಡಲು ಚಿತ್ರತಂಡ ಪ್ಲ್ಯಾನ್‌ ಮಾಡಿಕೊಂಡಿದೆ.

  • ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿ- ಕನ್ನಡಕ್ಕೆ ಬಂದ ‘ಹನುಮಾನ್’ ಖ್ಯಾತಿಯ ಅಮೃತಾ ಅಯ್ಯರ್

    ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿ- ಕನ್ನಡಕ್ಕೆ ಬಂದ ‘ಹನುಮಾನ್’ ಖ್ಯಾತಿಯ ಅಮೃತಾ ಅಯ್ಯರ್

    ಬಿಜಿಲ್, ಹನುಮಾನ್ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ಸೌತ್ ನಟಿ ಅಮೃತಾ ಅಯ್ಯರ್ (Amritha Aiyer) ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್‌ಗೆ (Golden Star Ganesh) ನಾಯಕಿಯಾಗುವ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸುತ್ತಿದ್ದಾರೆ.

    ಬೆಂಗಳೂರಿನಲ್ಲೇ ಓದಿ ಬೆಳೆದಿರುವ ಅಮೃತಾ ಅಯ್ಯರ್ ತೆಲುಗು, ತಮಿಳಿನಲ್ಲಿ ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸುವ ಮೂಲಕ ಹೈಪ್ ಕ್ರಿಯೆಟ್ ಮಾಡಿದ್ದಾರೆ. ಈಗ ಗಣೇಶ್‌ಗೆ ನಾಯಕಿಯಾಗಿ ಕನ್ನಡದ ಸಿನಿಮಾಗೆ ಅವರು ಪಾದಾರ್ಪಣೆ ಮಾಡ್ತಿದ್ದಾರೆ. ‘ಲವ್ ಇನ್ ಮಂಡ್ಯ’ ಖ್ಯಾತಿಯ ನಿರ್ದೇಶಕ ಅರಸು ಅಂತಾರೆ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

    ಇನ್ನೂ ಗೋಲ್ಡನ್ ಸ್ಟಾರ್ ಗಣೇಶ್ ಕೈಯಲ್ಲೂ ಬಿಗ್ ಬಜೆಟ್ ಸಿನಿಮಾಗಳಿವೆ. ಸಾಲು ಸಾಲು ಸಿನಿಮಾಗಳು ಅವರು ಬ್ಯುಸಿಯಾಗಿದ್ದಾರೆ. ಇದರ ನಡುವೆ ಅರಸು ಅಂತಾರೆ ನಿರ್ದೇಶಕನ ಕಥೆ ಇಷ್ಟವಾಗಿ ಈ ಸಿನಿಮಾಗೂ ಅವರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದನ್ನೂ ಓದಿ:‘ದಿ ಡೆವಿಲ್’ ಚಿತ್ರದ ಶೂಟಿಂಗ್ ಶುರು- ದರ್ಶನ್ ಭಾಗಿ

    ಫ್ಯಾಮಿಲಿ ಓರಿಯೆಂಟೆಡ್ ಕಥಾಹಂದರವಿರುವ ಚಿತ್ರವಾಗಿದೆ. ಇನ್ನೂ ಏ.6ರಂದು ಬೆಂಗಳೂರಿನಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ. ಏ.7ರಿಂದ ಮೊದಲ ಹಂತದ ಶೂಟಿಂಗ್ ಶುರುವಾಗಿದೆ. ಬೆಂಗಳೂರು, ಮೈಸೂರು ಸೇರಿದಂತೆ ಹಲವೆಡೆ ಈ ಸಿನಿಮಾದ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಲಾಗಿದೆ.

    ದಕ್ಷಿಣದ ಸಿನಿಮಾಗಳಲ್ಲಿ ಮನೆ ಮಾತಾಗಿರುವ ಅಮೃತಾ ಅವರು ಕನ್ನಡದ ಮೊದಲ ಸಿನಿಮಾದಲ್ಲೇ ಗಣೇಶ್‌ಗೆ ಜೋಡಿಯಾಗಿ ಬರುತ್ತಿರೋದು, ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಇಬ್ಬರ ಕಾಂಬಿನೇಷನ್ ಸಿನಿಮಾ ನೋಡಲು ಎದುರು ನೋಡ್ತಿದ್ದಾರೆ.

  • ಡಾಲಿ ಮದುವೆ ಸಂಭ್ರಮ: ಕಿಚ್ಚ ಸುದೀಪ್‌ಗೆ ಮದುವೆ ಆಹ್ವಾನ ಪತ್ರಿಕೆ ನೀಡಿದ ನಟ

    ಡಾಲಿ ಮದುವೆ ಸಂಭ್ರಮ: ಕಿಚ್ಚ ಸುದೀಪ್‌ಗೆ ಮದುವೆ ಆಹ್ವಾನ ಪತ್ರಿಕೆ ನೀಡಿದ ನಟ

    ಟರಾಕ್ಷಸ ಡಾಲಿ ಧನಂಜಯ (Daali Dhananjay) ಫೆ.16ರಂದು ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ. ಈ ಹಿನ್ನೆಲೆ ಇಂದು (ಜ.12) ಕಿಚ್ಚ ಸುದೀಪ್ (Sudeep) ಮತ್ತು ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರನ್ನು ಭೇಟಿಯಾಗಿ ಡಾಲಿ ಮದುವೆಯ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ:ಹಿರಿಯ ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಡಾಲಿ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಜ.11ರಂದು ಮೋಹಕತಾರೆ ರಮ್ಯಾಗೆ ಮದುವೆ ಪತ್ರಿಕೆ ನೀಡಿದ ಬೆನ್ನಲ್ಲೇ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್, ರಮೇಶ್ ಅರವಿಂದ್, ‘ಬಿಗ್ ಬಾಸ್’ ಖ್ಯಾತಿಯ ರಾಜೀವ್ ಸೇರಿದಂತೆ ಅನೇಕರಿಗೆ ಇಂದು (ಜ.12) ಮದುವೆಯ ಆಹ್ವಾನ ಪತ್ರಿಕೆ ನೀಡಿದ್ದಾರೆ.

    ಇನ್ನೂ ಈಗಾಗಲೇ ಪ್ರಿಯಾಂಕ ಉಪೇಂದ್ರ (Upendra) ದಂಪತಿ, ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ದಂಪತಿ, ಅಶ್ವಿನಿ ಪುನೀತ್ ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಕುಟುಂಬ, ‘ಯುವರತ್ನ’ ಡೈರೆಕ್ಟರ್ ಸಂತೋಷ್ ಆನಂದ್‌ರಾಮ್, ಸಪ್ತಮಿ ಗೌಡ ಸೇರಿದಂತೆ ಅನೇಕರಿಗೆ ಡಾಲಿ ಮದುವೆಯ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

    ಅಂದಹಾಗೆ, ಮೈಸೂರಿನಲ್ಲಿ ಫೆ.16ರಂದು ಡಾಕ್ಟರ್ ಧನ್ಯತಾ ಜೊತೆ ಡಾಲಿ ಹಸೆಮಣೆ ಏರುತ್ತಿದ್ದಾರೆ. ಸ್ಯಾಂಡಲ್‌ವುಡ್ ಕಲಾವಿದರಿಗೆ ಮಾತ್ರವಲ್ಲ. ರಾಜಕೀಯ ಗಣ್ಯರು ಈ ಮದುವೆಯಲ್ಲಿ ಭಾಗಿಯಾಗಲಿದ್ದಾರೆ.

  • ಕ್ಷುದ್ರ ಶಕ್ತಿಯ ಎದುರು ರುದ್ರ ಶಕ್ತಿಯ ಸಮರ: ಖಡಕ್ ಡೈಲಾಗ್ ಹೊಡೆದ ಗಣೇಶ್

    ಕ್ಷುದ್ರ ಶಕ್ತಿಯ ಎದುರು ರುದ್ರ ಶಕ್ತಿಯ ಸಮರ: ಖಡಕ್ ಡೈಲಾಗ್ ಹೊಡೆದ ಗಣೇಶ್

    ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಟೈಟಲ್ ಟೀಸರ್‌ನಲ್ಲಿ ಕ್ಷುದ್ರ ಶಕ್ತಿಯ ಎದುರು ರುದ್ರ ಶಕ್ತಿಯ ಸಮರ ಎಂದು ನಟ ಖಡಕ್ ಡೈಲಾಗ್ ಹೊಡೆದಿದ್ದಾರೆ. ‘ಪಿನಾಕ’ (Pinaka) ಎಂಬ ವಿಭಿನ್ನ ಕಥೆ ಹೇಳೋಕೆ ಗಣೇಶ್ ಸಜ್ಜಾಗಿದ್ದಾರೆ. ಇದನ್ನೂ ಓದಿ:ಐಶ್ವರ್ಯಾಗೆ ಲೈನ್‌ ಹೊಡೀತಿದ್ರಾ ಅಂತ ನನಗೆ ಡೌಟ್‌: ಧನರಾಜ್‌ಗೆ ಪತ್ನಿ ಫುಲ್‌ ಕ್ಲಾಸ್

    ತೆಲುಗಿನ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆಯು ಗಣೇಶ್ ಅವರ ‘ಪಿನಾಕ’ ಚಿತ್ರವನ್ನು ನಿರ್ಮಾಣ ಮಾಡಲಿದೆ. ಧನಂಜಯ್ ಎಂಬುವವರು ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾಗೆ ‘ಪಿನಾಕ’ ಎಂಬ ಟೈಟಲ್ ಫಿಕ್ಸ್ ಆಗಿದೆ. ಒಮ್ಮೆ ಮಂತ್ರದಂಡ, ಮತ್ತೊಮ್ಮೆ ತ್ರಿಶೂಲ ಹಿಡಿದು ಗೋಲ್ಡನ್ ಸ್ಟಾರ್ ಅಬ್ಬರಿಸಿದ್ದಾರೆ. ರುದ್ರನಾಗಿ ಕ್ಷುದ್ರ ಶಕ್ತಿಗೆ ಸವಾಲು ಹಾಕಿದ್ದಾರೆ. ಎಂದೂ ಕಾಣಿಸಿಕೊಂಡಿರದ ನಟನ ಈ ಹೊಸ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

    ಟಿ.ಜಿ. ವಿಶ್ವ ಪ್ರಸಾದ್ ಹಾಗೂ ಟಿ.ಜಿ. ಕೃತಿ ಪ್ರಸಾದ್ ಎಂಬುವವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಟೈಟಲ್‌ನಿಂದಲೇ ಸಿನಿಮಾ ಕುತೂಹಲ ಮೂಡಿಸಿದೆ. ಇದೊಂದು ಫ್ಯಾಂಟಸಿ ಆ್ಯಕ್ಷನ್ ಸಿನಿಮಾ ಆಗಿದೆ. ಮೊದಲ ನೋಟದಲ್ಲೇ ‘ಪಿನಾಕ’ ಟೀಸರ್ ಗಮನ ಸೆಳೆಯುವಂತಿದೆ. ಪಿನಾಕ ಚಿತ್ರವು ಪುರಾಣ ಮತ್ತು ಇತಿಹಾಸದ ಮಿಶ್ರಣದ ಕಥೆಯಾಗಿದೆ. ಇನ್ನೂ ಪಿನಾಕ ಎಂದರೆ ಶಿವನ ಬಿಲ್ಲು ಎಂದರ್ಥ. ಶಿವ ಬಳಸೋ ಬಿಲ್ಲಿಗೇನೆ ‘ಪಿನಾಕ’ ಎಂದು ಕರೆಯುತ್ತಾರೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದರೆ ಟೀಸರ್‌ನಲ್ಲಿ ತಿಳಿಯಲಿದೆ. ಕಥೆ ಈ ಟೈಟಲ್‌ ಪೂರಕವಾಗಿದೆ.

    ‘ಪಿನಾಕ’ ಚಿತ್ರದ ಶೂಟಿಂಗ್ ಫೆಬ್ರವರಿಯಲ್ಲಿ ಶುರುವಾಗಲಿದೆ. ಕನ್ನಡ ಮತ್ತು ತೆಲುಗಿನಲ್ಲಿ ಸಿನಿಮಾ ಮೂಡಿ ಬರಲಿದೆ. ಸದಾ ಲವರ್ ಬಾಯ್ ಆಗಿ ಮಿಂಚುತ್ತಿದ್ದ ಗಣೇಶ್ ಈ ಬಾರಿ ಲವ್ ಸ್ಟೋರಿ ಬದಿಗಿಟ್ಟು ಹೊಸ ಅವತಾರ ತಾಳಿದ್ದಾರೆ. ಇದು ಫ್ಯಾನ್ಸ್‌ಗೆ ಅಚ್ಚರಿ ಮೂಡಿಸಿದೆ. ಜೊತೆಗೆ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

  • ನ್ಯೂ ಇಯರ್‌ಗೆ ಗೋಲ್ಡನ್ ಸ್ಟಾರ್ ಫ್ಯಾನ್ಸ್‌ಗೆ ಗುಡ್ ನ್ಯೂಸ್- ಏನದು?

    ನ್ಯೂ ಇಯರ್‌ಗೆ ಗೋಲ್ಡನ್ ಸ್ಟಾರ್ ಫ್ಯಾನ್ಸ್‌ಗೆ ಗುಡ್ ನ್ಯೂಸ್- ಏನದು?

    ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಸಕ್ಸಸ್ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ತೆಲುಗಿನ ನಿರ್ಮಾಪಕರೊಬ್ಬರ ಜೊತೆ ನಟ ಕೈಜೋಡಿಸಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ಶಿವಕಾರ್ತಿಕೇಯನ್‌, ಸಾಯಿ ಪಲ್ಲವಿ ಸಿನಿಮಾ ನೋಡಿ ಮ್ಯಾಜಿಕಲ್ ಎಂದ ಜಾನ್ವಿ ಕಪೂರ್‌

    ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯೊಂದು ಗಣೇಶ್‌ಗೆ ನಿರ್ಮಾಣ ಮಾಡಲು ಮುಂದಾಗಿದೆ. ಬಿ.ಧನಂಜಯ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನಿಮಾಗೆ ‘ರೇಂಜ್ ಅಫ್ ರುದ್ರ’ ಎಂದು ಟೈಟಲ್ ಕೂಡ ಇಡಲಾಗಿದೆ. ಹೊಸ ವರ್ಷ ಜ.2ರಂದು ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಮಾಡೋದಾಗಿ ಚಿತ್ರತಂಡ ಬಿಗ್ ಅಪ್‌ಡೇಟ್ ಹಂಚಿಕೊಂಡಿದೆ.

    ಈ ಸಿನಿಮಾದಲ್ಲಿ ಎಂದೂ ಕಾಣಿಸಿಕೊಂಡಿರದ ವಿಭಿನ್ನ ಪಾತ್ರದಲ್ಲಿ ಗಣೇಶ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಬಾರಿ ಲವ್ ಸ್ಟೋರಿ ಹೇಳ್ತಾರಾ? ಕಥೆಯಲ್ಲೂ ಟ್ವಿಸ್ಟ್ ಇರಲಿದೆಯಾ ಎಂದು ಕಾಯಬೇಕಿದೆ.

    ತೆಲುಗಿನ ಪೀಪಲ್ ಮೀಡಿಯಾ ಫ್ಯಾಕ್ಟರಿ ಮೂಲಕ ಟಿ.ಜಿ ವಿಶ್ವ ಪ್ರಸಾದ್ ಎಂಬುವವರು ಗಣೇಶ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ.